Tag: Karawara

  • ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!

    ನಾಯಿ ಹಿಡಿಯಲು ಹೋಗಿ ಬೋನಿನಲ್ಲಿ ಲಾಕ್ ಆಯ್ತು ಚಿರತೆ!

    ಕಾರವಾರ: ಆಹಾರ ಅರಸಿ ಬಂದಿದ್ದ ಚಿರತೆ ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬೋನಿನಲ್ಲೇ ಬಂಧಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ.

    ರಾತ್ರಿ ನಾಯಿ ಹಿಡಿಯಲು ಬಂದಿದ್ದ ಚಿರತೆಯನ್ನು ನಾಯಿ ಬೋನಿನೊಳಗೆ ಹೋದದ್ದನ್ನ ಗಮನಿಸಿದ ಮನೆಯ ಮಾಲೀಕರು ತಕ್ಷಣ ಬೋನನ್ನು ಲಾಕ್ ಮಾಡಿದ್ದಾರೆ. ಅದೃಷ್ಟವಶಾತ್ ಬೋನಿನಲ್ಲಿ ಇದ್ದ ನಾಯಿ ತಪ್ಪಿಸಿಕೊಂಡಿದ್ದು, ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ: ಎಸ್‍ಡಿಪಿಐ

    ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಚಿರತೆ ರಕ್ಷಣೆ ಮಾಡಲು ಕಾರ್ಯಾಚರಣೆ ಪ್ರಾರಂಭಿಸಿದ್ದು, ಬೋನಿನ ಸಮೇತ ಚಿರತೆಯನ್ನು ಸೆರೆಹಿಡಿದು ಕುಮಟಾದ ಸ್ಥಳೀಯ ಕಾಡಿನಲ್ಲಿ ಬಿಟ್ಟಿದ್ದಾರೆ. ಇದನ್ನೂ ಓದಿ:  ಔರದ್‍ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

     

  • ಆಭರಣ ಸಮೇತ ಗಣಪತಿಯನ್ನು ವಿಸರ್ಜಿಸಿ ಪೇಚಿಗೆ ಸಿಲುಕಿದ ಗ್ರಾಮಸ್ಥರು

    ಆಭರಣ ಸಮೇತ ಗಣಪತಿಯನ್ನು ವಿಸರ್ಜಿಸಿ ಪೇಚಿಗೆ ಸಿಲುಕಿದ ಗ್ರಾಮಸ್ಥರು

    ಕಾರವಾರ: ಚಿನ್ನದ ಉಂಗುರ ಹಾಗೂ ಬೆಳ್ಳಿ ಆಭರಣಗಳನ್ನು ಗಣಪತಿಯೊಂದಿಗೆ ಕೆರೆಯಲ್ಲಿ ವಿಸರ್ಜಿಸಿ, ಪೇಚಿಗೆ ಸಿಲುಕಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋನರಹಳ್ಳಿಯಲ್ಲಿ ನಡೆದಿದೆ.

    ಇಂದು ವಿದ್ಯುಕ್ತವಾಗಿ ಗಣಪತಿಗೆ ಪೂಜೆ ಸಲ್ಲಿಸಿ ಸಮೀಪದ ಕೆರೆಗೆ ತಂದ ಗೊನೆಹಳ್ಳಿ ಗ್ರಾಮಸ್ಥರು, ದೇವರಿಗೆ ಹಾಕಿದ್ದ ಉಂಗುರ, ಬೆಳ್ಳಿ ಸರಪಳಿಯನ್ನು ತೆಗೆಯುವುದನ್ನು ಮರೆತಿದ್ದರು. ಈ ವೇಳೆ ಗಣಪತಿಯನ್ನು ಕೆರೆಯ ನಡುಭಾಗದಲ್ಲಿ ವಿಸರ್ಜಿಸಲಾಗಿತ್ತು. ನಂತರ ಮರಳಿ ಬಂದಾಗ ಗಣೇಶನಿಗೆ ಹಾಕಿದ್ದ ಆಭರಣಗಳು ಕಾಣದಾದಾಗ ತಾವು ಮಾಡಿದ ತಪ್ಪು ಅರಿವಾಗಿದೆ.  ಇದನ್ನೂ ಓದಿ: ಗಣೇಶ ಹಬ್ಬದ ಸಂಭ್ರಮದಲ್ಲಿ ಕುಚುಕು ಗೆಳೆಯರು

    ಕೆಲವರು ನೀರಿನಲ್ಲಿ ಮುಳಗಿ ಹುಡುಕುವ ಪ್ರಯತ್ನ ಮಾಡಿದರೂ ಕೈ ಚಲ್ಲಿ ಕೂರುವಂತಾಯಿತು. ನಂತರ ದೇವರಭಾವಿ ಗ್ರಾಮದ ಯುವಕ ವಿನಯ್ ನಾಯಕ್ ಎಂಬುವವರು ಸ್ಕೂಬಾ ಡೈ ಗೆ ಬಳಸುವ ಪರಿಕರ ಬಳಸಿ ನೀರಿನಲ್ಲಿ ಮುಳಗಿ ಕೊನೆಗೂ ಗಣಪತಿಯೊಂದಿಗೆ ವಿಸರ್ಜಿಸಿದ ಆಭರಣಗಳನ್ನು ತೆಗೆದುಕೊಟ್ಟಿದ್ದಾರೆ. ಇದನ್ನೂ ಓದಿ:ನಿಧಿ ಆಸೆಗೆ ಕಿಡಿಗೇಡಿಗಳಿಂದ ಪ್ರಾಚೀನ ಶಿವನ ದೇವಾಲಯ ಧ್ವಂಸ

  • ಕರಾವಳಿ ಅಭಿವೃದ್ಧಿಗೆ 14 ಕೋಟಿ ರೂ. ಆ್ಯಕ್ಷನ್ ಪ್ಲಾನ್: ಮಟ್ಟಾರು ರತ್ನಾಕರ

    ಕರಾವಳಿ ಅಭಿವೃದ್ಧಿಗೆ 14 ಕೋಟಿ ರೂ. ಆ್ಯಕ್ಷನ್ ಪ್ಲಾನ್: ಮಟ್ಟಾರು ರತ್ನಾಕರ

    -ಕರಾವಳಿ ಭಾಗದಲ್ಲಿ ಪಿಂಕ್ ಸಿಟಿ ಯೋಜನೆಗೆ ರೂಪುರೇಷೆ ಸಿದ್ದ

    ಕಾರವಾರ: ಕರಾವಳಿ ಭಾಗದಲ್ಲಿ ಅಭಿವೃದ್ಧಿಗಾಗಿ 14 ಕೋಟಿ ರೂಪಾಯಿ ಆ್ಯಕ್ಷನ್ ಪ್ಲಾನ್ ಮಾಡಲಾಗಿದೆ. ಸೋಲಾರ್ ಯಂತ್ರಗಳ ಮೂಲಕ ಆಧುನಿಕ ತಂತ್ರಜ್ಞಾನದಲ್ಲಿ ಮೀನು ಒಣಗಿಸುವ ತರಬೇತಿಯನ್ನು ಕಾರವಾರ ಮೀನುಗಾರರಿಗೆ ನೀಡಲಾಗುವುದು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದ್ದಾರೆ.

    ಕಾರವಾರದ ಪ್ರವಾಸಿ ಮಂದಿರದಲ್ಲಿ ಗುರುವಾರ ಪ್ರಾಧಿಕಾರದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಟ್ಟಾರು ರತ್ನಾಕರ ಅವರು, ಕೇಂದ್ರ ಸರ್ಕಾರದ ಆತ್ಮ ನಿರ್ಬರ ಕಾರ್ಯಕ್ರಮದಡಿ ಸ್ವ ಉದ್ಯೋಗ ತರಬೇತಿ ನೀಡುತ್ತಿದ್ದೇವೆ. ಅದರಲ್ಲಿ ಒಣ ಮೀನು ತಯಾರಿಸುವ ಆಧುನಿಕ ವಿಧಾನದ ಬಗ್ಗೆ ಮಂಗಳೂರು, ಉಡುಪಿಯಲ್ಲಿ ಈಗಾಗಲೇ ಯಶಸ್ವಿ ತರಬೇತಿ ನೀಡಲಾಗಿದೆ. ಈಗ ಸಾಂಪ್ರದಾಯಿಕ ಪದ್ಧತಿಯಲ್ಲಿ ಒಣಗಿಸುವ ಮೀನು ಬೇಗ ಹಾಳಾಗುತ್ತದೆ. ಆಧುನಿಕ ತಂತ್ರಜ್ಞಾನದಲ್ಲಿ ಸೋಲಾರ್ ಮೂಲಕ ಮೀನು ಸಂಸ್ಕರಿಸಿದಲ್ಲಿ ವಿದೇಶಕ್ಕೆ ರಫ್ತು ಮಾಡಲೂ ಅವಕಾಶವಿದೆ ಎಂದರು.

    ಕಾರವಾರ ಮಾಜಾಳಿಯಿಂದ ಕೇರಳ, ಕಾಸರಕೋಡಿನವರೆಗೆ 370 ಕಿಮೀ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯ ರಸ್ತೆ ಮಾಡುವ ಎರಡು ವರ್ಷದ ಯೋಜನೆಗೆ ಮರು ಜೀವ ಬಂದಿದೆ. 1,200 ಕೋಟಿ ರೂಪಾಯಿ ವೆಚ್ಚದ ಡಿಪಿಆರ್ ಸಿದ್ಧಮಾಡಲಾಗುತ್ತದೆ. ಹೆದ್ದಾರಿ ನಡುವೆ “ಪಿಂಕ್‍ಸಿಟಿ” ಎಂಬ ಗಿಡ ಬೆಳೆಯಲು ಯೋಜನೆ ರೂಪಿಸಿದ್ದೇವೆ. ಇದು ಹೆದ್ದಾರಿಯ ಸೌಂದರ್ಯ ಹೆಚ್ಚಿಸುವ ಜೊತೆ ಆದಾಯವೂ ಬರಲಿದೆ. ಗಿಡದಲ್ಲಿ ಹಳದಿ ಹೂವು ಬಿಡಲಿದ್ದು, ಮೆಣಸಿನ ಕಾಳಿನ ಸ್ವರೂಪದ ಕಾಳು ಬಿಡಲಿದೆ. ಅದನ್ನು ಕೊಯ್ದು ಆದಾಯ ಗಳಿಸಬಹುದು. ಯೋಜನೆಗೆ ಹೆದ್ದಾರಿ ಪ್ರಾಧಿಕಾರದ ಅನುಮತಿ ಬೇಕಿದೆ ಎಂದು ಮಾಹಿತಿ ಹಂಚಿಕೊಂಡರು.

    ಮಚ್ಚಳ್ಳಿ ರಸ್ತೆ ಅಭಿವೃದ್ಧಿ
    ಈ ಹಿಂದೆ ಪಬ್ಲಿಕ್ ಟಿವಿ ವರದಿ ಮಾಡಿದ ಮಚ್ಚಳ್ಳಿ ಗ್ರಾಮದ ಸಮಸ್ಯೆ ಕುರಿತು ಪ್ರತಿಕ್ರಿಯಿಸಿ, ಅಮದಳ್ಳಿ ಗ್ರಾಪಂ ವ್ಯಾಪ್ತಿಯ ಮಚ್ಚಳ್ಳಿ ಕುಗ್ರಾಮಕ್ಕೆ ಅರಣ್ಯ ಇಲಾಖೆ ಅನುಮತಿ ಪಡೆದು ರಸ್ತೆ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ರತ್ನಾಕರ ಹೆಗ್ಡೆ ಭರವಸೆ ನೀಡಿದರು. ಇದನ್ನೂ ಓದಿ: ಕಡಲ ಅಬ್ಬರ, ಏಂಡಿ ಬಲೆಗೆ ಸಿಕ್ತು ರಾಶಿ-ರಾಶಿ ಮೀನು

    ಗ್ರಾಮದ ರಸ್ತೆ ಪರಿಶೀಲನೆ ನಡೆಸಿದ್ದೇನೆ. ಗ್ರಾಮಕ್ಕೆ ತೆರಳುವ 7 ಕಿಮೀ ಕಚ್ಚಾ ರಸ್ತೆಯಲ್ಲಿ 3 ಕಿಮೀ ರಸ್ತೆಯನ್ನು ಶಾಸಕಿ ರೂಪಾಲಿ ನಾಯ್ಕ ಮಾಡಿಸಿದ್ದಾರೆ. ಇನ್ನು 4 ಕಿಮೀ ರಸ್ತೆಗೆ ಲೋಕೋಪಯೋಗಿ ಇಲಾಖೆಯು 14 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಿದೆ. ಅನುದಾನ ತಂದರೂ ಅರಣ್ಯ ಇಲಾಖೆಯ ಆಕ್ಷೇಪ ಇರುವುದರಿಂದ ಅರಣ್ಯ ಅನುಮತಿ ಪಡೆದು ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಈಗಾಗಲೇ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯಾಗಿ ಮಾರ್ಪಡಿಸುವ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ, ಸದಸ್ಯರಾದ ವಿಜಯಕುಮಾರ ನಾಯ್ಕ, ಮಂಜುನಾಥ ಜನ್ನು, ಕಾರ್ಯದರ್ಶಿ ಪ್ರದೀಪ ಡಿಸೋಜಾ, ಜಿಪಂ ಸಿಇಒ ಪ್ರಿಯಾಂಕಾ ಎಂ ಪಾಲ್ಗೊಂಡಿದ್ದರು.

  • ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ – ವಾಹನ ಸಮೇತ ಓರ್ವನ ಬಂಧನ

    ಪಡಿತರ ಅಕ್ಕಿ ಕಳ್ಳ ಸಾಗಾಣಿಕೆ – ವಾಹನ ಸಮೇತ ಓರ್ವನ ಬಂಧನ

    ಕಾರವಾರ: ಹಾವೇರಿಯಿಂದ ಶಿರಸಿ ಮೂಲಕ ಮಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 26 ಟನ್ ಪಡಿತರ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಚೆಕ್ ಪೋಸ್ಟ್ ಬಳಿ ಗ್ರಾಮೀಣ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪತ್ತೆಯಾಗಿದ್ದು ಹೇಗೆ?
    ಗ್ರಾಮೀಣ ಠಾಣೆ ಪೊಲೀಸರು ಕಂಟೇನರ್ ವಾಹನ ತಪಾಸಣೆ ನಡೆಸಿದ ವೇಳೆ ದಾಖಲೆ ಇಲ್ಲದ ಅಕ್ಕಿ ದಾಸ್ತಾನು ಪತ್ತೆಯಾಗಿದೆ. ವಿಚಾರಣೆ ನಡೆಸಿದ ಬಳಿಕ ಇವು ಪಡಿತರ ವಿತರಣೆಗೆ ಬಳಕೆಯಾಗಬೇಕಿದ್ದ ದಾಸ್ತಾನು ಎಂಬುದು ದೃಢಪಟ್ಟಿದೆ. ಇವುಗಳ ಒಟ್ಟು ಮೌಲ್ಯ 5.85 ಲಕ್ಷ ರೂಪಾಯಿಯಾಗಿದ್ದು, ಸಾಗಾಟಕ್ಕೆ ಬಳಸಿದ್ದ ವಾಹನ ಸಮೇತ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

    ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ ಸಂಗಪ್ಪ ಅಸೂಟಿ ಎಂಬಾತನನ್ನು ಬಂಧಿಸಲಾಗಿದೆ. ಅಕ್ಕಿ ದಾಸ್ತಾನು ಮಾಡಿದ್ದ ಹಾವೇರಿಯ ಸಚಿನ್ ಕಬ್ಬೂರ ಹಾಗೂ ಅಕ್ಕಿ ಖರೀದಿಸಲು ಯತ್ನಿಸಿದ್ದ ಮಂಗಳೂರಿನ ಗಣೇಶ ಕಂಪನಿಯ ವ್ಯವಸ್ಥಾಪಕ ಬ್ರಿಜೇಶ್ ಶೆಟ್ಟಿ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

    ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

    ಕಾರವಾರ: ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ಇಂದು ನಡೆದಿದೆ.

    ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ಸಂಚರಿಸಿದೆ.

    ಬೆಳಂಬೆಳಗ್ಗೆ ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ.

    ದಾಂಡೇಲಿಯ ಕಾಳಿ ನದಿಯಲ್ಲಿ ಸಾವಿರಾರು ಮೊಸಳೆಗಳು ವಾಸವಾಗಿವೆ. ಆದರೆ ನದಿಯನ್ನು ಬಿಟ್ಟು ಗ್ರಾಮಕ್ಕೆ ಇದೇ ಮೊದಲ ಬಾರಿ ಮೊಸಳೆ ಆಗಮಿಸಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.

    ಈ ಹಿಂದೆ ನದಿ ಭಾಗದಲ್ಲಿ ಮೊಸಳೆಗಳು ಮನುಷ್ಯನ ಮೇಲೆ ಎರಗಿ ಸಾವುಗಳಾದ ಘಟನೆ ಸಹ ಈ ಭಾಗದಲ್ಲಿ ನಡೆದಿದೆ. ದಾಂಡೇಲಿಯ ಕಾಗದ ಕಾರ್ಖಾನೆ ಬಳಿ ನದಿ ತಡದಲ್ಲಿ ಅತೀ ಹೆಚ್ಚು ಮೊಸಳೆಗಳು ವಾಸಿಸುತ್ತಿವೆ. ಕಾರ್ಖಾನೆಯ ತ್ಯಾಜ್ಯಗಳೇ ಇವುಗಳಿಗೆ ಆಹಾರವಾಗಿದ್ದು ಲಾಕ್‍ಡೌನ್‍ನಿಂದ ಜನರ ಓಡಾಟ ಸಹ ಈ ಪ್ರದೇಶಗಳಲ್ಲಿ ಇಳಿಮುಖವಾಗಿತ್ತು. ಹೀಗಾಗಿ ಆಹಾರ ಅರಸಿ ಮೊಸಳೆಗಳು ನದಿ ದಡದಿಂದ ಸುತ್ತಮುತ್ತ ಓಡಾಟ ನಡೆಸುತಿದ್ದು, ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ರಾಮಮಂದಿರ ಅಡಿಪಾಯ ಕಾಮಗಾರಿ ವೀಕ್ಷಿಸಿದ ಪೇಜಾವರಶ್ರೀ

  • ಗಾಂಜಾ ಮಾರಾಟ – ಮೂವರು ಆರೋಪಿಗಳ ಬಂಧನ

    ಗಾಂಜಾ ಮಾರಾಟ – ಮೂವರು ಆರೋಪಿಗಳ ಬಂಧನ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಗಾಂಜಾ ಮಾರಾಟ ಮಾಡುತಿದ್ದವರನ್ನು ಶಿರಸಿ ನಗರ ಠಾಣೆ ಸಿಪಿಐ ರಾಮಚಂದ್ರ ನಾಯಕ್ ದಾಳಿ ನಡೆಸಿ ಮೂವರನ್ನು ಮಾಲು ಸಮೇತ ಬಂಧಿಸಿದ್ದಾರೆ.

    ಶಿರಸಿ ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವಾಗ ದಾಳಿ ನಡೆಸಿದ ಸಿಪಿಐ ನೇತೃತ್ವದ ತಂಡ ಅಯ್ಯಪ್ಪ ನಗರದ ಮಂಜುನಾಥ್ (27),ಹರೀಶ್ (26), ವೀರೇಶ್ ಕಾರ್ತೀಕ್ ಸಿರ್ಸಿಕರ್ (21) ಬಂಧಿಸಿದ್ದು, ಆರೋಪಿತರಿಂದ 228 ಗ್ರಾಂ ಗಾಂಜಾ, 1,250 ನಗದು, ಮೂರು ಮೊಬೈಲ್, ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

    ಆರೋಪಿ ಮಂಜುನಾಥ್ ವಿರುದ್ಧ ಈ ಹಿಂದೆ ಶಿರಸಿ, ಯಲ್ಲಾಪುರ, ಸಿದ್ದಾಪುರ ಠಾಣೆಯಲ್ಲಿ 4 ಗಾಂಜಾ ಪ್ರಕರಣ, ಎರಡು ಸುಲಿಗೆ ಪ್ರಕರಣ ಹಾಗೂ ಒಂದು ದೊಂಬಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ಧ ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮೊಬೈಲಿನಲ್ಲಿ ಮಾತನಾಡಬೇಡ – ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ

    ಮೊಬೈಲಿನಲ್ಲಿ ಮಾತನಾಡಬೇಡ – ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ

    ಕಾರವಾರ : ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆ ಪ್ರಯತ್ನದ ವೇಳೆ ಪತ್ನಿ  ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

    ಸರಸ್ವತಿ ಸುತಾರ ಪತಿಯ ಕೊಲೆಗೆ ಸುಪಾರಿ ನೀಡಿದ ಪತ್ನಿ. ಈಕೆ ದಾಂಡೇಲಿಯ ಅಂಕುಷ ರಾಮಾ ಸುತಾರ ಎಂಬುವವನನ್ನು ಆರು ವರ್ಷದ ಹಿಂದೆ ಮದುವೆಯಾಗಿದ್ದು, ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮನೆಯಲ್ಲಿ ಸಮಯ ಕಳೆಯಲು ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು.

    ಹೆಂಡತಿಯ ಈ ವರ್ತನೆಯಿಂದ ಬೇಸತ್ತಿದ್ದ ಪತಿ ಅಂಕುಷರಾಮಾ ಪತ್ನಿಗೆ ಮೊಬೈಲ್ ನಲ್ಲಿ ಹರಟದಂತೆ ಬುದ್ದಿ ಹೇಳಿದ್ದನು. ಇದರಿಂದ ಕೋಪಗೊಂಡ ಈಕೆ ತನ್ನ ಪರಿಚಯ ಹೊಂದಿದ್ದ ಗಣೇಶ ಶಾಂತರಾಂ ಎಂಬುವವನಿಗೆ 30 ಸಾವಿರ ಸುಪಾರಿ ನೀಡಿ ಹತ್ಯೆ ಮಾಡುವಂತೆ ತಿಳಿಸಿದ್ದಳು.

    ಗಣೇಶ ಶಾಂತರಾಂ ಇಬ್ಬರು ಅಪ್ರಾಪ್ತ ಬಾಲಕರೊಂದಿಗೆ ಇಂದು ಮನೆಗೆ ಆಗಮಿಸಿದ್ದು ಮನೆಯಲ್ಲಿದ್ದ ಅಂಕುಷ ರಾಮಾ ಸುತಾರ ನನ್ನು ಕತ್ತು ಹಿಸುಕಿ ಕೊಲೆ ಮಾಡಲು ಎತ್ನಿಸಿದ್ದು, ಈತ ಕೂಗಿಕೊಂಡಾಗ ಪಕ್ಕದ ಮನೆಯಲ್ಲಿ ಇದ್ದ ಸಹೋದರರು ಓಡಿ ಬಂದಿದ್ದಾರೆ. ಈ ವೇಳೆ ಹತ್ಯೆ ಮಾಡಲು ಬಂದಿದ್ದ ಇಬ್ಬರು ಅಪ್ರಾಪ್ತರು ಓಡಿಹೋಗಿದ್ದು, ಸುಪಾರಿ ತೆಗೆದುಕೊಂಡ ಗಣೇಶ್ ಶಾಂತರಾಂ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಫೇಸ್‍ಬುಕ್ ಲೈವ್ ವೇಳೆ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಕಿರುತೆರೆ ನಟ

    ಘಟನೆ ಸಂಬಂಧ ದಾಂಡೇಲಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಸ್ವತಿ ಸುತಾರ ಮತ್ತು ಬೆಳಗಾವಿ ಮೂಲದ ಗಣೇಶ ಶಾಂತರಾಂ ಪಾಟೀಲ್ ನನ್ನು ಬಂಧಿಸಿದ್ದಾರೆ.

  • ಸೆಲ್ಫಿ ಕ್ರೇಜ್ – ಸಮುದ್ರದ ಪಾಲಾದ ಯುವಕ

    ಸೆಲ್ಫಿ ಕ್ರೇಜ್ – ಸಮುದ್ರದ ಪಾಲಾದ ಯುವಕ

    ಕಾರವಾರ: ಲಾಕ್ ಡೌನ್ ಇರುವುದರಿಂದ ಸಮಯ ಕಳೆಯಲು ಅಕ್ಕನ ಮನೆಗೆ ಬಂದ ಯುವಕ ಸಮುದ್ರದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.

    ಕೊಪ್ಪಳ ಮೂಲದ ಅಭಿಷೇಕ್ ಹನುಮಂತ ಭೋಯಿ (25) ಮೃತ ಯುವಕ. ಕೊರೊನಾ ಲಾಕ್‍ಡೌನ್ ಇರುವುದರಿಂದ ತನ್ನೂರಿಂದ ಕುಮಟಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಕನ ಮನೆಗೆ ಬಂದಿದ್ದ ಅಭಿಷೇಕ್, ಕುಮಟಾ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ಸಮುದ್ರದ ಭಾಗಕ್ಕೆ ತೆರಳಿದ್ದರು. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಈ ಬಾರಿಯೂ 77 ಗ್ರಾಮಗಳಿಗೆ ಪ್ರವಾಹ, ಭೂ ಕುಸಿತದ ಭೀತಿ- ಸೋಮಣ್ಣ ಆತಂಕ

    ಸೆಲ್ಫಿ ಕ್ರೇಜ್ ನಲ್ಲಿ ಕಾಲುಜಾರಿ ಸಮುದ್ರದಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾರೆ. ಇದೀಗ ಕುಮಟಾದ ಅಳವೆ ದಂಡೆಯಲ್ಲಿ ಶವ ಪತ್ತೆಯಾಗಿದೆ. ಈ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ಯಾಂಡಲ್‍ವುಡ್ ಹಿರಿಯ ನಟ ಸುರೇಶ್ ಚಂದ್ರ ಕೊರೊನಾಗೆ ಬಲಿ

     

  • 8 ವರ್ಷವಾದ್ರೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ, ಇದು ಮಾನವ ಹಕ್ಕುಗಳ ಉಲ್ಲಂಘನೆ – ಭಟ್ಕಳದ ಸಿದ್ದಿಬಪ್ಪನಿಂದ ಜಾಮೀನಿಗೆ ಅರ್ಜಿ

    8 ವರ್ಷವಾದ್ರೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ, ಇದು ಮಾನವ ಹಕ್ಕುಗಳ ಉಲ್ಲಂಘನೆ – ಭಟ್ಕಳದ ಸಿದ್ದಿಬಪ್ಪನಿಂದ ಜಾಮೀನಿಗೆ ಅರ್ಜಿ

    – ಉಗ್ರರ ಜೊತೆ ಸಂಪರ್ಕ ಆರೋಪ
    – ದುಬೈಯಲ್ಲಿ ಎನ್‍ಐಎಯಿಂದ ಬಂಧನ

    ಕಾರವಾರ: ತನ್ನ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಇನ್ನೂ ಆರೋಪಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಭಟ್ಕಳದ ಅಬ್ದುಲ್ ವಾಹಿದ್ ಸಿದ್ದಿಬಪ್ಪ ಜಾಮೀನು ಮಂಜೂರು ಕೋರಿ ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ.

    ಉಗ್ರಗಾಮಿ ಚಟುವಟಿಕೆಯ ಆರೋಪದಡಿ 2012ರಲ್ಲಿ ದುಬೈನಲ್ಲಿ ವಾಹಿದ್ ಸಿದ್ದಿಬಪ್ಪನನ್ನು ಎನ್‍ಐಎ ಬಂಧಿಸಿದೆ. ಕಳೆದ ಎಂಟು ವರ್ಷಗಳಿಂದ 100ಕ್ಕೂ ಹೆಚ್ಚು ಬಾರಿ ಕೋರ್ಟ್ ವಿಚಾರಣೆ ನಡೆದಿದ್ದರೂ ಇನ್ನೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ. ಹೀಗಾಗಿ ಜಾಮೀನು ಅರ್ಜಿ ಸಲ್ಲಿಸಿದ್ದು ಮೇ 6 ರಂದು ವಿಚಾರಣೆಗೆ ಬರಲಿದೆ.

    ಆರೋಪ ಏನು?
    2012ರ ಸೆಪ್ಟೆಂಬರ್ 10 ರಂದು ವಿದ್ವಂಸಕ ಕೃತ್ಯ, ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಚಟುವಟಿಕೆ, ಭಯೋತ್ಪಾದಕ ರಿಯಾಜ್ ಭಟ್ಕಳ್ ನೊಂದಿಗೆ ಸಂಪರ್ಕ, ಹವಾಲ ಹಣ ವಹಿವಾಟು, ಬೆಂಗಳೂರು, ಮುಂಬೈ ಬಾಂಬ್ ಸ್ಫೋಟ ಸೇರಿದಂತೆ ಹಲವು ಆರೋಪದಲ್ಲಿ ಈತನನ್ನು ಬಂಧಿಸಿ ಕೇಸ್ ದಾಖಲಿಸಿತ್ತು.

    ಮೊದಲ ಹಂತದಲ್ಲಿ ಐದು ಜನರ ವಿರುದ್ಧ ತನಿಖೆ ನಡೆಸಿದ ಎನ್‍ಐಎ 4 ಜನರ ಮೇಲೆ ಸಪ್ಲಿಮೆಂಟ್ ಚಾರ್ಜ್‍ಶೀಟ್ ಹಾಕಿತು. ನಂತರ 20 ಜನರ ಮೇಲೆ ಚಾರ್ಜ್ ಶೀಟ್ ಹಾಕಿತ್ತು. ನಂತರ ಮೂರನೇ ಸಪ್ಲಿಮೆಂಟರಿ ಚಾರ್ಜ್ ಶೀಟ್ ಅನ್ನು 2016ರ ನವೆಂಬರ್ 15 ರಂದು ವಾಹಿದ್ ಸಿದ್ದಿಬಪ್ಪ ವಿರುದ್ಧ ಸಲ್ಲಿಕೆ ಮಾಡಿ ಮೂರನೇ ಆರೋಪಿಯಾಗಿ ಸೇರಿಸಿತು.

    2013ರ ಡಿಸೆಂಬರ್ 28 ರಂದು ಮೊದಲು ಜಾರ್ಜ್ ಶೀಟ್ ಸಲ್ಲಿಸಿದ ಪ್ರಕರಣದ ವಿಚಾರಣೆ ನಡೆದಿತ್ತು. ಆದರೆ ಎನ್‍ಐಎ ತನಿಖಾ ತಂಡ ಈತನ ವಿರುದ್ಧ ಸಾಕ್ಷಿ ನೀಡಲು 100 ದಿನಾಂಕಗಳನ್ನು ತೆಗೆದುಕೊಂಡರೂ ಯಾವುದೇ ಆರೋಪ ಪಟ್ಟಿ ಸಲ್ಲಿಕೆ ಮಾಡಿರಲಿಲ್ಲ.

    ಈ ನಡುವೆ ಸಿದ್ದಿಬಪ್ಪ ಎರಡು ಬಾರಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಎರಡೂ ಬಾರಿಯೂ ಅರ್ಜಿ ತಿರಸ್ಕೃತಗೊಂಡಿತ್ತು. ಈಗ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿಸಿದ್ದು, ಮೇ 6 ರಂದು ವಿಚಾರಣೆಗೆ ಬರಲಿದೆ.

    ದೆಹಲಿಯ ತಿಹಾರ್ ಜೈಲಿನಲ್ಲಿ ಎಂಟು ವರ್ಷಗಳಿಂದ ಇದ್ದೇನೆ. ವಿರುದ್ಧ ಯಾವುದೇ ಆರೋಪ ಪಟ್ಟಿ ಸಲ್ಲಿಕೆಯಾಗಿಲ್ಲ. ತನಿಖೆ ನಡೆಸುವಲ್ಲಿ ವಿಳಂಬ ಮಾಡಲಾಗುತ್ತಿದ್ದು, ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದಷ್ಟು ಬೇಗ ತನಿಖೆ ನಡೆಸಿ ತೀರ್ಪು ನೀಡಿ ಇಲ್ಲವೇ ನನಗೆ ಮಧ್ಯಂತರ ಜಾಮೀನು ನೀಡುವಂತೆ ಅಬ್ದುಲ್ ವಾಹಿದ್ ಸಿದ್ದಿಬಪ್ಪ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ.

  • ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ

    ಕರಾವಳಿಗೆ ಹೆಚ್ಚಿನ ಭದ್ರತೆ – ಕೋಸ್ಟ್‌ ಗಾರ್ಡ್‌ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ

    ಕಾರವಾರ: ಪಾಕಿಸ್ತಾನದಿಂದ ಉಗ್ರರು ಸಮುದ್ರ ಮಾರ್ಗ ಮೂಲಕ ಬಂದು ಮುಂಬೈ ಮೇಲೆ ದಾಳಿ ನಡೆಸಿದ ಬಳಿಕ ಭಾರತೀಯ ಕೋಸ್ಟ್ ಗಾರ್ಡ್ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಾ ಬಂದಿದ್ದು, ಈಗ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳು(ಎಫ್‍ಪಿವಿ) ಸೇರ್ಪಡೆಯಾಗಿದೆ.

    ಭದ್ರತೆ, ಸಮುದ್ರಮಾರ್ಗದ ಕಳ್ಳಸಾಗಾಣಿಕೆ ತಡೆಯುವವ ಹಾಗೂ ಸಮುದ್ರದಲ್ಲಿ ತೊಂದರೆಗೆ ಸಿಲುಕುವ ಮೀನುಗಾರರ ರಕ್ಷಣೆಗೆ ಭಾರತೀಯ ಕೋಸ್ಟ್ ಗಾರ್ಡ್ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಕಾರವಾರ ವಿಭಾಗಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

    ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿಎಸ್) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ.

    ಕಾರವಾರದಲ್ಲಿ ಐಸಿಜಿಎಸ್ 2009ರ ನವೆಂಬರ್ 4 ರಿಂದ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ ಸೆಪ್ಟರ್‌ ಬೋಟ್‍ಗಳು ಮತ್ತು 2 ಇಂಟರ್‌ ಸೆಪ್ಟರ್‌ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು.

    ಇಂದಿನಿಂದ ಐಸಿಜಿಎಸ್ ಸಾವಿತ್ರಿಬಾಯಿ ಪುಲೆ ಮತ್ತು ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಎಂಬ ಎರಡು ಫಾಸ್ಟ್ ಪ್ಯಾಟ್ರೋಲ್ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ. ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಹಡಗುಗಳು ಗೋವಾ ಶಿಪ್‍ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಫಾಸ್ಟ್ ಪ್ಯಾಟ್ರೋಲ್ ಹಡಗುಗಳಾಗಿವೆ.

    ಹಡಗಿನ ವಿಶೇಷತೆ ಏನು?
    ಈ ಹಡಗುಗಳು ಗಂಟೆಗೆ 35 ನಾಟ್ಸ್ ವೇಗವನ್ನು ಕ್ರಮಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದು, ರಕ್ಷಣೆಗೆ 30 ಎಂ.ಎಂಸಿ.ಆರ್.ಎನ್ ಗನ್ ಹೊಂದಿದೆ. ಇವುಗಳನ್ನು ಉನ್ನತೀಕರಿಸಿ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ.

    ಇದು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಸಮರ್ಥವಾಗಿದೆ. ಎಫ್‍ಪಿವಿಗಳು ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಹಾಗೂ ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿ ಕಾರ್ಯನಿರ್ವಹಿಸಲಿದೆ.

    ಈ ಹಿಂದೆ ಈ ಎರಡೂ ಹಡಗುಗಳು ಹಲವಾರು ಎಸ್.ಎ.ಆರ್ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ.

    ಕದಂಬ ನೌಕಾ ನೆಲೆ, ಕೈಗಾ ಅಣು ಸ್ಥಾವರದಂತಹ ಮಹತ್ತರ ಯೋಜನೆಗಳ ಮೇಲೆ ಸಮುದ್ರ ಮಾರ್ಗದಿಂದ ದಾಳಿ ಮಾಡದಂತೆ ಕರಾವಳಿ ಭಾಗದಲ್ಲಿ ಭದ್ರತೆಗೆ ನೀಡಲಿದ್ದು ಕಾರವಾರ ಭಾಗದ ಕೋಸ್ಟ್ ಗಾರ್ಡ್‌ ವಿಭಾಗಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.