ಕಾರವಾರ: ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ (Karnataka) ಕರಾವಳಿ ಹಾಗೂ ಗೋವಾ (Goa) ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿ ಕಳೆದ 24 ಗಂಟೆಯಲ್ಲಿ 80 ಮಿ.ಮೀ, ಬೇಲಿಕೇರಿ 76 ಮಿ.ಮೀ., ಕುಮಟಾ 72.8 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ರಾಯಚೂರು, ದಕ್ಷಿಣ ಕನ್ನಡ, ವಿಜಯಪುರ, ಗದಗದಲ್ಲಿ ಹೆಚ್ಚಿನ ಮಳೆ ವರದಿಯಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶ | ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್
ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಕುಮಟಾ, ಕಾರವಾರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಕಾರವಾರದಲ್ಲಿ ಇಂದು ಬೆಳಗ್ಗೆ ಸುರಿದ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನೀರು ನಿಂತು ಸವಾರರಿಗೆ ಸಮಸ್ಯೆ ತಂದೊಡ್ಡಿತು. ಇದನ್ನೂ ಓದಿ: Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ
ಇನ್ನು ಕಾರವಾರದ ನೆರೆಯ ಗೋವಾ ರಾಜ್ಯದಲ್ಲೂ ಅಬ್ಬರದ ಗಾಳಿ-ಮಳೆ ಸುರಿದಿದ್ದು, ಗೋವಾದ ತಲೆಯಗಾವ್‌ನ ಡಾ.ಶಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್‌ನ ಮುಖ್ಯ ದ್ವಾರದ ಕಮಾನು ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಇದಲ್ಲದೇ ಪಣಜಿ ನಗರದ ಹೈಕೋರ್ಟ್ ಸಮೀಪ ಇರುವ ಗುಡ್ಡ ಕುಸಿದು ಮನೆಗಳಿಗೆ ಹಾನಿ ಸಂಭವಿಸಿದೆ. ಇದಲ್ಲದೇ ಗಾಳಿಯ ಪ್ರಮಾಣ ಹೆಚ್ಚಾಗಿ ಮಳೆ ಆರ್ಭಟವೂ ಹೆಚ್ಚಾಗಿದ್ದು, ಕೆಲವು ಸಮಯ ಕಾರವಾರ-ಗೋವಾ ಹೆದ್ದಾರಿಯಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಕರ್ನಾಟಕ, ಗೋವಾ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಅಬ್ಬರದ ಮಳೆ ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ
ಬೆಂಗಳೂರು: ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯುವ ತುಳುವರ ಅತಿದೊಡ್ಡ ಹಬ್ಬ ಅಸ್ಟೆಮಿದ ಐಸಿರ (Astemida Isira) ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ.
ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆ.7ನೇ ತಾರೀಕಿನಂದು ವಿಜಯನಗರದ ಬಂಟರ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಷ್ಠಿತ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಂಪ್ರದಾಯಿಕ ಆಟೋಟ ಸ್ಪರ್ಧೆಗಳು, ಆಹಾರ ಮೇಳ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.
ಸನ್ಮಾನ ಯಾರಿಗೆ?
ಭಾರತದ ಪ್ರತಿಭಾನ್ವಿತ ಕಲಾ ನಿರ್ದೇಶಕ, ಕಳೆದ 13 ವರ್ಷಗಳಿಂದ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋದ ನಿರ್ಮಾಣ ಹೊಣೆ ಹೊತ್ತಿರುವ ಶಶಿಧರ ಅಡಪ ಅವರಿಗೆ ಸನ್ಮಾನ ಮಾಡಲಾಗುವುದು.
ಕಂಬಳ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ನೂರಾರು ಮೆಡಲ್‌ಗಳನ್ನು ಗೆದ್ದು ಅಪಾರ ಅಭಿಮಾನಿಗಳನ್ನು ಹೊಂದಿರುವ ಕಂಬಳದ ಕೋಣ ‘ಚಾಂಪಿಯನ್ ಕುಟ್ಟಿ’ಗೆ ಸನ್ಮಾನ ನಡೆಯಲಿದೆ.
ಕಂಬಳದ ಕೋಣಗಳಿಗೆಂದೇ ಸ್ವಿಮ್ಮಿಂಗ್ ಫೂಲ್ ಮಾಡಿ ಕಂಬಳ ಕೂಟದಲ್ಲಿ ವಿಶಿಷ್ಟ ಹೆಸರು ಮಾಡಿರುವ ನಂದಳಿಕೆ ಶ್ರೀಕಾಂತ್ ಭಟ್‌ಗೆ ಸನ್ಮಾನ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ಏನೇನಿದೆ?
– ಮಂಗಳೂರಿನ ಪ್ರತಿಷ್ಠಿತ ಹುಲಿತಂಡಗಳಲ್ಲಿ ಒಂದಾದ ಪೊಳಲಿ ಟೈಗರ್ಸ್ ತಂಡದಿಂದ ಹುಲಿವೇಷ
– ಪ್ರಣವಂ ಚೆಂಡೆ ತಂಡದಿಂದ ಚೆಂಡೆ ವಾದನ
– ಡ್ಯಾನ್ಸ್ ಬೀಟ್ ಸುಳ್ಯ ತಂಡದ 75 ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವಿನೋದಾವಳಿ
– ಕರಾವಳಿಯ ಪ್ರತಿಷ್ಠಿತ ಯಕ್ಷಗಾನ ಕಲಾವಿದರಿಂದ ‘ಕಾರ್ನಿಕದ ಶಿವಮಂತ್ರ’ ಯಕ್ಷಗಾನ ಪ್ರದರ್ಶನ
– ಪ್ರಸಿದ್ಧ ‘ಜೋಡು ಜೀಟಿಗೆ’ ಸಿನಿ ಮಾದರಿಯ ತುಳುನಾಟಕ
– ಕರಾವಳಿಯ ಪ್ರಸಿದ್ಧ ಡಿಜೆ ರತನ್ ಅವರಿಂದ ತುಳು ಡಿಜೆ ನೈಟ್ಸ್ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ವಿಶೇಷವಾಗಿ ಈ ಭಾರಿಯ ಅಷ್ಟೆಮಿದ ಐಸಿರದಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಮತ್ತು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಇರುವ ಅಡೆತಡೆಗಳ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ ಮೋಹನ್ ಆಳ್ವ, ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಮತ್ತು ಕದ್ರಿ ನವನೀತ್ ಶೆಟ್ಟಿ ನಡೆಸಿಕೊಡಲಿದ್ದಾರೆ.
ಆಟೋಟ ಸ್ಪರ್ಧೆ ಏನೇನು?
