ಯುದ್ದಕಾಂಡ ಚಿತ್ರದ ಯಶಸ್ಸಿನ ನಂತರ ನಟ, ನಿರ್ಮಾಪಕ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಇದೀಗ ಮತ್ತೊಂದು ಇಂಟರೆಸ್ಟಿಂಗ್ ಕ್ಯಾರೆಕ್ಟರ್ ಮೂಲಕ ಸಿನಿ ರಸಿಕರ ಮುಂದೆ ಬರುತ್ತಿದ್ದಾರೆ. ಇದುವರೆಗೂ ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ತೆರೆಮೇಲೆ ಕಾಣಿಸಿಕೊಂಡಿದ್ದ ಅಜಯ್ ರಾವ್ ಅವರು ವಿಭಿನ್ನವಾದ ರಗಡ್ ಗೆಟಪ್ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದಾರೆ.
ಬೋಳು ತಲೆಯಲ್ಲಿ, ಅರ್ಧ ಕೂಲಿಂಗ್ ಗ್ಲಾಸ್ ಹಾಕಿ ವಿಲನ್‌ಗಳಿಗೆ ಗಳಿಗೆ ಸಿಂಹಸ್ವಪ್ನ ಎನ್ನುವಂತೆ ಕಾಣಿಸಿಕೊಂಡಿದ್ದಾರೆ. ನನ್ ಮಗಳೇ ಹೀರೋಯಿನ್ ಖ್ಯಾತಿಯ ನಿರ್ದೇಶಕ ಎಸ್.ಕೆ ಬಾಹುಬಲಿ ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ‘ಪೆನ್ ಡ್ರೈವ್’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಲ್ಲದೇ ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಅಂಥವರಲ್ಲಿ ಆರ್‌ಎಸ್‌ಪಿ ಪ್ರೊಡಕ್ಷನ್ಸ್ನ ಲಕ್ಷ್ಮಿ ಹರೀಶ್ ಕೂಡ ಒಬ್ಬರು. ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ ಅವರು ತಮ್ಮ ಆರ್‌ಎಸ್‌ಪಿ ಪ್ರೊಡಕ್ಷನ್ ಮೂಲಕ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಉಸಿರು (Usiru) ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ. ನಟ ತಿಲಕ್ (Tilak), ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಪ್ರಭಾಕರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ನ್ನು ನಟ ಶ್ರೀನಗರ ಕಿಟ್ಟಿ ಹಾಗೂ ರವಿ ಆರ್.ಗರಣಿ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ‘ಪೆನ್ ಡ್ರೈವ್’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ
ಪೊಲೀಸ್ ಅಧಿಕಾರಿಯೊಬ್ಬ ಆತಂಕಕಾರಿ ವ್ಯಕ್ತಿಯಿಂದ ತನ್ನ ಹೆಂಡತಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಮೂಲಕ ನಿರ್ದೇಶಕರು ಹೇಳಹೊರಟಿದ್ದಾರೆ. ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !
ಈ ಸಂದರ್ಭದಲ್ಲಿ ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡಿ, ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂಬ ಅಂಶವನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಪ್ರಭಾಕರ್ ಅವರು ಈ ಕಥೆಯನ್ನು ನಮಗೆ ಹೇಳಿದಾಗ ಆ ಸ್ಟೋರಿಲೈನ್ ಇಷ್ಟವಾಗಿ ಸಿನಿಮಾ ಪ್ರಾರಂಭಿಸಿದೆವು. ಚಿತ್ರವೀಗ ಕೊನೇ ಹಂತದ ಡಿಐ ಕೆಲಸದಲ್ಲಿದೆ ಎಂದರು. ಇದನ್ನೂ ಓದಿ: ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ
ನಂತರ ನಿರ್ದೇಶಕ ಪ್ರಭಾಕರ್ ಮಾತನಾಡಿ, ನಿರ್ದೇಶನ ನನ್ನ 12 ವರ್ಷಗಳ ಕನಸು. ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದು, ಇದು ನನ್ನ ನಿರ್ದೇಶನದ ಪ್ರಥಮ ಚಿತ್ರ. ಸಸ್ಪೆನ್ಸ್, ಥ್ರಿಲ್ಲರ್ ಕಥಾನಕ ಇರೋ ಚಿತ್ರಕ್ಕೆ ಉಸಿರು ಎಂಬ ಟೈಟಲ್ ಯಾಕಿಟ್ಟಿದ್ದೇವೆ ಅಂತ ಸಿನಿಮಾ ನೋಡಿದಾಗ ತಿಳಿಯುತ್ತೆ. ಒಂದೊಳ್ಳೆ ಟೀಮ್ ಕಟ್ಟಿಕೊಂಡು ದೊಡ್ಡ ಮಟ್ಟದಲ್ಲಿ ಈ ಸಿನಿಮಾ ಮಾಡಿದ್ದೇವೆ. ಚಿತ್ರದಲ್ಲಿ ಎಲ್ಲಾ ರೀತಿಯ ಎಮೋಶನ್ಸ್ ಇದ್ದು, ಚಿತ್ರದ ಪ್ರತಿ ಪಾತ್ರಕ್ಕೂ ಅದರದೇ ಆದ ಐಡೆಂಟಿಟಿ ಇರುತ್ತದೆ. ಯಾವ ಪಾತ್ರವೂ ಹೀಗೆ ಬಂದು ಹೋಗುವುದಲ್ಲ. ಗಂಡನ ಪ್ರೀತಿ, ಸ್ನೇಹಸಂಬಂಧ ಹೀಗೆ ಎಲ್ಲಾ ರೀತಿಯ ಕಂಟೆಂಟ್ ಚಿತ್ರದಲ್ಲಿದ್ದು, ಚಿತ್ರದ ಟ್ಯಾಗ್ ಲೈನ್ 07.08.09. ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಡ್ವಾನ್ಸ್ ಹಣ ವಾಪಸ್ ಕೊಡದ ಆರೋಪ – ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು
ಚಿತ್ರದ ನಾಯಕ ತಿಲಕ್ ಶೇಖರ್ ಪ್ರತಿಕ್ರಿಯಿಸಿ, ಚಿತ್ರದಲ್ಲಿ ನಾನೊಬ್ಬ ಇನ್ವೆಸ್ಟಿಗೇಶನ್ ಆಫೀಸರ್. ಈ ಥರದ ಕಾನ್ಸೆಪ್ಟ್ ಎಲ್ಲೂ ಕೇಳಿರಲಿಲ್ಲ. 07.08.09 ಎನ್ನುವ ಕೋಡ್ ವರ್ಡ್ ರೀತಿ ಚಿತ್ರದಲ್ಲಿ ತುಂಬಾ ಇಂಟರೆಸ್ಟಿಂಗ್ ಎಲಿಮೆಂಟ್‌ಗಳಿವೆ ಎಂದರು.
ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ, ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹಲವಾರು ಶೇಡ್ಸ್ ಇದೆ. ಅದರಲ್ಲಿ ಪತ್ನಿಯ ಪಾತ್ರವೂ ಒಂದು. ನನ್ನ ಪಾತ್ರದಿಂದ ಚಿತ್ರಕಥೆಗೆ ಮೇಜರ್ ಟ್ವಿಸ್ಟ್ ಸಿಗುತ್ತದೆ. ಮಹಿಳಾ ನಿರ್ಮಾಪಕಿಯ ಜೊತೆ ಕೆಲಸ ಮಾಡುತ್ತಿರುವುದು ಖುಷಿಯ ವಿಚಾರ. ಈ ಹಿಂದೆ ನಾನು ಮಾಡಿದ್ದ ತೆಲುಗು ಸಿನಿಮಾ ನೋಡಿದ ನಿರ್ಮಾಪಕರು ನನಗೆ ಕಾಲ್ ಮಾಡಿದ್ದರು. ಸುಮಾರು ಅಡೆತಡೆಗಳನ್ನು ಎದುರಿಸಿ ಸಿನಿಮಾ ಮುಗಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್
ಬಳಿಕ ಸಂಗೀತ ನಿರ್ದೇಶಕ ಆರ್.ಎಸ್ ಗಣೇಶ್ ನಾರಾಯಣನ್ ಪ್ರತಿಕ್ರಿಯಿಸಿ, ಹಾರ್ಟ್ಬೀಟ್ ಚಿತ್ರದಿಂದ ಆರಂಭವಾದ ನನ್ನ ಸಿನಿಜರ್ನಿಯ 25ನೇ ವರ್ಷದಲ್ಲಿ ಉಸಿರು ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದೇನೆ. ಚಿತ್ರದಲ್ಲಿ ಬೇರೆ ಬೇರೆ ಜಾನರ್‌ನಲ್ಲಿ 5 ಹಾಡುಗಳೂ ತುಂಬಾ ಚೆನ್ನಾಗಿ ಮೂಡಿಬಂದಿವೆ. ಅಭಿ ತುಂಬಾ ಚೆನ್ನಾಗಿ ಲಿರಿಕ್ ಬರೆದಿದ್ದಾರೆ. ಎಲ್ಲ ಪಾತ್ರಗಳಿಗೂ ಒಂದೊಂದು ಥೀಮ್ ಮಾಡಿದ್ದೇವೆ. ಫಾಸ್ಟ್ ಸ್ಕ್ರೀನ್ ಪ್ಲೇ ಚಿತ್ರದಲ್ಲಿದ್ದು, ಎಲ್ಲೂ ಬೋರ್ ಹೊಡೆಸುವುದಿಲ್ಲ ಎಂದರು. ಇದನ್ನೂ ಓದಿ: ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ
ಇನ್ನು ಮತ್ತೊಬ್ಬ ನಟ ಸಂತೋಷ್, ನಟಿ ಅಪೂರ್ವ, ಖಳನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಬೈರವರಾಮ ಇವರೆಲ್ಲರೂ ಚಿತ್ರದ ಕುರಿತು ಮಾತನಾಡಿದರು.
ಚಿತ್ರರಂಗದಲ್ಲಿ ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ನವರಸ ನಾಯಕ ಜಗ್ಗೇಶ್ ಸೇರಿದಂತೆ ಕನ್ನಡದ ಹಲವಾರು ಸ್ಟಾರ್ ಕಲಾವಿದರಿಗೆ ವಸ್ತ್ರ ವಿನ್ಯಾಸಕರಾಗಿ ಗುರುತಿಸಿಕೊಂಡವರು, ಅಲ್ಲದೆ ಕಿರುತೆರೆಯ ಕಾಮಿಡಿ ಕಿಲಾಡಿಗಳು ಶೋದಲ್ಲೂ ಕೆಲಸ ಮಾಡಿರುವ ಹೆಸರಾಂತ ವಸ್ತ್ರ ವಿನ್ಯಾಸಕಾರ ಎಂ. ನವೀನ್ ಕುಮಾರ್ (Forever Naveen Kumar) ಅವರೀಗ ಅಮೆರಿಕದ ಇಂಟರ್ ನ್ಯಾಷನಲ್ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ಗೋವಾದಲ್ಲಿ (Goa) ನಡೆದ ಸಮಾರಂಭದಲ್ಲಿ ಬಾಲಿವುಡ್ ನಿರ್ಮಾಪಕ ಮೆಹುಲ್ ಕುಮಾರ್ ಮತ್ತು ಗೋವಾದ ಸಮಾಜ ಕಲ್ಯಾಣ ಸಚಿವರಾದ ಸುಭಾಷ್ ದೇಸಾಯಿ ಅವರು ನವೀನ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ನವೀನ್ ಕುಮಾರ್ ಅವರ ತಂದೆ ಕೆ.ಎಸ್ ಮೋಹನ್ ಕೂಡ ಗಾರ್ಮೆಂಟ್ಸ್ ಉದ್ಯಮದಲ್ಲಿ ತೊಡಗಿಕೊಂಡವರು. ಅದೇ ನವೀನ್ ಕುಮಾರ್ ಅವರನ್ನು ಫ್ಯಾಷನ್ ಕ್ಷೇತ್ರದೆಡೆಗೆ ಸೆಳೆದಿದೆ. ಇದನ್ನೂ ಓದಿ: ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
ಫ್ಯಾಷನ್ ವಿನ್ಯಾಸ ಮತ್ತು ಉಡುಪು ನಿರ್ವಹಣೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನವೀನ್ ಕುಮಾರ್ ಅವರ ಸೇವೆಯನ್ನು ಗುರುತಿಸಿದ ಅಮೆರಿಕದ ಅಮೇರಿಕನ್ ಇಂಟರ್ ನ್ಯಾಷನಲ್ ವಿಶ್ವವಿದ್ಯಾಲಯವು ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿತ್ತು. ಇದನ್ನೂ ಓದಿ: ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರ ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ `45′ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
ಪ್ರಸ್ತುತ `45′ ಚಿತ್ರಕ್ಕಾಗಿ ಅದ್ದೂರಿ ಪ್ರಮೋಷನ್ ಸಾಂಗ್‌ನ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಲು ಉಗಾಂಡದಿಂದ `ಜಿಟೊ ಕಿಡ್ಸ್’ ಎಂದೇ ಖ್ಯಾತರಾಗಿರುವ ನೃತ್ಯಗಾರರ ತಂಡ ಆಗಮಿಸಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರು ದೂರದ ಉಗಾಂಡಾದಿಂದ ಆಗಮಿಸಿದ ನೃತ್ಯಗಾರರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ
ಪ್ರಮೋಷನ್ ಸಾಂಗ್ ಕುರಿತು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ ಅವರು, ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಪ್ರಮೋಷನ್ ಸಾಂಗ್ಸ್ ಇರುತ್ತದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ಮಾಡೋಣ ಅಂದುಕೊಂಡಿದ್ದೇವೆ. ತಮ್ಮ ಅಮೋಘ ನೃತ್ಯದಿಂದ ಇಡೀ ವಿಶ್ವದಲ್ಲೇ ಪ್ರಸಿದ್ಧರಾಗಿರುವ ಉಗಾಂಡದ `ಜಿಟೊ ಕಿಡ್ಸ್’ ಎಂಬ ನೃತ್ಯಗಾರರ ತಂಡ ಈ ಹಾಡಿಗೆ ನೃತ್ಯ ಮಾಡಲು ದೂರದ ಉಗಾಂಡಾದಿಂದ ಆಗಮಿಸಿದ್ದಾರೆ ಎಂದರು. ಇದನ್ನೂ ಓದಿ: ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಇವರು ಇದೇ ಮೊದಲು ಭಾರತಕ್ಕೆ ಆಗಮಿಸಿರುವುದು. ಈ ಪ್ರಮೋಷನ್ ಸಾಂಗ್‌ನ ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಹಾಗೂ ಉಗಾಂಡಾದ `ಜಿಟೊ ಕಿಡ್ಸ್’ ಪಾಲ್ಗೊಳ್ಳಲ್ಲಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ. ಕನ್ನಡದಲ್ಲಿ ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಏರ್ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು
ನಮ್ಮ ನಿರ್ದೇಶಕರು ಸಿನಿಮಾವನ್ನು ಪ್ರೀತಿಸುವ ರೀತಿ ನೋಡಿದರೆ ಬಹಳ ಸಂತೋಷವಾಗುತ್ತದೆ. ಈಗ ಪ್ರಮೋಷನ್ ಸಾಂಗ್ ಅನ್ನು ಅದ್ದೂರಿಯಾಗಿ ಚಿತ್ರೀಕರಣ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಉಗಾಂಡಾದಿಂದ ಹೆಸರಾಂತ ನೃತ್ಯಗಾರರು ಆಗಮಿಸಿದ್ದಾರೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಸಹ ಹಾಡಿನಲ್ಲಿ ಅಭಿನಯಿಸಲಿದ್ದಾರೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬರುತ್ತಿದೆ. ನಮ್ಮ `45′ ಚಿತ್ರ ಭಾರತ ಹಾಗೂ ಭಾರತದಾಚೆಗೂ ಯಶಸ್ವಿಯಾಗಲಿದೆ ಎಂಬ ನಂಬಿಕೆ ನನಗಿದೆ ಎಂದು ನಿರ್ಮಾಪಕ ರಮೇಶ್ ರೆಡ್ಡಿ ಹೇಳಿದರು.
ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ ʻತಿಮ್ಮನ ಮೊಟ್ಟೆಗಳುʼ (Timmana Mottegalu) ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್‌ನ ಅಧ್ಯಕ್ಷ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ನಾನು ಈ ಚಿತ್ರವನ್ನು ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೋಡಿದ್ದೇನೆ. ಈಗಿನ ಪರಿಸ್ಥಿತಿಗೆ ತಕ್ಕಂತಹ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಈಗ ದಿನಕ್ಕೊಂದು ಚಿತ್ರದಂತೆ ವರ್ಷಕ್ಕೆ 360 ಚಿತ್ರಗಳು ಬಿಡುಗಡೆಯಾಗುತ್ತಿದೆ. ಆದರಿಂದ ಚಿತ್ರಮಂದಿರಕ್ಕೆ ಜನರು ಬರುವ ಸಂಖ್ಯೆ ಕಡಿಮೆಯಾಗಿದೆ. ಚಿತ್ರ ಬಿಡುಗಡೆ ಸಂಖ್ಯೆ ಕಡಿಮೆಯಾಗಬೇಕು. ಆಗ ಇಂತಹ ಸದಭಿರುಚಿಯ ಚಿತ್ರಗಳನ್ನು ನೋಡಲು ಜನರು ಚಿತ್ರಮಂದಿರಗಳಿಗೆ ಬರುತ್ತಾರೆ ಎಂದರು. ಇದನ್ನೂ ಓದಿ: ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹಾಕಿದ್ದಾರೆ. ನಾನೇ ಬರೆದಿರುವ ʻಕಾಡಿನ ನೆಂಟರುʼ ಕಥಾ ಸಂಕಲನದಿಂದ ಆಯ್ದ ಒಂದು ಕಥೆ ʻತಿಮ್ಮನ ಮೊಟ್ಟೆಗಳುʼ ಸಿನಿಮಾವಾಗಿದೆ. ಪಶ್ಚಿಮಘಟ್ಟದ ಕಾಡುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತು ಚಿತ್ರದ ಪ್ರಮುಖ ಕಥೆಯಿದ್ದು, ಮನುಷ್ಯನಲ್ಲಿರುವ ಹಾಗೆ ಪ್ರಾಣಿಗಳಲ್ಲೂ ಬಾಂಧವ್ಯವಿದೆ. ಈತರಹದ ವಿಚಾರಗಳನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ನಿರ್ಮಾಪಕರು ಇತ್ತೀಚೆಗೆ ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಸಹ ಆಯೋಜಿಸಿದ್ದರು. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಪ್ರಸಿದ್ದ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನವಾಗಿರುವ ನಮ್ಮ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ.
ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡಿರುವ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಹಿರಿಯ ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.
ತಿಮ್ಮನ ಪಾತ್ರಧಾರಿ ಕೇಶವ್ ಗುತ್ತಳಿಕೆ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಆಶಿಕಾ ಸೋಮಶೇಖರ್, ಪ್ರಗತಿ ಪ್ರಭು, ರಘು ರಾಮನಕೊಪ್ಪ ಹಾಗೂ ಸಂಗೀತ ನಿರ್ದೇಶಕ ಹೇಮಂತ್ ಜೋಯಿಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್
ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್ 3 ವಿನ್ನರ್, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್ ನಟ ರಿಷಭ್ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್‌ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿ ಸದಾಕಾಲ ಕುಟುಂಬದೊಂದಿಗೆ ನಾನಿದ್ದೇನೆ ಎನ್ನುವ ಭರವಸೆಯನ್ನೂ ರಿಷಭ್ ಶೆಟ್ಟಿ ನೀಡಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
ರಾಕೇಶ್‌ಗೆ ಏನಾಗಿತ್ತು?
ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಕಳೆದ ಮೇ 12ರ ಬೆಳಗ್ಗಿನ ಜಾವ 3:30ರ ವೇಳೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಸಾವಿಗೂ ಮುನ್ನ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಕಾಂತಾರ ಪ್ರಿಕ್ವೆಲ್ ಶೂಟಿಂಗ್ ಮುಗಿದ ಬಳಿಕ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿ ನಿಧನ ಹೊಂದಿದ್ದರು. ಇದನ್ನೂ ಓದಿ: ʻಥಗ್ ಲೈಫ್ʼ ಸಿನಿಮಾಗೆ ಬ್ಯಾನ್ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
‘ಕಾಂತಾರ ಚಾಪ್ಟರ್ 1’ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್:
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಕಿರುತೆರೆಯಲ್ಲಿ ಅಲ್ಲದೇ ಹಿರಿತೆರೆಯಲ್ಲಿಯೂ ಆಕ್ಟೀವ್ ಆಗಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರಲ್ಲಿ (Kantara Chapter 1) ರಾಕೇಶ್ ನಟಿಸಿದ್ದು, ತಮ್ಮ ಪಾತ್ರದ ಶೂಟಿಂಗ್ ಕೂಡ ಮುಗಿಸಿ ಕೊಟ್ಟಿದ್ದರು. ಇದನ್ನೂ ಓದಿ: ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
ಕಳೆದ ರಾತ್ರಿ ಅವರು ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.
ರಾಕೇಶ್, ಕೊನೆಯದಾಗಿ ದಸ್ತಕ್ ಸಿನಿಮಾದ ಪ್ರೀಮಿಯರ್ ಶೋ ನಲ್ಲಿ ಭಾಗಿಯಾಗಿದ್ರು. ಅಲ್ಲದೇ ಇತ್ತಿಚೆಗಷ್ಟೇ ಆಕ್ಸಿಡೆಂಟ್ ಆಗಿತ್ತು, ಹೆಲ್ತ್ ಇಶ್ಯೂ ಇರಲಿಲ್ಲ ಎಂದು ತಿಳಿದುಬಂದಿದೆ. ಸದ್ಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ರ ಗ್ರ್ಯಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ಉಡುಪಿ ನಿವಾಸಿ ರಾಕೇಶ್,ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ರಾಕೇಶ್ ತಮ್ಮ ಶಾಲಾ ಶಿಕ್ಷಣವನ್ನ ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದರು.ಅಷ್ಟೇ ಅಲ್ಲ ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡ ಸಿನಿಮಾ, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುಳು ನಾಟಕಗಳು, ಪ್ರಹಸನಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.
ಕೆಜಿಎಫ್ ಚಾಪ್ಟರ್-2 ತೆರೆಕಂಡು 3 ವರ್ಷ ಕಳೆದಿದೆ, ಇದೀಗ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ (Hombale Films) 3ನೇ ಭಾಗದ ಬಗ್ಗೆ ಬಿಗ್ ಹಿಂಟ್ ಕೊಟ್ಟಿದೆ. ಆದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯಕ್ಕೆ ಬೇರೆ ಚಿತ್ರಗಳಲ್ಲಿ ಬ್ಯುಸಿ ಇದ್ದು, ʻಕೆಜಿಎಫ್ 3ʼ ಸಿನಿಮಾ (KGF 3 Cinema) ಯಾವಾಗ ಶುರುವಾಗಬಹುದು ಎಂಬ ಲೆಕ್ಕಾಚಾರದಲ್ಲಿ ಫ್ಯಾನ್ಸ್ ಕಾಯ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಲೇಟೆಸ್ಟ್ ಅಪ್ಡೇಟ್‌ವೊಂದು ಇಲ್ಲಿದೆ…
ನಟ ಯಶ್ (Yash) ಹಾಗೂ ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್‌ನಲ್ಲಿ ಮೂಡಿಬಂದ ʻಕೆಜಿಎಫ್-1, ಕೆಜಿಎಫ್-2ʼ ಸರಣಿಗಳು ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿದವು. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಪ್ರೇಕ್ಷಕರನ್ನ ಆಕರ್ಷಿಸಿದವು. ಕೆಜಿಎಫ್-2 ಅಂತು ವಿದೇಶಗಳಲ್ಲೂ ಸದ್ದು ಮಾಡಿತ್ತು, ಇದೀಗ ಈ ಸರಣಿಯ 3ನೇ ಭಾಗದ ಬಗ್ಗೆ ಇರುವ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇದನ್ನೂ ಓದಿ: ವಾಯುಪಡೆಯ ಶೌರ್ಯ-ಸಾಹಸಕ್ಕೆ ಕನ್ನಡಿ ಹಿಡಿದ ಸಿನಿಮಾಗಳನ್ನ ನೀವೂ ನೋಡಿ….
ʻಕೆಜಿಎಫ್ 1′ ಮತ್ತು ʻಕೆಜಿಎಫ್ 2ʼ ಭರ್ಜರಿ ಯಶಸ್ಸಿನ ಬಳಿಕ ಅಭಿಮಾನಿಗಳು ʻಕೆಜಿಎಫ್ 3′ ಕುರಿತು ಉತ್ಸುಕತೆಯಿಂದ ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ತನ್ನ ಇನ್‌ಸ್ಟಾ ಖಾತೆಯಲ್ಲಿ ವಿಶೇಷ ಎಐ ವಿಡಿಯೋವೊಂದನ್ನ ಹಂಚಿಕೊಳ್ಳುವ ಮೂಲಕ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು
ʻನರಾಚಿʼ ದ್ವಾರದಿಂದ ಆರಂಭವಾಗುವ ಈ ವಿಡಿಯೋ ಕೆಜಿಎಫ್-2ನಲ್ಲಿ ರಾಕಿ ಭಾಯ್ ಹಡಗಿನ ಪೂರ್ತಿ ಚಿನ್ನ ತುಂಬಿಕೊಂಡು ಸಮುದ್ರದ ಮಧ್ಯೆ ನಿಲ್ಲುವವರೆಗೆ ಸಾಗುತ್ತದೆ. ಕೆಜಿಎಫ್ ಚಾಪ್ಟರ್-1ನಲ್ಲಿ ಯಶ್ ನರಾಚಿಗೆ ಎಂಟ್ರಿಕೊಟ್ಟಾಗಿನಿಂದ ಇಡೀ ಕೆಜಿಎಫ್ ಸಾಮ್ರಾಜ್ಯಕ್ಕೆ ಸಾಮ್ರಾಟನಾದವರೆಗಿನ ಕಥೆಯನ್ನ ಈ ವಿಡಿಯೋನಲ್ಲಿ ಕಟ್ಟಿಕೊಡಲಾಗಿದೆ. ಅಲ್ಲದೇ ವಿಡಿಯೋ ಕೆಳಗೆ ʻನೀವು ರಾಕಿ ಭಾಯ್ ಜೊತೆಗೆ ಮುಂದುವರಿಯಿರಿ, ಇದು ಯಾರೂ ನಿಯಂತ್ರಿಸಲಾಗದ ಶಕ್ತಿʼ ಎಂದು ಇಂಗ್ಲಿಷ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ
ಈಗ ಯಶಸ್ವಿ ಚಿತ್ರಗಳ ಪಾತ್ರವನ್ನು ಕೇಂದ್ರೀಕರಿಸಿ ಅದರ ಸೀಕ್ವೆಲ್‌ಗಳನ್ನು ಮಾಡುವ ರೂಢಿ ಎಲ್ಲೆಡೆ ಇದೆ. ಹಾಲಿವುಡ್‌ನಲ್ಲಿ ಗಮನಿಸಿದರೆ ‘ಫಾಸ್ಟ್ ಆ್ಯಂಡ್ ಫ್ಯೂರಿಯಸ್’ ಚಿತ್ರದ 9ಕ್ಕೂ ಅಧಿಕ ಸರಣಿಗಳು ಬಂದಿವೆ. ಬಾಲಿವುಡ್‌ನಲ್ಲಿ ‘ಗೋಲ್‌ಮಾಲ್’, ‘ಭೂಲ್ ಭುಲಯ್ಯಾ’, ಕಾಲಿವುಡ್‌ನಲ್ಲಿ ‘ಸಿಂಗಂ’ ಮುಂತಾದ ಸಿನಿಮಾಗಳ ಮೂರು ಸರಣಿಗಳಂತೂ ಬಂದಿವೆ. ಸ್ಯಾಂಡಲ್‌ವುಡ್‌ನಲ್ಲಿ ಈ ಹಿಂದೆ ʻಪೊಲೀಸ್ ಸ್ಟೋರಿʼ ಚಿತ್ರ ಮೂರು ಭಾಗಗಳಲ್ಲಿ ಕಾಣಿಸಿಕೊಂಡಿತ್ತು. ಈಗ ಮತ್ತೆ ಈ ಟ್ರೆಂಡ್ ಕಾಣಿಸಿಕೊಂಡಿದೆ.
ಸದ್ಯ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಜೂ. ಎನ್‌ಟಿಆರ್ ಜೊತೆಗಿನ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಇದರ ಬಳಿಕ ಅವರು ‘ಸಲಾರ್ 2’ ಸಿನಿಮಾ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. 2026ರಲ್ಲಿ ಸಲಾರ್ ಚಿತ್ರೀಕರಣ ಶುರುವಾದರೆ 2027ಕ್ಕೆ ಸಿನಿಮಾ ರಿಲೀಸ್ ಆಗಬಹುದು. ಆದ್ದರಿಂದ ‘ಕೆಜಿಎಫ್ 3’ ಚಿತ್ರ 2027 ಅಥವಾ 2028ರ ನಂತರ ಬರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಚಿತ್ರದ ಮುಹೂರ್ತ ಯಾವಾಗಾ? ಶೂಟಿಂಗ್ ಎಷ್ಟು ವರ್ಷ ನಡೆಯುತ್ತೆ? ಯಾವಾಗ ಚಿತ್ರ ತೆರೆಗೆ ಬರಲಿದೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ…..
ಕ್ಯೂಟ್ ಕಪಲ್ ಎಂದೇ ಫೇಮಸ್ ಆಗಿದ್ದ ನಿವೇದಿತಾ ಗೌಡ, ಚಂದನ್ ಶೆಟ್ಟಿ (Chandan Shetty) ಅವರು ಇಂದು ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೆ ದಿನದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಚಂದನ್‌ನ ಅಪ್ಪಿಕೊಂಡು ನಿವೇದಿತಾ ಕಣ್ಣೀರು ಹಾಕಿದ್ರು – ಅದಕ್ಕೆ ಅಪ್ಪಿಕೊಂಡೇ ಚಂದನ್ ಸಮಾಧಾನ ಮಾಡಿದ್ರು. ಶೂಟಿಂಗ್ ಕ್ಲೈಮ್ಯಾಕ್ಸ್ ಬಳಿಕ ಸುದ್ದಿಗೋಷ್ಠಿಯಲ್ಲಿ ಚಂದನ್ ಮಾತನಾಡುತ್ತಾ, ಹಲವು ವಿಚಾರಗಳನ್ನ ಹಂಚಿಕೊಂಡರು.
ಮನುಷ್ಯ ಅಂದಕೂಡಲೇ ಎಮೋಶನ್ಸ್ ಇರುತ್ತದೆ. ಹಾಗೆಯೇ ನಮಗೂ ನಾಲ್ಕು ವರ್ಷ ಜೊತೆಗಿದ್ದೆವು. ಈಗ ದೂರ ಆಗಿದ್ದೇವೆ. ನಿನ್ನೆ ರಾತ್ರಿಯಿಂದಲೇ ನಾನು ನನ್ನ ಮನಸ್ಸು ಗಟ್ಟಿಮಾಡಿಕೊಳ್ಳೋಣ ಅಂದುಕೊಂಡಿದ್ದೆ. ನಿಜಕ್ಕೂ ನಮಗೆ ಇದು ಎಮೋಷನಲ್ ಆಗಿರುತ್ತದೆ. ಪರ್ಸನಲ್, ಪ್ರೊಫೆಶನಲ್ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ. ಆದರೆ ಇಬ್ಬರೂ ಕರಿಯರ್‌ನಲ್ಲಿ ಮುಂದುವರೆಯಲೇಬೇಕು ಅಂತ ಹೇಳಿದ್ರು.
ಸಿನಿಮಾ ಕೆಲಸ ಆಗಿದ್ದರಿಂದ ಇಬ್ಬರೂ ಪ್ರೊಫೆಶನಲ್ ಆಗಿಯೇ ಇರ್ತೀವಿ. ಈ ಸಿನಿಮಾಕ್ಕೆ ನಾನು ಸಂಗೀತ ಸಂಯೋಜನೆ ಮಾಡಿಲ್ಲ. ಈ ಸಿನಿಮಾದಲ್ಲಿ ನಿವೇದಿತಾ ದೃಶ್ಯ ಜಾಸ್ತಿ ಇದೆ. ಅವರಿಗೆ ಬಾಯ್‌ಫ್ರೆಂಡ್ ಆಗಿ ಸಪೋರ್ಟ್ ಮಾಡಿರೋ ಪಾತ್ರದಲ್ಲಿ ನಾನು ನಟಿಸಿದ್ದೇನೆ ಅಂತ ಚಂದನ್ ತಿಳಿಸಿದ್ರು.
ಇನ್ನೂ ನಿವೇದಿತಾ ಗೌಡ ಮಾತನಾಡಿ, ನಾಲ್ಕು ವರ್ಷ ನಾವು ಬಾಂಧವ್ಯ ಹೊಂದಿದ್ದೇವೆ. ನಿಜಕ್ಕೂ ಇದು ಎಮೋಷನಲ್ ಆಗಿತ್ತು. ಯಾವುದೇ ಪ್ರಾಜೆಕ್ಟ್ ಇದ್ದರೂ ಕೂಡ ಅದು ಮುಗಿಯುವಾಗ ಬೇಸರ ಆಗುತ್ತದೆ. ಹಾಗೆಯೇ ಈ ಸಿನಿಮಾ ಶೂಟಿಂಗ್ ಮುಗಿಯುತ್ತಿದೆ, ಹಾಗಾಗಿ ಅಳು ಬಂತು. ಈ ಸಿನಿಮಾ ಕಥೆ ತುಂಬ ಚೆನ್ನಾಗಿದೆ. ನಿರ್ದೇಶಕರು ಅಷ್ಟು ಚೆನ್ನಾಗಿ ನನಗೆ ಅರ್ಥ ಮಾಡಿಸಿದ್ರು. ಹಾಗಾಗಿ ಒಪ್ಪಿಕೊಂಡೇ. ಮುಂದೆಯೂ ಒಳ್ಳೇ ಸ್ಟೋರಿ ಬಂದ್ರೆ ಇಬ್ಬರು ಒಟ್ಟಿಗೆ ನಟಿಸುವ ಬಗ್ಗೆ ಯೋಚನೆ ಮಾಡ್ತೀವಿ ಅಂತ ಸಹ ಹೇಳಿಕೊಂಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ನಿವೇದಿತಾ ಗೌಡ, ಚಂದನ್ ಶೆಟ್ಟಿ ಅವರು ನಾಲ್ಕು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಹೊಂದಾಣಿಕೆ ಸಮಸ್ಯೆ ಎಂದು ಈ ಜೋಡಿ ಡಿವೋರ್ಸ್ ಪಡೆದಿತ್ತು. ಇಂದು ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೆ ದಿನ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಚಂದನ್‌ನ ಅಪ್ಪಿಕೊಂಡು ನಿವೇದಿತಾ ಕಣ್ಣೀರು ಹಾಕಿದ್ರು – ಅದಕ್ಕೆ ಅಪ್ಪಿಕೊಂಡೇ ಚಂದನ್ ಸಮಾಧಾನ ಮಾಡಿದ್ರು. ಒಂದು ಕ್ಷಣ ನಿವಿ-ಚಂದನ್ ಮತ್ತೆ ಒಂದಾದ್ರಾ ಅಂತ ಅಭಿಂಮಾನಿಗಳು ತಲೆ ಕೆಡಿಸಿಕೊಂಡಿದ್ರು. ಬಳಿಕವೇ ತಿಳಿಯಿತು ಇದು ಶೂಟಿಂಗ್‌ನ ಕ್ಲೈಮ್ಯಾಕ್ಸ್ ಸೀನ್ ಅಂತ.
ಬಳಿಕ ಸುದ್ದಿಗೋಷ್ಠಿ ಕರೆದು ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಚಂದನ್ ಅಪ್ಪುಗೆಯ ಕುರಿತು ರಿಯಾಕ್ಟ್ ಮಾಡಿದ ನಿವೇದಿತಾ ಗೌಡ, ನಾಲ್ಕು ವರ್ಷ ನಾವು ಬಾಂಧವ್ಯ ಹೊಂದಿದ್ದೇವೆ. ನಿಜಕ್ಕೂ ಇದು ಎಮೋಷನಲ್ ಆಗಿತ್ತು. ಯಾವುದೇ ಪ್ರಾಜೆಕ್ಟ್ ಇದ್ದರೂ ಕೂಡ ಅದು ಮುಗಿಯುವಾಗ ಬೇಸರ ಆಗುತ್ತದೆ. ಹಾಗೆಯೇ ಈ ಸಿನಿಮಾ ಶೂಟಿಂಗ್ ಮುಗಿಯುತ್ತಿದೆ, ಹಾಗಾಗಿ ಅಳು ಬಂತು. ಈ ಸಿನಿಮಾ ಕಥೆ ತುಂಬ ಚೆನ್ನಾಗಿದೆ. ನಿರ್ದೇಶಕರು ಅಷ್ಟು ಚೆನ್ನಾಗಿ ನನಗೆ ಅರ್ಥ ಮಾಡಿಸಿದ್ರು. ಹಾಗಾಗಿ ಒಪ್ಪಿಕೊಂಡೇ. ಮುಂದೆಯೂ ಒಳ್ಳೇ ಸ್ಟೋರಿ ಬಂದ್ರೆ ಇಬ್ಬರು ಒಟ್ಟಿಗೆ ನಟಿಸುವ ಬಗ್ಗೆ ಯೋಚನೆ ಮಾಡ್ತೀವಿ ಅಂತ ಸಹ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಚಂದನ್ ಶೆಟ್ಟಿ, ಮನುಷ್ಯ ಅಂದಕೂಡಲೇ ಎಮೋಶನ್ಸ್ ಇರುತ್ತದೆ. ಹಾಗೆಯೇ ನಮಗೂ ನಾಲ್ಕು ವರ್ಷ ಜೊತೆಗಿದ್ದೆವು. ಈಗ ದೂರ ಆಗಿದ್ದೇವೆ. ನಿನ್ನೆ ರಾತ್ರಿಯಿಂದಲೇ ನಾನು ನನ್ನ ಮನಸ್ಸು ಗಟ್ಟಿಮಾಡಿಕೊಳ್ಳೋಣ ಅಂದುಕೊಂಡಿದ್ದೆ. ನಿಜಕ್ಕೂ ನಮಗೆ ಇದು ಎಮೋಷನಲ್ ಆಗಿರುತ್ತದೆ. ಪರ್ಸನಲ್, ಪ್ರೊಫೆಶನಲ್ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ. ಆದರೆ ಇಬ್ಬರೂ ಕರಿಯರ್‌ನಲ್ಲಿ ಮುಂದುವರೆಯಲೇಬೇಕು. ಸಿನಿಮಾ ಕೆಲಸ ಆಗಿದ್ದರಿಂದ ಇಬ್ಬರೂ ಪ್ರೊಫೆಶನಲ್ ಆಗಿಯೇ ಇರ್ತೀವಿ. ಈ ಸಿನಿಮಾಕ್ಕೆ ನಾನು ಸಂಗೀತ ಸಂಯೋಜನೆ ಮಾಡಿಲ್ಲ. ಈ ಸಿನಿಮಾದಲ್ಲಿ ನಿವೇದಿತಾ ದೃಶ್ಯ ಜಾಸ್ತಿ ಇದೆ. ಅವರಿಗೆ ಬಾಯ್‌ಫ್ರೆಂಡ್ ಆಗಿ ಸಪೋರ್ಟ್ ಮಾಡಿರೋ ಪಾತ್ರದಲ್ಲಿ ನಾನು ನಟಿಸಿದ್ದೇನೆ ಅಂತ ಹೇಳಿದ್ದಾರೆ.