Tag: Karadi Sanganna

  • ಪಕ್ಷದ ಸಿದ್ದಾಂತ ಮೆಚ್ಚಿ ಸೇರಿದ್ದೇನೆ – ಕರಡಿ ಸಂಗಣ್ಣ ಕಾಂಗ್ರೆಸ್‌ ಸೇರ್ಪಡೆ

    ಪಕ್ಷದ ಸಿದ್ದಾಂತ ಮೆಚ್ಚಿ ಸೇರಿದ್ದೇನೆ – ಕರಡಿ ಸಂಗಣ್ಣ ಕಾಂಗ್ರೆಸ್‌ ಸೇರ್ಪಡೆ

    ಬೆಂಗಳೂರು: ನಿರೀಕ್ಷೆಯಂತೆ ಕೊಪ್ಪಳದ (Koppala) ಬಿಜೆಪಿ ಸಂಸದ ಕರಡಿ ಸಂಗಣ್ಣ (Karadi Sanganna) ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪಕ್ಷದ ಬಾವುಟ ನೀಡಿದ ಕರಡಿ ಸಂಗಣ್ಣನವರನ್ನ ಪಕ್ಷಕ್ಕೆ ಬರಮಾಡಿಕೊಂಡರು.

    ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು,ಇವತ್ತು ಸಂಭ್ರಮದ ದಿನ.ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿಕೆ ಶಿವಕುಮಾರ್ (DK Shivakumar) ಪಕ್ಷೇತರರವಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

     

    ಹೆಚ್‌ಜಿ. ರಾಮುಲು ಅವರು ನನ್ನ ರಾಜಕೀಯ ಗುರು. ಖಾದ್ರಿ ಅವರನ್ನ ನೆನಪು ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂಬ ಚಾಲೆಂಜ್ ಮಾಡಿದ್ದೇವೆ ಎಂದರು. ಇದನ್ನೂ ಓದಿ: 500 ವರ್ಷದ ಬಳಿಕ ರಾಮನವಮಿಯಂದು ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಅಭಿಷೇಕ, ಸೂರ್ಯ ತಿಲಕ!

    ನಾನು ಅಧಿಕಾರಕ್ಕೆ ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದೇನೆ. ಕಾಂಗ್ರೆಸ್ ‌ಪಕ್ಷ ಸೇರ್ಪಡೆ ಖುಷಿ ಕೊಟ್ಟಿದೆ. ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ, ತ್ಯಾಗ ಬಲಿದಾನ ಮಾಡಿದ ಪಕ್ಷ ಎಂದು ಕಾಂಗ್ರೆಸ್‌ ಪಕ್ಷವನ್ನು ಹಾಡಿ ಹೊಗಳಿದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ತನಗೆ ನೀಡಬೇಕೆಂದು ಕರಡಿ ಸಂಗಣ್ಣ ಬಿಗಿಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಅವರ ಹಿರಿಯ ಸೊಸೆ ಮಂಜುಳಾಗೆ ನೀಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಲೋಕಸಭಾ ಚುನಾವಣೆಯಲ್ಲೂ ಕರಡಿ ಸಂಗಣ್ಣ ಬಿಜೆಪಿ ಟಿಕೆಟ್‌ ಬಯಸಿದ್ದರು. ಆದರೆ ಬಿಜೆಪಿ ಈ ಬಾರಿ ವೈದ್ಯ ಬಸವರಾಜ ಎಸ್‌ ಕ್ಯಾವಟೂರ್‌ ನೀಡಿತ್ತು.

  • ಬುಧವಾರ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

    ಬುಧವಾರ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ

    ಬೆಂಗಳೂರು: ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ ಕೊಪ್ಪಳ (Koppala) ಬಿಜೆಪಿ ಸಂಸದ ಕರಡಿ ಸಂಗಣ್ಣ (Karadi Sanggana) ಬುಧವಾರ ಕಾಂಗ್ರೆಸ್‌ ಸೇರುವ ಸಾಧ್ಯತೆಯಿದೆ

    ಕರಡಿ ಸಂಗಣ್ಣ ಅವರ ಓಲೈಸುವಲ್ಲಿ ಬಿಜೆಪಿ (BJP) ವಿಫಲವಾಗಿದ್ದು ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ. 2011ರಲ್ಲಿ ಸಂಗಣ್ಣ ಕರಡಿಯನ್ನು ಬಿಜೆಪಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಸವದಿ ಈಗ ಸಂಗಣ್ಣರನ್ನು ಕಾಂಗ್ರೆಸ್‌ಗೆ ಸೇರಿಸಲು ಮುಖ್ಯ ಪಾತ್ರ ವಹಿಸಿದ್ದಾರೆ. ಇದನ್ನೂ ಓದಿ: ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ಸೋಮವಾರ ರಾತ್ರಿ ಸಂಗಣ್ಣರನ್ನು ಲಕ್ಷ್ಮಣ ಸವದಿ ಭೇಟಿ ಮಾಡಿ ಕಾಂಗ್ರೆಸ್ ಸೇರುವಂತೆ ಆಫರ್ ನೀಡಿದ್ದರು. ಇದಕ್ಕೆ ಸಂಗಣ್ಣ ಕೂಡ ಅಸ್ತು ಎಂದಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರುವ ಸಾಧ್ಯತೆಯಿದೆ. ಇದು ಕೊಪ್ಪಳ ಕಾಂಗ್ರೆಸ್‌ಗೆ ಹೊಸ ಜೋಶ್ ತಂದಿದೆ.

    ಮಂಗಳವಾರ ಬೆಳಗ್ಗೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ (Rajashekar Basavaraj Hitnal) ನಾಮಪತ್ರ ಸಲ್ಲಿಕೆಗೂ ಮುನ್ನ ಸಂಗಣ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

     

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ತನಗೆ ನೀಡಬೇಕೆಂದು ಕರಡಿ ಸಂಗಣ್ಣ ಬಿಗಿಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಅವರ ಹಿರಿಯ ಸೊಸೆ ಮಂಜುಳಾಗೆ ನೀಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಲೋಕಸಭಾ ಚುನಾವಣೆಯಲ್ಲೂ ಕರಡಿ ಸಂಗಣ್ಣ ಬಿಜೆಪಿ ಟಿಕೆಟ್‌ ಬಯಸಿದ್ದರು. ಆದರೆ ಬಿಜೆಪಿ ಈ ಬಾರಿ ವೈದ್ಯ ಬಸವರಾಜ ಎಸ್‌ ಕ್ಯಾವಟೂರ್‌ ನೀಡಿದೆ.

  • ಕಾಂಗ್ರೆಸ್‍ಗೆ ಸೇರ್ಪಡೆ ಆಗ್ತಾರಾ ಕರಡಿ ಸಂಗಣ್ಣ?- ಲಕ್ಷ್ಮಣ ಸವದಿ ಭೇಟಿ ಬೆನ್ನಲ್ಲೇ ಕುತೂಹಲ

    ಕಾಂಗ್ರೆಸ್‍ಗೆ ಸೇರ್ಪಡೆ ಆಗ್ತಾರಾ ಕರಡಿ ಸಂಗಣ್ಣ?- ಲಕ್ಷ್ಮಣ ಸವದಿ ಭೇಟಿ ಬೆನ್ನಲ್ಲೇ ಕುತೂಹಲ

    ಕೊಪ್ಪಳ: ರೆಬೆಲ್ ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಲಕ್ಷ್ಮಣ ಸವದಿ (Laxman Savadi) ಭೇಟಿ ನೀಡಿದ್ದಾರೆ. ಈ ಮೂಲಕ ಕರಡಿ ಸಂಗಣ್ಣ ಅವರು ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಕರಡಿ (Sanganna Karadi) ಅವರು ಬಿಜೆಪಿ ಪ್ರಚಾರದಿಂದ ದೂರ ಉಳಿದಿದ್ದಾರೆ. ಈ ಹಿನ್ನಲೆಯಲ್ಲಿ ಕರಡಿ ಸಂಗಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಸವದಿ ಭೇಟಿ ಈ ವದಂತಿಗೆ ಪುಷ್ಟಿ ನೀಡಿದೆ.

    ಬೇಟಿ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸವದಿ, ಕಾಂಗ್ರೆಸ್ ಪಕ್ಷಕ್ಕೆ ಬರೋದರ ಬಗ್ಗೆ ನಾವು ಮಾತಾಡಿಲ್ಲ. ಅದಕ್ಕೆ ಇನ್ನೂ ಸಮಯ ಇದೆ ಅದನ್ನ ಸಂಗಣ್ಣ ಅವರು ತೀರ್ಮಾನ ಮಾಡ್ತಾರೆ. ಅವರೂ ರಾಜಕೀಯ ನೆಲೆ ಹುಡುಕಿ ಕೊಳ್ಳಬೇಕು ಅದನ್ನ ಅವರು ಹಾಗೂ ಅವರ ಕುಟುಂಬ ಸದಸ್ಯರು ತೀರ್ಮಾನ ಮಾಡ್ತಾರೆ ಎಂದರು.

    ನಾನು ಪಕ್ಷಕ್ಕೆ ಯಾವುದೇ ಆಹ್ವಾನ ಕೊಟ್ಟಿಲ್ಲ ಅದರ ಬಗ್ಗೆ ಚರ್ಚೆ ಕೂಡಾ ಮಾಡಿಲ್ಲ. ಅವರಿಗೆ ಒಳ್ಳೆಯ ಸೂಕ್ತ ಸ್ಥಾನ ಮಾನ ಸಿಗಲಿ ಅನ್ನೋದು ನನ್ನ ಆಸೆ. ಬಂಗಾರ ಯಾರ ಅಂಗಡಿಯಲ್ಲಿ ಇದ್ರೂ ಬಂಗಾರ, ಕುದುರೋ ಓಡತ್ತೆ ಅಂದ್ರೆ ಎಲ್ಲರೂ ಜಿದ್ದು ಕಟ್ಟೋರೇ. ಬಿಜೆಪಿಗೆ ವಿನಾಶಕಾಲೆ ವಿಪರೀತ ಬುದ್ದಿ, 28 ಸೀಟ್ ಗೆಲ್ಲೋದು ಗೋವಾ, ತಮಿಳುನಾಡು ಸೇರಿ ಹೇಳ್ತಿರಬಹುದು ಎಂದು ತಿಳಿಸಿದರು.

    ಇದೇ ವೇಳೆ ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರು ಅನುಭವಸ್ಥರು ಅವರು ಹೆಣ್ಣು ಮಕ್ಕಳ ಬಗೆ ಮಾತಾಡಬಾರದಿತ್ತು. ಅವರಿಗೆ ಆ ದುರ್ಬುದ್ದಿ ಹೇಗೆ ಬಂತೋ ಗೊತ್ತಿಲ್ಲ ಎಂದು ಸವದಿ ಹೇಳಿದರು.

  • ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಸಂಸದ ಸ್ಥಾನಕ್ಕೂ ರಾಜೀನಾಮೆಗೆ ಮುಂದಾದ ಕರಡಿ ಸಂಗಣ್ಣ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಸಂಸದ ಸ್ಥಾನಕ್ಕೂ ರಾಜೀನಾಮೆಗೆ ಮುಂದಾದ ಕರಡಿ ಸಂಗಣ್ಣ

    ಕೊಪ್ಪಳ: ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಿಸಿ ಏರುತ್ತಿದ್ದು, ಪಕ್ಷದಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದೆ.

    ಕರಡಿ ಸಂಗಣ್ಣ (Karadi Sanganna) ಸಂಸದ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ (Koppal) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ (JDS) ಸೇರ್ಪಡೆಗೆ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದುಗೆ `ಅಹಿಂದ’ ಪದದ ಅರ್ಥವೇ ಗೊತ್ತಿಲ್ಲ – ಕಣ್ಣೀರಿಟ್ಟ ಗೋಪಿಕೃಷ್ಣ ದಂಪತಿ

    ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ (BJP high command) ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.

    ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ, ಸೋಮವಾರ ಲೋಕಸಭಾ ಸ್ಪೀಕರ್‍ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಏ.19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಶೆಟ್ಟರ್‌ಗೆ ಸಿದ್ದು ಅಧಿಕೃತ ಆಹ್ವಾನ

  • ಕನಕದಾಸರ ಮೂರ್ತಿ ಪ್ರತಿಷ್ಠಾಪನೆ – ಕೊಪ್ಪಳದಲ್ಲಿ ಈಗ ರಾಜಕೀಯ ಜಿದ್ದಾಜಿದ್ದಿ

    ಕನಕದಾಸರ ಮೂರ್ತಿ ಪ್ರತಿಷ್ಠಾಪನೆ – ಕೊಪ್ಪಳದಲ್ಲಿ ಈಗ ರಾಜಕೀಯ ಜಿದ್ದಾಜಿದ್ದಿ

    ಕೊಪ್ಪಳ: ನಗರದ ಹೃದಯ ಭಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ ಎದುರುಗಡೆ ಇರುವ ಕನಕದಾಸ ವೃತ್ತದ ಸ್ಥಳ ಇದೀಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

    1988ರಲ್ಲಿ ಅಂದಿನ ಸಾರಿಗೆ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸ ವೃತ್ತವನ್ನು ಉದ್ಘಾಟನೆ ಮಾಡಿದ್ದರು. ಆದರೆ ಇತ್ತೀಚಿಗೆ ಬಹುಕೋಟಿ ವೆಚ್ಚದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಅದೇ ಸ್ಥಳದಲ್ಲಿಯೇ ಉದ್ಯಾನವನ ನಿರ್ಮಾಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.

    ಅದರಂತೆ ಕನಕದಾಸ ವೃತ್ತದ ಹಿಂಭಾಗದಲ್ಲಿನ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆಗಳನ್ನು ನೆಲಸಮ ಮಾಡಲಾಗಿದೆ. ಜೊತೆಗೆ ವಾಣಿಜ್ಯ ಮಳಿಗೆಗಳ ಜಾಗದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೃತ್ತ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇದಕ್ಕೆ ಇದೀಗ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದು, ನಗರಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಿ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕನಕದಾಸ ವೃತ್ತ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ ಆದರೆ ಸರ್ವಾಧಿಕಾರಿಯಂತೆ ನಿರ್ಧಾರ ತೆಗೆದುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

    ಸಂಸದ ಕರಡಿ ಸಂಗಣ್ಣ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ ಹಿಂದೆ ರಾಜಕೀಯ ಉದ್ದೇಶ ಇರುವುದು ಸಹ ಸ್ಪಷ್ಟ. 2013 ರಲ್ಲಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದ ರಾಘವೇಂದ್ರ ಹಿಟ್ನಾಳ್, ಕುರುಬ ಸಮಾಜಕ್ಕೆ ಸೇರಿದವರು. ಜೊತೆಗೆ ಕರಡಿ ಸಂಗಣ್ಣ ಪ್ರಥಮ ಬಾರಿಗೆ ಶಾಸಕರಾದಾಗ ಕನಕದಾಸ ವೃತ್ತದ ಹಿಂಭಾಗದ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿಸಿದ್ದರು. ಆದರೆ ಇದೀಗ ಶಾಸಕ ರಾಘವೇಂದ್ರ ಹಿಟ್ನಾಳ್, ಕರಡಿ ಸಂಗಣ್ಣ ಕಟ್ಟಿಸಿದ್ದ ವಾಣಿಜ್ಯ ಮಳಿಗೆಗಳನ್ನು ಯಾವುದೇ ಸೂಚನೆ, ಚರ್ಚೆ ಮಾಡದೇ ನೆಲಸಮ ಮಾಡಿಸಿದ್ದಾರೆ. ಜೊತೆಗೆ ವಾಣಿಜ್ಯ ಮಳಿಗೆ ಇದ್ದ ಜಾಗವನ್ನು ಅತಿಕ್ರಮಿಸಿಕೊಂಡು ಆ ಜಾಗದಲ್ಲಿ ಕನಕದಾಸ ವೃತ್ತವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ ಎಂಬ ಆರೋಪ ಬಂದಿದೆ.

    ಕನಕದಾಸ ವೃತ್ತದ ಸ್ಥಳದ ಕುರಿತು ಸಂಸದ ಕರಡಿ ಸಂಗಣ್ಣ ಡಿಸಿಗೆ ಪತ್ರ ಬರೆದಿರುವುದಕ್ಕೆ ಇದೀಗ ಕುರುಬ ಸಮಾಜದವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಕನಕದಾಸರ ವಿಚಾರದಲ್ಲಿ ರಾಜಕಾರಣ ಮಾಡಬಾರದು, ಈ ಕೂಡಲೇ ಸಂಸದ ಕರಡಿ ಸಂಗಣ್ಣ ಕುರುಬ ಸಮಾಜದವರ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ. ಈ ಮುಂಚೆ ಇದ್ದ ಕನಕದಾಸ ವೃತ್ತದಲ್ಲಿ 10 ಲಕ್ಷ ವೆಚ್ಚದಲ್ಲಿ ಕಟ್ಟೆಯೊಂದನ್ನು ಕಟ್ಟಲಾಗಿತ್ತು. ಆದರೆ ಲಾಕ್‍ಡೌನ್ ವೇಳೆಯಲ್ಲಿ ಆ ಕಟ್ಟೆಯನ್ನು ಕೆಡವಲಾಗಿದ್ದು, ಹೊಸದೊಂದು ಕಟ್ಟೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಒಟ್ಟಿನಲ್ಲಿ ದಾರ್ಶನಿಕ ಕನಕದಾಸರ ವೃತ್ತ ಇದೀಗ ಕೊಪ್ಪಳದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

  • ಪೌರತ್ವ ಕಾಯ್ದೆ ಜಾರಿಗಾಗಿ ಸಂಸದರಿಂದ ಚಂಡಿಕಾಯಾಗ

    ಪೌರತ್ವ ಕಾಯ್ದೆ ಜಾರಿಗಾಗಿ ಸಂಸದರಿಂದ ಚಂಡಿಕಾಯಾಗ

    ಕೊಪ್ಪಳ: ದೇಶಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಕಾವು ಹಿಂಸಾಚಾರಕ್ಕೆ ತಿರುಗುತ್ತಿದೆ. ಈ ಮಧ್ಯೆ ಸಂಸದ ಕರಡಿ ಸಂಗಣ್ಣ ಅವರು ಪೌರತ್ವ ಕಾಯ್ದೆ ಜಾರಿ ಹಾಗೂ ಶಾಂತಿಗಾಗಿ ಕೊಪ್ಪಳದಲ್ಲಿ ಚಂಡಿಕಾಯಾಗ ಹೋಮ ಮಾಡಿಸಿದ್ದಾರೆ.

    ಕೊಪ್ಪಳದ ಪ್ರಸಿದ್ಧಿ ದೇವಸ್ಥಾನ ಹುಲಗಿ ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಸಂಸದ ಸಂಗಣ್ಣ ಕರಡಿ ಅವರು ಕುಟುಂಬ ಚಂಡಿಕಾಯಾಗ ಮಾಡಿಸುತ್ತಿದೆ. ಪೌರತ್ವ ತಿದ್ದುಪಡಿ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೊವು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಸದರು ಕುಟುಂಬ ಸಮೇತ ಬಂದು ಲೋಕ ಕಲ್ಯಾಣಕ್ಕಾಗಿ ಚಂಡಿಕಾಯಾಗವನ್ನು ಮಾಡಿಸುತ್ತಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಡುವೆ ಪೊಲೀಸ್‍ಗೆ ಹೂ ಕೊಟ್ಟ ಯುವತಿ – ಫೋಟೋ ವೈರಲ್

    ಈ ವಿಶೇಷ ಯಾಗವನ್ನು ಶೃಂಗೆರಿ ಮತ್ತು ಉಡುಪಿ ಸ್ವಾಮೀಜಿಗಳಾದ ಪ್ರವೀಣ್ ತಂತ್ರಿ ಹಾಗೂ ಕೃಷ್ಣ ಮೂರ್ತಿ ಗಣಪಾಟಿ ಅವರ ನೇತೃತ್ವದಲ್ಲಿ ಹೊಮ ನೆಡೆಯತ್ತಿದೆ. ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು ಮಧ್ಯಾಹ್ನ ಒಂದು ಗಂಟೆಯವರೆಗೆ ಪೂಜೆ ಮುಗಿದಿದೆ. ಇದನ್ನೂ ಓದಿ: ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ರಾಷ್ಟ್ರಗೀತೆ ಹಾಡಿದ ಡಿಸಿಪಿ: ವಿಡಿಯೋ

  • ಮೋದಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿಶೇಷ ಪೂಜೆ

    ಮೋದಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿಶೇಷ ಪೂಜೆ

    ಕೊಪ್ಪಳ: ಇದೇ ತಿಂಗಳು 12ರಂದು ಕೊಪ್ಪಳದ ಗಂಗಾವತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪೂಜೆ ನೆರವೇರಿಸಲಾಗಿದೆ.

    ಇದೇ ತಿಂಗಳು 12 ರಂದು ಗಂಗಾವತಿಗೆ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರ ಪ್ರಚಾರಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದು, ಗಂಗಾವತಿ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಯಾವುದೇ ವಿಘ್ನಗಳು ನೆಡೆಯಬಾರದೆಂದು, ಕಾರ್ಯಕ್ರಮದ ನಡೆಯುವ ಸ್ಥಳದಲ್ಲಿ ವಿಶೇಷ ಭೂಮಿ ಪೂಜೆ ನೆರವೇರಿಸಲಾಯಿತು.

    ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಬಿಜೆಪಿ ಮುಖಂಡರು ಭೂಮಿ ಪೂಜೆ ನೆರವೇರಿಸಿದರು. ಇನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಚುನಾವಣಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಮೋ ಕಾರ್ಯಕ್ರಮಕ್ಕೆ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

    ಸುಮಾರು ಮೂರು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷಿಸಲಾಗಿದೆ. ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

  • ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ರಾಜ್ಯ ಬಿಜೆಪಿಯಲ್ಲಿ ಮಿಂಚಿನ ಸಂಚಲನ- ನಮ್ಗೂ ಟಿಕೆಟ್ ಬೇಕು ಅಂತಿರೋ ಸಂಸದರು

    ಬೆಂಗಳೂರು: ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳೆಯದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ನಮಗೂ ಟಿಕೆಟ್ ಬೇಕು ಅಂತಾ ಕೆಲ ಸಂಸದರು ಕ್ಯೂ ನಿಲ್ತಿದ್ದಾರೆ.

    ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ಯಾರಿಗೆ ಯಾವ ಕ್ಷೇತ್ರ ಬೇಕಂತೆ?
    > ಶೋಭಾ ಕರಂದ್ಲಾಜೆ – ಪುತ್ತೂರು ಕ್ಷೇತ್ರ
    > ಅನಂತಕುಮಾರ್ ಹೆಗಡೆ- ಯಲ್ಲಾಪುರ ಕ್ಷೇತ್ರ
    > ಕರಡಿಸಂಗಣ್ಣ – ಕೊಪ್ಪಳ ಕ್ಷೇತ್ರ
    > ಶ್ರೀರಾಮುಲು- ಬಳ್ಳಾರಿ ಗ್ರಾಮಾಂತರ ಕ್ಷೇತ್ರ, ಸಂಡೂರು ಕ್ಷೇತ್ರ
    > ಪಿ.ಸಿ.ಮೋಹನ್- ಗಾಂಧಿನಗರ ಕ್ಷೇತ್ರ