Tag: Kannada Books

  • ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

    ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

    ರ್ನಾಟಕದಲ್ಲಿ ಕಮಲ್ ಹಾಸನ್ (Kamal Haasan) ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ `ಕನ್ನಡತಿ’ (Kannadathi) ಧಾರವಾಹಿ ಖ್ಯಾತಿಯ ರಂಜನಿ ರಾಘವನ್ (Ranjani Raghavan), ಕಮಲ್ ಹಾಸನ್ ಅವರಿಗೆ ತಾವು ಬರೆದ ಕನ್ನಡದ ಪುಸ್ತಕವನ್ನು ನೀಡಿರುವ ಪೋಸ್ಟ್ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

    ಇದೀಗ ರಂಜನಿ ರಾಘವನ್ ತಮ್ಮ ಖಾತೆಯಲ್ಲಿ ಕಮಲ್ ಸರ್‌ಗೆ `ಕನ್ನಡ’ ಪುಸ್ತಕ ಎಂದು ಬರೆದುಕೊಂಡು ಕಮಲ್ ಹಾಸನ್ ಅವರಿಗೆ ತಾವು ಬರೆದಿರುವ `ಸ್ಟೈಲ್‌ ರೈಟ್’ ಮತ್ತು `ಕಥೆ ಡಬ್ಬಿ’ ಎಂಬ ಪುಸ್ತಕಗಳನ್ನು ನೀಡಿದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!

    ಆದರೆ ಅವರು ಈ ಪುಸ್ತಕವನ್ನು ಯಾವಾಗ ನೀಡಿದ್ದಾರೆ ಎಂಬುದರ ಬಗ್ಗೆ ಉಲ್ಲೇಖಿಸಿಲ್ಲ. ಕನ್ನಡ ಮೇಷ್ಟ್ರಮ್ಮ ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜೈ ಕನ್ನಡಾಂಬೆ, ಕಮಲ್‌ಗೆ ಕನ್ನಡ ಪಾಠ ಕಲಿಸಿದ ಕನ್ನಡತಿ ಎಂಬೆಲ್ಲಾ ಕಾಮೆಂಟ್ ಸುರಿಮಳೆಗಳನ್ನೇ ಹರಿಸಿದ್ದಾರೆ. ಇದನ್ನೂ ಓದಿ: ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

    ರಂಜನಿ ರಾಘವನ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ ಧಾರವಾಹಿಯಲ್ಲಿ ಕನ್ನಡ ಉಪನ್ಯಾಸಕಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನದಲ್ಲಿ ಕನ್ನಡದ ಮೇಷ್ಟ್ರಾಗಿ ಅಚ್ಚೆ ಹಾಕಿದ್ದರು. ಈ ಧಾರವಾಹಿಯ ಬಳಿಕ ಅವರು ನಟನೆಯಿಂದ ದೂರ ಉಳಿದು ನಿರ್ದೇಶದತ್ತ ಹೆಜ್ಜೆ ಇಟ್ಟಿದ್ದಾರೆ. `ಡಿ ಡಿ ಡಿಕ್ಕಿ’ ಚಿತ್ರವನ್ನು ನಿರ್ದೇಶಿದ್ದು, ಸದ್ಯ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

  • ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಮಧು ಬಂಗಾರಪ್ಪ ಭರವಸೆ

    ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಮಧು ಬಂಗಾರಪ್ಪ ಭರವಸೆ

    ಬೆಂಗಳೂರು: ಪ್ರಕಾಶನ ರಂಗ (Publishing Industry) ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ (Madhu Bangarappa)  ಭರವಸೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಪ್ರಕಾಶಕರ ನಿಯೋಗವನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಕಾಶನ ರಂಗ ಇತರ ರಾಜ್ಯಗಳಲ್ಲಿ ಉತ್ತಮ ಸ್ಥಿತಿಯಲ್ಲಿದ್ದು, ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ದುಸ್ಥಿತಿಯಲ್ಲಿರುವ ಬಗ್ಗೆ ನಾನು ತಿಳಿದಿದ್ದೇನೆ. ಈ ಸಮಸ್ಯೆಗಳನ್ನು ನಾನು ಅಧ್ಯಯನ ಮಾಡಿ ಕ್ರಮೇಣ ಓದುವ ಸಂಸ್ಕೃತಿಯನ್ನು ಬಲಪಡಿಸುವ ಈ ಮಹತ್ವವಾದ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಪರಿಹಾರ ಒದಗಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    2020ರಿಂದ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಿಲ್ಲ. ಇದರಿಂದಾಗಿ ರಾಜ್ಯದ ಎಲ್ಲೆಡೆ ಹೊಸ ಕೃತಿಗಳಿಂದ ಓದುಗರು ವಂಚಿತರಾಗಿದ್ದಾರೆ. ಬಿಬಿಎಂಪಿ ಗ್ರಂಥಾಲಯ ಕರ ಎಂದು 450 ಕೋಟಿ ರೂ. ಗಳನ್ನು ಸಂಗ್ರಹಿಸಿದೆ. ಇದನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ಪ್ರಕಾಶನ ಉದ್ಯಮ ಕಂಗಾಲಾಗಿದೆ ಎಂದು ಪ್ರಕಾಶಕರ ಸಂಘ ಸಚಿವರ ಗಮನಕ್ಕೆ ತಂದಿದೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ

    ಪುಸ್ತಕ ಪ್ರಕಟಣೆಯ ವೆಚ್ಚ ಇಂದು ಗಗನಕ್ಕೇರಿದೆ. ಆದರೆ ಸಗಟು ಖರೀದಿಯಲ್ಲಿ ಮಾತ್ರ ಹಳೆಯ ದರವನ್ನೇ ನಿಗದಿಪಡಿಸಿದ್ದಾರೆ. ಹೆಚ್ಚಿರುವ ಕಾಗದ, ಇಂಕು, ಮುದ್ರಣ ಬೆಲೆ, ಜಿಎಸ್‌ಟಿಯಿಂದಾಗಿ ಪ್ರಕಾಶನ ರಂಗ ತತ್ತರಿಸಿದೆ. ಆದ್ದರಿಂದ ಒಂದು ಪುಟದ ಬೆಲೆಯನ್ನು ಇನ್ನೂ 40 ಪೈಸೆ ಹೆಚ್ಚಳ ಮಾಡಬೇಕು ಎಂದು ಸಂಘ ಮನವಿ ಮಾಡಿತು. ಅಲ್ಲದೇ ಕನ್ನಡ ಪುಸ್ತಕಗಳನ್ನು (Kannada Books) ಖರೀದಿಸಲು ಈಗ ಮಂಡಿಸಲಿರುವ ಬಜೆಟ್‌ನಲ್ಲಿ 25 ಕೋಟಿ ರೂ. ಗಳನ್ನು ಮೀಸಲಿಡಬೇಕು ಎಂದು ಸಂಘ ಒತ್ತಾಯಿಸಿದೆ. ಇದನ್ನೂ ಓದಿ: ಬೈಕಿನಲ್ಲೇ ಹಳ್ಳಿ-ಹಳ್ಳಿ ಸುತ್ತಿ ಹೆಚ್‌ಡಿ ತಮ್ಮಯ್ಯ ಮತದಾರರಿಗೆ ಧನ್ಯವಾದ

    ಈ ಸಂದರ್ಭ ಕರ್ನಾಟಕ ಕನ್ನಡ ಬರಹಗಾರರ (Kannada Writers) ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್.ದೊಡ್ಡೇಗೌಡ, ಹಿರಿಯ ಪ್ರಕಾಶಕರಾದ ನಿತಿನ್ ಶಾ ಉಪಸ್ಥಿತರಿದ್ದರು. ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಸಿದ್ದಗಂಗಾ ಮಠಕ್ಕೆ ಭೇಟಿ