Tag: Karanataka

  • ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನೆ

    ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನೆ

    ಧಾರವಾಡ: ಹುಬ್ಬಳ್ಳಿಯಲ್ಲಿ ರಾಜ್ಯದ ಮೊದಲ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ (Karnataka Electronic Media Journalists Association) ಉದ್ಘಾಟನೆಯಾಗಿದೆ.

    ಹುಬ್ಬಳ್ಳಿ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅಸೋಸಿಯೇಷನ್ ಲೋಗೋ (Logo) ಬಿಡುಗಡೆ ಮಾಡಿ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ (Media) ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದು ಹೇಳಿದರು.

    ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದು ಹೇಳಿದರು.

    ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯುಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗುತ್ತಿದೆ, ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್, ಚಲುವರಾಯಸ್ವಾಮಿ, ಸಭಾಪತಿ ಬಸವರಾಜ್ ಹೊರಟ್ಟಿ ಬಾಗಿಯಾಗಿದ್ದರು.

  • ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

    ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

    ಬೆಂಗಳೂರು: ಕೀರ್ತನಕಾರರು ಮತ್ತು ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ (N R Gnanamurthy) ಅವರು ಬೆಂಗಳೂರಿನಲ್ಲಿ ಇಂದು (ಜು. 28) ನಿಧನರಾಗಿದ್ದಾರೆ.

    ಮೂಲತಃ ಕೋಲಾರ (Kolar) ತಾಲೂಕಿನ ರಾಮಸಂದ್ರದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

    ಅವಿವಾಹಿತರಾಗಿದ್ದ ಅವರು, ತಮ್ಮ ಜೀವನವನ್ನು ಹರಿಕಥೆಗಾಗಿಯೇ ಮೀಸಲಿಟ್ಟಿದ್ದರು. ಅವರಿಗೆ ಕರ್ನಾಟಕ ಕಲಾಶ್ರೀ, ಬಸವಶ್ರೀ, ಕುಮಾರ ವ್ಯಾಸ ಸೇರಿ ಹತ್ತು ಹಲವು ಪ್ರಶಸ್ತಿಗಳು ಸಂದಿವೆ. ಆಕಾಶವಾಣಿ ಮತ್ತು ದೂರದರ್ಶನದ ಕಲಾವಿದರಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

    ಎನ್.ಆರ್. ಜ್ಞಾನಮೂರ್ತಿ ಅವರ ನಿಧನಕ್ಕೆ ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

  • ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಢಮಾರ್‌: ಸಿಟಿ ರವಿ

    ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಢಮಾರ್‌: ಸಿಟಿ ರವಿ

    ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ (Congress Government) ಢಮಾರ್ ಆಗೋದು ಪಕ್ಕಾ ಎಂದು ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ (CT Ravi) ಭವಿಷ್ಯ ನುಡಿದಿದ್ದಾರೆ.

    ಸಿದ್ದರಾಮಯ್ಯ (Siddaramaiah) ಅವರ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ಈಗ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌. ಡಿಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕಾ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೆ ಅವರಿಗೆ ಕೇಳಬೇಕು ಎಂದರು. ಇದನ್ನೂ ಓದಿ: ‘ಡಿ’ ಗ್ಯಾಂಗ್‌ಗೆ ಜೈಲೇ ಗತಿ – ಮತ್ತೆ 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

     

    ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

    ವಿವಿಧ ಹಗರಣದಗಳು ಸರ್ಕಾರದ ವಿರುದ್ಧ ಕೇಳಿ ಬಂದಿವೆ ಹೀಗಾಗಿ ಬಹಳ‌ ದಿನ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ತಿಳಿಸಿದರು.

     

  • 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಅಂಬುಲೆನ್ಸ್ (108 Ambulance)  ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಯ ಡಿಎಚ್‍ಒಗಳ (DHO) ಹೆಚ್ಚುವರಿ ದೂರವಾಣಿ ಸಂಖ್ಯೆಗಳನ್ನು ಅಯಾ ಜಿಲ್ಲೆಯ ಜನರಿಗೆ ಒದಗಿಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ  (Health department)  ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

    ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ (Dr.K Sudhakar)  ಟ್ವೀಟ್ ಮಾಡಿದ್ದು, 108 – ಆರೋಗ್ಯ ಕವಚ ಅಂಬುಲೆನ್ಸ್ ಸೇವೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವ ಮತ್ತು ಅಂಬುಲೆನ್ಸ್ ಸೇವೆಯಲ್ಲಿ ಯಾವುದೇ ಅಡಚಣೆಯಾಗದಂತೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಸ್ಥಾಪಿಸುವ ಕುರಿತಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ಜರುಗಿತು. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರೀಕೃತ ಕಾಲ್ ಸೆಂಟರ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ಕರೆಗೆ ಸ್ಪಂದಿಸಿ ಸೇವೆ ಒದಗಿಸಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ: ಕಾಂಗ್ರೆಸ್

    ತಾತ್ಕಾಲಿಕವಾಗಿ ಬ್ಯಾಕ್‍ಅಪ್ ಸರ್ವರ್ ಅಳವಡಿಸಲಾಗಿದ್ದು, ದೋಷಪೂರಿತ ಮುಖ್ಯ ಸರ್ವರ್ ಅನ್ನು ದುರಸ್ತಿ ಮಾಡುವ ಕಾರ್ಯ ಚಾಲ್ತಿಯಲ್ಲಿದೆ. ಈ ಎಲ್ಲ ಕ್ರಮಗಳ ಜೊತೆ ತಡೆರಹಿತ ಸೇವೆ ಖಾತ್ರಿಪಡಿಸಿಕೊಳ್ಳಲು ಪ್ರತೀ ಜಿಲ್ಲೆಯಲ್ಲಿ 3-4 ವಿಕೇಂದ್ರೀಕೃತ ಕಾಲ್ ಸೆಂಟರ್ ವ್ಯವಸ್ಥೆ ಮಾಡಲಾಗಿದ್ದು ಇದರ ಬಗ್ಗೆ ಸ್ಥಳೀಯ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಇದನ್ನೂ ಓದಿ: ಆ ಭಾಗ್ಯ ಈ ಭಾಗ್ಯ ಅಂತಾ ರಾಜ್ಯಕ್ಕೆ ದೌರ್ಭಾಗ್ಯ ಕೊಟ್ಟರು: ಸಿದ್ದುಗೆ ಬೊಮ್ಮಾಯಿ ಟಾಂಗ್‌

    ನಿನ್ನೆಯಿಂದ 108 ಅಂಬುಲೆನ್ಸ್ ಸೇವೆ ಸರಿಯಾಗಿ ಕಾರ್ಯಚರಣೆ ಮಾಡುತ್ತಿರಲಿಲ್ಲ. ತಾಂತ್ರಿಕ ದೋಷದ ಕಾರಣ 108 ಕಾಲ್ ಸೆಂಟರ್ ವರ್ಕ್ ಆಗುತ್ತಿರಲಿಲ್ಲ. ಇದರಿಂದಾಗಿ ಸಕಾಲಕ್ಕೆ ಅಂಬುಲೆನ್ಸ್ ಸಿಗದೇ, ಸಕಾಲಕ್ಕೆ ವೈದ್ಯಕೀಯ ನೆರವು ಸಿಗದೇ ರಾಜ್ಯಾದ್ಯಂತ ರೋಗಿಗಳು ಪರದಾಡಿದ್ದಾರೆ. ಒಂದು ಜೀವ ಕೂಡ ಹೋಗಿದೆ. ಅನಾರೋಗ್ಯದಿಂದ ಬಳಲ್ತಿದ್ದ ತುಮಕೂರು ಜಿಲ್ಲೆ ಐಡಿ ಹಳ್ಳಿಯ ಜಯಮ್ಮ ಎಂಬಾಕೆ ಸಕಾಲಕ್ಕೆ ಅಂಬುಲೆನ್ಸ್ ಸಿಗದೇ ಸಾವನ್ನಪ್ಪಿದ್ದಾರೆ. 108 ಸೇವೆಗಳಿಗಾಗಿ ಜಿವಿಕೆ-ಇಎಂಆರ್‌ಐ ಕಾಲ್‍ಸೆಂಟರ್‌ನಲ್ಲಿ 2008ರಲ್ಲಿ ಅಳವಡಿಸಿದ್ದ ಆರೆಂಜಸ್ ಟೆಕ್ನಾಲಜಿ ಸಾಫ್ಟ್‌ವೆರ್ ಅಪ್‍ಡೇಟ್ ಮಾಡದ ಕಾರಣ ವೈರಸ್ ಅಟ್ಯಾಕ್ ಆಗಿ ಇಷ್ಟೆಲ್ಲಾ ಅವಾಂತರ ಉಂಟಾಗಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಶಿಫ್ಟ್ ಸಹ ಅಂಬುಲೆನ್ಸ್‌ಗಳಿಗೆ ಕೃತಕ ಬರ ಬಂದಿತ್ತು. ರೋಗಿಗಳ ಸಂಬಂಧಿಕರು 108 ಅವ್ಯವಸ್ಥೆಗಳಿಗೆ ತೀವ್ರ ಆಕ್ರೋಶ ಹೊರಹಾಕಿದ್ರು. ಈ ಬಗ್ಗೆ ಪಬ್ಲಿಕ್ ಟಿವಿ ಬೆಳಗ್ಗೆಯಿಂದ ನಿರಂತರ ವರದಿ ಕಾರಣ, ಆರೋಗ್ಯ ಇಲಾಖೆ ಎಚ್ಚೆತ್ತು, ತಾತ್ಕಾಲಿಕವಾಗಿ ಪರ್ಯಾಯ ಸೇವೆ ಕಲ್ಪಿಸಲು ಪ್ರಯತ್ನಿಸಿತು. 108 ಬದಲಿಗೆ 112ಕ್ಕೆ ಕರೆ ಮಾಡಿ ಅಂಬುಲೆನ್ಸ್ ಸೇವೆ ಪಡೆಯಲು ಸೂಚಿಸಿತು. ಬೆಂಗಳೂರು, ತುಮಕೂರು, ನೆಲಮಂಗಲ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ವಿಜಯಪುರ ಸೇರಿ ಬಹುತೇಕ ಕಡೆ ಈ ಸಮಸ್ಯೆ ಕಂಡುಬಂತು.

    Live Tv
    [brid partner=56869869 player=32851 video=960834 autoplay=true]

  • ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದಲ್ಲಿ ಅಂಬುಲೆನ್ಸ್ ಸಮಸ್ಯೆಯ ಬಗ್ಗೆ ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108

    ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್‌ನಲ್ಲಿ 108 ಅಂಬುಲೆನ್ಸ್ ಸೇವೆಗೆ ಓವರ್ ಫೋನ್‌ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ. 108 ಹಾಗೂ 112 ಕಾಲ್ ಸೆಂಟರ್‌ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬುಲೆನ್ಸ್ ಡ್ರೈವರ್‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ

    ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ

    ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಎಲ್ಲಾ ಕಡೆ ಉತ್ತಮ ಮಳೆ ಆಗ್ತಿದ್ದು, ಅವಾಂತರಗಳು ಮುಂದುವರಿದಿವೆ. ಆಗುಂಬೆಯಲ್ಲಿ ನಿನ್ನೆ 230 ಮಿಲಿಮೀಟರ್ ಮಳೆ ಆಗಿದ್ದು, ಪ್ರಸಕ್ತ ಮುಂಗಾರಿನಲ್ಲಿ ಆಗುಂಬೆಯಲ್ಲಿ ಬಿದ್ದ ಮಳೆಯ ಪ್ರಮಾಣ 5000 ಮಿಲಿಮೀಟರ್ ದಾಟಿದೆ.

    ಪಶ್ಚಿಮ ಘಟ್ಟಗಳಲ್ಲಿ ಮಳೆ ಅವಾಂತರ ಮುಂದುವರಿದಿದೆ. ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗ ಹಳುವಳ್ಳಿ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ.

    ದಕ್ಷಿಣ ಕನ್ನಡದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದೆ. ನೇತ್ರಾವತಿ ನದಿ ನೀರಿನ ಮಟ್ಟ 6.5 ಮೀಟರ್ ತಲುಪಿದೆ. 8 ಮೀಟರ್ ತಲುಪಿದರೆ ಅಪಾಯ ಎದುರಾಗಲಿದೆ. ಹಳೆ ಮೈಸೂರು ಭಾಗದಲ್ಲಿ ಸಣ್ಣಪುಟ್ಟ ನದಿಗಳು ಕೂಡ ಉಕ್ಕೇರುತ್ತಿವೆ. ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜೋಡಿ ಜಲಾಶಯಗಳು ತುಂಬಿ ಹರಿಯುತ್ತಿವೆ. ಸುವರ್ಣವತಿ ನದಿಯ ಹಿಂದಿನ ಪ್ರವಾಹ ಮಟ್ಟಕ್ಕಿಂತ 1.2 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

    ಕೊಳ್ಳೆಗಾಲದ ಜನ ಹಿಂದೆಂದೂ ಇಂತಹ ಸ್ಥಿತಿಯನ್ನು ಕಂಡೇ ಇಲ್ಲ ಎನ್ನುತ್ತಿದ್ದಾರೆ. ಅಪಾರ ಕಬ್ಬು, ಬಾಳೆ, ತೆಂಗು, ಅಡಿಕೆ ತೋಟ ಜಲಾವೃತವಾಗಿದೆ. ಮಂಡ್ಯ ಜಿಲ್ಲೆಯ ಶಿಂಷಾವತಿ ನದಿ ಅಬ್ಬರ ಮುಂದುವರಿದಿದೆ. ಹಲಗೂರಿನ ಟಿಕೆ ಹಳ್ಳಿ ಬಳಿ ಶಿಂಷಾ ಅಪಾಯದ ಮಟ್ಟ ಮೀರಿದೆ. ಶಿಂಷಾ ನದಿ ಕಾವೇರಿಗೆ ಕನಿಷ್ಠ ಅಂದ್ರೂ 50ಸಾವಿರ ಕ್ಯೂಸೆಕ್ ನೀರನ್ನು ಸೇರಿಸ್ತಾ ಇದೆ. ಬೆಂಗಳೂರು-ಮೈಸೂರು ಹೈವೇಯಲ್ಲಿ ತೆರಳುವ ಮಂದಿ ಒಂದು ಕ್ಷಣ ನಿಂತು ಶಿಂಷಾ ವೈಭವವನ್ನು ಕಣ್ತುಂಬಿಕೊಳ್ತಿದ್ದಾರೆ. ಕೊರಟಗೆರೆ ತಾಲೂಕಿನ ತೀತಾ ಡ್ಯಾಂ ಭರ್ತಿಯಾಗಿದೆ. ಜಯಮಂಗಲಿ ನದಿಯ ನೀರು ಪ್ರವಾಹದ ರೀತಿಯಲ್ಲಿ ಡ್ಯಾಂಗೆ ಸೇರುತ್ತಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.

    ಹಾವೇರಿಯ ರಾಣೆಬೆನ್ನೂರು, ರಟ್ಟೀಹಳ್ಳಿ ಸೇರಿ ಹಲವೆಡೆ ಬೆಳೆ ಹಾನಿ. ಮೆಕ್ಕೆಜೋಳ ಬೆಳೆ ಕೆಂಪು ಬಣ್ಣಕ್ಕೆ ತಿರುಗಿ ಕೊಳೆತು ಹಾಳಾಗುತ್ತಿದೆ. ಅನ್ನದಾತ ಕಂಗಾಲಾಗಿದ್ದಾನೆ. ದಾವಣಗೆರೆಯ ಚನ್ನಗಿರಿಯಲ್ಲಿ ಕೆರೆ ಕಟ್ಟೆ ಒಡೆದಿದೆ. ಹರಿದ್ರಾವತಿ ನದಿ ತುಂಬಿ ಹರಿಯುತ್ತಿದೆ. ಹತ್ತಾರು ಹಳ್ಳಿಗಳ ಸಂಪರ್ಕವೇ ಕಟ್ ಆಗಿದೆ. ಗದಗ ಜಿಲ್ಲೆಯ ಹಲವೆಡೆ ಮೆಕ್ಕೆಜೋಳ, ಸೂರ್ಯಕಾಂತಿ, ಹತ್ತಿ, ಮಾವು, ಕಬ್ಬು ಹೀಗೆ ಅನೇಕ ಬೆಳೆಗಳು ನಾಶವಾಗಿವೆ. ಇದನ್ನೂ ಓದಿ: ಇಂದು ಉಪರಾಷ್ಟ್ರಪತಿ ಚುನಾವಣೆಗೆ ವೋಟಿಂಗ್ – NDA ಅಭ್ಯರ್ಥಿ ಜಗದೀಪ್ ಧನ್ಕರ್ ಆಯ್ಕೆ ಖಚಿತ

    ಹಾಸನದಲ್ಲಿ ಹಲವೆಡೆ ಕೆರೆಗಳು ಕೋಡಿ ಬಿದ್ದು ಜಮೀನುಗಳಿಗೆ ನೀರು ನುಗ್ಗಿದೆ. ರೈತರು ಕಂಗಾಲಾಗಿದ್ದಾರೆ. ಕೋಲಾರದ ಹಲವೆಡೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮ್ಯಾಟೊ, ರಾಗಿ, ಭತ್ತ, ಮೂಲಂಗಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ. ಇತ್ತ ಕೊಡಗು ಜಿಲ್ಲೆಯಲ್ಲಿ ಜಲಸ್ಫೋಟ ಬೆನ್ನಲ್ಲೇ ಇದೀಗ ಮತ್ತೆ ಭೂಕುಸಿತದ ಆತಂಕ ಮನೆಮಾಡಿದೆ. ಈ ಹಿಂದಷ್ಟೇ ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ ವ್ಯಾಪ್ತಿಯಲ್ಲಿ ಹಾಗೂ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಸರಣಿ ಭೂಕಂಪನ ಅಗಿತ್ತು. ಅಷ್ಟೇ ಅಲ್ಲದೇ ವಿಚಿತ್ರ ಶಬ್ಧ ಕೇಳಿರುವುದಾಗಿ ಅಲ್ಲಿನ ಜನ ಹೇಳಿದ್ರು.

    ಇದೀಗ ಭೂಕಂಪ ಅಗಿರುವ ಸ್ಥಳಗಳಲ್ಲೇ ಮಳೆ ಅವಾಂತರಗಳು ಮುಂದುವರಿದಿದೆ. ಅದರಲ್ಲೂ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 2018ರ ರೀತಿಯಲ್ಲೇ ಮತ್ತೆ ಗಂಡಾಂತರ ಎದುರಾಗುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಈವರೆಗೂ ಕೊಡಗು ಜಿಲ್ಲೆಯಲ್ಲಿ 265 ಮನೆಗಳಿಗೆ ಹಾನಿಯಾಗಿದೆ. 1174 ಕಿಲೋ ಮೀಟರ್ ರಸ್ತೆಗೆ ಹಾನಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ – 19 ಜನ ಸಾವು

    ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ – 19 ಜನ ಸಾವು

    ಬೆಂಗಳೂರು: ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 18,404 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಇಂದು ಒಟ್ಟು 1,175 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 1,79,227 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.68 ಮತ್ತು ಮರಣ ಪ್ರಮಾಣ ಶೇ.1.55 ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 29,53,064 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 37,380ಕ್ಕೆ ಏರಿಕೆಯಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ 319 ಜನರಿಗೆ ಸೋಂಕು ತಗುಲಿದ್ರೆ 202 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 7,718 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಹಾಮಾರಿ ಬೆಂಗಳೂರಿನಲ್ಲಿ ಒರ್ವ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 319, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 34, ಚಿತ್ರದುರ್ಗ 12, ದಕ್ಷಿಣ ಕನ್ನಡ 232, ದಾವಣಗೆರೆ 8, ಧಾರವಾಡ 9, ಗದಗ 4, ಹಾಸನ 81, ಹಾವೇರಿ 3, ಕಲಬುರಗಿ 3, ಕೊಡಗು 64, ಕೋಲಾರ 9, ಕೊಪ್ಪಳ 2, ಮಂಡ್ಯ 20, ಮೈಸೂರು 86, ರಾಯಚೂರು 0, ರಾಮನಗರ 3, ಶಿವಮೊಗ್ಗ 35, ತುಮಕೂರು 51, ಉಡುಪಿ 150, ಉತ್ತರ ಕನ್ನಡ 32, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಚಿಕ್ಕಬಳ್ಳಾಪುರ ಶಾಸಕ

  • ಕೊರೊನಾ ಇಳಿಕೆ – ಇಂದು 1,001 ಹೊಸ ಪ್ರಕರಣ, 22 ಸಾವು

    ಕೊರೊನಾ ಇಳಿಕೆ – ಇಂದು 1,001 ಹೊಸ ಪ್ರಕರಣ, 22 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು ರಾಜ್ಯದಲ್ಲಿ 1,001 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 22 ಜನ ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.68ಕ್ಕೆ ಇಳಿಕೆಯಾಗಿದೆ.

    ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಇಳಿಕೆಯಾಗಿದ್ದು, 165 ಪ್ರಕರಣಗಳು ದಾಖಲಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 1,465 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 23,419 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ರಾಜ್ಯದಲ್ಲಿ ಇದುವರೆಗೂ 28,94,557 ಪ್ರಕರಣಗಳು ವರದಿಯಾಗಿದ್ದು, 36,374 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ.2.19ರಷ್ಟಿದೆ. ಇಂದು ಒಟ್ಟು 1,46,988 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 165, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 62, ಚಿತ್ರದುರ್ಗ 15, ದಕ್ಷಿಣ ಕನ್ನಡ 115, ದಾವಣಗೆರೆ 1, ಧಾರವಾಡ 6, ಗದಗ 5, ಹಾಸನ 90, ಹಾವೇರಿ 4, ಕಲಬುರಗಿ 4, ಕೊಡಗು 63, ಕೋಲಾರ 25, ಕೊಪ್ಪಳ 2, ಮಂಡ್ಯ 35, ಮೈಸೂರು 97, ರಾಯಚೂರು 0, ರಾಮನಗರ 7, ಶಿವಮೊಗ್ಗ 51, ತುಮಕೂರು 42, ಉಡುಪಿ 110, ಉತ್ತರ ಕನ್ನಡ 54, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದೆಲ್ಲೆಡೆ ಮತ್ತಷ್ಟು ಚುರುಕು ಪಡೆದ ಮುಂಗಾರು-ಬೆಂಗಳೂರಿನಲ್ಲಿ ರಾತ್ರಿಯಿಡೀ ವರ್ಷಧಾರೆ

    ರಾಜ್ಯದೆಲ್ಲೆಡೆ ಮತ್ತಷ್ಟು ಚುರುಕು ಪಡೆದ ಮುಂಗಾರು-ಬೆಂಗಳೂರಿನಲ್ಲಿ ರಾತ್ರಿಯಿಡೀ ವರ್ಷಧಾರೆ

    – ಕೊಪ್ಪಳ, ಬೀದರ್, ದಾವಣಗೆರೆಯಲ್ಲಿ ಭಾರೀ ಮಳೆ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ವಿರಾಮ ತೆಗೆದುಕೊಂಡಿದ್ದ ವರುಣ ದೇವ ಸಂಜೆಯಿಂದ ಅಬ್ಬರಿಸಲು ಶುರು ಮಾಡಿದ. ಇತ್ತ ಬಾಗಲಕೋಟೆ, ವಿಜಯಪುರ, ದಾವಣಗೆರೆ, ಕೊಪ್ಪಳ, ಬೀದರ್ ನಲ್ಲಿ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

    ವಿಜಯಪುರ ನಗರದ ಎಲ್‍ಬಿಎಸ್ ಮಾರ್ಕೆಟ್‍ಗೆ ಮಳೆ ನೀರು ನುಗ್ಗಿದೆ. ಪರಿಣಾಮ ಬಟ್ಟೆ, ಪುಸ್ತಕ ಹಾಗೂ ವಿವಿಧ ಅಂಗಡಿಗಳ ಮಾಲೀಕರು ಪರದಾಡುವಂತಾಯ್ತು. ಮಳೆ ನೀರನ್ನು ಹೊರಹಾಕಲು ಹರಸಾಹಸ ಪಡುವಂತಾಯ್ತು. ದಾವಣಗೆರೆಯಲ್ಲಿ ಭಾರೀ ಮಳೆಗೆ ಕಾಡಜ್ಜಿ ಬಳಿ ಇರುವ ಕೆಇಬಿ ಸ್ಟೇಷನ್‍ಗೆ ನೀರು ನುಗ್ಗಿದೆ. ಪರಿಣಾಮ ಕಚೇರಿಯಲ್ಲಿ ಇಬ್ಬರು ಸಿಲುಕಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲೂ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕೊಪ್ಪಳ ತಾಲೂಕಿನ ಮೆಳ್ಳಿಕೇರಿಯಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಭಾರೀ ಮಳೆಗೆ ಮಂಜುನಾಥ್ ಎಂಬವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಕುಸಿದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

    ಇನ್ನು ಬೀದರ್ ನಲ್ಲೂ ಮಳೆ ಜೋರಾಗಿದೆ. ಬೀದರ್, ಔರಾದ್, ಹುಮ್ನಾಬಾದ್, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಜಿಲ್ಲಾ ರಂಗಮಂದಿರ ಜಲಾವೃತವಾಗಿದೆ. ರಂಗಮಂದಿರದಲ್ಲಿ 3 ರಿಂದ 4 ಅಡಿಯಷ್ಟು ನೀರು ನಿಂತಿದೆ. ತಗ್ಗು ಪ್ರದೇಶಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಬಳಿಯ ಕಾರಹಳ್ಳಿ ಕ್ರಾಸ್ ನಲ್ಲಿ ಬೃಹತ್ ಮರಗಳು ರಸ್ತೆಗೆ ಉರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

    ರೆಡ್ ಅಲರ್ಟ್:
    ಜುಲೈ 21 ರವರೆಗೆ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗುತ್ತೆ ಅಂತ ರೆಡ್ ಅಲರ್ಟ್ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಲಬಾಳದಲ್ಲಿ ನದಿ ಉಕ್ಕಿ ಗುಂಡಿಬೈಲ್ ಗ್ರಾಮದ ಹಲವು ಮನೆಗಳು ಜಲಾವೃತವಾಗಿವೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಸನದ ಸಕಲೇಶಪುರ, ಆಲೂರು ಭಾಗದಲ್ಲಿ ಕಾರ್ಮೋಡ ಕವಿದಿದ್ದು, ಆಗಾಗ್ಗೆ ಮಳೆ ಆಗ್ತಿದೆ.

    ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ಕೃಷ್ಣಾ ನದಿಗೆಯಲ್ಲಿ 56 ಸಾವಿರ ಕ್ಯೂಸೆಕ್ ನೀರು ಹರಿದು ಬರ್ತಿದೆ. ಬೆಳಗಾವಿಯ ಚಿಕ್ಕೋಡಿ ಭಾಗದ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು – ಕಲ್ಲೋಳ ಜಲಾವೃತವಾಗಿದೆ. ಇದನ್ನೂ ಓದಿ: ಭಾರೀ ಮಳೆ- ಕರಾವಳಿ, ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಮುಂದುವರಿಕೆ

  • ಇಂದು 2,362 ಮಂದಿಗೆ ಕೊರೊನಾ- ರಾಜ್ಯದಲ್ಲಿ 31,063 ಸಕ್ರಿಯ ಪ್ರಕರಣಗಳು

    ಇಂದು 2,362 ಮಂದಿಗೆ ಕೊರೊನಾ- ರಾಜ್ಯದಲ್ಲಿ 31,063 ಸಕ್ರಿಯ ಪ್ರಕರಣಗಳು

    ಬೆಂಗಳೂರು: ರಾಜ್ಯದಲ್ಲಿ ಇಂದು 2,632 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 20 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,51,212ಕ್ಕೆ ಏರಿಕೆಯಾಗಿದ್ದು, 31,063 ಸಕ್ರಿಯ ಪ್ರಕರಣಗಳಿವೆ.

    4,215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11,430ಕ್ಕೆ ಏರಿಕೆಯಾಗಿದ್ದು, 869 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.15 ಮತ್ತು ಮೃತಪಟ್ಟವರ ಪ್ರಮಾಣ ಶೇ.0.84ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,09,508 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೆಂಗಳೂರು ನಗರ 1,176, ಬೀದರ್ 10, ಚಾಮರಾಜನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಮತ್ತು ಯಾದಗಿರಿಯಲ್ಲಿ 25 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.