Tag: kanakadurga

  • ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮನೆಯಿಂದಲೇ ಔಟ್

    ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮನೆಯಿಂದಲೇ ಔಟ್

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಅವರನ್ನು ಕುಟುಂಬ ಸದಸ್ಯರು ಮನೆಯಿಂದಲೇ ಈಗ ಹೊರದಬ್ಬಿದ್ದಾರೆ.

    ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದಾರೆ.

    ಡಿಸೆಂಬರ್ 22 ರಂದು ತಿರುವನಂತಪುರಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತೇನೆ ಎಂದು ಕನಕದುರ್ಗ ಸುಳ್ಳು ಹೇಳಿ ದೇವಾಲಯವನ್ನು ಪ್ರವೇಶಿಸಿದ್ದರು. ಭಕ್ತರ ವಿರೋಧದ ಮಧ್ಯೆ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ಕೋಪಗೊಂಡಿರುವ ಅತ್ತೆ ಮತ್ತು ಮಾವ ಕನಕ ದುರ್ಗ ಅವರಿಗೆ ಮನೆಯ ಪ್ರವೇಶವನ್ನು ನಿರಾಕರಿಸಿ ಹೊರದಬ್ಬಿದ್ದಾರೆ.

    ಅಯ್ಯಪ್ಪ ದೇವಾಲಯದ ಸಂಪ್ರದಾಯವನ್ನು ಮುರಿದಿದ್ದಕ್ಕೆ ಕನಕದುರ್ಗ ಸಾರ್ವಜನಿಕವಾಗಿ ಹಿಂದೂ ಸಮುದಾಯದ ಕ್ಷಮೆ ಕೇಳದ ಹೊರತು ಆಕೆಯನ್ನು ಮನೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

    ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿತ್ತು. ಅಷ್ಟೇ ಅಲ್ಲದೇ ಜೀವಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಕೊಚ್ಚಿ ಬಳಿಯ ಅಜ್ಞಾತ ಸ್ಥಳದಲ್ಲಿ ಇರಿಸಿದ್ದರು.

    ಕೇರಳದ ನಾಯರ್ ಸಮುದಾಯದ 39 ವರ್ಷದ ಕನಕದುರ್ಗ ಅಜ್ಞಾತ ಸ್ಥಳದಿಂದ ಜನವರಿ 15 ರಂದು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಗೆ ಬಂದಕೂಡಲೇ ಅತ್ತೆ ಮತ್ತು ಸೊಸೆ ಪರಸ್ಪರ ಕಿತ್ತಾಟ ನಡೆಸಿದ್ದಾರೆ. ರೊಚ್ಚಿಗೆದ್ದ ಅತ್ತೆ ಕಟ್ಟಿಗೆಯಿಂದ ಕನಕದುರ್ಗ ಮೇಲೆ ಹಲ್ಲೆ ನಡೆಸಿದ್ದು ಅವರನ್ನು ಚಿಕಿತ್ಸೆಗಾಗಿ ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮಣ್ಣ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕ್ಯಾಲಿ ಕಟ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

    ದೇವಾಲಯ ಪ್ರವೇಶಿಸಿ ದೇಶವ್ಯಾಪಿ ಸುದ್ದಿಯಾಗಿದ್ದ ಕನಕದುರ್ಗ ಅವರ ಪತಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಕನಕದುರ್ಗ ಮತ್ತು ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಕುಟುಂಬದ ಸದಸ್ಯರು ಪ್ರತಿಕ್ರಿಯಿಸಿದ್ದರು.

    ಬಿಂದು ಮತ್ತು ಕನಕದುರ್ಗ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಜ.2ರ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ. 44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದು, ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿತ್ತು. ಅಷ್ಟೇ ಅಲ್ಲದೇ ಜೀವಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಕೊಚ್ಚಿ ಬಳಿಯ ಅಜ್ಞಾತ ಸ್ಥಳದಲ್ಲಿ ಇರಿಸಿದ್ದರು.

    ಕೇರಳದ ನಾಯರ್ ಸಮುದಾಯದ 39 ವರ್ಷದ ಕನಕದುರ್ಗ ಅಜ್ಞಾತ ಸ್ಥಳದಿಂದ ಮಂಗಳವಾರ ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಮನೆಗೆ ಬಂದಕೂಡಲೇ ಅತ್ತೆ ಕನಕದುರ್ಗ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದ್ದು ಈಗ ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮನೆಗೆ ಕನಕದುರ್ಗ ಬಂದ ಕೂಡಲೇ ಅತ್ತೆ ಮತ್ತು ಸೊಸೆ ನಡುವೆ ಜಟಾಪಟಿ ನಡೆದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದು, ಅತ್ತೆ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ತನ್ನ ಮೇಲೆ ಸೊಸೆ ಕನಕದುರ್ಗ ಹಲ್ಲೆ ಮಾಡಿದ್ದಾಳೆ ಎಂದು ಅತ್ತೆ ಆರೋಪಿಸಿದ್ದಾರೆ.

    ದೇವಾಲಯ ಪ್ರವೇಶಿಸಿ ದೇಶವ್ಯಾಪಿ ಸುದ್ದಿಯಾಗಿದ್ದ ಕನಕದುರ್ಗ ಅವರ ಪತಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಕನಕದುರ್ಗ ಮತ್ತು ನಮಗೂ ಯಾವುದೇ ಸಂಬಂಧ ಇಲ್ಲ ಎಂದು  ಕುಟುಂಬದ ಸದಸ್ಯರು ಪ್ರತಿಕ್ರಿಯಿಸಿದ್ದರು.

    ಬಿಂದು ಮತ್ತು ಕನಕದುರ್ಗ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಜ.2ರ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

    44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆ ಎಂಟ್ರಿಗೆ ಕೊಡಗಲ್ಲೇ ಸ್ಕೆಚ್- ಲಾಡ್ಜ್‌ನಲ್ಲಿ ಉಳಿದಿದ್ರು ಬಿಂದು, ಕನಕದುರ್ಗ

    ಶಬರಿಮಲೆ ಎಂಟ್ರಿಗೆ ಕೊಡಗಲ್ಲೇ ಸ್ಕೆಚ್- ಲಾಡ್ಜ್‌ನಲ್ಲಿ ಉಳಿದಿದ್ರು ಬಿಂದು, ಕನಕದುರ್ಗ

    – ಮಾಂಸ ತಿಂದು ಅಯ್ಯಪ್ಪನ ದರ್ಶನ ಪಡೆದ್ರಾ..?

    ಮಡಿಕೇರಿ: ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು 8 ಶತಮಾನದ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಮಹಾನ್ ಸಾಧಕಿಯರು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ವೀರಮಣಿಕಂಠನ ಸನ್ನಿಧಿಗೆ ಪ್ರವೇಶಿಸಲು ಸಂಚು ರೂಪಿಸಿರುವ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪ್ರವೇಶಕ್ಕೂ 4 ದಿನಗಳ ಮೊದಲೇ ಅಂದ್ರೆ ಡಿಸೆಂಬರ್ 29ರ ಮಧ್ಯಾಹ್ನ 2 ಗಂಟೆ ವೇಳೆಗೆ ಬಿಂದು ಮತ್ತು ಕನಕದುರ್ಗ ಕೊಡಗಿನ ವಿರಾಜಪೇಟೆಗೆ ಬಂದಿಳಿದಿದ್ದರು. ದೊಡ್ಡೆಟ್ಟಿ ವೃತ್ತದ ಬಳಿಯಿರೋ ಸೀತಾಲಕ್ಷ್ಮೀ ಲಾಡ್ಜ್‍ನಲ್ಲಿ ಬಿಂದು ಹೆಸರಲ್ಲಿ ರೂಂ ಬುಕ್ ಮಾಡಿದ್ರು. ಇವರೊಂದಿಗೆ ಬಂದಿದ್ದ ಪುರುಷ ಇವರನ್ನು ಬಿಟ್ಟು ವಾಪಸ್ ಹೋಗಿದ್ದನು. ಲಾಡ್ಜ್‍ನಲ್ಲಿ ಬಿರಿಯಾನಿ ಅದು ಇದು ಅಂತ ಭರ್ಜರಿ ಮಾಂಸದೂಟ ಮಾಡಿದ್ದ ಈ ಮಹಿಳೆಯರು ಯಾವುದೇ ವೃತ ಪಾಲಿಸಿರಲಿಲ್ಲ. 2 ದಿನ ಅಲ್ಲೇ ಉಳಿದುಕೊಂಡಿದ್ದ ಇವರು ಡಿಸೆಂಬರ್ 31ರಂದು ರೂಂ ಖಾಲಿ ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಅಂತ ಲಾಡ್ಜ್ ಮಾಲೀಕ ಹರಿಹರನ್ ತಿಳಿಸಿದ್ದಾರೆ.

    ಬಿಂದು ಮತ್ತು ಕನಕದುರ್ಗ ಅಲ್ಲಿಂದ ನೇರವಾಗಿ ಅಯ್ಯಪ್ಪನ ಸನ್ನಿಧಿಗೆ ಹೊರಟಿದ್ರು. ಕುಟುಂಬದ ಜೊತೆ ಸಂಪರ್ಕದಲ್ಲಿರದೇ ಅಜ್ಞಾತವಾಗಿದ್ದ ಇವರು ಜನವರಿ 2ರಂದು ನಸುಕಿನಲ್ಲಿ ದೇವಾಲಯ ಪ್ರವೇಶಿಸಿದ್ರು. ಶತಶತಮಾನಗಳಿಂದ ವೀರಮಣಿಕಂಠನ ಸನ್ನಿಧಿಯಲ್ಲಿ ನಡೆದುಕೊಂಡು ಬಂದಿದ್ದ ಸಂಪ್ರದಾಯವನ್ನು ಮೀರಿ ದೇಶಾದ್ಯಂತ ಸುದ್ದಿಯಾದ್ರು. ಇದನ್ನೂ ಓದಿ:  ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!


    ಈ ಮಹಿಳೆಯರಿಗೆ ನಿಜವಾಗಿಯೂ ಅಯ್ಯಪ್ಪನ ಮೇಲೆ ಭಕ್ತಿ ಇದ್ದಿದ್ದರೆ, ವ್ರತ ಪಾಲಿಸಿ ದರ್ಶನಕ್ಕೆ ತೆರಳಬಹುದಿತ್ತು. ಆದ್ರೆ ಇವರು ಮಾಂಸದೂಟ ಸೇವಿಸಿ, ಯಾವ ವ್ರತವನ್ನೂ ಪಾಲಿಸದೇ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇವರಿಗೆ ಲಾಡ್ಜ್‍ನಲ್ಲಿ ಪೊಲೀಸರೇ ರೂಂ ಬುಕ್ ಮಾಡಿದ್ದು, ಎಲ್ಲವೂ ಕೇರಳ ಸರ್ಕಾರವೇ ಮಾಡಿಸಿತಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಇದ್ರಿಂದಾಗಿ ದೇವರ ನಾಡು ಮತ್ತಷ್ಟು ಧಗಧಗಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಬ್ಬರು ಮಹಿಳೆಯರ ಪ್ರವೇಶ: ಶಬರಿಮಲೆ ಅಯ್ಯಪ್ಪ ದೇವಾಲಯ ಬಂದ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv