Tag: kannada

  • ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000

    ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000

    ಸೋಶಿಯಲ್ ಮೀಡಿಯಾವೇ (SocialMedia) ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವೀಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವೀಡಿಯೋದಿಂದನೇ ಹವಾ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಈ ಹುಡುಗಿಯೇ ಸಾಕ್ಷಿ. ಹೌದು, ಕನ್ನಡ ಸಿನಿಮಾದ ಹಾಡೊಂದನ್ನು ತನ್ನದೇ ಧಾಟಿಯಲ್ಲಿ ಹಾಡಿ ಹುಡುಗಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾಳೆ. ಈ ವೀಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲರ ಬಾಯಲ್ಲಿ ‘ಹೂವಿನ ಬಾಣದಂತೆ’ (Hoovina Banadanthe Viral Song) ಹಾಡು ಕೇಳಿಬರುತ್ತಿದೆ. ‘ಬಿರುಗಾಳಿ’ ಚಿತ್ರದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಹಾಡು ಇಷ್ಟೊಂದು ಫೇಮಸ್ ಆಗಲು ಕಾರಣ ನಿತ್ಯಾಶ್ರೀ ಎಂಬ ಹುಡುಗಿ. ಸ್ನೇಹಿತರ ಗುಂಪಿನಲ್ಲಿ ತಮಾಷೆಗೆಂದು ಹಾಡಿದ ‘ಹೂವಿನ ಬಾಣದಂತೆ’ ಹಾಡು ಸದ್ಯ ಎಲ್ಲೆಡೆ ವೈರಲ್ ಆಗಿದೆ. ಇನ್ಸ್ಟಾದಲ್ಲಿ ಮೊದಲು 150 ಮಂದಿ ಫಾಲೋವರ್ಸ್ ಅನ್ನು ಹೊಂದಿದ್ದ ನಿತ್ಯಾಶ್ರೀ ಈ ಹಾಡು ವೈರಲ್ ಆದ ಬಳಿಕ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಅನ್ನು ಹೊಂದಿದ್ದಾಳೆ.

    ತನ್ನ ಅಕ್ಕಪಕ್ಕದಲ್ಲಿ ನಿಂತಿರುವ ಸ್ನೇಹಿತರು ಈಕೆ ಹಾಡು ಹಾಡುವ ರೀತಿಗೆ ನಕ್ಕಿದ್ದಾರೆ. ಆದರೆ ಈಕೆ ಮಾತ್ರ ಹಾಡು ಹಾಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಿಲ್ಲ. ಈ ವೀಡಿಯೋದ ಕೊನೆಗೆ ಎಲ್ಲರೂ ಚಪ್ಪಾಳೆ ತಟ್ಟಿ ಹುರಿದುಂಬಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಭಿನ್ನ ಧಾಟಿಯಲ್ಲಿ ನಿತ್ಯಾಶ್ರೀ ಈ ಹಾಡು ಹಾಡಿದ್ದು, ಒರಿಜಿನಲ್ ಹಾಡೇ ಮರೆತು ಹೋಗುವಂತೆ ಮಾಡಿದ್ದಾಳೆ. ಈ ಮುದ್ದಾದ ಹಾಡಿನ ವಿಡಿಯೋ ಸದ್ಯ ನೆಟ್ಟಿಗರ ಮನಸ್ಸನ್ನು ಗೆದ್ದುಕೊಂಡಿದೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪ ಗ್ರಾಮದ ನಿತ್ಯಾಶ್ರೀ ಪದವಿ ಶಿಕ್ಷಣ ಪಡೆಯಲು ಮೈಸೂರಿನಲ್ಲಿ ನೆಲೆಸಿದ್ದಾಳೆ. ಇನ್ನು ವೈರಲ್ ಹಾಡಿನ ಬಗ್ಗೆ ಮಾತನಾಡಿದ ನಿತ್ಯಾಶ್ರೀ, ನಾನು ನನ್ನ ಸ್ನೇಹಿತರನ್ನು ಖುಷಿ ಪಡಿಸಲು ಹಾಡಿದ್ದೆ. ಇದು ಇಷ್ಟು ವೈರಲ್ ಆಗತ್ತೆ ಎಂದು ಗೊತ್ತಿರಲಿಲ್ಲ. ತುಂಬಾ ಖುಷಿ ಆಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾಳೆ. ನನ್ನ ಗುರುಗಳು ಕೃಷ್ಣಮೂರ್ತಿ ಸರ್ ಹಾಡನ್ನು ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ರು. ಅದು ರಾತ್ರೋರಾತ್ರಿ ಸಕ್ಕತ್ ವೈರಲ್ ಆಗಿದೆ. ಎಲ್ಲರೂ ಕೂಡ ನನ್ನ ಗುರುತು ಹಿಡಿತಿದ್ದಾರೆ. ನನ್ನ ಜೊತೆ ಸೆಲ್ಫಿ ಕೇಳಿದ್ದಾರೆ. ನನಗೆ ನಟಿ ಆಗಬೇಕು, ಆ್ಯಕ್ಟಿಂಗ್ ಮಾಡಬೇಕು ಎಂಬ ಆಸೆ ಇದೆ. ಯಶ್ ನನ್ನ ಫೇವರಿಟ್ ನಟ. ಅವರ ಜೊತೆ ಒಂದು ಸೈಡ್ ರೋಲ್ ಮಾಡಬೇಕೆಂಬ ಆಸೆಯಿದೆ ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿದ್ದಾಳೆ.

