Tag: kanpura

  • ಇನ್‌ಸ್ಟಾದಲ್ಲಿ ಚಾಟಿಂಗ್-‌ ಡೇಟಿಂಗ್‌ ಕರೆದಾಗ ಸತ್ಯ ಗೊತ್ತಾಗಿ ರೊಚ್ಚಿಗೆದ್ದ ಯುವಕ!

    ಇನ್‌ಸ್ಟಾದಲ್ಲಿ ಚಾಟಿಂಗ್-‌ ಡೇಟಿಂಗ್‌ ಕರೆದಾಗ ಸತ್ಯ ಗೊತ್ತಾಗಿ ರೊಚ್ಚಿಗೆದ್ದ ಯುವಕ!

    ಲಕ್ನೋ: ಸಾಮಾಜಿಕ ಜಾಲತಾಣ ಇನ್‌ ಸ್ಟಾದಲ್ಲಿ ಪರಿಚಯವಾಗಿ, ಈ ಪರಿಚಯವು ಪ್ರೀತಿಗೆ ತಿರುಗಿ ಡೇಟಿಂಗ್‌ಗೂ ಕರೆದಿದ್ದಾನೆ. ಈ ವೇಳೆ ಸತ್ಯ ಗೊತ್ತಾಗಿ ಯುವಕ ರೊಚ್ಚಿಗೆದ್ದ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ (Uttarpradesh Kanpur) ನಡೆದಿದೆ.

    ಘಟನೆ ವಿವರ: 20 ವರ್ಷದ ದೀಪೇಂದ್ರ ಸಿಂಗ್ Instagram ನಲ್ಲಿ ಯುವತಿ ಎಂದು ಚಾಟ್ ಮಾಡಲು ಪ್ರಾರಂಭಿಸಿದ್ದಾನೆ. ಕ್ರಮೇಣ ಇಬ್ಬರಲ್ಲಿಯೂ ಪ್ರೀತಿ ಆರಂಭವಾಗಿದೆ. ಕೆಲ ದಿನಗಳ ಬಳಿಕ ಒಂದು ದಿನ ಆತ ಪರಸ್ಪರ ಭೇಟಿಯಾಗಲು ನಿರ್ಧರಿಸಿದ್ದಾನೆ. ಅಂತೆಯೇ ಭೇಟಿಗೆ ದಿನ ಕೂಡ ನಿಗದಿ ಮಾಡಿದ್ದಾನೆ. ಅದರಂತೆ ದೀಪೇಂದ್ರ ಸಿಂಗ್ ಹೇಳಿದ ಸ್ಥಳಕ್ಕೆ ಆಕೆ ಬಂದಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಯುವತಿಯಾಗಿ ಕಾಣಿಸಿಕೊಂಡಿದ್ದಾಕೆಗೆ ಹೆಚ್ಚು ವಯಸ್ಸಾದುದನ್ನು ನೋಡಿ ದೀಪೇಂದ್ರ ಆಘಾತಕ್ಕೊಳಗಾಗಿದ್ದಾನೆ. ಮೊದಲು ಆಕೆಯನ್ನು ನೋಡಿ ಕನ್ಫ್ಯೂಸ್ ಆದ ಯುವಕ, ನಂತರ ಆಕೆಯನ್ನು ವಿಚಾರಿಸಿದ್ದಾನೆ. ಈ ವೇಳೆ ಆಕೆ ತನಗೆ 45 ವರ್ಷ ಎಂದು ಬಹಿರಂಗಪಡಿಸಿದ್ದಾಳೆ.‌

    ಪ್ರಿಯತಮೆಯ ವಯಸ್ಸು ಕೇಳಿ ಕೋಪಗೊಂಡ ದೀಪೇಂದ್ರ, ಆಕೆಯೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೇ ಆಕೆಯ ತಲೆಗೂದಲನ್ನು ಹಿಡಿದು ನೆಲಕ್ಕೆ ಹೊಡೆದಿದ್ದಾನೆ. ಹಲ್ಲೆಗೈದ ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ತನಗೆ ಥಳಿಸಿದ್ದಾರೆ. ನಂತರ ನನ್ನ ಮೊಬೈಲ್ ಫೋನ್ ಕದ್ದಿದ್ದಾರೆ ಎಂದು ದೂರಿದ್ದಾಳೆ.

    ಘಟನೆಗೆ ಸಂಬಂಧಿಸಿದಂತೆ 20 ವರ್ಷದ ಯುವಕನನ್ನು ಪೊಲೀಸರು ಕಾನ್ಪುರದಲ್ಲಿ ಬಂಧಿಸಿದ್ದಾರೆ. ತನಿಖೆಯ ವೇಳೆ, ಮಹಿಳೆಗೆ 45 ವರ್ಷ ವಯಸ್ಸಾಗಿದೆ ಎಂದು ತಿಳಿದು ಥಳಿಸಿದ್ದಾಗಿ ಪೊಲೀಸರಿಗೆ ದೀಪೇಂದ್ರ ತಿಳಿಸಿದ್ದಾನೆ.

  • ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ 17 ಮಂದಿ ದಾರುಣ ಸಾವು- 24 ಮಂದಿಗೆ ಗಾಯ

    ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ 17 ಮಂದಿ ದಾರುಣ ಸಾವು- 24 ಮಂದಿಗೆ ಗಾಯ

    – ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಲಕ್ನೋ: ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ ಸುಮಾರು 17 ಮಂದಿ ದಾರುಣವಾಗಿ ಮೃತಪಟ್ಟು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಈ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಿಂದ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಕಾನ್ಪುರದ ಸಚೇಂದಿ ಬಳಿಯ ಕಿಸಾನ್ ನಗರ ಕಾಲುವೆ ಸಮೀಪ ಜೆಸಿಬಿ ಶತಾಬ್ದಿ ಎಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 17 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಬಸ್ಸಿನಲ್ಲಿದ್ದ ಪ್ರಯಾಣಿಕರು ಕಾನ್ಪುರದಿಂದ ಅಹಮದಾಬಾದ್ ಕಡೆ ಚಲಿಸುತ್ತಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಮೋದಿ, ಯೋಗಿ ಆದಿತ್ಯನಾಥ್ ಪರಿಹಾರ:
    ದುರಂತದಲ್ಲಿ ಮಡಿದ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟ್ಟರ್ ನಲ್ಲಿ ಬರೆದುಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸಹಾಯ ಮಾಡುವಂತೆ ಸೂಚಿಸಿದ್ದರು. ಅಪಘಾತಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.

  • ಒಳಉಡುಪು ಕದ್ದು ಧರಿಸಿದ್ದಕ್ಕೆ ಸಹೋದ್ಯೋಗಿಯನ್ನು ಚಾಕುವಿನಿಂದ ಇರಿದು ಕೊಂದ!

    ಒಳಉಡುಪು ಕದ್ದು ಧರಿಸಿದ್ದಕ್ಕೆ ಸಹೋದ್ಯೋಗಿಯನ್ನು ಚಾಕುವಿನಿಂದ ಇರಿದು ಕೊಂದ!

    ಲಕ್ನೋ: ಒಳಉಡುಪು ಕದ್ದಿದ್ದಕ್ಕೆ ಕೊಲೆಯೊಂದು ನಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ವಿವೇಕ್ ಎಂದು ಗುರುತಿಸಲಾಗಿದೆ. ಈತನನ್ನು ಸಹೋದ್ಯೋಗಿ ಅಜಯ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

    ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿರುವ ವಿವೇಕ್ ಹಾಗೂ ಅಜಯ್ ಗುರುವಾರ ಒಂದೇ ರೂಂನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ವಿವೇಕ್ ಧರಿಸಿದ್ದ ಅಂಡರ್ ವೇರ್ ಅನ್ನು ಅಜಯ್ ಗಮನಿಸಿದ್ದಾನೆ. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

    ಸರ್ಕಲ್ ಆಫೀಸರ್ ಅಕ್ಬರ್ ಪುರ್ ಸಿಂಗ್ ಮಾತನಾಡಿ, ಒಳ ಉಡುಪು ವಿಚಾರವಾಗಿ ಅಜಯ್ ಹಾಗೂ ವಿವೇಕ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಜಗಳ ತಾರಕಕ್ಕೇರುತ್ತಿದ್ದಂತೆಯೇ ಅಜಯ್ ಅಲ್ಲೇ ಇದ್ದ ತರಕಾರಿ ಕಟ್ ಮಾಡುವ ಚಾಕು ತೆಗೆದುಕೊಂಡು ವಿವೇಕ್ ಗೆ ಇರಿದಿದ್ದಾನೆ. ಘಟನೆಯಿಂದ ವಿವೇಕ್ ಗಂಭೀರ ಗಾಯಗೊಳ್ಳುತ್ತಿದ್ದಂತೆಯೇ ಅಜಯ್ ಅಲ್ಲಿಂದ ಕಾಲ್ಕಿತ್ತಿದ್ದಾನೆ ಎಂದು ತಿಳಿಸಿದ್ದಾರೆ.

    ಇತ್ತ ಘಟನೆಯಿಂದ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿವೇಕ್ ನನ್ನು ಇನ್ನೊಬ್ಬ ಸಹೋದ್ಯೋಗಿ ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾನೆ. ಆದರೆ ಚಿಕಿತ್ಸೆ ಫಲಿಕಾರಿಯಾಗದೆ ವಿವೇಕ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

    ಘಟನೆ ಸಂಬಂಧಿಸಿದಂತೆ ಆರೋಪಿ ಅಯ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಫ್ಯಾಕ್ಟರಿ ಮಾಲೀಕ ಹಾಗೂ ಕೆಲಸ ಸಹೋದ್ಯೋಗಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

  • ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

    ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

    ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್‍ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್ ಗಳನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿದೆ. ಈ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಿಂದ 150 ಕಿ.ಮಿ ದೂರದಲ್ಲಿ ನಡೆದಿದೆ.

    ಮೃತರನ್ನು ಸಿಒ ದೇವೇಂದ್ರ ಕುಮಾರ್ ಮಿಶ್ರಾ, ಎಸ್‍ಒ ಮಹೇಶ್ ಯಾದವ್, ಅನೂಪ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ನೆಬುಲಾಲ್, ಕಾನ್ ಸ್ಟೇಬಲ್ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಹಾಗೂ ಬಬ್ಲು ಎಂದು ಗುರುತಿಸಲಾಗಿದೆ.

    ಮೂರು ಪೊಲೀಸ್ ಠಾಣೆಯ ಈ ಪೊಲೀಸರ ತಂಡ ಗ್ರಾಮಕ್ಕೆ ತೆರಳಿ 60 ಪ್ರಕರಣ ದಾಖಲಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿತ್ತು. ಇತ್ತೀಚೆಗೆ ವಿಕಾಸ್ ವಿರುದ್ಧ ಕೊಲೆ ಯತ್ನ ಪ್ರಕರಣವೊಂದು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲಿಸರ ತಂಡ ಗ್ರಾಮಕ್ಕೆ ದಾಳಿ ನಡೆಸಿತ್ತು.

    ಆತನನ್ನು ಬಂಧಿಸುವುದೇ ಪೊಲೀಸರ ಉದ್ದೇಶವಾಗಿತ್ತು. ಆದರೆ ಈ ವೇಳೆ ಆರೋಪಿ ಬೆಂಬಲಿಗರು ಹೊಂಚು ಹಾಕಿ ಮೂರು ಕಡೆಗಳಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಒಟ್ಟಿನಲ್ಲಿ ಗ್ಯಾಂಗ್ ಪ್ಲಾನ್ ಮಾಡಿಯೇ ಈ ಕೊಲೆಗಳನ್ನು ನಡೆಸಿದ್ದಾರೆ ಎಂದು ಕಾನ್ಪುರದ ಪೊಲೀಸ್ ಅಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

    ಪೊಲೀಸರು ಗ್ರಾಮಕ್ಕೆ ತೆರಳಿರುವ ಸುಳಿವು ಸಿಗುತ್ತಿದ್ದಂತೆಯೇ ದುಬೆ ಬೆಂಬಲಿಗರು ರಸ್ತೆ ಬ್ಲಾಕ್ ಮಾಡಿದ್ದಾರೆ. ಅಲ್ಲದೆ ಪೊಲೀಸರು ಗ್ರಾಮದೊಳಗೆ ತೆರಳುತ್ತಿದ್ದಂತೆಯೇ ಇತ್ತ ರಸ್ತೆ ಬ್ಲಾಕ್ ಮಾಡಿದ್ದಾರೆ. ನಂತರ ಪೊಲೀಸರ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ ಎಂದು ಅಲ್ಲಿನ ಡಿಜಿಪಿ ಹೇಳಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿ, ತನಿಖೆಗೆ ಆದೇಶಿಸಿದ್ದಾರೆ.