Tag: Kanyakumari

  • ದ್ವೇಷ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ; ದೇಶವನ್ನು ಕಳೆದುಕೊಳ್ಳಲು ಬಯಸಲ್ಲ – ರಾಹುಲ್ ಗಾಂಧಿ

    ದ್ವೇಷ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ; ದೇಶವನ್ನು ಕಳೆದುಕೊಳ್ಳಲು ಬಯಸಲ್ಲ – ರಾಹುಲ್ ಗಾಂಧಿ

    ಚೆನ್ನೈ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಚಾಲನೆ ಸಿಕ್ಕಿದೆ. ಈ ವೇಳೆ ತಂದೆ ರಾಜೀವ್ ಗಾಂಧಿಯನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, ದ್ವೇಷ ಹಾಗೂ ವಿಭಜನೆ ರಾಜಕೀಯದ ಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ ಎಂದು ಹೇಳಿದರು.

    ಭಾರತ್ ಜೋಡೋ ಆರಂಭಿಸುವುದಕ್ಕೂ ಮುನ್ನ ರಾಹುಲ್ ಗಾಂಧಿ ಶ್ರೀಪೆರಂಬೂರ್‌ನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಸ್ಮಾರಕದ ಆವರಣದಲ್ಲಿ ಗಿಡ ನೆಟ್ಟು, ತಂದೆಯನ್ನು ಸ್ಮರಿಸಿದರು. ಈ ವೇಳೆ ರಾಹುಲ್‌ಗೆ ಡಿಕೆಶಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ಸಾಥ್ ನೀಡಿದರು.

    ಇದರ ಫೋಟೋಗಳನ್ನು ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆ ರಾಜಕೀಯದ ಕಾರಣ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ನಾನು ನನ್ನ ದೇಶವನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಆಸೆ ಭಯವನ್ನು ಸೋಲಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿ ಇದ್ದರೆ ಏನು ಬೇಕಿದ್ದರೂ ಮಾಡಬಹುದು ಎಂದರು. ಇದನ್ನೂ ಓದಿ: ಇಂದು 606 ಕೇಸ್ – 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ಭಾರತ್ ಜೋಡೋ ಯಾತ್ರೆಯನ್ನು ಉದ್ಘಾಟಿಸಿದ ಬಳಿಕ ಗಾಂಧಿ ಸ್ಮಾರಕಕ್ಕೆ ನಮಿಸಿದ ರಾಹುಲ್ ಗಾಂಧಿ ಬಳಿಕ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶ ವಿಭಜನೆ ರಾಜಕೀಯ, ಮತೋನ್ಮಾದ, ನಿರುದ್ಯೋಗ, ಹಣದುಬ್ಬರ, ಅಸಮಾನತೆ ವಿರುದ್ಧ ದನಿ ಎತ್ತುವುದು, ಇದರ ವಿರುದ್ಧ ದೇಶದ ಜನರನ್ನೂ ಒಗ್ಗೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದರು.

    ಇಂದಿನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಗಾಂಧಿ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಭೂಪೇಶ್ ಭಘಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

    ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸುದೀರ್ಘ ಯಾತ್ರೆ ಕಾಶ್ಮೀರದವರೆಗೂ ಎಂದರೆ 3,750 ಕಿ.ಮೀ ದೂರ ಸಾಗಲಿದೆ. ಈ ಯಾತ್ರೆ 12 ರಾಜ್ಯಗಳಲ್ಲಿ 150 ದಿನ ನಡೆಯಲಿದೆ. ನಿತ್ಯ 25 ಕಿ.ಮೀ ಈ ಪಾದಯಾತ್ರೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಸೈನಿಕರ ಮೇಲೆ ಅಭಿಮಾನ – ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದ ವೈದ್ಯ

    ಸೈನಿಕರ ಮೇಲೆ ಅಭಿಮಾನ – ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದ ವೈದ್ಯ

    ಕಾರವಾರ: ಭಾರತೀಯ ಸೈನಿಕರ ಮೇಲೆ ಅಭಿಮಾನ ಮತ್ತು ಪ್ರೀತಿಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ವೈದ್ಯರೊಬ್ಬರು ಶ್ರೀನಗರದಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದು ಗಮನ ಸೆಳೆದಿದ್ದಾರೆ.

    ಸಿದ್ದಾಪುರ ತಾಲೂಕಿನ ಅತ್ತಿಗಾರ ಜಡ್ಡಿ ಗ್ರಾಮದ ಯುವ ವೈದ್ಯ ಡಾ.ಹರ್ಷವರ್ಧನ್ ನಾರಾಯಣ ನಾಯ್ಕ ಸೈನಿಕರ ಅಭಿಮಾನದಿಂದ ಸಾಧನೆ ಮಾಡಿದ್ದಾರೆ. ಶ್ರೀನಗರದಿಂದ ಕನ್ಯಾಕುಮಾರಿಯವರೆಗೆ 3,715 ಕಿಲೋಮೀಟರ್ ದೂರವನ್ನು ಕೇವಲ 19 ದಿನ 5  ಗಂಟೆ ಒಳಗೆ ಕ್ರಮಿಸಿ ಸಾಧನೆ ಮಾಡಿದ್ದಾರೆ.

    ನವೆಂಬರ್ 14 ರಂದು ಶ್ರೀನಗರದಿಂದ ಸೈಕಲ್ ತುಳಿಯಲು ಪ್ರಾರಂಭಿಸಿದ ವೈದ್ಯ ಪ್ರತಿ ದಿನ 200 ಕಿ.ಮೀ. ಸೈಕಲ್ ತುಳಿದು ಶ್ರೀನಗರ, ಅಮೃತಸರ, ಕಿಶನ್ ಗಡ, ಶಿರಡಿ, ವಿಜಯಪುರ, ಚಿತ್ರದುರ್ಗ, ಬೆಂಗಳೂರು, ಹೊಸೂರು, ಧರ್ಮಾಪುರಿ, ಮಧುರೈ ಮೂಲಕ ಕನ್ಯಾಕುಮಾರಿ ತಲುಪಿ ಇಂದು ಕರ್ನಾಟಕಕ್ಕೆ ಮರಳಿದ್ದಾರೆ.

    ಮೂಲತಃ ಸಿದ್ದಾಪುರದವರಾದ ಇವರು ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಮುಗಿಸಿ ಬೆಂಗಳೂರಿನ ಹೆಚ್.ಸಿ.ಜಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತಿದ್ದರು. ಚಿಕ್ಕ ವಯಸ್ಸಿನಲ್ಲೇ ಸೈನಿಕರ ಮೇಲೆ ಪ್ರೀತಿ ಹೊಂದಿದ್ದ ಇವರ ಕುಟುಂದಲ್ಲಿ ಅಣ್ಣ, ಬಾವ ಸೇರಿದಂತೆ ಬಹುತೇಕರು ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರಣಾಂತರದಿಂದಾಗಿ ಇವರು ಸೈನ್ಯಕ್ಕೆ ಸೇರುವ ಅವಕಾಶ ತಪ್ಪಿದ ಕಾರಣ ವೈದ್ಯಕೀಯ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.

    ಚಕ್ರವರ್ತಿ ಸೂಲಿಬೆಲೆಯವರ ಜಾಗೋ ಭಾರತ್ ನಿಂದ ಸ್ಫೂರ್ತಿ ಪಡೆದು ಜನರಲ್ಲಿ ಸೈನ್ಯದ ಬಗ್ಗೆ ಅರಿವು ಸೈನ್ಯಕ್ಕೆ ಸೇರಲು ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಸೆಲ್ಯುಟ್ ಫಾರ್ ಅವರ್ ಸೋಲ್ಜರ್ಸ್ ಎಂಬ ಹೆಸರಿನ ಮೂಲಕ ಸೈಕಲ್ ಯಾತ್ರೆ ಪ್ರಾರಂಭಿಸಿದರು. ಇದಕ್ಕಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಈ ಕೆಲಸಕ್ಕೆ ಕೈ ಹಾಕಿ ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ.

    ಯಾತ್ರೆಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯುವಕರಲ್ಲಿ ಸ್ಪೂರ್ತಿ ಹಾಗೂ ಸೈನ್ಯಕ್ಕೆ ಸೇರುವಂತೆ ಜಾಗೃತಿ ಮೂಡಿಸಿದ್ದೇನೆ. ಭಾರತೀಯ ಸೈನಿಕರ ಮೇಲೆ ನಮ್ಮ ದೇಶದಲ್ಲಿ ಅಪಾರ ಪ್ರೀತಿ ಹೊಂದಿರುವ ಜನ ನಾನು ಬಂದಾಗ ಸೆಲ್ಯೂಟ್ ಮಾಡಬೇಕು ಎಂಬ ಆಸೆ ನನ್ನದು. ಈ ಯಾತ್ರೆ ನಂತರವೂ ಸೈನ್ಯಕ್ಕೆ ಯುವಕರು ಸೇರುವಂತೆ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿಸುತ್ತೇನೆ ಎಂದು ಡಾ. ಹರ್ಷವರ್ಧನ್ ಹೇಳಿದ್ದಾರೆ.

  • ದಕ್ಷಿಣಕ್ಕೊಂದು ತಿರುಪತಿ, ಉತ್ತರಕ್ಕೊಂದು ತಿರುಪತಿ – ಭಕ್ತರಿಗಾಗಿ ಟಿಟಿಡಿಯಿಂದ ಹೊಸ ಪ್ಲಾನ್

    ದಕ್ಷಿಣಕ್ಕೊಂದು ತಿರುಪತಿ, ಉತ್ತರಕ್ಕೊಂದು ತಿರುಪತಿ – ಭಕ್ತರಿಗಾಗಿ ಟಿಟಿಡಿಯಿಂದ ಹೊಸ ಪ್ಲಾನ್

    ಹೈದರಾಬಾದ್: ದೇಶದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪ ದೇವಸ್ಥಾನ ಮತ್ತರೆಡು ಆಗಲಿದ್ದು, ಇನ್ನೊಂದು ತಿಂಗಳಿನಲ್ಲಿ ದೇವಾಲಯ ಕಾರ್ಯಪೂರ್ಣಗೊಳ್ಳುವ ಸಾಧ್ಯತೆ ಇದೆ.

    ಆಂಧ್ರಪ್ರದೇಶದಲ್ಲಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿರುವ ಭಕ್ತಗಣ ಹೆಚ್ಚಾಗ್ತಿದ್ದು, ತಿಮ್ಮಪ್ಪನ ದರ್ಶನಕ್ಕಾಗಿ ದಿನಗಟ್ಟಲೆ ಕಾಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ, ಟಿಟಿಡಿ ಈಗ ಹೊಸ ಪ್ಲಾನ್ ಮಾಡಿದ್ದು, ಅದರಂತೆ ಉತ್ತರ ಭಾರತದ ಹರ್ಯಾಣದ ಕುರುಕ್ಷೇತ್ರದಲ್ಲೂ, ದಕ್ಷಿಣ ಭಾರತೀಯರಿಗಾಗಿ ಕನ್ಯಾಕುಮಾರಿಯಲ್ಲಿ ತಿಮ್ಮಪ್ಪನ ದೇವಸ್ಥಾನ ನಿರ್ಮಾಣ ನಡೆಯುತ್ತಿದೆ. ಕುರುಕ್ಷೇತ್ರದಲ್ಲಿ 2012 ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಯೋಜನೆ ಚಾಲನೆ ನೀಡಿತ್ತು, ಅಂದು ಸಿಎಂ ಆಗಿದ್ದ ಭೂಪಿಂದರ್ ಸಿಂಗ್ ಹೂಡಾ ದೇವಾಲಯ ನಿರ್ಮಾಣ ಮಾಡುವ ಕ್ಷೇತ್ರವನ್ನು ಪ್ರಮುಖ ಪ್ರವಾಸಿ ಧಾರ್ಮಿಕ ಕೇಂದ್ರವಾಗಿ ರೂಪಿಸಲಾಗುವುದು ಎಂದು ಹೇಳಿದ್ದರು.

    ಕುರುಕ್ಷೇತ್ರದಲ್ಲೇ ನಿರ್ಮಾಣ ಮಾಡುವ ಹಿಂದಿನ ಉದ್ದೇಶ ಬಿಚ್ಚಿಟ್ಟ ಟಿಟಿಡಿ ಸಮಿತಿ ವಕ್ತಾರರು, ಶ್ರೀ ಕೃಷ್ಣನ ಜನ್ಮಸ್ಥಾನವಾಗಿರುವ ಈ ಪ್ರದೇಶ ದೇವಾಲಯ ನಿರ್ಮಾಣ ಮಾಡಲು ಸೂಕ್ತವಾಗಿದ್ದು ಎಂಬ ಉದ್ದೇಶದಿಂದ ಈ ಕಾರ್ಯ ನಡೆಸುತ್ತಿರುವುದುದಾಗಿ ತಿಳಿಸಿದ್ದರು.

    ಈ ಕುರಿತು ಈಗಾಗಲೇ ಕಾರ್ಯ ಪ್ರವೃತ್ತವಾಗಿರುವ ಟಿಟಿಡಿ ಕುರುಕ್ಷೇತ್ರದಲ್ಲಿ ನಿರ್ಮಾಣ ಮಾಡುತ್ತಿರುವ ದೇಗುಲ ಅಂತಿಮ ಹಂತಕ್ಕೆ ಬಂದಿದೆ. ನೋಡಲು ತಿರುಪತಿ ತಿರುಮಲ ದೇಗುಲದಂತೆಯೇ ಈ ದೇವಾಲಯಗಳು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೇ ದಕ್ಷಿಣ ಭಾರತದ ಕಲ್ಲುಗಳನ್ನು ಬಳಸಿ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದೆ.

    ಭಾರತದ ಪ್ರಮುಖ ನಗರಗಳಲ್ಲಿಯೂ ಟಿಟಿಡಿ ಸಮಿತಿ ದೇವಾಲಯಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಪ್ರಮುಖವಾಗಿ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ದೇವಾಲಯ ನಿರ್ಮಾಣ ನಡೆಸುವ ಕುರಿತು ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ.

  • ಮುಖಕ್ಕೆ ಪ್ಲಾಸ್ಟಿಕ್ ಕವರ್ ಹಾಕಿ 1 ಲಕ್ಷ ರೂ. ದೋಚಿ ಸಿಕ್ಕಿಬಿದ್ದ- ವಿಡಿಯೋ ನೋಡಿ ನಕ್ಕುಬಿಡಿ

    ಮುಖಕ್ಕೆ ಪ್ಲಾಸ್ಟಿಕ್ ಕವರ್ ಹಾಕಿ 1 ಲಕ್ಷ ರೂ. ದೋಚಿ ಸಿಕ್ಕಿಬಿದ್ದ- ವಿಡಿಯೋ ನೋಡಿ ನಕ್ಕುಬಿಡಿ

    ಚೆನ್ನೈ: ಪ್ಲಾಸ್ಟಿಕ್ ಕವರಿನಲ್ಲಿ ವ್ಯಕ್ತಿಯೊಬ್ಬ ಮುಖ ಮುಚ್ಚಿಕೊಂಡು ಕಳ್ಳತನ ಮಾಡಲು ಬಂದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಕಳ್ಳ ಮೊಬೈಲ್ ಅಂಗಡಿಯೊಂದರ ಬಾಗಿಲು ಮುರಿದು ಒಳಗೆ ಪ್ರವೇಸಿದ್ದು, ಆತನ ಚಲನವಲನವನ್ನು ಅಂಗಡಿಯ ಹೊರಗಿದ್ದ ಎರಡು ಸಿಸಿಟಿವಿ ಹಾಗೂ ಅಂಗಡಿಯೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕನ್ಯಾಕುಮಾರಿಯ ಕೊಲಾಛೆಲ್‍ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯಿಂದ 1 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

    ಪ್ಲಾಸ್ಟಿಕ್ ಕವರಿನಲ್ಲಿ ಮುಖ ಮುಚ್ಚಿಕೊಂಡು ಬಂದ ಕದೀಮ, ಮೊದಲು ಅಕ್ಕ-ಪಕ್ಕದಲ್ಲಿ ಯಾರಾದರೂ ಇದ್ದಾರ ಎಂದು ನೋಡುತ್ತಾನೆ. ನಂತರ ಅಂಗಡಿ ಮುಂದೆ ಒಂದು ಬೈಕ್ ಬರುತ್ತಿರುವುದ್ದನ್ನು ಕಂಡು ಮುಖ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಾನೆ. ನಂತರ ಅಂಗಡಿಯ ಬಾಗಿಲನ್ನು ಮುರಿದು, ಅಲ್ಲಿದ್ದ ಸಿಸಿಟಿವಿಯನ್ನು ಕಡಿತಗೊಳಿಸುತ್ತಾನೆ. ನಂತರ 1 ಲಕ್ಷ ರೂ. ಹಣವನ್ನು ದೋಚುತ್ತಾನೆ.

    ಸಿಸಿಟಿವಿಯಲ್ಲಿ ದೃಶ್ಯಾವಳಿಯಲ್ಲಿ ಆರೋಪಿಯ ಕೈ ಮೇಲೆ ಇದ್ದ ಟ್ಯಾಟೂ ಸೆರೆಯಾಗಿದ್ದು, ಈತನನ್ನು ಪತ್ತೆ ಮಾಡಲು ಪಾರದರ್ಶಕ ಪ್ಲಾಸ್ಟಿಕ್ ಕವರ್ ಸಹಕಾರಿಯಾಗಿದೆ. ನಂತರ ಅಂಗಡಿಯಲ್ಲಿ ಕಳ್ಳತನವಾಗಿರುವುದನ್ನು ಗಮನಿಸಿದ ಮಾಲೀಕ ಸಚಿನ್ ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ದೃಶ್ಯವನ್ನ ನೋಡಿ ಹೊಟ್ಟೆಹುಣ್ಣಾಗುವರೆಗೂ ನಕ್ಕಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

    ಕಳ್ಳ ತನ್ನ ಮುರ್ಖತನದಿಂದ ಮಾಡಿಕೊಂಡ ಎಡವಟ್ಟಿನಿಂದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದ ಸಹಾಯದಿಂದ ಪೊಲೀಸರು ಆರೋಪಿಯನ್ನು ಬಂಧಿಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

  • ಶಬರಿಮಲೆಗೆ ಹೋಗ್ತಿದ್ದೀರಾ? – ಹಾಗಾದ್ರೆ ಈ ಸುದ್ದಿ ಓದಿ ‘ಸನ್ನಿಧಾನ’ದತ್ತ ತೆರಳಿ..!

    ಶಬರಿಮಲೆಗೆ ಹೋಗ್ತಿದ್ದೀರಾ? – ಹಾಗಾದ್ರೆ ಈ ಸುದ್ದಿ ಓದಿ ‘ಸನ್ನಿಧಾನ’ದತ್ತ ತೆರಳಿ..!

    ಶಬರಿಮಲೆ: ನೀವು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದೀರಾ..? ಹಾಗಿದ್ದರೆ ಸ್ವಲ್ಪ ಎಚ್ಚರ ವಹಿಸಿ, ಸಾಧ್ಯವಾದರೆ ನಿಮ್ಮ ಯಾತ್ರೆಯನ್ನು ಇನ್ನೆರಡು ದಿನ ಮುಂದೂಡೋಕಾಗುತ್ತಾ ನೋಡಿ. ಯಾಕೆಂದರೆ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಬುಧವಾರ ಉಂಟಾದ ವಾಯುಭಾರ ಕುಸಿತದಿಂದಾಗಿ ಗುರುವಾರ ಬೆಳಗಿನಿಂದ ತಮಿಳುನಾಡು ಹಾಗೂ ಕೇರಳದ ಕೆಲವೆಡೆ ಭಾರೀ ಮಳೆಯಾಗುತ್ತಿದೆ.

    ‘ಓಖಿ’ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಕನ್ಯಾಕುಮಾರಿ, ತಿರುವನಂತಪುರ ಹಾಗೂ ಕೊಲ್ಲಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಜನರು ಮನೆಯಿಂದ ಹೊರ ಬರದಂತೆ ವಿಪತ್ತು ನಿರ್ವಹಣಾ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

    ಚಂಡಮಾರುತದಿಂದಾಗಿ ಶಬರಿಮಲೆ ದೇಗುಲವಿರುವ ಪತ್ತನಂತಿಟ್ಟ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಶಬರಿಮಲೆ ಸುತ್ತಮುತ್ತ ಭಾರೀ ಮಳೆಯಾಗಿದೆ. ಇದರಿಂದಾಗಿ ಪಂಪಾ ನದಿಯಲ್ಲಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದೆ. ಪಂಪಾ ನದಿಯಲ್ಲಿ ಯಾರೂ ನೀರಿಗಿಳಿಯಬೇಡಿ ಎಂದು ಈಗಾಗಲೇ ಅಯ್ಯಪ್ಪ ಭಕ್ತರಿಗೆ ಸೂಚನೆ ಹೊರಡಿಸಲಾಗಿದೆ. ಜೊತೆಯಲ್ಲಿ ಪಂಪಾ ನದಿಯ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.

    ಅಯ್ಯಪ್ಪನ ದರ್ಶನಕ್ಕೆ ಬ್ರೇಕ್!: ಶಬರಿಮಲೆ ಯಾತ್ರಿಕರು ಬೆಟ್ಟ ಪ್ರದೇಶದಲ್ಲಿ ಸಂಜೆ 6ರಿಂದ ಬೆಳಗ್ಗೆ 7 ಗಂಟೆವರೆಗೆ ಯಾವುದೇ ಸಂಚಾರ ಮಾಡಬೇಡಿ. ಶಬರಿಮಲೆಗೆ ಹೋಗಲು ಅರಣ್ಯ ಪ್ರದೇಶದಲ್ಲಿರುವ ಕಾಲು ದಾರಿಯಲ್ಲಿ ರಾತ್ರಿ ವೇಳೆ ಸಂಚರಿಸಬೇಡಿ ಎಂದು ಸರ್ಕಾರ ಮೌಖಿಕ ಸೂಚನೆ ನೀಡಿದೆ. ಮೊಬೈಲ್ ಫೋನ್ ಚಾರ್ಜ್ ಹಾಗೂ ಲೈಟ್ ಗಳಲ್ಲಿ ಬ್ಯಾಟರಿ ಚಾರ್ಜ್ ಫುಲ್ ಆಗಿರುವಂತೆ ನೋಡಿಕೊಳ್ಳಿ.

    ಭಾರೀ ಮಳೆಯಾಗುತ್ತಿದ್ದರೆ ಸನ್ನಿಧಾನದಿಂದ ಬೆಟ್ಟ ಇಳಿಯಬೇಡಿ. ಮರದ ಕೆಳಗೆ ನಿಲ್ಲಬೇಡಿ. ನದಿ ನೀರಿನಲ್ಲಿ ಸ್ನಾನ ಮಾಡುವ ಸಾಹಸಕ್ಕೆ ಇಳಿಯಬೇಡಿ. ಪಂಪಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ನೀರಿನಲ್ಲಿ ಮುಳುಗಿ ಸ್ನಾನ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಪಂಪಾ ನದಿ ಸಮೀಪದ ತ್ರಿವೇಣಿ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಎಲ್ಲಾ ವಾಹನಗಳನ್ನು ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿದೆ. ಶಬರಿಮಲೆ ಯಾತ್ರೆ ವೇಳೆ ಮರದ ರೆಂಬೆ ಮುರಿದು ಬಿದ್ದು ಆಲೆಪ್ಪಿಯ ಅಯ್ಯಪ್ಪ ವ್ರತಧಾರಿ ವಿವೇಕ್ ಎಂಬವರಿಗೆ ಗಾಯವಾಗಿದೆ. ಈ ಕ್ಷಣದವರೆಗೆ ಭಕ್ತರು ಶಬರಿಮಲೆ ದರ್ಶನಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸಿಲ್ಲ. ಆದರೆ, ಮಳೆ ಹಿನ್ನೆಲೆಯಲ್ಲಿ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. (ಇದನ್ನೂ ಓದಿ:ಶಬರಿಮಲೆಗೆ ಹೋಗುವ ಅಯ್ಯಪ್ಪ ಭಕ್ತರಿಗೆ ಶಾಕಿಂಗ್ ನ್ಯೂಸ್: ಐಸಿಸ್ ಸಂಚು ಏನು ಗೊತ್ತಾ?)

    85 ಕಿಮೀ ವೇಗ: ದಕ್ಷಿಣ ತಮಿಳುನಾಡಿನಿಂದ ಗಂಟೆಗೆ 85 ಕಿಮೀ ವೇಗದಲ್ಲಿ ಲಕ್ಷದ್ವೀಪದ ಕಡೆಗೆ ಚಂಡಮಾರುತ ಸಾಗುತ್ತಿದೆ. ಈಗಾಗಲೇ ತಮಿಳುನಾಡು, ಕನ್ಯಾಕುಮಾರಿ, ಕೇರಳದಲ್ಲಿ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

    ಮುಂದಿನ 24 ಗಂಟೆಗಳಲ್ಲಿ ಕೇರಳ, ತಮಿಳುನಾಡಿನ ಕೆಲಭಾಗ ಹಾಗೂ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

    ಬೆಂಗಳೂರಿನಲ್ಲೂ ಮಳೆ: ಚಂಡಮಾರುತದ ಎಫೆಕ್ಟ್ ನಿಂದಾಗಿ ಬೆಂಗಳೂರಿನ ಕೆಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗಿದೆ. ದಿನದ ಬಹುತೇಕ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆಯೇ ಮತ್ತೆ ತುಂತುರು ಮಳೆ ಶುರುವಾಗಿದೆ. ಯಶವಂತಪುರ, ಮಲ್ಲೇಶ್ವರಂ, ಜಾಲಹಳ್ಳಿ, ಕೆ.ಆರ್.ಸರ್ಕಲ್, ಕಾರ್ಪೊರೇಷನ್, ಶಾಂತಿನಗರ, ರಾಜರಾಜೇಶ್ವರಿ ನಗರ, ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಮೋಡ ಕವಿದ ವಾತಾವರಣ, ತುಂತುರು ಮಳೆ ನಾಳೆಯೂ ಮುಂದುವರೆಯುವ ಸಾಧ್ಯತೆಯಿದೆ.

     

     

  • ಹೆಲ್ಮೆಟ್ ಧರಿಸದ್ದಕ್ಕೆ ಪೇದೆಯಿಂದ ಲಾಠಿ ಏಟು: ರಸ್ತೆಗೆ ಬಿದ್ದ ಸವಾರನ ತಲೆಗೆ ಬಿತ್ತು ಪೆಟ್ಟು

    ಹೆಲ್ಮೆಟ್ ಧರಿಸದ್ದಕ್ಕೆ ಪೇದೆಯಿಂದ ಲಾಠಿ ಏಟು: ರಸ್ತೆಗೆ ಬಿದ್ದ ಸವಾರನ ತಲೆಗೆ ಬಿತ್ತು ಪೆಟ್ಟು

    ಕನ್ಯಾಕುಮಾರಿ: ಹೆಲ್ಮೆಟ್ ಧರಿಸದೆ ಬೈಕ್ ರೈಡ್ ಮಾಡುತ್ತಿದ್ದ ಸವಾರನ ತಲೆಗೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಪೊಲೀಸ್ ಪೇದೆಯೊಬ್ಬರು ಲಾಠಿಯಿಂದ ಹೊಡೆಯುತ್ತಿರುವ ವಿಡಿಯೋ ಒಂದು ವೈರಲ್ ಆಗಿ ಭಾರೀ ಟೀಕೆಗೆ ಗುರಿಯಾಗಿದೆ.

    ಘಟನೆಯಲ್ಲಿ ಗಾಯಗೊಂಡ ಯುವಕ ಸೆರುಕೋಲ್ ನಿವಾಸಿ ರಾಕೇಶ್ ಎಂದು ತಿಳಿದು ಬಂದಿದ್ದು, ಪೊಲೀಸ್ ಪೇದೆಯ ಕೃತ್ಯ ಸಿಸಿಟಿವಿ ಸೆರೆಯಾಗಿದೆ.

    ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿರುವ ಪ್ರಕಾರ ನವೆಂಬರ್ 23 ರ ಸಂಜೆ 5.30 ರ ವೇಳೆಯಲ್ಲಿ ಘಟನೆ ನಡೆದಿದ್ದು, ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರ ರಾಕೇಶ್ ನನ್ನು ಪೇದೆ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ರಾಕೇಶ್ ಬೈಕ್ ನಿಲ್ಲಿಸದೆ ಹೋದ ಸಂದರ್ಭದಲ್ಲಿ ಪೊಲೀಸ್ ಪೇದೆ ತಲೆಗೆ ಲಾಠಿಯಿಂದ ಹೊಡೆದಿದ್ದಾರೆ. ಇದರ ಪರಿಣಾಮವಾಗಿ ರಾಕೇಶ್ ಬೈಕ್ ಸಮೇತ ಕೆಳಗೆ ಬಿದ್ದಿದ್ದು, ಲಾಠಿ ಏಟಿಗೆ ತಲೆಗೆ ತೀವ್ರ ಗಾಯವಾಗಿ ರಕ್ತ ಹೊರ ಚಿಮ್ಮಿದೆ.

    ಇದನ್ನೂ ಓದಿ: ಬೆಂಗ್ಳೂರಲ್ಲಿ ಮನಕಲಕುವ ದುರಂತ- ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಮೊಮ್ಮಗನನ್ನು ಕಳೆದುಕೊಂಡ ಬೈಕ್ ಸವಾರ

    ಘಟನೆ ನಂತರ ಗಾಯಗೊಂಡ ರಾಕೇಶ್ ನನ್ನು ಪೊಲೀಸರು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೇದೆಯ ವರ್ತನೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿಲು ಯತ್ನಿಸಿದ್ದು, ಈ ವೇಳೆ ಸಾರ್ವಜನಿಕರೊಂದಿಗೂ ಪೊಲೀಸರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

    ಘಟನೆ ಕುರಿತು ಮಾಹಿತಿ ನೀಡಿದ ಕನ್ಯಾಕುಮಾರಿ ಎಸ್‍ಪಿ ಧುರೈ, ಯುವಕನ ಮೇಲೆ ದಾಳಿ ನಡೆಸಿದ ಪೊಲೀಸ್ ಪೇದೆ ಮರಿಯಾ ಅಕ್ರಾಸ್ ರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    https://www.youtube.com/watch?time_continue=54&v=rIv99wmVLGk