Tag: Kane Williamson

  • ಆಫ್ರಿಕಾ ವಿರುದ್ಧ 50 ರನ್‌ಗಳ ಭರ್ಜರಿ ಜಯ – ಭಾನುವಾರ ನ್ಯೂಜಿಲೆಂಡ್‌ Vs ಭಾರತ ಫೈನಲ್‌

    ಆಫ್ರಿಕಾ ವಿರುದ್ಧ 50 ರನ್‌ಗಳ ಭರ್ಜರಿ ಜಯ – ಭಾನುವಾರ ನ್ಯೂಜಿಲೆಂಡ್‌ Vs ಭಾರತ ಫೈನಲ್‌

    ಲಾಹೋರ್‌ : ರಚಿನ್‌ ರವೀಂದ್ರ (Rachin Ravindra) ಮತ್ತು ಕೇನ್‌ ವಿಲಿಯಮ್ಸನ್‌ (Kane Williamson) ಅವರ ಶತಕದಿಂದ ನೆರವಿನಿಂದ ದಕ್ಷಿಣ ಆಫ್ರಿಕಾ (South Africa) ವಿರುದ್ಧ ನ್ಯೂಜಿಲೆಂಡ್‌ (New Zealand ) 50 ರನ್‌ಗಳಿಂದ ಜಯಗಳಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (ICC Champions Trophy) ಪ್ರವೇಶಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 362 ರನ್‌ ಹೊಡೆಯಿತು. ಕಠಿಣ ಗುರಿಯನ್ನು ಪಡೆದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 312 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು.


    ಆಫ್ರಿಕಾ ಪರ ಡೇವಿಡ್‌ ಮಿಲ್ಲರ್‌ ಕೊನೆಯವರೆಗೂ ಇದ್ದು ಹೋರಾಡಿದ್ದರಿಂದ ತಂಡ 300 ರನ್‌ಗಳ ಗಡಿಯನ್ನು ದಾಟಿತ್ತು. ಮಿಲ್ಲರ್‌ ಅಜೇಯ 100 ರನ್‌ (67 ಎಸೆತ, 10 ಬೌಂಡರಿ, 4 ಸಿಕ್ಸ್‌) ಸಿಡಿಸಿದರು. ಇಂದಿನ ಪಂದ್ಯ ಗೆದ್ದಿರುವ ನ್ಯೂಜಿಲೆಂಡ್‌ ಭಾನುವಾರ ದುಬೈನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಭಾರತ (Team India) ತಂಡವನ್ನು ಎದುರಿಸಲಿದೆ.

    ದಕ್ಷಿಣ ಆಫ್ರಿಕಾ 1 ವಿಕೆಟ್‌ ನಷ್ಟಕ್ಕೆ 125 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ನಂತರ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ನಾಯಕ ಟೆಂಬಾ ಬವುಮಾ 56 ರನ್‌(71 ಎಸೆತ, 4 ಬೌಂಡರಿ, 1 ಸಿಕ್ಸರ್‌), ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 69 ರನ್‌(66 ಎಸೆತ, 4 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಸ್ವಲ್ಪ ಪ್ರತಿರೋಧ ತೋರಿದರು.

    ಮಿಚೆಲ್ ಸ್ಯಾಂಟ್ನರ್ 3 ವಿಕೆಟ್‌ ಪಡೆದರೆ, ಗ್ಲೇನ್ಸ್‌ ಫಿಲಿಪ್ಸ್‌ ಮತ್ತು ಮ್ಯಾಟ್‌ ಹೆನ್ರಿ ತಲಾ ಎರಡು ವಿಕೆಟ್‌ ಪಡೆದರು.

    ಮೊದಲು ಬ್ಯಾಟ್‌ ಮಾಡಿದ ರಚಿನ್‌ ರವೀಂದ್ರ 108 ರನ್‌(101 ಎಸೆತ, 13 ಬೌಂಡರಿ, 1 ಸಿಕ್ಸ್‌) ಕೇನ್‌ ವಿಲಿಯಮ್ಸನ್‌ 102 ರನ್‌(94 ಎಸೆತ, 10 ಬೌಂಡರಿ, 2 ಸಿಕ್ಸ್‌), ಗ್ಲೇನ್‌ ಫಿಲಿಪ್ಸ್‌ 49 ರನ್‌(27 ಎಸೆತ, 6 ಬೌಂಡರಿ, 1 ಬೌಂಡರಿ) ಹೊಡೆದು ಔಟಾದರು. ಎರಡನೇ ವಿಕೆಟಿಗೆ ರಚಿನ್‌ ಮತ್ತು ವಿಲಿಯಮ್ಸನ್‌ 154 ಎಸೆತಗಳಲ್ಲಿ 164 ರನ್‌ ಜೊತೆಯಾಟವಾಡಿದರು.

  • ‌World Cup Semifinal: 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ಮೈಲುಗಲ್ಲು‌ ಸ್ಥಾಪಿಸಿದ ಶಮಿ.!

    ‌World Cup Semifinal: 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ಮೈಲುಗಲ್ಲು‌ ಸ್ಥಾಪಿಸಿದ ಶಮಿ.!

    ಮುಂಬೈ: ಏಕದಿನ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಮೊಹಮ್ಮದ್‌ ಶಮಿ (Mohammed Shami) 50 ವಿಕೆಟ್‌ ಪಡೆದ ಭಾರತದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶಮಿ 32.2 ಓವರ್‌ನಲ್ಲಿ ಕೇನ್‌ ವಿಲಿಯಮ್ಸನ್‌ (Kane Williamson) ಅವರನ್ನು ಔಟ್‌ ಮಾಡುವ ಮೂಲಕ ಈ ಮಹತ್ವದ ಮೈಲುಗಲ್ಲು ಸ್ಥಾಪಿಸಿದರು.

    ಕೇವಲ 17 ಇನ್ನಿಂಗ್ಸ್‌ಗಳಲ್ಲೇ ಶಮಿ ಈ ಸಾಧನೆ ಮಾಡಿರುವುದು ವಿಶೇಷ. ಆಸ್ಟ್ರೇಲಿಯಾದ ಮೆಚೆಲ್‌ ಸ್ಟಾರ್ಕ್‌ 19 ಇನ್ನಿಂಗ್ಸ್‌ಗಲ್ಲಿ 50 ವಿಕೆಟ್‌ ಪಡೆದ ಸಾಧನೆ ಮಾಡಿದ್ದರು.

    ಅದಕ್ಕಿಂತಲೂ ಮುಖ್ಯವಾಗಿ 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ (World Cup History) ಅತಿಹೆಚ್ಚು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾದ ಮಿಚೆಲ್‌ ಸ್ಟಾರ್ಕ್‌ 3 ಬಾರಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶಮಿ 18 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದಿದ್ದರು.

    ಇದಕ್ಕೂ ಮುನ್ನ ಧರ್ಮಶಾಲಾ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ (New Zealand) ವಿರುದ್ಧದ ಪಂದ್ಯದಲ್ಲಿ 54 ರನ್‌ ಕೊಟ್ಟು 5 ವಿಕೆಟ್‌ ಕಿತ್ತಿದ್ದರು. ಇಂದು ಕಿವೀಸ್‌ ವಿರುದ್ಧ 5 ವಿಕೆಟ್‌ ಕಿತ್ತು ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರವೀಂದ್ರ ಜಡೇಜಾ 33 ರನ್‌ ಬಿಟ್ಟುಕೊಟ್ಟು, ಶಾಹೀನ್‌ ಶಾ ಅಫ್ರಿದಿ ಆಸ್ಟ್ರೇಲಿಯಾ ವಿರುದ್ಧ 54 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದಿದ್ದು ಇದೇ ಟೂರ್ನಿಯಲ್ಲಿ ಎಂಬಿದನ್ನು ಮರೆಯುವಂತಿಲ್ಲ. ಇದನ್ನೂ ಓದಿ: ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಈ ಸಾಧನೆಯೊಂದಿಗೆ ಮೊಹಮ್ಮದ್‌ ಶಮಿ ವಿಶ್ವಕಪ್ ಪಂದ್ಯಾವಳಿಗಳಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ಸ್‌ಗಳ ಎಲೈಟ್‌ ಪಟ್ಟಿ ಸೇರಿದ್ದು, ಟಾಪ್‌-10 ಪಟ್ಟಿಯಲ್ಲಿ 6ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಗ್ಲೇನ್‌ ಮೆಕ್‌ಗ್ರಾತ್‌ 71 ವಿಕೆಟ್, ಮುತ್ತಯ್ಯ ಮುರಳೀಧರನ್ 68 ವಿಕೆಟ್, ಮಿಚೆಲ್ ಸ್ಟಾರ್ಕ್ 59 ವಿಕೆಟ್, ಲಸಿತ್ ಮಾಲಿಂಗ 56 ವಿಕೆಟ್, ವಾಸಿಂ ಅಕ್ರಮ್ 55 ವಿಕೆಟ್ ಪಡೆದಿದು ಕ್ರಮವಾಗಿ ಮೊದಲ 5 ಸ್ಥಾನಗಳಲ್ಲಿದ್ದರೆ 54 ವಿಕೆಟ್‌ ಪಡೆದ ಶಮಿ ವಿಶ್ವದ ಟಾಪ್‌ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದಾರೆ. ಕೇವಲ 17 ಪಂದ್ಯ 17 ಇನ್ನಿಂಗ್ಸ್‌ಗಳಲ್ಲೇ ಶಮಿ ಈ ಸಾಧನೆ ಮಾಡಿರುವುದು ವಿಶೇಷ. ಇದನ್ನೂ ಓದಿ: ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

  • ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

    ಮುಂಬೈ: ಮೊಹಮ್ಮದ್‌ ಶಮಿ (Mohammed Shami) ಬೆಂಕಿ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ (Team India) ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಬಾರಿಗೆ ಫೈನಲ್‌ (World Cup Final) ಪ್ರವೇಶಿಸಿದೆ. ಅಷ್ಟೇ ಅಲ್ಲದೇ 2019ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 4 ವಿಕೆಟ್‌ ನಷ್ಟಕ್ಕೆ 50 ಓವರ್‌ಗಳಲ್ಲಿ 397 ರನ್‌ ಕಲೆಹಾಕಿತ್ತು. 398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ 48.5 ಓವರ್‌ಗಳಲ್ಲೇ 327 ರನ್‌ ಗಳಿಗೆ ಸರ್ವಪತನ ಕಂಡಿತು. ಇದರಿಂದ ಟೀಂ ಇಂಡಿಯಾ ಸತತ 10ನೇ ಜಯದೊಂದಿಗೆ ಫೈನಲ್‌ ಪ್ರವೇಶಿಸಿತು. ಇದನ್ನೂ ಓದಿ: ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

    ಕಿವೀಸ್‌ ಗೆಲುವಿಗೆ ಕೊನೆಯ 10 ಓವರ್‌ಗಳಲ್ಲಿ 132 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ಗೆ ಬಂದ ಮೊಹಮ್ಮದ್‌ ಸಿರಾಜ್‌ 41ನೇ ಓವರ್‌ನಲ್ಲಿ 20 ರನ್‌ ಬಿಟ್ಟುಕೊಟ್ಟರು. ಆದ್ರೆ 42ನೇ ಓವರ್‌ನಲ್ಲಿ ಕುಲ್ದೀಪ್‌ ಯಾದವ್‌ ಕೇವಲ 2 ರನ್‌ ನೀಡಿ ನಿಯಂತ್ರಣಕ್ಕೆ ತಂದರು. 43ನೇ ಓವರ್‌ನಲ್ಲಿ 7 ರನ್‌ ಬಿಟ್ಟುಕೊಟ್ಟರೂ ಗ್ಲೇನ್‌ ಫಿಲಿಪ್ಸ್‌ ಅವರ ಪ್ರಮುಖ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು. 44ನೇ ಓವರ್‌ನಲ್ಲಿ ತನ್ನ ಕೊನೆಯ ಓವರ್‌ ಎಸೆದ ಕುಲ್ದೀಪ್‌ ಒಂದು ವಿಕೆಟ್‌ ಕಬಳಿಸುವ ಜೊತೆಗೆ 4 ರನ್‌ ಬಿಟ್ಟುಕೊಟ್ಟರು. 45ನೇ ಓವರ್‌ನಲ್ಲಿ ಮತ್ತೆ ಬುಮ್ರಾ 7 ರನ್‌ ಬಿಟ್ಟುಕೊಟ್ಟರು. ಇನ್ನೂ 5 ಓವರ್‌ಗಳಲ್ಲಿ 92 ರನ್‌ ಬೇಕಿತ್ತು. ಅಷ್ಟರಲ್ಲೇ ಸಿಕ್ಸರ್‌ ಸಿಡಿಸುವ ಪ್ರಯತ್ನಕ್ಕೆ ಮುಂದಾದ ಮಿಚೆಲ್‌ ಶಮಿ ಬೌಲಿಂಗ್‌ನಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ಔಟಾದರು. ಇದರೊಂದಿಗೆ ಕಿವೀಸ್‌ ಗೆಲುವಿನ ಕನಸು ಸಹ ಭಗ್ನಗೊಂಡಿತು. ಇನ್ನುಳಿದಂತೆ ಕೊನೆಯ ಕೊನೆಯ 4 ಓವರ್‌ಗಳಲ್ಲಿ ಕ್ರಮವಾಗಿ 2, 5,7,7 ಸೇರ್ಪಡೆಯಾಯಿತು.

    398 ರನ್‌ಗಳ ಗುರಿ ಬೆನ್ನತ್ತಿದ್ದ ಕಿವೀಸ್‌ ಪಡೆ ಸ್ಫೋಟಕ ಇನ್ನಿಂಗ್ಸ್‌ಗೆ ಮುಂದಾಗಿತ್ತು. ಆದ್ರೆ 30 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡ ಕಿವೀಸ್‌, ಮುಂದಿನ 9 ರನ್‌ಗಳ ಅಂತರದಲ್ಲೇ ಮತ್ತೊಂದು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ಡೇರಿಲ್‌ ಮಿಚೆಲ್‌ ಜೋಡಿ ಭರ್ಜರಿ ಜೊತೆಯಾಟ ನೀಡಿತ್ತು. 3ನೇ ವಿಕೆಟ್‌ಗೆ ಈ ಜೋಡಿ 149 ಎಸೆತಗಳಲ್ಲಿ 181 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ಕೊನೆಯ 18.2 ಓವರ್‌ಗಳಲ್ಲಿ 184 ರನ್‌ಗಳ ಅಗತ್ಯವಿತ್ತು. ಅಷ್ಟರಲ್ಲಿ ತಮ್ಮ ಮಾರಕ ದಾಳಿ ಪ್ರದರ್ಶಿಸಿದ ಮೊಹಮ್ಮದ್‌ ಶಮಿ ವಿಲಿಯಮ್ಸನ್‌ ಆಟಕ್ಕೆ ಬ್ರೇಕ್‌ ಹಾಕಿದರು. ವಿಲಿಮ್ಸನ್‌ ಔಟಾದ ಬೆನ್ನಲ್ಲೇ ಟಾಮ್‌ ಲಾಥಮ್‌ 2 ಎಸೆತಗಳಲ್ಲೇ ಡಗೌಟ್‌ ಆದರು.

    ಕೊನೆಯವರೆಗೂ ಏಕಾಂಗಿಯಾಗಿ ಹೋರಾಡಿದ ಡೇರಿಲ್‌ ಮಿಚೆಲ್‌ 119 ಎಸೆತಗಳಲ್ಲಿ 134 ರನ್‌ (7 ಸಿಕ್ಸರ್‌, 9 ಬೌಂಡರಿ) ಚಚ್ಚಿ ಔಟಾದರು. ಡೆವೋನ್‌ ಕಾನ್ವೆ 13 ರನ್‌, ರಚಿನ್‌ ರವೀಂದ್ರ 13 ರನ್‌, ಕೇನ್‌ ವಿಲಿಯಮ್ಸನ್‌ 69 ರನ್‌ (73 ಎಸೆತ, 8 ಬೌಂಡರಿ, 1 ಸಿಕ್ಸರ್)‌, ಗ್ಲೇನ್‌ ಫಿಲಿಪ್ಸ್‌ 33 ಎಸೆತಗಳಲ್ಲಿ 41 ರನ್‌ (2 ಸಿಕ್ಸರ್‌, 4 ಬೌಂಡರಿ), ಮಾರ್ಕ್‌ ಚಾಪ್ಮನ್‌ 2 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಟಿಮ್‌ ಸೌಥಿ 9 ರನ್‌, ಟ್ರೆಂಟ್‌ ಬೌಲ್ಟ್‌ 2 ರನ್‌, ಲಾಕಿ ಫರ್ಗೂಸನ್‌ 6 ರನ್‌ ಗಳಿಸಿದರು. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

    ಶಮಿ ಶೈನ್:‌ ಟೀಂ ಇಂಡಿಯಾ ಪರ ಸಾಮರ್ಥ್ಯ ಪ್ರದರ್ಶಿಸಿದ ಮೊಹಮ್ಮದ್‌ ಶಮಿ 9.5 ಓವರ್‌ಗಳಲ್ಲಿ 57 ರನ್‌ ಬಿಟ್ಟು ಕೊಟ್ಟು 7 ವಿಕೆಟ್‌ ಪಡೆದರು. ಈ ಮೂಲಕ 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲೇ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಖ್ಯಾತಿಗೂ ಪಾತ್ರರಾದರು. ಇನ್ನುಳಿದಂತೆ ಬುಮ್ರಾ, ಸಿರಾಜ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 50 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟ ನೀಡಿತು. ರೋಹಿತ್‌ ಶರ್ಮಾ ಔಟಾಗುತ್ತಿದ್ದಂತೆ 2ನೇ ವಿಕೆಟ್‌ಗೆ 93 ರನ್‌ಗಳ ಜೊತೆಯಾಟ ನೀಡಿದ್ದರು. ಆದ್ರೆ ಕಾಲುನೋವಿನಿಂದಾಗಿ ಶುಭಮನ್‌ ಗಿನ್‌ ಅರ್ಧಕ್ಕೆ ಕ್ರೀಸ್‌ನಿಂದ ಹೊರನಡೆದರು. ಈ ನಡುವೆ ಕಿವೀಸ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ವಿರಾಟ್‌ ಕೊಹ್ಲಿ ಮತ್ತು ಶ್ರೇಯಸ್‌ ಅಯ್ಯರ್‌ ಜೋಡಿ 128 ಎಸೆತಗಳಲ್ಲಿ 163 ರನ್‌ ಕಲೆಹಾಕಿತು. ಕೊಹ್ಲಿ ಶತಕ ಸಿಡಿಸಿ ಔಟಾದ ಬಳಿಕ ಕ್ರೀಸ್‌ಗಿಳಿಯುತ್ತಿದ್ದಂತೆ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದ ಕೆ.ಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಜೊತೆಗೂಡಿ 29 ಎಸೆತಗಳಲ್ಲೇ 54 ರನ್‌ಗಳ ಜೊತೆಯಾಟ ನೀಡಿದರು. ಇದರಿಂದಾಗಿ ತಂಡದ ಮೊತ್ತ 400 ರನ್‌ಗಳ ಗಡಿ ಸಮೀಪಿಸುವಲ್ಲಿ ಯಶಸ್ವಿಯಾಯಿತು.

    ರೋಹಿತ್‌ ಶರ್ಮಾ 47 ರನ್‌ (40 ಎಸೆತ, 4 ಸಿಕ್ಸರ್‌, 4 ಬೌಂಡರಿ), ಶುಭಮನ್‌ ಗಿಲ್‌ 80 ರನ್‌ (66 ಎಸೆತ, 3 ಸಿಕ್ಸರ್‌, 8 ಬೌಂಡರಿ), ವಿರಾಟ್‌ ಕೊಹ್ಲಿ 117 ರನ್‌ (113 ಎಸೆತ, 9 ಬೌಂಡರಿ, 2 ಸಿಕ್ಸರ್)‌, ಶ್ರೇಯಸ್‌ ಅಯ್ಯರ್‌ 105 ರನ್‌ (70 ಎಸೆತ, 8 ಸಿಕ್ಸರ್‌, 4 ಬೌಂಡರಿ), ಕೆ.ಎಲ್‌ ರಾಹುಲ್‌ 39 ರನ್‌ (20 ಎಸೆತ, 5 ಬೌಂಡರಿ, 2 ಸಿಕ್ಸರ್)‌, ಸೂರ್ಯಕುಮಾರ್‌ ಯಾದವ್‌ 1 ರನ್‌ ಗಳಿಸಿದರು.

    ಕಿವೀಸ್‌ ಪರ ಟಿಮ್‌ ಸೌಥಿ 10 ಓವರ್‌ಗಳಲ್ಲಿ 100 ರನ್‌ ಚಚ್ಚಿಸಿಕೊಂಡು 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೌಲ್ಟ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • India Vs New Zealand – ಕೊಹ್ಲಿ, ಕೇನ್‌ ವಿಲಿಯಮ್ಸನ್‌ ವಿಶೇಷ ಸಾಧನೆ

    India Vs New Zealand – ಕೊಹ್ಲಿ, ಕೇನ್‌ ವಿಲಿಯಮ್ಸನ್‌ ವಿಶೇಷ ಸಾಧನೆ

    ಮುಂಬೈ: ವಿಶ್ವಕಪ್‌ ಕ್ರಿಕೆಟ್‌ (World Cup Cricket) ಮೊದಲ ಸೆಮಿಫೈನಲ್‌ (Semi Final) ಇಂದು ನಡೆಯಲಿದ್ದು ಟೀಂ ಇಂಡಿಯಾದ (Team India) ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಮತ್ತು ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ (Kane Williamson) ವಿಶೇಷ ಸಾಧನೆ ಮಾಡಲಿದ್ದಾರೆ.

    ಇವರಿಬ್ಬರು ಸತತ 4 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯಗಳನ್ನು ಆಡುತ್ತಿರುವುದು ವಿಶೇಷ. 2011, 2015, 2019ರಲ್ಲಿ ಆಡಿದ್ದ ಇವರು 2023ರ ಸೆಮಿಫೈನಲ್‌ ಪಂದ್ಯದಲ್ಲೂ ಆಡುತ್ತಿದ್ದಾರೆ. ಇದನ್ನೂ ಓದಿ: ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ?

     

    2019ರ ವಿಶ್ವಕಪ್‌ ವೇಳೆ ಟೀಂ ಇಂಡಿಯಾವನ್ನು ವಿರಾಟ್‌ ಕೊಹ್ಲಿ ಮುನ್ನಡೆಸಿದ್ದರು.  ಸೆಮಿ ಫೈನಲ್‌ ಪಂದ್ಯದಲ್ಲಿ ನಾಯಕರಾಗಿದ್ದ ಕೇನ್‌ ವಿಲಿಯಮ್ಸನ್‌ 67 ರನ್‌(95 ಎಸೆತ, 6 ಬೌಂಡರಿ) ಹೊಡೆದಿದ್ದರೆ ವಿರಾಟ್‌ ಕೊಹ್ಲಿ 1 ರನ್‌ ಗಳಿಸಿ ಔಟಾಗಿದ್ದರು.

    ವಿರಾಟ್‌ ಕೊಹ್ಲಿ 594 ರನ್‌ ಹೊಡೆಯುವ ಮೂಲಕ  2023ರ ವಿಶ್ವಕ್‌  ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಹೊಡೆದ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. ಕೇನ್‌ ವಿಲಿಯಮ್ಸನ್‌ 187  ರನ್‌ ಹೊಡೆದಿದ್ದಾರೆ.  2011 ಸೆಮಿಫೈನಲ್‌ನಲ್ಲಿ  ಶ್ರೀಲಂಕಾ ವಿರುದ್ಧ  ನ್ಯೂಜಿಲೆಂಡ್‌ ಸೋತಿತ್ತು.   2015 ಮತ್ತು 2019ರ ಫೈನಲಿನಲ್ಲಿ ಕ್ರಮವಾಗಿ ಆಸ್ತ್ರೇಲಿಯಾ ಮತ್ತು ಇಂಗ್ಲೆಂಡ್‌ ವಿರುದ್ಧ  ಸೋತಿತ್ತು.

    2011ರ ವಿಶ್ವಕಪ್‌ ಫೈನಲಿನಲ್ಲಿ  ಶ್ರೀಲಂಕಾ ವಿರುದ್ಧ ಭಾರತ ಜಯಗಳಿಸಿತ್ತು. 2015 ಮತ್ತು 2019 ವಿಶ್ವಕಪ್‌ ಸೆಮಿಫೈನಲಿನಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ವಿರುದ್ಧ ಭಾರತ ಸೋತಿತ್ತು.

  • World Cup 2023: ಲಂಕಾ ವಿರುದ್ಧ ಕಿವೀಸ್‌ಗೆ 5 ವಿಕೆಟ್‌ಗಳ ಜಯ – ಪಾಕ್‌ ಮುಂದಿದೆ ಅಸಾಧ್ಯ ಸವಾಲು

    World Cup 2023: ಲಂಕಾ ವಿರುದ್ಧ ಕಿವೀಸ್‌ಗೆ 5 ವಿಕೆಟ್‌ಗಳ ಜಯ – ಪಾಕ್‌ ಮುಂದಿದೆ ಅಸಾಧ್ಯ ಸವಾಲು

    ಬೆಂಗಳೂರು: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದಿಂದ ನ್ಯೂಜಿಲೆಂಡ್‌ (New Zealand) ತಂಡವು ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ, ಸೆಮಿಫೈನಲ್‌ ಹಾದಿಯನ್ನು ಸುಲಭವಾಗಿಸಿಕೊಂಡಿದೆ. ಆದ್ರೆ ಪಾಕಿಸ್ತಾನ (Pakistan) ತಂಡಕ್ಕೆ ಇದು ನುಂಗಲಾರದ ತುತ್ತಾಗಿದೆ.

    ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ 275+ ರನ್‌ಗಳ ಅಂತರದಿಂದ ಇಂಗ್ಲೆಂಡ್‌ (England) ತಂಡವನ್ನು ಸೋಲಿಸಬೇಕಿದೆ. ಅಥವಾ 2.3 ಓವರ್‌ಗಳಲ್ಲಿ ಇಂಗ್ಲೆಂಡ್‌ ಟಾರ್ಗೆಟ್‌ ಅನ್ನು ಚೇಸ್‌ ಮಾಡಬೇಕಿದೆ ಎಂದು ಕ್ರಿಕೆಟ್‌ ತಜ್ಞರು ಅಂದಾಜಿಸಿದ್ದಾರೆ. ಆದ್ರೆ ಇಂಗ್ಲೆಂಡ್‌ ತಂಡವನ್ನು ಅಷ್ಟು ಸುಲಭದಲ್ಲಿ ಸೋಲಿಸುವುದು ಪಾಕ್‌ಗೆ ಅಸಾಧ್ಯವಾಗಿದ್ದು, ಬಹುತೇಕ ಸೆಮಿ ಫೈನಲ್‌ ಕನಸು ಭಗ್ನ ಎಂದೇ ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಮುಡಿಗೆ 7 ವಿಶ್ವಕಪ್ ಏರಿಸಿದ್ದ ನಾಯಕಿ ಮೆಗ್ ಲ್ಯಾನಿಂಗ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ

    ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಕಿವೀಸ್‌, ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಶ್ರೀಲಂಕಾಗೆ (Sri Lanka) ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 171 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗುರಿ ಬೆನ್ನತ್ತಿದ್ದ ಕಿವೀಸ್‌ 23.2 ಓವರ್‌ಗಳಲ್ಲೇ 172 ರನ್‌ ಗಳಿಸಿ ಸೆಮಿಫೈನಲ್‌ ಹಾದಿಯನ್ನು ಸುಲಭವಾಗಿಸಿಕೊಂಡಿತು. ಇನ್ನೂ 2023ರ ಏಕದಿನ ವಿಶ್ವಕಪ್‌ ಆವೃತ್ತಿಯಲ್ಲಿ ಕೊನೆಯ ಲೀಗ್‌ ಪಂದ್ಯವನ್ನಾಡಿದ ಶ್ರೀಲಂಕಾ ಸೋಲಿನೊಂದಿಗೆ ವಿದಾಯ ಹೇಳಿತು. ಇದನ್ನೂ ಓದಿ: ಕ್ರಿಕೆಟ್‌ ಆಡಬೇಕಂದ್ರೆ ಕೀಳು ಮನಸ್ಥಿತಿಯಿಂದ ಹೊರಬನ್ನಿ – ಶಕೀಬ್‌ ವಿರುದ್ಧ ಮಾಥ್ಯೂಸ್ ಕೆಂಡ

    ಕಿವೀಸ್‌ ಪರ ಕಣಕ್ಕಿಳಿದ ರಚಿನ್‌ ರವೀಂದ್ರ (Rachin Ravindra) ಹಾಗೂ ಡಿವೋನ್‌ ಕಾನ್ವೆ ಜೋಡಿ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದರು. ಮೊದಲ ವಿಕೆಟ್‌ಗೆ 12.2 ಓವರ್‌ಗಳಲ್ಲೇ ಈ ಜೋಡಿ 86 ರನ್‌ ಸಿಡಿಸಿತ್ತು. ಕಾನ್ವೆ 45 ರನ್‌ (42 ಎಸೆತ, 9 ಬೌಂಡರಿ), ರವೀಂದ್ರ 42 ರನ್‌ (34 ಎಸೆತ, 3 ಬೌಂಡರಿ, 3 ಸಿಕ್ಸರ್)‌ ಬಾರಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಡೇರಿಲ್‌ ಮಿಚೆಲ್‌ 43 ರನ್‌ (31 ಎಸೆತ, 5 ಬೌಂಡರಿ, 2 ಸಿಕ್ಸರ್), ಕೇನ್‌ ವಿಲಿಯಮ್ಸನ್‌ (Kane Williamson) 14 ರನ್‌,‌ ಮಾರ್ಕ್‌ ಚಾಪ್ಮನ್‌ 7 ರನ್‌ಗಳ ಕೊಡುಗೆ ನೀಡಿ ಔಟಾದರೆ, ಗ್ಲೇನ್‌ ಫಿಲಿಪ್ಸ್‌ 17 ರನ್‌, ಟಾಮ್‌ ಲ್ಯಾಥಮ್‌ 2 ರನ್‌ ಗಳಿಸಿ ಅಜೇಯರಾಗುಳಿದರು. ಲಂಕಾ ಪರ ಏಂಜಲೋ ಮ್ಯಾಥ್ಯೂಸ್‌ 2 ವಿಕೆಟ್‌ ಕಿತ್ತರೆ, ಮಹೀಶ್‌ ತೀಕ್ಷಣ ಮತ್ತು ದುಶ್ಮಂತ ಸಮೀರ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಬ್ಯಾಟಿಂಗ್‌ ಮಾಡಿದ ಲಂಕಾ ತಂಡ ಮತ್ತೊಮ್ಮೆ ಕಳಪೆ ಪ್ರದರ್ಶನ ತೋರಿತು. ಆರಂಭಿಕನಾಗಿ ಕಣಕ್ಕಿಳಿದ ಕುಸಾಲ್ ಪೆರೇರಾ 51 ರನ್‌ (28 ಎಸೆತ, 9 ಬೌಂಡರಿ, 2 ಸಿಕ್ಸರ್)‌, ಕೊನೆಯಲ್ಲಿ ಮಹೀಶ್ ತೀಕ್ಷಣ 91 ಎಸೆತಗಳಲ್ಲಿ 3 ಬೌಂಡರಿಯೊಂದಿಗೆ 38 ರನ್‌ ಗಳಿಸಿದ್ದು ಬಿಟ್ಟರೆ, ಉಳಿದವರು ಅಲ್ಪಮೊತ್ತಕ್ಕೆ ವಿಕೆಟ್‌ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲನುಭವಿಸಿದ ಬಳಿಕ ಲಂಕಾಗೆ ಇದು ಮತ್ತೆ ಮುಖಭಂಗ ಉಂಟುಮಾಡಿತು. ಇದನ್ನೂ ಓದಿ: ಮ್ಯಾಕ್ಸಿ ಬೆಂಕಿ ಆಟಕ್ಕೆ ಹಲವು ದಾಖಲೆಗಳು ಭಸ್ಮ – ವಿಶ್ವದಾಖಲೆಯ ಪಟ್ಟಿ ಓದಿ 

    ಶ್ರೀಲಂಕಾ ಪರ ಪಾಥುಮ್ ನಿಸ್ಸಾಂಕ 2 ರನ್‌, ಕುಸಲ್ ಮೆಂಡಿಸ್ 6ರನ್‌, ಸದೀರ ಸಮರವಿಕ್ರಮ 1 ರನ್‌, ಚರಿತ್ ಅಸಲಂಕ 8 ರನ್‌, ಏಂಜೆಲೊ ಮ್ಯಾಥ್ಯೂಸ್ 16 ರನ್‌, ಧನಂಜಯ ಡಿ ಸಿಲ್ವಾ 19 ರನ್‌, ಚಮಿಕ ಕರುಣಾರತ್ನೆ 6 ರನ್‌, ದುಷ್ಮಂತ ಚಮೀರ 1 ರನ್‌, ದಿಲ್ಶನ್ ಮಧುಶಂಕ 19 ರನ್‌ ಗಳಿಸಿ ಔಟಾದರು.

    ಕಿವೀಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಟ್ರೆಂಟ್‌ ಬೌಲ್ಟ್‌ 10 ಓವರ್‌ಗಳಲ್ಲಿ 37 ರನ್‌ ಬಿಟ್ಟುಕೊಟ್ಟು 3 ವಿಕೆಟ್‌ ಕಬಳಿಸಿದರು. ಇನ್ನುಳಿದಂತೆ ಲಾಕಿ ಫರ್ಗುಸನ್, ಮಿಚೆಲ್‌ ಸ್ಯಾಂಟ್ನರ್‌ ಮತ್ತು ರಚಿನ್‌ ರವೀಂದ್ರ ತಲಾ 2 ವಿಕೆಟ್‌ ಹಾಗೂ ಟಿಮ್‌ ಸೌಥಿ ಒಂದು ವಿಕೆಟ್‌ ಪಡೆದು ಮಿಂಚಿದರು.

  • World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

    World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ (New Zealand) ಭರ್ಜರಿ 401 ರನ್‌ ಬಾರಿಸುವ ಮೂಲಕ ಎದುರಾಳಿ ಪಾಕಿಸ್ತಾನ (Pakistan) ತಂಡಕ್ಕೆ 402 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದೆ.

    ಆರಂಭಿಕ ಆಟಗಾರ ರಚಿನ್‌ ರವೀಂದ್ರ (Rachin Ravindra) ಹಾಗೂ ಕೇನ್‌ ವಿಲಿಯಮ್ಸನ್‌ (Kane Williamson) ಶತಕದ ಜೊತೆಯಾಟ ನೆರವಿನಿಂದ ಕಿವೀಸ್‌ ಪಡೆ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 401 ರನ್‌ ಪೇರಿಸಿದೆ. ಇದನ್ನೂ ಓದಿ: ಟೀಂ ಇಂಡಿಯಾ ಬೌಲರ್‌ಗಳಿಗೆ ಸ್ಪೆಷಲ್‌ ಬಾಲ್‌ ಕೊಡ್ತಿದ್ದಾರೆ – ಗೆಲುವಿನ ಬಗ್ಗೆ ಪಾಕ್‌ ಮಾಜಿ ಕ್ರಿಕೆಟಿಗ ಟೀಕೆ

    68 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿದ್ದ ಕಿವೀಸ್‌ ಬಳಿಕ 2ನೇ ವಿಕೆಟ್‌ಗೆ ಬೃಹತ್‌ ಮೊತ್ತ ಪೇರಿಸಿತು.‌ ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ ಕೇನ್‌ ವಿಲಿಯಮ್ಸನ್‌ ಹಾಗೂ ರಚಿನ್‌ ರವೀಂದ್ರ ಜೋಡಿ 2ನೇ ವಿಕೆಟ್‌ಗೆ 142 ಎಸೆತಗಳಲ್ಲಿ ಬರೋಬ್ಬರಿ 180 ರನ್‌ ಬಾರಿಸಿತ್ತು. ರಚಿನ್‌ ರವೀಂದ್ರ 108 ರನ್‌ (94 ಎಸೆತ, 15 ಬೌಂಡರಿ, 1 ಸಿಕ್ಸರ್‌) ಚಚ್ಚುವ ಮೂಲಕ 23ನೇ ವಯಸ್ಸಿಗೆ ವಿಶ್ವಕಪ್‌ನಲ್ಲಿ 3 ಶತಕ ಸಿಡಿಸಿ, 2 ಶತಕ ಸಿಡಿಸಿದ್ದ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆ ನುಚ್ಚು ನೂರು ಮಾಡಿದರು. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿಯಿಂದಲೇ ಪಾಂಡ್ಯ ಔಟ್‌ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ

    ಇದರೊಂದಿಗೆ ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಮೊದಲ ಪಂದ್ಯವಾಡಿದ ಕೇನ್‌ ವಿಲಿಯಮ್ಸನ್‌ 95 ರನ್‌ (79 ಎಸೆತ, 10 ಬೌಂಡರಿ, 2 ಸಿಕ್ಸರ್‌) ಸಿಡಿಸಿ ಮಿಂಚಿದರು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಡೇರಿಲ್‌ ಮಿಚೆಲ್‌ ಹಾಗೂ ಮಾರ್ಕ್‌ ಚಾಪ್ಮನ್‌ ಜೋಡಿ 32 ಎಸೆತಗಳಲ್ಲಿ 57 ರನ್‌, ಮಿಚೆಲ್‌ ಸ್ಯಾಂಟ್ನರ್‌ ಮತ್ತು ಗ್ಲೇನ್‌ ಫಿಲಿಪ್ಸ್‌ ಜೋಡಿ 26 ಎಸೆತಗಳಲ್ಲಿ 43 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ 400 ರನ್‌ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    ಡೆವೋನ್‌ ಕಾನ್ವೆ 35 ರನ್‌, ಡೇರಿಲ್‌ ಮಿಚೆಲ್‌ 29 ರನ್‌, ಮಾರ್ಕ್‌ ಚಾಪ್ಮನ್‌ 39 ರನ್‌, ಗ್ಲೇನ್‌ ಫಿಲಿಪ್ಸ್‌ 41 ರನ್‌, ಮಿಚೆಲ್‌ ಸ್ಯಾಂಟ್ನರ್‌ 26 ರನ್‌, ಟಾಮ್‌ ಲಾಥಮ್‌ 2 ರನ್‌ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್‌ ವಸೀಮ್‌ 3 ವಿಕೆಟ್‌ ಕಿತ್ತರೆ, ಹಸನ್‌ ಅಲಿ, ಇಫ್ತಿಕಾರ್‌ ಅಹ್ಮದ್‌ ಮತ್ತು ಹ್ಯಾರಿಸ್‌ ರೌಫ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ನೆದರ್ಲ್ಯಾಂಡ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – ಅಫ್ಘಾನ್‌ ಸೆಮಿಗೆ ಪ್ರವೇಶಿಸುತ್ತಾ? ಲೆಕ್ಕಾಚಾರ ಏನು?

