Tag: karavali film

  • ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ಗುರುದತ್‌ ಗಾಣಿಗ ನಿರ್ದೇಶನದ ‘ಜುಗಾರಿ ಕ್ರಾಸ್’ ಸಿನಿಮಾ ಅನೌನ್ಸ್- ಕುತೂಹಲ ಹೆಚ್ಚಿಸಿದ ಫಸ್ಟ್ ಲುಕ್

    ‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ (Poornachandra Tejaswi) ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ.

    ಓದುಗರ ನೆಚ್ಚಿನ ಶ್ರೇಷ್ಠ ಕಾದಂಬರಿ ‘ಜುಗಾರಿ ಕ್ರಾಸ್’ ಇದೀಗ ಸಿನಿಮಾವಾಗುತ್ತಿದೆ. ಬೆಳ್ಳಿಪರದೆಯ ಮೇಲೆ ತೇಜಸ್ವಿಯವರ ಜುಗಾರಿ ಕ್ರಾಸ್ ರಾರಾಜಿಸಲು ಸಿದ್ಧವಾಗುತ್ತಿದೆ. ಅಂದಹಾಗೆ, ಈ ಕಾದಂಬರಿಯನ್ನು ತೆರೆಯ ಮೇಲೆ ತರುವ ಸಾಹಸಕ್ಕೆ ಮುಂದಾಗಿದ್ದಾರೆ ‘ಕರಾವಳಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ. ಇಂದು ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾ ಅನೌನ್ಸ್ ಮಾಡಿ ಬಿಗ್ ಸರ್ಪ್ರೈಸ್ ನೀಡಿದ್ದಾರೆ ನಿರ್ದೇಶಕರು. ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಹೆರಿಗೆ ಆಸ್ಪತ್ರೆಗೆ ಅಡ್ಮಿಟ್ ಆದ ದೀಪಿಕಾ ಪಡುಕೋಣೆ

    ‘ಜುಗಾರಿ ಕ್ರಾಸ್’ (Jugari Cross) ಕಾದಂಬರಿಯನ್ನು ಸಿನಿಮಾ ಮಾಡಬೇಕೆಂದು ಕನಸು ಕಂಡವರು ಅನೇಕರು. ಸ್ಯಾಂಡಲ್‌ವುಡ್‌ನ ದೊಡ್ಡ ದೊಡ್ಡ ನಿರ್ದೇಶಕರು, ಕಲಾವಿದರು ಪ್ರಯತ್ನ ಪಟ್ಟಿದ್ದರು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕೊನೆಗೂ ಕಾಲ ಕೂಡಿ ಬಂದಿದೆ. ಜುಗಾರಿ ಕ್ರಾಸ್ ಕಾಂದಬರಿಯನ್ನು ಸಿನಿಮಾ ರೂಪದಲ್ಲಿ ಕಣ್ತುಂಬಿಕೊಳ್ಳುವ ಸಮಯ ಬಂದಿದೆ. ಇನ್ನು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ. ಜುಗಾರಿ ಕ್ರಾಸ್ ನಲ್ಲಿ ಬರುವ ಪಾತ್ರಗಳಿಗೆ ಯಾರೆಲ್ಲ ಜೀವ ತುಂಬಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸುಪ್ರಸಿದ್ಧ ಕಾದಂಬರಿಯನ್ನು ತೆರೆ ಮೇಲೆ ತರುವುದೆ ಅತೀ ದೊಡ್ಡ ಜವಾಬ್ದಾರಿ. ಹಾಗಾಗಿ ಈ ಶ್ರೇಷ್ಠ ಕಾದಂಬರಿಯ ಸಿನಿಮಾದಲ್ಲಿ ಹೊಸ ಕಲಾವಿದರು ಕಾಣಿಸಿಕೊಳ್ಳುತ್ತಾರಾ ಅಥವಾ ಸ್ಟಾರ್ ನಟರು ಬಣ್ಣ ಹಚ್ಚುತ್ತಾರಾ ಕಾದುನೋಡಬೇಕು.

    ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಕ್ಯಾಮೆರಾ ವರ್ಕ್ ಇರಲಿದೆ. ಇನ್ನು ತಾಂತ್ರಿಕ ವರ್ಗ, ಉಳಿದ ಎಲ್ಲಾ ಕಲಾವಿದರ ಬಗ್ಗೆ ಸಂಪೂರ್ಣ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ. ‘ಜುಗಾರಿ ಕ್ರಾಸ್’ ಸಿನಿಮಾಗುತ್ತಿದೆ ಎನ್ನುವ ಸುದ್ದಿ ಕೇಳಿಯೇ ತೇಜಸ್ವಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಇನ್ನೂ ಸಿನಿಮಾ ಹೇಗೆ ಮೂಡಿ ಬರಲಿದೆ ಎಂದು ಕುತೂಹಲ, ನಿರೀಕ್ಷೆ, ಕಾತರ ಎಲ್ಲರಲ್ಲೂ ಕಾಯುತ್ತಿದ್ದಾರೆ.

  • ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

    ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

    ಮಿತ್ರ (Mithra) ಅಂದರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ. ಕಾಮಿಡಿ, ಎಮೋಷನ್ ಹೀಗೆ ಎಲ್ಲಾ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಮಲಯಾಳಂ ‘ಪಡಕ್ಕಳಂ’ ಚಿತ್ರಕ್ಕೆ ಚಾಲನೆ ನೀಡಿದ ಕೆ.ಆರ್.ಜಿ.ಸ್ಟುಡಿಯೋಸ್

    ಆದರೆ ಈಗ ನಟ ಮಿತ್ರ ಅವರ ಖದರ್ ಬದಲಾಗಿದೆ. ಲುಕ್ ಬೇರೆಯದ್ದೇ ರೀತಿ ಇದೆ. ಯೆಸ್, ಮಿತ್ರ‌ ಅವರು ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ (Karavali Film) ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡರು. ಒಂದು ಸಿನಿಮಾಗಾಗಿ ಮಾಡಿಕೊಂಡ ಲುಕ್ ಈಗ ಮಿತ್ರ ಅವರ ಕೆರಿಯರ್‌ನಲ್ಲಿ ಟರ್ನಿಂಗ್ ಪಾಯಿಂಟ್ ಕೊಡ್ತಿದೆ.

    ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ ಆಗಿ ಮಿಂಚ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್‌ವುಡ್‌ನ ಖಡಕ್ ವಿಲನ್ ಆಗಲಿದ್ದಾರೆ. ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀತಿ ಪಾತ್ರಗಳು ಹುಡುಕಿ ಬರುತ್ತಿವೆಯಂತೆ. ಸದ್ಯ ಅದಕ್ಕಾಗಿ ಒಂದು ಸ್ಟೈಲೀಶ್ ವಿಲನ್ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ ಮಿತ್ರ.

    ಸದ್ಯ ಮಿತ್ರ ಅವರು ಮಾಡಿಸಿರೋ ಫೋಟೋಶೂಟ್ ಫೋಟೋಗಳನ್ನ ನೋಡ್ತಿದ್ರೆ ವಾವ್ಹ್ ಮಿತ್ರ ಅವರು ಹೀಗೂ ಕಾಣ್ತಾರಾ ಅಂತ ಅನ್ನಿಸೋದು ಗ್ಯಾರೆಂಟಿ. ವಿಲನ್ ಲುಕ್ ನಲ್ಲಿ ಸಾಕಷ್ಟು ವಿಭಿನ್ನ ಶೇಡ್ ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಈ ಫೋಟೋಶೂಟ್ ಮಾಡಿರೋದು ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್.

    ಮಿತ್ರ ಅವರ ಈ ಲುಕ್ ಬರೀ ಲುಕ್ ಆಗಿಯೇ ಉಳಿದಿಲ್ಲ. ‘ಕರಾವಳಿ’ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಮಿತ್ರ ಖಡಕ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ಅದರ ಜೊತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ. ಕಲಾವಿದ ಆದವರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಅನ್ನೋದನ್ನ ಮಿತ್ರ ಅವರು ಫಾಲೋ ಮಾಡಿದಂತಿದೆ. ಸದ್ಯ ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್‌ನಲ್ಲಿ ಮಿತ್ರ ಸೂಪರ್ ಆಗಿ ಮಿಂಚ್ತಿದ್ದಾರೆ.

  • ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬಕ್ಕೆ ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್

    ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬಕ್ಕೆ ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್

    ‘ಕರಾವಳಿ’ (Karavali) ಸ್ಯಾಂಡಲ್‌ವುಡ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ ಫಸ್ಟ್ ಲುಕ್ ಮತ್ತು ಪೋಸ್ಟರ್ ಮೂಲಕ ಬಾರಿ ಕುತೂಹಲ ಮೂಡಿಸಿದೆ. ಮತ್ತೊಂದು ಭರ್ಜರಿ ಪೋಸ್ಟ್ ಅನಾವರಣವಾಗಿದೆ.

    ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಈ ಪೋಸ್ಟರ್ ಕರಾವಳಿ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾದಿಂದ ಈಗಾಗಲೇ ರಿಲೀಸ್ ಆಗಿರುವ ಪ್ರಜ್ವಲ್ ಅವರ ಎರಡು ಲುಕ್ ವೈರಲ್ ಆಗಿದೆ. ಇದೀಗ ಜನ್ಮದಿನದ ಪ್ರಯುಕ್ತ ಬಿಡುಗಡೆಯಾಗಿರುವ ಮತ್ತೊಂದು ಲುಕ್ ಗಮನ ಸೆಳೆಯುತ್ತದೆ.

    ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಯಕ್ಷಗಾನ ಕಂಬಳ, ಮಹಿಷಾಸುರ ಹೀಗೆ ವೆರೈಟಿ ಗೆಟಪ್‌ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಪ್ರಜ್ವಲ್ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಕೊಡಿಸುವವನಾ? ಡೈನಮಿಕ್ ಪ್ರಿನ್ಸ್ ಪಾತ್ರ ಯಾವುದು ಎನ್ನುವ ಕುತೂಹಲ ಹೆಚ್ಚಾಗಿದೆ. ಪ್ರಜ್ವಲ್ ಅವರ ವೆರೈಟಿ ಗೆಟಪ್‌ನ ಪೋಸ್ಟರ್‌ಗಳನ್ನು ನೋಡುತ್ತಿದ್ದರೆ ತ್ರಿ ಪಾತ್ರದಲ್ಲಿ ನಟಿಸುತ್ತಿದ್ದಾರಾ ಎನ್ನುವ ಅನುಮಾನ ಕೂಡ ಮೂಡಿಸುವಂತಿದೆ.

    ಬರ್ತಡೇ ಪ್ರಯುಕ್ತ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ಪ್ರಜ್ವಲ್ ಕೋಣಗಳ ಮಧ್ಯೆ ಒಬ್ಬಂಟಿಯಾಗಿ ಕೊಟ್ಟಿಗೆಯಲ್ಲಿ ಕುಳಿತಿದ್ದಾರೆ. ಗಂಭೀರ ನೋಟ ಬೀರುತ್ತಾ ಕುಳಿತಿರುವ ಪ್ರಜ್ವಲ್ ಅವರ ಸಿಂಪಲ್ ವ್ಯಕ್ತಿತ್ವದ ಲುಕ್ ಆಕರ್ಷಕವಾಗಿದೆ. ಇದನ್ನೂ ಓದಿ:ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ, ಸತ್ತವನಂತೂ ಒಳ್ಳೆಯವನಲ್ಲ: ವಿ.ಮನೋಹರ್

    ‘ಕರಾವಳಿ’ ಈಗಾಗಲೇ 60ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ನಟಿ ಸಂಪದಾ (Sampaada) ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ನಿರ್ಮಾಣವಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.

  • ‘ಕರಾವಳಿ’ಯಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಮಿತ್ರ

    ‘ಕರಾವಳಿ’ಯಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಮಿತ್ರ

    ಹಾಸ್ಯನಟ ಮಿತ್ರ (Actor Mithra) ಇದೀಗ ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ಮೋಡಿ ಮಾಡುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು (ಮೇ 12) ಬಹುನಿರೀಕ್ಷಿತ ‘ಕರಾವಳಿ’ (Karavali Film) ಚಿತ್ರದಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಮಿತ್ರ ನಟಿಸಿರುವ ಪಾತ್ರದ ಲುಕ್ ಕೂಡ ರಿವೀಲ್ ಆಗಿದೆ.

     

    View this post on Instagram

     

    A post shared by Shinu Mithra (@actor_mithra_official)


    ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಒಂದು ವಿಶೇಷ ಗೆಟಪ್‌ನಲ್ಲಿ ಮಿತ್ರ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ‘ಮಾಬ್ಲಾ’ ಎಂಬ ಪಾತ್ರಕ್ಕಾಗಿ ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿದ್ದಾರೆ. ಕೊಂಚ ತೂಕ ಕೂಡ ಇಳಿಸಿಕೊಂಡು ಹೊಸ ಶೇಡ್‌ನಲ್ಲಿ ನಟ ಮಿತ್ರ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಎರಡು ಎಮ್ಮೆಗಳನ್ನು ಹಿಡಿದುಕೊಂಡು ಖಡಕ್ ಆಗಿ ಲುಕ್ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳಿದ್ದಾರೆ.

     

    View this post on Instagram

     

    A post shared by Shinu Mithra (@actor_mithra_official)

    ಅಂದಹಾಗೆ, ಕೋಮಲ್ ನಟನೆಯ ‘ಯಲಾಕುನ್ನಿ’ ಚಿತ್ರದಲ್ಲಿ ಸುಗಂಧರಾಜ ಎನ್ನುವ ಕಾಮಿಡಿ ಕಮ್ ನೆಗೆಟಿವ್ ರೋಲ್‌ನಲ್ಲಿ ಮಿತ್ರ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಅಮ್ಮನಿಗಾಗಿ ಹೆಸರು ಬದಲಿಸಿಕೊಂಡ ‘ಅಗ್ನಿಸಾಕ್ಷಿ’ ಖ್ಯಾತಿಯ ವಿಜಯ್ ಸೂರ್ಯ

    ಈ ಹಿಂದೆ ಪಾಪ ಪಾಂಡು, ಸಿಲ್ಲಿ ಲಲ್ಲಿ ಸೀರಿಯಲ್‌ನಲ್ಲಿ ಮಿತ್ರ ನಟಿಸಿದ್ದರು. ಬಳಿಕ ಶ್ರೀರಾಮ್, ಪಂಚರಂಗಿ, ಹಲವು ಸಿನಿಮಾದಲ್ಲಿ ನಟಿಸಿದ್ದರು. 2018ರಲ್ಲಿ ತೆರೆಕಂಡ ‘ರಾಗಾ’ ಚಿತ್ರದಲ್ಲಿ ಹೀರೋ ಆಗಿ, ನಿರ್ಮಾಪಕನಾಗಿ ಗುರುತಿಸಿಕೊಂಡರು. ಮಿತ್ರಗೆ ಮಲಯಾಳಂ ನಟಿ ಭಾಮಾ ನಾಯಕಿಯಾಗಿದ್ದರು.