Tag: Kangana ranautt

  • ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ

    ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ

    ಮುಂಬೈ:  ದುಃಖ, ನಾಚಿಕೆಗೇಡು, ಸಂಪೂರ್ಣವಾಗಿ ಅನ್ಯಾಯ. ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದ್ದರೆ ಸರ್ಕಾರ ಯಾಕಿರಬೇಕು. ಆಗ ಇದು ಕೂಡ ಜಿಹಾದಿ ರಾಷ್ಟ್ರವಾಗಿದೆ. ಈ ರೀತಿ ಬಯಸಿದ ಎಲ್ಲರಿಗೂ ಅಭಿನಂದನೆಗಳು. ”ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಂಗನಾ ಸ್ಟೋರಿ ಪಬ್ಲಿಶ್‌ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದಿರಾಗಾಂಧಿಯ ಫೋಟೋ ಹಾಕಿ ರಾಷ್ಟ್ರದ ಆತ್ಮಸಾಕ್ಷಿಯು ಆಳವಾದ ನಿದ್ರೆಯಲ್ಲಿರುವಾಗ, ಲಾಠಿ ಒಂದೇ ಪರಿಹಾರ ಮತ್ತು ಸರ್ವಾಧಿಕಾರ ಒಂದೇ ಪರಿಹಾರ. ಜನ್ಮದಿನದ ಶುಭಾಶಯಗಳು ಮೇಡಂ ಪ್ರಧಾನ ಮಂತ್ರಿ ಎಂದು ಬರೆದುಕೊಂಡಿದ್ದಾರೆ.

    ಗುರುನಾನಕ್ ಜಯಂತಿಯ ವಿಶೇಷ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ರೈತರ ಬೃಹತ್ ಪ್ರತಿಭಟನೆಗೆ ಕಾರಣವಾದ ಮೂರು ಹೊಸ ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

    ಮೋದಿ ಅವರ ಹೇಳಿಕೆ ನಂತರ ಅನೇಕ ರಾಜಕಾರಣಿಗಳು ಮತ್ತು ಸಾರ್ವಜನಿಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದೆ. ಈ ನಡುವೆ ನಟಿ ಕಂಗನಾ ರಣಾವತ್, ನಟ ಸೋನು ಸೂದ್, ತಾಪ್ಸಿ ಪನ್ನು ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡ ತಮ್ಮ ಅಭಿಪ್ರಾಯಗಳನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದರೆ ಮತ್ತೆ ಕೆಲವರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುದ್ದಾದ ಫೋಟೋ ಶೇರ್ ಮಾಡಿದ ನಟಿ

    ಈ ಕುರಿತಂತೆ ನಟಿ ಕಂಗನಾ ರಣಾವತ್ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ದುಃಖಕರ, ನಾಚಿಕೆಗೇಡಿತನ ಮತ್ತು ಸಂಪೂರ್ಣ ಅನ್ಯಾಯ. ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದ್ದರೆ ಸರ್ಕಾರ ಯಾಕಿರಬೇಕು ಎಂದು ಪ್ರಶ್ನಿಸಿದ್ದಾರೆ.

    ಮತ್ತೊಂದೆಡೆ ನಟ ಸೋನು ಸೂದ್ ಅವರು, ಇದೊಂದು ಅದ್ಭುತವಾದಂತಹ ಸುದ್ದಿ. ಕೃಷಿ ಕಾನೂನುಗಳನ್ನು ಹಿಂಪಡೆದಿದ್ದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಶಾಂತಿಯುತ ಪ್ರತಿಭಟನೆಗಳ ಮೂಲಕ ನ್ಯಾಯಯುತ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಿದ್ದ ರೈತರಿಗೆ ಅಭಿನಂದನೆಗಳು. ಗುರುನಾನಕ್ ಜಯಂತಿಯ ಈ ದಿನದಂದು ನೀವು ನಿಮ್ಮ ಕುಟುಂಬದವರೊಂದಿಗೆ ಸಂತಸದಿಂದ ಹಿಂದಿರುಗುತ್ತೀರಿ ಎಂದು ಭಾವಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೆಂಪು ಬಣ್ಣದ ಸೀರೆಯುಟ್ಟು, ಮಲ್ಲಿಗೆ ಮುಡಿದ ಆಶಿಕಾ

    ಕೃಷಿ ಕಾನೂನುಗಳನ್ನು ಹಿಂಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಕುರಿತಂತೆ ನಟಿ ತಾಪ್ಸಿ ಪನ್ನು ಅವರು ಕೂಡ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.