Tag: Kamal Haasan

  • ಕಮಲ್-ಮಣಿರತ್ನಂ ಟೀಮ್ ಸೇರಿಕೊಂಡ ಸಿಲಂಬರಸನ್

    ಕಮಲ್-ಮಣಿರತ್ನಂ ಟೀಮ್ ಸೇರಿಕೊಂಡ ಸಿಲಂಬರಸನ್

    ಮೂರು ದಶಕಗಳ ನಂತರ ಲೆಜೆಂಡರಿ ನಟ ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಮಣಿರತ್ನಂ (Mani Ratnam) ಜೋಡಿ ಮತ್ತೆ ಒಂದಾಗಿರುವುದು ಗೊತ್ತೇ ಇದೆ. 36 ವರ್ಷಗಳ ಹಿಂದೆ ಗ್ಯಾಂಗ್‌ಸ್ಟರ್ ಸಿನಿಮಾ ‘ನಾಯಕನ್’ ಬಿಡುಗಡೆಯಾಗಿ ಕಮಾಲ್ ಮಾಡಿತ್ತು. ಅದೇ ವೈಭವ ಮತ್ತೆ ಸೃಷ್ಟಿಸಲು ಈ ಸೂಪರ್ ಹಿಟ್ ಜೋಡಿ ಕೈ ಜೋಡಿಸಿದೆ. ಈ ಬಾರಿ ‘ಥಗ್ ಲೈಫ್’ ಮೂಲಕ ಕಮಲ್-ಮಣಿ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಟೈಟಲ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರಕ್ಕೀಗ ತಮಿಳಿನ ಖ್ಯಾತ ನಟ ಸಿಲಂಬರಸನ್ (Silambarasan) ಎಂಟ್ರಿ ಕೊಟ್ಟಿದ್ದಾರೆ.

    ಥಗ್ ಲೈಫ್ ತಂಡಕ್ಕೀಗ ಸಿಲಂಬರಸನ್ ಸೇರ್ಪಡೆಯಾಗಿದ್ದಾರೆ. ಮರುಭೂಮಿಯಲ್ಲಿ ಕಾರ್ ಚೇಸಿಂಗ್ ಮಾಡುತ್ತಾ ಬುಲೆಟ್ ಫೈರ್ ಮಾಡುವ ಸಿಲಂಬರಸನ್ ಝಲಕ್ ಬಿಡುಗಡೆ ಮಾಡಿದೆ ಚಿತ್ರತಂಡ ಅವರನ್ನು ಸ್ವಾಗತಿಸಿದೆ. ಇನ್ನು, ನಟಿ ತ್ರಿಶಾ, ಮತ್ತು ಜಯರಾಮ್‌ ರವಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ

    ಈ ಚಿತ್ರವನ್ನು ಕಮಲ್‌ ಹಾಸನ್‌, ಮಣಿ ರತ್ನಂ, ಆರ್‌ ಮಹೇಂದ್ರನ್‌ ಮತ್ತು ಶಿವ ಅನಂತ್‌ ಅವರು ಜತೆಯಾಗಿ ರಾಜ್‌ ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಹೆಸರಿನಲ್ಲಿ ನಿರ್ಮಿಸುತ್ತಿದ್ದಾರೆ.   ಎಆರ್‌ ರೆಹಮಾನ್‌ ಸಂಗೀತ,  ಶ್ರೀಕರ್‌ ಪ್ರಸಾದ್‌ ಅವರು ಸಂಕಲನದ ಹೊಣೆ ಹೊತ್ತಿದ್ದಾರೆ. ರವಿ ಕೆ. ಚಂದ್ರನ್‌ ಅವರ ಕೊರಿಯೊಗ್ರಫಿ  ಥಗ್ ಲೈಫ್ ಸಿನಿಮಾಕ್ಕಿದೆ.

  • Thug Life: ಕಮಲ್ ಹಾಸನ್ ಜೊತೆ ಚಿತ್ರೀಕರಣದಲ್ಲಿ ನಟ ಸಿಂಬು ಭಾಗಿ- ಲೀಕ್ ಆಯ್ತು ಫೋಟೋ

    Thug Life: ಕಮಲ್ ಹಾಸನ್ ಜೊತೆ ಚಿತ್ರೀಕರಣದಲ್ಲಿ ನಟ ಸಿಂಬು ಭಾಗಿ- ಲೀಕ್ ಆಯ್ತು ಫೋಟೋ

    ಕಾಲಿವುಡ್ ಸ್ಟಾರ್ ನಟ ಕಮಲ್ ಹಾಸನ್ (Kamal Hasaan) ಸದ್ಯ ಮಣಿರತ್ನಂ ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ‘ಥಗ್ ಲೈಫ್’ (Thug Life) ಸಿನಿಮಾದ ಶೂಟಿಂಗ್ ದೆಹಲಿಯಲ್ಲಿ ಭರದಿಂದ ಸಾಗುತ್ತಿದೆ. ಚಿತ್ರೀಕರಣ ಫೋಟೋವೊಂದು ಲೀಕ್ ಆಗಿದೆ. ಕಮಲ್ ಹಾಸನ್ ಜೊತೆ ಭಾಗಿಯಾಗಿರುವ ಸಿಂಬು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಕಮಲ್ ಹಾಸನ್ ನಟನೆಯ 234ನೇ ಚಿತ್ರ ಇದಾಗಿದ್ದು, 36 ವರ್ಷಗಳ ನಂತರ ಮಣಿರತ್ನಂ ಜೊತೆ ಕೈಜೋಡಿಸಿದ್ದಾರೆ. ಇನ್ನೂ ‘ಥಗ್ ಲೈಫ್’ ಚಿತ್ರವು ಏಪ್ರಿಲ್ ಕೊನೆಯ ವಾರದಿಂದ ದೆಹಲಿಯಲ್ಲಿ ಶೂಟಿಂಗ್‌ಗಾಗಿ ಚಿತ್ರತಂಡ ಬೀಡು ಬಿಟ್ಟಿದೆ. ಮೇ 12ರವರೆಗೂ ಚೆನ್ನೈ ಮತ್ತು ದೆಹಲಿಯಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ:ಥೈಲ್ಯಾಂಡ್ ಬೀಚ್: ಬಿಕಿನಿಯಲ್ಲಿ ಕಾಣಿಸಿಕೊಂಡ ದಿಶಾ

    ಕಮಲ್ ಹಾಸನ್ ನಟನೆಯ ಸಿನಿಮಾದಲ್ಲಿ ತಮಿಳು ನಟ ಸಿಂಬು (Simbu) ಎಂಟ್ರಿ ಕೊಟ್ಟಿದ್ದಾರೆ. ಕಮಲ್ ಜೊತೆ ಸಿಂಬು ಚಿತ್ರೀಕರಣಕ್ಕೆ ಭಾಗಿಯಾಗಿರುವ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ಕಮಲ್, ಅಭಿರಾಮಿ, ಸಿಂಬು ಇದ್ದಾರೆ. ಕಮಲ್ ಸಖತ್ ಯಂಗ್ ಆಗಿ ಕಾಣಿಸಿಕೊಂಡ್ರೆ, ಸಿಂಬು ಕಪ್ಪು ಕನ್ನಡಕ ಧರಿಸಿರೋದು ನೋಡುಗರ ಗಮನ ಸೆಳೆದಿದೆ.

    ‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್, ಸಿಂಬು, ಅಭಿರಾಮಿ, ನಾಸರ್, ಜಯಂ ರವಿ, ತ್ರಿಶಾ, ಗೌತಮ್ ಕಾರ್ತಿಕ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್‌ನಲ್ಲಿದೆ ಚಿತ್ರತಂಡ.

  • ಶಾರುಖ್ ಖಾನ್ ಆಸೆಯನ್ನು ರಿವೀಲ್ ಮಾಡಿದ ಕಮಲ್ ಹಾಸನ್

    ಶಾರುಖ್ ಖಾನ್ ಆಸೆಯನ್ನು ರಿವೀಲ್ ಮಾಡಿದ ಕಮಲ್ ಹಾಸನ್

    ಬಾಲಿವುಡ್ ನಟ ಶಾರುಖ್ ಖಾನ್ (Kamal Haasan) ಕುರಿತಾಗಿ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

    ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ (Shah Rukh Khan) ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ (Mani Ratnam) ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ. ಒಂದಾದರೂ ಅವರಿಗೆ ಕನಸಿದೆ ಎಂದಿದ್ದಾರೆ ಕಮಲ್.

     

    ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

  • ‘ಕಲ್ಕಿ’ ಸಿನಿಮಾದ ಕಲಾವಿದರ ಸಂಭಾವನೆಯೇ 250 ಕೋಟಿ ರೂಪಾಯಿ

    ‘ಕಲ್ಕಿ’ ಸಿನಿಮಾದ ಕಲಾವಿದರ ಸಂಭಾವನೆಯೇ 250 ಕೋಟಿ ರೂಪಾಯಿ

    ಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಲ್ಕಿ ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರಿಗೆ ನೀಡಿರುವ ಸಂಭಾವನೆಯಿಂದಾಗಿ (Remuneration) ಸಖತ್ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಕಲಾವಿದರಿಗಾಗಿಯೇ ಒಟ್ಟು 250 ಕೋಟಿ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದಾರಂತೆ ನಿರ್ಮಾಪಕರು. ಅದರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರೋದು ಚಿತ್ರ ನಾಯಕ ಪ್ರಭಾಸ್.

    ಪ್ರಭಾಸ್‌ (Prabhas) ಈ ಸಿನಿಮಾಗಾಗಿ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ.  ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ ರೂಪಾಯಿ ಸಂಭಾವನೆ ಜೇಬಿಗಿಳಿಸಿಕೊಂಡಿದ್ದಾರೆ. ನಾಯಕಿ ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

    ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ (Kalki 2898 AD) ಸಿನಿಮಾ, ಈಗಾಗಲೇ ಶೂಟಿಂಗ್‌ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‌ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್‌ ಆದ ಅಮಿತಾಭ್ ಬಚ್ಚನ್‌ ಅವರ ಹೊಸ ಲುಕ್‌.

    ಹೌದು, ಕಳೆದ ವರ್ಷಅಮಿತಾಭ್ (Amitabh Bachchan)  ಅವರ ಬರ್ತ್‌ಡೇ ದಿನದಂದು ಕಲ್ಕಿ ಚಿತ್ರದಲ್ಲಿನ ಅವರ ಲುಕ್‌ ಹೇಗಿರಲಿದೆ ಎಂಬ ಸಣ್ಣ ಝಲಕ್‌ ರಿಲೀಸ್‌ ಆಗಿತ್ತು. ಅದಾದ ಬಳಿಕ ಚಿತ್ರದಲ್ಲಿ ಅಮಿತಾಭ್ ಪಾತ್ರ ಹೇಗಿರಲಿದೆ ಎಂಬ ಕುತೂಹಲವೂ ಹೆಚ್ಚಾಗಿತ್ತು. ಇದೀಗ ಆ ಕೌತುಕವನ್ನು ತಣಿದಿದೆ. ಅಂದರೆ, ಕಲ್ಕಿ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‌ ಪಾತ್ರದ ಝಲಕ್‌ ಹೊರಬಿದ್ದಿದೆ.

