Tag: Kannada Literature

  • ಮನ್ ಕೀ ಬಾತ್‌ನಲ್ಲಿ ಅಕ್ಷರ ಮಾಂತ್ರಿಕ ಎಸ್‌.ಎಲ್‌ ಭೈರಪ್ಪರನ್ನ ನೆನೆದ ಮೋದಿ

    ಮನ್ ಕೀ ಬಾತ್‌ನಲ್ಲಿ ಅಕ್ಷರ ಮಾಂತ್ರಿಕ ಎಸ್‌.ಎಲ್‌ ಭೈರಪ್ಪರನ್ನ ನೆನೆದ ಮೋದಿ

    ನವದೆಹಲಿ: ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪನವರು (SL Bhyrappa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್‌ ಕಿ ಬಾತ್‌ (Man Ki Baat) ಕಾರ್ಯಕ್ರಮದಲ್ಲಿ ಸ್ಮರಿಸಿದ್ದಾರೆ. ತಮ್ಮ 126ನೇ ಮನದ ಮಾತು ಕಾರ್ಯಕ್ರಮದಲ್ಲಿ ನೆನೆದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

    ನಾನು ಮತ್ತು ನನ್ನ ದೇಶ ಮಹಾನ್ ವಿಚಾರವಾದಿ, ಮಹಾನ್ ಚಿಂತಕರೊಬ್ಬರನ್ನ ಕಳೆದುಕೊಂಡಿದೆ. ನಾನು ಅವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭಗಳಲ್ಲಿ ಹಲವು ವಿಚಾರಗಳ ಮಂಥನ ನಡೆಸಿದ್ದೇವೆ. ಅವರ ಕೃತಿಗಳು ಯುವ ಪೀಳಿಗೆಗೆ ದಾರಿದೀಪ. ಅವರ ಅನೇಕ ಕೃತಿಗಳು ಹಲವು ಭಾಷೆಗಳಿಗೆ ಅನುವಾದವಾಗಿವೆ. ನಮ್ಮ ಮೂಲ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡಬೇಕು, ಗೌರವ ತೋರಿಸಬೇಕು ಎಂಬುದನ್ನ ಅವರು ನಮಗೆ ಕಲಿಸಿಕೊಟ್ಟಿದ್ದಾರೆ. ಅವರ ಅಗಲಿಕೆಗೆ ನಾನು ಭಾವುಕ ವಿದಾಯ ತಿಳಿಸುತ್ತೇನೆ ಎಂದು ಭಾವುಕರಾದರು.

    S L Bhyrappa 1

    ಭೈರಪ್ಪ ಅವರ ಜೊತೆಗಿನ ಒಡನಾಟ ಪ್ರೇರಣಾದಾಯಕ, ಅವರ ಪುಸ್ತಕಗಳು ಯುವಕರಿಗೆ ಪ್ರೇರಣೆ, ಅವ್ರ ಕೃತಿಗಳನ್ನ ಯುವಕರು ಹೆಚ್ಚು ಹೆಚ್ಚು ಓದಬೇಕು ಎಂದು ಕರೆ ನೀಡಿದರು.

    ʻಪರ್ವʼತ ಅಸ್ತಂಗತ
    ಈ ದೇಶಕಂಡ ಖ್ಯಾತ ಕಾದಂಬರಿಕಾರ, ಸರಸ್ವತಿ ಸನ್ಮಾನ್ ಪ್ರಶಸ್ತಿ ವಿಜೇತ ಕನ್ನಡ ಸಾಹಿತ್ಯ ಲೋಕದ ಪರ್ವ ಡಾ.ಎಸ್.ಎಲ್ ಭೈರಪ್ಪನವರ ಯುಗಾಂತ್ಯವಾಗಿದೆ. ತಮ್ಮ ಕಾದಂಬರಿಗಳಿಂದಲೇ ಮನೆಮನಗಳಲ್ಲಿ ಅಚ್ಚಳಿಯದೇ ಉಳಿದಿದ್ದ ಚೈತನ್ಯದ ಚಿಲುಮೆ ಡಾ.ಎಸ್.ಎಲ್ ಭೈರಪ್ಪನವರು ಬಾರದ ಲೋಕಕ್ಕೆ ತೆರಳಿದ್ದಾರೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪನವರು ನಿನ್ನೆ ವಿಧಿವಶರಾಗಿದ್ದಾರೆ. 94 ವರ್ಷದ ಡಾ.ಎಸ್.ಎಲ್ ಭೈರಪ್ಪನವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ನಿನ್ನೆ ಮಧ್ಯಾಹ್ನ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಇಡೀ ಕನ್ನಡ ನಾಡೇ ಕಂಬನಿ ಇಟ್ಟಿದೆ, ಇವರ ಸಾವಿನಿಂದ ಇಡೀ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

  • ಬದುಕಿನ `ಯಾನ’ ಮುಗಿಸಿದ ಭೈರಪ್ಪ – ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ

    ಬದುಕಿನ `ಯಾನ’ ಮುಗಿಸಿದ ಭೈರಪ್ಪ – ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ

    ಕನ್ನಡದ ಹೆಮ್ಮೆಯ ಕಾದಂಬರಿ ಕಾರ, ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು (SL Bhyrappa) ಇಹಲೋಕ ತ್ಯಜಿಸಿದ್ದಾರೆ. ಭೈರಪ್ಪನವರ ಕೃತಿಗಳಿಂದ ಕನ್ನಡದ ಹೆಮ್ಮೆಯನ್ನು ವಿಶ್ವಮಟ್ಟಕ್ಕೇರಿಸಿದ ಸಾಹಿತಿ, ಭಾರತದಲ್ಲಿಯೇ ಅತೀ ಹೆಚ್ಚು ಮಾರಾಟವಾಗುವ ಕಾದಂಬರಿ ಕರ್ತೃ ಇನ್ನಿಲ್ಲ ಎಂಬ ಸುದ್ದಿ ಕನ್ನಡಿಗರ ಮನಸ್ಸಿಗೆ ನಿನ್ನೆ ಬಂದು ಅಪ್ಪಳಿಸಿದೆ. ಅವರ ಸಾವಿನಿಂದ ಕನ್ನಡ ಸಾಹಿತ್ಯ (Kannada Literature) ನೀರವ ಮೌನ ಆವರಿಸಿದೆ.

    ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ
    ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1 ಗಂಟೆ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಪಾರ್ಥೀವ ಶರೀರ ಮೈಸೂರು ತಲುಪಲಿದೆ. ಬಳಿಕ ಮೈಸೂರು ಕಲಾಮಂದಿರದ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಕೋಲ್ಡ್‌ ಸ್ಟೋರೆಜ್‌ನಲ್ಲಿ ಇಡಲಾಗುತ್ತೆ. ಸೆ.26ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗುತ್ತದೆ. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗುತ್ತದೆ. ಸದ್ಯ ಭೈರಪ್ಪ ಅವರ ಪುತ್ರ ರವಿಶಂಕರ್ ಲಂಡನ್ ನಿಂದ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಎಸ್‌.ಎಲ್.ಭೈರಪ್ಪ ನಿಧನಕ್ಕೆ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಗಣ್ಯರಿಂದ ಸಂತಾಪ

    `ಸರಸ್ವತಿ’ ಪುತ್ರ ಎಸ್.ಎಲ್ ಭೈರಪ್ಪ ಅಸ್ತಂಗತ
    ಈ ದೇಶಕಂಡ ಖ್ಯಾತ ಕಾದಂಬರಿಕಾರ, ಸರಸ್ವತಿ ಸನ್ಮಾನ್ ಪ್ರಶಸ್ತಿ ವಿಜೇತ ಕನ್ನಡ ಸಾಹಿತ್ಯ ಲೋಕದ ಪರ್ವ ಡಾ.ಎಸ್.ಎಲ್ ಭೈರಪ್ಪನವರ ಯುಗಾಂತ್ಯವಾಗಿದೆ. ತಮ್ಮ ಕಾದಂಬರಿಗಳಿಂದಲೇ ಮನೆಮನಗಳಲ್ಲಿ ಅಚ್ಚಳಿಯದೇ ಉಳಿದಿದ್ದ ಚೈತನ್ಯದ ಚಿಲುಮೆ ಡಾ. ಎಸ್ ಎಲ್ ಭೈರಪ್ಪನವರು ಬಾರದ ಲೋಕಕ್ಕೆ ತೆರಳಿದ್ದಾರೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪನವರು ನಿನ್ನೆ ವಿಧಿವಶರಾಗಿದ್ದಾರೆ, 94 ವರ್ಷದ ಡಾ.ಎಸ್.ಎಲ್ ಭೈರಪ್ಪನವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ನಿನ್ನೆ ಮಧ್ಯಾಹ್ನ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಇಡೀ ಕನ್ನಡ ನಾಡೇ ಕಂಬನಿ ಇಟ್ಟಿದೆ, ಇವರ ಸಾವಿನಿಂದ ಇಡೀ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಇದನ್ನೂ ಓದಿ: ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ

    ವಂಶವೃಕ್ಷದಿಂದ ನಾಯಿನೆರಳು ವರೆಗೂ ಸಿನಿಮಾ
    ಇನ್ನು.., ಸಾರಸತ್ವ ಲೋಕದ ದಿಗ್ಗಜನ ಅಗಲಿಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಖ್ಯಾತ ಕಾದಂಬರಿಕಾರ ಇನ್ನಿಲ್ಲ ಎಂಬ ಸುದ್ದಿ ನಿಜಕ್ಕೂ ಕನ್ನಡ ಸಾರಸ್ವತ ಲೋಕಕ್ಕೆ ಬರಸಿಡಿಲು ಬಂಡಿದಂತಾಗಿದೆ, ಪ್ರಸಿದ್ಧ ಕಾದಂಬರಿಕಾರ, ತತ್ವಜ್ಞಾನಿಯಾಗಿದ್ದ ಎಸ್‌ಎಲ್ ಭೈರಪ್ಪ ಸದಾ ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಅವರ ರಚಿಸಿದ ಬಹುತೇಕ ಕಾದಂಬರಿಗಳು ಕನ್ನಡ ಸಿನಿಮಾ ರಂಗದಲ್ಲಿ ಮಿಂಚಿ ಅಚ್ಚಳಿಯದೇ ಉಳಿದುಕೊಂಡಿದೆ, 1971 ರಲ್ಲಿ ತೆರೆ ಕಂಡ ವಂಶವೃಕ್ಷ ಸಿನಿಮಾ ಭೈರಪ್ಪನವರ ವಂಶವೃಕ್ಷ ಕಾದಂಬರಿ ಆಧಾರಿತವಾಗಿದ್ದಿದ್ದು. ಈ ಸಿನಿಮಾದಲ್ಲಿ ಡಾ.ವಿಷ್ಣುವರ್ಧನ್ ಅಭಿನಯಿಸಿ ಮಿಂಚಿದ್ದರು. ನಂತ್ರ ತಬ್ಬಲಿಯು ನೀನಾದೆ ಮಗನೆ, ಮತದಾನ, ನಾಯಿನೆರಳು, ಕೃತಿಗಳು ಸಿನಿಮಾವಾದರೆ, ಗೃಹಭಂಗ ಮತ್ತು ದಾಟು ಕಾದಂಬರಿ ಆಧಾರಿತವಾದ ಟಿವಿ ಸೀರಿಯಲ್ ಆಗಿ ನಿರ್ಮಾಣ ಗೊಂಡಿದ್ದವು, ಹೀಗಾಗಿ ಎಸ್‌ಎಲ್ ಭೈರಪ್ಪನವರ ಕೃತಿಗಳು ತೆರೆಯ ಮೇಲೂ ರಾರಾಜಿಸಿದ್ದವು. ಇದನ್ನೂ ಓದಿ: 64 ವರ್ಷಗಳಿಂದ ನಾನು ಭೈರಪ್ಪರನ್ನು ಬಲ್ಲೆ: ಸುಧಾ ಮೂರ್ತಿ

  • 181 ರೂ. ಸಂಬಳ, SL ಭೈರಪ್ಪಗೂ ಹುಬ್ಬಳ್ಳಿಗೂ ಅವಿನಾಭಾವ ನಂಟು

    181 ರೂ. ಸಂಬಳ, SL ಭೈರಪ್ಪಗೂ ಹುಬ್ಬಳ್ಳಿಗೂ ಅವಿನಾಭಾವ ನಂಟು

    -ಸಾಹಿತ್ಯಕ್ಕೆ ಮಹತ್ವ ತಿರುವು ಕೊಟ್ಟಿದ್ದೆ ವಾಣಿಜ್ಯ ನಗರಿ 

    ಹುಬ್ಬಳ್ಳಿ: ನಾಡುಕಂಡ ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪನವರಿಗೂ ವಾಣಿಜ್ಯ ನಗರಿ ಹುಬ್ಬಳ್ಳಿಗೂ (Hubballi) ಅವಿನಾಭಾವ ನಂಟಿದೆ.

    ಹೌದು, ಭೈರಪ್ಪನವರ ವೃತ್ತಜೀವನ ಮತ್ತು ಸಾಹಿತ್ಯ ಹುಬ್ಬಳ್ಳಿಯಲ್ಲಿ ಮಹತ್ವದ ತಿರುವು ಪಡೆದುಕೊಂಡಿತ್ತು. ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಕಾಡುಸಿದ್ದೇಶ್ವರ ಕಾಲೇಜಿನಲ್ಲಿ ಕಲಾ ವಿಭಾಗದ ಸೈಕಾಲಜಿ ಮತ್ತು ಲಾಜಿಕ್ ವಿಷಯದ ಪ್ರಾಧ್ಯಾಪಕರಾಗಿ ಭೈರಪ್ಪನವರು 1959 ರಿಂದ 1961 ಕೆಲಸ ಮಾಡಿದ್ದರು. ಆಗ ಭೈರಪ್ಪನವರಿಗೆ 181 ರೂ. ಸಂಬಳ ಇತ್ತು. ಇವರ ಸೇವೆಯನ್ನು ಕಾಲೇಜು ಆಡಳಿತ ಮಂಡಳಿ ಇಂದಿಗೂ ನೆನಪಿಸಿಕೊಳ್ಳುತ್ತಿದೆ.ಇದನ್ನೂ ಓದಿ: ʼಲೆಫ್ಟಿಸ್ಟ್‌ಗಳು ಅಪ್ರಾಮಾಣಿಕರು, ದೇಶ ಬೆಳೆಯಬೇಕಾದರೆ ಕ್ಯಾಪಿಟಲಿಸಂ ಅಗತ್ಯʼ

    ಇನ್ನೂ ಭೈರಪ್ಪನವರ ಮೊದಲ ಕಾದಂಬರಿ `ಧರ್ಮಶ್ರೀ’ ಹುಬ್ಬಳ್ಳಿ ಸಾಹಿತ್ಯ ಭಂಡಾರದಲ್ಲಿ ಮುದ್ರಣಗೊಂಡಿತ್ತು. ಬ್ಯಾಂಕ್ ಮ್ಯಾನೇಜರ್ ಒಬ್ಬರ ಸಹಾಯದಿಂದ ಸಾಹಿತ್ಯ ಭಂಡಾರಕ್ಕೆ ಮನವಿ ಮಾಡಿದ್ದ ಭೈರಪ್ಪನವರು, ತಮ್ಮ ಕೃತಿಯನ್ನು ಮೊದಲ ಗೌರವ ಧನಕ್ಕೆ ನೀಡಿದ್ದರು.

    ಇನ್ನೂ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಹುಬ್ಬಳ್ಳಿಗೆ ಬಂದಿದ್ದರು. ಎಂಟು ದಿನ ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಉಣಕಲ್ ಕೆರೆ, ಕಂಚಾಗರಗಲ್ಲಿ, ಧಾರವಾಡದಲ್ಲಿ ಸುತ್ತಾಡಿದ್ದರು.ಇದನ್ನೂ ಓದಿ: ನಾಡಿನ ಶ್ರೀಮಂತ ಇತಿಹಾಸವನ್ನು ಪರಿಚಯಿಸಿದ್ದ ಸಾಹಿತ್ಯದ ಸಾಕ್ಷಿಪ್ರಜ್ಞೆ: ಆರ್‌ಎಸ್‌ಎಸ್‌ ಸಂತಾಪ

  • ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

    ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

    ನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರರು ಹಾಗೂ ಹೆಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿರುವ ಹೆಚ್.ಎಸ್ ವೆಂಕಟೇಶಮೂರ್ತಿ (HS Venkatesh Murty) ಇಂದು ವಿಧಿವಶರಾಗಿದ್ದಾರೆ.

    ಮೂಲತಃ ದಾವಣಗೆರೆ (Davanagere) ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು.

    ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ (PH.D) ಪದವಿ ಪಡೆದಿದ್ದಾರೆ. 2000ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದರು.

    ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನು ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ.

    ಕೃತಿಗಳು:
    ಇವರ ಪ್ರಮುಖ ನಾಟಕಗಳು : ಕ್ರಿಯಾಪರ್ವ, ಎಷ್ಟೊಂದು ಮುಗಿಲು, ನದೀತೀರದಲ್ಲಿ, ಉತ್ತರಾಯಣ, ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ, ಕಂಸಾಯಣ ಮೊದಲಾದವು.
    ಇವರ ಮುಖ್ಯ ಕಾವ್ಯಕೃತಿಗಳು; ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಮೊದಲಾದವು.
    ಕವನ ಸಂಕಲನಗಳು: ಸಿಂದಬಾದನ ಆತ್ಮಕಥೆ, ಕ್ರಿಯಾಪರ್ವ, ಒಣಮರದ ಗಿಳಿಗಳು, ಎಷ್ಟೊಂದು ಮುಗಿಲು
    ನದೀತೀರದಲ್ಲಿ, ಉತ್ತರಾಯಣ.
    ಮಕ್ಕಳ ಕೃತಿಗಳು: ಹಕ್ಕಿಸಾಲು, ಅಳಿಲು ರಾಮಾಯಣ, ಅಜ್ಜೀ ಕಥೆ ಹೇಳು, ಚಿನ್ನಾರು ಮುತ್ತ

    85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿವೆ.

    ಇಂದು ಹೆಚ್.ಎಸ್ ವೆಂಕಟೇಶಮೂರ್ತಿ ಅವರು ನಮ್ಮನ್ನಗಲಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

  • ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

    ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

    – ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಸರ್ಕಾರ ಬದ್ಧ
    – ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು

    ಮಂಡ್ಯ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ (Mandya) ಜನರದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಸಂತೋಷದಿಂದ ಪಾಲ್ಗೊಂಡಿದ್ದೇನೆ. ಈ ಸಮ್ಮೇಳನ ಕನ್ನಡದ ಹಬ್ಬ. ಮಂಡ್ಯ ಜಿಲ್ಲೆ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿದೆ. ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನವನ್ನು ಈ ಜನರು ಹೊಂದಿದ್ದಾರೆ. ಸತ್ಯಾಗ್ರಹ ಸೌಧ ಈ ಭಾಗದ ಧೈರ್ಯ, ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಈ ಜಿಲ್ಲೆ ಅಪ್ಪಟ ಕನ್ನಡಿಗರನ್ನು ಹೊಂದಿದ್ದು, ಜಾತ್ಯತೀತ ಈ ನೆಲದ ಗುಣವಾಗಿದೆ. ಕನ್ನಡ ಭಾಷೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದರು.ಇದನ್ನೂ ಓದಿ: 4 ಜಿಲ್ಲೆ, 50ಕ್ಕೂ ಹೆಚ್ಚು ಗ್ರಾಮ, 14 ಗಂಟೆ ಅಲೆದಾಡಿಸಿದ್ರು.. ಪೊಲೀಸರು ದೌರ್ಜನ್ಯ ಎಸಗಿದ್ರು: ನೋವು ಹೇಳಿಕೊಂಡ ಸಿ.ಟಿ.ರವಿ

    ಮನೆಯ ಒಡವೆ ಮಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಕಟ್ಟಿಸಿದ್ದರು. ಕೆಆರ್‌ಎಸ್ ಕಟ್ಟುವಾಗ ಟಿಪ್ಪು ಸುಲ್ತಾನ್ ಸ್ಮರಿಸಿದರು. ಆಧುನಿಕ ಮಂಡ್ಯದ ನಿರ್ಮಾಣದಲ್ಲಿ ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಅವರನ್ನು ಮರೆಯುವಂತಿಲ್ಲ. ವಿಶ್ವವೇ ಜಾಗತಿಕ ಹಳ್ಳಿಯಾಗಿರುವಾಗ ನಮ್ಮತನವನ್ನು ಬಿಟ್ಟುಕೊಡಬಾರದು. ಭಾಷೆ ಉಳಿಯುವುದು, ಬೆಳೆಯುವುದು ಅದನ್ನು ಬಳಸಿದಾಗ ಮಾತ್ರ. ನುಡಿಬಿಟ್ಟರೇ ನಾಡು ಬಿಟ್ಟಂತೆ ಭಾಷೆಗೇಡಿ ದೇಶಗೇಡಿಯಂತೆ. ಬಳಸದೆ ಹೋದರೆ ಭಾಷೆಯ ಅಸ್ತಿತ್ವ ಮತ್ತು ಬೆಳವಣಿಗೆಗೆ ಅಪಾಯವಾಗುತ್ತದೆ. ಕನ್ನಡದ ಅಸ್ಮಿತೆಗೆ ಉಂಟಾಗುವ ಸಮಸ್ಯೆ ಗುರುತಿಸಿ, ಪರಿಹಾರ ಕಂಡುಕೊಳ್ಳಲು ಸಮ್ಮೇಳನ ಸಹಾಯಕಾರಿಯಾಗುತ್ತದೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಿರಬೇಕು. ಅವರದೇ ಭಾಷೆಯಲ್ಲಿ ಮಾತನಾಡುವುದನ್ನು ಬಿಟ್ಟು, ಇದು ನಿನ್ನ ಭಾಷೆ, ದೇಶ ಭಾಷೆ, ಸಾವಿರಾರು ವರ್ಷಗಳ ಸುಪುಷ್ಪ, ಸಾಹಿತ್ಯ ಭಾಷೆ ಎಂದು ಕುವೆಂಪುರವರ ಸಾಲು ನೆನೆದು ಮಾತನಾಡಿದರು.

    ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ 25 ಅಡಿ ಪ್ರತಿಮೆಯಿದೆ. ಕರ್ನಾಟಕ ಸಾಹಿತ್ಯಿಕವಾಗಿ ಸಮೃದ್ಧ ಇತಿಹಾಸ ಹೊಂದಿದೆ. ಕರ್ನಾಟಕ 8 ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿದೆ. ಕನ್ನಡ ಡಿಜಿಟಲೀಕರಣ ಆರಂಭಿಸಲಾಗಿದೆ. ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಹಾಗೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಹೃದಯದ ಭಾಷೆ ಕನ್ನಡವಾಗಿರಬೇಕು. ಮಾತೃಭಾಷೆ ಶಿಕ್ಷಣಕ್ಕೆ ಒತ್ತುನೀಡಬೇಕು. ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು ಎಂದು ತಿಳಿಸಿದರು.

