Tag: Kannad News

  • ಬೊಮ್ಮಾಯಿಗೆ ಮೋದಿ ಅಭಿನಂದನೆ

    ಬೊಮ್ಮಾಯಿಗೆ ಮೋದಿ ಅಭಿನಂದನೆ

    ನವದೆಹಲಿ: ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಬೊಮ್ಮಾಯಿ ಅವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತಂದಿದ್ದಾರೆ.  ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಕಾರ್ಯಗಳನ್ನು ಅವರು ಜಾರಿಗೆ ತರುತ್ತಾರೆ ಎಂಬ ವಿಶ್ವಾಸವಿದೆ. ಅವರ ಅಧಿಕಾರಾವಧಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.

    ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಇಂದೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಕೆಲ ದಿನಗಳಲ್ಲಿ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ : ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್

  • ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಇಡೀ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದ್ದು, ಗಲಭೆಯ ಹಿಂದೆ ಉಗ್ರಗಾಮಿ ಸಂಘಟನೆಯ ಪಾತ್ರವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್‌ ಭೈರಸಂದ್ರದ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಮೀವುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಸಮೀವುದ್ದೀನ್‍ಗೆ ಆಲ್ ಹಿಂದ್ ಭಯೋತ್ಪಾದಕ ಸಂಘಟನೆಯ ನಂಟು ಇರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: 4 ತಿಂಗಳ ಅಂತರದಲ್ಲಿ ಎರಡು ಮಕ್ಕಳು ಹೇಗೆ ಸಾಧ್ಯ – ಪ್ರಥಮ್‌ ವಿರುದ್ಧ ಕೇಸ್‌ ದಾಖಲು

    ಡಿಜೆ ಹಳ್ಳಿ ಗಲಭೆ ವೇಳೆ ಸಮೀವುದ್ದೀನ್ ಸ್ಥಳದಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸಮೀವುದ್ದೀನ್‍ನನ್ನು ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು, ಗಲಭೆ ಹಿಂದೆ ಉಗ್ರಗಾಮಿ ಸಂಘಟನೆ ಆಲ್ ಹಿಂದ್ ಪಾತ್ರವಿದೆಯಾ ಎಂಬ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.

    ಶಿವಾಜಿನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡ ರುದ್ರೇಶ್ ಕೊಲೆ ಆರೋಪಿಗಳ ಜೊತೆಗೂ ಸಮೀವುದ್ದೀನ್‍ಗೆ ನಿಕಟ ನಂಟಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಪಿಗಳು ಉಗ್ರ ಸಂಘಟನೆಗಳ ಜೊತೆಗೂ ಲಿಂಕ್ ಇಟ್ಕೊಂಡಿದ್ದಾರಾ ಅಂತ ಪರಿಶೀಲನೆ ನಡೆಸಲಾಗ್ತಿದೆ. ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಈಗಲೇ ಏನು ಹೇಳಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

    ಏನಿದು ಅಲ್ ಹಿಂದ್?
    ಐಸಿಸ್ ಸಂಘಟನೆಯಿಂದ ಪ್ರೇರಣೆಗೊಂಡು ಸ್ಥಾಪನೆಯಾದ ಸಂಘಟನೆಯೇ ಅಲ್ ಹಿಂದ್. ಉಗ್ರರಾದ ಮೆಹಬೂಬ್ ಪಾಷಾ, ಮೊಯಿದ್ದೀನ್ ಕ್ವಾಜಾ ಈ ಸಂಘಟನೆಯನ್ನು ಸ್ಥಾಪಿಸಿದ್ದು, ದಕ್ಷಿಣ ಭಾರತದಲ್ಲಿ (ಕರ್ನಾಟಕ, ಕೇರಳ) ಸಕ್ರಿಯವಾಗಿದೆ. 200-250 ಉಗ್ರರು ಈ ಸಂಘಟನೆಯಲ್ಲಿ ಇರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದಷ್ಟೇ ಅಲ್ ಹಿಂದ್ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿತ್ತು.

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಉಗ್ರರು ಹರಡಿರುವ ಶಂಕೆ ವ್ಯಕ್ತವಾಗಿದ್ದು, 2019ರಲ್ಲಿ ಬೆಂಗಳೂರಿನ ಗುರಪ್ಪನ ಪಾಳ್ಯದಲ್ಲಿ ನಡೆದಿದ್ದ ಹಲವು ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಹಿಂದೂ ನಾಯಕರ ಹತ್ಯೆಯಲ್ಲಿ ಅಲ್ ಹಿಂದ್ ಪಾತ್ರವಿದೆ. ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಲ್ ಹಿಂದ್‍ನ ಉಗ್ರ ಶಿವಮೊಗ್ಗದ ಅಬ್ದುಲ್ ಮತೀನ್ ಬಗ್ಗೆ ಮಾಹಿತಿ ನೀಡಿದರೆ 3 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ತೀರ್ಥಹಳ್ಳಿ ಉಗ್ರನ ಪತ್ತೆ ಮಾಡ್ಕೊಟ್ಟರೆ 3 ಲಕ್ಷ ಬಹುಮಾನ- ಎನ್‍ಐಎ ಘೋಷಣೆ

  • ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿ ಈಗ ಕಣ್ಣೀರು ಹಾಕ್ಬೇಡಿ – ಬೇಗ್‌ ವಿರುದ್ಧ ಜಮೀರ್‌ ಕಿಡಿ

    ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿ ಈಗ ಕಣ್ಣೀರು ಹಾಕ್ಬೇಡಿ – ಬೇಗ್‌ ವಿರುದ್ಧ ಜಮೀರ್‌ ಕಿಡಿ

    ಬೆಂಗಳೂರು: ದೇವರಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಈಗ ಮುಸ್ಲಿಮ್‌ ರಾಜಕೀಯ ನಾಯಕರಾದ ಜಮೀರ್‌ ಮತ್ತು ರೋಷನ್‌ ಬೇಗ್‌ ಮಧ್ಯೆ ಕಿತ್ತಾಟ ಆರಂಭಗೊಂಡಿದೆ.

    ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ಇಂದು 5 ಟ್ವೀಟ್‌ ಮಾಡಿ ರೋಷನ್‌ ಬೇಗ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್‌ ಬೇಗ್‌ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ.

    ಶಿವಾಜಿನಗರದಲ್ಲಿ ಬೇಗ್ ಅವರು ಸ್ಪರ್ಧಿಸುತ್ತಿದ್ದಾಗ ಎಂದೂ ಸ್ಪರ್ಧಿಸದಿದ್ದ ಎಸ್‌ಡಿಪಿಐ ಇತ್ತೀಚಿನ ಶಿವಾಜಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿದದ್ದು ಯಾಕೆ? ಕಾಂಗ್ರೆಸ್ ಬೆಂಬಲಿಸುವ ಮುಸ್ಲಿಮ್‌ ಮತಗಳನ್ನು ವಿಭಜಿಸುವ ದುರುದ್ದೇಶದಿಂದ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು ಎನ್ನುವುದನ್ನು ಬೇಗ್ ಸಾಹೇಬರು ತಿಳಿಸಬೇಕು.

    ಡಿಜೆಹಳ್ಳಿ ಗಲಭೆ ಬಗ್ಗೆ ಇಲ್ಲಿಯ ವರೆಗೆ ಮೌನವಹಿಸಿದ್ದ ರೋಷನ್‌ಬೇಗ್‌ ಅವರು ಇದ್ದಕ್ಕಿದ್ದ ಹಾಗೆ ಎಸ್‌ಡಿಪಿಐ ಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನ ಪಡುತ್ತಿರುವುದು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದನ್ನು ಕಂಡಾಗ ಪೊಲೀಸರ ತನಿಖೆಯ ಸುಳಿವು ಅವರಿಗೆ ಸಿಕ್ಕ ಹಾಗೆ ಕಾಣುತ್ತಿದೆ. ಇದನ್ನೂ ಓದಿ: ಬೆಂಗಳೂರು ಪುಂಡರ ಮೇಲೆ ಗೂಂಡಾ ಕಾಯ್ದೆ ಪ್ರಯೋಗ – ಈ ಕಾಯ್ದೆಯ ವಿಶೇಷತೆ ಏನು?

    ಪ್ರವಾದಿಯವರನ್ನು ಅವಹೇಳನ ಮಾಡಿರುವ ನವೀನ್ ಎಂಬ ಆರೋಪಿಯ ಕುಕೃತ್ಯವನ್ನು ಕನಿಷ್ಠ ಖಂಡಿಸುವ ಧೈರ್ಯ ತೋರದ ರೋಷನ್‌ ಬೇಗ್‌ ಅವರು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಸಂಬಂಧದ ಕತೆ ಹೆಣೆಯುತ್ತಿರುವುದು ಅವರ ಆತ್ಮವಂಚಕ ನಡವಳಿಕೆಗೆ ಸರಿಯಾಗಿ ಹೊಂದಿಕೊಳ್ಳುತ್ತಿದೆ.

    ಮಾನ್ಯ ರೋಷನ್‌ ಬೇಗ್‌ ಅವರೇ, ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ, ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ.

  • ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.

    ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಇರ್ಷಾದ್‌ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್‌ ಜೊತೆ ಸುತ್ತಾಡಿದ್ದಾನೆ.

    ಅಷ್ಟೇ ಅಲ್ಲದೇ ಆರೋಪಿ ಜಾರ್ಜ್‌ ಹೊತೆ ಪೊಲೀಸ್‌ ಠಾಣೆಗೆ ಬಂದಿದ್ದಾನೆ. ಠಾಣೆಗೆ ಬಂದಿದ್ದರೂ ಪೊಲೀಸರು ಆತನನ್ನು ಬಂಧಿಸಿಲ್ಲ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಲೀಂ ಪಾಷಾ, ನಾನು ಗಲಭೆಯಲ್ಲಿ ಭಾಗಿಯಾಗಿಲ್ಲ. ನನ್ನ ವಿರುದ್ಧ ಎಫ್‌ಐಆರ್‌ ಆಗಿರುವುದು ನನಗೆ ಗೊತ್ತಿಲ್ಲ. ಪೊಲೀಸರು ಬಂದಾಗ ನಾನು ಮನೆಗೆ ಬೀಗ ಹಾಕಿರಲಿಲ್ಲ. ಹೆಂಡತಿ ಮನೆಯಲ್ಲಿ ಇದ್ದೆ ಅದಕ್ಕೆ ಪೊಲೀಸರು ತಪ್ಪು ತಿಳಿದುಕೊಂಡಿದ್ದಾರೆ. ನನಗೂ ಗಲಭೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾನೆ.

  • ಇಂದು ರಾತ್ರಿ 8 ಗಂಟೆಗೆ ಮೋದಿ ಭಾಷಣ

    ಇಂದು ರಾತ್ರಿ 8 ಗಂಟೆಗೆ ಮೋದಿ ಭಾಷಣ

    ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶವನ್ನು ಉದ್ದೇಶಿಸಿ ಮಾತನಡಲಿದ್ದಾರೆ.

    ಪ್ರಧಾನಿ ಮೋದಿ ಕಳೆದ ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿ, ಭಾನುವಾರ ಕೊರೊನಾ ನಿಯಂತ್ರಣಕ್ಕೆ ಜನತಾ ಕರ್ಫ್ಯೂ ಪಾಲನೆ ಮಾಡಬೇಕು. ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಎಲ್ಲರೂ ಮನೆಯಲ್ಲೇ ಇರಬೇಕು ಎಂದು ಕೇಳಿಕೊಂಡಿದ್ದರು. ಈ ಮನವಿ ಯಶಸ್ವಿಯಾಗಿತ್ತು.

    ಈಗ ದೇಶವ್ಯಾಪಿ ಮಾರ್ಚ್ 31ರವರೆಗೆ ಲಾಕ್‍ಡೌನ್ ಆಗಿರುವ ಕಾರಣ ಈ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.