Tag: Karnal

  • ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಚಂಡೀಗಢ: ಗೂಡ್ಸ್‌ರೈಲು (Goods Train) ಹಳಿತಪ್ಪಿದ ಪರಿಣಾಮ 8 ಕಂಟೈನರ್‌ಗಳು (Container) ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಹರಿಯಾಣದ (Haryana)  ಕರ್ನಾಲ್ (Karnal) ಜಿಲ್ಲೆಯಲ್ಲಿ ನಡೆದಿದೆ.

    ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿತ್ತು ಎಂದು ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದ ಎಂಟು ಕಂಟೈನರ್‌ಗಳು ಹಳಿಗೆ ಬಿದ್ದಿವೆ. ಘಟನೆಗೆ ಕಾರಣಗಳನ್ನು ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್‌ನ ತಾರೋರಿ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಕಂಟೈನರ್ ಹಳಿಗೆ ಬಿದ್ದ ಪರಿಣಾಮ ಅಂಬಾಲಾ-ದೆಹಲಿ ರೈಲ್ವೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಘಟನೆಯಿಂದ ಈ ಮಾರ್ಗವಾಗಿ ಚಲಿಸುವ ರೈಲುಗಳನ್ನು ನಿಲ್ಲಿಸಲಾಗಿದೆ. ಮುಂಜಾನೆ 4:40ರ ವೇಳೆಗೆ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

  • ರೈಸ್ ಮಿಲ್ ಕಟ್ಟಡ ಕುಸಿತ – ನಾಲ್ವರು ಸಾವು, 20 ಮಂದಿಗೆ ಗಾಯ

    ರೈಸ್ ಮಿಲ್ ಕಟ್ಟಡ ಕುಸಿತ – ನಾಲ್ವರು ಸಾವು, 20 ಮಂದಿಗೆ ಗಾಯ

    ಚಂಡೀಗಢ: ಮೂರು ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದು (Collapse) ನಾಲ್ವರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ಕರ್ನಾಲ್‌ನಲ್ಲಿ ನಡೆದಿದೆ.

    ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ವರದಿಗಳು ತಿಳಿಸಿವೆ. ಕಟ್ಟಡ ಕುಸಿದ ವೇಳೆ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಉಳಿದ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ 

    ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಘಟನೆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗುವುದು. ಅಲ್ಲದೇ ರೈಸ್ ಮಿಲ್ ಮಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಶ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