    ಸಾಹಿತ್ಯ ಜನಜೀವನದ ಪ್ರತಿಬಿಂಬವಾಗಿಬೇಕು. ಸಾಹಿತಿಗಳು ಜನಸಾಮಾನ್ಯರ ನೋವು ನಲಿವನ್ನು ಬರಹದ ಮೂಲಕ ಹಿಡಿದಿಡಬೇಕು. ಜಗತ್ತಿನ ಮಹತ್ವದ ಕೃತಿಗಳನ್ನು ತುರ್ತಾಗಿ ಕನ್ನಡಕ್ಕೆ ಅನುವಾದ ಮಾಡಬೇಕು. ವೈಜ್ಞಾನಿಕ, ವೈಚಾರಿಕ ದೃಷ್ಟಿಯಿಂದ ಪರಿಶೀಲಿಸಬೇಕು. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಮಾಮೂಲಿ ಸಮ್ಮೇಳನವಾಗದೇ ನಾಡಿನ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಮ್ಮೇಳನವಾಗಬೇಕು. ದ್ವೇಷವಾದಿ ಶಕ್ತಿಗಳು ಮಂಡ್ಯದಲ್ಲಿ ವಿಷ ಬಿತ್ತಲು ಪ್ರಯತ್ನಿಸಿದರು. ಆದರೆ ಸಿಹಿ ಬೆಳೆಯುವ ಮಂಡ್ಯದವರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ. ಇತಿಹಾಸದಲ್ಲಿ ಮತ್ತೊಮ್ಮೆ ಮಂಡ್ಯದವರು ಸಿಹಿ ನೀಡುವವರು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದೀರಿ ಎಂದು ಮಂಡ್ಯದ ಜನರನ್ನು ಕೊಂಡಾಡಿದರು.ಇದನ್ನೂ ಓದಿ: ಒಂದೇ ರಾತ್ರಿ 8ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ – 3.87 ಲಕ್ಷ ಮೌಲ್ಯದ ವಸ್ತು ಲೂಟಿ

  • ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ: ಕುಂ.ವೀರಭದ್ರಪ್ಪ

    ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ: ಕುಂ.ವೀರಭದ್ರಪ್ಪ

    ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯ ಬಂಧನದ ವಿಚಾರ ತಿಳಿದು ಬಹಳ ಸಂತೋಷವಾಗಿದೆ. ಆತನನ್ನು ಬ್ರೈನ್ ವಾಷ್ ಮಾಡಿ ಆಯುಧವಾಗಿ ಸಿದ್ಧಮಾಡಿದ ವ್ಯವಸ್ಥೆ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (Kum Veerabhadrappa) ತಿಳಿಸಿದ್ದಾರೆ.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಆರೋಪಿ ಪ್ರತಿ ಸಲ ಪತ್ರ ಬರೆಯುವಾಗ ನಾನು ಅದನ್ನ ಬೆದರಿಕೆ ಪತ್ರ ಎಂದುಕೊಳ್ಳುತ್ತಿರಲಿಲ್ಲ. ಬದಲಿಗೆ ಪ್ರೇಮ ಪತ್ರ ಎಂದು ತಿಳಿದುಕೊಳ್ಳುತ್ತಿದ್ದೆ. ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ (CCB) ಅಧಿಕಾರಿಗಳು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    ಬೆದರಿಕೆ ಪತ್ರ ಬಂದಾಗ ನನ್ನ ಮನೆಯವರಿಗೆ ಹಾಗೂ ಪತ್ನಿಗೆ ಹೆಚ್ಚು ಆತಂಕವಾಗುತ್ತಿತ್ತು. ಹೊರಗಡೆ ಹೋಗದಂತೆ ಕುಟುಂಬ ಒತ್ತಡ ಹೇರುತ್ತಿತ್ತು. ಈಗ ಆರೋಪಿಯ ಬಂಧನವಾಗಿದೆ. ಆತನ ಬಗ್ಗೆ ನನಗೆ ಯಾವ ದ್ವೇಷವೂ ಇಲ್ಲ. ಸಾಹಿತಿಗಳು ಸಂವಿಧಾನದ ಪರವಾಗಿ ಮಾತನಾಡಬೇಕು. ಅದು ಸಾಹಿತಿಗಳ ಕೆಲಸ ಕೂಡ, ಅದಕ್ಕೆ ಬೆದರಿಕೆ ಹಾಕಿದರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

    ಪತ್ರದಲ್ಲಿ ನಮ್ಮ ತಿಥಿ ದಿನಾಂಕ ಸೇರಿದಂತೆ, ಸಿಎಂಗೆ ಸಿದ್ದರಾಮಯ್ಯ ಅವರನ್ನು ಕಂಸನಿಗೆ ಹೋಲಿಸಿ ಪತ್ರ ಬರೆಯುತ್ತಿದ್ದ. ನಮ್ಮ ಭಾಷಣದ ಅಂಶಗಳನ್ನೇ ಇಟ್ಟುಕೊಂಡು ಪತ್ರ ಬರೆಯುತ್ತಿದ್ದ. ಒಮ್ಮೆ ಸಾವರ್ಕರ್ ಬಗ್ಗೆ ಭಾಷಣ ಮಾಡಿದ್ದಕ್ಕೆ ಪತ್ರ ಬರೆದು ಸಾವರ್ಕರ್ ಬಗೆಗಿನ ಪುಸ್ತಕಗಳನ್ನು ಕಳಿಸಿಕೊಟ್ಟಿದ್ದರು. ಸರ್ಕಾರ ಸಾಹಿತಿಗಳಿಗೆ ಸೂಕ್ತ ಭದ್ರತೆ ಒದಗಿಸಿ ಮನು ಪರಿಣಿತ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೀಪವೊಂದು ಮರೆಯಾಗಿದೆ: ಸಿದ್ದಲಿಂಗಯ್ಯನವರ ನಿಧನಕ್ಕೆ ಸಿ.ಟಿ.ರವಿ ಸಂತಾಪ

    ದೀಪವೊಂದು ಮರೆಯಾಗಿದೆ: ಸಿದ್ದಲಿಂಗಯ್ಯನವರ ನಿಧನಕ್ಕೆ ಸಿ.ಟಿ.ರವಿ ಸಂತಾಪ

    ಬೆಂಗಳೂರು: ದೀಪವೊಂದು ಮರೆಯಾಗಿದೆ. ಬದುಕಿನ ಅಸ್ಮಿತೆಗಳನ್ನು, ಬದುಕಿನ ಕಥನಗಳನ್ನು ಅಕ್ಷರ ರೂಪದಲ್ಲಿ ಕಟ್ಟಿದವರು ದಲಿತ ಕವಿ ಶ್ರೀ ಸಿದ್ದಲಿಂಗಯ್ಯನವರು. ಸಾಹಿತ್ಯ ಲೋಕದಲ್ಲಿ ತಮ್ಮ ವರ್ಗದ ಅಸ್ಮಿತೆಗೆ ಧ್ವನಿಯಾಗಿ ‘ದಲಿತ ಕವಿ’ಎಂದೇ ಪ್ರಸಿದ್ಧರಾದ ನಾಡೋಜ ಸಿದ್ಧಲಿಂಗಯ್ಯನವರ ಅಗಲುವಿಕೆಗೆ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರು ಸಂತಾಪ ಸೂಚಿಸಿದ್ದಾರೆ.

    ಇವರ ಒಳ ಧ್ವನಿಯ ಆಕ್ರೋಶದಿಂದ ಹುಟ್ಟಿದ ಹಾಡುಗಳು ಆರಂಭದ ದಿನಗಳಲ್ಲಿ ಚಳುವಳಿಗೆ ಬಲ ತುಂಬಿದವು ನಂತರದ ದಿನಗಳಲ್ಲಿ ರಾಷ್ಟ್ರೀಯತೆಯ ಕಾರಣಕ್ಕಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡ ಶ್ರೀಯುತರು ಕನ್ನಡ ಸಾಹಿತ್ಯ ರಂಗದ ಒಬ್ಬ ಅಪ್ರತಿಮ ಸಾಧಕರು. ಶ್ರೀಯುತರ ಸಾಹಿತ್ಯದ ಕೃಷಿಗೆ ಕನ್ನಡದ ಶ್ರೇಷ್ಠ ಪ್ರಶಸ್ತಿ ಪಂಪ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿದ್ದವು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಮೊದಲಾದ ಕೃತಿಗಳನ್ನು ರಚಿಸಿದ ಶ್ರೀಯುತರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ. ಎರಡು ಬಾರಿ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಶ್ರೀಯುತರು 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕವಿ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅತ್ತಂತ ಸಮರ್ಪಕವಾಗಿ ಕೆಲಸ ನಿರ್ವಹಿಸಿದ್ದರು.

    ನನ್ನಂತಹ ಸಾವಿರ ಸಾವಿರ ಓದುಗರ ಪಾಲಿಗೆ ಶ್ರೀಯುತರ ಅಗಲಿಕೆ ಅತಿದೊಡ್ಡ ನಷ್ಟ. ಇಹಕಾಯವನ್ನು ತೊರೆದಿದ್ದರೂ ಅವರ ಬರವಣಿಗೆಗಳ ಮೂಲಕ ನಮ್ಮ ನಡುವೆ ಸದಾ ನೆಲೆಸಿರುತ್ತಾರೆ. ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಅವರ ಅಭಿಮಾನಿ ವರ್ಗಕ್ಕೆ ಹಾಗೂ ಓದುಗ ಬಳಗಕ್ಕೆ ಶ್ರೀ ಗುರು ದತ್ತಾತ್ರೇಯರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

    ನಾರಾಯಣಸ್ವಾಮಿ ಸಂತಾಪ:
    ಕನ್ನಡದ ಕವಿ ಡಾ ಸಿದ್ಧಲಿಂಗಯ್ಯ ನವರು ಇಹಲೋಕ ತ್ಯಜಿಸಿದ್ದಾರೆ. ದಲಿತ ಸಮುದಾಯದ ಉನ್ನತಿ ಮತ್ತು ಪ್ರಗತಿಗಾಗಿ ಶ್ರಮಿಸಿದ ಸಿದ್ದಲಿಂಗಯ್ಯ ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸಂತಾಪ ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಮಾನ್ಯ ಯಡಿಯೂರಪ್ಪನವರಲ್ಲಿ ಮನವಿ ಮಾಡುತ್ತೇನೆ. ಸಿದ್ಧಲಿಂಗಯ್ಯನವರು ರಾಜ್ಯದಲ್ಲಿ ಹೆಸರಾಂತ ಕವಿಗಳು ಮಾತ್ರವಲ್ಲ ಅವರು ಪ್ರೊಫೆಸರ್ ಆಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಾಗೂ ಎರಡು ಅವಧಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿ ರಾಜ್ಯದಲ್ಲಿ ಜನಾನುರಾಗಿ ಆಗಿದ್ದಾರೆ. ಆದ್ದರಿಂದ ಅವರ ಸಹಸ್ರಾರು ಸಂಖ್ಯೆಯ ಶಿಷ್ಯವೃಂದ ಹಾಗೂ ಅವರ ಅನುಯಾಯಿಗಳು ಸಿದ್ಧಲಿಂಗಯ್ಯನವರನ ಅಂತ್ಯಕ್ರಿಯೆ ನಡೆಸಲು ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಪ್ರೊಫೆಸರ್ ಜಿ.ಎಸ್ ಶಿವರುದ್ರಪ್ಪ ಮತ್ತು ಪ್ರೊಫೆಸರ್ ಯು.ಆರ್ ಅನಂತಮೂರ್ತಿರವರ ಸ್ಮಾರಕಗಳ ಸ್ಥಳದಲ್ಲಿ ಅಂತ್ಯಕ್ರಿಯೆಗೆ ಸ್ಥಳಾವಕಾಶ ಕೋರುತ್ತಿದ್ದಾರೆ. ದಯಮಾಡಿ ದಲಿತ ಸಮುದಾಯಗಳ ಈ ಮನವಿಗೆ ಸ್ಪಂದಿಸಿ ಅವಕಾಶ ಕಲ್ಪಿಸಿಕೊಡಲು ಮನವಿ ಮಾಡುತ್ತೇನೆ ಅಂತಾ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ದಲಿತ ಕವಿ ಸಿದ್ದಲಿಂಗಯ್ಯ ನಿಧನ – ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ

  • ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇನ್ನಿಲ್ಲ

    ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇನ್ನಿಲ್ಲ

    ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಖ್ಯಾತಿ ಗಳಿಸಿದ್ದ ಕೆ.ಎಸ್ ನಿಸಾರ್ ಅಹಮದ್(84) ಇಂದು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಈ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿಸಾರ್ ಅಹಮದ್‍ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ.

    10ನೇ ವಯಸ್ಸಿನಲ್ಲೇ ಸಾಹಿತ್ಯದ ಮೇಲೆ ಆಸಕ್ತಿ ಹೊಂದಿದ್ದ ಕವಿಗೆ ರಾಜ್ಯೋತ್ಸವ, ನಾಡೋಜ, ಪದ್ಮಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿದೆ. 1974ರಲ್ಲಿ ಪ್ರಕಟವಾದ ‘ನಿತ್ಯೋತ್ಸವ’ ಕವನ ಸಂಕಲನ ನಿಸಾರ್ ಅವರಿಗೆ ಬಹಳ ಜನಪ್ರಿಯತೆ ತಂದು ಕೊಟ್ಟಿತು. ಇಂದು ಕೂಡ ಕನ್ನಡದ ಹಬ್ಬ ಎಲ್ಲೇ ನಡೆದರು ನಿತ್ಯೋತ್ಸವ ಕವಿತೆಯ ಗಾಯನವಿಲ್ಲದೆ ಅದು ಅಪೂರ್ಣ. ಕೆಎಸ್‍ಆರ್ ಅವರ ಅನೇಕ ಕವಿತೆಗಳು ಸುಗಮ ಸಂಗೀತದ ಧ್ವನಿ ಸುರುಳಿಗಳ ಮೂಲಕ ಕನ್ನಡಿಗರನ್ನು ತಲುಪಿವೆ.

    ಜನಪ್ರಿಯತೆ ಗಳಿಸಿರುವ ‘ಸುಮಧುರ’ ಮತ್ತು ‘ನವೋಲ್ಲಾಸ’ ಕನ್ನಡದ ಮೊದಲ ಜೋಡಿ ಧ್ವನಿ ಸುರುಳಿಗಳು. ಈವರೆಗೆ ಅವರ ಕವನಗಳ ಏಳು ಧ್ವನಿ ಸುರುಳಿಗಳು ಬಿಡುಗಡೆ ಗೊಂಡಿವೆ.