     

    ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಕಲ್ಕಿ ಚಿತ್ರ ನಿರ್ಮಾಣವಾಗುತ್ತಿದೆ. ಈ ಚಿತ್ರದಲ್ಲಿ ಅಶ್ವತ್ಥಾಮನಾಗಿ ಅಮಿತಾಭ್ ಬಚ್ಚನ್‌ ಕಾಣಿಸಿಕೊಳ್ಳಲಿದ್ದಾರೆ. ಒಂದು ನಿಮಿಷದ ಝಲಕ್‌ನಲ್ಲಿ ಎಲ್ಲ ಭಾಷೆಯನ್ನೂ ಬೆರೆಸಿ ಟೀಸರ್‌ ಬಿಡುಗಡೆ ಮಾಡಲಾಗಿದೆ.  ಪುಟಾಣಿಯೊಬ್ಬ ನೀವ್ಯಾರು, ನಿಮ್ಮ ಜತೆ ನಾನು ಯಾವ ಭಾಷೆಯಲ್ಲಿ ಮಾತನಾಡಲಿ? ಎಂದೆಲ್ಲ ಪ್ರಶ್ನೆ ಮಾಡಿದ್ದಾನೆ. ಆಗ, ಈಗ ನನ್ನ ಸಮಯ ಬಂದಿದೆ. ನನ್ನ ಕೊನೆಯ ಯುದ್ಧಕ್ಕೆ ಸಮಯ ಬಂದಿದೆ. ನಾನು ದ್ರೋಣಾಚಾರ್ಯರ ಮಗ ಅಶ್ವತ್ಥಾಮ (Ashwatthama) ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ ಅಮಿತಾಭ್ ಬಚ್ಚನ್.‌  ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

  • ಲೋಕ ಚುನಾವಣೆ : ಮತದಾನ ಮಾಡಿ ಮಾದರಿಯಾದ ನಟ ಕಮಲ್

    ಲೋಕ ಚುನಾವಣೆ : ಮತದಾನ ಮಾಡಿ ಮಾದರಿಯಾದ ನಟ ಕಮಲ್

    ಮಿಳುನಾಡು (Tamil Nadu) ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆದದೆ. ಇದು ಮೊದಲ ಹಂತದ ಮತದಾನವಾಗಿದ್ದು, ಆಸಕ್ತಿಯಿಂದ ಅನೇಕರು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ನಟ ಮತ್ತು ಎಂಎನ್‌ಎಂ ಮುಖ್ಯಸ್ಥ ಕಮಲ್ ಹಾಸನ್ ಕೂಡ ಮತದಾನ ಮಾಡಿ ಮಾದರಿಯಾಗಿದ್ದು, ಚೆನ್ನೈನ ಕೊಯಾಂಬೆಡುವಿನ ಮತಗಟ್ಟೆಯಲ್ಲಿ ಅವರು ಮತದಾನ ಮಾಡಿದ್ದಾರೆ.

    ಸದ್ಯ ಕಮಲ್ ರಾಜಕಾರಣದಲ್ಲಿ ಬ್ಯುಸಿಯಾಗಿದ್ದು, ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ (MNM) ಸಂಸ್ಥಾಪಕ, ನಟ ಕಮಲ್ ಹಾಸನ್ (Kamal Haasan) ತಿಳಿಸಿದ್ದಾರೆ.

     

    ಚೆನ್ನೈನಲ್ಲಿ (Chennai) ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್‌ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ. ಆದರೆ ಸ್ಥಳೀಯ, ಊಳಿಗಮಾನ್ಯ ರಾಜಕೀಯವನ್ನು ಮುಂದುವರಿಸಿದರೆ ನಾವು ಅದರ ಭಾಗವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಕಮಲ್ ಹಾಸನ್ ನಟನೆಯ ‘ಇಂಡಿಯನ್‌ 2’ ಸಿನಿಮಾದಲ್ಲಿ ಸಿದ್ಧಾರ್ಥ್

    ಕಮಲ್ ಹಾಸನ್ ನಟನೆಯ ‘ಇಂಡಿಯನ್‌ 2’ ಸಿನಿಮಾದಲ್ಲಿ ಸಿದ್ಧಾರ್ಥ್

    ಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ‘ಇಂಡಿಯನ್ 2’ (Indian 2) ಸಿನಿಮಾದಲ್ಲಿ ತಮಿಳಿನ ನಟ ಸಿದ್ಧಾರ್ಥ್ (Siddarth) ನಟಿಸಿದ್ದಾರೆ. ಸಿದ್ಧಾರ್ಥ್ 45ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಫಸ್ಟ್ ಪೋಸ್ಟರ್ ಲುಕ್ ರಿವೀಲ್ ಮಾಡಿದೆ ಚಿತ್ರತಂಡ. ಈ ಮೂಲಕ ನಟನಿಗೆ ಚಿತ್ರತಂಡ ಶುಭಹಾರೈಸಿದೆ.

    ಕೆಂಪು ಮತ್ತು ಬಿಳಿ ಬಣ್ಣದ ಚೆಕ್ಸ್ ಶರ್ಟ್ ಧರಿಸಿರುವ ಸಿದ್ಧಾರ್ಥ್ ಫೋಟೋ ಶೇರ್ ಮಾಡಿ ನಿರ್ಮಾಣ ಸಂಸ್ಥೆ ಬರ್ತ್ಡೇ ವಿಶ್ಸ್ ತಿಳಿಸಿದೆ. ಮೂಲಗಳ ಪ್ರಕಾರ, ಚಿತ್ರದಲ್ಲಿ ಕಮಲ್ ಹಾಸನ್ ಮೊಮ್ಮಗನಾಗಿ ಸಿದ್ಧಾರ್ಥ್ ನಟಿಸಿದ್ದಾರೆ ಎನ್ನಲಾಗಿದೆ. ಸಿದ್ಧಾರ್ಥ್ ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆ ಇದೆ ಎನ್ನಲಾಗಿದೆ.

    2003ರಲ್ಲಿ ‘ಬಾಯ್ಸ್’ ಎಂಬ ಸಿನಿಮಾದಲ್ಲಿ ಸಿದ್ಧಾರ್ಥ್ ನಟಿಸಿದ್ದರು. ಆ ಸಿನಿಮಾಗೆ ಎಸ್. ಶಂಕರ್ ನಿರ್ದೇಶನ ಮಾಡಿದ್ದರು. ಇದೀಗ 2ನೇ ಬಾರಿ ಶಂಕರ್ ಜೊತೆ ‘ಇಂಡಿಯನ್ 2’ ಚಿತ್ರದ ಮೂಲಕ ಚಿತ್ರತಂಡ ಸೇರಿಕೊಂಡಿದ್ದಾರೆ. ಇದನ್ನೂ ಓದಿ:Singham Again: ಶೂಟಿಂಗ್‌ನಲ್ಲಿ ಪ್ರೆಗ್ನೆಂಟ್ ದೀಪಿಕಾ ಪಡುಕೋಣೆ ಬ್ಯುಸಿ

    ಇಂಡಿಯನ್ ಸಿನಿಮಾ ಮೊದಲ ಭಾಗ ಸೂಪರ್ ಹಿಟ್ ಆಗಿತ್ತು. ಈಗ ಹಲವು ವರ್ಷಗಳ ನಂತರ ಪಾರ್ಟ್ 2ಗೆ ಚಾಲನೆ ಸಿಕ್ಕಿದೆ. ಇದೇ ಜೂನ್‌ಗೆ ಸಿನಿಮಾ ರಿಲೀಸ್ ಆಗುತ್ತಿದೆ. ಕಮಲ್ ಹಾಸನ್, ಪ್ರಿಯಾ ಭವಾನಿ ಶಂಕರ್, ಕಾಜಲ್, ರಕುಲ್, ಸಿದ್ಧಾರ್ಥ್, ವಿವೇಕ್ ಸೇರಿದಂತೆ ಹಲವರು ನಟಿಸಿದ್ದಾರೆ.

  • ಅಂದು ಐದು, ಇಂದು ಮೂರೇ ಭಾಷೆ: ಏನಿದು ‘ಇಂಡಿಯನ್ 2’ ಪೋಸ್ಟರ್

    ಅಂದು ಐದು, ಇಂದು ಮೂರೇ ಭಾಷೆ: ಏನಿದು ‘ಇಂಡಿಯನ್ 2’ ಪೋಸ್ಟರ್

    ಮಲ್ ಹಾಸನ್ (Kamal Haasan) ನಟನೆಯ ಇಂಡಿಯನ್ 2 ಸಿನಿಮಾ ಮೂಲ ಭಾಷೆ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ರಿಲೀಸ್ ಮಾಡಲಾಗುವುದು ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿತ್ತು. ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಭಾಷೆಯಲ್ಲಿ ಟ್ರೈಲರ್ ಕೂಡ ರಿಲೀಸ್ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ಕೇವಲ ಮೂರು ಭಾಷೆ ಮಾತ್ರವಿದೆ. ಹಾಗಾಗಿ ಮೂರು ಭಾಷೆಯಲ್ಲಿ ಮಾತ್ರ ಸಿನಿಮಾ ಬರಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ.

    ಇಂಡಿಯನ್ -2 (Indian 2) ಸಿನಿಮಾ ಜೂನ್‌ನಲ್ಲಿ ಬಿಡುಗಡೆಯಾಗಲಿದ್ದು, ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ‘ಇಂಡಿಯನ್ 2’ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.

    ಇಂಡಿಯನ್ ಸೀಕ್ವೆಲ್‌ಗೆ ಎಸ್.ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

     

    ಎಸ್. ಶಂಕರ್ (Kamal Haasan) ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

  • Indian 2: ಶೂಟಿಂಗ್‌ ಮುಗಿಸಿದ ಕಮಲ್‌ ಹಾಸನ್‌, ರಕುಲ್‌ ಸಿನಿಮಾ

    Indian 2: ಶೂಟಿಂಗ್‌ ಮುಗಿಸಿದ ಕಮಲ್‌ ಹಾಸನ್‌, ರಕುಲ್‌ ಸಿನಿಮಾ

    ಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಇಂಡಿಯನ್ -2 (Indian 2) ಸಿನಿಮಾ ಜೂನ್‌ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ‘ಇಂಡಿಯನ್ 2’ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.

    ಇಂಡಿಯನ್ ಸೀಕ್ವೆಲ್‌ಗೆ ಎಸ್.ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

    ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

  • ಪುನರಾಗಮನಕ್ಕೆ ಸೇನಾಪತಿ ಸಜ್ಜು- ಜೂನ್‌ನಲ್ಲಿ ತೆರೆಗೆ ಬರುತ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

    ಪುನರಾಗಮನಕ್ಕೆ ಸೇನಾಪತಿ ಸಜ್ಜು- ಜೂನ್‌ನಲ್ಲಿ ತೆರೆಗೆ ಬರುತ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

    ಳಗನಾಯಗನ್ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಇಂಡಿಯನ್-2 ಸಿನಿಮಾ. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ (Indian 2) ಸಿನಿಮಾ ಮೂಡಿ ಬರುತ್ತಿದೆ.

    ಸಣ್ಣದೊಂದು ಝಲಕ್ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಇಂಡಿಯನ್ -2 (Indian 2) ಸಿನಿಮಾಗೆ ಚಿತ್ರಪ್ರೇಮಿಗಳು ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ. ಇದೀಗ ಸೇನಾಪತಿ ಪುನರ್ ಆಗಮನಕ್ಕೆ ಸಜ್ಜಾಗಿದ್ದು, ಜೂನ್ ತಿಂಗಳಲ್ಲಿ ಕಮಲ್ ಹಾಗೂ ಶಂಕರ್ ಜೋಡಿಯ ಚಿತ್ರ ತೆರೆಗೆ ಬರುತ್ತಿದೆ. ಆದರೆ ಯಾವ ದಿನ ಇಂಡಿಯನ್ ಸೀಕ್ವೆಲ್ ಬಿಡುಗಡೆಯಾಗಲಿದೆ ಅನ್ನೋದನ್ನು ಚಿತ್ರತಂಡ ರಿವೀಲ್ ಮಾಡಿಲ್ಲ.

     

    View this post on Instagram

     

    A post shared by Kamal Haasan (@ikamalhaasan)

    ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಸಂಸ್ಥೆಗಳ ಮೂಲಕ ಇಂಡಿಯನ್ 2 ಸಿನಿಮಾ ನಿರ್ಮಾಣವಾಗಿದೆ. ಇದನ್ನೂ ಓದಿ:ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ

    ಹಿರಿಯ ಸ್ವಾತಂತ್ರ‍್ಯ ಹೋರಾಟಗಾರನು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಕಮಲ್ ಹಾಸನ್ ಮಾತ್ರವಲ್ಲದೇ ಅನೇಕ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೆಹಲಿ ಗಣೇಶ್, ಗುರು ಸೋಮಸುಂದರಂ, ಜಯಪ್ರಕಾಶ್, ವೆನ್ನೆಲ ಕಿಶೋರ್, ಮನೋಬಾಲಾ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

  • ಕಮಲ್ ಹಾಸನ್, ರಜನಿಗೆ ವಾಟಾಳ್ ನಾಗರಾಜ್ ಎಚ್ಚರಿಕೆ

    ಕಮಲ್ ಹಾಸನ್, ರಜನಿಗೆ ವಾಟಾಳ್ ನಾಗರಾಜ್ ಎಚ್ಚರಿಕೆ

    ಮೇಕೆದಾಟು (Mekedatu) ಯೋಜನೆ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಮತ್ತೆ ಕಲಾವಿದರನ್ನು ಎಳೆತಂದಿದ್ದಾರೆ. ಮೇಕೆದಾಟು ಪರವಾಗಿ ನಡೆದ ಹೋರಾಟದಲ್ಲಿ ಮಾತನಾಡಿರುವ ವಾಟಾಳ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಕೆದಾಟು ಯೋಜನೆ ವಿರೋಧಿಸಿ ಮಾತನಾಡಿದ್ದಾರೆ. ಪ್ರಣಾಳಿಕೆಯಲ್ಲಿ ಯೋಜನೆಗೆ ಅಡೆತಡೆ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನು ವಿರೋಧಿಸುತ್ತೇನೆ ಎಂದಿದ್ದಾರೆ ವಾಟಾಳ್.

    ಈ ಕುರಿತಂತೆ ಕನ್ನಡದ ನಟರೂ ಬೀದಿಗೆ ಇಳಿದು ಹೋರಾಟ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಜೊತೆಗೆ ಸ್ಟಾಲಿನ್ ಅವರನ್ನು ರಜನಿಕಾಂತ್ (Rajinikanth), ಕಮಲ್ ಹಾಸನ್ (Kamal Haasan) ಭೇಟಿ ಮಾಡಿ ಮೇಕೆದಾಟು ಯೋಜನೆಗೆ ತಡೆ ನೀಡಬಾರದು ಎಂದು ಮನವಿ ಮಾಡುವಂತೆ ಕೇಳಿದ್ದಾರೆ. ಹಾಗೆ ಮಾಡದೇ ಹೋದರೆ, ಇಬ್ಬರೂ ಕರ್ನಾಟಕಕ್ಕೆ ಬರಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

     

    ಕನ್ನಡಪರ ಹೋರಾಟಗಳ ವಿಚಾರದಲ್ಲಿ ಹೆಚ್ಚೆಚ್ಚು ರಜನಿಕಾಂತ್ ಅವರನ್ನು ಎಳೆತರಲಾಗುತ್ತದೆ. ಈ ಬಾರಿ ಕಮಲ್ ಹಾಸನ್ ಜೊತೆಯಾಗಿದ್ದಾರೆ. ಈ ಹಿಂದೆಯೇ ಕನ್ನಡದ ವಿಚಾರದಲ್ಲಿ ರಜನಿಕಾಂತ್ ಅವರ ಚಿತ್ರಗಳನ್ನು ತಡೆಹಿಡಿಯಲಾಗಿದೆ. ಹಾಗಾಗಿ ರಜನಿ ಈ ಹೋರಾಟದಲ್ಲಿ ಪ್ರಮುಖವಾಗಿ ಕಂಡಿದ್ದಾರೆ.