ಧರ್ಮಶಾಲಾ: ನಾವು ದೇಶದ ಏಕತೆಯನ್ನು ಕಾಪಾಡಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ನಟಿ, ಸಂಸದೆ ಕಂಗನಾ ರಣಾವತ್ (Kangana Ranaut) ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾಷಾ ಚರ್ಚೆಯ ಮಧ್ಯೆ ಬಿಜೆಪಿ ಸಂಸದೆ ಈ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್) ಕಾರ್ಯಕರ್ತರು ಮರಾಠಿ ಮಾತನಾಡದ ಕಾರಣ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆಯೂ ಮಾತನಾಡಿದ್ದಾರೆ.
ನಮ್ಮ ದೇಶವನ್ನು ವಿಭಜಿಸುವವರಿಂದ ನಾವು ದೂರವಿರಬೇಕು. ನಮ್ಮ ದೇಶದ ಜನರು ವಿಭಿನ್ನ ರೀತಿಯಲ್ಲಿ ಪರಸ್ಪರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂತಹ ಕ್ರಮಗಳು ಅವರ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತವೆ. ಪ್ರವಾಸೋದ್ಯಮಕ್ಕಾಗಿ ಇಲ್ಲಿಗೆ ಅನೇಕ ಜನರು ಬರುತ್ತಾರೆ. ಅವರು ಪಹಾರಿಗಳು ಹೇಗೆ ಮಾತನಾಡುತ್ತಾರೆಂದು ತಿಳಿಯಲು ಬಯಸುತ್ತಾರೆ. ನಾವು ಪ್ರಯಾಣಿಸುವಾಗ, ದಕ್ಷಿಣದ ಜನರು ಹೇಗೆ ಮಾತನಾಡುತ್ತಾರೆಂದು ತಿಳಿಯಲು ನಾವು ಬಯಸುತ್ತೇವೆ. ದೇಶದಲ್ಲಿ ಏಕತೆಯ ಮನೋಭಾವವನ್ನು ನಾವು ಕಾಪಾಡಿಕೊಳ್ಳಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಹಿಂದಿ-ಮರಾಠಿ ಭಾಷಾ ಸಂಘರ್ಷ ಜೋರಾಗಿದೆ. ಮಹಾರಾಷ್ಟ್ರ ಸರ್ಕಾರವು ತ್ರಿಭಾಷಾ ನೀತಿ ಜಾರಿಗೆ ಮುಂದಾಗಿತ್ತು. ಶಾಲೆಗಳಲ್ಲಿ ಹಿಂದಿಯನ್ನೂ ಕಡ್ಡಾಯಗೊಳಿಸಲು ಕ್ರಮಕೈಗೊಂಡಿತ್ತು. ಆದರೆ, ಮರಾಠಿಗರು, ವಿಪಕ್ಷಗಳು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ಮೇಘಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸಂತಾಪ ಸೂಚಿಸಲು ಕಂಗನಾ, ಮಂಡಿಯ ಸಿರಾಜ್ ಕಣಿವೆಗೆ ಭೇಟಿ ನೀಡಿದ್ದಾರೆ. ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ತುನಾಗ್‌ನಲ್ಲಿ ಹತ್ತು ಜನರು ಸಾವನ್ನಪ್ಪಿದ್ದು, 24 ಜನರು ಕಾಣೆಯಾಗಿದ್ದಾರೆ.
ಕಂಗನಾ ಅವರು ಭಾರತದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ಗೆ ನವೀಕೃತ ಶಕ್ತಿ, ಗೋಚರತೆ ಮತ್ತು ಗಮನವನ್ನು ತರುವ ನಿರೀಕ್ಷೆ ನಮಗಿದೆ. ಕಂಗನಾ ಅವರ ಹೊಸ ಪಾತ್ರದಲ್ಲಿ, ಚಾಂಪಿಯನ್‌ಶಿಪ್‌ಗಳ ಮೂಲ ಮೌಲ್ಯಗಳನ್ನು ಉತ್ತೇಜಿಸುತ್ತಾರೆ ಎಂದು ಪಿಸಿಐ ತಿಳಿಸಿದೆ. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದು ಹೀನ ಕೃತ್ಯ – ಜಮೀನಿನಲ್ಲೇ ನರಳಿ ಪ್ರಾಣ ಬಿಟ್ಟ ಹಸು
ಈ ಬಗ್ಗೆ ಕಂಗನಾ ರಣಾವತ್ ಅವರು ಸಮಾರಂಭದ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಪ್ಯಾರಾ ಅಥ್ಲೀಟ್‌ಗಳನ್ನು ಬೆಂಬಲಿಸಲು ಮತ್ತು ಅವರ ಅಸಾಧಾರಣ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ನನಗೆ ತುಂಬಾ ಗೌರವವಿದೆ. ನಮ್ಮ ಚಾಂಪಿಯನ್‌ಗಳ ಹಿಂದೆ ನಿಲ್ಲಲು ನನಗೆ ಹೆಮ್ಮೆ ಇದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಣ್ಣು ಹೂವಿನಂತೆ – ಇರಾನ್ ಸುಪ್ರೀಂ ನಾಯಕನ ಹಳೆಯ ಪೋಸ್ಟ್ ವೈರಲ್
2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರವರೆಗೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಚಾಂಪಿಯನ್‌ಶಿಪ್‌ನಲ್ಲಿ 100ಕ್ಕೂ ಹೆಚ್ಚು ದೇಶಗಳ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಲಿದ್ದಾರೆ.
ಬಾಲಿವುಡ್ ಬೆಡಗಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ತಾಯಿ ತನ್ನ ಆಶೀರ್ವಾದ ನೀಡಲು ಕರೆಸಿಕೊಂಡಿದ್ದಾಳೆ ಎಂದು ಖುಷಿಯಿಂದ ಮಾಧ್ಯಮಕ್ಕೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ IPS ಅಧಿಕಾರಿ ಪುತ್ರಿ, ನಟಿ ರನ್ಯಾ ಬಂಧನ
ಇಂದು (ಮಾ.4) ಮಧ್ಯಾಹ್ನದ ಮಹಾಪೂಜೆಯಲ್ಲಿ ಕಂಗನಾ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ನಟಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಟಿ, ದೇವಿಯ ದರ್ಶನಕ್ಕೆ ಬಂದಿದ್ದೇನೆ. ನಿನ್ನೆ ಕಾಪು ಮಾರಿಗುಡಿ, ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದೇನೆ. ಬಹಳ ವರ್ಷಗಳಿಂದ ಈ ಭಾಗಕ್ಕೆ ಬರಬೇಕೆಂಬ ಅಭಿಲಾಷೆ ಇತ್ತು. ಈಗ ತಾಯಿ ತನ್ನ ಆಶೀರ್ವಾದ ನೀಡಲು ನನ್ನನ್ನು ಕರೆಸಿಕೊಂಡಿದ್ದಾಳೆ ಎಂದಿದ್ದಾರೆ.
ನಮ್ಮ ಸನಾತನ ಧರ್ಮದ ಬಗ್ಗೆ ಜನರು ಜಾಗೃತರಾಗಿದ್ದಾರೆ. ನಮ್ಮ ದೇಶ ಉನ್ನತ ಪ್ರಗತಿಯತ್ತ ಸಾಗುತ್ತಿದೆ. ನಮ್ಮ ದೇವಾಲಯಗಳು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ದೇವಾಲಯಗಳು ನಮ್ಮ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಈ ವೇಳೆ, ಕುಂಭಮೇಳ, ಸನಾತನ ಧರ್ಮದ ಬಗ್ಗೆ ಅವಹೇಳನ ಟೀಕೆಗಳು ಮುಂದುವರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ದೇವರ ಆರತಿ ಬೆಳಗುವಾಗ ದುಷ್ಟ ಶಕ್ತಿಗಳು ಉರಿದು ಹೋಗುತ್ತವೆ. ದೇವಿಯ ಅವತಾರಗಳು ದುಷ್ಟ ಶಕ್ತಿಗಳ ಸಂಹಾರಕ್ಕೆ ಆಗಿವೆ. ಎಲ್ಲರ ಮೇಲೂ ದೇವಿಯ ಆಶೀರ್ವಾದವಿರಲಿ. ಟೀಕಿಸುವವರಿಗೆ ಅವಹೇಳನ ಮಾಡಿದವರಿಗೆ ದೇವರು ಬುದ್ಧಿ ಕೊಡಲಿ ಎಂದಿದ್ದಾರೆ ಕಂಗನಾ.
ಉಡುಪಿ: ದೇಗುಲ ಹಿಂದೂ ಧರ್ಮದ ಶ್ರೀಮಂತಿಕೆಯ ಪ್ರತೀಕ. ದೇವಸ್ಥಾನದಿಂದ ಲಕ್ಷಾಂತರ ಜನಕ್ಕೆ ಊಟ, ಆರೋಗ್ಯ ಶಿಕ್ಷಣ ಕೊಡಬಹುದು. ಆದರೆ, ದೇವಸ್ಥಾನದಲ್ಲಿ ಸಂಗ್ರಹವಾದ ದೇಣಿಗೆ ಸ್ವತಂತ್ರವಾಗಿ ಬಳಸಲಾಗುತ್ತಿಲ್ಲ ಎಂದು ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬೇಸರ ವ್ಯಕ್ತಪಡಿಸಿದರು.
ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಸೇವಾ ಕಾರ್ಯ ಎಂಬುದು ಸನಾತನ ಸಂಸ್ಕೃತಿಯ ಆರ್‌ಎಸ್‌ಎಸ್‌ನ ಬಿಜೆಪಿಯ ಶಕ್ತಿ. ದೇಶದಲ್ಲಿ ಸನಾತನ ಗುರುಕುಲಗಳಿಲ್ಲದಿರುವುದು ಬೇಸರದ ಸಂಗತಿ ಎಂದರು.
ಕಾಪುವಿನ ಭವ್ಯ ಮಂದಿರ ನೋಡುವಾಗ ನಾವೂ ನಮ್ಮ ಶ್ರೀಮಂತ ಸಂಸ್ಕೃತಿಗೆ ಈ ಕಾಲದಲ್ಲಿ ಕೊಡುಗೆ ಕೊಟ್ಟಿದ್ದೇವೆ ಎಂಬ ಹೆಮ್ಮೆಯಾಗುತ್ತದೆ. ದೇವಸ್ಥಾನಗಳು ನಮ್ಮ ಪರಂಪರೆಯನ್ನು ಸಾರುವ ಕೇಂದ್ರ. ನಾನು ದೇವಭೂಮಿಯೆಂದು ಕರೆಸಿಕೊಳ್ಳುವ ಹಿಮಾಚಲ ಪ್ರದೇಶದಿಂದ ಬಂದವಳು. ಭಾರತದ ಯಾವ ದೇಗುಲಕ್ಕೆ ಹೋದರೂ ಸಾವಿರಾರು ವರ್ಷದ ಇತಿಹಾಸವಿರುತ್ತದೆ ಎಂದು ತಿಳಿಸಿದರು.
ಆದಿಕಾಲದಿಂದ ಬಂದ ಆಚರಣೆಗಳ ಬಗ್ಗೆ ಹಿರಿಯರು ಹೇಳುತ್ತಾರೆ. ನಾನು ಕಲಾವಿದೆಯಾಗಿರುವ ಕಾರಣ ನಮ್ಮ ಸಂಸ್ಕೃತಿಯ ಬಗ್ಗೆ ಅರಿವಿದೆ, ಗೌರವವಿದೆ. ದೇವಸ್ಥಾನಗಳು ಜ್ಞಾನ ಪರಂಪರೆಯನ್ನು ತಲೆಮಾರಿನಿಂದ ತಲೆಮಾರಿಗೆ ವರ್ಗಾಯಿಸುತ್ತಾ ಬಂದಿದೆ. ಶಿಲ್ಪ ರಚನೆ, ಗೋಡೆ ಚಿತ್ರ, ಮಂತ್ರ, ವೇದ-ಉಪನಿಷತ್ ನಮ್ಮ ಪರಂಪರೆಯನ್ನು ಸಾರುತ್ತದೆ ಎಂದು ಬಣ್ಣಿಸಿದರು.
ಉಡುಪಿ: ಜಿಲ್ಲೆಯ ಕಾಪು ನೂತನ ಮಾರಿಗುಡಿಯ (Kapu Marigudi) ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಭಾಗಿಯಾಗಿದ್ದಾರೆ.
ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್, ಕಾಪು ಹೊಸ ಮಾರಿಗುಡಿಗೆ ಬಂದು ದೇವರ ದರ್ಶನಗೈದು ಪ್ರಸಾದ ಸ್ವೀಕರಿಸಿದರು. ಇದನ್ನೂ ಓದಿ: ಇಡ್ಲಿ ಬಳಿಕ ಹೋಳಿಗೆ ಪ್ರಿಯರಿಗೆ ಶಾಕ್!
ಬಾಲಿವುಡ್ ಬೆಡಗಿ ಕಂಗನಾ ರಣಾವತ್ (Kangana Ranaut) ನಟನೆಯ ‘ಎಮರ್ಜೆನ್ಸಿ’ ಚಿತ್ರದ (Emergency) ಟ್ರೈಲರ್ ರಿಲೀಸ್ ಮಾಡಲಾಗಿದೆ. ಮಾಜಿ ಪಿಎಂ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಜೀವ ತುಂಬಿದ್ದಾರೆ. ಟ್ರೈಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ:ಮತ್ತೆ ಮನೆ ರಣರಂಗ- ಚೈತ್ರಾ ಸುಳ್ಳಿ ಎಂದು ಗುಡುಗಿದ ರಜತ್
ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಕೇಂದ್ರವಾಗಿಟ್ಟುಕೊಂಡು ‘ಎಮರ್ಜೆನ್ಸಿ’ ಸಿನಿಮಾ ಮಾಡಲಾಗಿದೆ. ಈ ಚಿತ್ರದ 2ನೇ ಟ್ರೈಲರ್ ಇದಾಗಿದ್ದು, ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. ಖಡಕ್ ಆಗಿ ನಟಿ ಡೈಲಾಗ್ ಹೊಡೆದಿದ್ದಾರೆ.
1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ. ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ ಗಾಂಧಿ ಅವರು ಎದುರಿಸಿದ ರೀತಿಯನ್ನು ಟ್ರೈಲರ್ ಮೂಲಕ ಝಲಕ್ ತೋರಿಸಲಾಗಿದೆ.
ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ರಾಷ್ಟ್ರ ವ್ಯಾಪಿ ನಡೆದ ಪ್ರತಿಭಟನೆಗಳು, ಕರ್ಫ್ಯೂ, ರಾಜಕೀಯ ವಿರೋಧ ಹೀಗೆ ಹಲವು ಸನ್ನಿವೇಶಗಳನ್ನು ಟ್ರೈಲರ್‌ನಲ್ಲಿ ಹೈಲೆಟ್ ಮಾಡಲಾಗಿದೆ. ಕಂಗನಾ ‘ಇಂದಿರಾ ಗಾಂಧಿ’ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇಂಡಿಯಾ ಅಂದರೆ ಇಂದಿರಾ, ಇಂದಿರಾ ಅಂದರೆ ಇಂಡಿಯಾ ಎಂದಿದ್ದಾರೆ ಕಂಗನಾ.
ಕಂಗನಾ ಜೊತೆ ಶ್ರೇಯಸ್ ತಲ್ಪಡೆ, ಅನುಪಮ್ ಖೇರ್, ಮಹಿಮಾ ಚೌದರಿ, ಸತೀಶ್ ಕೌಶಿಕ್, ಮಿಲಿಂದ್ ಸೋಮನ್ ಮುಂತಾದವರು ನಟಿಸಿದ್ದಾರೆ. ಜನವರಿ 17ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಪ್ಲ್ಯಾನ್ ಪ್ರಕಾರ ಆಗಿದ್ದರೆ ಈ ಸಿನಿಮಾ ಈಗಾಗಲೇ ರಿಲೀಸ್ ಆಗಬೇಕಿತ್ತು. ಕಾರಣಾಂತರಗಳಿಂದ ಸಿನಿಮಾ ರಿಲೀಸ್ ಆಗೋದು ತಡವಾಗಿತ್ತು. ಈಗ ಕಂಗನಾ ಸಿನಿಮಾ ಅಬ್ಬರಿಸಲು ದಿನಗಣನೆ ಶುರುವಾಗಿದೆ. ನಟನೆಯ ಜೊತೆ ನಿರ್ದೇಶಕಿ, ನಿರ್ಮಾಪಕಿಯಾಗಿ ಅವರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಟಿಗೆ ಗೆಲುವು ಸಿಗುತ್ತಾ? ಕಾಯಬೇಕಿದೆ.
ನವದೆಹಲಿ: ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಹೇಳಿಕೆ ನೀಡಿದ್ದು, ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತುಲ್ ಸುಭಾಷ್‌ಗೆ (Atul Subhash Suicide Case) ಆತ್ಮಹತ್ಯೆಗೂ ಮುಂಚೆ ಹರಿಬಿಟ್ಟಿರುವ ವಿಡಿಯೋ ಅವರ ಪತ್ನಿ ಯಾವ ಮಟ್ಟದಲ್ಲಿ ಕಿರುಕುಳ ನೀಡಿದ್ದರೆಂದು ತಿಳಿಯುತ್ತದೆ. ಆತನಿಂದ ಸಾಮರ್ಥ್ಯ ಮೀರಿ ಕೋಟ್ಯಂತರ ಹಣ ವದೂಲಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 12-12-2024
ಈ ಆತ್ಮಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಅವರ ವಿಡಿಯೋ ಹೃದಯ ವಿದ್ರಾವಕವಾಗಿದೆ. ನಕಲಿ ಸ್ತ್ರೀವಾದ ಖಂಡನೀಯ. ಆ ವ್ಯಕ್ತಿ ತೀವ್ರ ಒತ್ತಡಕ್ಕೆ ಒಳಗಾಗಿದ್ದರಿಂದ ಈ ಹೆಜ್ಜೆ ಇಟ್ಟಿದ್ದಾರೆ. ಆದರೆ ಈ ಮಹಿಳೆಯ ತಪ್ಪಿನ ಉದಾಹರಣೆಯನ್ನು ಇಟ್ಟುಕೊಂಡು ದಿನವೂ ಕಿರುಕುಳಕ್ಕೊಳಗಾಗುವ ಮಹಿಳೆಯರ ಸಂಖ್ಯೆಯನ್ನು ಅಲ್ಲಗಳೆಯುವಂತಿಲ್ಲ. ವೈವಾಹಿಕ ಜೀವನದಲ್ಲಿ ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ ಎಂದು ಹೇಳಿದರು.
ಏನಿದು ಪ್ರಕರಣ?
ಉತ್ತರ ಪ್ರದೇಶ (Uttar Pradesh) ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.
ಸುಭಾಷ್ ಹೇಳಿದ್ದೇನು?
ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.
ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್ಗಿಂತಲೂ ಬೆಂಗಳೂರಿನ ಕೋರ್ಟ್ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್‌ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.
ಉತ್ತರಪ್ರದೇಶದ ಜೌನ್‌ಪುರದಲ್ಲಿ ಅತುತ್ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 12-12-2024
ಬಾಲಿವುಡ್ ಬೆಡಗಿ ಕಂಗನಾ ರಣಾವತ್ (Kangana Ranaut) ನಟಿಸಿ, ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಎಮರ್ಜೆನ್ಸಿ’ (Emergency) ಚಿತ್ರ ಥಿಯೇಟರ್‌ಗೆ ಲಗ್ಗೆಯಿಡಲು ಸಿದ್ಧವಾಗಿದೆ. ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದೆ. ಇದನ್ನೂ ಓದಿ:ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ನ.22ಕ್ಕೆ ರೀ ರಿಲೀಸ್
ಈ ಹಿಂದೆ ಟ್ರೈಲರ್ ಮೂಲಕ ರಿಲೀಸ್ ಡೇಟ್‌ನ್ನು ಚಿತ್ರತಂಡ ರಿವೀಲ್ ಮಾಡಿತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಸೆಪ್ಟೆಂಬರ್ 6ರಂದು ಈ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್‌ಗೆ ವಿಳಂಬವಾಗಿತ್ತು. 2025ರ ಜನವರಿ 17ರಂದು ‘ಎಮರ್ಜೆನ್ಸಿ’ ಚಿತ್ರ ರಿಲೀಸ್ ಆಗಲಿದೆ ಎಂದು ಕಂಗನಾ ಅಪ್‌ಡೇಟ್ ಹಂಚಿಕೊಂಡಿದ್ದಾರೆ.
ಇನ್ನೂ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನುಪಮ್ ಖೇರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಕಂಗನಾ ನಟನೆಯ ಈ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ.
‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಕುರಿತು ಖುದ್ದು ಕಂಗನಾ (Kangana Ranaut) ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ನಮ್ಮ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಖುಷಿಯಾಗುತ್ತಿದೆ. ಶೀಘ್ರದಲ್ಲಿಯೇ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡುತ್ತೇವೆ. ನಿಮ್ಮೆಲ್ಲರ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದಿದ್ದಾರೆ ನಟಿ.
We are glad to announce we have received the censor certificate for our movie Emergency, we will be announcing the release date soon. Thank you for your patience and support ????????
ಅಂದಹಾಗೆ, ಎಮರ್ಜೆನ್ಸಿ ಸಿನಿಮಾ ಜೂನ್‌ನಲ್ಲಿಯೇ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಸದ್ಯದಲ್ಲೇ ಹೊಸ ರಿಲೀಸ್ ಡೇಟ್ ಘೋಷಣೆ ಮಾಡುತ್ತೇವೆ ಎಂದು ನಟಿ ಗುಡ್ ನ್ಯೂಸ್ ನೀಡಿದ್ದಾರೆ.
ಇನ್ನೂ ಇಂದಿರಾ ಗಾಂಧಿ (Indira Gandhi) ಜೀವನ ಆಧರಿಸಿದ ಸಿನಿಮಾ ಇದಾಗಿದೆ. ಕಂಗನಾ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರೇ ನಟಿಸುವುದರ ಜೊತೆ ನಿರ್ದೇಶನ ಮತ್ತು ನಿರ್ಮಾಣ ಕೂಡ ಮಾಡಿದ್ದಾರೆ.
ನವದೆಹಲಿ: ರೈತರ ಪ್ರತಿಭಟನೆ (Farmers Protest) ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ (BJP) ಸಂಸದೆ ಕಂಗನಾ ರಣಾವತ್ (Kangana Ranaut) ಬಹಿರಂಗ ಕ್ಷಮೆ ಕೇಳಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ.
ನಾನು ಬರೀ ನಟಿಯಲ್ಲ. ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ನನ್ನ ಹೇಳಿಕೆಗಳು ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ನನ್ನ ಅಭಿಪ್ರಾಯಗಳು ಮತ್ತು ಮಾತುಗಳಿಂದ ನಾನು ಯಾರನ್ನಾದರೂ ನಿರಾಶೆಗೊಳಿಸಿದ್ದರೆ ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನಾನು ನನ್ನ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ
ಖಾಸಗಿ ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿದ ಅವರು, ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿ. ಆದರೆ ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರವು ಅದನ್ನು ರದ್ದುಗೊಳಿಸಿದೆ. ಈ ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತರಬೇಕು. ರೈತರೇ ವಾಪಸ್ ತರಲು ಒತ್ತಾಯಿಸಬೇಕು. ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ ಎಂದರು.
ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಬಿಜೆಪಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ರಣಾವತ್ ಅವರ ‘ವೈಯಕ್ತಿಕ ಹೇಳಿಕೆ’ ಮತ್ತು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೇ ಈ ಹೇಳಿಕೆಗೆ ಪಕ್ಷದ ಆಂತರಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ
ಲೋಕಸಭೆಯ ಸಂಸದೆ ಕಂಗನಾ ರಣಾವತ್ ಅವರ ಟೀಕೆಗಳನ್ನು ಬಿಜೆಪಿ ಖಂಡಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ರೈತರ ಪ್ರತಿಭಟನೆಯ ಕುರಿತು ಕಂಗನಾ ರಣಾವತ್ ಅವರ ಹೇಳಿಕೆಯಿಂದ ಪಕ್ಷವು ದೂರವಿತ್ತು ಮತ್ತು ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ಸಂಯಮದಿಂದ ವರ್ತಿಸುವಂತೆ ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಬಿಜೆಪಿ ಅನೈತಿಕ ರಾಜಕೀಯ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೇಜ್ರಿವಾಲ್ ಐದು ಪ್ರಶ್ನೆ