Tag: kannada sahitya sammelana

  • ಆಂಗ್ಲ ಮಾಧ್ಯಮ ಶಾಲೆಗಳು ತೆರೆಯುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು: ಗೊ.ರು.ಚನ್ನಬಸಪ್ಪ ಹಕ್ಕೊತ್ತಾಯ

    ಆಂಗ್ಲ ಮಾಧ್ಯಮ ಶಾಲೆಗಳು ತೆರೆಯುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು: ಗೊ.ರು.ಚನ್ನಬಸಪ್ಪ ಹಕ್ಕೊತ್ತಾಯ

    – ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚದಂತೆ ಕ್ರಮವಹಿಸಿ ಎಂದು ಸರ್ಕಾರಕ್ಕೆ ಸಲಹೆ

    ಮಂಡ್ಯ: ಖಾಸಗಿ ಶಾಲೆಗಳು, ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಅನುಮತಿ ನೀಡುವುದನ್ನು ಸರ್ಕಾರ ನಿಲ್ಲಿಸಬೇಕು. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು ಎಂದು ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು ಚನ್ನಬಸಪ್ಪ ಹಕ್ಕೊತ್ತಾಯ ಮಂಡಿಸಿದರು.ಇದನ್ನೂ ಓದಿ: ಮಂದಿರ-ಮಸೀದಿ ವಿವಾದ ಹೆಚ್ಚಳಕ್ಕೆ RSS ಕಳವಳ; ಇದು ಒಪ್ಪಲಾಗದು ಎಂದ ಮೋಹನ್ ಭಾಗವತ್

    ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ ಶತಮಾನ ಪೂರೈಸಿದೆ. 87ನೇ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸಂತಸವಾಗಿದೆ. ಮಂಡ್ಯ ಜಿಲ್ಲೆ ರಾಜಕೀಯವಾಗಿ ಜಾಗೃತವಾಗಿರುವ ಹಾಗೂ ಸೌಹಾರ್ದತೆ ಉಳಿಸಿಕೊಂಡಿರುವ ಜಿಲ್ಲೆಯಾಗಿದೆ. ಆರ್ಥಿಕವಾಗಿ ಸಮೃದ್ದವಾಗಿದ್ದು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿ, ಸಾಹಿತ್ಯಕವಾಗಿ ಹೆಸರು ಮಾಡಿರುವ ಜಿಲ್ಲೆಯಾಗಿದೆ. ರಾಜಕೀಯ, ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದೆ. ಮಂಡ್ಯದಲ್ಲಿ ಅನ್ಯ ಭಾಷಿಗರ ಪ್ರಮಾಣ, ಪ್ರಭಾವ ಬಹಳ ಕಡಿಮೆಯಿದೆ. ಸಮ್ಮೇಳನ ಅಧ್ಯಕ್ಷತೆಗೆ ನಾನು ಅರ್ಹನೋ ಎಂಬುವುದು ಗೊತ್ತಿಲ್ಲ. ಅನಿರೀಕ್ಷವಾಗಿ ಬಂದ ಅವಕಾಶವನ್ನು ಹಿಂಜರಿಕೆಯಿಲ್ಲದೆ ನಿರ್ವಹಿಸಿದ್ದೇನೆ. ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದೀರಿ ಎಂದಾಗ ನಾನೇ ಬೆರಗಾಗಿ ಹೋಗಿದ್ದೆ. ಇಷ್ಟು ವಯಸ್ಸಾದವರನ್ನು ಎಂದೂ ಸಮ್ಮೇಳನಾಧ್ಯಕ್ಷರಾಗಿ ಮಾಡಿಲ್ಲ. ಗಡುವು ತೀರಿದ ನನ್ನನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದ್ದಾರೆ. ಅವಕಾಶ ಕೊಟ್ಟ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.

    ಇದೇ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮುಂದೆ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನಿಟ್ಟು ಮಾತನಾಡಿದ ಅವರು, ಕನ್ನಡ ಭಾಷೆ ಸಮೃದ್ಧ, ಶ್ರೀಮಂತವಾಗಿ ಬೆಳೆಯುತ್ತಿದೆ. ಕನ್ನಡ ವಿಸ್ತಾರವಾಗುತ್ತಿದೆ, ಆದರೆ ಬಳಕೆ ಆಗುತ್ತಿಲ್ಲ. ಬಳಸಿದಷ್ಟು ನಮ್ಮ ಕನ್ನಡ ಭಾಷೆ ಬೆಳೆಯುತ್ತದೆ. ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಇರಬೇಕು. ನಾಡಿನ ಪ್ರತಿ ಮಕ್ಕಳಿಗೆ ಶಿಕ್ಷಣ ದೊರಕಿಸಲು ಕ್ರಮವಹಿಸಬೇಕು. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಖಾಸಗಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ತೆರೆಯಲು ಅನುಮತಿಗೆ ಸರ್ಕಾರ ತಡೆ ನೀಡಬೇಕು. ಗ್ರಾಮೀಣ ಭಾಗದ ಶಾಲೆಗಳಿಗೆ ಸೂರುಗಳು ಇಲ್ಲವಾಗಿದೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಕನ್ನಡ ಸರ್ಕಾರಿ ಶಾಲೆ ಮುಚ್ಚಲಾಗುತ್ತಿದೆ. ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚದಂತೆ ಸರ್ಕಾರ ಕ್ರಮವಹಿಸಬೇಕು. ಭಾರತಕ್ಕೆ ಮಾದರಿಯಾಗುವ ಶಿಕ್ಷಣ ಕ್ರಮವನ್ನು ಜಾರಿ ಮಾಡಬೇಕು. ಆಗ ಸಮಾನ ಶಿಕ್ಷಣ ದೊರೆಯುತ್ತದೆ ಎಂದು ಸಲಹೆ ನೀಡಿದರು.ಇದನ್ನೂ ಓದಿ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

  • ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

    ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

    – ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಸರ್ಕಾರ ಬದ್ಧ
    – ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು

    ಮಂಡ್ಯ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ (Mandya) ಜನರದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ಸಂತೋಷದಿಂದ ಪಾಲ್ಗೊಂಡಿದ್ದೇನೆ. ಈ ಸಮ್ಮೇಳನ ಕನ್ನಡದ ಹಬ್ಬ. ಮಂಡ್ಯ ಜಿಲ್ಲೆ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿದೆ. ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನವನ್ನು ಈ ಜನರು ಹೊಂದಿದ್ದಾರೆ. ಸತ್ಯಾಗ್ರಹ ಸೌಧ ಈ ಭಾಗದ ಧೈರ್ಯ, ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಈ ಜಿಲ್ಲೆ ಅಪ್ಪಟ ಕನ್ನಡಿಗರನ್ನು ಹೊಂದಿದ್ದು, ಜಾತ್ಯತೀತ ಈ ನೆಲದ ಗುಣವಾಗಿದೆ. ಕನ್ನಡ ಭಾಷೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದರು.ಇದನ್ನೂ ಓದಿ: 4 ಜಿಲ್ಲೆ, 50ಕ್ಕೂ ಹೆಚ್ಚು ಗ್ರಾಮ, 14 ಗಂಟೆ ಅಲೆದಾಡಿಸಿದ್ರು.. ಪೊಲೀಸರು ದೌರ್ಜನ್ಯ ಎಸಗಿದ್ರು: ನೋವು ಹೇಳಿಕೊಂಡ ಸಿ.ಟಿ.ರವಿ

    ಮನೆಯ ಒಡವೆ ಮಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಕಟ್ಟಿಸಿದ್ದರು. ಕೆಆರ್‌ಎಸ್ ಕಟ್ಟುವಾಗ ಟಿಪ್ಪು ಸುಲ್ತಾನ್ ಸ್ಮರಿಸಿದರು. ಆಧುನಿಕ ಮಂಡ್ಯದ ನಿರ್ಮಾಣದಲ್ಲಿ ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಅವರನ್ನು ಮರೆಯುವಂತಿಲ್ಲ. ವಿಶ್ವವೇ ಜಾಗತಿಕ ಹಳ್ಳಿಯಾಗಿರುವಾಗ ನಮ್ಮತನವನ್ನು ಬಿಟ್ಟುಕೊಡಬಾರದು. ಭಾಷೆ ಉಳಿಯುವುದು, ಬೆಳೆಯುವುದು ಅದನ್ನು ಬಳಸಿದಾಗ ಮಾತ್ರ. ನುಡಿಬಿಟ್ಟರೇ ನಾಡು ಬಿಟ್ಟಂತೆ ಭಾಷೆಗೇಡಿ ದೇಶಗೇಡಿಯಂತೆ. ಬಳಸದೆ ಹೋದರೆ ಭಾಷೆಯ ಅಸ್ತಿತ್ವ ಮತ್ತು ಬೆಳವಣಿಗೆಗೆ ಅಪಾಯವಾಗುತ್ತದೆ. ಕನ್ನಡದ ಅಸ್ಮಿತೆಗೆ ಉಂಟಾಗುವ ಸಮಸ್ಯೆ ಗುರುತಿಸಿ, ಪರಿಹಾರ ಕಂಡುಕೊಳ್ಳಲು ಸಮ್ಮೇಳನ ಸಹಾಯಕಾರಿಯಾಗುತ್ತದೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಿರಬೇಕು. ಅವರದೇ ಭಾಷೆಯಲ್ಲಿ ಮಾತನಾಡುವುದನ್ನು ಬಿಟ್ಟು, ಇದು ನಿನ್ನ ಭಾಷೆ, ದೇಶ ಭಾಷೆ, ಸಾವಿರಾರು ವರ್ಷಗಳ ಸುಪುಷ್ಪ, ಸಾಹಿತ್ಯ ಭಾಷೆ ಎಂದು ಕುವೆಂಪುರವರ ಸಾಲು ನೆನೆದು ಮಾತನಾಡಿದರು.

    ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ 25 ಅಡಿ ಪ್ರತಿಮೆಯಿದೆ. ಕರ್ನಾಟಕ ಸಾಹಿತ್ಯಿಕವಾಗಿ ಸಮೃದ್ಧ ಇತಿಹಾಸ ಹೊಂದಿದೆ. ಕರ್ನಾಟಕ 8 ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿದೆ. ಕನ್ನಡ ಡಿಜಿಟಲೀಕರಣ ಆರಂಭಿಸಲಾಗಿದೆ. ಸಮಗ್ರ ಕನ್ನಡ ಭಾಷಾ ಬಳಕೆ ಕಾಯ್ದೆ ಜಾರಿಗೆ ಹಾಗೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಹೃದಯದ ಭಾಷೆ ಕನ್ನಡವಾಗಿರಬೇಕು. ಮಾತೃಭಾಷೆ ಶಿಕ್ಷಣಕ್ಕೆ ಒತ್ತುನೀಡಬೇಕು. ಖಾಸಗಿ ಮತ್ತು ಸರ್ಕಾರಿ ವಲಯದ ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಮುದ್ರಣವಾಗಬೇಕು ಎಂದು ತಿಳಿಸಿದರು.

    ಸಾಹಿತ್ಯ ಜನಜೀವನದ ಪ್ರತಿಬಿಂಬವಾಗಿಬೇಕು. ಸಾಹಿತಿಗಳು ಜನಸಾಮಾನ್ಯರ ನೋವು ನಲಿವನ್ನು ಬರಹದ ಮೂಲಕ ಹಿಡಿದಿಡಬೇಕು. ಜಗತ್ತಿನ ಮಹತ್ವದ ಕೃತಿಗಳನ್ನು ತುರ್ತಾಗಿ ಕನ್ನಡಕ್ಕೆ ಅನುವಾದ ಮಾಡಬೇಕು. ವೈಜ್ಞಾನಿಕ, ವೈಚಾರಿಕ ದೃಷ್ಟಿಯಿಂದ ಪರಿಶೀಲಿಸಬೇಕು. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಮಾಮೂಲಿ ಸಮ್ಮೇಳನವಾಗದೇ ನಾಡಿನ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಮ್ಮೇಳನವಾಗಬೇಕು. ದ್ವೇಷವಾದಿ ಶಕ್ತಿಗಳು ಮಂಡ್ಯದಲ್ಲಿ ವಿಷ ಬಿತ್ತಲು ಪ್ರಯತ್ನಿಸಿದರು. ಆದರೆ ಸಿಹಿ ಬೆಳೆಯುವ ಮಂಡ್ಯದವರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ. ಇತಿಹಾಸದಲ್ಲಿ ಮತ್ತೊಮ್ಮೆ ಮಂಡ್ಯದವರು ಸಿಹಿ ನೀಡುವವರು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದೀರಿ ಎಂದು ಮಂಡ್ಯದ ಜನರನ್ನು ಕೊಂಡಾಡಿದರು.ಇದನ್ನೂ ಓದಿ: ಒಂದೇ ರಾತ್ರಿ 8ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ – 3.87 ಲಕ್ಷ ಮೌಲ್ಯದ ವಸ್ತು ಲೂಟಿ

  • ದೀಪ ಬೆಳಗುವ ಮೂಲಕ ಅಕ್ಷರ ಜಾತ್ರೆಗೆ ಸಿಎಂ ಚಾಲನೆ

    ದೀಪ ಬೆಳಗುವ ಮೂಲಕ ಅಕ್ಷರ ಜಾತ್ರೆಗೆ ಸಿಎಂ ಚಾಲನೆ

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Literary Conference) ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah)  ಚಾಲನೆ ನೀಡಿದರು.

    ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಇದನ್ನೂ ಓದಿ: ರಾಮಮಂದಿರ ಕಟ್ಟೋದ್ರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

    ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. ಇದನ್ನೂ ಓದಿ: ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವ್ದೇ ನಿರ್ಧಾರಕ್ಕೆ ಬರೋದು ತಪ್ಪು: ಬೊಮ್ಮಾಯಿ

    ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಹಾಲ್‌ನಲ್ಲಿ ಕಣ್ಣೀರಿಟ್ಟ ಸಿ.ಟಿ ರವಿ – ಜಾಮೀನಿಗೆ ವಕೀಲರ ಮನವಿ, ಆದೇಶ ಕಾಯ್ದಿರಿಸಿದ ಕೊರ್ಟ್

  • ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ HDK ಆಕ್ರೋಶ

    ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ HDK ಆಕ್ರೋಶ

    ಬೆಂಗಳೂರು: ಕರ್ನಾಟಕ ಹಾಗೂ ಕನ್ನಡ ಭಾಷೆಯ (Kannada Language) ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು. 13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ ರೂ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ ರೂ. ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

    ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದಿದ್ದಾರೆ. ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahitya Sammelana) ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಎದುರೇ ಬಿಜೆಪಿ ಸರ್ಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ದಳಪತಿಗಳ ಖೆಡ್ಡಾ – ಮಾಜಿ ಸಿಎಂ ಸೋಲಿಸಲು ಹೆಚ್‍ಡಿಕೆ ಶಪಥ

    ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಕೇಂದ್ರ ಬಿಜೆಪಿ (BJP) ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ಕೇಂದ್ರ ಬಿಜೆಪಿ ವರ್ತಿಸುತ್ತಿರುವ ರೀತಿ ಕಳವಳಕಾರಿ. ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ – ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ: ಶಿವರಾಮ್ ಹೆಬ್ಬಾರ್

    86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ – ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ: ಶಿವರಾಮ್ ಹೆಬ್ಬಾರ್

    ಹಾವೇರಿ: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಚಾಲನೆ ಸಿಕ್ಕಿದೆ. ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು.

    ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್ (Shivaram Hebbar) ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಶಿವರಾಮ್‌ ಹೆಬ್ಬಾರ್, ನಾವು ಬಹಳ ಸಂತೋಷದಿಂದ ಇವತ್ತಿನ ಕಾರ್ಯಕ್ರಮದ ಧ್ವಜಾರೋಹಣ ಮಾಡಿದ್ದೇವೆ. ನಿಗದಿ ಮಾಡಿದ ಏಳು ಗಂಟೆ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ. ಈ ಹಿಂದೆ ಯಾವತ್ತೂ ಆಗದ ರೀತಿಯ ಸಾಹಿತ್ಯ ಸಮ್ಮೇಳನ ಇದಾಗಲಿದೆ. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು. ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಅವರೆ ಮೇಳದಲ್ಲಿ ಕೇಕ್ ಈ ಬಾರಿಯ ಸ್ಪೆಷಲ್

    ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸೇರಿದಂತೆ ಪ್ರತಿಯೊಬ್ಬರ ಭಾಷಣಕ್ಕೂ ಸಮಯ ನಿಗದಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸಮಯ ನಿಗದಿ ಸಾಹಿತಿಗಳಿಗೆ ಹೊರತು ರಾಜಕಾರಣಿಗಳಿಗಲ್ಲ. ಸಾಹಿತಿಗಳು ನಿಗದಿ ಮಾಡಿದ ಸಮಯದಲ್ಲಿ ವಿಚಾರ ಮಂಡನೆ ಮಾಡಲಿ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೋಕಾಕ್‍ನಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ರಮೇಶ್ ಜಾರಕಿಹೊಳಿ

    ಗೋಕಾಕ್‍ನಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ರಮೇಶ್ ಜಾರಕಿಹೊಳಿ

    ಬೆಳಗಾವಿ: ಜಿಲ್ಲೆಯ ಬೆಟಗೇರಿ ಗ್ರಾಮದಲ್ಲಿ ಗೋಕಾಕ್ (Gokak) ತಾಲೂಕು 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಚಾಲನೆ ನೀಡಿದರು.

    ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ರಮೇಶ್ ಜಾರಕಿಹೊಳಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್

    ಸಮ್ಮೇಳನದ ಮೆರವಣಿಗೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷೆ ಭಾರತಿ ಮದಬಾಂವಿ ಅವರು ರಮೇಶ್ ಜಾರಕಿಹೊಳಿಗೆ ಧ್ವಜ ನೀಡಿ ಸ್ವಾಗತಿಸಿದರು. ವಿವಿಧ ಕಲಾ ತಂಡಗಳಿಂದ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ನಡೆದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಕವಿಗೋಷ್ಠಿ, ಚಿಂತನೆ ಸೇರಿದಂತೆ ಹಲವು ಕನ್ನಡ ಪರ ಕಾರ್ಯಕ್ರಮಗಳಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನಾಡು, ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ.. ಕನ್ನಡ ಕಾರ್ಯಕ್ರಮಗಳಿಗೆ ಅವರನ್ನ ಕರೆಯಲ್ಲ – ಕರವೇ ಅಧ್ಯಕ್ಷ

    Live Tv
    [brid partner=56869869 player=32851 video=960834 autoplay=true]

  • ಕೋವಿಡ್‌ ಕಾರಣಕ್ಕೆ ಮುಂದೂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲೇ ನಡೆಯುತ್ತೆ: ಬಿ.ಸಿ.ಪಾಟೀಲ್

    ಕೋವಿಡ್‌ ಕಾರಣಕ್ಕೆ ಮುಂದೂಡಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲೇ ನಡೆಯುತ್ತೆ: ಬಿ.ಸಿ.ಪಾಟೀಲ್

    ಹಾವೇರಿ: ಕೋವಿಡ್‌ ಕಾರಣಕ್ಕೆ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲೇ ನಡೆಸಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    KANNADA FLAG

    ಹಾವೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ಹೇಳಿದ್ದಾರೆ‌. ಈ ವೇಳೆ ಸಮ್ಮೇಳನದ ವಿಚಾರ ಪ್ರಸ್ತಾಪಿಸಲಾಗುವುದು ಎಂದರು.

    PATIL

    ಎರಡು ವರ್ಷಗಳ ಕಾಲ ಅಧಿವೇಶನ ನಡೆದಿಲ್ಲ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು. ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸಹ ಪತ್ರವನ್ನು ಬರೆದಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬಂದರೆ ನಿರ್ದಾಕ್ಷಿಣ್ಯ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ

    ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಕಾದು ನೋಡಿ” ಎಂದು ನಗುನಗುತ್ತೇ ಉತ್ತರಿಸಿದರು.

