Tag: Kannada Film Industry

  • SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 5 ದಿನಗಳ ಕಾಲ ಚಾಮರಾಜ ಪೇಟೆಯ ಕಲಾವಿದರ ಭವನದಲ್ಲಿ ಸಾಧನೆ..ಸಂಭ್ರಮ..ಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಕ್ಟೋಬರ್ 23 ರಿಂದ 27ರ ವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಇಂದು (ಅ.27) ತೆರೆ ಎಳೆಯಲಾಗಿದೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜೇಂದ್ರ ಸಿಙಗ್ ಬಾಬು ಅವರ ಆಪ್ತರು, ಕುಟುಂಬಸ್ಥರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಾದಬ್ರಹ್ಮ ಹಂಸಲೇಖ, ನಟಿ ಸುಹಾಸಿನಿ, ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್, ನಟ ಡಾ.ವಿ.ರವಿಚಂದ್ರನ್, ನಿರ್ದೇಶಕ ಟಿಎನ್ ಸೀತಾರಾಮ್, ಅರ್ಜುನ್ ಸರ್ಜಾ, ಧ್ರುವ ಸರ್ಜಾ ಸೇರಿ ಇಡೀ ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಈ ವೇಳೆ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸನ್ಮಾನಿಸಿ ಗೌರವ ನೀಡಿದ್ದಾರೆ ಗಣ್ಯರು.

  • ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?

    ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?

    ನ್ನಡ ಚಿತ್ರ ಸೇರಿದಂತೆ ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಬಹುಭಾಷಾ ನಟಿ ವಿವಾದಾತ್ಮಕ ಹೇಳಿಕೆಯೊಂದನ್ನ ಕೊಟ್ಟಿದ್ದಾರೆ. ಕನ್ನಡ ಚಿತ್ರಗಳ ಮೂಲಕವೇ ನಾಯಕಿಯಾಗಿ ಎಂಟ್ರಿ ಕೊಟ್ಟ ಈ ನಟಿ ಬಳಿಕ ಬಾಲಿವುಡ್‌ನಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸಿದ್ದರು. ಅವರೇ ನಟಿ ಡೈಸಿ ಶಾ. ಇದೀಗ ಡೈಸಿ ಶಾ ದಕ್ಷಿಣ ಭಾರತದ ಚಿತ್ರರಂಗ ಹಾಗೂ ಕನ್ನಡ ಸಿನಿಮಾಗಳಲ್ಲಿ ನಾಯಕಿಯನ್ನ ಹೇಗೆ ಫೋಕಸ್ ಮಾಡಲಾಗುತ್ತದೆ ಅನ್ನೋದ್ರ ಕುರಿತು ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

    ಖಾಸಗಿ ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಡೈಸಿ ಶಾ ಸಂದರ್ಶಕರ ಜೊತೆ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ನಾಯಕಿಯನ್ನ ತೋರಿಸುವ ವಿಧಾನದ ಕುರಿತು ಮಾತನಾಡುವ ವೇಳೆ ವಿಚಿತ್ರ ವಿಕ್ಷಿಪ್ತ ಹೇಳಿಕೆಯನ್ನ ಕೊಟ್ಟಿದ್ದಾರೆ. ಒಂದೆರಡು ಹಾಡನ್ನ ನೋಡಿರುವ ಮಾತ್ರಕ್ಕೆ ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯ ಇತಿಹಾಸವನ್ನೇ ತಿರುಚುವ ಪ್ರಯತ್ನ ಮಾಡಿದ್ದಾರೆ ಈ ನಟಿ. ಬಹುಶಃ ಈ ವಿಚಾರ ಮುಂದಿನ ದಿನ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಚರ್ಚೆಯಾಗೋದ್ರಲ್ಲಿ ಅನುಮಾನವಿಲ್ಲ.

    ಡೈಸಿ ಶಾ ಹೇಳಿದ್ದೇನು..?
    ಕನ್ನಡ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾಗ, ಪುರುಷ ನಟರಿಗೆ ಸರಿಯಾದ ಹಿನ್ನೆಲೆ ಮತ್ತು ಉಪಪಠ್ಯದೊಂದಿಗೆ ನಿರ್ದೇಶನ ನೀಡಲಾಗುತ್ತಿತ್ತು. ಆದರೆ ನಾಯಕಿಯರಾದ ನಮಗೆ ಇಲ್ಲಿ ನಗಬೇಕು, ಇಲ್ಲಿ ಅಳಬೇಕು, ಇಲ್ಲಿ ಹೀಗಿರಬೇಕು ಎಂದಷ್ಟೇ ಹೇಳಲಾಗುತ್ತಿತ್ತು. ಭಾಷೆಯಲ್ಲಿ ಚೆನ್ನಾಗಿ ಪರಿಣತಿ ಇಲ್ಲದಿರುವುದು ಇದಕ್ಕೆ ಕಾರಣ ಇರಬಹುದು.

    ನಟಿ ಹೇಳಿದ ವಿವಾದಾತ್ಮಕ ಮಾತೇನು..?
    ‘ನಾನು ಕನ್ನಡ ಸಿನಿಮಾದಲ್ಲಿ ಕೆಲಸ ಮಾಡುವಾಗ, ನನ್ನ ಬಿಡುವಿನ ಸಮಯದಲ್ಲಿ ನಾನು ಟಿವಿ ನೋಡುತ್ತಿದ್ದೆ. ಮತ್ತು ನಾನು ನೋಡಿದ ಎಲ್ಲಾ ಕನ್ನಡ ಹಾಡುಗಳಲ್ಲಿ… ಒಬ್ಬ ನಿರ್ದಿಷ್ಟ ನಟನಿದ್ದರು. ಅವರ ಎಲ್ಲಾ ಹಾಡುಗಳಲ್ಲಿ, ನಾಯಕಿಯ ಹೊಕ್ಕುಳಿನ ಮೇಲೆ ಹಣ್ಣಿನ ಸಲಾಡ್ ಅಥವಾ ತರಕಾರಿ ಸಲಾಡ್‌ನ್ನು ಕ್ಲೋಸ್-ಅಪ್ ಶಾಟ್‌ಗಳೊಂದಿಗೆ ಚಿತ್ರೀಕರಣ ಮಾಡಲಾಗುತ್ತಿತ್ತು. ಕೆಲವೊಮ್ಮೆ ಹೊಕ್ಕುಳಿನ ಮೇಲೆ ಐಸ್ ಅಥವಾ ನೀರನ್ನು ಸುರಿಯಲಾಗುತ್ತಿತ್ತು.’

    ಹೀಗೆ ನಟಿ ಡೈಸಿ ಶಾ ಕನ್ನಡದ ಕೆಲವೇ ಹಾಡುಗಳನ್ನ ನೋಡಿ ಇಡೀ ಇಂಡಸ್ಟ್ರಿ ಮೇಲಿರುವ ಅಭಿಪ್ರಾಯವನ್ನ ಬೇರೆ ರೀತಿಯಲ್ಲಿ ಕೊಂಡೊಯ್ಯುವ ಪ್ರಯತ್ನ ಮಾಡಿರುವುದು ಕಾಣುತ್ತದೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಹಿರಿಮೆ ಪ್ರೌಢಿಮೆ ಇತಿಹಾಸವನ್ನ ಪ್ರಶ್ನೆ ಮಾಡುವಂತಿದೆ ಡೈಸಿ ಮಾತು. ಹಾಟರ್‌ಫ್ಲೈ ಯೂಟ್ಯೂಬ್ ವಾಹಿನಿಗೆ ಡೈಸಿ ಶಾ ನೀಡಿರುವ ಸಂದರ್ಶನದಲ್ಲಿ ವಿವಾದಾತ್ಮಕ ಮಾತನಾಡಿದ್ದಾರೆ.

    ಅಂದಹಾಗೆ ಈ ಡೈಸಿ ಶಾ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರ ಸಹಾಯಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಟನೆಗೆ ಕಾಲಿಡುವ ಮೊದಲು ಹಲವಾರು ಬಾಲಿವುಡ್ ಹಾಡುಗಳಲ್ಲಿ ಹಿನ್ನೆಲೆ ನರ್ತಕಿಯಾಗಿ ಕಾಣಿಸಿಕೊಂಡರು. ಬಳಿಕ ಮಹೇಶ್ ರಾವ್ ನಿರ್ದೇಶನದಲ್ಲಿ ಪ್ರಜ್ವಲ್ ದೇವರಾಜ್ ನಟನೆಯ ಭದ್ರ ಚಿತ್ರದ ಮೂಲಕ ನಟಿಯಾಗಿ ಭಡ್ತಿ ಪಡೆದವರು. ಬಳಿಕ ಜಗ್ಗೇಶ್ ಅಭಿನಯದ ಬಾಡಿಗಾರ್ಡ್ ಚಿತ್ರದಲ್ಲಿ ನಟಿಸಿದ್ದರು. ಬಳಿಕ ಸಲ್ಮಾನ್ ಖಾನ್ ಅವರ ಜೈ ಹೋ ಚಿತ್ರದಲ್ಲಿ ನಟಿಸುವ ಮೂಲಕ ಬಾಲಿವುಡ್ ನಟಿಯಾಗಿ ಖ್ಯಾತಿ ಪಡೆದಿದ್ರು. ಇದೀಗ ರಿಯಾಲಿಟಿ ಶೋ ಹೇಟ್‌ಸ್ಟೋರಿ ಸೇರಿದಂತೆ ಅಲ್ಲಿ ಇಲ್ಲಿ ಪಾತ್ರ ಮಾಡ್ತಿರುವ ಈ ಅವಕಾಶ ವಂಚಿತ ನಟಿ ತಮ್ಮ ಅಪ್ರಬುದ್ಧ ಹೇಳಿಕೆಯಿಂದ ಸುದ್ದಿಗೆ ಬಂದಿದ್ದಾರೆ.

  • ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟನಿಗೆ ತಡರಾತ್ರಿ ರಾತ್ರಿ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆತಂದಿದ್ದಾದರೂ ಫಲಕಾರಿಯಾಗದೇ ತಡರಾತ್ರಿ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರವನ್ನ ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸಕ್ಕೆ ಶಿಫ್ಟ್‌ ಮಾಡಲಾಗುತ್ತಿದೆ. ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Bank Janardhan 2

    ಇನ್ನೂ ತಂದೆ ಸಾವಿನ ಕುರಿತು ಮಾಹಿತಿ ನೀಡಿರುವ ಬ್ಯಾಂಕ್‌ ಜನಾರ್ಧನ್‌ ಅವರ ಪುತ್ರ ಗುರುಪ್ರಸಾದ್‌, 20 ದಿನಗಳಿಂದ ಆಸ್ಪತ್ರೆಗೆ ಹೋಗ್ತಾ ಇದ್ರು, ಸಾಕಷ್ಟು ಟ್ರೀಟ್ಮೆಂಟ್‌ ಕೊಡಿಸಿದ್ದೇವು. ಮೂರು ದಿನಗಳಿಂದ ಆರೋಗ್ಯ ಸಮಸ್ಯೆ ಏರುಪೇರು ಆಗುತ್ತಿತ್ತು. ನಂತರ ಆಸ್ಪತ್ರೆಗೆ ದಾಖಲು ಮಾಡಿದ್ವು, ನಿನ್ನೆ ತುಂಬಾ ಉಸಿರಾಟದ ಸಮಸ್ಯೆಯಾಗಿತ್ತು. ವೈದ್ಯರು ಕೂಡ ತುಂಬಾ ಪ್ರಯತ್ನ ಪಟ್ಟಿದ್ರು. ಆದ್ರೆ ಉಳಿಸಿಕೊಳ್ಳಲು ಆಗಲಿಲ್ಲ ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ನಟ ಜಗ್ಗೇಶ್‌ ತೀವ್ರ ಸಂತಾಪ:
    ಇನ್ನೂ ಬ್ಯಾಂಕ್ ಜನಾರ್ಧನ್ ನಿಧನಕ್ಕೆ ಹಿರಿಯ ನಟ ಜಗ್ಗೇಶ್‌ ಸಹ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ.. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ.. ಆತ್ಮಕ್ಕೆ ಶಾಂತಿ ಎಂದು ಬರೆದುಕೊಂಡಿದ್ದಾರೆ.

  • ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) (Bank Janardhan) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.

    ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ 2:30ರ ಸುಮಾರಿಗೆ‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪಾತ್ರ:
    ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್‌ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಉಪೇಂದ್ರ ನಿರ್ದೇಶನದ ಶ್‌, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • 160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

    160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

    ಮೈಸೂರು: ಇಲ್ಲಿನ ಇಮ್ಮಾವು ಗ್ರಾಮದಲ್ಲಿ (Immavu Village )160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ (Mysuru Film City) ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು. ಇದನ್ನೂ ಓದಿ: ಅಶೋಕ್ ಹೆಗಲ ಮೇಲೆ ಬಂದೂಕು ಇಟ್ಟು ಸಿದ್ದರಾಮಯ್ಯ ಕಡೆ ಗುರಿ ಹೊಡೆದಿದ್ದಾರೆ- ಸಿಟಿ ರವಿ

    ಚಿತ್ರರಂಗದ (Kannada Film Industry) ಬೆಳವಣಿಗೆಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕು. ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 04ರಿಂದ 10ರವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

    ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದ ಸಿಎಂ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿ ಅವರೊಂದಿಗಿದ್ದ ಸ್ನೇಹ ಬಾಂಧವ್ಯವನ್ನು ಮೆಲುಕು ಹಾಕಿದರು. ಇದನ್ನೂ ಓದಿ: ದಸರಾ, ದೀಪಾವಳಿ ಹಬ್ಬಕ್ಕೆ ರೈಲ್ವೆ ಇಲಾಖೆ ಬಂಪರ್ ಗಿಫ್ಟ್

  • ಚಿತ್ರರಂಗದ ಏಳಿಗೆಗಾಗಿ ಆ.14ರಂದು ವಿಶೇಷ ಪೂಜೆ

    ಚಿತ್ರರಂಗದ ಏಳಿಗೆಗಾಗಿ ಆ.14ರಂದು ವಿಶೇಷ ಪೂಜೆ

    ನ್ನಡ ಚಿತ್ರರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಆಗಸ್ಟ್ 14ರಂದು ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಸಕಲ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:ಶ್ರೀದೇವಿ ಹುಟ್ಟುಹಬ್ಬದಂದು ಬಾಯ್‌ಫ್ರೆಂಡ್ ಜೊತೆ ಜಾನ್ವಿ ಕಪೂರ್ ಟೆಂಪಲ್ ರನ್

    ಚಿತ್ರರಂಗದ ಏಳಿಗೆಗಾಗಿ ಆ.14ರಂದು ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ಚಾಮರಾಜನಗರ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದೆ. ನಾಳೆ ಬೆಳಗ್ಗೆ 7:30ರಿಂದ 11:30ರವರೆಗೆ ಗಣಯಾಗ, ಅಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಲಿದೆ. ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಣ್ಣಮ್ಮಯ್ಯ ಅವರು ಮಾಡಲಿದ್ದು, ಪೂಜೆಯ ಸಕಲ ಸಿದ್ಧತೆಯನ್ನು ನಟ ದೊಡ್ಡಣ್ಣ (Doddanna) ನೋಡಿಕೊಳ್ಳುತ್ತಿದ್ದಾರೆ.

    ಅಂದಹಾಗೆ, ಆ.11ರಂದು ಕಲಾವಿದರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಕ್‌ಲೈನ್ ವೆಂಕಟೇಶ್ (Rockline Venkatesh) ಮಾತನಾಡಿದ, ಕೋವಿಡ್ ನಂತರ ಸಿನಿಮಾರಂಗದಲ್ಲಿ ಉಂಟಾದ ಸಮಸ್ಯೆಗಳನ್ನು ಎದುರಿಸಲು ಇಂಥದ್ದೊಂದು ಪೂಜೆ ಮಾಡಲು ಯೋಚಿಸಿದೆವು. ಆದರೆ, ಆಗಿರಲಿಲ್ಲ. ಕೋವಿಡ್ ನಂತರ ಚಿತ್ರರಂಗದಲ್ಲಿ ಸಾಕಷ್ಟು ಸಾವು, ನೋವಿನ ಘಟನೆಗಳು ನಡೆದಿದೆ. ಈಗ ಕನ್ನಡ ಚಿತ್ರರಂಗದಲ್ಲಿ ದೊಡ್ಡವರು ಅಂತ ಯಾರೂ ಇಲ್ಲ. ಹೀಗಾಗಿ ನಾವು ದೇವರ ಮೊರೆ ಹೋಗುತ್ತಿದ್ದೇವೆ ಎಂದಿದ್ದಾರೆ.

  • ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

    ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

    ಕನ್ನಡ ಚಿತ್ರರಂಗದಲ್ಲಿ (Kannada Film Industry) 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (Mandeep Roy) (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

    ಇತ್ತೀಚೆಗೆ ಹೃದಯಾಘಾತವಾಗಿ (Heart Attack) ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ: 
    1949ರಲ್ಲಿ ಜನಿಸಿದ ಮನದೀಪ್‌ ರಾಯ್‌ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

    ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್‌ ರಾಯ್‌ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು. ಇದನ್ನೂ ಓದಿ: 

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಂ.1 ನಟನೆಂಬ ಅಹಂ ಬಿಟ್ಟುಬಿಡಿ – ಸ್ಟಾರ್ ನಟರಿಗೆ ನಟಿ ರಮ್ಯಾ ಮನವಿ

    ನಂ.1 ನಟನೆಂಬ ಅಹಂ ಬಿಟ್ಟುಬಿಡಿ – ಸ್ಟಾರ್ ನಟರಿಗೆ ನಟಿ ರಮ್ಯಾ ಮನವಿ

    – ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನೋದು ನೋಡಿ ಬೇಜಾರಾಗ್ತಿದೆ
    – ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನೋ ಅರಿವು ಎಲ್ಲರಿಗೂ ಇರಬೇಕು
    – ಫ್ಯಾನ್ಸ್ ವಾರ್ ಬಗ್ಗೆ ದನಿ ಎತ್ತಿದ ರಮ್ಯಾ

    ನ್ನಡ ಚಿತ್ರರಂಗದಲ್ಲಿ (Kannada Film Industry) ಫ್ಯಾನ್ಸ್‌ಗಳ ನಡುವೆ ವಾರ್ (Fans War) ನಡೆಯುತ್ತಿದೆ. ನೆಚ್ಚಿನ ಕಲಾವಿದರನ್ನ ಹೊಗಳುವ ಭರದಲ್ಲಿ ಮತ್ತೊಬ್ಬ ನಟನಿಗೆ ಬೈಯ್ಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇವರ ವಿರುದ್ಧ ಸ್ಯಾಂಡಲ್‌ವುಡ್ (Sandalwood) ಕ್ವೀನ್ ನಟಿ ರಮ್ಯಾ (Actor Ramya) ದನಿ ಎತ್ತಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ (Social Media) ತಮ್ಮ ತಮ್ಮ ಅಭಿಮಾನಿಗಳು ಏನೆಲ್ಲ ಮಾಡುತ್ತಿದ್ದಾರೆ ಎಂಬುದನ್ನು ನಟರು ಗಮನಿಸಬೇಕು. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಸ್ಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕು. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು ಎಂದು ರಮ್ಯಾ ಕರೆ ನೀಡಿದ್ದಾರೆ. ಜೊತೆಗೆ ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟಿ ಉರ್ಫಿ ಜಾವೇದ್ ಗೆ ‘ಲಾರಿಂಜೈಟಿಸ್’ ಖಾಯಿಲೆ: ಆಸ್ಪತ್ರೆಗೆ ದಾಖಲು

    ರಮ್ಯಾ ಅವರ ಟ್ವೀಟ್‌ನಲ್ಲಿ ಏನಿದೆ?
    `ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ, ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್‌ಗಳು ಮುಂತಾದ ಪ್ರತಿಯೊಬ್ಬ ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಉನ್ನತ ಸ್ಥಾನಕ್ಕೆ ಬಂದಿರುತ್ತಾರೆ. ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ, ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ ಏರಿದ್ದರೆ ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೆ ಇರಬಹುದು. ಚಿತ್ರರಂಗದಲ್ಲಿ ತಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಹಿನ್ನೆಲೆಗಳು ಬೇರೆಯೇ ಇರಬಹುದು. ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದೂ ಕಷ್ಟವಾಗಿದ್ದರೆ, ಹಲವರಿಗೆ ಮೈ ತುಂಬಾ ಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತಾ ಬಂದಿರಬಹುದು. ಹಲವರು ಇದ್ದುದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಂದದ್ದು ಉಂಟು. ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ. ಆದರೆ ಶ್ರಮ ಪಟ್ಟವರ ಸಂಖ್ಯೆ ಎಣಿಸಲಸಾಧ್ಯ.

    ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟಪಟ್ಟು ಶ್ರದ್ಧೆಯಿಂದ ಕೆಲಸ ಮಾಡಲು ಹಂಬಲ ಇರುವ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ನಡವಳಿಕೆ. ನಾನು ಯಾವತ್ತಿಗೂ ನಂಬರ್ 1 ಮತ್ತು ಈ ಸ್ಥಾನ ನನಗೆ ಮಾತ್ರ ಧಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆ ಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನೂ ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತಹ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗುತ್ತಿದೆ.

    ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ, ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಸ್ಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು.

    ಕನ್ನಡ ಚಿತ್ರರಂಗ ಇವತ್ತು ದೇಶ-ವಿದೇಶಗಳಲ್ಲಿ ದೊಡ್ಡ ಖ್ಯಾತಿ ಪಡೆದಿದೆ. ಐಎಂಡಿಬಿ ಉನ್ನತ 10 ಚಿತ್ರಗಳ ಪಟ್ಟಿಯಲ್ಲಿ 3 ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ, ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಫೂರ್ತಿ ಬೇಕಿದೆಯೇ? ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಅಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ. ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ, ಎಲ್ಲರಿಗೂ ಒಳಿತಾಗಲಿ ಎಂದು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಡಿ ವಿವಾದ: ಹೋರಾಟ ಅನ್ನೋದೇ ಆದ್ರೆ ಕನ್ನಡ ಚಿತ್ರರಂಗ ಒಗ್ಗಟ್ಟಾಗಿ ಬರುತ್ತೆ – ಶಿವರಾಜಕುಮಾರ್

    ಗಡಿ ವಿವಾದ: ಹೋರಾಟ ಅನ್ನೋದೇ ಆದ್ರೆ ಕನ್ನಡ ಚಿತ್ರರಂಗ ಒಗ್ಗಟ್ಟಾಗಿ ಬರುತ್ತೆ – ಶಿವರಾಜಕುಮಾರ್

    ರಾಯಚೂರು: ಗಡಿ ವಿವಾದವನ್ನ (Belagavi Controvarsy) ಯಾರೂ ದೊಡ್ಡದು ಮಾಡಬಾರದು, ಅಂತಹ ಸಮಯ ಬಂದ್ರೆ ಕನ್ನಡ ಸಿನಿಮಾ ರಂಗ (Kannada Film Industry) ಒಗ್ಗಟ್ಟಾಗಿ ಬರುತ್ತೆ. ಹೋರಾಟ ಅನ್ನೋದಾದ್ರೆ ಎಲ್ಲ ನಟರು ಬರುತ್ತಾರೆ ಎಂದು ನಟ ಶಿವರಾಜ್ ಕುಮಾರ್ (Shivaraj kumar) ಹೇಳಿದ್ದಾರೆ.

    ಮಂತ್ರಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ (Shivaraj Kumar), ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತ ಆ ವಿಚಾರ ನನಗೆ ಅಷ್ಟಾಗಿ ಗೊತ್ತಿಲ್ಲ. ನಾವು ಎಲ್ಲಿದ್ದೇವೆ? ಯಾವ ಜಾಗದಲ್ಲಿದ್ದೇವೆ ಅದಕ್ಕೆ ಮೊದಲು ಎಲ್ಲರೂ ಗೌರವ ಕೊಡಬೇಕು. ಯಾರು ಏನೇ ಹೇಳಿದ್ರೂ ನಾವು ಒಗ್ಗಟ್ಟಾಗಿರಬೇಕು. ಯಾರೇ ಆದ್ರೂ ಎಲ್ಲರನ್ನೂ ವೆಲ್ ಕಂ ಮಾಡೋಣ. ಅಗತ್ಯ ಬಂದಾಗ ನಾವು ಸೋದರ ಮನೋಭಾವದಿಂದ ಇರಬೇಕು ಅಂತ ನಟ ಡಾ.ಶಿವರಾಜ್ ಕುಮಾರ್ ಸಲಹೆ ನೀಡಿದ್ದಾರೆ.

    ನಿನ್ನೆಯಷ್ಟೇ ಗಡಿ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ (Basavaraj Bommai), ವಿಶ್ವದ ಹಾಗೂ ದೇಶದ ಯಾವುದೇ ಮೂಲೆಯಲ್ಲಿದ್ದರೂ ಕನ್ನಡಿಗರನ್ನು ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ

    ಅಲ್ಲದೇ ತಮಿಳುನಾಡು, ಕೇರಳ ಗಡಿ ಭಾಗದಲ್ಲಿರುವ ಜಿಲ್ಲೆಗಳ 1,800 ಗ್ರಾಮ ಪಂಚಾಯತಿ ಅಭಿವೃದ್ಧಿ, ಗಡಿ ಭಾಗದಲ್ಲಿ ಕನ್ನಡ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದರು. ಇದನ್ನೂ ಓದಿ: ಕೇಸರಿ ಶಲ್ಯ ಹಾಕಿಕೊಂಡು ಸಿ.ಟಿ ರವಿ ಮನೆಗೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

    Live Tv
    [brid partner=56869869 player=32851 video=960834 autoplay=true]

  • Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

    Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

    ನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿಯೂ ಬ್ಯುಸಿಯಾಗಿದ್ದಾರೆ. ತಮ್ಮ ಅಮೋಘ ನಟನೆಯಿಂದ ಚಿತ್ರರಸಿಕರನ್ನು ರಂಜಿಸ್ತಿರುವ ವಸಿಷ್ಠ ನಾಯಕ ನಟನಾಗಿಯೂ, ಖಳನಾಯಕನಾಗಿಯೂ ಬೆಳ್ಳಿಪರದೆಯಲ್ಲಿ ಮೋಡಿ ಮಾಡ್ತಿದ್ದಾರೆ. ಕೈತಂಬಾ ಚಿತ್ರಗಳಿರಬೇಕಾದ್ರೆ, ಈಗ ವಸಿಷ್ಠ ಸಿಂಹ ಮತ್ತೊಂದು ಸಿನಿಮಾದಲ್ಲಿ ನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ.

    `ಕೆಜಿಎಫ್ 2′ ಖ್ಯಾತಿಯ ವಸಿಷ್ಠ ಹೀರೋ ಆಗಿ ನಟಿಸ್ತಿರುವ ಮತ್ತೊಂದು ಹೊಸ ಚಿತ್ರ ಅನೌನ್ಸ್ ಆಗಿದೆ. ಈ ಸಿನಿಮಾಗೆ Love…ಲಿ ಎಂಬ ವಿಭಿನ್ನ ಟೈಟಲ್ ಇಡಲಾಗಿದ್ದು, ಸಿನಿಪ್ರಿಯರನ್ನ ಅಟ್ರಾಕ್ಟ್ ಮಾಡ್ತಿದೆ. ಬೆಂಗಳೂರಿನ ಸರ್ಕಲ್ ಮಾರಮ್ಮ ದೇಗುಲದಲ್ಲಿ ಇಂದು ಸರಳವಾಗಿ ಸಿನಿಮಾದ ಮುಹೂರ್ತ ನೆರವೇರಿದೆ. ಮುಹೂರ್ತ ಮುಗಿಸಿರುವ ಚಿತ್ರತಂಡ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ. ಬೈಕ್ ಮೇಲೆ ಕುಳಿತು.. ಧಮ್ ಹೊಡೆಯುತ್ತಾ, ಸಖತ್ ಸ್ಟೈಲೀಶ್ ಲುಕ್ ನಲ್ಲಿ ಚಿಟ್ಟೆ ಮಿಂಚಿದ್ದಾರೆ.

     

    View this post on Instagram

     

    A post shared by Vasishta N Simha (@imsimhaa)

    Love…ಲಿ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು,ರೋಮ್ಯಾನ್ಸ್-ಲವ್ ಸ್ಟೋರಿ ಜೊತೆಗೆ ರೌಡಿಸಂ ವಿಭಿನ್ನ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ. ಭಿನ್ನ ಪಾತ್ರದ ಮೂಲಕ ಕಮಾಲ್ ವಸಿಷ್ಠ ರೆಡಿಯಾಗಿದ್ದಾರೆ. ಇದನ್ನೂ ಓದಿ:`ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್

    ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೆಲಸ ಮಾಡಿ ಅನುಭವವಿರುವ ಚೇತನ್ ಕೇಶವ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಮೇ 4 ರಿಂದ ಬೆಂಗಳೂರು ಸುತ್ತಮುತ್ತ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸದ್ಯ Love…ಲಿ ಚಿತ್ರದ ಫಸ್ಟ್ ಲುಕ್‌ನಿಂದ ಗಮನ ಸೆಳೆಯುತ್ತಿರೋ ವಸಿಷ್ಠ ಕೈಯಲ್ಲಿ `ಹೆಡ್‌ಬುಷ್’, `ಸಿಂಬಾ’, `ತಲ್ವಾರ್‌ಪೇಟೇ’, `ಕಾಲಚಕ್ರ’ ಚಿತ್ರಗಳು ಅಕೌಂಟ್‌ನಲ್ಲಿದೆ.