ಕಾಬೂಲ್: ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿ 16 ಜನ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾರದ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸಿದವರನ್ನು ಗುರಿಯಾಗಿಸಿ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ಮಸೀದಿಯಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಉಳಿದಂತೆ ಕೆಲ ಜನ ಪ್ರಾರ್ಥನೆಗೆ ಬರಲು ಸಿದ್ಧರಾಗುತ್ತಿದ್ದರು ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಇದನ್ನೂ ಓದಿ: ಬೇಯಿಸಿದ ಮೊಟ್ಟೆಯಿಂದ ಪ್ರಾಣ ಬಿಟ್ಟ ಮಹಿಳೆ

ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಸ್ಥಳದಲ್ಲಿ 15ಕ್ಕೂ ಹೆಚ್ಚು ಅಂಬುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಮಸೀದಿಯಲ್ಲಿ ರಕ್ತದ ಮಡುವಿನಲ್ಲಿ ನೂರಾರು ಹೆಣಗಳ ರಾಶಿ ಕಂಡುಬರುತ್ತಿದೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್ ಸ್ಟ್ರೈಕ್? – ಪಾಕಿಸ್ತಾನಕ್ಕೆ ಅಮಿತ್ ಶಾ ಎಚ್ಚರಿಕೆ
ದಾಳಿಯ ಬಗ್ಗೆ ಮಾತನಾಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್, ನಮ್ಮ ಶಿಯಾ ಪಂಗಡದ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಹಲವಾರು ಮಂದಿ ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದಿದ್ದಾರೆ.
According to initial reports, 7 people were killed and 13 others were injured. #kandahar #afghanistan pic.twitter.com/OFzRpH0Rwo
— Hafiz Avais (@awvais) October 15, 2021
ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಸಂಘಟನೆ ಒಪ್ಪದೇ ಇದ್ದರೂ ತಾಲಿಬಾನ್‍ನ ವಿರೋಧಿ ಬಣವಾಗಿ ಗುರುತಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.



