Tag: Karnaraka Govt

  • ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನ ಮಾರಾಟಕ್ಕಿಟ್ಟಿದೆ – ಬೊಮ್ಮಾಯಿ ಕೆಂಡಾಮಂಡಲ!

    ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನ ಮಾರಾಟಕ್ಕಿಟ್ಟಿದೆ – ಬೊಮ್ಮಾಯಿ ಕೆಂಡಾಮಂಡಲ!

    ಗದಗ: ಕಾಂಗ್ರೆಸ್‌ ಸರ್ಕಾರ (Karnaraka Govt) ದಿವಾಳಿಯಾಗಿದೆ, ಆದ್ದರಿಂದ ಕರ್ನಾಟಕವನ್ನೇ ಮಾರಾಟಕ್ಕಿಟ್ಟಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಗುಡುಗಿದ್ದಾರೆ.

    ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ (BJP Workers) ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಕಾಂಗ್ರೆಸ್‌ನಲ್ಲಿ (Congress ಕೇವಲ ಅಧಿಕಾರದ ದಾಹ ಬಿಟ್ಟರೆ ಬೇರೆ ಏನೂ ಬೇಕಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ:‌ ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

    ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗ್ತಿದೆ. ದಿನನಿತ್ಯ ಜನ ನೋಡ್ತಿದ್ದಾರೆ. ಯಾರು ಸಿಎಂ ಆಗಬೇಕು? ಯಾರು, ಎಷ್ಟು ಜನ ಡಿಸಿಎಂ ಆಗಬೇಕು? ಯಾವ ಜಾತಿಯವರು ಡಿಸಿಎಂ ಆಗಬೇಕು? ಎಂಬ ಕಚ್ಚಾಟ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಶೂನ್ಯ ಅಂತ ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಕರ್ನಾಟಕವನ್ನು ಕಾಂಗ್ರೆಸ್ ಮಾರಾಟಕ್ಕಿಟ್ಟಿದೆ. ಈ ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ವಿರುದ್ಧ ಜನರ ಆಂದೋಲನ ಪ್ರಾರಂಭ ಮಾಡುವ ಕಾಲವೂ ಸನಿಹವಾಗಿದೆ. ಮುಂಬರುವ ದಿನಗಳಲ್ಲಿ ಜನಪರ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಇದೇ ವೇಳೆ ವಿಧಾನಸಭೆ ಚುನಾವಣೆ ಬಗ್ಗೆ ಮತ್ತೆ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆನೆ, ಈಗಲೂ ಹೇಳ್ತೀನಿ. 1 ವರ್ಷದಲ್ಲಿ ವಿಧಾನಸಭೆ ಚುನಾವಣೆ ಬಂದೇ ಬರುತ್ತೆ. ಗದಗನಲ್ಲಿ ಮತ್ತೊಮ್ಮೆ 4 ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕಮಲದ ಬಾವುಟ ಹಾರಿಸುವ ಸಂಕಲ್ಪ ಮಾಡೋಣ ಎಂದರಲ್ಲದೇ ಎಂಪಿ ಚುನಾವಣೆ ಸ್ಯಾಂಪಲ್, ಫಿಕ್ಟರ್ ಅಬಿ ಬಾಕಿ ಹೈ ಎಂದು ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

    ಈ ಸಂದರ್ಭದಲ್ಲಿ ಮಾಜಿ ಸಚಿವ ನರಗುಂದ ಶಾಸಕ ಸಿ.ಸಿ ಪಾಟೀಲ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು‌ ಕುರುಡಗಿ, ಎಮ್.ಎಸ್ ಕರಿಗೌಡ್ರ, ಮೋಹನ್ ಮಾಳಶೆಟ್ಟಿ, ಶ್ರೀಪತಿ ಉಡುಪಿ ಸೇರಿದಂತೆ ಅನೇಕ‌ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

  • ರೈತರ ಬೃಹತ್‌ ಪ್ರತಿಭಟನೆ – ಮೈಮೇಲೆ ಸಗಣಿ ಬಳಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ

    ರೈತರ ಬೃಹತ್‌ ಪ್ರತಿಭಟನೆ – ಮೈಮೇಲೆ ಸಗಣಿ ಬಳಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ

    – ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರ ಆಗ್ರಹ

    ಬೆಂಗಳೂರು: ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು, ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರಿಂದು ಬೃಹತ್‌ ಪ್ರತಿಭಟನೆ (Farmers Protest) ನಡೆಸಿದರು.

    ನಗರದ ಕನಕಪುರ ರಸ್ತೆಯಿಂದ ಪಾದಯಾತ್ರೆ ಆರಂಭಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದರು. ಪಾದಯಾತ್ರೆಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (Santosh Hegde) ಚಾಲನೆ ನೀಡಿದರು. ಕೆಲ ರೈತರು ಮೈಮೇಲೆ ಸಗಣಿ ಬಳಿದುಕೊಂಡು ಆಕ್ರೋಶ ಹೊರಹಾಕಿದರು. ಆದ್ರೆ ಮಾರ್ಗಮಧ್ಯೆ ರೈತರನ್ನು ತಡೆದ ಪೊಲೀಸರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಸ್ಥಳದಲ್ಲೇ ಇರುವಂತೆ ತಡೆದರು. ಬ್ಯಾರಿಕೇಡ್ ಹಾಕಿ ಸೋಮನಹಳ್ಳಿ ಗೇಟ್ ಬಳಿಯೇ ರೈತರನ್ನು ತಡೆದರು. ಪ್ರತಿಭಟನಾ ಮಾರ್ಗವನ್ನು ಬಂದ್‌ ಮಾಡಿದರು. ಈ ವೇಳೆ ಪೊಲೀಸರು (Bengaluru Police) – ರೈತರ ನಡುವೆ ತಳ್ಳಾಟ, ನೂಕಾಟಗಳು ನಡೆಯಿತು. ಇದರಿಂದ ತೃಪ್ತರಾಗದ ರೈತರು ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಂದ ಸಾಧ್ಯವಿಲ್ಲ. ಕೃಷಿ ಸಚಿವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    ರೈತರ ಬೇಡಿಕೆಗಳೇನು?
    1) ಬೆಂಗಳೂರು ದಕ್ಷಿಣ ತಾಲ್ಲೂಕಿನ 30 ಗ್ರಾಮಗಳಲ್ಲಿ ದಶಕಗಳಿಂದ ಉಳುಮೆ ಬಂದಿರುವ ಸಾಗುವಳಿ ಜಮೀನುಗಳನ್ನು ಪೋಡಿ, ದುರಸ್ತಿ ಮಾಡಿಕೊಟ್ಟು ರೈತರಿಗೆ ತಮ್ಮ ಜಮೀನುಗಳ ಮೇಲೆ ಸಂಪೂರ್ಣ ಹಕ್ಕನ್ನು ಕೊಡಬೇಕು.
    2) ಸೋಮನಹಳ್ಳಿ ಬಳಿ ನಿರ್ಮಿಸುತ್ತಿರುವ ಟೋಲ್‌ನಲ್ಲಿ ಸ್ಥಳೀಯ ವಾಹನ ಸವಾರರಿಗೆ ಸರ್ವಿಸ್ ರಸ್ತೆ ನೀಡಬೇಕು ಅಥವಾ ಟೋಲನ್ನು ಕಗ್ಗಲೀಪುರ ಬೈಪಾಸ್ ಗೆ ಸ್ಥಳಾಂತರಿಸಬೇಕು
    3) ಕಗ್ಗಲಿಪುರ, ಸಾಲುಹುಣಸೆ ಉದಿಪಾಳ್ಯ ಬೈಪಾಸ್ ರಸ್ತೆ ನಿರ್ಮಿಸಿ ಸ್ಥಳೀಯರಿಗೆ ಉಂಟಾಗುತ್ತಿರುವ ವಾಹನ ದಟ್ಟಣೆ ಸಮಸ್ಯೆಯನ್ನು ತಪ್ಪಿಸುವುದು
    4) ಅರಣ್ಯ ಇಲಾಖೆ ರೈತರನ್ನು ಒಕ್ಕಲೆಸಬೇಕೆಂದು ನೀಡುತ್ತಿರುವ ಕಿರುಕುಳದಿಂದ ಮುಕ್ತಿ ಕೂಡಿಸಬೇಕು
    5) 45 ವರ್ಷಗಳಿಂದ ಸಾಕಮ್ಮ ಬಡಾವಣೆಯಲ್ಲಿ ವಾಸಿಸುತ್ತಿರುವ ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು.
    6) ಪಟ್ಟರೆಡ್ಡಿ ಪಾಳ್ಯ ಗ್ರಾಮಕ್ಕೆ ಪರ್ಯಾಯ ರಸ್ತೆ ನಿರ್ಮಿಸಬೇಕು.
    7) 7 ತಿಂಗಳಿನಿಂದ ತಡೆ ಹಿಡಿದಿರುವ ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
    8) ಅಗತ್ಯವಿರುವ ಕಡೆಗಳಲ್ಲಿ ಸೇತುವೆ ರಸ್ತೆಗಳನ್ನು ನಿರ್ಮಿಸಿ ಕೊಡಬೇಕು.
    9) ಹೆಚ್ಚಿನ ಮಳೆಯಾದಾಗ ನದಿಗಳಿಗೆ ಹರಿದು ಹೋಗುತ್ತಿರುವ ಅಪಾರ ಪ್ರಮಾಣದ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚಿಸಬೇಕು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED