Tag: kannada sahithya sammelana

  • 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ

    87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆ

    ಬೆಂಗಳೂರು: ಮಂಡ್ಯದಲ್ಲಿ (Mandya) ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahithya Sammelana) ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ (ಗೊ.ರು.ಚ) (Go.Ru Channabasappa) ಅವರು ಆಯ್ಕೆಯಾಗಿದ್ದಾರೆ.

    ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ಅವರು ರಚಿಸಿದ್ದಾರೆ. ಗೊ.ರು ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993), ಮಂಡ್ಯ (1994) ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

    ಸಂಘಟಕರಾಗಿದ್ದ ಗೊ.ರು ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ ಮೇ 18 1930 ರಂದು ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜೊತೆಗೆ ವಿವಿಧ ಸಂಘ ಸಂಸ್ಥೆಗಳಿಗಾಗಿ ದುಡಿದಿದ್ದಾರೆ.

    ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳಿಗೆ ಹೆಡ್‍ಕ್ವಾಟರ್ಸ್‌ ಕಮಿಷನರ್ ಆಗಿ ಕೆಲಸಮಾಡಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

  • ಜನವರಿ 6 ರಿಂದ 8ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

    ಜನವರಿ 6 ರಿಂದ 8ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

    ಬೆಂಗಳೂರು: ಮುಂದಿನ ವರ್ಷದ ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahithya Sammelana) ನಡೆಯಲಿದೆ.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್(Sunil Kumar) ಅವರು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಜೊತೆ ಚರ್ಚೆ ನಡೆಸಿ ದಿನಾಂಕವನ್ನುಅಂತಿಮಗೊಳಿಸಿದ್ದಾರೆ. ಇದನ್ನೂ ಓದಿ: ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು: ಸಿದ್ದರಾಮಯ್ಯ

     

    ವಿಧಾನಸೌಧದಲ್ಲಿ ಇಂದು ಸುನಿಲ್ ಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

    ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಬರುವ ನಿರೀಕ್ಷೆಯಿದೆ. ಪ್ರತಿ ದಿ‌ನ 2.50 ಲಕ್ಷ ಜನರಿಗೆ ಊಟೋಪಚಾರ, 30 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೈ ಪರ ಮತಯಾಚಿಸಿದ ಚಂಪಾಗೆ ವೇದಿಕೆಯಲ್ಲೇ ತಿರುಗೇಟು ಕೊಟ್ಟ ಅನಂತ್ ಕುಮಾರ್: ವಿಡಿಯೋ ನೋಡಿ

    ಕೈ ಪರ ಮತಯಾಚಿಸಿದ ಚಂಪಾಗೆ ವೇದಿಕೆಯಲ್ಲೇ ತಿರುಗೇಟು ಕೊಟ್ಟ ಅನಂತ್ ಕುಮಾರ್: ವಿಡಿಯೋ ನೋಡಿ

    ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ದಿನದಂದು ಪರೋಕ್ಷವಾಗಿ ಬಿಜೆಪಿಯನ್ನು ಟೀಕಿಸಿ ಕಾಂಗ್ರೆಸ್ ಗೆ ಮತ ನೀಡಿ ಎಂದಿದ್ದ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಪಾಟೀಲ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಆಕ್ರೋಶ ಭರಿತವಾಗಿ ವೇದಿಕೆಯಲ್ಲೇ ತಿರುಗೇಟು ನೀಡಿದ್ದಾರೆ.

    ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತಾನಾಡಿದ ಅನಂತ್ ಕುಮಾರ್, ಈ ವೇದಿಕೆ ರಾಜಕೀಯ ಭಾಷಣ ಮಾಡಲು ಅಲ್ಲ. ಯಾರಿಗೆ ಮತ ಹಾಕಬೇಕು ಅನ್ನುವುದನ್ನು ಹೇಳುವುದಕ್ಕೆ ಬೇರೆ ವೇದಿಕೆಗಳಿವೆ ಅಲ್ಲಿ ಹೇಳಿ. ಕನ್ನಡ ಸಮ್ಮೇಳನದಲ್ಲಿ ಕನ್ನಡ ದ ಬಗ್ಗೆ ಮಾತನಾಡಿ. ಇಡೀ ದೇಶವೇ ಸಮ್ಮೇಳವನ್ನು ನೋಡುತ್ತಿದೆ. ಹೀಗಿರುವಾಗ ಇಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಾಹಿತ್ಯ ಸಮ್ಮೇಳದಲ್ಲಿ ಡೋಂಗಿತನಕ್ಕೆ ಅವಕಾಶ ಕಲ್ಪಿಸಿಕೊಟ್ಟರೆ ವೇದಿಕೆಯ ಮೌಲ್ಯ ಹಾಳಾಗುತ್ತದೆ ಎಂದು ನೇರವಾಗಿ ಹೇಳಿದರು.

    ತಮ್ಮ ಭಾಷಣದ ಉದ್ದಕ್ಕೂ ಚಂಪಾ ಹೇಳಿಕೆಗೆ ತಮ್ಮ ಮೊಣಚು ಭಾಷಣದ ಮೂಲಕ ಕೇಂದ್ರ ಸಚಿವ ಟಾಂಗ್ ನೀಡಿದರು. ವೇದಿಕೆ ಮೇಲೆ ಕನ್ನಡದ ಬಗ್ಗೆ ಚರ್ಚೆ ಮಾಡಿ, ರಾಜಕೀಯ ಬೇಡ. ಕಸಾಪ ಸ್ಥಾಪನೆ ಮಾಡಿದ ರಾಜಮನೆತನಕ್ಕೆ ಸಮ್ಮೇಳಕ್ಕೆ ಆಹ್ವಾನ ನೀಡದೇ ಅವಮಾನ ಮಾಡಿದ್ದು ಸರಿಯಲ್ಲ. ನಾವು ನಾಡು, ನುಡಿ, ಜಲ, ನೆಲದ ವಿಷಯಕ್ಕೆ ಬಂದಾಗ ಪಕ್ಷತೀತವಾಗಿ ಕೆಲಸ ಮಾಡಿದ್ದೇವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ವಿಷಯದಲ್ಲೂ ಹೋರಾಡಿದ್ದೇವೆ. ಕನ್ನಡದ ವಿಷಯಕ್ಕೆ ಬಂದಾಗ ಎಲ್ಲಕ್ಕೂ ಸಿದ್ಧ. ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇವೆ ಎಂದು ಹೇಳಿ ತಿರುಗೇಟು ನೀಡಿದರು.

    ಈ ವೇಳೆ ವೇದಿಕೆ ಮೇಲಿದ್ದ ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ಭಾಷಣವನ್ನು ಲೈವ್ ಮಾಡಿದ್ದು ವಿಶೇಷವಾಗಿತ್ತು. ಭಾಷಣ ಮುಗಿಯುತ್ತಿದಂತೆ ಸಮ್ಮೇಳನದ ಪ್ರತಿಕ್ರಿಯೆಯನ್ನು ಅಲಿಸದ ಅನಂತ್ ಕುಮಾರ್ ಹಾಗೂ ಪ್ರತಾಪ್ ಸಿಂಹ ವೇದಿಕೆಯಿಂದ ನಿರ್ಗಮಿಸಿದರು.

    ಅನಂತ್ ಕುಮಾರ್ ಅಕ್ರೋಶದ ಭಾಷಣ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಫೇಸ್‍ಬುಕ್ ನಲ್ಲಿ ಲೈವ್ ಮಾಡಿದ್ದು ನೋಡಿ ಚಂಪಾಗೆ ತಿರುಗೇಟು ನೀಡಲು ಸಿದ್ಧರಾಗಿಯೇ ಬಿಜೆಪಿ ನಾಯಕರು ವೇದಿಕೆಯನ್ನು ಏರಿದ್ದಾರೆ ಎನ್ನುವ ಅಭಿಪ್ರಾಯ ಜನರಲ್ಲಿ ಮೂಡಿತ್ತು.

    ಚಂಪಾ ಹೇಳಿದ್ದು ಏನು?: ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಸ್ವಾತಂತ್ರ್ಯ, ಸಮಾನತೆ, ಸಹಭಾವ, ಸೆಕ್ಯುಲರಿಸಂ, ಸಾಮಾಜಿಕ ನ್ಯಾಯ ಮುಂತಾದವುಗಳಿಗೆ ಕಂಟಕ ಒದಗಿಬಂದಿದೆ ಎಂಬ ಆತಂಕ ವ್ಯಕ್ತಪಡಿಸಿದ್ರು. ಅಲ್ಲದೇ ನಮ್ಮ ರಾಜ್ಯದ ಹಿತಾಸಕ್ತಿಗಳ ಸಂರಕ್ಷಣೆಗಾಗಿ ಸೆಕ್ಯುಲರ್ ಪಕ್ಷಗಳ ಪರವಾಗಿ ಮತಚಲಾಯಿಸಬೇಕು ಎಂದು ಮನವಿ ಮಾಡಿದ್ದರು.

    ಒಂದು ರಾಷ್ಟ್ರೀಯ ಪಕ್ಷ ಕನ್ನಡದ ಪರ ಕೆಲಸ ಮಾಡುತ್ತಿದೆ. ಆದರೆ, ಇನ್ನೊಂದು ರಾಷ್ಟ್ರೀಯ ಪಕ್ಷವು ನಾಡಧ್ವಜ ವಿವಾದ, ಮೆಟ್ರೋದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಧ್ವನಿಯೆತ್ತುತ್ತಿ ಮೌನ ತಾಳಿದೆ. ಈ ಚುನಾವಣೆಯಲ್ಲಿ ಆ ಪಕ್ಷವನ್ನು ಜನ ದೂರವಿಡಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಗೆ ಮತ ಹಾಕುವಂತೆ ನೆರೆದಿದ್ದ ಜನತೆಗೆ ಕರೆಕೊಟ್ಟಿದ್ದರು.

    ಕನ್ನಡ ಸಂಸ್ಕೃತಿಗೆ ಸಂಸ್ಕೃತ, ಹಿಂದಿ, ಇಂಗ್ಲಿಷ್ ಕಡುವೈರಿಯಾಗಲು ಕೇಂದ್ರ ಸರಕಾರದ ನೀತಿಯೇ ಕಾರಣವಾಗಿದೆ. ಒಂದೇ ಭಾಷೆ-ಒಂದೇ, ಧರ್ಮ-ಒಂದೇ ಸಿದ್ಧಾಂತ ಎಂಬ ಧಾಟಿಯಲ್ಲಿ ನಾವೆಲ್ಲ ಒಕ್ಕೊರಲಿನಿಂದ ಹಾಡುತ್ತಿದ್ದ ವಂದೇಮಾತರಂ ಗೀತೆಯನ್ನೇ ಹೈಜಾಕ್ ಮಾಡಲಾಗಿದೆ. ಭಾರತ ಮಾತೆ, ಬರೀ ಹಿಂದೂ ಮಾತೆ ಆಗುತ್ತಿರುವಳೇ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಶ್ನೆ ಮಾಡುವುದೇ ರಾಷ್ಟ್ರದ್ರೋಹವಾಗಿ, ವೈಚಾರಿಕತೆ ಮೇಲೆ ಹಲ್ಲೆ ಎಸಗುವುದೇ ಸಂಸ್ಕೃತಿಯಾಗಿ, ದಟ್ಟ ಭಯ ಆವರಿಸಿದೆ ಎಂದಿದ್ದರು.

     

     

  • ಮಲ್ಲಿಗೆ ನಾಡಲ್ಲಿ ಕಸ್ತೂರಿ ಕನ್ನಡದ ಕಂಪು – ಇಂದಿನಿಂದ 3 ದಿನ ನುಡಿತೇರು ವೈಭವ

    ಮಲ್ಲಿಗೆ ನಾಡಲ್ಲಿ ಕಸ್ತೂರಿ ಕನ್ನಡದ ಕಂಪು – ಇಂದಿನಿಂದ 3 ದಿನ ನುಡಿತೇರು ವೈಭವ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದೆ.

    ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಮೂರು ದಿನಗಳ ಕನ್ನಡ ಅಕ್ಷರ ಜಾತ್ರೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ಮುಗಿದಿವೆ. ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಈ ಸಮ್ಮೇಳನದ ಅಧ್ಯಕ್ಷರಾಗಿದ್ದು, ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ.

    ಮೈಸೂರು ಅರಮನೆಯ ದರ್ಬಾರ್ ಮಾದರಿಯಲ್ಲಿ ಮುಖ್ಯವೇದಿಕೆ ಸಿದ್ಧ ಮಾಡಲಾಗಿದೆ. ಒಟ್ಟು 22 ಗೋಷ್ಠಿಗಳು ನಡೆಯಲಿವೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನದ ಮೊದಲ ದಿನದ ಸಂಜೆ 5 ಗಂಟೆಗೆ ಮಾಧ್ಯಮ ಮುಂದಿರುವ ಸವಾಲು ಕುರಿತು ಪ್ರಮುಖ ಗೋಷ್ಠಿ ನಡೆಯಲಿದ್ದು, ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

    11 ಸಾವಿರ ಪ್ರತಿನಿಧಿಗಳು ಸಮ್ಮೇಳನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು 200 ಕೌಂಟರ್ ತೆರೆಯಲಾಗಿದ್ದು ಊಟಕ್ಕಾಗಿ 2,75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.