Tag: Kamal Pant

  • ಬೆಂಗಳೂರಿನಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಗೊಂದಲ ಇಲ್ಲ: ಕಮಲ್ ಪಂತ್

    ಬೆಂಗಳೂರಿನಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಗೊಂದಲ ಇಲ್ಲ: ಕಮಲ್ ಪಂತ್

    ಬೆಂಗಳೂರು: ನಗರದಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸ್ಪಷ್ಟಪಡಿಸಿದ್ದಾರೆ.

    loudspeakers

    ನಗರದಲ್ಲಿ ಎಲ್ಲರೂ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿದ್ದಾರೆ. ಈ ಸಂಬಂಧ ಸರ್ಕಾರ ಹೊಸದಾಗಿ ಮಾರ್ಗಸೂಚಿ ಕೂಡ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    2002ರಲ್ಲಿ ಸುಪ್ರೀಂ ಕೋರ್ಟ್ ಜಾರಿ ಮಾಡಿರುವ ಆದೇಶ ಪಾಲನೆ ಮಾಡಬೇಕು. ರಾತ್ರಿ ಹತ್ತು ಗಂಟೆಯಿಂದ ಮುಂಜಾನೆ 6 ಗಂಟೆಯ ತನಕ ನಗರದಲ್ಲಿ ಯಾವುದೇ ಲೌಡ್ ಸ್ಪೀಕರ್‌ಗಳನ್ನು ಬಳಕೆ ಮಾಡಬಾರದು. ವಿಶೇಷ ಸಮಯದಲ್ಲಿ ಅನುಮತಿ ಹೊರತುಪಡಿಸಿ ಯಾವುದೇ ಲೌಡ್‌ಸ್ಪೀಕರ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಹೇಳಿದ್ದಾರೆ.

    mosque-loudspeakers
    ಸಾಂದರ್ಭಿಕ ಚಿತ್ರ

    ಲೌಡ್‌ಸ್ಪೀಕರ್ ಬಗ್ಗೆ ಸರ್ಕಾರ ಸಭೆ ಮಾಡಿ ಒಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅನಧಿಕೃತವಾಗಿರುವ ಮೈಕ್‌ಗಳಿಗೆ 15 ದಿನ ಸರ್ಕಾರ ಗಡುವು ನೀಡಿದೆ. 15 ದಿನಗಳ ಒಳಗಾಗಿ ಅರ್ಜಿ ಹಾಕಿ ಅಧಿಕೃತ ಮಾಡಿಕೊಳ್ಳಬೇಕು. 15 ದಿನದ ನಂತರ ಅನಧಿಕೃತ ಮೈಕ್‌ಗಳನ್ನು ತೆರವು ಮಾಡುವ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಕೇಸರಿಧ್ವಜ ಕಟ್ಟಿ ಕಿಡಿಗೇಡಿಗಳ ವಿಕೃತಿ – ಸ್ಥಳದಲ್ಲೇ ಬೀಡುಬಿಟ್ಟ ಪೊಲೀಸರು

  • ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಬೆಂಗಳೂರು: ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ ಎಂದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಪೊಲೀಸ್ ಆಯುಕ್ತರು ಎಂದರೆ ಬೆಂಗಳೂರು 15 ಮಿಲಿಯನ್ ನಾಗರಿಕರನ್ನು ರಕ್ಷಿಸುವ ಸಂಸ್ಥೆಯಾಗಿದೆ. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಯೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ಸುಳ್ಳುಗಾರ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಇತ್ತೀಚೆಗಷ್ಟೇ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಆಪ್ ಪಕ್ಷದ ಧ್ವಜ ಹಿಡಿದರು. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

  • ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರನ್ನು ಪ್ರಜ್ಞಾವಂತರು, ಅನುಭವಿಗಳು ಎಂದು ಭಾವಿಸಿದ್ದೆ. ಆದರೆ ಅವರು ಛಲವಾದಿಪಾಳ್ಯದ ಯುವಕ ಚಂದ್ರುವಿನ ಕೊಲೆ ಪ್ರಕರಣಕ್ಕೆ ಇಲ್ಲದ ಕಥೆಗಳನ್ನು ತಳುಕು ಹಾಕಿ ಇಷ್ಟು ಕೀಳುಮಟ್ಟದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.

    ಶನಿವಾರ ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಮೀರ್, ಯಾವುದೇ ಪ್ರಕರಣದ ತನಿಖೆ ಮಾಡುವವರು ಪೊಲೀಸರು. ಬಿಜೆಪಿ ಅಥವಾ ಆರ್‌ಎಸ್‌ಎಸ್ ಅಲ್ಲ. ಇಂದು ಮನಬಂದಂತೆ ಕೀಳುಮಟ್ಟದ ಹೇಳಿಕೆ ನೀಡಿರುವ ಎಂಎಲ್‌ಸಿ ರವಿಕುಮಾರ್ ಅವರೂ ಅಲ್ಲ. ಏಪ್ರಿಲ್ 5 ರ ರಾತ್ರಿ ನಡೆದ ಘಟನೆ ಕುರಿತು ಸ್ವತಃ ಸೈಮನ್ ನೀಡಿರುವ ಹೇಳಿಕೆಯ ಎಫ್‌ಐಆರ್ ಪ್ರತಿಯನ್ನು ಹಿಡಿದು ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಎಫ್‌ಐಆರ್ ಪ್ರತಿಯಲ್ಲೇನಿದೆ?
    ಅಂದು ರಾತ್ರಿ ಛಲವಾದಿಪಾಳ್ಯದ ಮನೆಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕಟ್ ಮಾಡಿದ್ದೆವು. ಊಟಕ್ಕಾಗಿ ಚಾಮರಾಜಪೇಟೆ, ಸಿಟಿ ಮಾರ್ಕೆಟ್ ಎಲ್ಲಾ ಕಡೆ ಸುತ್ತಾಡಿದೆವು. ಎಲ್ಲೂ ಊಟ ಸಿಗಲಿಲ್ಲ. ಹಾಗಾಗಿ ಚಿಕನ್ ರೋಲ್ ತಿನ್ನಲು ಗುರದಹಳ್ಳಿ ಬಸ್ ನಿಲ್ದಾಣಕ್ಕೆ ಬಂದಾಗ ನಮ್ಮ ವಾಹನ ಶಾಹೀದ್ ವಾಹನಕ್ಕೆ ಡಿಕ್ಕಿ ಹೊಡೆಯಿತು.

    ಡಿಕ್ಕಿಯ ಪರಿಣಾಮ ಶಾಹೀದ್ ಮತ್ತು ಚಂದ್ರುವಿನ ನಡುವೆ ಮಾತಿಗೆ ಮಾತು ಬೆಳೆದು ಶಾಹೀದ್ ಚಂದ್ರುವಿನ ತೊಡೆಗೆ ಚುಚ್ಚಿದ. ನನಗೆ ಭಯವಾಗಿ ತಕ್ಷಣ ಅಲ್ಲಿಂದ ಓಡಿ ಹೋದೆ. ಪುನಃ ಬೆಳಗಿನ ಜಾವ 4 ಗಂಟೆಗೆ ವಾಪಸ್ ಬಂದು ನೋಡಿದಾಗ ಚಂದ್ರು ರಕ್ತಸ್ರಾವದಿಂದ ಒದ್ದಾಡುತ್ತಿದ್ದ. ತಕ್ಷಣ ಅವನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದೆ. ಆದರೂ ಆತ ಬದುಕುಳಿಯಲಿಲ್ಲ ಎಂದು ಚಂದ್ರುವಿನ ಗೆಳೆಯ ಸೈಮನ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಕೂಡಾ ಮಾಡಿದ್ದಾರೆ. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕಾರ್ಯವೈಖರಿ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಅಷ್ಟಕ್ಕೂ ಅವರನ್ನು ನೇಮಿಸಿರುವುದು ನಿಮ್ಮ ಬಿಜೆಪಿ ಸರ್ಕಾರವೇ. ಇದೀಗ ನೀವೇ ಅವರ ಮೇಲೆ ಬೆರಳು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು.

    ನೀವು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸಿರುವುದು ನಮಗೇನೂ ಗೊತ್ತಿಲ್ಲ ಎಂದು ಕೊಂಡಿದ್ದೀರಾ ಮಾನ್ಯ ರವಿಕುಮಾರ್ ಅವರೇ? ನೀವು ಬಾಯಿಗೆ ಬಂದಂತೆ ಬಣ್ಣ ಹಚ್ಚಿ ಕಥೆ ಹೇಳಿದರೆ ಸತ್ಯ ಎಂದಿಗೂ ಸುಳ್ಳಾಗದು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದರು.

  • ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಬೆಂಗಳೂರು: ನಾನು ಯಾವುದೇ ಸುಳ್ಳು ಹೇಳಿಲ್ಲ, ನಮ್ಮ ತನಿಖೆ ಪ್ರಕಾರ ಬೈಕ್ ಟಚ್ ಆಗಿದ್ದಕ್ಕೆ ಚಂದ್ರು ಕೊಲೆ ನಡೆದಿದೆ ಎಂದು ಕಮಿಷನರ್ ಕಮಲ್ ಪಂಥ್ ಸ್ಪಷ್ಟನೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಜೆ ನಗರ ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆಯಲ್ಲಿ ಕಂಡುಕೊಂಡ ವಿಚಾರವನ್ನಷ್ಟೇ ಹೇಳಿದ್ದೇನೆ. ನಮ್ಮ ತನಿಖೆಯಲ್ಲಿ ಮೃತ ಚಂದ್ರು ಜೊತೆಗೆ ಘಟನೆ ವೇಳೆ ಇದ್ದ ಸೈಮನ್ ಹೇಳಿಕೆ ನೀಡಿದ್ದಾನೆ ಎಂದು ಮಾಹಿತಿ ನೀಡಿದರು.

    ನಮ್ಮ ತನಿಖೆ ವೇಳೆ ಬೈಕ್ ಟಚ್ ಆಗಿದ್ದರಿಂದಲೇ ಚಾಕುವಿನಿಂದ ಇರಿದಿದ್ದಾಗಿ ಸೈಮನ್ ಹೇಳಿಕೆ ನೀಡಿದ್ದಾನೆ. ಈ ಹಿನ್ನೆಲೆ ತನಿಖೆ ಮಾಡಿದ್ದ ಬಳಿಕ ಕಂಡುಕೊಂಡ ವಿಚಾರದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ  ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದ್ದರು. ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಶೋಕಿ ಲೈಫ್ – ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿ ಪ್ರವಾಸ

  • ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಬೆಂಗಳೂರು: ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿ ಈಗಲೂ ಸತ್ಯವನ್ನೇ ಹೇಳುತ್ತಿದೆ. ಗೃಹ ಸಚಿವರಿಗೆ ಮಾಹಿತಿ ಕೊರತೆ ಇತ್ತು. ಪ್ರಕರಣ ಗಂಭೀರವಾಗುತ್ತದೆ ಎಂಬ ಕಾರಣಕ್ಕೆ ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್‍ಡಿಕೆ

    ಪೊಲೀಸ್ ಆಯುಕ್ತರು ಹೇಳಿದ್ದೇನು..?
    ಬೈಕ್ ತಾಗಿದ ವಿಚಾರದಲ್ಲಿ ಚಂದ್ರು ಹಾಗೂ ಶಾಹಿದ್ ಎಂಬಾತನೊಂದಿಗೆ ಜಗಳ ಏರ್ಪಟ್ಟಿತ್ತು. ಜಗಳ ವಿಕೋಪಕ್ಕೆ ತೆರಳಿ, ಚಂದ್ರುವಿನ ಬಲ ತೊಡೆಗೆ ಶಾಹಿದ್ ಚೂರಿಯಿಂದ ಇರಿದು ಪರಾರಿಯಾಗಿದ್ದ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಟಿಪ್ಪು ಜಯಂತಿ ಮಾಡಿ ಹತ್ತಾರು ಕೊಲೆಗಳಿಗೆ ದಾರಿ ಮಾಡ್ಕೊಟ್ಟಿದ್ದು ಸಿದ್ದರಾಮಯ್ಯ: ಪ್ರತಾಪ್ ಸಿಂಹ

    ಗೃಹಸಚಿವರ ಹೇಳಿಕೆ:
    ಚಂದ್ರು ಕೊಲೆ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಉರ್ದು ಭಾಷೆ ಬಾರದ ಕಾರಣ ಆತನ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಬಳಿಕ ತಮ್ಮ ಮಾತನ್ನು ತಪ್ಪಾಗಿ ಹೇಳಿದ್ದಾಗಿ ತಿಳಿಸಿ, ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂದಿದ್ದರು.

  • ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

    ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

    ಬೆಂಗಳೂರು: ಉರ್ದು ಭಾಷೆ ಬಾರದಕ್ಕೆ ಚಂದ್ರುವನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಕ್ಕೆ ಬೈಕ್ ಡಿಕ್ಕಿ ಹೊಡೆದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.

    ಜೆಜೆ ನಗರ ಪಿಎಸ್ ಕೊಲೆ ಪ್ರಕರಣ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಕಮಲ್ ಪಂತ್ ಅವರು, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5ರ ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಕಾಟನ್‍ಪೇಟೆಯ ಕ್ರಿಶ್ಚಿಯನ್ ಸಮುದಾಯದ ಚಂದ್ರು(22) ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಇವರ ಮತ್ತು ಶಾಹಿದ್ ಓಡಿಸುತ್ತಿದ್ದ ಬೈಕ್‍ಗೆ ಪರಸ್ಪರ ತಗುಲಿದೆ. ಈ ವಿಷಯಕ್ಕೆ ಮೊದಲು ಗಲಾಟೆಗೆ ಪ್ರಾರಂಭವಾಗಿದೆ. ಇದನ್ನೂ ಓದಿ:  ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಆರಗ ಹೇಳಿದ್ದೇನು?
    ಚಂದ್ರು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆರಗ ಜ್ಞಾನೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ್ದು, ಚಂದ್ರು ಹತ್ಯೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಚಂದ್ರುವಿಗೆ ಉರ್ದು ಮಾತಾಡಲು ಬರುತ್ತಿರಲಿಲ್ಲ. ಚಂದ್ರುವಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಅಂತ ಹೇಳಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚಂದ್ರು ಒಬ್ಬ ದಲಿತ ಯುವಕ. ಕೆಲವರ ಬಂಧನ ಆಗಿದೆ. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

  • ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಬೆಂಗಳೂರು: ಹೈಕೋರ್ಟ್ ಹಿಜಬ್‌ಗೆ ಸಂಬಂಧ ಪಟ್ಟಂತೆ ನೀಡಿರುವ ತೀರ್ಪು ಮುಸ್ಲಿಂ ಬಾಂಧವರಿಗೆ ನೋವು ತಂದಿದೆ. ಈ ನೋವನ್ನು ನಾವು ನಾಳೆ ತೋರಿಸಲಿದ್ದೇವೆ. ಮುಸ್ಲಿಂ ಸಂಘಟನೆಗಳು ಗುರುವಾರ ಬಂದ್‌ಗೆ ಕರೆ ಕೊಟ್ಟಿದೆ ಎಂದು ಮುಸ್ಲಿಂ ಮುಖಂಡ ಮೌಲಾನಾ ಮುಸ್ಕೂದ್ ಇಬ್ರಾನ್ ರಶೀದ್ ಹೇಳಿಕೆ ನೀಡಿದ್ದಾರೆ.

    ಕಮಿಷನರ್ ಕಮಲ್ ಪಂತ್ ಜೊತೆ ನಡೆಸಿದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಶೀದ್ ನಾಳೆ ಯಾರು ಕೂಡಾ ಮನೆಯಿಂದ ಆಚೆ ಬರಬಾರದು. ಮೈದಾನಗಳಲ್ಲಿ ಸೇರಬಾರದು. ರ‍್ಯಾಲಿಗಳನ್ನು ನಡೆಸಬಾರದು. ಮುಸ್ಲಿಮ್ ವಿದ್ಯಾರ್ಥಿಗಳು ಶಾಲೆಗೆ ತೆರಳಬಾರದು. ಬದಲಿಗೆ ಮನೆಯಲ್ಲಿಯೇ ಇರಬೇಕು. ಯಾವುದೇ ಪ್ರತಿಭಟನೆ ನಡೆಸದೇ ಶಾಂತಿಯುತವಾಗಿ ನಮ್ಮ ನೋವನ್ನು ತೋರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಅತ್ಯಗತ್ಯವಲ್ಲ ವಾದ ಬೇಸರ ತಂದಿದೆ: ಉಡುಪಿ ಮುಸ್ಲಿಮ್ ಒಕ್ಕೂಟ

    ಈ ವೇಳೆ ಮಾತನಾಡಿದ ಕಮಿಷನರ್ ಕಮಲ್ ಪಂತ್ ಗುರುವಾರ ಮುಸ್ಲಿಂ ಮುಖಂಡರು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಹಿಜಬ್ ಬಗೆಗಿನ ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಇಂದು ನಾವು ಮುಸ್ಲಿಂ ಮುಖಂಡರ ಜೊತೆ ಸಭೆ ಮಾಡಿದ್ದೇವೆ. ಗುರುವಾರ ಹೊರಗಡೆ ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದು ಹಾಗೂ ಕಚೇರಿಗೆ ತೆರಳುವವರನ್ನು ನಾವು ತಡೆಯುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ

    ಬಂದ್ ಅನ್ನು ಶಾಂತಿಯುತವಾಗಿ ನಡೆಸುತ್ತಿರುವುದಾದರೂ ಸಾಕಷ್ಟು ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಟ್‌ನಲ್ಲಿ ಇರುತ್ತಾರೆ. ಕೆಲವೆಡೆ ರೂಟ್ ಮಾರ್ಚ್ ಮಾಡಲಾಗುವುದು. 25 ಕೆಎಸ್‌ಆರ್‌ಪಿ ಹಾಗೂ 35 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕಮಲ್ ಪಂತ್ ತಿಳಿಸಿದರು.

  • ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

    ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ

    night curfew

    ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಎನ್ ಡಿಎಂಎ ಆಕ್ಟ್ ಅಡಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

  • ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್

    ಬೆಂಗಳೂರು : ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಆದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಶೀತ, ಜ್ವರ ಜನರನ್ನು ಕಾಡುತ್ತಿದೆ.

    ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್ ಅವರು, ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ.   ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದಿದ್ದಾರೆ. ಇದನ್ನೂ ಓದಿ:  ಪಾಕ್ ಪ್ರಧಾನಿ ಅಂತರಾಷ್ಟ್ರೀಯ ಭಿಕ್ಷುಕ: ಸಿರಾಜುಲ್ ಹಕ್

    ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು 

  • ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್

    ನಾಳೆಯಿಂದ ಜ.4ರ ವರೆಗೆ ರಾತ್ರಿ 10 ಗಂಟೆಯಿಂದ ಎಲ್ಲಾ ಫ್ಲೈಓವರ್ ಕ್ಲೋಸ್: ಕಮಲ್ ಪಂಥ್

    ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿದ್ರೆ ಎಫ್‌ಐಆರ್ – ಬಳ್ಳಾರಿ ಎಸ್‌ಪಿ ಎಚ್ಚರಿಕೆ

    ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್‍ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್‍ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್‍ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ:  ಬೇಡಿಕೆ ಈಡೇರಿಸುವಂತೆ ಪ್ರತಿಭಟಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಎಲ್ಲಾ ವಿಭಾಗದ ಡಿಸಿಪಿಗಳು ಹಾಜರಿದ್ದರು.

    ಯಾವ್ಯಾವ ಫೈಓವರ್‌ಗಳು ಬಂದ್?
    ಸದ್ಯದ ಮಾಹಿತಿ ಪ್ರಕಾರ ಡಿ.29 ರಿಂದ ಜ.4ರ ವರೆಗೆ ಮಾತ್ರ ಫ್ಲೈಓವರ್ ಬಂದ್‍ಗೆ ಸೂಚನೆ ಇದೆ. ಕೆಆರ್ ಮಾರ್ಕೆಟ್, ಬಸವನಗುಡಿ, ಹೆಣ್ಣೂರು, ತುಮಕೂರು ರೋಡ್, ಆನಂದ್ ಸರ್ಕಲ್, ಡಬ್ಬಲ್ ರೋಡ್, ನಾಯಂಡಹಳ್ಳಿ, ಡೈರಿ ಸರ್ಕಲ್, ಆಗರ, ಸರ್ಜಾಪುರ, ಇಬ್ಬಲೂರು, ದೊಮ್ಮಲೂರು, ಇಂದಿರಾನಗರ 100 ರಸ್ತೆ, ಬೆಳ್ಳಂದೂರು, ಮೈಸೂರು ರಸ್ತೆ, ಯಶವಂತಪುರ ಮೇಲ್ಸೇತುವೆ, ತುಮಕೂರು ರಸ್ತೆ, ಹೆಣ್ಣೂರು ರಸ್ತೆ, ಕಾರ್ಡ್ ರಸ್ತೆ, ಸುಮನಹಳ್ಳಿ ಜಂಕ್ಷನ್, ನಾಯಂಡಹಳ್ಳಿ ಮೇಲ್ಸೇತುವೆ, ರಿಚ್ಮಂಡ್ ರಸ್ತೆ, ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಫೈಓವರ್ ಗಳು ಬಂದ್ ಮಾಡುವ ಸಾಧ್ಯತೆ ಇದೆ.