ಮಂಡ್ಯ: ಕೊಲೆ ಆರೋಪಿಯಾಗಿದ್ದ ಕುಮಾರ್ ಎಂಬ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಸಾಪ ಅಧ್ಯಕ್ಷನನ್ನಾಗಿ ಮಾಡಿದ್ದ ಕನ್ನಡ ಸಾಹಿತ್ಯ ಪರಿಷತ್ (Kannada Sahitya Parishat) ಇದೀಗ ಅಧ್ಯಕ್ಷ ಸ್ಥಾನದಿಂದ ತೆರವು ಮಾಡಿ ಆದೇಶ ಹೊರಡಿಸಿದೆ. ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ (Mahesh Joshi) ಆದೇಶ ಹೊರಡಿಸಿದ್ದಾರೆ.
ಈ ಬಾರಿ ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆ ಸಿದ್ಧತೆಗೆ ಜಿಲ್ಲೆಯ ತಾಲೂಕು ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತಮ್ಮ ಆಪ್ತನಾದ ಎಂ.ಬಿ ಕುಮಾರ್ ಅವರನ್ನು ಆಯ್ಕೆ ಮಾಡುವಂತೆ ಶಿಪಾರಸ್ಸು ಮಾಡಿದ್ದರು. ಇದನ್ನೂ ಓದಿ: ಶಿರೂರು ಗುಡ್ದ ಕುಸಿತ ದುರಂತ: ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಶವ, ಲಾರಿ ಪತ್ತೆ
ಅದರಂತೆ ಕುಮಾರ್‌ನನ್ನು ಶ್ರೀರಂಗಪಟ್ಟಣದ ಅಧ್ಯಕ್ಷನನ್ನಾಗಿಯೂ ಕಸಾಪ ನೇಮಕ ಮಾಡಿತ್ತು. ಕುಮಾರ್ 2015ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ 30ನೇ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗೆ ಇದ್ದಾನೆ. ಈ ಬಗ್ಗೆ ʻಪಬ್ಲಿಕ್ ಟಿವಿʼ ಸೆ.19ರಂದು ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಇದನ್ನೂ ಓದಿ: ಕೊಲೆ ಆರೋಪಿಯನ್ನು ಕಸಾಪ ತಾಲೂಕು ಅಧ್ಯಕ್ಷನನ್ನಾಗಿ ಮಾಡಲು ಶಾಸಕ ಶಿಫಾರಸು
ಯಾವುದೇ ಕ್ರಿಮಿನಲ್ ಹಿನ್ನೆಲೆ ಉಳ್ಳ ವ್ಯಕ್ತಿಗೆ ಕಸಾಪದಲ್ಲಿ ಯಾವ ಹುದ್ದೆಗಳನ್ನು ನೀಡಬಾರದು ಎಂದು ಬೈಲಾದಲ್ಲಿ ಇದೆ. ಹೀಗಿದ್ದರೂ ಕೊಲೆ ಆರೋಪಿಯಾಗಿರುವ ಕುಮಾರ್‌ಗೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಶಿಫಾರಸ್ಸಿಗೆ ಮಣಿದು ಅಧ್ಯಕ್ಷ ಸ್ಥಾನ ಕೊಡಲಾಗಿದೆ ಎಂದು ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗಿತ್ತು. ಇದನ್ನೂ ಓದಿ: ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂತೋಷ್ ಹೆಗ್ಡೆ
ವರದಿಯ ಬೆನ್ನಲ್ಲೇ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಈ ಬಗ್ಗೆ ಪೂರ್ವಪರ ವಿಚಾರ ಮಾಡಿ ಎಂ.ಬಿ ಕುಮಾರ್‌ನನ್ನು ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಕಸಾಪ ತಾಲೂಕು ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಎಂಬುವವರನ್ನು ಆಯ್ಕೆ ಮಾಡಲಾಗಿದೆ.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಜ್ಯದಲ್ಲಿ ಅತೀ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಸಕ್ಕರೆ ನಾಡು ಮಂಡ್ಯದಲ್ಲಿ ನಿಗದಿ ಮಾಡಲಾಗಿದೆ. ಹೀಗಿರುವಾಗ ಶಾಸಕರೊಬ್ಬರು ತನ್ನ ಆಪ್ತರೂ ಆದ ಕೊಲೆ ಆರೋಪಿಯನ್ನು ಕಸಾಪ ತಾಲೂಕು ಅಧ್ಯಕ್ಷರನ್ನಾಗಿ ಮಾಡಲು ಶಿಫಾರಸು ಹೊರಡಿಸಿದ್ದಾರೆ.
ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತನ್ನ ಆಪ್ತ, ಕೊಲೆ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗೆ ಇರುವ ಒಬ್ಬ ವ್ಯಕ್ತಿಗೆ ತನ್ನ ಶಿಫಾರಸಿನಿಂದ ತಾಲೂಕಿನ ಕನ್ನಡ ಸಾಹಿತ್ಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಜರುಗುವ ಈ ಕನ್ನಡ ಹಬ್ಬಕ್ಕೆ ಮಂಡ್ಯ ಒಂದು ಕಡೆ ಪೂರ್ವಭಾವಿ ಸಿದ್ಧತೆಯಲ್ಲಿ ಇದೆ. ಮಂಡ್ಯದಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರೋದು ಸಮ್ಮೇಳನಕ್ಕೆ ಮತ್ತಷ್ಟು ಮೆರಗು ತಂದಿದೆ. ಇನ್ನೊಂದೆಡೆ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ತಮ್ಮ ಆಪ್ತನಾದ ಕೊಲೆ ಆರೋಪಿ ಜೊತೆ ಜಾಮೀನು ಮೇಲೆ ಹೊರಗೆ ಇರುವ ಎಂ.ಬಿ.ಕುಮಾರ್ ಎಂಬ ವ್ಯಕ್ತಿಗೆ ತಮ್ಮ ಶಿಫಾರಸಿನ ಮೂಲಕ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಮೂಲಕ ಜಾಮೀನಿನ ಮೇಲೆ ಹೊರಗೆ ಇರುವ ಕೋಲೆ ಆರೋಪಿಯನ್ನು ಕನ್ನಡದ ತೇರನ್ನು ಎಳೆಯಲು ಮುಂಬದಿಗೆ ನಿಲ್ಲಿಸಿರೋದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿರುವ ಎಂ.ಬಿ.ಕುಮಾರ್, ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಆಪ್ತ. ಈತ 2015 ಜನವರಿ 3 ರಂದು ನಡೆದ ರೌಡಿಶೀಟರ್ ಕೊಲೆ ಕೇಸ್‌ನಲ್ಲಿ 30ನೇ ಆರೋಪಿಯಾಗಿದ್ದಾನೆ. ಸದ್ಯ ಈ ಕುಮಾರ್ ಬೇಲ್ ಮೇಲೆ ಹೊರಗೆ ಇದ್ದಾನೆ. ಕಸಾಪ ಬೈಲಾ ಪ್ರಕಾರ ಕ್ರಿಮಿನಲ್ ಕೇಸ್ ಹಿನ್ನೆಲೆ ಉಳ್ಳ ಯಾವ ವ್ಯಕ್ತಿಗೂ ಕಸಾಪ ಜವಾಬ್ದಾರಿಯನ್ನು ನೀಡಬಾರದು ಎಂದಿದೆ. ಹೀಗಿದ್ದರೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡನ ಒತ್ತಡಕ್ಕೆ ಮಣಿದು ಎಂ.ಬಿ.ಕುಮಾರ್‌ನನ್ನು ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ, ಈ ಬಗ್ಗೆ ನನ್ನ ಗಮನಕ್ಕೆ ಈಗಷ್ಟೇ ಬಂದಿದೆ. ಈ ಸಂಬಂಧ ವಿಚಾರಣೆ ನಡೆಸಿ ಒಂದು ವೇಳೆ ತಪ್ಪಿದ್ಧರೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು (Kuvempu) ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದಿದ್ದಾರೆ. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್‌ಕುಮಾರ್‌ಗೆ ಜೆಡಿಯು ಸಾರಥ್ಯ
ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಕನ್ನಡನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಈಗಲೂ ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ. ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಅವರು ಹೇಳಿದ್ದಾರೆ.
ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು (Kannada Sahitya Parishat) ಸಾಕಷ್ಟು ಶ್ರಮ ಹಾಕಿದೆ. ನಾನು ಸಿಎಂ ಆಗಿದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಬಳಿಕ ನನ್ನ ಅವಧಿಯಲ್ಲಿ ಸುವರ್ಣಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿಯವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.
ಕನ್ನಡ ನಿತ್ಯ ನಿರಂತರವಾಗಿರಬೇಕು ಎಂದರೆ ಕನ್ನಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದ್ದು, ಸವಾಲುಗಳನ್ನು ಎದುರಿಸಲು ನಮ್ಮ ಮಕ್ಕಳನ್ನು ಸಿದ್ಧಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ, ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ಕುವೆಂಪು ವಿಶ್ವಮಾನವ: ಕುವೆಂಪು ಅವರದ್ದು ಅಪರೂಪದ ವ್ಯಕ್ತಿತ್ವ, ಅವರು ಒಂದು ರೀತಿಯಲ್ಲಿ ಯುಗಪುರುಷರು. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿಯಾಗಿದ್ದಾರೆ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ. ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರಲ್ಲಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ ಎಂದಿದ್ದಾರೆ.
ಕರ್ನಾಟಕದ ಏಕೀಕರಣ ಆಗಬೇಕು ಎಂದು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ನಡೆಯುತ್ತಿದ್ದಾಗ, ದಕ್ಷಿಣ ಭಾಗದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಈ ಸಮಯದಲ್ಲಿ ಕನ್ನಡದ ಮನಸ್ಸುಗಳು ಒಂದಾಗಬೇಕು ಎಂದು ಕುವೆಂಪು ಅವರು ಮೊದಲು ನಿಲುವು ತೆಗೆದುಕೊಂಡಿದ್ದರು. ಅವರು ಆ ಕಾಲದಲ್ಲಿ ಏಕೀಕರಣಕ್ಕೆ ಒತ್ತು ಕೊಟ್ಟವರು. ಕುವೆಂಪು ಅವರ ನಿಲುವನ್ನು ಎಲ್ಲರೂ ಒಪ್ಪಿಕೊಂಡರು. ಈಗ ಕನ್ನಡದ ಮನಸ್ಸುಗಳು ಒಂದಾಗಿವೆ. ಒಂದಾಗುವ ಸಾಹಿತ್ಯವನ್ನೂ ರಚಿಸಿದ್ದಾರೆ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಠರಾಗಿದ್ದಾರೆ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಸಹ ಅವರಲ್ಲಿತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಅವರು ವಿಶ್ವ ಮಾನವರಾಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಕುವೆಂಪು ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವೈಚಾರಿಕವಾಗಿ ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದಿದ್ದಾರೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಕುವೆಂಪು ಅವರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿ. ಅವರ ಸಾಹಿತ್ಯವನ್ನು ಓದಿದವರ್ಯಾರೂ ಚಕಾರ ಎತ್ತುವ ಧೈರ್ಯ ಮಾಡುವುದಿಲ್ಲ. ಯಾರು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿ ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರನ್ನು ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಶೀಘ್ರವಾಗಿಯೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ: 2 ತಿಂಗಳ ಬಳಿಕ ಅಭ್ಯರ್ಥಿ ಶಾಂತಿಬಾಯಿ ಅರೆಸ್ಟ್
ಪತ್ರದಲ್ಲಿ ಏನಿದೆ?
ಜಗದ ಕವಿ, ಯುಗದ ಕವಿ, ನಾಡು ಕಂಡ ಅಪ್ರತಿಮ ಮಹಾಕವಿ, ದಾರ್ಶನಿಕ, ರಸಋಷಿ ಕುವೆಂಪು ಅವರಿಗೆ ಅತ್ಯಂತ ಗೌರವ ಸಲ್ಲಿಸುವ ಸಂಸ್ಥೆ ಕರ್ನಾಟಕದಲ್ಲಿ ಯಾವುದಾದರೂ ಇದೇ ಅಂದರೆ, ಅದು ಕನ್ನಡ ಸಾಹಿತ್ಯ ಪರಿಷತ್ತು. ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸಲಾಗುತ್ತಿತ್ತು.
ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ. ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6-1-2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ದಿನಪತ್ರಿಕೆಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ. ಇದನ್ನೂ ಓದಿ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ
ʻಮನುಜ ಮತ ವಿಶ್ವಪಥʼ ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವಪ್ರತಿಪಾದಕರು ಕುವೆಂಪು ಅವರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು ʻಸರ್ವಜನಾಂಗದ ಶಾಂತಿಯ ತೋಟʼವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ.
ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.
ಕುವೆಂಪು ಅವರ ಪುಸ್ತಕಗಳನ್ನು ಬಹಳ ಗೌರವದಿಂದ, ಭಕ್ತಿಯಿಂದ ಓದುವ ನಾನು, ಅವರ ಪ್ರಕೃತಿ ವರ್ಣನೆಗೆ ಮಾರುಹೋಗುವುದರ ಜೊತೆಗೆ, ಅವರ ಶ್ರೇಷ್ಠ ಚಿಂತನೆಗಳಿಂದ ಪ್ರೇರಿತನಾಗಿ “ಮನುಜ ಮತದಲ್ಲಿ” ನಂಬಿಕೆ ಇಟ್ಟಂಥವನು. ಕುವೆಂಪು ಅವರ ಚಿಂತನೆಯ ಮಾರ್ಗದಲ್ಲಿಯೇ, ಕನ್ನಡ ಸಾಹಿತ್ಯ ಪರಿಷತ್ತು ಜಾತಿ, ಮತ, ಧರ್ಮ, ಲಿಂಗ ತಾರತಮ್ಯವಿಲ್ಲದೆ ನನ್ನ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಸಾಧಾರಣವಾಗಿ ನನ್ನ ಎಲ್ಲ ಭಾಷಣಗಳಲ್ಲೂ ಕುವೆಂಪು ಅವರ ಚಿಂತನೆಗಳನ್ನು ಉಲ್ಲೇಖಿಸುತ್ತೇನೆ. ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ.
ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ತೀರ್ಮಾನ ಬೆಂಬಲಿಸುತ್ತಾ ತಡಮಾಡದೇ ಅಂಥವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.
ಹಾಸನ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು, ದುಬೈನಿಂದ ಹಾಸನದ ಬೇಲೂರಿಗೆ ಬಂದು ಮತದಾನ ಮಾಡಿ ಕನ್ನಡಾಭಿಮಾನ ಮೆರೆದಿದ್ದಾರೆ.
ಮೋನಿಕಾ ದೀಪಕ್ ದುಬೈನಿಂದ ಆಗಮಿಸಿ ಮತದಾನ ಮಾಡಿದ ಗೃಹಿಣಿ. ಕನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಮತ ಚಲಾವಣೆಗೆ ಆಗಮಿಸಿರುವುದಾಗಿ ಹೇಳಿದ ಮೋನಿಕಾ, ನಾನು ಕನ್ನಡ ಸಾಹಿತ್ಯ ಪರಿಷತ್‍ನ ಸದಸ್ಯೆಯಾಗಿರುವುದೇ ದೊಡ್ಡ ಅಭಿಮಾನ ಅಂದಿದ್ದಾರೆ. ಇದನ್ನೂ ಓದಿ: ಹಂಸಲೇಖಾ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್
ಈ ಚುನಾವಣೆಯಲ್ಲಿ ಯಾರೇ ಗೆದ್ದರೂ ಕನ್ನಡಕ್ಕೆ ಉತ್ತಮ ಕೆಲಸ ಮಾಡಲಿ. ನಾವು ವಿದೇಶದಲ್ಲಿದ್ದರೂ ಕನ್ನಡದ ಮೇಲಿನ ಅಭಿಮಾನ ಹೆಚ್ಚಿದೆ. ಯಾರೆಲ್ಲ ಸಾಹಿತ್ಯ ಪರಿಷತ್ ಚುನಾವಣೆಗೆ ಮತ ಹೊಂದಿದ್ದೀರೋ ಅವರೆಲ್ಲ ತಪ್ಪದೇ ನಿಮ್ಮ ಮತ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ. ಒಂದೂವರೆ ವರ್ಷದ ಮಗುವಿನೊಂದಿಗೆ ಬೇಲೂರು ತಾಲೂಕು ಕಚೇರಿಯಲ್ಲಿ ಮತದಾನ ಮಾಡಿದ ಮೋನಿಕಾ ದೀಪಕ್ ಮತದಾನ ಮಾಡಿದ ನಂತರ ದುಬೈಗೆ ವಾಪಸ್ ತೆರಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ಅಧಿಕೃತವಾಗಿ ರದ್ದುಗೊಳಿಸಿ, ನಮ್ಮ ವಿರುದ್ಧದ ಪ್ರಕರಣ ಹಿಂತೆಗೆದುಕೊಳ್ಳಿ- ರೈತರ ಬಿಗಿಪಟ್ಟು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಹಾಗೂ ಬಿಬಿಎಂಪಿಯ ಒಣ ಪ್ರತಿಷ್ಟೆಯಿಂದ ಒಂದು ವಾರ ಪಾಲಿಕೆಯ ಖಾಲಿ ಸೈಟಿನ ಮುಳ್ಳಿನಲ್ಲಿ ಮಲಗಿದ್ದ ಭುವನೇಶ್ವರಿ ದೇವಿ, ರಾತ್ರೋರಾತ್ರಿ ನಗರದ ಖಾಲಿ ಸೈಟಿನಲ್ಲಿ ಎದ್ದು ನಿಂತಿದ್ದಾಳೆ.
ಹೌದು.ನಗರದ ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ಬಿಬಿಎಂಪಿ ಜಾಗದಲ್ಲಿ ರಾತ್ರೋರಾತ್ರಿ, ಕನ್ನಡ ಸಾಹಿತ್ಯ ಪರಿಷತ್‍ನವರು ಭುವನೇಶ್ವರಿ ತಾಯಿಯ ಪುತ್ಥಳಿಯನ್ನ ನಿರ್ಮಿಸಿದ್ದಾರೆ.
ಜಿಲ್ಲಾ ಕನ್ನಡ ಭವನವನ್ನು ನಿರ್ಮಿಸುವ ಉದ್ದೇಶದಿಂದ ಈ ಸ್ಥಳದಲ್ಲಿ ಭುವನೇಶ್ವರಿ ದೇವಿ ಪುತ್ಥಳಿಯನ್ನು ನಿರ್ಮಿಸಿದ್ದಾರೆ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ. ಇದು ಕಾನೂನು ಬಾಹಿರ ಅಂತ ಸ್ಥಳೀಯ ಕಾರ್ಪೋರೇಟರ್ ರಮೇಶ್ ಕೂಡ ಕೂಡ ವಿರೋಧಿಸಿದ್ದಾರೆ.
ಕಸಾಪ ನಗರ ಜಿಲ್ಲಾಧ್ಯಕ್ಷ ಮಾಯಣ್ಣ, ನಾವು ಎರಡು ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದೇವೆ. ನಗರದ ಶಾಸಕರಿಗೆ ಸಂಸದರಿಗೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಈ ಬಗ್ಗೆ ಮನವಿ ಕೂಡ ಮಾಡಿದ್ದೇವೆ. ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಅವರು ಕೂಡ ಬೆಂಬಲಿಸಿದ್ದಾರೆ. ಆದರೆ ಕೆಲವರ ಕುತಂತ್ರದಿಂದ ಪಾಲಿಕೆ ಇದಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಕಸಾಪ ನಗರ ಜಿಲ್ಲಾಧ್ಯಕ್ಷ ಮಾಯಣ್ಣ ಹೇಳಿದ್ದಾರೆ.
ಬಿಬಿಎಂಪಿ ಈ ಸ್ಥಳವನ್ನು ಉದ್ಯಾನವನಕ್ಕಾಗಿ ಮೀಸಲಿಟ್ಟಿದೆ. ಆದರೆ ಈಗ ಜಿಲ್ಲಾ ಕಸಾಪದ ಸದಸ್ಯರು ಏಕಾಏಕಿ ಬಂದು ಭುವನೇಶ್ವರಿ ಪ್ರತಿಮೆಯನ್ನು ನಿರ್ಮಿಸುವ ಮೂಲಕ ಈ ಜಾಗವನ್ನು ಕಬಳಿಸಲು ಯತ್ನಿಸಿದ್ದಾರೆ. ಈ ಮೂಲಕ ಕಾನೂನು ಉಲ್ಲಂಘಿಸಿದ್ದು, ವಾರ್ಡಿನ ಎಂಜಿನಿಯರೊಬ್ಬರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ.
ಬೆಂಗಳೂರು: ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮನಬಂದಂತೆ ನಾಡಗೀತೆ ಹಾಡುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸಾಹಿತ್ಯ ಪರಿಷತ್ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಸಪಾ ಅಧ್ಯಕ್ಷರಾದ ಮನು ಬಳಿಗಾರ್, ಎರಡೂವರೆ ನಿಮಿಷಗಳ ಕಾಲ ನಾಡಗೀತೆ ಹಾಡಲು ಸಮಯ ನಿಗದಿ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೇ 8 ನಿಮಿಷ, 9 ನಿಮಿಷ ನಾಡಗೀತೆ ಹಾಡುತ್ತಿದ್ದಾರೆ. ಸಾಹಿತಿ ನಿಸ್ಸಾರ್ ಅಹಮದ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳು ನಾಡಗೀತೆಯನ್ನು 2.30 ನಿಮಿಷ ಹಾಡಬೇಕು ಒತ್ತಾಯ ಮಾಡಿದ್ದರು. ಈ ಕರಿತು ಕನ್ನಡ ಸಾಹಿತ್ಯ ಪರಿಷತ್ತಿಗೆ ಮನವಿ ಮಾಡಿ ಪತ್ರ ಕೂಡ ಬರೆದಿದ್ದರು. ಅದ್ದರಿಂದ ಕಸಪಾ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ ಎಂದರು.
ಅಂತರರಾಷ್ಟ್ರೀಯ ಖ್ಯಾತ ಹಿನ್ನೆಲೆ ಗಾಯಕರು ಕೂಡ ಎರಡೂವರೆ ನಿಮಿಷ ಕಾಲ ನಾಡಗೀತೆಯನ್ನು ಹಾಡಿದ್ದಾರೆ. ಹಾಗಾಗಿ ಈ ಸಮಯವನ್ನು ನಿಗದಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದು, ಸರ್ಕಾರ ಇದನ್ನು ಜಾರಿಗೆ ತರಬೇಕು ಎಂದು ಹೇಳಿದರು.
ಕಸಾಪ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಲವು ಸಾಹಿತಿಗಳು, ಕನ್ನಡಪರ ಚಿಂತಕರು, ಹೋರಾಟಗಾರರು ಮತ್ತು ಹಾಡುಗಾರರು ಭಾಗಿಯಾಗಿದ್ದರು. ಈ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಸುದ್ದಿಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಸಾಹಿತಿ ಚಂದ್ರಶೇಖರ್ ಕಂಬಾರ್, ಸಿದ್ದಲಿಂಗಯ್ಯ, ಕಮಲಾ ಹಂಪನಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬೆಂಗಳೂರು: ಯಾವ ವಿಷಯವನ್ನೇ ಆದರೂ ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ನಮಗೆ ದೊರಕುವ ಸಶಕ್ತ ಮಾಧ್ಯಮವೆಂದರೆ ಅದು ನಮ್ಮ ಮಾತೃಭಾಷೆ. ಸಾಹಿತ್ಯದಿಂದ ವಿಜ್ಞಾನದವರೆಗೆ ಎಲ್ಲ ಬಗೆಯ ತಿಳಿವಳಿಕೆಯೂ ಮಾತೃಭಾಷೆಯಲ್ಲೇ ದೊರೆಯುವಂತಾದರೆ ಅದು ನಿಜಕ್ಕೂ ಅತ್ಯಮೂಲ್ಯವಾದ ಕೊಡುಗೆಯಾಗಬಲ್ಲದು.
ಬೇರೆಬೇರೆ ಕ್ಷೇತ್ರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕನ್ನಡದಲ್ಲೇ ಒದಗಿಸುವ ತನ್ನ ಪ್ರಯತ್ನಗಳ ಮುಂದುವರಿಕೆಯಾಗಿ ಇಜ್ಞಾನ ಟ್ರಸ್ಟ್ ಜುಲೈ 29ರಂದು ‘ಕನ್ನಡ ನೆಲ-ಜಲ : ನಾಳಿನ ಅರಿವು’ ವಿಚಾರ ಸಂಕಿರಣವನ್ನು ಏರ್ಪಡಿಸಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ವಿಷಯತಜ್ಞರು ಇಂದಿನ ಮಹತ್ವದ ವಿಷಯಗಳಾದ ಪರಿಸರ, ಇಂಧನ ಹಾಗೂ ಆಹಾರ ಕುರಿತು ಕನ್ನಡದಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.
ವಿವಿಧ ವಿಷಯಗಳನ್ನು ಕುರಿತ ಶೈಕ್ಷಣಿಕ ಪುಸ್ತಕಗಳನ್ನು ಶಾಲಾ ಗ್ರಂಥಾಲಯಗಳಿಗೆ ನೀಡುವ ಇಜ್ಞಾನ ಟ್ರಸ್ಟ್ ಯೋಜನೆ ‘ಕಲಿಕೆಗೆ ಕೊಡುಗೆ’ಯ ಎರಡನೇ ವರ್ಷದ ಚಟುವಟಿಕೆಗಳನ್ನೂ ಈ ಸಂದರ್ಭದಲ್ಲಿ ಉದ್ಘಾಟಿಸಲಾಗುವುದು. ಕಳೆದ ಬಾರಿ ಈ ಯೋಜನೆಯಡಿ ಕನ್ನಡ ಕಲಿಕೆಗೆ ಸಂಬಂಧಿಸಿದ ಪುಸ್ತಕಗಳನ್ನು 150ಕ್ಕೂ ಹೆಚ್ಚು ಶಾಲೆಗಳಿಗೆ ನೀಡಿಲಾಗಿತ್ತು. ಅದೇ ರೀತಿ ಈ ಬಾರಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ವಿಜ್ಞಾನ – ತಂತ್ರಜ್ಞಾನ ವಿಷಯಗಳಿಗೆ ಸಂಬಂಧಪಟ್ಟ ವಿವಿಧ ಕೃತಿಗಳನ್ನು ಒಂದು ನೂರಕ್ಕೂ ಹೆಚ್ಚು ಮಾಧ್ಯಮಿಕ ಹಾಗೂ ಪ್ರೌಢಶಾಲಾ ಗ್ರಂಥಾಲಯಗಳಿಗೆ ಕೊಡುಗೆಯಾಗಿ ನೀಡಲಾಗುವುದು.
ಈ ಕಾರ್ಯಕ್ರಮವನ್ನು ನವಕರ್ನಾಟಕ ಪ್ರಕಾಶನ, ಭಾರತೀ ಪ್ರಕಾಶನ, ಹೆಮ್ಮರ ಪ್ರಕಾಶನ ಹಾಗೂ ಸಹಬಾಳ್ವೆ ಸಂಸ್ಥೆಗಳ ಸಹಯೋಗದಲ್ಲಿ ಇಜ್ಞಾನ ಟ್ರಸ್ಟ್ ಆಯೋಜಿಸಿದೆ. ನಿವೃತ್ತ ಪ್ರಾಂಶುಪಾಲ, ವಾಣಿಜ್ಯ ಶಾಸ್ತ್ರ ಲೇಖಕರಾಗಿರುವ ಡಾ. ಹೆಚ್. ಆರ್. ಅಪ್ಪಣ್ಣಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರೆ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ. ಪದ್ಮಾ ಶೇಖರ್ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ.
ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಗಣ್ಯರು ಜಲ ಮತ್ತು ಅರಣ್ಯ – ಎಚ್. ಎನ್. ಎ. ಪ್ರಸಾದ್, ಪರಿಸರ ಸಂರಕ್ಷಣಾವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರು ಇಂಧನ – ವೈ. ಬಿ. ರಾಮಕೃಷ್ಣ, ಅಧ್ಯಕ್ಷರು, ರಾಷ್ಟ್ರೀಯ ಜೈವಿಕ ಇಂಧನ ಕೋಶ, ನವದೆಹಲಿ ಆಹಾರ – ಡಾ. ನಾ. ಸೋಮೇಶ್ವರ, ವೈದ್ಯರು ಹಾಗೂ ಖ್ಯಾತ ಲೇಖಕರು
ಇಜ್ಞಾನ ಟ್ರಸ್ಟ್ ಕುರಿತು
ಇಜ್ಞಾನ ಟ್ರಸ್ಟ್ ಒಂದು ನೋಂದಾಯಿತ ಸ್ವಯಂಸೇವಾ ಸಂಸ್ಥೆಯಾಗಿದ್ದು ವಿಜ್ಞಾನ, ತಂತ್ರಜ್ಞಾನ, ಕನ್ನಡ ಹಾಗೂ ಸಂಸ್ಕೃತಿ ಕುರಿತ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಈ ಸಂಸ್ಥೆಯನ್ನು ಆಗಸ್ಟ್ 3, 2016ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ನೋಂದಾಯಿಸಲಾಯಿತು. ಸಾಮಾನ್ಯ ಜನರ ನಡುವೆ ವಿಜ್ಞಾನ-ತಂತ್ರಜ್ಞಾನಗಳನ್ನು ಜನಪ್ರಿಯಗೊಳಿಸುವುದು ಹಾಗೂ ಕನ್ನಡ ಭಾಷೆ – ಸಂಸ್ಕೃತಿಯ ಬೆಳವಣಿಗೆಗಾಗಿ ಶ್ರಮಿಸುವುದು ಇಜ್ಞಾನ ಟ್ರಸ್ಟ್ ನ ಧ್ಯೇಯ.
ಕನ್ನಡದ ಪ್ರಮುಖ ವಿಜ್ಞಾನ-ತಂತ್ರಜ್ಞಾನ ಜಾಲತಾಣವಾದ ಇಜ್ಞಾನ ಡಾಟ್ ಕಾಮ್ ಅನ್ನು ಟಿ. ಜಿ. ಶ್ರೀನಿಧಿಯವರ ಸಂಪಾದಕತ್ವದಲ್ಲಿ ಇಜ್ಞಾನ ಟ್ರಸ್ಟ್ ನಿರ್ವಹಿಸುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೆರವಿನೊಡನೆ ಕಳೆದ ವರ್ಷ (2017) ‘ಕಂಪ್ಯೂಟರ್-ತಂತ್ರಜ್ಞಾನ ಪದವಿವರಣ ಕೋಶ’ವನ್ನು – ಪುಸ್ತಕ ಹಾಗೂ ಆನ್‍ಲೈನ್ ಎರಡೂ ರೂಪಗಳಲ್ಲಿ – ಪ್ರಕಟಿಸಿದ್ದು ಇಜ್ಞಾನ ಟ್ರಸ್ಟ್ ನ ಮಹತ್ವದ ಸಾಧನೆಗಳಲ್ಲೊಂದು. ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಹಾಗೂ ಕನ್ನಡ’ ಕುರಿತ ಕಾರ್ಯಾಗಾರಗಳನ್ನು ಆಯೋಜಿಸುವಲ್ಲೂ ಇಜ್ಞಾನ ಟ್ರಸ್ಟ್ ಸಕ್ರಿಯವಾಗಿದೆ. ಸುರಾನಾ ಕಾಲೇಜಿನ ಸಹಯೋಗದಲ್ಲಿ ಇದೇ ವಿಷಯ ಕುರಿತ ‘ನುಡಿಯ ನಾಳೆಗಳು’ ಎಂಬ ಪುಸ್ತಕವನ್ನೂ ಹೊರತರಲಾಗಿದೆ.
ವಿಜಯಪುರ: ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿಲ್ಲ ಅಂತಾ ಕನ್ನಡ ಸಾಹಿತ್ಯ ಪದಾಧಿಕಾರಿಯೊಬ್ಬರು ಅಧ್ಯಕ್ಷ ಹಾಗೂ ಜಿಲ್ಲಾ ಪದಾಧೀಕಾರಿಯನ್ನು ತರಾಟೆಗೆ ತಗೆದುಕೊಂಡ ಘಟನೆ ನಗರದಲ್ಲಿ ನಡೆದಿದೆ.
ಇಂದು ಜಿಲ್ಲಾ ಸಾಹಿತ್ಯ ಪರಿಷತ್‍ನಿಂದ ಇದೇ 22ರಂದು ವಿಜಯಪುರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಸುವರ್ಣಾ ಅವರು, ಆಮಂತ್ರಣ ಪತ್ರಿಕೆಯಲ್ಲಿ ಮತ್ತು ಭಾಷಣದಲ್ಲಿ ತಮ್ಮ ಹೆಸರು ಸೇರಿಸಿಲ್ಲ ಎಂದು ಫುಲ್ ಗರಂ ಆದರು.
ಅಷ್ಟೇ ಅಲ್ಲದೆ ಕಾರ್ಯಕ್ರಮದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಲಿಲ್ಲ ಅಂತಾ ಜಿಲ್ಲಾ ಕಸಾಪ ಪದಾಧಿಕಾರಿ ಲಕ್ಷ್ಮಿ ದೇಸಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾರ್ಯಕ್ರಮವನ್ನು ಲೆಕ್ಕಿಸದೆ ಅಶ್ಲೀಲ ಶಬ್ದಗಳಿಂದ ಇಬ್ಬರು ಬಾಯಿಗೆ ಬಂದಂತೆ ನಿಂದಿಸಿಕೊಂಡು ಜಗಳವಾಡಿದರು.
ಕಾರ್ಯಕ್ರಮದಿಂದ ಹೊರಬಂದ ಸುವರ್ಣ ಅವರು, ಯಾರು ಹಣ ನೀಡತ್ತಾರೆ ಅವರ ಹೆಸರನ್ನು ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂಡಿಗೇರಿ ಆಮಂತ್ರಣ ಪತ್ರಿಕೆಯಲ್ಲಿ ಹಾಕುತ್ತಾರೆ. ನಿಷ್ಠಾವಂತರಿಗೆ ಬೆಲೆ ಕೊಡುವುದಿಲ್ಲ. ಕಸಾಪದಲ್ಲಿ ಹಣ ನೀಡದವರಿಗೆ ಕಿಮ್ಮತ್ತು ಇಲ್ಲ. ನಾನು ಒಬ್ಬ ಶಿಕ್ಷಕಿ ಎಲ್ಲಿಂದ ಹಣ ತಂದು ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.