    ಇನ್ನು ಇಷ್ಟು ಮಾತ್ರವಲ್ಲದೇ ಆಕೆಯ ರೀತಿಯೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೂಡ ವೇದಿಕೆಯಲ್ಲಿ ಹಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ, ನಿತ್ಯಾಶ್ರೀ ಗಾಯನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ ಮಗು ತುಂಬ ಕ್ಯೂಟ್ ಆಗಿ ಎಲ್ಲ ಕಡೆ ಹಾಡುತ್ತಿದ್ದಾಳೆ. ಅವಳ ವಿಡಿಯೋಗಳು ದಿನಕ್ಕೆ 10 ಸಲ ನನಗೆ ಬರುತ್ತಿವೆ. ಎಲ್ಲೇ ಇದ್ದರೂ ಅವಳಿಗೆ ದೇವರು ಆಶೀರ್ವಾದ ಮಾಡಲಿ. ತುಂಬ ಮುಗ್ಧವಾಗಿದ್ದೀಯ ಕಂದ. ಹಾಗೆಯೇ ಇನೋಸೆಂಟ್ ಆಗಿರು. ಒಳ್ಳೆಯದಾಗಲಿ ಎಂದು ಅರ್ಜುನ್ ಜನ್ಯ ಆಶೀರ್ವಾದ ಮಾಡಿದ್ದಾರೆ.

  • ಸೋನು ನಿಗಮ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಪೊಲೀಸರು

    ಸೋನು ನಿಗಮ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಪೊಲೀಸರು

    ಬೆಂಗಳೂರು: ಗಾಯಕ ಸೋನು ನಿಗಮ್‌ಗೆ (Sonu Nigam) ಶಾಕ್ ಕೊಡಲು ಅವಲಹಳ್ಳಿ ಪೊಲೀಸರು (Avalahalli Police) ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಈಗ ಪೊಲೀಸರು ಕಾನೂನು ಸಮರ ಆರಂಭಿಸಲು ಮುಂದಾಗಿದ್ದಾರೆ.

    ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೋನು ನಿಗಮ್‌ ಅವರಲ್ಲಿ ಕನ್ನಡ ಹಾಡನ್ನು ಹಾಡುವಂತೆ  ಕನ್ನಡ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದರು.

     

    ಈ ಬೇಡಿಕೆಗೆ ಕನ್ನಡವನ್ನು ಪಹಲ್ಗಾಮ್ ದಾಳಿಗೆ (Pahalgam Attack) ಹೋಲಿಸಿ ಸೋನು ನಿಗಮ್ ಮಾತನಾಡಿದ್ದರು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು.  ಬೆನ್ನಲ್ಲೇ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.  ಇದನ್ನೂ ಓದಿ: ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್

    ಕೋರ್ಟ್ ಮೊರೆ ಹೋಗಿದ್ದರಿಂದ ಬಂಧನ ಮಾಡಬಾರದು ಸೋನು ನಿಗಮ್ ತನಿಖೆಗೆ ಸಹಕಾರ ನೀಡಬೇಕೆಂದು ಹೈ ಕೋರ್ಟ್ ಆದೇಶ ನೀಡಿತ್ತು. ಈ ಆದೇಶದ ಅನ್ವಯ ಅವಲಹಳ್ಳಿ ಪೊಲೀಸರು ತನಿಖೆ ಹಾಜರಾಗುವಂತೆ ನಾಲ್ಕು ಬಾರಿ ಸೋನು ನಿಗಮ್‌ಗೆ ನೋಟಿಸ್ ಕೊಟ್ಟಿದ್ದಾರೆ.

    ನೋಟಿಸ್ ಅಲ್ಲದೇ ಪೋನ್ ಕರೆ ಮಾಡಿ ತನಿಖೆಗೆ ಸಮಯ ಅವಕಾಶ ಕೊಡುವಂತೆ ಮನವಿ ಮಾಡಿದ್ದರು. ಪೊಲೀಸರ ಫೋನ್‌ ಕರೆ ಮಾಡಿ ತಿಳಿಸಿದ್ದರೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಅವಲಹಳ್ಳಿ ಪೊಲೀಸರು ಹೈಕೋರ್ಟ್ ಮಧ್ಯಂತರ ಆದೇಶ ತೆರವು ಮಾಡಿಸಲು ಅಡ್ವೊಕೇಟ್‌ ಜನರಲ್‌ ಅವರಿಗೆಪತ್ರ ಬರೆಯಲು ಮುಂದಾಗಿದ್ದಾರೆ.

  • ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್

    ಸಿನಿಮಾ ನಿರ್ಮಾಣದತ್ತ ಹೆಜ್ಜೆ ಇಟ್ಟ ಪ್ರಜ್ವಲ್ ದೇವರಾಜ್

    ನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ ಪುರಾತನ ಫಿಲಂಸ್. ಈಗಾಗಲೇ ಸನ್ ಆಫ್ ಮುತ್ತಣ್ಣ (Son of Muthanna) ಎಂಬ ಭಾವನಾತ್ಮಕ ಕಥೆಯ ಚಿತ್ರ ನಿರ್ಮಿಸಿ ತೆರೆಗೆ ತರುತ್ತಿರುವ ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ (Prajwal Devraj) ಅವರ ಜೊತೆಗೂಡಿ ಅತ್ಯುತ್ತಮ ತಾಂತ್ರಿಕತೆಯ ಹಾಗೂ ಸದಭಿರುಚಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

    ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ “P2 ಪ್ರೊಡಕ್ಷನ್ಸ್” ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ. ಈಗಾಗಲೇ ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ನಿಟ್ಟಿನಲ್ಲಿ ಕೆಲವು ಕೆಲಸಗಳನ್ನು ಮಾಡುತ್ತಿದೆ. ಇದನ್ನೂ ಓದಿ: ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ

    ಇದುವರೆಗೆ ಲವರ್ ಬಾಯ್, ಆಕ್ಷನ್ ಹೀರೋ ಹೀಗೆ ಎಲ್ಲಾ ತರಹದ ಪಾತ್ರಗಳನ್ನ ನಿರ್ವಹಿಸುವ ಮೂಲಕ ಗುರುತಿಸಿಕೊಂಡ ನಟ ಪ್ರಜ್ವಲ್ ದೇವರಾಜ್ ಇದೀಗ ಚಲನಚಿತ್ರ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದು, ದೊಡ್ಡ ಸಂಸ್ಥೆಯ ಜತೆ ಕೈಜೋಡಿಸಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಮಾಡುವ ಪ್ಲ್ಯಾನ್ ಮಾಡಿದ್ದಾರೆ.

  • ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ

    ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ

    ದುಬೈನಲ್ಲಿ (Dubai) ನಡೆದ 2024ರ ಸಾಲಿನ ಸೈಮಾ ಪ್ರಶಸ್ತಿ (SIIMA 2025 Award) ವಿತರಣಾ ಸಮಾರಂಭದ ವೇದಿಕೆಯಲ್ಲೇ ಕನ್ನಡಿಗರಿಗೆ (Kannadigas) ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ (Duniya Vijay) ಸಿಟ್ಟು ಹೊರಹಾಕಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಸೌತ್‌ ಇಂಡಸ್ಟ್ರಿಯ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಆದರೆ ಈ ಕಾರ್ಯಕ್ರಮದಲ್ಲಿಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ಭೀಮಾ ಸಿನಿಮಾಗೆ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ. ಇದನ್ನೂ ಓದಿ:  60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

