Tag: kannambadi dam

  • ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿಲ್ಲ ಅಂತಾರೆ ತಜ್ಞರು; ನಾಮಫಲಕದಲ್ಲಿ ಏನಿದೆ?

    ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿಲ್ಲ ಅಂತಾರೆ ತಜ್ಞರು; ನಾಮಫಲಕದಲ್ಲಿ ಏನಿದೆ?

    ಮಂಡ್ಯ: ಕನ್ನಂಬಾಡಿ ಕಟ್ಟೆಗೆ (Kannambadi Katte) ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tippu Sultan) ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಒಂದು ಕಡೆ ಇತಿಹಾಸ ತಜ್ಞರು, ಟಿಪ್ಪು ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿಲ್ಲ. ಆತ ಬೇರೆ ಕಡೆ ಅಣೆಕಟ್ಟನ್ನು ಕಟ್ಟಬೇಕೆಂದು ಚಿಂತನೆ ಮಾಡಿ ಅಡಿಗಲ್ಲು ಹಾಕಿರೋದು ಎಂದು ಹೇಳುತ್ತಿದ್ದಾರೆ.

    ಇನ್ನೊಂದು ಕಡೆ ಸಚಿವ ಮಹದೇವಪ್ಪ (H C Mahadevappa) ಕೆಆರ್‌ಎಸ್ ಮುಖ್ಯ ದ್ವಾರದಲ್ಲಿ ಇರುವ ನಾಮಫಲಕವನ್ನು ಹಾಕಿ ಎಂದು ನಾನು ಹೇಳಿದ್ದಕ್ಕೆ ಸಾಕ್ಷಿ ಎಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ರಸ್ತೆಗಿಳಿಯಲ್ಲ ಬಸ್? – ಇಂದು ಸಿಎಂ ಸಭೆ, ಖಾಸಗಿ ಬಸ್‌ಗಳನ್ನ ರಸ್ತೆಗಿಳಿಸಲು ಜಿಲ್ಲಾಡಳಿತ ಕ್ರಮ

    ಕೆಆರ್‌ಎಸ್ ಡ್ಯಾಂನ (KRS Dam) ಸೌತ್ ಗೇಟ್‌ನಲ್ಲಿ ನಾಮಫಲಕಗಳು ಇವೆ. ಇದರಲ್ಲಿ ಡ್ಯಾಂ ನಿರ್ಮಾಣದ ಪ್ರಾರಂಭ, ಕಾಮಗಾರಿ ಮುಕ್ತಾಯವಾಗಿದ್ದು, ಆ ಸಂದರ್ಭದಲ್ಲಿ ಯಾವ ರಾಜರಿದ್ದರು? ದಿವಾನರು, ಎಂಜಿನಿಯರ್‌ಗಳು ಯಾರು? ಹಾಗೂ ಡ್ಯಾಂನ ನೀಲಿ ನಕ್ಷೆಯ ಮಾಹಿತಿಗಳನ್ನು ಒಳಗೊಂಡಿವೆ. ಇದಲ್ಲದೇ ಕನ್ನಡ, ಪರ್ಷಿಯನ್, ಇಂಗ್ಲಿಷ್ ಭಾಷೆಯಲ್ಲಿ ಈ ನಾಮಫಲಕಗಳಿವೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

    ಇದರಲ್ಲಿ 1794ರಲ್ಲಿ ಟಿಪ್ಪು ಸುಲ್ತಾನ್ ಕಾಲದಲ್ಲಿ ಕಾವೇರಿ ನದಿಗೆ ಅಣೆಕಟ್ಟನ್ನು ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಿರುವುದಾಗಿ ಉಲ್ಲೇಖವಾಗಿದೆ. ಆದರೆ ಈ ಬರಹಗಳಲ್ಲಿ ಎಲ್ಲೂ ಸಹ ಕನ್ನಂಬಾಡಿ ಕಟ್ಟೆಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇವೆ ಎಂದು ಉಲ್ಲೇಖವಾಗಿಲ್ಲ. ಕನ್ನಂಬಾಡಿ ಕಟ್ಟೆಯ ಕಾರ್ಯ ಆರಂಭವಾಗಿದ್ದು 1911ರಲ್ಲಿ, ಅಲ್ಲಿಗೆ ಟಿಪ್ಪು ಅಂದುಕೊಂಡಿದ್ದಕ್ಕೂ ಡ್ಯಾಂ ನಿರ್ಮಾಣ ಕಾರ್ಯ ಆರಂಭವಾಗಿದ್ದಕ್ಕೂ 119 ವರ್ಷಗಳ ಅಂತರವಿದೆ. ಇದನ್ನೂ ಓದಿ: ಗ್ರೌಂಡ್‌ ಪೆನೆಟ್ರೇಟಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್‌

    ಹೀಗಾಗಿ ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಹಾಕಿಲ್ಲ. ಟಿಪ್ಪು ಈ ಭಾಗದಲ್ಲಿ ಒಂದು ಅಣೆಕಟ್ಟನ್ನು ಕಟ್ಟಬೇಕೆಂದು ಶಂಕುಸ್ಥಾಪನೆ ಮಾಡಿದ್ದಾರೆ. ಆದರೆ ಈ ಜಾಗದಲ್ಲಿ ಕನ್ನಂಬಾಡಿ ಕಟ್ಟೆಗೆ ಶಂಕುಸ್ಥಾಪನೆ ಮಾಡಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್. ಟಿಪ್ಪು ಸಹ ಈ ಭಾಗದಲ್ಲಿ ಅಣೆಕಟ್ಟನ್ನು ನಿರ್ಮಾಣ ಮಾಡುಲು ಮುಂದಾಗಿದ್ದರು ಎಂಬ ಕಾರಣಕ್ಕೆ ಟಿಪ್ಪು ಸುಲ್ತಾನ್ ಕುರಿತ ಶಿಲಾನ್ಯಾಸವನ್ನು ಇಲ್ಲಿ ಹಾಕಲಾಗಿದೆ ಎಂದು ಇತಿಹಾಸ ತಜ್ಞರು ಹೇಳುತ್ತಿದ್ದಾರೆ.

  • 45 ವರ್ಷಗಳ ಇತಿಹಾಸದಲ್ಲಿ ನೂತನ ದಾಖಲೆ ಬರೆಯಲು ಕೆಆರ್‌ಎಸ್ ಸಜ್ಜು

    45 ವರ್ಷಗಳ ಇತಿಹಾಸದಲ್ಲಿ ನೂತನ ದಾಖಲೆ ಬರೆಯಲು ಕೆಆರ್‌ಎಸ್ ಸಜ್ಜು

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟು (KRS Dam) ಅಂದರೆ ಈ ಭಾಗದ ರೈತರ ಜೀವಾಳ ಹಾಗೂ ಮಹಾನಗರಗಳಿಗೆ ದಣಿವು ಉಣಿಸುವ ಜೀವನಾಡಿ. ಸದ್ಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ (Rain) ಬೀಳುತ್ತಿರುವ ಹಿನ್ನೆಲೆ ಈ ಜಲಾನಯನ ಭರ್ತಿಯ ಅಂಚಿಗೆ ತಲುಪುತ್ತಿದೆ. ಈ ಸಂದರ್ಭದಲ್ಲಿ ಕನ್ನಂಬಾಡಿ (Kannambadi) ಕಟ್ಟೆ 45 ವರ್ಷಗಳ ಇತಿಹಾಸದಲ್ಲಿ ವಿಶೇಷ ದಾಖಲೆಯನ್ನು ಬರೆಯಲು ಕಾತುರದಲ್ಲಿದೆ.

    ಪ್ರತಿವರ್ಷ ಕೆಆರ್‌ಎಸ್ ಡ್ಯಾಂ ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ಭರ್ತಿಯಾಗುತ್ತಿತ್ತು. ಆಗೊಮ್ಮೆ ಈಗೋಮ್ಮೆ ಜುಲೈ ತಿಂಗಳಿನಲ್ಲಿ ಭರ್ತಿಯಾಗಿರುವ ಒಂದೆರಡು ಉದಾಹರಣೆ ಇದೆ. ಆದರೆ ಈ ಬಾರಿ ಜೂನ್ ತಿಂಗಳಿನಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕೆಆರ್‌ಎಸ್ ಡ್ಯಾಂ ಭರ್ತಿಗೆ 9 ಅಡಿ ಅಂದ್ರೆ 12 ಟಿಎಂಸಿ ನೀರು ಅಷ್ಟೇ ಬೇಕಿರೋದು. ಹೀಗೆ ಮಳೆ ಬಿದ್ದರೆ ಕೆಆರ್‌ಎಸ್ ಡ್ಯಾಂ ಕೆಲ ದಿನಗಳಲ್ಲಿ ಭರ್ತಿಯಾಗಲಿದೆ. 1980 ರಿಂದ ಇಲ್ಲಿಯವರೆಗೆ ಜೂನ್ ತಿಂಗಳಿನಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿರುವ ಉದಾಹರಣೆಯೇ ಇಲ್ಲ. ಇದೇ ತಿಂಗಳು ಕೆಆರ್‌ಎಸ್ ಭರ್ತಿಯಾದ್ರೆ ದಾಖಲೆಯ ಪುಟಕ್ಕೆ ಕನ್ನಂಬಾಡಿ ಕಟ್ಟೆ ಸೇರಲಿದೆ. ಇದನ್ನೂ ಓದಿ: ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

    ಒಟ್ಟಾರೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ ಜೂನ್ ತಿಂಗಳಿನಲ್ಲಿ ಭರ್ತಿಯತ್ತ ಸಾಗುತ್ತಿರೋದು ಈ ಭಾಗದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ಕಾಲ್ತುಳಿತ ತನಿಖೆಗೆ ಇನ್ನೊಂದು ವಾರ ಗಡುವು ಕೇಳಲು ಚಿಂತನೆ – ಸಿಸಿಟಿವಿ ಫೂಟೇಜ್ ನೀಡುವಂತೆ ಡಿಸಿ ಪತ್ರ

  • ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

    ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಡಾ. ನಾರಾಯಣಗೌಡ

    ಮಂಡ್ಯ: ಕನ್ನಂಬಾಡಿ ಅಣೆಕಟ್ಟು ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

    ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

    ಕನ್ನಂಬಾಡಿ ಅಣೆಕಟ್ಟಿನ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂಗೆ ಡ್ಯಾಮೇಜ್ ಆಗತ್ತದೆ ಎಂಬ ಕೂಗು ಬಹಳದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ. ಅಲ್ಲದೆ ಬೇಬಿ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಂದಿದ್ದಾರೆ. ಇದನ್ನೂ ಓದಿ: ಬಿಗ್ ಮನೆಯಿಂದ ಬರುತ್ತಿದ್ದಂತೆ ನಿಧಿ ಮನೆಗೆ ಹೊರಟ ರಘು

    ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವರು:
    ಗಣಿಗಾರಿಕೆ ನಡೆಸುವ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೆ ಇಲ್ಲ. ಕೆಲ ಅಧಿಕಾರಿಗಳ ಶಾಮೀಲಾತಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಕೆ.ಆರ್.ಎಸ್. ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೆ ಎದ್ದು ಹೊಲ ಮೇಯ್ದ ರೀತಿಯಂತಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನುಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸೂಚಿಸಿದರು. ನಮ್ಮ ಜಿಲ್ಲೆಯಲ್ಲಿ 95 ಕ್ಕೂ ಹೆಚ್ಚು ಕಲ್ಲುಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ಎಲ್ಲ ಲೊಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

    ಅಕ್ರಮ ತಡೆಗೆ ಸಹಾಯವಾಣಿ ಆರಂಭ:
    ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾನ್ಯರ ನೆರವನ್ನೂ ಪಡೆಯಬೇಕು. ಜಿಲ್ಲೆಯಲ್ಲಿ ಎಲ್ಲೇ ಅಕ್ರಮವಾಗಿ ಗಣಿಗಾರಿಕೆ ನಡೆದರೆ, ಬ್ಲಾಸ್ಟ್ ಮಾಡಿದರೆ ತಕ್ಷಣ ಆ ಪ್ರದೇಶದ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.

    ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಆರ್ ಟಿ ಓ, ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ತಕ್ಷಣವೆ ಸರ್ವೆ ನಡೆಸಿ, ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಮಾಡಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪಟ್ಟಿಯನ್ನು ತಕ್ಷಣ ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂಪಾಯಿ ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರದಲ್ಲಿ ಸಿಸಿಕ್ಯಾಮೆರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದು ಹೇಳಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಸಿಇಯೋ ದಿವ್ಯ ಪ್ರಭು, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ ಪದ್ಮಜಾ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.