Tag: Karnan

  • `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    ಬೆಂಗಳೂರು: ʻದಿ ಕೇರಳ ಸ್ಟೋರಿʼ (The Kerala Story) ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್‌ ಹಾಸನ್‌ (Kamal Haasan) ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Chetan Kumar) ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗಳ ವಿರುದ್ಧ ಇದ್ದೇನೆ’ ಎಂದಿದ್ದಾರೆ. ನಾವು ರಾಜಕೀಯವಾಗಿ/ಸೈದ್ಧಾಂತಿಕವಾಗಿ ವಿರೋಧಿಸುವುದನ್ನು ಪ್ರಾಪಗಾಂಡ ಎಂದು ಕರೆಯುತ್ತೇವೆ. ‘ಕರ್ಣನ್’ ಮತ್ತು ‘ಜೈ ಭೀಮ್’ ಅನ್ನು ಜಾತಿ ವಿರೋಧಿ ಅಥವಾ ಪೊಲೀಸ್ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? ಬಲವಾದ ಪ್ರಜಾಪ್ರಭುತ್ವಕ್ಕಾಗಿ, ವಿಭಿನ್ನ ಸಿದ್ಧಾಂತಗಳು ಕೂಡ ಅಸ್ತಿತ್ವದಲ್ಲಿ ಇರಬೇಕು/ ಇರುತ್ತವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ‘ದಿ ಕೇರಳ ಸ್ಟೋರಿ’ ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು.

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಯಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

    ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ಧನುಷ್ (Dhanush) ಒಂದರ ಮೇಲೊಂದು ಅಪರೂಪದ ಸಿನಿಮಾ ಕೈಗೆತ್ತಿಕೊಳ್ಳುತ್ತಿದ್ದಾರೆ. ವಿಭಿನ್ನ ಪಾತ್ರ, ಹೊಸತನದ ಕಥೆಯ ಜೊತೆಗೆ ಪ್ರತಿಭಾವಂತ ನಿರ್ದೇಶಕರಿಗೆ ಕಾಲ್ ಶೀಟ್ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರ ನಟನೆಯ ಚಿತ್ರಗಳು ಬಾಕ್ಸ್ ಆಫೀಸ್ ತುಂಬುತ್ತಿವೆ. ಅಲ್ಲದೇ, ವಿಮರ್ಶೆಕರ ಮೆಚ್ಚುಗೆಯನ್ನೂ ಪಡೆಯುತ್ತಿವೆ.

    ಈ ಹಿಂದೆ ಧನುಷ್ ಮತ್ತು ನಿರ್ದೇಶಕ ಮಾರಿ ಸೆಲ್ವರಾಜ್ (Mari Selvaraj) ‘ಕರ್ಣನ್’ (Karnan) ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅಂದಿನಿಂದಲೇ ಮತ್ತೆ ಈ ಜೋಡಿ ಸಿನಿಮಾ ಮಾಡಬೇಕು ಎನ್ನುವ ಕೂಗು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬಂದಿತ್ತು. ಆದರೆ, ಧನುಷ್ ಬೇರೆ ನಿರ್ದೇಶಕರಿಗೆ ಕಾಲ್ ಶೀಟ್ ನೀಡಿದ್ದರು. ಇದೀಗ ಮತ್ತೆ ಮಾರಿ ಜೊತೆ ಕೆಲಸ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಹೊಸ ತಿರುವು

    ಈ ಕುರಿತು ಟ್ವೀಟ್ ಮಾಡಿರುವ ಧನುಷ್, ‘ಹಲವು ಕಾರಣಗಳಿಂದಾಗಿ ಈ ಸಿನಿಮಾ ವಿಶೇಷವಾಗಿದೆ ಮತ್ತು ಪ್ರತಿಷ್ಠೆಯಿಂದ ಕೂಡಿರುತ್ತದೆ. ಓಂ ನಮಃ ಶಿವಾಯ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮಾರಿ ಸೆಲ್ವರಾಜ್ ಜೊತೆ ಇರುವ ಫೋಟೋವನ್ನೂ ಧನುಷ್ ಹಂಚಿಕೊಂಡಿದ್ದಾರೆ. ಇದು ಧನುಷ್ ನಿರ್ಮಾಣದ 15ನೇ ಚಿತ್ರವಾಗಿದ್ದು, ತಮ್ಮದೇ ಬ್ಯಾನರ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದಾಗಿತೂ ಹಂಚಿಕೊಂಡಿದ್ದಾರೆ.

    ಧನುಷ್ ಸಿನಿಮಾಗಳು ಕೇವಲ ಬಾಕ್ಸ್ ಆಫೀಸ್ ಮಾತ್ರ ತುಂಬಿಸುತ್ತಿಲ್ಲ. ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನೂ ನೀಡುತ್ತಿವೆ. ಇವರ ಬ್ಯಾನರ್ ನಿಂದ ಬಂದ ಬಹುತೇಕ ಚಿತ್ರಗಳು ಉತ್ತಮ ಕಥೆಯನ್ನೇ ಹೊತ್ತು ತಂದಿವೆ. ಜೊತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಪಡೆದಿವೆ.