ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಕಳೆದ 7 ವರ್ಷಗಳಿಂದ ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುತ್ತಾ ಬಂದಿದ್ದರು. ಅವರ ನಿರೂಪಣೆಯ ಶೈಲಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಇದೀಗ ಬಿಗ್ ಬಾಸ್ ಶೋ ಮಾಡಲ್ಲ ಎಂದು ಅಭಿಮಾನಿಗಳಿಗೆ ಕಮಲ್ ಹಾಸನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ವಿಕ್ಕಿ ಕೌಶಲ್ ಜೊತೆಗಿನ ‘ಚಾವಾ’ ಚಿತ್ರಕ್ಕಾಗಿ ಮರಾಠಿ ಕಲಿತ ರಶ್ಮಿಕಾ ಮಂದಣ್ಣ
7 ವರ್ಷಗಳ ಹಿಂದೆ ಶುರುವಾದ ನನ್ನ ಬಿಗ್ ಬಾಸ್ ಪಯಣಕ್ಕೆ ಬ್ರೇಕ್ ನೀಡಲು ನಿರ್ಧರಿಸಿದ್ದೇನೆ ಎಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಈ ಮೊದಲೇ ಒಪ್ಪಿಕೊಂಡ ಸಿನಿಮಾಗಳ ಕೆಲಸದ ಕಾರಣದಿಂದ ನನಗೆ ಈ ಬಾರಿಯ ಬಿಗ್ ಬಾಸ್ ಶೋ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್ ಹಾಸನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಬಿಗ್ ಬಾಸ್’ ಕಾರ್ಯಕ್ರಮದ ಮೂಲಕ ನಿಮ್ಮ ಮನ ಮತ್ತು ಮನೆ ತಲುಪಿದ್ದೇನೆ. ಅಗಾಧ ಪ್ರೀತಿ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ಬೆಂಬಲದಿಂದಾಗಿ ಬಿಗ್ ಬಾಸ್ ತಮಿಳು ರಿಯಾಲಿಟಿ ಶೋ ನನ್ನ ಪಾಲಿಗೆ ಬೆಸ್ಟ್ ಆಯಿತು. ಕಲಿಕೆಯ ಅನುಭವ ನೀಡಿದ ಈ ಶೋಗೆ ನಾನು ಋಣಿಯಾಗಿದ್ದೇನೆ. ಸ್ಪರ್ಧಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಇನ್ನೂ ತಮಿಳಿನ ಬಿಗ್ ಬಾಸ್ ಶೋಗೆ ಮುಂದಿನ ನಿರೂಪಕ ಯಾರು ಎಂಬುದನ್ನು ವಾಹಿನಿ ಅಧಿಕೃತವಾಗಿ ತಿಳಿಸಬೇಕಿದೆ. ಹೀಗಿರುವಾಗ ಮುಂದಿನ ಹೋಸ್ಟ್ ಯಾರಿರಬಹುದು ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.
ಕಾಲಿವುಡ್ ನಟ ಕಮಲ್ ಹಾಸನ್ (Kamal Haasan) ಅವರ ಹಿರಿಯ ಸಹೋದರ ಚಾರು ಹಾಸನ್ (Charu Haasan) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಹಿರಿಯ ಮಗಳು ಸುಹಾಸಿನಿ (Suhasini) ಅವರು ತಂದೆ ಚಾರು ಹಾಸನ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಸುಹಾಸಿನಿ ಮಣಿರತ್ನಂ ಸೋಷಿಯಲ್ ಮೀಡಿಯಾದಲ್ಲಿ ತಂದೆಯನ್ನು ತಬ್ಬಿಕೊಂಡಿರುವ ಫೋಟೋ ಶೇರ್ ಮಾಡಿ, ನೀವು ಇದನ್ನು ನನ್ನ ತಂದೆಗೆ ವೈದ್ಯಕೀಯ ವಾಸ್ತವ್ಯ ಎಂದು ಕರೆಯುತ್ತೀರಾ? ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಮತ್ತು ಪುತ್ರಿಯರ ಪ್ರೀತಿ ಮತ್ತು ಕಾಳಜಿಯಿಂದ ಅವರು ಚೇತರಿಸಿಕೊಳ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಎರಡು ಭಾಗಗಳಲ್ಲಿ ಬರಲಿದೆ ‘ಹಾಯ್ ನಾನ್ನಾ’ ಡೈರೆಕ್ಟರ್ ಜೊತೆಗಿನ ಜ್ಯೂ.ಎನ್‌ಟಿಆರ್ ಹೊಸ ಸಿನಿಮಾ
91 ವರ್ಷದ ಚಾರು ಹಾಸನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಈಗ ಸೂಕ್ತ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ತಿದ್ದಾರೆ.
ಅಂದಹಾಗೆ, ಚಾರು ಹಾಸನ್ ಅವರು ನಟ, ನಿರ್ದೇಶಕ, ನಿವೃತ್ತ ವಕೀಲರಾಗಿದ್ದರು. ಕನ್ನಡ, ತಮಿಳು ಸೇರಿದಂತೆ ಬಹುಭಾಷೆಗಳಲ್ಲಿ ಅವರು ನಟಿಸಿದ್ದಾರೆ.
ಮಲಯಾಳಂನ ಅಚ್ಚುಮೆಚ್ಚಿನ ಬರಹಗಾರ, ಚಿತ್ರಕಥೆಗಾರ ಮತ್ತು ನಿರ್ದೇಶಕ ಎಂ.ಟಿ ವಾಸುದೇವನ್ ನಾಯರ್ ಅವರ ಹುಟ್ಟುಹಬ್ಬದ (ಜು.15) ಪ್ರಯುಕ್ತ ‘ಮನೋರಥಂಗಳ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. 9 ಕಥೆಗಳಿರುವ ಈ ಆಂಥಾಲಜಿಗೆ 8 ಮಂದಿ ನಿರ್ದೇಶಕರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಎಂಟಿ ವಾಸುದೇವನ್ ನಾಯರ್ ಕಥೆ ಬರೆದಿದ್ದಾರೆ. ಮಲಯಾಳಂ ಚಿತ್ರರಂಗದ ಸ್ಟಾರ್ ನಟರ ದಂಡೇ ಈ ಸಿನಿಮಾದಲ್ಲಿದೆ. ಇದನ್ನೂ ಓದಿ:‘ಬ್ಯಾಚುರಲ್ ಪಾರ್ಟಿ’ ಕಾಪಿರೈಟ್ ಕೇಸ್: ಕಾನೂನು ಹೋರಾಟ ಮಾಡುತ್ತೇನೆ ಎಂದ ರಕ್ಷಿತ್ ಶೆಟ್ಟಿ
ಸದ್ಯ ಬಿಡುಗಡೆ ಆಗಿರುವ ‘ಮನೋರಥಂಗಳ್’ (Manorathangal) ಸಿನಿಮಾ ಆಗಸ್ಟ್ ತಿಂಗಳಲ್ಲಿ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಹಾಗಾದರೆ, ಯಾವೆಲ್ಲ ಸಣ್ಣ ಕಥೆಗಳು ಈ ಸಿನಿಮಾದಲ್ಲಿ ಅಡಕವಾಗಿವೆ? ಯಾರೆಲ್ಲ ಸ್ಟಾರ್ ನಟರಿದ್ದಾರೆ? ನಿರ್ದೇಶಕರು ಯಾರು ಎಂಬ ಮಾಹಿತಿ ಇಲ್ಲಿದೆ. ವಿಶೇಷ ಏನೆಂದರೆ, ಈ ಚಿತ್ರದ ಟ್ರೈಲರ್ ಕಮಲ್ ಹಾಸನ್ ಸಹ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿಯೂ ಅವರದ್ದು ವಿಶೇಷ ಪಾತ್ರವಿದೆ.
‘ಮನೋರಥಂಗಳ್’ ಚಿತ್ರದಲ್ಲಿ ಕಮಲ್ ಹಾಸನ್ (Kamal Haasan), ಮೋಹನ್ ಲಾಲ್ (Mohan Lal), ಮಮ್ಮುಟ್ಟಿ, ಫಹಾದ್ ಫಾಸಿಲ್, ಪಾರ್ವತಿ ತಿರುವೋತ್ತು, ಹರೀಶ್ ಉತ್ತಮನ್, ಬಿಜು ಮೆನನ್, ಶಾಂತಿ ಕೃಷ್ಣ, ಜಾಯ್ ಮ್ಯಾಥ್ಯೂ, ಮಧು, ಆಸಿಫ್ ಅಲಿ, ನದಿಯಾ ಮೊಯ್ದು, ಕೈಲಾಸ, ಇಂದ್ರನ್ಸ್, ನೆಡುಮುಡಿ ವೇಣು, ರಣಜಿ ಪಣಿಕ್ಕರ್, ಸುರಭಿ ಲಕ್ಷ್ಮಿ, ಸಿದ್ದಿಕ್, ಇಶಿತ್ ಯಾಮಿನಿ, ನಾಸೀರ್, ಇಂದ್ರಜಿತ್, ಅಪರ್ಣಾ ಬಾಲಮುರಳಿ ಬಣ್ಣ ಹಚ್ಚಿದ್ದಾರೆ.
ಜೀ5 ನಿರ್ಮಾಣ ಮಾಡಿರುವ ಈ ಸಿನಿಮಾ ಆಗಸ್ಟ್ 15ರಂದು ಪ್ರೀಮಿಯರ್ ಆಗಲಿದೆ. ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿರುತ್ತದೆ. ಒಂಭತ್ತು ಕಥೆಗಳಿಗೆ 8 ಮಂದಿ ನಿರ್ದೇಶಕರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಮೋಹನ್‌ಲಾಲ್ ನಟಿಸಿರುವ ಪ್ರಿಯದರ್ಶನ್ ನಿರ್ದೇಶಿಸಿದ ‘ಒಲ್ಲವುಮ್ ತೀರವುಮ್’ ಕಪ್ಪು ಬಿಳುಪಿನಲ್ಲಿ ಮೂಡಿ ಬಂದಿದೆ. ರಂಜಿತ್ ನಿರ್ದೇಶನದಲ್ಲಿ ‘ಕಾಡುಗನ್ನವ ಒರು ಯಾತ್ರೆ ಕುರಿಪ್ಪು’ ಕಥೆಯಲ್ಲಿ ನಟ ಮಮ್ಮುಟ್ಟಿ ನಟಿಸಿದ್ದಾರೆ. `ಶಿಲಾಲಿಖಿತಂ’ ಪ್ರಿಯದರ್ಶನ್ ನಿರ್ದೇಶನದ ಈ ಕಥೆಯಲ್ಲಿ ಬಿಜು ಮೆನನ್, ಶಾಂತಿಕೃಷ್ಣ ಮತ್ತು ಜಾಯ್ ಮ್ಯಾಥ್ಯೂ ನಟಿಸಿದ್ದಾರೆ. ಶ್ಯಾಮಪ್ರಸಾದ್ ನಿರ್ದೇಶನದ ‘ಕಜ್ಚಾ’ ಚಿತ್ರದಲ್ಲಿ ಪಾರ್ವತಿ ತಿರುವೋತ್ತು ಮತ್ತು ಹರೀಶ್ ಉತ್ತಮನ್ ನಟಿಸಿದ್ದಾರೆ. `ವಿಲ್ಪನಾ’ ಮಾಧೂ ಮತ್ತು ಆಸಿಫ್ ಅಲಿ ನಟಿಸಿರುವ ಕಥೆಯನ್ನು ಅಶ್ವತಿ ನಾಯರ್ ನಿರ್ದೇಶಿಸಿದ್ದಾರೆ.
ಅಭಿನವ ಮಹೇಶ್ ನಾರಾಯಣನ್ ನಿರ್ದೇಶಿಸಿದ ಫಹಾದ್ ಫಾಸಿಲ್ ಮತ್ತು ಜರೀನಾ ಮೊಯ್ದು ಜೋಡಿ ‘ಶರ್ಲಾಕ್’ ಕಥೆಯಲ್ಲಿ ಕಾಣಿಸಿಕೊಂಡಿದೆ. ‘ಸ್ವರ್ಗಂ ತುರಕ್ಕುನ್ನ ಸಮಯ’ ಜಯರಾಜನ್ ನಾಯರ್ ನಿರ್ದೇಶನದಲ್ಲಿ ಕೈಲಾಶ್, ಇಂದ್ರನ್ಸ್, ನೆಡುಮುಡಿ ವೇಣು, ಎಂಜಿ ಪಣಿಕ್ಕರ್ ಮತ್ತು ಸುರಭಿ ಲಕ್ಷ್ಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ‘ಅಭ್ಯಾಮ್ ತೀಡಿ ವೀಂದುಂ’ ಸಿದ್ಧಿಕ್, ಇಶಿತ್ ಯಾಮಿನಿ ಮತ್ತು ನಜೀರ್ ಈ ಕಥೆಯಲ್ಲಿ ನಟಿಸಿದ್ದಾರೆ, ಸಂತೋಷ್ ಶಿವನ್ ನಿರ್ದೇಶಿಸಿದ್ದಾರೆ. ‘ಕಡಲ್‌ಕಾಟ್ಟು’ ರತೀಶ್ ಅಂಬಾಟ್ ನಿರ್ದೇಶನದ ಈ ಕಥೆಯಲ್ಲಿ ಇಂದ್ರಜಿತ್ ಮತ್ತು ಅಪರ್ಣಾ ಬಾಲಮುರಳಿ ನಟಿಸಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD) ಜೂನ್ 27ರಂದು ಬಿಡುಗಡೆಯಾಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಇದೀಗ ಕಲ್ಕಿ ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಕಮಲ್ ಹಾಸನ್ (Kamal Haasan) 7 ನಿಮಿಷ ನಟಿಸಿದಕ್ಕೆ 20 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ.
ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone), ಬಿಗ್ ಬಿ ನಟನೆಯ ಕಲ್ಕಿ ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಾಣ್ತಿದೆ. ರಿಲೀಸ್ ಬಳಿಕ ಕಮಲ್ ಹಾಸನ್ (Kamal Haasan) ನಟಿಸಿದ ಯಾಸ್ಕಿನ್ ಪಾತ್ರದ ಬಗ್ಗೆ ಟಾಕ್ ಆಗುತ್ತಿದೆ. ಈ ಪಾತ್ರಕ್ಕೆ ಅವರು ಸೆಲೆಕ್ಟ್ ಆಗಿದ್ದು ಹೇಗೆ? ಸಂಭಾವನೆ ವಿಚಾರದ ಬಗ್ಗೆ ಫ್ಯಾನ್ಸ್‌ಗೆ ಈಗ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:ದರ್ಶನ್ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ ಫಸ್ಟ್ ರಿಯಾಕ್ಷನ್
ಸಿನಿಮಾ ಆರಂಭದಲ್ಲಿ ಹಣ್ಣು ಹಣ್ಣು ಮುದುಕನ ಪಾತ್ರದಲ್ಲಿ ಕಮಲ್ ಎಂಟ್ರಿ ಕೊಡ್ತಾರೆ. ಆದರೆ ಚಿತ್ರದ ಅಂತ್ಯದಲ್ಲಿ ಅವರ ನಿಜವಾದ ಲುಕ್ ರಿವೀಲ್ ಆಗುತ್ತದೆ. ಅದನ್ನು ನೋಡಿಯೇ ಫ್ಯಾನ್ಸ್ ದಂಗಾಗಿದ್ದಾರೆ. ಡೈರೆಕ್ಟರ್ ನಾಗ್ ಅಶ್ವಿನ್ ಕತೆ ಮಾಡಿದಾಗಲೇ ಯಾಸ್ಕಿನ್ ಪಾತ್ರವಿತ್ತಂತೆ ಆದರೆ ಯಾರು ಈ ಪಾತ್ರ ಸೂಕ್ತ ಎಂದು ಫೈನಲ್ ಆಗಿರಲಿಲ್ಲವಂತೆ.
ಬಳಿಕ ಚಿತ್ರೀಕರಣ ಪ್ರಾರಂಭಿಸಿದ ವೇಳೆ, ಕೊಂಚ ಅಳುಕಿನಿಂದಲೇ ಕಮಲ್ ಹಾಸನ್‌ರನ್ನು ಯಾಸ್ಕಿನ್ ಪಾತ್ರಕ್ಕೆ ಕೇಳಿದ್ರಂತೆ ನಾಗ್ ಅಶ್ವಿನ್. ಆದರೆ ಕಮಲ್ ಖುಷಿಯಿಂದಲೇ ಈ ಪಾತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟರು. ಆದರೆ ಮೂರೇ ದೃಶ್ಯ, 7 ನಿಮಿಷ 4 ಸೆಕೆಂಡ್ ನಟಿಸಿದ ಕಮಲ್ ಹಾಸನ್‌ಗೆ ನಿರ್ಮಾಪಕ ಅಶ್ವಿನ್ ದತ್ 20 ಕೋಟಿ ರೂ. ಸಂಭಾವನೆ ನೀಡಿರೋದು ಈಗ ಹಾಟ್ ಟಾಪಿಕ್ ಆಗಿದೆ.
ಅಂದಹಾಗೆ, ‘ಕಲ್ಕಿ 2898 ಎಡಿ’ ಪಾರ್ಟ್ 2ನಲ್ಲಿ ಕಮಲ್ ಹಾಸನ್ ಪಾತ್ರವೇ ಹೈಲೆಟ್. ವಿಲನ್ ಆಗಿರುವ ಕಮಲ್ ಪಾತ್ರದ ಮೇಲೆ ಕಥೆ ಸುತ್ತಲಿದೆಯಂತೆ. ಭಾಗ 2ರಲ್ಲಿ ಯಾರು ಊಹಿಸಿರದ ಸಾಕಷ್ಟು ಟ್ವಿಸ್ಟ್‌ಗಳು ಎದುರಾಗಲಿದೆ. ಕಲ್ಕಿ ಸಿನಿಮಾದ ಸಕ್ಸಸ್ ನಂತರ ಪಾರ್ಟ್ 2 ಬರಲಿದೆ ಎಂದು ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಕಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ (Indian 2) ನಟನೆಯ ಇದೇ ಜುಲೈ 12ಕ್ಕೆ ರಿಲೀಸ್‌ಗೆ ಸಿದ್ಧವಾಗಿದೆ. ಇದೀಗ ಬಜೆಟ್ ಮಿತಿ ಮೀರಲು ಕಾರಣವೇನು ಎಂಬುದನ್ನು ಸಂದರ್ಶನವೊಂದರಲ್ಲಿ ಕಮಲ್ ಹಾಸನ್ ತಿಳಿಸಿದ್ದಾರೆ. ಇದನ್ನೂ ಓದಿ:ತಮಿಳು ನಟ ಜಯಂ ರವಿ ಬಾಳಲ್ಲಿ ಡಿವೋರ್ಸ್ ಬಿರುಗಾಳಿ?
ಕೊವಿಡ್ ಮತ್ತು ಸಿನಿಮಾ ಸೆಟ್‌ನಲ್ಲಿ ಆದ ಅವಘಡಗಳಿಂದ ಚಿತ್ರದ ಬಜೆಟ್ ಮೀರಿತು ಎಂದು ಕಮಲ್ ಹಾಸ್ ಮಾತನಾಡಿದ್ದಾರೆ. ಕಥೆ ಮತ್ತು ನಿರ್ದೇಶಕರು ನಮ್ಮ ಬಜೆಟ್ ನಿರ್ಧರಿಸಲಿಲ್ಲ. ಕೊವಿಡ್ ನಮ್ಮ ಬಜೆಟ್ ನಿರ್ಧರಿಸಿತು. ಸೆಟ್ ನಡೆದ ಅವಘಡದಿಂದ ಚಿತ್ರತಂಡಕ್ಕೆ ನಷ್ಟವಾಯಿತು. ಆದರೆ ಸಿನಿಮಾವನ್ನು ಕೈಬಿಡದೇ ಸಿನಿಮಾ ಪೂರ್ಣಗೊಳಿಸಿದರು ಎಂದು ಕಮಲ್ ಹಾಸನ್ ಮಾತನಾಡಿದ್ದಾರೆ.
1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.
ಕಮಲ್ ಹಾಸನ್ ಜೊತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.
ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ (Indian 2) ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ತಮಿಳಿನ ಸ್ಟಾರ್ ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ (Indian 2) ಸಿನಿಮಾದ ಆಡಿಯೋ ಲಾಂಚ್ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕನಸಿನ ಭಾರತದ ಬಗ್ಗೆ ಕಮಲ್ ಹಾಸನ್ (Kamal Haasan) ಹಂಚಿಕೊಂಡಿದ್ದಾರೆ. ಒಬ್ಬರ ತಮಿಳಿಗ ಭಾರತವನ್ನು ಆಳಬೇಕು ಎಂದಿದ್ದಾರೆ. ಇದನ್ನೂ ಓದಿ:ಕಿಚ್ಚನ ಜೊತೆ ನಟಿಸಬೇಕಂತೆ ಮಹಾನಟಿ: ಅವಕಾಶ ಕೊಡ್ತಾರಾ ಸುದೀಪ್?
ನಾನು ಒಬ್ಬ ತಮಿಳಿಗ. ನಾನು ಭಾರತೀಯನೂ ಹೌದು. ನಾನು ಒಮ್ಮೆಲೆ ತಮಿಳಿಗ ಹಾಗೂ ಭಾರತೀಯ ಎರಡೂ ಆಗಿರಬಲ್ಲೆ. ಒಡೆದು ಆಳುವುದು ಬ್ರಿಟೀಷರ ಪದ್ಧತಿ ಆಗಿತ್ತು. ಅವರು ಹಾಗೆ ಮಾಡಿದರು ಏಕೆಂದರೆ ಭಾರತೀಯರು ಒಗ್ಗಟ್ಟಾದಾಗ ಓಡಿಹೋಗಲು ಅವರಿಗೆ ಒಂದು ಮನೆ ಎಂಬುದಿತ್ತು. ಆದರೆ ಇಂದು ಒಡೆದು ಆಳುತ್ತಿರುವವರು ಎಲ್ಲಿಗೆ ಓಡಿಹೋಗುತ್ತಾರೆ ಎಂದು ನಟ ಪ್ರಶ್ನೆ ಮಾಡಿದ್ದಾರೆ. ಭಾರತವನ್ನು ಒಡೆದು ಆಳುತ್ತಿರುವವರ ವಿರುದ್ಧ ಭಾರತೀಯರು ಒಂದಲ್ಲ ಒಂದು ದಿನ ದಂಗೆ ಏಳುತ್ತಾರೆ ಎಂದು ಮಾತನಾಡಿದರು.
ನನಗೆ ಒಂದು ಕನಸಿದೆ, ಒಂದು ದಿನ ಒಬ್ಬ ತಮಿಳಿಗ ಭಾರತವನ್ನು ಆಳಬೇಕು, ಅದೂ ಭಾರತದ ವಿವಿಧತೆಯನ್ನು ಸಂರಕ್ಷಿಸಿ ಭಾರತವನ್ನು ಆಳಬೇಕು ಎಂದರು. ಮುಂದುವರೆದು, ಈ ದೇಶದ ಒಗ್ಗಟ್ಟನ್ನು ನಾವೇ ಕಾಪಾಡಬೇಕು ಎಂದಿದ್ದಾರೆ. ಇನ್ನೂ ಕಮಲ್ ಹಾಸನ್ ನಟ ಮಾತ್ರವಲ್ಲ. ರಾಜಕಾರಣಿಯೂ ಹೌದು, ಮಕ್ಕಳ್ ನಿಧಿ ಮಯಂ ಹೆಸರಿನ ಪಕ್ಷ ಕಟ್ಟಿ ನಡೆಸುತ್ತಿದ್ದಾರೆ.
1996ರಲ್ಲಿ ಇಂಡಿಯನ್ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ. ಇದೇ ಜುಲೈ 12ಕ್ಕೆ ಸಿನಿಮಾ ರಿಲೀಸ್ ಆಗಲಿದೆ.
ಕಮಲ್ ಹಾಸನ್ ಜೊತೆ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.
ಉಳಗನಾಯಗನ್ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ 2 (Indian 2) ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಸೌರಾ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೆಲೋಡಿ ನಂಬರ್ ರಿಲೀಸ್ ಆಗಿದೆ. ಬೊಮ್ಮರಿಲ್ಲು ಸಿದ್ದಾರ್ಥ್ (Siddharth) ಹಾಗೂ ರಾಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.
ಕಮಲ್ ಹಾಸನ್ ಜೊತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.
ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ಕಮಲ್ ಹಾಸನ್ ನಾಯಕರಾಗಿ ನಟಿಸಿರುವ, ಆರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ‘ಇಂಡಿಯನ್ 2’ ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರ ಪ್ರತಿಷ್ಠಿತ ROMEO PICTURES ಮೂಲಕ ಬಿಡುಗಡೆಯಾಗಲಿದೆ. ಹೆಸರಾಂತ ಸಂಸ್ಥೆಯು ಇಂಡಿಯನ್ 2 ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ರೋಮಿಯೋ ಪಿಕ್ಚರ್‍ನ ರಾಹುಲ್ ತಿಳಿಸಿದ್ದಾರೆ. ಪ್ರಖ್ಯಾತ ವಿತರಣಾ ಸಂಸ್ಥೆಯಾದ ಇದು ಅಜಿತ್ ಕುಮಾರ್ ಅವರ ‘ನೆರ್ಕೊಂಡ ಪಾರವೈ’, ‘ಥುನಿವು’, ಉದಯನಿಧಿ ಸ್ಟಾಲಿನ್ ಅವರ “ನೆಂಜುಕು ನೀಧಿ” ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ.
ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಈ ಚಿತ್ರವನ್ನು ನಿರ್ಮಿಸಿದೆ. ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಕುಲ್ ಪ್ರೀತ್ ಸಿಂಗ್ , ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಕನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು “ಇಂಡಿಯನ್ 2” ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 (Indian 2) ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
ಇಂಡಿಯನ್ 2 ಸಿನಿಮಾದ ಸೌರಾ ಎಂಬ ಹಾಡು ಅನಾವರಣಗೊಂಡಿದೆ. ಕುದುರೆ ಏರಿ ಬರುವ ಸೇನಾಪತಿ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.
ಇಂಡಿಯನ್ 1 ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರ ನಿಭಾಯಿಸಿದ್ದರು. ಇಂಡಿಯನ್ 2: 1996 ರ ಹಿಟ್ ಚಲನಚಿತ್ರ ಇಂಡಿಯನ್‌ನ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ , ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ. ಈ ಚಲನಚಿತ್ರವನ್ನು ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ನಿರ್ಮಿಸಿದೆ.
ಕಾಲಿವುಡ್ ನಟ ಕಮಲ್ ಹಾಸನ್ ‘ವಿಕ್ರಮ್’ (Vikram) ಸಿನಿಮಾದ ಸಕ್ಸಸ್ ನಂತರ ‘ಇಂಡಿಯನ್ 2’ (Indian 2) ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. ಈ ಚಿತ್ರ ರಿಲೀಸ್ ಯಾವಾಗ ಎಂದು ಕಾದು ಕುಳಿತವರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ.
ಕಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ ಚಿತ್ರದ ಇದೇ ಜುಲೈ 12ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಇಂಡಿಯನ್ ಸೀಕ್ವೆಲ್‌ಗೆ ಎಸ್.ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರೆದ ಭಾಗವಾಗಿದೆ. ಇದನ್ನೂ ಓದಿ:ಮಂಚು ಮನೋಜ್ ನಟನೆಯ ‘ಮಿರಾಯ್’ ಫಸ್ಟ್ ಲುಕ್ ರಿಲೀಸ್- ಸಾಥ್ ನೀಡಿದ ಡಿಬಾಸ್, ಕಿಚ್ಚ
ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.