ಮುದ್ದು ಕೃಷ್ಣೆ, ಅಷ್ಟೆಮಿದ ಏಸ, ಪೆಲತ್ತರಿ ಪೆಜ್ಜುನ, ಗೇನೊಗೊಂಜಿ ಸವಾಲ್, ಕಪ್ಪೆ ಬಲಿಪು, ಕರ ದರ್ಪುನ, ಉದ್ದ ಕಂಬ, ಡೊಂಕ, ಗೋಣಿ ಚೀಲಡ್ ಪಾರುನಿ, ಕಂಬುಲದ ಓಟ, ತಾರಯಿದ ಕಟ್ಟ, ಜಾರು ಕಂಬ, ಬಜಿಲ್ ತಿನ್ಪುನಿ, ಹಗ್ಗ ಜಗ್ಗಾಟ ಹೀಗೆ 30ಕ್ಕೂ ಹೆಚ್ಚು ಬಗೆಯ ಆಟೋಟ ಸ್ಪರ್ಧೆಗಳು ಮಕ್ಕಳು, ಮಹಿಳೆಯರು ಮತ್ತು ಪುರುಷರ ವಿಭಾಗದಲ್ಲಿ ನಡೆಯಲಿದೆ.
ಇನ್ನು ವಿವಿಧ ಆಟೋಟ ಸ್ಪರ್ಧೆಗಳ ಉದ್ಘಾಟನೆಯನ್ನು ಅಕ್ಷತಾ ಪೂಜಾರಿ ಮಾಳ (ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ವೈಟ್ ಲಿಪ್ಟರ್), ಸುಖೇಶ್ ಹೆಗ್ಡೆ (ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಕಬ್ಬಡ್ಡಿ ಪಟು), ರೋಹಿತ್ ಮಾರ್ಲ (ರಾಷ್ಟ್ರೀಯ ಕಬ್ಬಡ್ಡಿ ಆಟಗಾರ, ಬ್ಯಾಂಕ್ ಆಪ್ ಬರೋಡ), ಎಸ್‌ಐ ಅಭಿಷೇಕ್ ಶೆಟ್ಟಿ (ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಅಥ್ಲೆಟಿಕ್ಸ್) ಇವರುಗಳು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಚಲನಚಿತ್ರ ನಟರಾದ ವಿಜಯ ರಾಘವೇಂದ್ರ, ಸಂಗೀತ ನಿರ್ದೇಶಕ ಗುರುಕಿರಣ್, ನಟ ಶಿವಧ್ವಜ್, ಬಿಗ್‌ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಸೇರಿದಂತೆ ಕರಾವಳಿ ಭಾಗದ ಸಂಸದರು, ಶಾಸಕರುಗಳು, ಸೆಲೆಬ್ರಿಟಿಗಳು ಸೇರಿದಂತೆ ಇತರ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಬಾರಿಯ ಅಸ್ಟೆಮಿದ ಐಸಿರ ಕಾರ್ಯಕ್ರಮ ಬೆಳಗ್ಗೆ 8ರಿಂದ ರಾತ್ರಿ 11 ಗಂಟೆ ತನಕ ನಡೆಯಲಿದ್ದು, ಸುಮಾರು 30 ಸಾವಿರ ಜನರು ಸೇರುವ ಸಾಧ್ಯತೆ ಇದೆ ಎಂದು ತುಳುನಾಡ ಜವನೆರ್ (ರಿ) ಬೆಂಗಳೂರು ಅಧ್ಯಕ್ಷ ಹರಿಪ್ರಸಾದ್ ಬೇಂಗದಡಿ ತಿಳಿಸಿದ್ದಾರೆ.
ಕರಾವಳಿ ಭಾಗದ ಜನರನ್ನು ಒಂದೇ ಸೂರಿನಡಿ ಸೇರಿಸಿ ತುಳುನಾಡಿನ ಸಂಸ್ಕೃತಿ ಆಚಾರ ವಿಚಾರಗಳನ್ನು ರಾಜಧಾನಿ ಬೆಂಗಳೂರಿನಲ್ಲಿ ಪ್ರಚುರಪಡಿಸುವ ಸಲುವಾಗಿ ಸೆಪ್ಟೆಂಬರ್ 7ರಂದು ಅದ್ಧೂರಿಯಾಗಿ ಅಸ್ಟೆಮಿದ ಐಸಿರ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಮಾವೀರ…ರಾಜ್ ಬಿ ಶೆಟ್ಟಿ (Raj B Shetty) ಅವರ ಹೊಸ ಪಾತ್ರದ ಹೆಸರು..ಸದ್ಯ ಕರುಣಾಕರ ಗುರೂಜಿಯಾಗಿ ಅಭಿಮಾನಿಗಳ ಹೃದಯ ಗೆದ್ದಿರುವ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಅಂದಹಾಗೆ ಮಾವೀರನಾಗಿ ರಾಜ್ ಶೆಟ್ಟಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವುದು ಕರಾವಳಿ ಸಿನಿಮಾದಲ್ಲಿ.
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ (Karavali Movie) ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ರಾಜ್ ಎಂಟ್ರಿ ಇಂದ ಕರಾವಳಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ.
ರಾಜ್ ಬಿ ಶೆಟ್ಟಿ ಲುಕ್ ಆಕರ್ಷಕವಾಗಿದ್ದು, ಯಾವ ಪಾತ್ರ ಎನ್ನುವ ಕುತೂಹಲ ಹೆಚ್ಚಾಗಿದೆ. ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಾವೀರ ಎನ್ನುವುದು ಕುತೂಹಲ ಮೂಡಿಸಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾ ತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಲುಕ್ ರಿಲೀಸ್ ಮಾಡುವ ಮೂಲಕ ಕರಾವಳಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ ಸಿನಿಮಾ ತಂಡ.
ಈಗಾಗಲೇ ಕರಾವಳಿ ಸಿನಿಮಾದಿಂದ ರಿಲೀಸ್ ಆಗಿರುವ ಪೋಸ್ಟರ್ ಮತ್ತು ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ರಾಜ್ ಬಿ ಶೆಟ್ಟಿ ಪೋಸ್ಟರ್ ಮತ್ತಷ್ಟು ಆಕರ್ಷಕವಾಗಿದ್ದು, ಸಿನಿಮಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕರಾವಳಿಯಲ್ಲಿ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ರಮೇಶ್ ಇಂದಿರಾ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.
ಕರಾವಳಿ ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಕ್ಯಾಮರಾ ವರ್ಕ್ ಚಿತ್ರಕ್ಕಿದೆ.
– ಕೊಡಗು, ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ (Karnataka Rain) ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಮಳೆ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕರಾವಳಿ (Karavali) ಹಾಗೂ ಮಲೆನಾಡು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ
ಇಂದು ಎಲ್ಲೆಲ್ಲಿ ಶಾಲೆ -ಕಾಲೇಜು ರಜೆ?
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಶಾಲೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಳೆ ಜೋರಾದ ಹಿನ್ನೆಲೆ ಜೂ.16 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆ ಹಿನ್ನೆಲೆ ರಜೆ ಘೋಷಿಸಲಾಗಿದೆ. ಅಷ್ಟೇ ಅಲ್ಲದೇ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಯೂ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್
ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ (Mangaluru) ಮತ್ತೆ ಪ್ರತೀಕಾರದ ಹತ್ಯೆ ನಡೆದಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಪ್ರತೀಕಾರಕ್ಕಾಗಿ ಹತ್ಯೆ ಮಾಡಿರುವುದಾಗಿ ಬಂಧಿತ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಸುಪಾರಿ ಹಂತಕರು 5 ಲಕ್ಷಕ್ಕಾಗಿ ನಡು ರಸ್ತೆಯಲ್ಲೇ ಹಿಂದೂ ಕಾರ್ಯಕರ್ತನನ್ನ (Hindu Worker) ಬರ್ಬರವಾಗಿ ಕೊಂದಿದ್ದಾರೆ. ಹಾಗಾದ್ರೆ ಸುಪಾರಿ ಕೊಟ್ಟವರು, ಹತ್ಯೆ ನಡೆದಿದ್ದು ಯಾಕೆ? ಅನ್ನೋದರ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ..
ಕಳೆದ ಮೇ 1 ರಂದು ರಾತ್ರಿ 8.30ರ ಸುಮಾರಿಗೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ನಡು ರಸ್ತೆಯಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು (Suhas Shetty) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ 7 ಮಂದಿ ಹಾಗೂ ಸುಪಾರಿ ಕೊಟ್ಟ ಓರ್ವ ಸೇರಿ ಒಟ್ಟು 8 ಮಂದಿಯನ್ನ ಮಂಗಳೂರು ಪೊಲೀಸರು (Mangaluru Police) ಬಂಧಿಸಿದ್ದಾರೆ. ಇದು ಪ್ರತೀಕಾರಕ್ಕೆ ನಡೆದ ಹತ್ಯೆ ಅನ್ನೋದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಸುಹಾಸ್ ಹತ್ಯೆ ಕೇಸ್ – ಫಾಝಿಲ್ ಸಹೋದರನೇ ಪ್ರಮುಖ ಆರೋಪಿ
ನಿಲ್ಲದ ಪ್ರತೀಕಾರದ ಹತ್ಯೆಗಳು
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ನಿಷೇಧಿತ ಉಗ್ರ ಸಂಘಟನೆ ಪಿಎಫ್‌ಐನ ಕಾರ್ಯಕರ್ತರೇ ಈ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದು ಪ್ರಕರಣವನ್ನು ಎನ್‌ಐಎ ತನಿಖೆ ನಡೆಸಿತ್ತು. ಈ ಪ್ರಕರಣದಿಂದಲೇ ಪಿಎಫ್‌ಐ ಅನ್ನು ಕೆಂದ್ರ ಸರ್ಕಾರ ನಿಷೇಧಿಸಿತ್ತು. ಈ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಕಾರವಾಗಿಯೇ ನಡೆದಿದ್ದು ಸುರತ್ಕಲ್‌ನ ಫಾಝಿಲ್ ಹತ್ಯೆ. ಇದನ್ನೂ ಓದಿ: ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚನೆ: ಸಚಿವ ಪರಮೇಶ್ವರ್ ಘೋಷಣೆ
2022ರ ಮೇ 28ರ ರಾತ್ರಿ ಸುರತ್ಕಲ್ ಮಾರ್ಕೆಟ್ ಬಳಿ ಫಾಝಿಲ್ ನನ್ನು ಬರ್ಬರವಾಗಿ ಕತ್ತರಿಸಿ ಹತ್ಯೆ ನಡೆಸಲಾಗಿತ್ತು. ಈ ಹತ್ಯೆಯ ಪ್ರಮುಖ ಆರೋಪಿಯಾಗಿದ್ದವನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ. ಹೀಗಾಗಿ ಫಾಝಿಲ್ ಹತ್ಯೆಗೆ ರಿವೇಂಜ್ ಹತ್ಯೆ ಮಾಡಬೇಕೆಂದು ಪಣತೊಟ್ಟ ಫಾಝಿಲ್‌ನ ತಮ್ಮ ಆದಿಲ್ ಸುಪಾರಿ ಕೊಟ್ಟಾದ್ರೂ ತನ್ನ ಅಣ್ಣನನ್ನು ಕೊಂದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಮುಗಿಸಲು ಪ್ಲ್ಯಾನ್ ಮಾಡಿದ್ದ. ಅದಕ್ಕೆ ಸಹಕಾರ ನೀಡಿ ಮುಂದೆ ಬಂದ ನಟೋರಿಯಸ್ ಸಫ್ವಾನ್‌ಗೆ 5 ಲಕ್ಷದ ಸುಫಾರಿ ನೀಡಿ ಅದರಲ್ಲಿ ಮೂರು ಲಕ್ಷ ರೂಪಾಯಿಯನ್ನ ಅಡ್ವಾನ್ಸಾಗಿ ನೀಡಿದ್ದ. ಸಫ್ವಾನ್ ತನ್ನ ತಂಡದೊಂದಿಗೆ ಮೇ 1 ರ ರಾತ್ರಿ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ನಡೆಸಿದ್ದಾರೆ.
ಕರಾವಳಿಯಲ್ಲಿ ಪ್ರತೀಕಾರದ ಹತ್ಯೆಗಳು ನಡೆಯೋದು ಇದೇನು ಹೊಸತಲ್ಲ. ಈ ಹಿಂದೆಯೂ ಒಂದಾದ ಮೇಲೊಂದು ಪ್ರತಿಕಾರದ ಹತ್ಯೆಗಳು ನಡೆದಿದೆ. ಅದರಲ್ಲೂ ಓರ್ವ ಹಿಂದೂವಿನ ಹತ್ಯೆ ಆದ್ರೆ ಅದಕ್ಕೊಬ್ಬ ಮುಸ್ಲಿಮನ ಹತ್ಯೆ ನಡೆಯುತ್ತಲೇ ಇತ್ತು. ಇದೀಗ ಈ ಹತ್ಯೆಯೂ ಅದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ. ಇದನ್ನೂ ಓದಿ: ಜೂ.10ರ ಒಳಗೆ ಸಿದ್ದರಾಮಯ್ಯ ಒಳಮೀಸಲಾತಿ ಘೋಷಣೆ ಮಾಡಬೇಕು: ಗೋವಿಂದ ಕಾರಜೋಳ
– ಕರಾವಳಿ ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ಆ ಭಾಗದ ಶಾಸಕರ ಜೊತೆ ಪ್ರತ್ಯೇಕ ಸಭೆ: ಡಿಸಿಎಂ ಭರವಸೆ
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ (Tourism) ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜೊತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ವೇಳೆ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೇ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕೋಳಿ ಅಂಕದ ಕೋಳಿ ರುಚಿ ಬಹಳ ಚೆನ್ನಾಗಿ ಇರುತ್ತೆ, ಬನ್ನಿ ರುಚಿ ತೋರಿಸ್ತೀವಿ: ಡಿಕೆಶಿಗೆ ಸುನೀಲ್ ಕುಮಾರ್ ಆಹ್ವಾನ
ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಈ ಭಾಗದ ಶಾಸಕರ ಸಭೆ ಕರೆದು ಮಾತನಾಡಬೇಕಿದೆ. ರಾತ್ರಿ 7-8 ಗಂಟೆಯ ಮೇಲೆ ಈ ಕರಾವಳಿ ಭಾಗ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಕ್ಕಳು ಶಾಲಾ ಕಾಲೇಜುಗಳಿಗೆ ಸೇರ್ಪಡೆಯಾಗುವ ಪ್ರಮಾಣವೂ ಕುಸಿಯುತ್ತಿದೆ. ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ನಡೆಸುವವರು ಈ ವಿಚಾರವಾಗಿ ನಮ್ಮ ಬಳಿ ಚರ್ಚೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಬಳ್ಳಾರಿ | ಹಕ್ಕಿ ಜ್ವರ ಪತ್ತೆ – ಆಂಧ್ರ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು
ಈ ಮಧ್ಯೆ ರಾತ್ರಿ 8ರ ನಂತರ ಏನು ಮಾಡಬೇಕು ಎಂದು ನೀವೇ ಸಲಹೆ ನೀಡಿ ಎಂದು ಶಾಸಕ ಅರವಿಂದ್ ಬೆಲ್ಲದ್ ಅವರು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ರಾತ್ರಿ 7-8 ಗಂಟೆ ನಂತರ ಮಂಗಳೂರು ಸ್ಥಬ್ಧವಾಗಿದೆ ಎಂದರೆ ಮಂಗಳೂರಿನ ಜನ ಹೆಚ್ಚಾಗಿ ಮನೆಯಿಂದಾಚೆ ಬರುವುದಿಲ್ಲ. ಹೀಗಾದರೆ ಯಾವ ಆರ್ಥಿಕ ವಹಿವಾಟು ನಡೆಯುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕರಾವಳಿ ಭಾಗದಲ್ಲಿ ಐಟಿಬಿಟಿ ಸ್ಥಾಪಿಸಲು ಪ್ರಸ್ತಾವನೆ ನೀಡಿತು. ಆದರೆ ಅಲ್ಲಿ ಒಂದೇ ಒಂದು ಕಾಂಪ್ಲೆಕ್ಸ್ ಕೂಡ ಇರಲಿಲ್ಲ. ಈಗ ಮೂರೋ, ನಾಲ್ಕೋ ತಲೆ ಎತ್ತುತ್ತಿವೆ. ರಾಜ್ಯದಲ್ಲಿ ಅತಿ ಹೆಚ್ಚು ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಇರುವುದೆಲ್ಲ ಅಲ್ಲೇ. ಅಲ್ಲಿರುವ ಪ್ರತಿಭೆಗಳೆಲ್ಲವೂ ಬೆಂಗಳೂರು, ಮುಂಬೈ ಹಾಗೂ ಹೊರದೇಶಗಳಿಗೆ ಹೋಗುತ್ತಿದ್ದಾರೆ. ಯಾಕೆ ಈ ಪರಿಸ್ಥಿತಿ ಇದೆ? ಯಾವುದೇ ನಗರದಲ್ಲಿ ಮನರಂಜನೆಗೆ ಅವಕಾಶವಿಲ್ಲದಿದ್ದರೆ ಅಲ್ಲಿ ಯುವಕರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಅಲ್ಲಿನ ಶಾಸಕರು ಕೂತು ಚರ್ಚೆ ಮಾಡಿ. ಈ ವಿಚಾರವಾಗಿ ನಾನು ಹಾಗೂ ಪ್ರವಾಸೋದ್ಯಮ ಸಚಿವರಿಬ್ಬರೂ ಸೇರಿ ಜಿಲ್ಲೆಯ ಎಲ್ಲಾ ಶಾಸಕರ ಜತೆ ಪ್ರತ್ಯೇಕವಾಗಿ ಸಭೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಮಗಾರಿ ಫಲಕದ ವಿಚಾರಕ್ಕೆ ಜಗಳ – ಗುಂಪು ಘರ್ಷಣೆಯಲ್ಲಿ ಓರ್ವ ಸಾವು, 9 ಜನರಿಗೆ ಗಾಯ
ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಬಿಸಿಲಬ್ಬರ ಹೆಚ್ಚಾಗಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ (Karavali) ಭಾಗದಲ್ಲಿ ಸೂರ್ಯನ ಅಬ್ಬರ ಸಾರ್ವಕಾಲಿಕ ದಾಖಲೆ ಬರೆದಿದೆ.
ಈ ವರ್ಷ ಫ್ರೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್ ವೇವ್ (Heat Wave) ಕಾಟ ಶುರುವಾಗಿದೆ. ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕರಾವಳಿ ಭಾಗದಲ್ಲಿ ಏಕಾಏಕಿ 5 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಏರಿಕೆಯಾಗಿದೆ. ಈ ಹಿನ್ನೆಲೆ ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ
ವಾಡಿಕೆಯಂತೆ ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳ ವೇಳೆಗೆ ಜನರು ಈ ಪ್ರಮಾಣದ ಬಿಸಿಲಿನ ಅಬ್ಬರವನ್ನು ಎದುರಿಸುತ್ತಿದ್ದರು. ಆದರೆ ಈ ಬಾರಿ ಫೆಬ್ರವರಿಯಲ್ಲೇ ಸೂರ್ಯ ಅಬ್ಬರಿಸುತ್ತಿದ್ದಾನೆ. ಉತ್ತರ, ದಕ್ಷಿಣ ಒಳನಾಡಿನಲ್ಲಿ ಕಳೆದೊಂದು ವಾರದಿಂದ 1-2 ಡಿಗ್ರಿ ವ್ಯತ್ಯಾಸದಲ್ಲಿ ಬಿಸಿಲು ಹೆಚ್ಚಾಗಿದೆ. ಇದನ್ನೂ ಓದಿ: ಕಲಬುರಗಿ | ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಪ್ರಸ್ತುತ ದಿನಗಳಲ್ಲಿ ಕೃಷಿಯಲ್ಲಿ (Agriculture) ವಿಭಿನ್ನ ಬದಲಾವಣೆಗಳಾಗುತ್ತಿವೆ. ಕೃಷಿಯೊಂದಿಗೆ ಹೈನುಗಾರಿಕೆ, ಮೀನುಗಾರಿಕೆಯತ್ತ ರೈತರು ವಾಲುತ್ತಿದ್ದಾರೆ. ಕಡಿಮೆ ಜಾಗದಲ್ಲಿ ಹೆಚ್ಚು ಲಾಭ ಪಡೆಯಲು ವಿನೂತನ ಪ್ರಯತ್ನಗಳಿಗೆ ಕೈಹಾಕಿ ಸಕ್ಸಸ್ ಕೂಡ ಕಂಡಿದ್ದಾರೆ. ಅದೇ ರೀತಿ ಪತಿಯ ಕೃಷಿ ಹಾಗೂ ಮೀನುಗಾರಿಕೆಯೊಂದಿಗೆ ಕೈಜೋಡಿಸಿ ಮೀನುಗಾರಿಕೆಯ (Fish Farming) ಮೌಲ್ಯವರ್ಧಿತ ಉತ್ಪನ್ನ ತಯಾರಿಸಿ ಯಶಸ್ಸು ಕಂಡಿದ್ದಾರೆ ಕೊಡಗು (Kodagu) ಜಿಲ್ಲೆ ಸಿದ್ದಾಪುರ ಸಮೀಪದ ಗುಹ್ಯದ ಪಟ್ಟಡ ನಮಿತಾ ಅಯ್ಯಪ್ಪ.
ಹೌದು. ಗುಹ್ಯದ ಪಟ್ಟಡ ನಮಿತಾ ಅಯ್ಯಪ್ಪ ಅವರ ಪತಿ ಪಟ್ಟಡ ಶ್ಯಾಂ ಅಯ್ಯಪ್ಪ ಅವರು ಕೃಷಿ, ತೋಟಗಾರಿಕೆಯೊಂದಿಗೆ ಮೀನುಗಾರಿಕೆಯನ್ನೂ ಮಾಡುತ್ತಿದ್ದಾರೆ. ವರ್ಷಕ್ಕೆ ಸುಮಾರು 5 ಟನ್‌ನಷ್ಟು ಮೀನುಗಳನ್ನು ಉತ್ಪಾದಿಸಿ ಮಾರಾಟ ಮಾಡುತ್ತಿದ್ದಾರೆ. ಕೆಲವೊಮ್ಮೆ ಈ ಮೀನುಗಳು ಮಾರಾಟವಾಗದೇ ಉಳಿದು ಹಾಳಾಗುತ್ತಿರುವುದನ್ನು ಕಂಡು ಬೇಸರಿಸಿಕೊಂಡ ನಮಿತಾ ಹೊಸ ಪ್ರಯತ್ನಕ್ಕೆ ಕೈಹಾಕಿದರು. ಈ ಪ್ರಯತ್ನವೇ ಅವರನ್ನು ಇಂದು ಯಶಸ್ವಿ ಉದ್ಯಮಿಯನ್ನಾಗಿ ಮಾಡಿದೆ.
ಪ್ರತಿದಿನ ಮಾರಾಟವಾಗದೇ ಮೀನು ಹೆಚ್ಚಿನ ಪ್ರಮಾಣದಲ್ಲಿ ಉಳಿಯುತ್ತಿರುವುದನ್ನು ಕಂಡ ನಮಿತಾ ಅಯ್ಯಪ್ಪ ಮೀನುಗಳಿಂದ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಚಿಂತನೆ ನಡೆಸಿದರು. ಈಗ ಬರೋಬರಿ 6 ಬಗೆಯ ಮೌಲ್ಯವರ್ಧಿತ ಉತ್ಪನ್ನಗಳನ್ನು ಸ್ವತಃ ತಯಾರಿಸಿ, ಮಾರುಕಟ್ಟೆಯಲ್ಲಿ ಯಶಸ್ವಿಯಾಗಿ ಮಾರಾಟವನ್ನೂ ಮಾಡುತ್ತಿದ್ದಾರೆ. ಮೀನಿನಿಂದ ಫಿಶ್ ಟಿಕ್ಕಾ, ಫಿಶ್ ಫಿಂಗರ್, ಫಿಶ್ ಬಾಂಡ್ ಕೇಕ್, ಫಿಶ್ ಆಯಿಲ್ (ಮೀನಿನ ಎಣ್ಣೆ), ಫಿಶ್ ಕ್ರುಕೇಟ್ಸ್, ಫಿಶ್ ಫಿಲ್ಲೆ ಉತ್ಪನ್ನಗಳನ್ನು ತಯಾರಿಸುತ್ತಿರುವುದು ಮಾತ್ರವಲ್ಲದೇ, ಮೀನಿನ ಉಪ್ಪಿನಕಾಯಿ, ಸಿಗಡಿ ಉಪ್ಪಿನಕಾಯಿಯನ್ನೂ ತಯಾರಿಸಿ, ಮಾರುಕಟ್ಟೆಗೆ ಸರಬರಾಜು ಮಾಡುತ್ತಿದ್ದಾರೆ. ಇದಕ್ಕೆ ಉತ್ತಮ ಬೇಡಿಕೆಯೂ ಇದೆ. ಇವರು ತಮ್ಮದೇ ಆದ ʻಜಸ್ಟ್ ಮೀನ್’ ಅಂಗಡಿಯೊಂದನ್ನ ಸಿದ್ದಾಪುರದಲ್ಲಿ ತೆರೆದಿದ್ದಾರೆ. ಇಲ್ಲಿ ಸ್ವತಃ ಅವರೇ ತಯಾರಿಸಿದ ಮೀನಿನ ಎಲ್ಲ ಮೌಲ್ಯವರ್ಧಿತ ಉತ್ಪನ್ನಗಳು ಲಭ್ಯವಿದೆ.
ನಮಿತಾ ಅವರ ಪತಿ ಇತರ ಮೂವರ ಜಂಟಿ ಸಹಿಭಾಗಿತ್ವದಲ್ಲಿ ಗುಹ್ಯದಲ್ಲಿ ʻಆಕ್ವಾ ವೆಂಚಸ್’ ಎಂಬ ಮೀನು ಸಾಕಾಣಿಕಾ ಘಟಕ ತೆರೆದಿದ್ದಾರೆ. ಇಲ್ಲಿ ಮೀನು ಸಾಕಾಣಿಕೆಯಲ್ಲದೇ ಇತರರೂ ಮೀನುಗಾರಿಕೆ ಮಾಡಲು ಸಹಾಯಹಸ್ತ ಚಾಚಿರುವುದು ವಿಶೇಷ. ಮೀನು ಮರಿಗಳನ್ನು ರೈತರಿಗೆ ಮಾರಾಟ ಮಾಡಿ, ಮೀನು ಬೆಳೆದ ನಂತರ ವಾಪಸ್ ಅವರಿಂದ ಖರೀದಿ ಮಾಡುವ ಮೂಲಕ ಜಿಲ್ಲೆಯಲ್ಲಿ ಮೀನುಗಾರಿಕಾ ಕ್ಷೇತ್ರ ವಿಸ್ತರಣೆಗೂ ದುಡಿಯುತ್ತಿದ್ದಾರೆ.
ಖರೀದಿ ಮಾಡಿದ ಮೀನುಗಳಿಂದ ತಮ್ಮದೇಯಾದ ʻಜಸ್ಟ್ ಮೀನ್’ ಎಂಬ ಸಂಸ್ಕರಣಾ ಘಟಕದಲ್ಲಿ ಮೀನುಗಳ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಜೊತೆಗೆ, ತಮ್ಮ ಘಟಕದಲ್ಲಿ ನಾಲ್ವರು ಮಹಿಳೆಯರಿಗೆ ಉದ್ಯೋಗವನ್ನೂ ನೀಡಿದ್ದಾರೆ. ಇದಕ್ಕಾಗಿ ನಮಿತಾ ಅವರು ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಿಗಳ ಔಪಚಾರಿಕತೆ (ಪಿಎಂಎಫ್‌ಎಂಇ) ಯೋಜನೆಯ ನೆರವು ಪಡೆದಿದ್ದಾರೆ.
50% ಸಹಾಯಧನ – ಪಿಎಂಎಫ್‌ಎಂಇ ಲಾಭ ನೀವೂ ಪಡೆಯಿರಿ!
ನಮಿತಾ ಅಯ್ಯಪ್ಪ ಅವರ ಉದ್ಯಮ ಯಶಸ್ಸಿನ ಕುರಿತು ʻಪಬ್ಲಿಕ್ ಟಿವಿ ಟಿಜಿಟಲ್ʼ ಆತ್ಮಯೋಜನೆಯ ಉಪನಿರ್ದೇಶಕಿ ಮೈತ್ರಿ ಅವರನ್ನು ಸಂಪರ್ಕಿಸಿದಾಗ ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ. ʻಮೀನು ಸಂಸ್ಕರಣಾ ಘಟಕ’ ಜಿಲ್ಲೆಯಲ್ಲೆ ಅಪರೂಪ ಎನ್ನಬಹುದಾದ ಹಾಗೂ ಹೊಸ ಬಗೆಯ ಪರಿಕಲ್ಪನೆಯಡಿ ಸ್ಥಾಪನೆಯಾಗಿರುವ ಆಹಾರ ಸಂಸ್ಕರಣಾ ಕೇಂದ್ರ ಎನಿಸಿದೆ. ಇದರ ಸ್ಥಾಪನೆಗೆ ಪಿಎಂಎಫ್‌ಎಂಇ ಯೋಜನೆಯಿಂದ ನೆರವು ನೀಡಲಾಗಿದೆ. ಈ ಬಗೆಯ ಅನೇಕ ಅವಕಾಶಗಳು ಪಿಎಂಎಫ್‌ಎಂಇ ಯೋಜನೆಯಲ್ಲಿದೆ ಎಂದು ಹೇಳಿದ್ದಾರೆ.
ಪಿಎಂಎಫ್‌ಎಂಇ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಈ ಯೋಜನೆಯ ಲಾಭ ಪಡೆಯುವವರಿಗೆ 50% ಸಹಾಯಧನ ನೀಡಲಾಗುತ್ತದೆ. ಸುಮಾರು 30 ಲಕ್ಷ ರೂ.ನಿಂದ ಯೋಜನೆಯ ವೆಚ್ಚ ಇದ್ದರೆ, 15 ಲಕ್ಷ ರೂ.ಗಳಷ್ಟು ಸಹಾಯದವನ್ನು ಸರ್ಕಾರ ಕೊಡುತ್ತದೆ. 50% ಸಹಾಯಧನದಲ್ಲಿ ಕೇಂದ್ರ ಸರ್ಕಾರದ ಪಾಲು 35% ಹಾಗೂ ರಾಜ್ಯ ಸರ್ಕಾರದ ಪಾಲು 15% ಇರುತ್ತದೆ. ಈವರೆಗೆ 60 ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಸುಮಾರು 1 ಕೋಟಿ ರೂ. ವರೆಗೆ ಹೂಡಿಕೆ ಮಾಡಬಹುದು. ಇದರಿಂದ ಫಲಾನುಭವಿಗಳು ತಮ್ಮ ಬೆಳೆಗಳನ್ನು ಬ್ರ್ಯಾಂಡಿಂಗ್ ಮಾಡಿಕೊಳ್ಳಬಹುದು ಎನ್ನುತ್ತಾರೆ ಮೈತ್ರಿ.
ಈ ಯೋಜನೆ ಕೃಷಿ ಉತ್ಪನ್ನಗಳ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆ ಮಾಡುವವರಿಗೆ ಅನ್ವಯವಾಗುತ್ತದೆ. ಉದಾಹರಣೆಗೆ, ಅಣಬೆ ಬೆಳೆಯುತ್ತೀವಿ ಅಂದ್ರೆ ಅದಕ್ಕೆ ಸಹಾಯಧನ ಇರುವುದಿಲ್ಲ, ಅಣಬೆ ಬೆಳೆದಿದ್ದರೆ ಅದರಿಂದ ಅಣಬೆ ಪೌಡರ್ ನಂತಹ ಉತ್ಪನ್ನಗಳನ್ನು ತಯಾರಿಸುವವರಿಗೆ ಸಹಾಯಧನ ಲಭಿಸಲಿದೆ. ಅದೇ ರೀತಿ ಮುಂದೆ ಮಿಲ್ಲೆಟ್ಸ್, ತೆಂಗು ಉತ್ಪನ್ನ ಪ್ರೊಸೆಸಿಂಗ್‌ಗೆ ಎಣ್ಣೆ ಗಾಣ ಹಾಗೂ ಕಾಫಿ ಬೆಳೆಗಾರರಿಗೆ ಕಾಫಿ ಪೌಡರ್ ರೀತಿ ಉತ್ಪನ್ನ ಬ್ರ್ಯಾಂಡಿಂಗ್ ಮಾಡಲು ಯೋಜನೆ ಕಲ್ಪಿಸಿಕೊಡಲು ಮುಂದಾಗುತ್ತಿದ್ದೇವೆ. ಮಾಹಿತಿಗೆ ಮೊ: 94823 71016 ಸಂಪರ್ಕಿಸಬಹುದು ಎಂದು ಮೈತ್ರಿ ಅವರು ತಿಳಿಸಿದ್ದಾರೆ.
ಮೀನುಗಾರಿಕೆಗೆ ಆಸಕ್ತಿ ಹೇಗಿದೆ?
ಸದ್ಯದ ಮಾಹಿತಿ ಪ್ರಕಾರ ರಾಜ್ಯದ ಒಳನಾಡಿನಲ್ಲಿ 6.53 ಲಕ್ಷ ಮೀನುಗಾರರು ಹಾಗೂ 529 ಸಕ್ರೀಯ ಸಂಘಗಳಿವೆ. ಕರಾವಳಿಯಲ್ಲಿ 1.59 ಲಕ್ಷ ಸಕ್ರೀಯ ಮೀನುಗಾರರಿದ್ದು, 120 ಸಕ್ರೀಯ ಸಹಕಾರ ಸಂಘಗಳಿವೆ. ದೇಶದಲ್ಲಿ ಸುಮಾರು 2.8 ಕೋಟಿ ಮೀನುಗಾರರು ಮೀನುಗಾರಿಕಾ ವಲಯವನ್ನೇ ಅವಲಂಬಿಸಿದ್ದಾರೆ. ಅಲ್ಲದೇ ಭಾರತ ವಿಶ್ವದ 3ನೇ ಅತಿದೊಡ್ಡ ಮೂನು ಉತ್ಪಾದಕ ರಾಷ್ಟ್ರವಾಗಿದೆ. 2022-23ರಲ್ಲಿ 175.45 ಲಕ್ಷ ಟನ್ ಮೀನು ತ್ಪಾದನೆಗೊಂಡಿತ್ತು. ಇದರಲ್ಲಿ ರಾಜ್ಯದ ಒಳನಾಡು ಮೀನುಕೃಷಿ ಪಾಲು 131.13 ಲಕ್ಷ ಟನ್ ಹಾಗೂ ಕರಾವಳಿಯ ಪಾಲು 44.32 ಲಕ್ಷ ಟನ್ ಇತ್ತು ಎಂದು ಅಂಕಿ ಅಂಶಗಳು ತಿಳಿಸಿವೆ.
ರಾಜ್ಯದಲ್ಲಿ ಮೀನುಗಾರಿಕೆ ಹೇಗಿದೆ?
2021-22ರಲ್ಲಿ 10,73,746 ಮೆಟ್ರಿಕ್ ಟನ್ ಮೀನು ಉತ್ಪಾದನೆಯಾಗಿತ್ತು, 11,648 ಕೋಟಿ ರೂ. ವಹಿವಾಟು ನಡೆದಿತ್ತು. 2022-23ರಲ್ಲಿ 12,24,947 ಮೆಟ್ರಿಕ್ ಟನ್ ಉತ್ಪಾದನೆಯಾಗಿ 12,834 ಕೋಟಿ ರೂ. ವಹಿವಾಟು ನಡೆದಿತ್ತು. ಹಾಗೆಯೇ 2023-24ರ ಸಾಲಿನಲ್ಲಿ ಜುಲೈ ಅಂತ್ಯದ ವರೆಗೆ 9,75,997 ಮೆಟ್ರಿಕ್ ಟನ್ ಮೀನು ಉತ್ಪಾದನೆಯಾಗಿದ್ದು, 12,991 ಕೋಟಿ ರೂ. ವಹಿವಾಟು ನಡೆದಿದೆ ಎಂದು ಮೀನುಗಾರಿಕೆ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಅಬ್ಬರಿಸುತ್ತಿದ್ದು, ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಕಾರವಾರದ ಗೋವಾ-ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ಕಲ್ಲುಬಂಡೆ ಕುಸಿದಿದೆ.
ಹೊನ್ನಾವರದ ಕರ್ನಲ್ ಹಿಲ್ ಬಳಿ ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ಇಡೂರಿನಲ್ಲಿ ಗುಡ್ಡದ ನೀರು ಹರಿದು ಹೆದ್ದಾರಿ ಹಾಗೂ ಮನೆಗಳು ಜಲಾವೃತವಾಗಿದೆ. ಅರೆಬೈಲ್‌ನಲ್ಲಿ ಹೈವೇ ಮೇಲೆ ಮರ ಬಿದ್ದಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಕಾರಣ ನದಿಗಳೆಲ್ಲಾ ತುಂಬಿ ಹರಿದು, ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಕೇಂದ್ರದಿಂದ ಅಕ್ಕಿ ಕೊಟ್ಟರೂ ಖರೀದಿಸ್ತಿಲ್ಲ – ಜೋಶಿ ಹೊಸ ಬಾಂಬ್!
ಕೊಡಗಿನಲ್ಲಿಯೂ ಮಳೆಯಾಗುತ್ತಿದ್ದು, ಚಿಕ್ಲಿಹೊಳೆ ಡ್ಯಾಂ ತುಂಬಿ ಹರಿದಿದೆ. ಶಿರಾಡಿಘಾಟ್‌ನ ಹಲವೆಡೆ ನಿರ್ಮಾಣದ ಹಂತದ ರಸ್ತೆ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಅಫಜಲಪುರ ಬಳಿ ಸೇತುವೆ ಜಲಾವೃತವಾಗಿದೆ. ಮಹಾರಾಷ್ಟçದಲ್ಲಿ ಭಾರೀ ಮಳೆ ಕಾರಣ ಚಿಕ್ಕೋಡಿಯ ನಾಲ್ಕು ಸೇತುವೆ ಮುಳುಗಡೆಯಾಗಿವೆ. ಖಾನಾಪುರದ ಏಳು ಫಾಲ್ಸ್ ನೋಡಲು ಅವಕಾಶ ನೀಡದಿರುವುದಕ್ಕೆ ಪ್ರವಾಸಿಗರಿಂದ ಆಕ್ರೋಶ ವ್ಯಕ್ತವಾಗಿವೆ. ‘ಗೋವಾದವರನ್ನು ಮಾತ್ರ ಬಿಡ್ತೀರಾ.. ಕನ್ನಡಿಗರೇನು ಮಾಡಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ. ಗೋಕಾಕ್ ಫಾಲ್ಸ್ ಬಳಿ ಸೂಕ್ತ ಭದ್ರತೆ ಕೈಗೊಳ್ಳದ ಕಾರಣ ಪ್ರವಾಸಿಗರು ಬಂಡೆಗಲ್ಲುಗಳ ಅಂಚಿನಲ್ಲಿ ಸೆಲ್ಫಿ ಹುಚ್ಚಾಟ ನಡೆಸಿದ್ದಾರೆ.
ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ
ಕೆಎಆರ್‌ಎಸ್ ಜಲಾಶಯದ ಒಟ್ಟು ಸಾಮರ್ಥ್ಯ 49.45 ಟಿಎಂಸಿ, ಇಂದಿನ ಮಟ್ಟ 24.42 ಟಿಎಂಸಿ ಇದ್ದು, ಒಳಹರಿವು 11,027 ಕ್ಯೂಸೆಕ್ ಹಾಗೂ ಹೊರಹರಿವು 562 ಕ್ಯೂಸೆಕ್ ಇದೆ. ಕಬಿನಿ ಒಟ್ಟು ಸಾಮರ್ಥ್ಯ 19.52 ಟಿಎಂಸಿ, ಇಂದಿನ ಮಟ್ಟ 17.98 ಟಿಎಂಸಿ ಇದೆ. ಒಳಹರಿವು 5,039 ಕ್ಯೂಸೆಕ್ ಹಾಗೂ ಹೊರಹರಿವು 3250 ಕ್ಯೂಸೆಕ್ ಇದೆ. ಇದನ್ನೂ ಓದಿ: ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ – ಹೆಚ್.ವಿಶ್ವನಾಥ್ ಬೇಸರ
ಹೇಮಾವತಿ ಒಟ್ಟು ಸಾಮರ್ಥ್ಯ 37.10 ಟಿಎಂಸಿ, ಇಂದಿನ ಮಟ್ಟ 17.60 ಟಿಎಂಸಿ ಇದೆ. ಒಳಹರಿವು 7,796 ಕ್ಯೂಸೆಕ್ ಹಾಗೂ ಒಳಹರಿವು 250 ಕ್ಯೂಸೆಕ್ ಇದೆ. ಹಾರಂಗಿ ಒಟ್ಟು ಸಾಮರ್ಥ್ಯ 8.50 ಟಿಎಂಸಿ, ಇಂದಿನ ಮಟ್ಟ 5.46 ಟಿಎಂಸಿ ಇದೆ. ಒಳಹರಿವು 2,472 ಕ್ಯೂಸೆಕ್ ಹಾಗೂ ಒಳಹರಿವು 200 ಕ್ಯೂಸೆಕ್ ಇದೆ. ತುಂಗಭದ್ರಾ ಒಟ್ಟು ಸಾಮರ್ಥ್ಯ 105.79 ಟಿಎಂಸಿ, ಇಂದಿನ ಮಟ್ಟ 18.24 ಟಿಎಂಸಿ ಇದೆ. ಒಳಹರಿವು 50,715 ಕ್ಯೂಸೆಕ್ ಹಾಗೂ ಹೊರಹರಿವು 391 ಕ್ಯೂಸೆಕ್ ಇದೆ.
ಲಿಂಗನಮಕ್ಕಿ ಜಲಾಶಯದ ಒಟ್ಟು ಸಾಮರ್ಥ್ಯ 151.75 ಟಿಎಂಸಿ, ಇಂದಿನ ಮಟ್ಟ 35.41 ಟಿಎಂಸಿ ಇದೆ. ಒಳಹರಿವು 29,044 ಕ್ಯೂಸೆಕ್ ಹಾಗೂ ಹೊರಹರಿವು 1570 ಕ್ಯೂಸೆಕ್ ಇದೆ. ಸೂಪಾ ಜಲಾಶಯದ ಒಟ್ಟು ಸಾಮರ್ಥ್ಯ 145.33 ಟಿಎಂಸಿ, ಇಂದಿನ ಮಟ್ಟ 42.81 ಟಿಎಂಸಿ ಇದೆ. ಒಳಹರಿವು 28,597 ಕ್ಯೂಸೆಕ್ ಹಾಗೂ ಹೊರಹರಿವು 500 ಕ್ಯೂಸೆಕ್ ಇದೆ. ಆಲಮಟ್ಟಿ ಡ್ಯಾಂನ ಒಟ್ಟು ಸಾಮರ್ಥ್ಯ 123.08 ಟಿಎಂಸಿ, ಇಂದಿನ ಮಟ್ಟ 59.39 ಟಿಎಂಸಿ ಇದೆ. ಒಳಹರಿವು 59,306 ಕ್ಯೂಸೆಕ್ ಹಾಗೂ ಹೊರಹರಿವು 430 ಕ್ಯೂಸೆಕ್ ಇದೆ. ಇದನ್ನೂ ಓದಿ: ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ
– ನನ್ನ ಅಪ್ಪಂಗೆ ಕರಾವಳಿ ಹುಡುಗಿನೇ ಇಷ್ಟ ಆಗಿದ್ದು
– ತುಳು ಚಿತ್ರರಂಗ ಬೆಂಗ್ಳೂರಿಗೆ ಬಂದಿದ್ದು ಖುಷಿ
ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನೂ ಇಷ್ಟಪಡಲ್ಲ. ಆದರೂ ನಿಮ್ಮ ಮನಸಿನಲ್ಲಿ ನನಗೆ ಜಾಗ ಕೊಟ್ಟಿದ್ದೀರಿ ಎಂದು ನಟ ಕಿಚ್ಚ ಸುದೀಪ್ (Kichcha Sudeep) ಹೇಳಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿರೂಪಕರು ಆಗಿನಿಂದ ನಮ್ಮ ತುಳುನಾಡಿಗೆ, ನಮ್ಮ ತುಳುನಾಡಿಗೆ ಸ್ವಾಗತ ಅಂತ ನಮ್ಮನ್ನು ಹೊರಗಿನವರು ಅಂತ ಮಾಡ್ತಿದ್ದಾರೆ. ತುಳುನಾಡು ನಮ್ಮ ಕರ್ನಾಟಕದಲ್ಲಿದೆ, ಕರ್ನಾಟಕ ನಮ್ಮ ಹೃದಯದಲ್ಲಿದೆ ತಾನೇ. ಮತ್ತೆ ಮಾತ್ ಮಧ್ಯೆ ಹೆಳ್ತಾರೆ ನಾವು ಅರ್ಧ ಈ ಕಡೆಯವರು ಅಂತ ಎಂದು ಕಿಚಾಯಿಸಿದರು. ಇದನ್ನೂ ಓದಿ: ಟ್ರೋಲಿಗರ ವಿರುದ್ಧ ಸಿಡಿದೆದ್ದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ- ಸೈಬರ್ ಠಾಣೆಗೆ ಸುಷ್ಮಾ ವೀರ್ ದೂರು
ನನ್ನ ಅಪ್ಪಂಗೆ ಕರ್ನಾಟಕದ ಕರಾವಳಿ ಹುಡುಗಿನೇ ಇಷ್ಟ ಆಗಿದ್ದು. ಕರಾವಳಿ ಜನ ತುಂಬ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನು ಇಷ್ಟಪಡಲ್ಲ, ಅದ್ರು ನಿಮ್ಮ ಮನಸ್ಸಿನಲ್ಲಿ ನಂಗೆ ಜಾಗ ಕೊಟ್ಟಿದ್ದೀರಿ. ನಾನು ಗೌರವ ಪಡೆಯಲು ಬಂದಿಲ್ಲ. ನಿಮ್ಮ ಪ್ರೀತಿಗೆ ಬಂದಿದ್ದೇನೆ. ನನ್ನ ತಾಯಿ ಕರಾವಳಿಯವರು. ಅವರು ಚೆನ್ನಾಗಿ ತುಳು ಮಾತಾಡ್ತಾರೆ. ನನಗೆ ತುಳು ಅಷ್ಟೊಂದು ಬರಲ್ಲ ಎಂದರು.
ಕನ್ನಡ ಚಿತ್ರರಂಗಕ್ಕೆ ಕರಾವಳಿಗರು ಬಂದು ಕನ್ನಡ ಯಾವುದು ತುಳು ಯಾವುದು ಗೊತ್ತಾಗ್ತಾ ಇಲ್ಲ. ತುಳು ಚಿತ್ರರಂಗ ಬೆಂಗಳೂರಿಗೆ ಬಂದದ್ದು ತುಂಬಾ ಖುಷಿಯಾಗಿದೆ. ಯಕ್ಷಗಾನ ಕಲೆ ಎದುರು ನಾವು ಇನ್ನೂ ಚಿಕ್ಕವರು. ಪಟ್ಲ ಫೌಂಡೇಷನ್ ದೊಡ್ಡ ಸಾಧನೆ ಮಾಡಿದೆ. 8 ವರ್ಷದಲ್ಲಿ 11 ಕೋಟಿ ಮೊತ್ತ ಬಡವರಿಗೆ ಸಹಾಯ ಮಾಡಿದ್ದಾರೆ. ಯಕ್ಷಗಾನ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾಧನೆ ಅಪಾರವಾದ್ದು ಎಂದು ಕಿಚ್ಚ ಸುದೀಪ್ ತಿಳಿಸಿದರು.