    ರನ್‌ ಏರಿದ್ದು ಹೇಗೆ?
    94 ಎಸೆತ 100 ರನ್‌
    138 ಎಸೆತ 150 ರನ್‌
    209 ಎಸೆತ 250 ರನ್‌
    239 ಎಸೆತ 300 ರನ್‌
    300 ಎಸೆತ 401 ರನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • WTCಗೂ ಮುನ್ನವೇ ನಂ.1 ಪಟ್ಟಕ್ಕೇರಿದ ಭಾರತ

    WTCಗೂ ಮುನ್ನವೇ ನಂ.1 ಪಟ್ಟಕ್ಕೇರಿದ ಭಾರತ

    ದುಬೈ: ಐಸಿಸಿ (ICC) ವಿಶ್ವ ಟೆಸ್ಟ್ ರ‍್ಯಾಂಕಿಗ್‌ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ (Team India) ಆಸ್ಟ್ರೇಲಿಯಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ.

    ಜೂನ್‌ 7 ರಿಂದ 11ರ ವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ನಡೆಯಲಿದೆ. ಡಬ್ಲ್ಯೂಟಿಸಿಗೆ ಕೆಲವೇ ದಿನಗಳು ಬಾಕಿಯಿರುವ ಹೊತ್ತಿನಲ್ಲೇ ಭಾರತ ಕ್ರಿಕೆಟ್ ತಂಡ ಟೆಸ್ಟ್ ರ‍್ಯಾಂಕಿಗ್‌ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮುಕ್ತಾಯವಾದ ಒಂದು ವಾರಗಳ ನಂತರ ಇಂಗ್ಲೆಂಡ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ.

    ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈವರೆಗೆ ಆಸ್ಟ್ರೇಲಿಯಾ ತಂಡವೇ ಟೆಸ್ಟ್ ಮಾದರಿಯಲ್ಲಿ ನಂ.1 ತಂಡ ಎನಿಸಿಕೊಂಡಿತ್ತು. ಆದರೀಗ ಈಗ ಭಾರತ ಆಸ್ಟ್ರೇಲಿಯಾವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ. ಮೇ 2 ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಡುಗಡೆ ಮಾಡಿದ ರ‍್ಯಾಂಕಿಗ್‌ ಪಟ್ಟಿಯಲ್ಲಿ ಭಾರತಕ್ಕೆ ನಂ.1 ಸ್ಥಾನ ದೊರೆತಿದೆ. ಇದನ್ನೂ ಓದಿ: WTCಗೆ ಟೀಂ ಇಂಡಿಯಾ ಆಯ್ಕೆ ಪ್ರಕಟ – ರಹಾನೆ ಇನ್‌, ಸೂರ್ಯಕುಮಾರ್‌ ಔಟ್‌

    ಟೀಂ ಇಂಡಿಯಾ ಫೈನಲ್‌ ಪ್ರವೇಶಿಸಿದ್ದು ಹೇಗೆ?
    ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ 3-0 ಅಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿತ್ತು. ಆದ್ರೆ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿತ್ತು. ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಿತ್ತು. ಅಂತಿಮ ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದ್ದರಿಂದ ಫೈನಲ್‌ ಪ್ರವೇಶಿಸುವ ಹಾದಿ ಕಠಿಣವಾಗಿತ್ತು.

    ಮತ್ತೊಂದೆಡೆ ಶ್ರೀಲಂಕಾ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅಗತ್ಯವಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲೇ ನ್ಯೂಜಿಲೆಂಡ್ ಎದುರು ಕೇವಲ 2 ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸುವ ಮೂಲಕ ಫೈನಲ್ ರೇಸ್‌ನಿಂದ ಹೊರ ಬಿದ್ದಿತು. ಭಾರತ 60.29 ಪಿಸಿಟಿಯೊಂದಿಗೆ (Percentage Of Points Earned) ಫೈನಲ್‌ ಪ್ರವೇಶಿಸಿತು.

    ಐಸಿಸಿ ಟೆಸ್ಟ್ – ಯಾವ ತಂಡಕ್ಕೆ ಎಷ್ಟು ಶ್ರೇಯಾಂಕ
    1. ಭಾರತ – 121
    2. ಆಸ್ಟ್ರೇಲಿಯಾ – 116
    3. ಇಂಗ್ಲೆಂಡ್‌ – 114
    4. ದಕ್ಷಿಣ ಆಫ್ರಿಕಾ – 104
    5. ನ್ಯೂಜಿಲೆಂಡ್ – 100
    6. ಪಾಕಿಸ್ತಾನ – 86
    7. ಶ್ರೀಲಂಕಾ – 84
    8. ವೆಸ್ಟ್ ಇಂಡೀಸ್ – 76
    9. ಬಾಂಗ್ಲಾದೇಶ – 45
    10. ಜಿಂಬಾಬ್ವೆ – 32

  • ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ವೆಲ್ಲಿಂಗ್ಟನ್‌: ಕೇನ್ ವಿಲಿಯಮ್ಸನ್ (Kane Williamson) ಶತಕದ ನೆರವಿನಿಂದ ನ್ಯೂಜಿಲೆಂಡ್ (New Zealand) ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ (Sri Lanka) ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದ್ದು ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಪ್ರವೇಶಿಸಿದೆ.

    ಭಾರತ 2021ರಲ್ಲಿ ಡಬ್ಲ್ಯೂಟಿಸಿ ಫೈನಲ್ ಪ್ರವೇಶಿಸಿ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಇದೀಗ ಮತ್ತೊಮ್ಮೆ ಫೈನಲ್ ಪ್ರವೇಶಿಸಿದ್ದು, ಆಸ್ಟ್ರೇಲಿಯಾ (Australia) ವಿರುದ್ಧ ಸೆಣಸಲಿದೆ ಲಂಡನ್‌ನಲ್ಲಿ ಜೂನ್ 7ರಿಂದ 11ರವರೆಗೆ ಪಂದ್ಯ ನಡೆಯಲಿದೆ.

    2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವ ಸಲುವಾಗಿ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-0 ಅಂಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನಡೆಯುತ್ತಿರುವ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಿತ್ತು. ಆದ್ರೆ ಅಂತಿಮ ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದೆ.

    ಮತ್ತೊಂದೆಡೆ ಶ್ರೀಲಂಕಾ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅಗತ್ಯವಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲೇ ನ್ಯೂಜಿಲೆಂಡ್ ಎದುರು ಕೇವಲ 2 ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸುವ ಮೂಲಕ ಫೈನಲ್ ರೇಸ್‌ನಿಂದ ಹೊರ ಬಿದ್ದಿದೆ.

    ಪ್ರಸ್ತುತ 68.52 ಪಿಸಿಟಿ (Percentage Of Points Earned) ಹೊಂದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. 60.29 ಪಿಸಿಟಿ ಹೊಂದಿರುವ ಭಾರತ 2ನೇ ಸ್ಥಾನದಲ್ಲಿದೆ. ಶ್ರೀಲಂಕಾ 53.33 ಪಿಸಿಟಿ ಹೊಂದಿದ್ದು 4ನೇ ಸ್ಥಾನದಲ್ಲಿತ್ತು. ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ್ದರೆ, ಲಂಕಾ 61.1 ಪಿಸಿಟಿ ಅರ್ಹತೆಯೊಂದಿಗೆ ಫೈನಲ್ ಪ್ರವೇಶಿಸುತ್ತಿತ್ತು. ಆದರೀಗ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿದ್ದು, ಪಿಸಿಟಿ 48.48ಕ್ಕೆ ಇಳಿಕೆಯಾಗಿದ್ದು, 4ನೇ ಸ್ಥಾನದಲ್ಲಿ ಉಳಿದಿದೆ. ಈ ಮೂಲಕ ಫೈನಲ್ ಪ್ರವೇಶಿಸುವ ಅರ್ಹತೆ ಕಳೆದುಕೊಂಡಿದೆ.

    ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 355 ರನ್ ಗಳಿಸಿದ್ದ ಶ್ರೀಲಂಕಾ ತಂಡ 2ನೇ ಟೆಸ್ಟ್ನಲ್ಲಿ 302 ರನ್ ಗಳಿಗೆ ಆಲೌಟ್ ಆಗಿತ್ತು. ಇತ್ತ ಮೊದಲ ಇನ್ನಿಂಗ್ಸ್ನಲ್ಲಿ 373 ರನ್ ಗಳಿಸಿದ್ದ ನ್ಯೂಜಿಲೆಂಡ್, ಗೆಲುವಿಗೆ 285 ರನ್ ಗುರಿ ಪಡೆದಿತ್ತು. ಇಂದು ತನ್ನ ಸರದಿ ಆರಂಭಿಸಿದ ಕಿವೀಸ್ ಪಡೆ ಕೇನ್ ವಿಲಿಯಮ್ಸನ್ ಔಟಾಗದೇ 121 ರನ್ ಬಲದಿಂದ ಲಂಕಾ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

    ಏಕದಿನ ಕ್ರಿಕೆಟ್‌ನಂತೆ ರೋಚಕ:
    ಶ್ರೀಲಂಕಾ, ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯ ಏಕದಿನ ಕ್ರಿಕೆಟ್‌ನಂತೆ ಅತ್ಯಂತ ರೋಚಕತೆಯಿಂದ ಕೂಡಿತ್ತು. ಕೊನೆಯ 12 ಎಸೆತಗಳಲ್ಲಿ 14 ರನ್ ಬೇಕಿತ್ತು. ಈ ವೇಳೆ 69ನೇ ಓವರ್‌ನಲ್ಲಿ 1 ವಿಕೆಟ್ ಕಳೆದುಕೊಂಡ ಕಿವೀಸ್ ಪಡೆ ಕೇವಲ 7 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಕೊನೆಯ ಓವರ್‌ನಲ್ಲಿ 7 ರನ್‌ಗಳ ಅಗತ್ಯವಿತ್ತು. ಈ ವೇಳೆ ಮೊದಲ ಎರಡು ಎಸೆತಗಳಲ್ಲಿ ತಲಾ ಒಂದೊಂದು ರನ್ ತೆಗೆದುಕೊಂಡರು. ಆದರೆ 3ನೇ ಎಸೆತದಲ್ಲಿ 1 ರನ್ ಕದಿಯಲು ಯತ್ನಿಸಿ ಮ್ಯಾಟ್ ಹೆನ್ರಿ ರನೌಟ್‌ಗೆ ತುತ್ತಾಗಿ, ತಂಡಕ್ಕೆ ಆಘಾತ ನೀಡಿದರು. ಆದರೆ ವಿಲಿಯಮ್ಸನ್ 4ನೇ ಎಸೆತವನ್ನು ಬೌಂಡರಿಗಟ್ಟಿದರು. ಕೊನೆಯ 2 ಎಸೆತಗಳಲ್ಲಿ 1 ರನ್ ಬೇಕಿದ್ದಾಗ 5ನೇ ಎಸೆತ ಎದುರಿಸುವಲ್ಲಿ ವಿಫಲರಾದರು. ಕೊನೆಯ ಎಸೆತದಲ್ಲಿ ಒಂದು ರನ್ ಕದಿಯಲು ಯತ್ನಿಸಿ 1 ಬಾಲ್ ಹೊಡೆಯುವಲ್ಲಿ ವಿಫಲರಾದರು. ಈ ವೇಳೇ ಬೈಸ್ ರನ್ ಕದಿಯಲು ಯತ್ನಿಸಿದ ಕೇನ್ ರನೌಟ್‌ಗೆ ತುತ್ತಾಗುವ ಸಾಧ್ಯತೆಯಿತ್ತು. ಆದ್ರೆ ತಮ್ಮ ಮಿಂಚಿನ ಓಟದಿಂದ ಬಾಲ್ ವಿಕೆಟ್‌ಗೆ ತಗುಲುವ ಕ್ಷಣಕ್ಕೂ ಮುನ್ನ ಕ್ರೀಸ್‌ನಲ್ಲಿ ಬ್ಯಾಟ್ ಇರಿಸಿದ್ದರು. ಪರಿಣಾಮ ತಂಡ 285 ರನ್‌ಳ ಗುರಿ ತಲುಪಿ ರೋಚಕ ಜಯ ಸಾಧಿಸಿತು.

    ಸಂಕ್ಷಿಪ್ತ ಸ್ಕೋರ್:
    ಶ್ರೀಲಂಕಾ ಮೊದಲ ಇನ್ನಿಂಗ್ಸ್ – 355/10
    ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ 373/10
    ಶ್ರೀಲಂಕಾ 2ನೇ ಇನ್ನಿಂಗ್ಸ್ 302/10
    ನ್ಯೂಜಿಲೆಂಡ್ 2ನೇ ಇನ್ನಿಂಗ್ಸ್ 285/8

  • ಫಾಲೋ ಆನ್‌ಗೆ ತುತ್ತಾದ್ರೂ 1 ರನ್ ರೋಚಕ ಜಯ – 22 ವರ್ಷದ ಬಳಿಕ ನ್ಯೂಜಿಲೆಂಡ್ ಸಾಧನೆ

    ಫಾಲೋ ಆನ್‌ಗೆ ತುತ್ತಾದ್ರೂ 1 ರನ್ ರೋಚಕ ಜಯ – 22 ವರ್ಷದ ಬಳಿಕ ನ್ಯೂಜಿಲೆಂಡ್ ಸಾಧನೆ

    ವೆಲ್ಲಿಂಗ್ಟನ್: ನೀಲ್ ವಾಗ್ನರ್ (Neil Wagner) ಬೆಂಕಿ ಬೌಲಿಂಗ್ ಹಾಗೂ ಕೇನ್ ವಿಲಿಯಮ್ಸನ್ (Kane Williamson) ಶತಕದ ಬ್ಯಾಟಿಂಗ್ ನೆರವಿನಿಂದ ಕಿವೀಸ್ ಪಡೆ ಇಂಗ್ಲೆಂಡ್ (England) ವಿರುದ್ಧ 1 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ಅಂತರದಲ್ಲಿ ಸಮಬಲಗೊಳಿಸಿದೆ.

    2ನೇ ಟೆಸ್ಟ್ ಪಂದ್ಯದ 5ನೇ ದಿನದಂದು ಕಿವೀಸ್ ಪಡೆ 1 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 1 ರನ್‌ನಿಂದ ಟೆಸ್ಟ್ ಪಂದ್ಯವನ್ನು ಗೆದ್ದ ವಿಶ್ವದ 2ನೇ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 1993ರ ಜನವರಿ 26ರಂದು ವೆಸ್ಟ್ ಇಂಡೀಸ್ ಅಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ತಂಡವನ್ನು 1 ರನ್ ಅಂತರದಿಂದ ಮಣಿಸಿ ಈ ಸಾಧನೆ ಮಾಡಿತ್ತು. ಇದನ್ನೂ ಓದಿ: ಮ್ಯಾಜಿಕ್ ಮೆಸ್ಸಿಗೆ `ಅತ್ಯುತ್ತಮ ಪುರುಷರ ಆಟಗಾರ-2022′ ಪ್ರಶಸ್ತಿ

    ಫಾಲೋ ಆನ್‌ಗೆ ಸಿಲುಕಿದ್ದ ನ್ಯೂಜಿಲೆಂಡ್ (New Zealand) ತಂಡ ಕೆನ್ ವಿಲಿಯಮ್ಸನ್ ಅವರ ಶತಕದ ನೆರವಿನಿಂದ ಎರಡನೇ ಇನ್ನಿಂಗ್ಸ್‌ನಲ್ಲಿ 483 ರನ್ ಕಲೆ ಹಾಕಿತ್ತು. ಆರಂಭಿಕರಾದ ಟಾಮ್ ಲಾಂಥಮ್ ಹಾಗೂ ಡಿವೋನ್ ಕಾನ್ವೆ ಮುರಿಯದ ಮೊದಲ ವಿಕೆಟ್ ಜೊತೆಯಾಟಕ್ಕೆ 149 ರನ್ ಕಲೆಹಾಕಿದ್ದರು. ಕಾನ್ವೆ 61 ರನ್ ಗಳಿಸಿ ಔಟಾದರೆ, ಲಾಂಥಮ್ 83 ರನ್ ಚಚ್ಚಿ ಪೆವಿಲಿಯನ್ ಸೇರಿದರು. 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಳಿದ ಕೇನ್ ವಿಲೀಯಮ್ಸನ್ 282 ಎಸೆತಗಳಲ್ಲಿ 12 ಬೌಂಡರಿಗಳೊಂದಿಗೆ 132 ರನ್ ಬಾರಿಸಿದರು. ಇದರೊಂದಿಗೆ ಡ್ಯಾರಿಯಲ್ ಮಿಚೆಲ್ 54 (54 ಎಸೆತ, 5 ಬೌಂಡರಿ, 1 ಸಿಕ್ಸರ್), ಟಾಮ್ ಬ್ಲಂಡೆಲ್ 90 ರನ್ (166 ಎಸೆತ, 9 ಬೌಂಡರಿ) ಗಳಿಸಿ ತಂಡಕ್ಕೆ ನೆರವಾದರು.

    ಅಂತಿಮವಾಗಿ 2ನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 162.3 ಓವರ್‌ಗಳಲ್ಲಿ 483 ರನ್ ಗಳಿಸಿತ್ತು. ಈ ಮೂಲಕ ಇಂಗ್ಲೆಂಡ್ ತಂಡದ ಗೆಲುವಿಗೆ 258 ರನ್‌ಗಳ ಗುರಿ ನೀಡಿತ್ತು.

    ತನ್ನ ಸರದಿ ಆರಂಭಿಸಿದ್ದ ಇಂಗ್ಲೆಂಡ್ 4ನೇ ದಿನದಾಟದ ಅಂತ್ಯಕ್ಕೆ 48 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಅಜೇಯ 153 ರನ್ ಗಳಿಸಿದ್ದ ಮಾಜಿ ನಾಯಕ ಜೋ ರೂಟ್, 2ನೇ ಇನ್ನಿಂಗ್ಸ್‌ನಲ್ಲಿಯೂ 113 ಎಸೆತಗಳಲ್ಲಿ 95 ರನ್ ಬಾರಿಸಿ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ನೀಲ್ ವ್ಯಾಗ್ನರ್ ಅವರು ಜೋ ರೂಟ್ (Joe Root) ಮತ್ತು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (32 ರನ್) ನಿರ್ಣಾಯಕ ವಿಕೆಟ್ ಪಡೆಯುವ ಮೂಲಕ ಗೆಲುವಿನ ಕನಸನ್ನು ಕಸಿದುಕೊಂಡರು. ಈ ನಡುವೆ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಹ್ಯಾರಿ ಬ್ರೂಕ್ ಒಂದು ಎಸೆತವನ್ನೂ ಎದುರಿಸದೇ ರನೌಟ್‌ಗೆ ತುತ್ತಾಗಿದ್ದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪೆಟ್ಟು ನೀಡಿತ್ತು. ಅಂತಿಮವಾಗಿ ಇಂಗ್ಲೆಂಡ್ 74.2 ಓವರ್‌ಗಳಲ್ಲಿ 256 ರನ್ ಗಳಿಸುವ ಮೂಲಕ ವಿರೋಚಿತ ಸೋಲು ಕಂಡಿತು.

    ನೀಲ್ ವ್ಯಾಗ್ನರ್ 2ನೇ ಇನ್ನಿಂಗ್ಸ್‌ನಲ್ಲಿ 62 ರನ್ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಪಡೆದರು. ನಾಯಕ ಟಿಮ್ ಸೌಥಿ 45 ರನ್ ನೀಡಿ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 75 ರನ್ ನೀಡಿ 2 ವಿಕೆಟ್ ಕಿತ್ತರು. ಇದನ್ನೂ ಓದಿ: RCB, MI, Delhi ಅಭಿಮಾನಿಗಳಿಗೆ ನಿರಾಸೆ – 2023ರ ಐಪಿಎಲ್‌ನಿಂದ ಈ ಸ್ಟಾರ್ ಆಟಗಾರರು ಔಟ್

    ಸಂಕ್ಷಿಪ್ತ ಸ್ಕೋರ್
    ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 435/8 ಡಿಕ್ಲೇರ್
    ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ 209/10
    ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್ 483/10
    ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 256/10

    22 ವರ್ಷದ ಬಳಿಕ ಸಾಧನೆ:
    ಆಸ್ಟ್ರೇಲಿಯಾ ವಿರುದ್ಧ 2001ರಲ್ಲಿ ಫಾಲೋ ಆನ್‌ಗೆ ತುತ್ತಾಗಿದ್ದರೂ ಭಾರತ ಲಕ್ಷ್ಮಣ್‌ ಮತ್ತು ದ್ರಾವಿಡ್ ಸಾಹಸದಿಂದ ಜಯಗಳಿಸಿತ್ತು. ಆದಾದ ಬಳಿಕ ಇಲ್ಲಿಯವರೆಗೆ ಈ ಸಾಧನೆಯನ್ನು ಯಾವ ತಂಡ ಮಾಡಿರಲಿಲ್ಲ. ಈಗ 22 ವರ್ಷದ ಬಳಿಕ ನ್ಯೂಜಿಲೆಂಡ್ ಫಾಲೋ ಆನ್‌ಗೆ ಸಿಲುಕಿದ್ದರೂ ಪಂದ್ಯವನ್ನು ಗೆದ್ದುಕೊಂಡ ಸಾಧನೆ ಮಾಡಿದೆ. ಅಷ್ಟೇ ಅಲ್ಲದೇ ಫಾಲೋ ಆನ್ ಹೇರಿದ ಬಳಿಕ ಜಯಗಳಿಸಿದ ನಾಲ್ಕನೇ ಟೆಸ್ಟ್ ಪಂದ್ಯ ಇದಾಗಿದೆ.

  • ಕಿವೀಸ್ ಟೆಸ್ಟ್ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ಗುಡ್‌ಬೈ

    ಕಿವೀಸ್ ಟೆಸ್ಟ್ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ಗುಡ್‌ಬೈ

    ವೆಲ್ಲಿಂಗ್ಟನ್: ನ್ಯೂಜಿಲೆಂಡ್ (New Zealand) ತಂಡದ ನಾಯಕ ಕೇನ್ ವಿಲಿಯಮ್ಸನ್ (Kane Williamson) ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.

    ಇದರಿಂದ ನ್ಯೂಜಿಲೆಂಡ್ (NewZealand) ಟೆಸ್ಟ್ ತಂಡದ (Test Cricket) ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ (Tim Southee) ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್ (Tom Latham) ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ. ಇದನ್ನೂ ಓದಿ: ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್‌ ತೆಂಡೂಲ್ಕರ್‌ ಶತಕ

    ಕೇನ್ ವಿಲಿಯಮ್ಸನ್ (Kane Williamson) ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (Test Worldcup) ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್‌ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ (Brendon McCullum) ಟೆಸ್ಟ್ ತಂಡದ ನಾಯಕರಾಗಿದ್ದರು. ಇದನ್ನೂ ಓದಿ: ನಾವು ಬಾಬರ್ ಅಜಮ್‍ಗಿಂತ ಹೆಚ್ಚಾಗಿ ನಿಮ್ಮನ್ನು ಪ್ರೀತಿಸುತ್ತೇವೆ – ಪಾಕ್ ಅಭಿಮಾನಿಗಳಿಂದ ಕೊಹ್ಲಿಗೆ ಸಂದೇಶ

    ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]