Tag: Kanyadi

  • ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

    ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

    ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial) ಇಂದು ಕನ್ಯಾಡಿಯಲ್ಲಿ (Kanyadi) ನಡೆದ ಶೋಧ ಕಾರ್ಯ ಅಂತ್ಯಗೊಂಡಿದ್ದು ಅನಾಮಿಕ ಬರಿಗೈಯಲ್ಲಿ ವಾಪಸ್‌ ಆಗಿದ್ದಾನೆ.

    ಇಲ್ಲಿಯವರೆಗೆ ನೇತ್ರಾವತಿ ನದಿ (Netravathi River) ತಟ, ನದಿ ಪಕ್ಕ ಇರುವ ಅರಣ್ಯ, ಬಾಹುಬಲಿ ಬೆಟ್ಟದಲ್ಲಿ ಶೋಧ ಕಾರ್ಯ ನಡೆದಿತ್ತು. ಆದರೆ ಇಂದು ಧರ್ಮಸ್ಥಳದಿಂದ 5 ಕಿ.ಮೀ ದೂರದಲ್ಲಿರುವ ಕನ್ಯಾಡಿಯಲ್ಲಿ ಶೋಧ ನಡೆಸಲಾಯಿತು.

    ಕನ್ಯಾಡಿಯ ಖಾಸಗಿ ತೋಟದ ಪಕ್ಕದ ಅರಣ್ಯ (Forest) ಭಾಗದಲ್ಲಿ ಅನಾಮಿಕ ಶವ ಹೂತಿದ್ದೇನೆ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎ.ಸಿ ಸ್ಟೆಲ್ಲಾ ವರ್ಗೀಸ್ ಸಮ್ಮುಖದಲ್ಲಿ ಹಿಟಾಚಿ ಮೂಲಕ 6 ಅಡಿಯಷ್ಟು ಆಳಕ್ಕೆ ಅಗೆಯಲಾಯಿತು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    ಮಳೆಯ ನಡುವೆಯೂ ಎಸ್‌ಐಟಿ ತಂಡ ಅನಾಮಿಕ ಹೇಳಿದಂತೆ ಗುಂಡಿ ತೋಡಿತು. ಯಾವುದೇ ಕುರುಹು ಪತ್ತೆಯಾಗದ ಕಾರಣ ಸಂಜೆ ಉತ್ಕನನ ಕೆಲಸವನ್ನು ಸ್ಥಗಿತಗೊಳಿಸಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ಆಗಿದ್ದಾರೆ.

  • ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ – ಓರ್ವ ಆರೋಪಿ ಬಂಧನ

    ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ – ಓರ್ವ ಆರೋಪಿ ಬಂಧನ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಧರ್ಮಸ್ಥಳ ಗ್ರಾಮ ಕನ್ಯಾಡಿ (Kanyadi) ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು

    ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ಸಾವು

    ಅಕ್ರಮ ಕೂಟ ಸೇರಿದ ಆರೋಪದಲ್ಲಿ ಪೊಲೀಸರು 3 ಸುಮೊಟೊ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅದಲ್ಲದೆ ಪರಸ್ಪರ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮದ ಪ್ರಾಂಗಳದಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 2 ಎಫ್‌ಐಆರ್ ಹಾಗೂ ಬೆಳ್ತಂಗಡಿಯ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 1 ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸರ್ವಜ್ಞ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಬಂದಿದೆ, ಅಲ್ಲೂ ಪರಿಶೀಲನೆ ಮಾಡಲಿ: ಪಿ.ಸಿ ಮೋಹನ್

    ಬುಧವಾರ (ಆ.6) ಸಂಜೆ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಬಳಿಕ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ವರದಿ ಮಾಡಲು ಹೋಗಿದ್ದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಉದ್ವಿಗ್ನತೆ – 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರತ್ಯೇಕ FIR ದಾಖಲು

    ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದರು. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಅದಾನಿ ದುಡ್ಡನ್ನ ಮೋದಿ, ಬಿಜೆಪಿಯವರು ಹಂಚಿಕೊಳ್ತಿದ್ದಾರೆ: ಸಂತೋಷ್ ಲಾಡ್

  • 1 ವರ್ಷ ಸಂಪೂರ್ಣ ಬಂದ್‌ – ಬೆಳ್ತಂಗಡಿ ಶಾಲೆಯಿಂದ ಮಹತ್ವದ ನಿರ್ಧಾರ

    1 ವರ್ಷ ಸಂಪೂರ್ಣ ಬಂದ್‌ – ಬೆಳ್ತಂಗಡಿ ಶಾಲೆಯಿಂದ ಮಹತ್ವದ ನಿರ್ಧಾರ

    ಮಂಗಳೂರು: ಕೋವಿಡ್‌ 19 ಹಿನ್ನೆಲೆಯಲ್ಲಿ ಒಂದು ವರ್ಷ ವಿದ್ಯಾಸಂಸ್ಥೆಯನ್ನು ಸಂಪೂರ್ಣ ಬಂದ್ ಮಾಡಲು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.

    ಧರ್ಮಸ್ಥಳ – ಉಜಿರೆ ಮಧ್ಯೆ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ಎಲ್ ಕೆಜಿಯಿಂದ ಹತ್ತನೇ ತರಗತಿವರೆಗೆ ಶಾಲೆ ನಡೆಯುತ್ತಿದ್ದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

    350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರು. ಹೀಗಾಗಿ ಮಕ್ಕಳ ಪೋಷಕರ ಅಭಿಪ್ರಾಯ ಪಡೆದು ಶಾಲಾ ಆಡಳಿತ ನಿರ್ಧಾರ ಕೈಗೊಂಡಿದೆ. ಪೋಷಕರು ಬೇರೆ ಶಾಲೆಗೆ ಸೇರಲು ಇಚ್ಛಿಸಿದರೆ ವರ್ಗಾವಣೆ ಪತ್ರ ನೀಡಲು ನಿರ್ಧರಿಸಿದ್ದೇವೆ. ಶಾಲೆಯ ಈ ನಿರ್ಧಾರದ ಬಗ್ಗೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಬ್ರಹ್ಮಾನಂದ ಸರಸ್ವತಿ ತಿಳಿಸಿದ್ದಾರೆ.