Tag: Kanguva

  • ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸೂರ್ಯ, ಜ್ಯೋತಿಕಾ ದಂಪತಿ

    ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸೂರ್ಯ, ಜ್ಯೋತಿಕಾ ದಂಪತಿ

    ಕೊಲ್ಲೂರು ಮೂಕಾಂಬಿಕೆ (Kollur Mookambika Temple) ಸನ್ನಿಧಿಗೆ ಕಾಲಿವುಡ್ (Kollywood) ಕ್ಯೂಟ್ ಜೋಡಿ ಸೂರ್ಯ (Suriya) ಹಾಗೂ ಜ್ಯೋತಿಕಾ (Jyothika) ಆಗಮಿಸಿದ್ದಾರೆ. ತಮಿಳು ಸಿನಿಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ:BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್

    ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

    ಅಂದಹಾಗೆ, ಸೂರ್ಯ ನಟನೆಯ ‘ಕಂಗುವ’ (Kanguva) ಸಿನಿಮಾ ನ.14ರಂದು ರಿಲೀಸ್ ಆಗಿತ್ತು. ಸೂರ್ಯ ನಟನೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆದರೆ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

  • ಸೂರ್ಯ ನಟನೆಯ ‘ಕಂಗುವ’ ಚಿತ್ರದ ರೊಮ್ಯಾಂಟಿಕ್‌ ಸಾಂಗ್‌ ಔಟ್‌

    ಸೂರ್ಯ ನಟನೆಯ ‘ಕಂಗುವ’ ಚಿತ್ರದ ರೊಮ್ಯಾಂಟಿಕ್‌ ಸಾಂಗ್‌ ಔಟ್‌

    ಮಿಳಿನ ಸ್ಟಾರ್ ನಟ ಸೂರ್ಯ (Suriya) ನಟನೆಯ ಬಹುನಿರೀಕ್ಷಿತ ‘ಕಂಗುವ’ (Kanguva) ಸಿನಿಮಾ ರಿಲೀಸ್ ಸಜ್ಜಾಗಿದೆ. ಇದೀಗ ಸೂರ್ಯ ಮತ್ತು ದಿಶಾ (Disha Patani) ಕಾಣಿಸಿಕೊಂಡಿರುವ ರೊಮ್ಯಾಂಟಿಕ್ ಸಾಂಗ್‌ವೊಂದು ಚಿತ್ರತಂಡ ರಿಲೀಸ್ ಮಾಡಿದೆ. ಸಾಂಗ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವಿವ್ಸ್ ಪಡೆದಿದೆ.

    ಮೊದಲ ಬಾರಿಗೆ ಸೂರ್ಯ ಮತ್ತು ದಿಶಾ ಜೊತೆಯಾಗಿ ನಟಿಸುತ್ತಿದ್ದಾರೆ. ಸದ್ಯ ಚಿತ್ರದ ‘ಯೋಲೋ’ (Yolo) ಎಂಬ ಚೆಂದದ ಸಾಂಗ್ ಅನ್ನು ರಿಲೀಸ್ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಹಾಡಿನಲ್ಲಿ ಸೂರ್ಯ ಮತ್ತು ದಿಶಾ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್‌ಗೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ:ಅಜ್ಜಿಯ ನೆನೆದು ಭಾವನಾತ್ಮಕ ಪತ್ರ ಬರೆದ ಸುದೀಪ್ ಪುತ್ರಿ

    ಈ ಸಿನಿಮಾವು ಬಹುಭಾಷೆಗಳಲ್ಲಿ ನವೆಂಬರ್ 14ರಂದು ರಿಲೀಸ್ ಆಗುತ್ತಿದೆ. ಸೂರ್ಯ ಜೊತೆ ದಿಶಾ ಮತ್ತು ಬಾಬಿ ಡಿಯೋಲ್ (Bobby Deol), ಜಗಪತಿ ಬಾಬು ನಟಿಸಿದ್ದಾರೆ.

  • ‘ವೆಟ್ಟೈಯಾನ್‌’ಗೆ ಪೈಪೋಟಿ ಕೊಡಲ್ಲ- ‘ಕಂಗುವ’ ಪೋಸ್ಟ್‌ಪೋನ್..!

    ‘ವೆಟ್ಟೈಯಾನ್‌’ಗೆ ಪೈಪೋಟಿ ಕೊಡಲ್ಲ- ‘ಕಂಗುವ’ ಪೋಸ್ಟ್‌ಪೋನ್..!

    ಸರಾ ಹಬ್ಬ ಧಾಮ್‌ಧೂಮ್ ಮಾಡೋಕೆ ಸಾಲು ಸಾಲು ಸಿನಿಮಾಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿವೆ. ರಜನಿಕಾಂತ್ ನಟನೆಯ ವೆಟ್ಟೈಯಾನ್‌ ಸಿನಿಮಾ ಇದೇ ಅಕ್ಟೋಬರ್ 10ಕ್ಕೆ ತೆರೆಗೆ ಬರುತ್ತಿದೆ. ಇನ್ನು ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಅಕ್ಟೋಬರ್‌ನಲ್ಲಿ ಬೆಳ್ಳಿತೆರೆ ಮೇಲೆ ಕಮಾಲ್ ಮಾಡೋಕೆ ಸಿದ್ಧವಾಗಿತ್ತು. ಆದ್ರೆ ರಜನಿಕಾಂತ್ ಸಿನಿಮಾ ಹಾಗೂ ‘ಕಂಗುವ’ ಸಿನಿಮಾ ಒಂದೇ ಟೈಮಿಗೆ ಬರೋದ್ರಿಂದ ಡೇಟ್ ಕ್ಲ್ಯಾಶ್ ಆಗುತ್ತೆ ಎನ್ನುವ ಕಾರಣದಿಂದ ‘ಕಂಗುವ’ (Kanguva) ಸಿನಿಮಾತಂಡ ಡೇಟ್ ಪೋಸ್ಟ್‌ಪೋನ್ ಮಾಡಿದೆ.

    ಒಂದು ಕಡೆ ರಜನಿಕಾಂತ್ ನಟನೆಯ ಹೈವೋಲ್ಟೇಜ್ ಸಿನಿಮಾ ‘ವೆಟ್ಟೈಯಾನ್‌’ (Vettaiyan), ಮತ್ತೊಂದು ಕಡೆ ಸೂರ್ಯ ನಟನೆಯ ವೆರಿ ಡಿಫರೆಂಟ್ ಸಿನಿಮಾ ‘ಕಂಗುವ’. ಈ ಎರಡೂ ಸಿನಿಮಾ ದಸರಾ ಹಬ್ಬಕ್ಕೆ ಭಕ್ತಗಣಕ್ಕೆ ಹೋಳಿಗೆ ಊಟ ಹಾಕೋಕೆ ರೆಡಿಯಾಗಿದ್ದವು. ಸ್ಟಾರ್ ನಟರ ಸಿನಿಮಾಗಳು ಎಂದಾಗ ಕೊಂಚ ಗ್ಯಾಪ್ ಇದ್ರೆ ಚೆನ್ನಾಗಿರುತ್ತೆ. ಇಷ್ಟು ದಿನ ಕಾದಿದ್ದಕ್ಕೂ ಅಭಿಮಾನಿಗಳು ಸಮಾಧಾನದಿಂದ ಸಿನಿಮಾ ನೋಡೋಕಾಗುತ್ತೆ ಅನ್ನೋ ಆಲೋಚನೆಯಿಂದ `ಕಂಗುವ’ ಚಿತ್ರತಂಡ ರಿಲೀಸ್ ದಿನಾಂಕವನ್ನ ಮುಂದೂಡಿದೆ.

    ಅಂದಹಾಗೆ `ಕಂಗುವ’ ಸಿನಿಮಾ ನವೆಂಬರ್ 14ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ. ಈ ಸಿನಿಮಾದಲ್ಲಿ ಸೂರ್ಯಗೆ ಖಡಕ್ ವಿಲನ್ ಆಗಿ ಬಾಲಿವುಡ್ ನಟ ಬಾಬಿ ಡಿಯೋಲ್ ಪೈಪೋಟಿಗಿಳಿದಿದ್ದಾರೆ. ಇನ್ನುಳಿದಂತೆ `ಕಂಗುವ’ ಚಿತ್ರದಲ್ಲಿ ಜಗಪತಿ ಬಾಬು, ದಿಶಾ ಪಟಾನಿ, ಕಿಚ್ಚ ಸುದೀಪ್ ಸೇರಿದಂತೆ ಅತೀದೊಡ್ಡ ತಾರಾಗಣವಿದೆ.ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

    ‘ಕಂಗುವ’ ಸಿನಿಮಾಗೆ ಶಿವ ನಿರ್ದೇಶನ ಮಾಡಿದ್ದು, ಸ್ಟುಡಿಯೋ ಗ್ರೀನ್ ಹಾಗೂ ಯುವಿ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿದೆ. ಈಗಾಗ್ಲೇ ಟ್ರೈಲರ್ ಮೂಲಕವೇ ‘ಕಂಗುವ’ ಹಾಗೂ ‘ವೆಟ್ಟೈಯಾನ್‌’ ಸಿನಿಮಾ ಗಮನ ಸೆಳೆದಿವೆ.

  • ಸ್ಟಾರ್ ಸಹೋದರರ ಜಟಾಪಟಿ- ‘ಕಂಗುವ’ ಸೂರ್ಯಗೆ ವಿಲನ್ ಆದ ಕಾರ್ತಿ

    ಸ್ಟಾರ್ ಸಹೋದರರ ಜಟಾಪಟಿ- ‘ಕಂಗುವ’ ಸೂರ್ಯಗೆ ವಿಲನ್ ಆದ ಕಾರ್ತಿ

    ಮಿಳಿನ ಸ್ಟಾರ್ ಸಹೋದರರಾದ ಸೂರ್ಯ (Suriya) ಮತ್ತು ಕಾರ್ತಿ (Karthi) ಇದೀಗ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಒಂದೇ ಸಿನಿಮಾದಲ್ಲಿ ಇಬ್ಬರು ಎದುರಾಳಿಗಳಾಗುತ್ತಿದ್ದಾರೆ. ‘ಕಂಗುವ’ (Kanguva Film) ಚಿತ್ರಕ್ಕೆ ಕಾರ್ತಿ ಎಂಟ್ರಿ ಕೊಟ್ಟಿದ್ದಾರೆ.

    ಬಹುಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಕಂಗುವ’ ಸಿನಿಮಾದಲ್ಲಿ ಭಿನ್ನ ಪಾತ್ರದಲ್ಲಿ ಸೂರ್ಯ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಣ್ಣ ಸೂರ್ಯನ ಮುಂದೆ ಕಾರ್ತಿ ವಿಲನ್ ಆಗಿ ಘರ್ಜಿಸಲಿದ್ದಾರೆ. ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ. ಇದನ್ನೂ ಓದಿ:‘ನೈಸ್ ರೋಡ್’ ಸಿನಿಮಾಗೆ ಕಂಟಕ- ಚಿತ್ರತಂಡಕ್ಕೆ ಬಂತು ನೋಟಿಸ್

    ಇದು ಒಂದೇ ಅಲ್ಲ, ಇದರ ಜೊತೆ ಮತ್ತೊಂದು ಸಿನಿಮಾದ ಮಾತುಕತೆ ಕೂಡ ಆಗಿದೆ. ಅದರಲ್ಲಿ ಕಾರ್ತಿಗೆ ಸೂರ್ಯ ವಿಲನ್ ಆಗಲಿದ್ದಾರೆ ಎನ್ನಲಾಗಿದೆ. ಸದ್ಯ ಈ ಸುದ್ದಿ ತಿಳಿದು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ‘ಕಂಗುವ’ ಚಿತ್ರವನ್ನು ಶಿವ ನಿರ್ದೇಶನ ಮಾಡಿದ್ದಾರೆ. ಸೂರ್ಯಗೆ ನಾಯಕಿಯಾಗಿ ದಿಶಾ ಪಟಾನಿ ನಟಿಸಿದ್ದಾರೆ. ಬಾಬಿ ಡಿಯೋಲ್ ಈ ಸಿನಿಮಾದ ಭಾಗವಾಗಿದ್ದಾರೆ. ಅಕ್ಟೋಬರ್ 10ರಂದು ಸಿನಿಮಾ ರಿಲೀಸ್ ಆಗಲಿದೆ.

  • ‘ಕಂಗುವ’ ಚಿತ್ರದ ದೃಶ್ಯವೊಂದರಲ್ಲಿ ಹತ್ತು ಸಾವಿರ ಜನ ಜ್ಯೂನಿಯರ್ಸ್

    ‘ಕಂಗುವ’ ಚಿತ್ರದ ದೃಶ್ಯವೊಂದರಲ್ಲಿ ಹತ್ತು ಸಾವಿರ ಜನ ಜ್ಯೂನಿಯರ್ಸ್

    ಮಿಳಿನ ಸ್ಟಾರ್ ನಟ ಸೂರ್ಯ (Suriya) ಸೂರರೈ ಪೊಟ್ರು, ಜೈ ಭೀಮ್ ಸಿನಿಮಾಗಳ ಸಕ್ಸಸ್ ನಂತರ ಈಗ ‘ಕಂಗುವ’ (Kanguva) ಸಿನಿಮಾದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಸಿನಿಮಾದ ದೃಶ್ಯವೊಂದಕ್ಕೆ ಹತ್ತು ಸಾವಿರ ಜನ ಜ್ಯೂನಿಯರ್ಸ್ ಬಳಕೆಯಾಗಿದ್ದಾರಂತೆ. ಈ ದೃಶ್ಯದಲ್ಲಿ ಬಾಬಿ ಡಿಯೋಲ್ (Bobby Deol)  ಮತ್ತು ಸೂರ್ಯ ಎದುರಾಗಿದ್ದಾರೆ. ಇದೊಂದು ಹೊಡೆದಾಟದ ಸನ್ನಿವೇಶವಂತೆ.

    ಇದೊಂದು ಸಾಹಸ ಪ್ರಧಾನ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಡಬಲ್ ರೋಲ್‌ನಲ್ಲಿ ನಟಿಸಿರುವ ಬಗ್ಗೆ ಸೂರ್ಯ ಬಿಗ್ ಅಪ್‌ಡೇಟ್‌ವೊಂದನ್ನು ನೀಡಿದ್ದಾರೆ. ಅದರ ಪೋಸ್ಟರ್ ಕೂಡ ನಟ ಹಂಚಿಕೊಂಡಿದ್ದಾರೆ.

    ಇದೀಗ ‘ಕಂಗುವ’ ಸಿನಿಮಾದಲ್ಲಿ ಡಿಫರೆಂಟ್ ಲುಕ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ. ಎರಡು ತದ್ವಿರುದ್ಧ ಪಾತ್ರಕ್ಕೆ ಜೀವ ತುಂಬಿದ್ದಾರೆ. ಒಂದರಲ್ಲಿ ಪುರಾತನ ಕಾಲದ ವ್ಯಕ್ತಿಯಂತೆ ಕಾಣಿಸಿಕೊಂಡಿದ್ದರೆ, ಇನ್ನೊಂದರಲ್ಲಿ ಗನ್ ಹಿಡಿದು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಎರಡರಲ್ಲಿ ಒಂದು ಪಾತ್ರಕ್ಕೆ ನೆಗೆಟಿವ್ ಶೇಡ್ ಇದ್ಯಾ ಎಂದು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಚಿತ್ರದ ಪೋಸ್ಟರ್‌ ಮೆಚ್ಚುಗೆಯ ಜೊತೆ ಚರ್ಚೆ ಕೂಡ ಶುರುವಾಗಿದೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ಈ ಸಿನಿಮಾದಲ್ಲಿ ಸೂರ್ಯಗೆ ನಾಯಕಿಯಾಗಿ ದಿಶಾ ಪಟಾನಿ (Disha Patani) ನಟಿಸಿದ್ದಾರೆ. ‘ಅನಿಮಲ್’ (Animal) ಚಿತ್ರದ ವಿಲನ್ ಬಾಬಿ ಡಿಯೋಲ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. 10 ಭಾಷೆಗಳಲ್ಲಿ ಈ ವರ್ಷ ಸಿನಿಮಾ ರಿಲೀಸ್ ಆಗುವ ಬಗ್ಗೆ ಸೂರ್ಯ ಮಾಹಿತಿ ನೀಡಿದ್ದಾರೆ. ಆದರೆ ಎಂಬುದು ನಿಗದಿ ಪಡಿಸಿಲ್ಲ. ಈ ಚಿತ್ರ 3D ವರ್ಷನ್‌ನಲ್ಲಿಯೂ ಕೂಡ ರಿಲೀಸ್ ಆಗುತ್ತಿದೆ.

  • ‘ಕಂಗುವಾ’ ಚಿತ್ರದ ಬಜೆಟ್ ಕೇಳಿ ಬೆಚ್ಚಿದ ಕಾಲಿವುಡ್

    ‘ಕಂಗುವಾ’ ಚಿತ್ರದ ಬಜೆಟ್ ಕೇಳಿ ಬೆಚ್ಚಿದ ಕಾಲಿವುಡ್

    ಮಿಳಿನ ಸ್ಟಾರ್ ನಟ ಸೂರ್ಯ (Suriya) ಸೂರರೈ ಪೊಟ್ರು, ಜೈ ಭೀಮ್ ಸಿನಿಮಾಗಳ ಸಕ್ಸಸ್ ನಂತರ ಈಗ ‘ಕಂಗುವ’ ಸಿನಿಮಾದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಸಿನಿಮಾದ ಬಜೆಟ್ ಬಗ್ಗೆ ತಮಿಳು ಸಿನಿಮಾ ರಂಗದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಈ ಸಿನಿಮಾಗಾಗಿ ನಿರ್ಮಾಪಕರು ಬರೋಬ್ಬರಿ 300 ಕೋಟಿ ರೂಪಾಯಿಗೂ ಅಧಿಕ ವೆಚ್ಚ ಮಾಡಿದ್ದಾರೆ ಎನ್ನಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಅದ್ದೂರಿಯಾಗಿ ಈ ಸಿನಿಮಾ ಮೂಡಿ ಬಂದಿದ್ದು, ಒಂದು ಕಡೆಯಾದರೆ,  ಈ ಚಿತ್ರದಲ್ಲಿ ಡಬಲ್ ರೋಲ್‌ನಲ್ಲಿ ನಟಿಸಿದ್ದಾರಂತೆ ಸೂರ್ಯ. ಅದರ ಪೋಸ್ಟರ್ ಕೂಡ ನಟ ಹಂಚಿಕೊಂಡಿದ್ದಾರೆ.

    ಇದೀಗ ‘ಕಂಗುವ’ ಸಿನಿಮಾದಲ್ಲಿ ಡಿಫರೆಂಟ್ ಲುಕ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ. ಎರಡು ತದ್ವಿರುದ್ಧ ಪಾತ್ರಕ್ಕೆ ಜೀವ ತುಂಬಿದ್ದಾರಂತೆ. ಒಂದರಲ್ಲಿ ಪುರಾತನ ಕಾಲದ ವ್ಯಕ್ತಿಯಂತೆ ಕಾಣಿಸಿಕೊಂಡಿದ್ದರೆ, ಇನ್ನೊಂದರಲ್ಲಿ ಗನ್ ಹಿಡಿದು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಎರಡರಲ್ಲಿ ಒಂದು ಪಾತ್ರಕ್ಕೆ ನೆಗೆಟಿವ್ ಶೇಡ್ ಇದ್ಯಾ ಎಂದು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಚಿತ್ರದ ಪೋಸ್ಟರ್‌ ಮೆಚ್ಚುಗೆಯ ಜೊತೆ ಚರ್ಚೆ ಕೂಡ ಶುರುವಾಗಿದೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ಈ ಸಿನಿಮಾದಲ್ಲಿ ಸೂರ್ಯಗೆ (Suriya) ನಾಯಕಿಯಾಗಿ ದಿಶಾ ಪಟಾನಿ (Disha Patani) ನಟಿಸಿದ್ದಾರೆ. ‘ಅನಿಮಲ್’ (Animal) ಚಿತ್ರದ ವಿಲನ್ ಬಾಬಿ ಡಿಯೋಲ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. 10 ಭಾಷೆಗಳಲ್ಲಿ ಈ ವರ್ಷ ಸಿನಿಮಾ ರಿಲೀಸ್ ಆಗುವ ಬಗ್ಗೆ ಸೂರ್ಯ ಮಾಹಿತಿ ನೀಡಿದ್ದಾರೆ. ಆದರೆ ಎಂಬುದು ನಿಗದಿ ಪಡಿಸಿಲ್ಲ. ಈ ಚಿತ್ರ 3D ವರ್ಷನ್‌ನಲ್ಲಿಯೂ ಕೂಡ ರಿಲೀಸ್ ಆಗುತ್ತಿದೆ.

  • ನಟ ಸೂರ್ಯ ಅಭಿಮಾನಿಗಳಿಗೆ ‘ಕಂಗುವ’ ಟೀಸರ್ ಬಾಡೂಟ

    ನಟ ಸೂರ್ಯ ಅಭಿಮಾನಿಗಳಿಗೆ ‘ಕಂಗುವ’ ಟೀಸರ್ ಬಾಡೂಟ

    ಟ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾದ ಟೀಸರ್ (Teaser) ಬಿಡುಗಡೆ ಆಗಿದೆ. ಅದ್ಧೂರಿ ತನದ ಮೇಕಿಂಗ್, ಕಲಾವಿದ ಆರ್ಭಟ. ದೃಶ್ಯ ವೈಭವ ಹಾಗೂ ಹಿನ್ನೆಲೆ ಸಂಗೀತದಿಂದಾಗಿ ಟೀಸರ್ ಮತ್ತೊಮ್ಮೆ ನೋಡಬೇಕು ಅನಿಸುತ್ತಿದೆ. ಹೊಡೆದಾಟ, ರಕ್ತದೋಕುಳಿ, ಹೊಸ ಬಗೆಯ ಆಯುಧ, ರಾಕ್ಷಸರು ಹೀಗೆ ನಾನಾ ರೀತಿಯ ದೃಶ್ಯಗಳನ್ನು ಜೋಡಿಸಿಕೊಂಡು ಈ ಟೀಸರ್ ಕಟ್ಟಲಾಗಿದೆ. ಟೀಸರ್ ಕುರಿತಂತೆ ಅಕ್ಷರಗಳಲ್ಲಿ ಓದುವುದಕ್ಕಿಂತ ನೋಡುವುದೇ ಒಂದು ಅನುಭವ.

    ಇತ್ತೀಚೆಗಷ್ಟೇ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಸಿನಮಾ ಬಿಡುಗಡೆಗೂ ಮುನ್ನವೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು ಇದೇ ವರ್ಷ ಬಿಡುಗಡೆಯಾಗಲಿದೆ.  ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರೀಕರಣವಾಗಿದೆ.

  • ಬಾಬಿಯ ಉಧೀರನ್ ಲುಕ್ ಗೆ ಫ್ಯಾನ್ಸ್ ಫಿದಾ

    ಬಾಬಿಯ ಉಧೀರನ್ ಲುಕ್ ಗೆ ಫ್ಯಾನ್ಸ್ ಫಿದಾ

    ಬಾಲಿವುಡ್ ನಟ ಬಾಬಿ ಡಿಯೋಲ್ (Bobby Deol) ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟು ಹಬ್ಬಕ್ಕಾಗಿಯೇ ಕಂಗುವ ಚಿತ್ರತಂಡ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದ್ದು, ಬಾಬಿಯ ಉಧೀರನ್ ಲುಕ್ ಕಂಡು ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ. ಪಾತ್ರ ಇನ್ನೂ ಹೇಗೆಲ್ಲ ಇರಲಿದೆ ಎನ್ನುವ ಚರ್ಚೆಯನ್ನೂ ಮಾಡುತ್ತಿದ್ದಾರೆ.

    ಮೊನ್ನೆಯಷ್ಟೇ ಚಿತ್ರದ ನಾಯಕ ಸೂರ್ಯ (Surya) ಅವರ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಕೂಡ ಮಾಡಿತ್ತು. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು 2024ರಲ್ಲಿ ಬಿಡುಗಡೆಯಾಗಲಿದೆ.  ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ಮುಗಿದಿದ್ದು, ಬಾಕಿ ಇರುವ ಚಿತ್ರೀಕರಣವನ್ನು ಬೇಗ ಮುಗಿಸಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

  • ‘ಕಂಗುವ’ ಹೊಸ ಪೋಸ್ಟರ್ ನಲ್ಲಿ ಸೂರ್ಯ ಮತ್ತಷ್ಟು ಮಿಂಚು

    ‘ಕಂಗುವ’ ಹೊಸ ಪೋಸ್ಟರ್ ನಲ್ಲಿ ಸೂರ್ಯ ಮತ್ತಷ್ಟು ಮಿಂಚು

    ಟ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದಾರೆ. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು 2024ರಲ್ಲಿ ಬಿಡುಗಡೆಯಾಗಲಿದೆ.  ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ಮುಗಿದಿದ್ದು, ಬಾಕಿ ಇರುವ ಚಿತ್ರೀಕರಣವನ್ನು ಬೇಗ ಮುಗಿಸಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

  • ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು

    ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು

    ಮಿಳಿನ ಹೆಸರಾಂತ ನಟ ಸೂರ್ಯಗೆ (Surya) ಶೂಟಿಂಗ್ ವೇಳೆ ತೀವ್ರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಂಗುವ ಶೂಟಿಂಗ್ ವೇಳೆ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದ ಕಾರಣದಿಂದಾಗಿ ಏಟು ಬಿದ್ದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವಿಷಯ ಕೇಳುತ್ತಿದ್ದಂತೆಯೇ ಸೂರ್ಯನ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು.

    ಈ ಕುರಿತಂತೆ ಸ್ವತಃ ಸೂರ್ಯ ಅವರೇ ಸೋಷಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಚೇತರಿಸಿಕೊಳ್ಳುತ್ತಿದ್ದೇನೆ. ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

    ಈ ನಡುವೆ ‘ಕಂಗುವ’ (Kanguva) ಸಿನಿಮಾ ಟೀಮ್ ನಿಂದ ಭರ್ಜರಿ ಅಪ್ ಡೇಟ್ ಸಿಕ್ಕಿದೆ. ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.