    ಮುಂದುವರೆದು ಇದೇ ರೀತಿ ಪುನರಾವರ್ತನೆ ಮಾಡಿದರೆ ನಾವ್ಯಾರು ಈ ಕಾರ್ಯಕ್ರಮಕ್ಕೆ ಬರುವುದಿಲ್ಲ ಎನ್ನುವ ಖಡಕ್ ಸಂದೇಶವನ್ನ ರವಾನಿಸಿದ್ದಾರೆ. ಇದನ್ನೂ ಓದಿ:  ಹಿಂದೆ ಜಾಗ ಮಾರಾಟ ಮಾಡಿದಾಗ ಉಲ್ಲಂಘನೆಯಾಗಿರಲಿಲ್ಲ, ಈಗ ಹೇಗೆ ನಿಯಮ ಉಲ್ಲಂಘನೆಯಾಗುತ್ತೆ – ಬಾಲಣ್ಣನ ಪುತ್ರಿ ಸವಾಲು

    ಪ್ರತಿ ಬಾರಿ ಕನ್ನಡವನ್ನ ಕೆಳಗಿಳಿಸಲಾಗುತ್ತದೆ. ಬೇರೆ ಭಾಷೆಯ ಯಾವ ಸ್ಟಾರ್‌ ಇಲ್ಲದಿದ್ದಾಗ ನಮ್ಮನ್ನ ವೇದಿಕೆಗೆ ಕರೆಯುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ದುನಿಯಾ ವಿಜಯ್ ಕನ್ನಡಪರ ಗಟ್ಟಿಧ್ವನಿಗೆ ದುಬೈ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ದುನಿಯಾ ವಿಜಯ್ ನಂತರ ಕಿಚ್ಚ ಸುದೀಪ್‌ಗೆ (Sudeep) ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಅಲ್ಲಿ ದೊಡ್ಡ ಸ್ಟಾರ್‌ಗಳು ಇರಲಿಲ್ಲ. ಸುದೀಪ್ ಪರವಾಗಿ ವಿ.ನಾಗೇಂದ್ರ ಪ್ರಸಾದ್ ಪ್ರಶಸ್ತಿ ಸ್ವೀಕರಿಸಿದಾಗಲೂ ಕಡಿಮೆ ಸಂಖ್ಯೆಯ ಪ್ರೇಕ್ಷಕರಿದ್ದರು.

  • ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ಸಹಾಯಕ್ಕೆ ನಿಂತ ಧ್ರುವ ಸರ್ಜಾ

    ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ಸಹಾಯಕ್ಕೆ ನಿಂತ ಧ್ರುವ ಸರ್ಜಾ

    ಹಿರಿಯ ನಟ ಹರೀಶ್ ರಾಯ್ (Harish Roy) ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತಮ್ಮ ಚಿಕಿತ್ಸೆಗಾಗಿ ಆರ್ಥಿಕ ನೆರವಿಗಾಗಿ ಸಹಾಯವನ್ನ ಕೇಳಿದ್ದರು. ಈ ವಿಡಿಯೋ ವೈರಲ್ ಆ ಬೆನ್ನಲ್ಲೇ ನಟ ಧ್ರುವ ಸರ್ಜಾ (Dhruva Sarja) ನಟ ಹರೀಶ್ ರಾಯ್ ಸಹಾಯಕ್ಕೆ ನಿಂತಿದ್ದಾರೆ. ಅವರ ಆಸ್ಪತ್ರೆಯ ಖರ್ಚನ್ನ ಭರಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ನಟ ಧ್ರುವ ಸರ್ಜಾ ಅವರಿಗೆ ಧನ್ಯವಾದವನ್ನ ಹೇಳಿದ್ದಾರೆ ಹರೀಶ್ ರಾಯ್.

    ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಹೊಟ್ಟೆಗೆ ಹರಡಿ ಈಗ ಹೊಟ್ಟೆಯಲ್ಲಿ ನೀರು ತುಂಬಿಕೊಂಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ರೆ ವಾಸಿಯಾಗುವ ಭರವಸೆಯನ್ನ ವೈದ್ಯರು ನೀಡಿದ್ದಾರೆ. ಇದನ್ನೂ ಓದಿ: ಹದಗೆಟ್ಟ ಅನಾರೋಗ್ಯ.. ಉಲ್ಬಣಗೊಂಡ ಕ್ಯಾನ್ಸರ್: ಸಹಾಯ ಕೇಳಿ ಕಣ್ಣೀರಿಟ್ಟ KGF ಚಾಚಾ

    ಹರೀಶ್ ರಾಯ್ ಅವರಿಗೆ ನೀಡಬೇಕಾದ ಚಿಕಿತ್ಸೆ ದುಬಾರಿಯಾಗಿದ್ದು, ಒಂದೊಂದು ಇಂಜೆಕ್ಷನ್ ಬೆಲೆ ಮೂರುವರೆ ಲಕ್ಷ ರೂಪಾಯಿಗಳದ್ದು ಎಂದು ಈ ಹಿಂದೆ ಪಬ್ಲಿಕ್ ಟಿವಿಗೆ ಹೇಳಿಕೊಂಡಿದ್ದರು. ಜೊತೆಗೆ ಹರೀಶ್ ರಾಯ್ ಅವರಿಗೆ ತುರ್ತಾಗಿ ಚಿಕಿತ್ಸೆ ಕೂಡಾ ಪ್ರಾರಂಭಿಸಬೇಕಿದೆ ಎಂದು ವೈದ್ಯರು ಸಲಹೆಯನ್ನ ನೀಡಿದ್ದಾರಂತೆ. ಹೀಗಾಗಿ ಚಿತ್ರರಂಗದವರ ನೆರವನ್ನ ಕೇಳಿದ್ದರು ಹರೀಶ್ ರಾಯ್.

    ಹರೀಶ್ ರಾಯ್ ಕಷ್ಟದ ಈ ಸಂದರ್ಭಕ್ಕೆ ನಟ ಧ್ರುವ ಸರ್ಜಾ ಮಿಡಿದಿದ್ದಾರೆ. ಹರೀಶ್ ರಾಯ್ ಅವರ ಆಸ್ಪತ್ರೆ ಖರ್ಚು ಭರಿಸುತ್ತೇನೆ ಎಂದು ಮಾತು ಕೊಟ್ಟಿದ್ದಾರೆ ಎನ್ನಲಾಗ್ತಿದೆ. ಈ ಹಿಂದೆ ಕೆಜಿಎಫ್ ಸಿನಿಮಾ ಶೂಟಿಂಗ್ ವೇಳೆ ಅಂದರೆ ಮೂರು ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗಾಗಿ ನಟ ಯಶ್, ದರ್ಶನ್ ಹಾಗೂ ದುನಿಯಾ ವಿಜಯ್ ಸಹಾಯ ಮಾಡಿದ್ದರು ಎಂದು ನಟ ಹರೀಶ್ ರಾಯ್ ತಿಳಿಸಿದ್ದರು.

  • ನನಗೆ ಕನ್ನಡ ಬರಲ್ಲ, ಏನು ಮಾಡ್ತಿಯಾ? – ಪೌರ ಕಾರ್ಮಿಕನೊಂದಿಗೆ ಪ್ರತಿಷ್ಠಿತ ಬಟ್ಟೆ ಅಂಗಡಿ ಸಿಬ್ಬಂದಿಯ ಮೊಂಡುತನ

    ನನಗೆ ಕನ್ನಡ ಬರಲ್ಲ, ಏನು ಮಾಡ್ತಿಯಾ? – ಪೌರ ಕಾರ್ಮಿಕನೊಂದಿಗೆ ಪ್ರತಿಷ್ಠಿತ ಬಟ್ಟೆ ಅಂಗಡಿ ಸಿಬ್ಬಂದಿಯ ಮೊಂಡುತನ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಕನ್ನಡ ಗೊತ್ತಿಲ್ಲ ಎನ್ನುವರ ಧಿಮಾಕು ಹೆಚ್ಚಾಗಿದೆ. ನನಗೆ ಕನ್ನಡ ಬರಲ್ಲ. ಏನು ಮಾಡ್ತೀಯಾ ಎಂದು ಮಹಾನಗರ ಪಾಲಿಕೆ ಪೌರ ಕಾರ್ಮಿಕನ ಜೊತೆಗೆ ಪ್ರತಿಷ್ಠಿತ ಬಟ್ಟೆ ಅಂಗಡಿ ಸಿಬ್ಬಂದಿ ಮೊಂಡುತನ ತೋರಿದ್ದಾನೆ.

    ಹುಬ್ಬಳ್ಳಿಯ (Hubballi) ಕೊಪ್ಪಿಕರ ರಸ್ತೆಯಲ್ಲಿ ಪಾಲಿಕೆಯ ಆಟೋ ಟಿಪ್ಪರ್ ಚಾಲಕ ಮತ್ತು ಮಿನಿಸ್ಟರ್ ವೈಟ್ ಬಟ್ಟೆ ಅಂಗಡಿ ಸಿಬ್ಬಂದಿ ಜೊತೆಗೆ ಈ ಗಲಾಟೆ ನಡೆದಿದೆ. ಕಸ ಹಾಕಲು ಬಂದ ಶಾಪ್‌ನ ಸಿಬ್ಬಂದಿ ಬಳಿ ಪೌರ ಕಾರ್ಮಿಕರೊಬ್ಬರು ಕನ್ನಡ ಮಾತನಾಡಲು ಬರಲ್ವ ಎಂದು ಕೇಳಿದ್ದಾನೆ. ಇದನ್ನೂ ಓದಿ: `ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ

    ಈ ವೇಳೆ ಸಿಬ್ಬಂದಿ ನನಗೆ ಕನ್ನಡ ಬರಲ್ಲ, ಏನು ಮಾಡ್ತೀಯಾ ಎಂದು ಅವಾಜ್ ಹಾಕಿದ್ದಾನೆ. ಹುಬ್ಬಳ್ಳಿಗೆ ಬಂದು ಇಷ್ಟು ವರ್ಷವಾದರೂ ಕನ್ನಡ ಬರಲ್ವ? ಕನ್ನಡದಲ್ಲಿ ಮಾತನಾಡಲು ಬರದಿದ್ದರೇ ಕನ್ನಡದಲ್ಲಿ ಮಾತನಾಡುವವರನ್ನು ಕಸ ಹಾಕಲು ಕಳುಹಿಸಿ ಶಾಪ್ ಸಿಬ್ಬಂದಿಯನ್ನು ಪೌರ ಕಾರ್ಮಿಕರು ತರಾಟೆಗೆ ತೆಗೆದುಕೊಂಡಿದ್ದಾನೆ. ಇದನ್ನೂ ಓದಿ: ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

    ಬಟ್ಟೆ ಶಾಪ್‌ನ ಮುಂಭಾಗವೇ ಪೌರ ಕಾರ್ಮಿಕ ಹಾಗೂ ಬಟ್ಟೆ ಶಾಪ್‌ನ ಸಿಬ್ಬಂದಿ ನಡುವೆ ಕೆಲಹೊತ್ತು ವಾಗ್ವಾದ ನಡೆದಿದೆ.

  • ಡಾಲಿ ಹುಟ್ಟುಹಬ್ಬಕ್ಕೆ ಜಿಂಗೋ ಲುಕ್ ಪೋಸ್ಟರ್ ರಿಲೀಸ್

    ಡಾಲಿ ಹುಟ್ಟುಹಬ್ಬಕ್ಕೆ ಜಿಂಗೋ ಲುಕ್ ಪೋಸ್ಟರ್ ರಿಲೀಸ್

    ಡಾಲಿ ಪಿಚ್ಚರ್ಸ್ ಮತ್ತು ತ್ರಿಶೂಲ್ ವಿಜನರಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ (Dolly Dhananjay) ಅಭಿನಯದ ಜಿಂಗೋ (Jingo) ಚಿತ್ರದ ಸೆಕೆಂಡ್ ಲುಕ್ ಪೋಸ್ಟರ್ ಅನ್ನು ನಟ ಧನಂಜಯ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಬಿಡುಗಡೆಯಾದ ಚಿತ್ರದ ಅನೌನ್ಸ್ಮೆಂಟ್ ವಿಡಿಯೋಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಚರ್ಚೆಯನ್ನು ಸೃಷ್ಟಿಸಿತು, ಡಾಲಿ ಧನಂಜಯ ಅವರ ಜಿಂಗೋ ಮೋನೋಲಾಗ್ ಮತ್ತು ಅದರ ಜೊತೆಗಿನ ಸಂಗೀತ ನರ ನರ ಜಿಂಗೋ ಜನರ ಮೆಚ್ಚುಗೆ ಪಡೆಯಿತು.

    ಪ್ರೇಕ್ಷಕರ ಅಗಾಧ ಪ್ರತಿಕ್ರಿಯೆಯಿಂದ ಉತ್ಸಾಹಗೊಂಡ ಚಿತ್ರ ನಿರ್ಮಾಪಕರು ಕಥೆಯ ವ್ಯಾಪ್ತಿ ಮತ್ತು ಚಿತ್ರದ ಕ್ಯಾನ್ವಾಸ್ ಅನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ. ಸಣ್ಣ ಪಟ್ಟಣದ ಕಥೆಯಾಗಿ ಆರಂಭವಾದದ್ದು ಇದೀಗ ಚಿತ್ರ ತನ್ನ ಕ್ಯಾನ್ವಾಸ್ ಅನ್ನು ವಿಸ್ತರಿಸಿಕೊಂಡಿದ್ದು ಒಂದು ಅಪ್ಪಟ ದೊಡ್ಡ ಪರದೆ ವೀಕ್ಷಣೆಗೆ ಸರಿಹೊಂದುವಂತೆ ದೃಶ್ಯಾವಳಿಗಳನ್ನು ಹೆಣೆಯಲಾಗಿದೆ.  ಇದನ್ನೂ ಓದಿ: ದರ್ಶನ್ ಬಳ್ಳಾರಿ ಜರ್ನಿ – ಆ.30ರಂದು ಅರ್ಜಿ ವಿಚಾರಣೆ

    ನಮಗೆ ಸಿಕ್ಕ ಪ್ರತಿಕ್ರಿಯೆ ನಮ್ಮನ್ನು ದೊಡ್ಡದಾಗಿ ಯೋಚಿಸಲು ಪ್ರೇರೇಪಿಸಿದೆ. 2026ರಲ್ಲಿ ವೀಕ್ಷಕರಿಗೆ ವಿಶಿಷ್ಟ ಚಿತ್ರರಂಗದ ಅನುಭವವನ್ನು ನೀಡುತ್ತದೆ. ಪೊಲಿಟಿಕಲ್ ಸಟೈರ್, ಕಾಮಿಡಿ, ಆಕ್ಷನ್, ಥ್ರಿಲ್ಲರ್ ಎಲ್ಲ ಅಂಶಗಳನ್ನು ಹದವಾಗಿ ಬೆರೆಸಿ ಪ್ರೇಕ್ಷಕರಿಗೆ ಅತ್ಯುತ್ತಮ ಮನರಂಜನೆ ಕೊಡಬೇಕು ಎಂಬುದೇ ನಮ್ಮ ಗುರಿ. ಸದ್ಯ ಕನ್ನಡ, ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಅತ್ಯುತ್ತಮ ನಟರ ತಾರಾ ಬಳಗವಿರುತ್ತದೆ ಎಂದು ನಿರ್ಮಾಣ ತಂಡ ತಿಳಿಸಿದೆ. ಇದನ್ನೂ ಓದಿ: ಯಶ್ ತಾಯಿ ಪುಷ್ಪಗೆ ದೀಪಿಕಾ ದಾಸ್ ತಿರುಗೇಟು: ಪುಷ್ಪಮ್ಮ ಹೇಳಿದ್ದೇನು?

    ಈಗ ಬಿಡುಗಡೆಯಾಗಿರುವ ಪೋಸ್ಟರ್ ಅಲ್ಲಿ ತುಂಬಾ ವಿವರಗಳಿವೆ. ಮೇಲ್ನೋಟಕ್ಕೆ ಒಂದು ಫನ್ ಪೋಸ್ಟರ್ ಥರ ಕಾಣುತ್ತೆ, ಸೂಕ್ಷ್ಮವಾಗಿ ನೋಡುತ್ತಾ ಹೋದಂತೆ ತೆರೆದುಕೊಳ್ಳುತ್ತೆ. ಸಿನಿಮಾ ಕೂಡ ಇದೇ ಇರುತ್ತದೆ. ಎಲ್ಲ ವರ್ಗಗಳ ಪ್ರೇಕ್ಷಕರಿಗೂ ಇದರಲ್ಲಿ Takeaway ಗಳಿರುತ್ತದೆ, ಒಟ್ಟಿನಲ್ಲಿ 2026 ಕ್ಕೆ ಒಂದು ಮಜಾ ಚಿತ್ರಕ್ಕೆ ಪ್ರೇಕ್ಷಕರು ಸಜ್ಜಾಗಲಿ ಎನ್ನುತ್ತಾರೆ ನಿರ್ದೇಶಕ ಶಶಾಂಕ್ ಸೋಗಾಲ್.

  • ಡೆವಿಲ್ ಪ್ರಚಾರಕ್ಕೆ ಪುನರ್ ಚಾಲನೆ!

    ಡೆವಿಲ್ ಪ್ರಚಾರಕ್ಕೆ ಪುನರ್ ಚಾಲನೆ!

    ಜಾಮೀನು ರದ್ದಾದ ಕಾರಣಕ್ಕೆ ಕೊಲೆ ಆರೋಪಿ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರ ಮುಂಬರುವ ಚಿತ್ರದ ಪ್ರಚಾರವನ್ನೇ ನಿಲ್ಲಿಸಿತ್ತು ಚಿತ್ರತಂಡ. ಆದರೆ ದರ್ಶನ್ ಸಂದೇಶ ಎನ್ನಲಾದ ವಿಜಯಲಕ್ಷ್ಮಿ ಕಡೆಯಿಂದ ಬಂದ ಪೋಸ್ಟ್ ಬಳಿಕ ಅಭಿಮಾನಿಗಳು ಡೆವಿಲ್ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರುವ ಭರವಸೆ ಹೊಂದಿದರು. ಇದೀಗ ಚಿತ್ರದ ಪ್ರಚಾರ ಪ್ರಕ್ರಿಯೆಯನ್ನು ಪುನಃ ಶುರುಮಾಡಿದೆ ಸಿನಿಮಾ ತಂಡ.

    ಬಿಡುಗಡೆ ಮುಂದೂಡಿಕೆ ಆಗಿದ್ದ ಹಾಡಿನ ನಯಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಡೆವಿಲ್ ಟೀಮ್. `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಹಾಡು ಕಳೆದ ಆಗಸ್ಟ್ 15ಕ್ಕೆ ರಿಲೀಸ್ ಆಗಬೇಕಿತ್ತು. ಇದೀಗ ಆಗಸ್ಟ್ 24ಕ್ಕೆ ಇದೇ ಹಾಡನ್ನ ಬಿಡುಗಡೆ ಮಾಡೋದಾಗಿ ಹೇಳಿ ಹೊಸ ಡೇಟ್ ಅನೌನ್ಸ್ ಮಾಡಿದೆ `ದಿ ಡೆವಿಲ್’ ಚಿತ್ರತಂಡ. ದರ್ಶನ್ ಅನುಪಸ್ಥಿತಿಯಲ್ಲಿ ಡೆವಿಲ್ ಸಿನಿಮಾ ನಿಂತೋಗುತ್ತಾ ಎಂಬ ಆತಂಕಕ್ಕೆ ವಿಜಯಲಕ್ಷ್ಮಿ ತೆರೆ ಎಳೆದಿದ್ರು. ದರ್ಶನ್‌ರದ್ದೇ ಎನ್ನಲಾದ ಸಂದೇಶವನ್ನ ವಿಜಯಲಕ್ಷ್ಮಿ ಪೋಸ್ಟ್ ಮಾಡಿದಾಗ ಅಭಿಮಾನಿಗಳು ಎಚ್ಚೆತ್ತುಕೊಂಡ್ರು. ಇದೀಗ ಡೆವಿಲ್ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಮತ್ತೊಮ್ಮೆ ಕೌಂಡ್‌ಡೌನ್ ಶುರುವಾಗಿದೆ.

    ಹಾಡಿನ ಸಾಲುಗಳಿಂದಲೇ ಭಾರೀ ನಿರೀಕ್ಷೆ ಹುಟ್ಟಿಸಿರುವ ಹಾಡಿದು. ಆಗಸ್ಟ್ 24ರ ಬೆಳಗ್ಗೆ 10:05ಕ್ಕೆ ಹಾಡು ರಿಲೀಸ್ ಆಗಲಿದೆ. ಕೆಲವೇ ದಿನಗಳಲ್ಲಿ ಸಿನಿಮಾ ಬಿಡುಗಡೆಗೆ ದಿನಾಂಕವನ್ನೂ ಚಿತ್ರತಂಡ ಆಫಿಷಿಯಲ್ ಘೋಷಣೆ ಮಾಡಲಿರುವ ಸೂಚನೆ ಇದೆ.

  • ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್

    ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್

    ಸಿನಿಮಾ (Cinema) ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು ಎಂದು ದರ್ಶನ್‌ (Darshan) ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

    ವಿಜಯಲಕ್ಷ್ಮಿ ದರ್ಶನ್‌ (Vijayalakshmi Darshan) ಅವರು ದರ್ಶನ್‌ ಅಭಿಮಾನಿಗಳಿಗೆ ಕಳುಹಿಸಿದ ಸಂದೇಶವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ.

    ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
    ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.

    ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ದಿ ಡೆವಿಲ್ ʼ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ.

    ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.

  • 77ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯಗೆ ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ

    77ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯಗೆ ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ

    ಚೆನ್ನೈ: 77ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (M.K.Stalin) ಕನ್ನಡದಲ್ಲೇ (Kannada) ಶುಭ ಹಾರೈಸಿದ್ದಾರೆ.

    ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್‌, ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ. ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುತ್ತಾರೆ.

    ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.