  • ತೊಗರಿ ಕಣಜದಲ್ಲಿ ಕನ್ನಡದ ಹಬ್ಬ – ಕಲಬುರಗಿಯಲ್ಲಿ ಅಕ್ಷರ ಜಾತ್ರೆಗೆ ಕ್ಷಣಗಣನೆ

    ತೊಗರಿ ಕಣಜದಲ್ಲಿ ಕನ್ನಡದ ಹಬ್ಬ – ಕಲಬುರಗಿಯಲ್ಲಿ ಅಕ್ಷರ ಜಾತ್ರೆಗೆ ಕ್ಷಣಗಣನೆ

    – ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಮುಖ್ಯಮಂತ್ರಿಯಿಂದ ಉದ್ಘಾಟನೆ

    ಕಲಬುರಗಿ: ಇಂದಿನಿಂದ ತೊಗರಿ ಕಣಜ ಕಲಬುರಗಿಯಲ್ಲಿ ಕನ್ನಡದ ಕಂಪು ಮೇಳೈಸಲಿದ್ದು, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದೆ.

    ಕಲಬುರಗಿ ವಿಶ್ವವಿದ್ಯಾಲಯದ 35 ಎಕರೆ ಪ್ರದೇಶದಲ್ಲಿ ಭವ್ಯವಾದ ಮಂಟಪ ನಿರ್ಮಿಸಲಾಗಿದ್ದು, ಮಹಾದ್ವಾರಕ್ಕೆ ಕಡಕೋಳ ಮಡಿವಾಳೇಶ್ವರರ ಹೆಸರಿಡಲಾಗಿದೆ. ಕನ್ನಡ ಹಬ್ಬಕ್ಕಾಗಿ ಕಲಬುರಗಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಎಲ್ಲೆಡೆಯೂ ನಾಡಧ್ವಜಗಳು ರಾರಾಜಿಸ್ತಿವೆ.

    ಮುಖ್ಯಬೀದಿಗಳು ರಂಗೋಲಿ, ತಳಿರು ತೋರಣ, ದೀಪಾಲಂಕಾರದಿಂದ ಝಗಮಗಿಸುತ್ತಿವೆ. ಬೆಳಗ್ಗೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಧ್ವಜಾರೋಹಣ ಮಾಡಲಿದ್ದಾರೆ.

    ಬೆಳಗ್ಗೆ 8.30ಕ್ಕೆ ಸಮ್ಮೇಳಾನಾಧ್ಯಕ್ಷರೂ ಆಗಿರುವ ಕವಿ ಹೆಚ್ ಎಸ್ ವೆಂಕಟೇಶ್‍ಮೂರ್ತಿ ಅವರನ್ನು ಮೆರವಣಿಗೆಯ ಮೂಲಕ ವೇದಿಕೆಗೆ ಕರೆದುಕೊಂಡು ಬರಲಾಗುತ್ತದೆ. ಬೆಳಗ್ಗೆ 11.20ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

  • ಅವ್ಯವಸ್ಥೆಯ ಆಗರವಾದ ಸಾಹಿತ್ಯ ಸಮ್ಮೇಳನ- ವಿದ್ಯಾರ್ಥಿಗಳಿಗೆ ಕುರ್ಚಿಗಳಿಲ್ಲ, ರೈತ ಗೀತೆಗೆ ಗೌರವವಿಲ್ಲ

    ಅವ್ಯವಸ್ಥೆಯ ಆಗರವಾದ ಸಾಹಿತ್ಯ ಸಮ್ಮೇಳನ- ವಿದ್ಯಾರ್ಥಿಗಳಿಗೆ ಕುರ್ಚಿಗಳಿಲ್ಲ, ರೈತ ಗೀತೆಗೆ ಗೌರವವಿಲ್ಲ

    ರಾಮನಗರ: ರಾಮನಗರ ಜಿಲ್ಲೆಯಲ್ಲಿ ನಡೆದ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಕಷ್ಟು ಅವ್ಯವಸ್ಥೆ ಹಾಗೂ ಗೊಂದಲ, ಮಾತಿನ ಚಕಮಕಿಗೆ ಕಾರಣವಾಗಿತ್ತು. ಅದರಲ್ಲೂ ಚಿಕ್ಕ ಸಭಾಂಗಣದಲ್ಲಿ ನಡೆದ ಸಮ್ಮೇಳನ ಅವ್ಯವಸ್ಥೆಯನ್ನೇ ಎದ್ದು ಕಾಣುವಂತೆ ಮಾಡಿತ್ತು. ಒಂದೆಡೆ ರೈತ ಗೀತೆಗೆ ಗೌರವ ಕೊಡಲಿಲ್ಲ ಎಂಬ ರೈತರ ಆಕ್ರೋಶ, ಮತ್ತೊಂದೆಡೆ ವಿದ್ಯಾರ್ಥಿಗಳು ಆಸನದ ವ್ಯವಸ್ಥೆಯಿಲ್ಲದೇ ಮೂಟೆಗಳಂತ ಬ್ಯಾಗ್‍ಗಳನ್ನು ಹೊತ್ತು ನಿಂತಿದ್ದು ಅವ್ಯವಸ್ಥೆಯನ್ನ ಎತ್ತು ತೋರಿಸುತ್ತಿತ್ತು.

    ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ರಾಷ್ಟ್ರಗೀತೆ ಹಾಗೂ ನಾಡಗೀತೆಯ ಬಳಿಕ ರೈತಗೀತೆಯನ್ನ ಗಾಯಕರು ಹಾಡಿದರು. ಈ ವೇಳೆ ವೇದಿಕೆ ಮೇಲೆ ಹಾಗೂ ವೇದಿಕೆ ಮುಂಭಾಗದಲ್ಲಿದ್ದವರು ತಮ್ಮ ತಮ್ಮ ಆಸನದಲ್ಲಿ ಕುಳಿತುಕೊಂಡರು. ಇದರಿಂದ ಕೆರಳಿದ ರೈತ ಮುಖಂಡರು ಹಾಗೂ ರೈತರು ರೈತಗೀತೆಗೆ ಗೌರವ ನೀಡಿಲ್ಲ. ಎದ್ದು ನಿಂತಿಲ್ಲ ಎಂದು ಆರೋಪಿಸಿ, ರೈತ ಸಂಘದ ಕೆಲ ಮುಖಂಡರು ವೇದಿಕೆ ಏರಲು ಮುಂದಾದರು.

    ಕಾರ್ಯಕ್ರಮದ ಆರಂಭದಲ್ಲೇ ರೈತಗೀತೆ ವಿಚಾರವಾಗಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಮ್ಮೇಳನಕ್ಕೆ ರೈತರನ್ನು ಆಹ್ವಾನಿಸಿ ರೈತ ಪರ ಚರ್ಚೆಗೂ ವೇದಿಕೆ ನೀಡಿ ರೈತ ಗೀತೆಗೆ ಅವಮಾನ ಮಾಡುವುದು ಯಾವ ನ್ಯಾಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಾಹಿತ್ಯ ಪರಿಷತ್ತಿನ ಕೆಲ ಮುಖಂಡರು ಸಮಾಧಾನ ಪಡಿಸಿದರು.

    ಜಿಲ್ಲಾ ಸಾಹಿತ್ಯ ಸಮ್ಮೇಳನವಾಗಿದ್ದರಿಂದ ನಗರದ ಬಹುತೇಕ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಸಮ್ಮೇಳನಕ್ಕೆ ಕರೆತರಲಾಗಿತ್ತು. 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನಕ್ಕೆ ಆಗಮಿಸಿದ್ದು ಆಸನಗಳೇ ಇಲ್ಲದೇ ಪರದಾಡುವಂತಾಗಿತ್ತು. ಕಾಲೇಜಿಗೆ ಬಂದ ವಿದ್ಯಾರ್ಥಿಗಳು ನೇರವಾಗಿ ಸಮ್ಮೇಳನಕ್ಕೆ ಬಂದಿದ್ದು ಕಿರಿದಾದ ಕಲ್ಯಾಣ ಮಂಟಪದಲ್ಲಿ ಜಾಗವೇ ಇಲ್ಲದಂತಾಗಿತ್ತು. ಅಷ್ಟೇ ಅಲ್ಲದೆ ಆಸನ ವ್ಯವಸ್ಥೆಗಳಿಲ್ಲದೇ ಪರದಾಡುವಂತಾಗಿತ್ತು. ಬಾಲ್ಕನಿ ಹಾಗೂ ವೇದಿಕೆ ಮುಂಭಾಗದ ಇಕ್ಕೆಲಗಳಲ್ಲಿ ನಿಂತು ನಿಂತು ಕಾಲ ನೋವಿಗೆ ಒಳಗಾದವರು ನೆಲದ ಮೇಲೆಯೇ ಕುಳಿತು ಸಮ್ಮೇಳನ ವೀಕ್ಷಿಸುವಂತಾಗಿತ್ತು.

  • ಕಾಫಿನಾಡ ವಿವಾದಿತ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್

    ಕಾಫಿನಾಡ ವಿವಾದಿತ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್

    ಚಿಕ್ಕಮಗಳೂರು: ಕಾಫಿನಾಡಿನ ಶೃಂಗೇರಿಯಲ್ಲಿ ವಾದ-ವಿವಾದ, ಆರೋಪ-ಪ್ರತ್ಯಾರೋಪಗಳ ಮಧ್ಯೆ ನಡೆಯುತ್ತಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ ಬಿದ್ದಿದ್ದು, ಎರಡನೇ ದಿನದ ಕಾರ್ಯಕ್ರಮವನ್ನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮುಂದೂಡಿದೆ. ಪೊಲೀಸರ ಅನುಮತಿ ಇಲ್ಲದ ಕಾರಣ ಕಾರ್ಯಕ್ರಮವನ್ನ ಮುಂದೂಡಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

    ಸಮ್ಮೇಳನ ಅಧ್ಯಕ್ಷರ ವಿರುದ್ಧ ತೀವ್ರವಾದ ವಿರೋಧದ ಮಧ್ಯೆಯೂ ಶುಕ್ರವಾರ ಸಮ್ಮೇಳನ ಆರಂಭಗೊಂಡಿತ್ತು. ಮೆರವಣಿಗೆಗೆ ಪೊಲೀಸರ ಅನುಮತಿ ನೀಡದ ಕಾರಣ ಅಧ್ಯಕ್ಷರ ಮೆರವಣಿಗೆ ಇಲ್ಲದೆ ನೇರವಾಗಿ ವೇದಿಕೆ ಕಾರ್ಯಕ್ರಮದ ಮೂಲಕ ಸಮ್ಮೇಳನ ಆರಂಭವಾಗಿತ್ತು. ಆದರೆ ಸಮ್ಮೇಳನದ ಅಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಡೆ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ವೇದಿಕೆ, ನಕ್ಸಲ್ ವಿರೋಧಿ ಹೋರಾಟ ಸಮಿತಿ ಮತ್ತು ಶ್ರೀರಾಮಸೇನೆ ಸೇರಿದಂತೆ ಕೆಲವರು ಅಧ್ಯಕ್ಷರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದರು.

    ಕಳೆದೊಂದು ತಿಂಗಳಿಂದಲೂ ಅಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದ ಸಂಘಟನೆಗಳು ಕೂಡ ಸಮ್ಮೇಳನದ ಮುಂಭಾಗ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಅನುಮತಿ ಇಲ್ಲದ ಕಾರಣ ಮಧ್ಯಾಹ್ನದ ಕಾರ್ಯಕ್ರಮವನ್ನ ಮೊಟಕುಗೊಳಿಸುವಂತೆ ಪೊಲೀಸರು ಸಾಹಿತ್ಯ ಪರಿಷತ್‍ಗೆ ಸೂಚಿಸಿದರು. ಆದರೆ ಕಸಾಪ ಕಾರ್ಯಕ್ರಮ ನಿಲ್ಲಿಸಲು ಮೀನಾಮೇಶ ಎಣಿಸಿತ್ತು.

    ಅಷ್ಟೇ ಅಲ್ಲದೇ ಕಸಾಪ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಸಿತ್ತು. ನಾಳಿನ ಕಾರ್ಯಕ್ರಮಕ್ಕೂ ಪೊಲೀಸರು ಅನುಮತಿ ನೀಡದ ಹಿನ್ನೆಲೆ ಕಸಾಪ ಇಂದು ಸಮ್ಮೇಳನದ ಎರಡನೇ ದಿನ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನ ಮುಂದೂಡಿದೆ. ಮುಂದಿನ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ.