Tag: Karnartaka

  • ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

    ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

    -ಕಾಲ್ತುಳಿತ ವಿಷಯಾಂತರಕ್ಕೆ ಜಾತಿಗಣತಿ ಪ್ರಸ್ತಾಪ ಎಂದ ವಿಜಯೇಂದ್ರ

    ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಆಕ್ಷೇಪಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಹಳ ದೊಡ್ಡ ಮನಸ್ಸು ಮಾಡಿ, 16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯದ ಪರವಾಗಿ ವಿಚಾರಮಂಡನೆ ಮಾಡಿದ್ದು, ಅವರಿಗೆ ಅಭಿನಂದನೆಗಳು. ಕೇಂದ್ರದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳಿಗೆ ಮುಜುಗರವೇ, ಇವರು ರಾಜ್ಯದ ಮುಖ್ಯಮಂತ್ರಿಯೇ ಅಥವಾ ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳೇ. ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿ ಹಣಕಾಸಿನ ವಿಚಾರ ಪ್ರಸ್ತಾಪ ಮಾಡಿ, ಸರಿಪಡಿಸಿ ಎಂದು ಹೇಳಿದ್ದಾರೆ ಎಂದರು.ಇದನ್ನೂ ಓದಿ:ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

    ದೆಹಲಿ (Delhi) ಸಭೆಯಲ್ಲಿ ಭಾಗವಹಿಸಿದ್ದು ಸ್ವಾಗತಾರ್ಹ. ಆದರೆ, ಮುಖ್ಯಮಂತ್ರಿಗಳನ್ನು ನೋಡಿದರೆ ಪಾಪ ಅನಿಸುತ್ತದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕ್ರೋಢೀಕರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಹಾಗಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕರ್ನಾಟಕವು 100 ರೂ. ಕೊಟ್ಟರೆ ಕೇವಲ 13 ರೂ. ಬರುತ್ತಿದೆ ಎಂದು ಅರ್ಧಸತ್ಯವನ್ನಷ್ಟೇ ಅವರು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

    ಬಂದ ಅನುದಾನ ರಾಜ್ಯದಲ್ಲಿ ಸದ್ಬಳಕೆ ಆಗುತ್ತಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ, ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಇದ್ಯಾವುದು ಸತ್ಯವಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

    ಜಾತಿಗಣತಿ ವಿಚಾರ- ಈಗ ಜ್ಞಾನೋದಯ:
    ನಮ್ಮ ಹೋರಾಟಗಳ ಪರಿಣಾಮವಾಗಿ ಸುಮಾರು 3 ತಿಂಗಳ ಹಿಂದೆ ರಾಜ್ಯ ಸರ್ಕಾರ
    ಕ್ಕೆ ಮುಜುಗರ ಆಗುತ್ತಿತ್ತು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕಾಂತರಾಜು ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದರು. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಹೇಳಿದರು. 4-5 ಕ್ಯಾಬಿನೆಟ್ ಸಭೆ ಆದರೂ ಅನುಷ್ಠಾನ ಆಗಲಿಲ್ಲ. 10 ವರ್ಷ ಕಳೆದಿದ್ದು, ಅಂಕಿಅಂಶಗಳು ಅವೈಜ್ಞಾನಿಕ, ಇದನ್ನು ತರಾತುರಿಯಲ್ಲಿ ಮಾಡಬಾರದು. ಹೊಸದಾಗಿ ಮಾಡಬೇಕಿದೆ ಎಂಬುವುದರ ಬಗ್ಗೆ ಎಲ್ಲವೂ ಚರ್ಚೆ ನಡೆದಿದೆ ಎಂದರು.

    ಇದರ ಕುರಿತು ಕಾಂಗ್ರೆಸ್ಸಿನ ಡಿಕೆಶಿ ಅವರು ಸೇರಿ ಸಚಿವರೂ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆ ಈಗ ಅವರಿಗೆ ಜ್ಞಾನೋದಯವಾಗಿದೆ. ಯಾವಾಗ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರೋ, ಈಗ ವಿಷಯಾಂತರ ಮಾಡಲು ಜಾತಿಗಣತಿ ವಿಷಯ ಪ್ರಸ್ತಾಪಿಸಿದ್ದಾರೆ. ಅಂತಿಮವಾಗಿ ಈ ವಿಷಯದಲ್ಲಿ ಇವರು ಏನೂ ಮಾಡಲು ಸಾಧ್ಯವಿಲ್ಲ. ಕೇಂದ್ರವು ಈಗಾಗಲೇ ಜನಗಣತಿ, ಜಾತಿ ಜನಗಣತಿ ಮಾಡುವುದಾಗಿ ಘೋಷಿಸಿದೆ. ಜಾತಿಗಣತಿಯು ರಾಜ್ಯ ಸರ್ಕಾರದ ಪರಿಮಿತಿಗೆ ಬರುತ್ತದೆಯೇ ಎಂಬ ಅನುಮಾನಗಳು ಹೆಚ್ಚಾಗಿವೆ. ಗೊಂದಲ ಸೃಷ್ಟಿಸಲು ಇದನ್ನು ಮಾಡುತ್ತಿದ್ದಾರೆ. ತಾರ್ಕಿಕ ಅಂತ್ಯಕ್ಕೆ ಒಯ್ಯುವ ಮನಸ್ಸು ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಹೇಳಿದರು.

    ಹಿಂದೂಗಳು ಟಾರ್ಗೆಟ್, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ:
    ಮೊನ್ನೆ ನಮ್ಮ ಪಕ್ಷದ ಮುಖಂಡರ ಜೊತೆಗೂಡಿ ದಕ್ಷಿಣ ಕನ್ನಡಕ್ಕೆ ಭೇಟಿ ಕೊಟ್ಟಿದ್ದೇವೆ. ಅಲ್ಲಿರುವ ಜಿಲ್ಲಾಧಿಕಾರಿಗಳು, ಕಮಿಷನರ್, ಎಸ್ಪಿಯವರನ್ನು ಭೇಟಿ ಮಾಡಿದ್ದೇವೆ. ಇದು ಕೋಮು ನಿಗ್ರಹ ದಳ ಅಲ್ಲ, ಹಿಂದೂಗಳನ್ನು ಟಾರ್ಗೆಟ್ ಮಾಡಿ, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ ಈ ದಳ ರಚನೆ ಹಿಂದಿದೆ ಎಂದು ಆರೋಪಿಸಿದರು. ಇದ್ಯಾವುದಕ್ಕೂ ನಾವು ಬಗ್ಗುವುದಿಲ್ಲ. ಈ ರೀತಿ ದಬ್ಬಾಳಿಕೆ ಕುತಂತ್ರವನ್ನು ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದ್ದು, ಅದನ್ನು ಎದುರಿಸುತ್ತೇವೆ ಎಂದರು.ಇದನ್ನೂ ಓದಿ: ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

  • ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಈ ಬಾರಿಯ ದಸರಾ (Dasara) ಸಂಭ್ರಮಕ್ಕೆ ಮಳೆ (Rain) ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ (Coastal Districts) ಭಾರೀ ಮಳೆಯಾಗಲಿದೆ.

    ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು

     

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

    ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

  • ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ಬೆಂಗಳೂರು: ಈಗ ಕರ್ನಾಟಕದ (Karnataka) ದೂರ ದೂರದ ಪ್ರದೇಶಗಳಲ್ಲಿಯೂ ರಿಲಯನ್ಸ್ ಜಿಯೋದ (Reliance Jio) ನೆಟ್‌ವರ್ಕ್‌ ಸಿಗುತ್ತಿದೆ.

    ಶಿವಮೊಗ್ಗದ ಗಾಜನೂರು, ಚಾಮರಾಜನಗರದ ಕೊಳ್ಳೇಗಾಲ, ಹುಗ್ಯಂನಲ್ಲಿ ಸಂಪರ್ಕ ದೊರೆಯುವಂತೆ ಮಾಡುವಲ್ಲಿ ಜಿಯೋ ಯಶಸ್ಸು ಕಂಡಿದೆ. ಇದಕ್ಕೂ ಮುನ್ನ ಈ ಪ್ರದೇಶಗಳಲ್ಲಿ ಸಂವಹನ ಮೂಲಸೌಕರ್ಯಕ್ಕೆ ಕೊರತೆ ಇತ್ತು.  ಇದನ್ನೂ ಓದಿ: ಗೂಗಲ್‌, ಆಪಲ್‌ಗೆ ಜಿಯೋ ಠಕ್ಕರ್‌ – ಕ್ಲೌಡ್‌ ಸ್ಟೋರೇಜ್‌ನಲ್ಲೂ ದರ ಸಮರ ಆರಂಭ?

    ಪರಿಸರ ಮತ್ತು ಭೌಗೋಳಿಕ ಸವಾಲುಗಳನ್ನು ದಾಟುವ ಮೂಲಕವಾಗಿ ಜಿಯೋ ತನ್ನ ದೃಢವಾದ 4ಜಿ ಮತ್ತು 5ಜಿ ನೆಟ್‌ವರ್ಕ್ ಅನ್ನು ರಾಜ್ಯದ್ಯಂತ ಹಳ್ಳಿ ಹಳ್ಳಿಗಳಿಗೆ ವಿಸ್ತರಿಸುತ್ತಿದೆ. ಈ ತಾಲೂಕುಗಳಲ್ಲಿ ಇರುವ ಅನೇಕ ಹಳ್ಳಿಗಳು (Village) ಈಗ ಜಿಯೋ ನೆಟ್‌ವರ್ಕ್‌ನಿಂದಾಗಿ (Jio Network) ಮಾತ್ರ ಪ್ರಯೋಜನ ಪಡೆಯುತ್ತಿವೆ.

     

    ಜಿಯೋ ಟವರ್‌ನಿಂದಾಗಿ ಮಕ್ಕಳು ನೆಟ್‌ವರ್ಕ್ ಸಂಪರ್ಕಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣ ಮಾಡುವ ಅಗತ್ಯವಿಲ್ಲ. ಯುವಜನರಿಗೆ ವರ್ಕ್ ಫ್ರಮ್ ಹೋಮ್ ಮಾಡುವುದಕ್ಕೆ ಅನುಕೂಲವಾಗಿದ್ದು, ಇದರಿಂದ ಅವಕಾಶಗಳು ತೆರೆದುಕೊಂಡಿವೆ.

    ಈ ಗ್ರಾಮದ ಜನರು ಜಿಯೋದ ಪ್ರೀಮಿಯಂ ಅಪ್ಲಿಕೇಷನ್‌ಗಳಾದ ಜಿಯೋಟಿವಿ ಮತ್ತು ಜಿಯೋ ಸಿನಿಮಾ  ಮೂಲಕ ಮನರಂಜನೆಯನ್ನು ಪಡೆಯಬಹುದಾಗಿದೆ.

     

  • ಮಹದಾಯಿ ಯೋಜನೆ ಅನುಷ್ಠಾನ – ಗೋವಾ ಸರ್ಕಾರದ ನಡೆಯ ಬಗ್ಗೆ ಗೊತ್ತಿಲ್ಲವೆಂದ ಸಿಎಂ

    ಮಹದಾಯಿ ಯೋಜನೆ ಅನುಷ್ಠಾನ – ಗೋವಾ ಸರ್ಕಾರದ ನಡೆಯ ಬಗ್ಗೆ ಗೊತ್ತಿಲ್ಲವೆಂದ ಸಿಎಂ

    ಹುಬ್ಬಳ್ಳಿ: ಮಹದಾಯಿ ಯೋಜನೆ (Mahadayi River Project) ಅನುಷ್ಠಾನ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೋತ್ತಿಲ್ಲ. ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇಲೆ ನ್ಯಾಯಾಧಿಕರಣ ರಚನೆಯಾಗಿದೆ. ಅದರ ಪರಿಶೀಲನೆ ಸಹ ಆಗಿ, ತೀರ್ಪು ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು (Hubbali) ಮಾತನಾಡಿದ ಅವರು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರಕ್ಕೆ 2016 ರಲ್ಲಿ ಸಮಗ್ರ ಯೋಜನಾ ವರದಿ (DPR) ನೀಡಲಾಗಿತ್ತು. ಸದ್ಯ ಡಿಪಿಆರ್‌ಗೂ ಅನುಮತಿ ಸಿಕ್ಕಿದೆ. ಕಾನೂನು (Law) ಹೋರಾಟವಾಗಿಯೇ ಇದೆಲ್ಲವೂ ನಡೆದಿದೆ ಎಂದು ಹೇಳಿದ್ದಾರೆ.

    ಎಚ್.ವಿಶ್ವನಾಥ್ (H Vishwanath) ಅವರ ಹೇಳಿಕೆಗೆ ನಾನು ಯಾವತ್ತೂ ಪ್ರತಿಕ್ರಿಯಿಸಿಲ್ಲ. ಅವರು ಪದೇ-ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು? – ಅಧ್ಯಯನಕ್ಕೆ ಸಮಿತಿ ರಚನೆ

    ಫೆಬ್ರವರಿ 6 ರಂದು ಪ್ರಧಾನಿ ಮೋದಿ ((Narendra Modi) ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಅಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

    ಇದರೊಂದಿಗೆ `CD ಬಾಂಬ್’ ಸಿಡಿಸಿದ್ದ ರಮೇಶ್ ಜಾರಕಿಹೊಳಿ (Ramesh Jarkiholi) ಹುಬ್ಬಳ್ಳಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಬೆಂಗಳೂರಿನಿಂದ ಸಿಎಂ ಜೊತೆಗೆ ಜಾರಕಿಹೊಳಿ ವಿಮಾನದಲ್ಲಿ ಪ್ರಯಾಣ ಮಾಡಿದ್ದು ಹಲವು ಕುತೂಹಲಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೋವಿಡ್ ನಿಯಂತ್ರಣದಲ್ಲಿ ರಾಜ್ಯಕ್ಕೆ ಕೊಡಗು ಮಾದರಿ

    ಕೋವಿಡ್ ನಿಯಂತ್ರಣದಲ್ಲಿ ರಾಜ್ಯಕ್ಕೆ ಕೊಡಗು ಮಾದರಿ

    ಮಡಿಕೇರಿ: ಮಾರ್ಚ್ ತಿಂಗಳಲ್ಲಿ ದೇಶಕ್ಕೆ ಎಂಟ್ರಿಯಾಗಿದ್ದ ಡೆಡ್ಲಿ ವೈರಸ್ ಈಗ ಪ್ರತೀ ಹಳ್ಳಿ ಹಳ್ಳಿಯಲ್ಲೂ ತನ್ನ ಕಬಂಧ ಬಾಹು ಚಾಚಿದೆ. ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೊನಾ ಕೇಸ್ ಗಳು ಬಂದಿದ್ದರೂ, ಕೊಡಗು ಜಿಲ್ಲೆಯಲ್ಲಿ ಮಾತ್ರ ಅತ್ಯಂತ ಕಡಿಮೆ ಪ್ರಕರಣಗಳು ದಾಖಲಾಗಿವೆ. ವೈರಸ್ ಚೀನಾದಲ್ಲಿ ಹುಟ್ಟಿ, ಎಲ್ಲಾ ದೇಶಗಳಿಗೂ ಹಬ್ಬುತ್ತಿದ್ದ ವೈರಸ್ ಭಾರತಕ್ಕೂ ಎಂಟ್ರಿ ಕೊಟ್ಟಿತ್ತು. ದೇಶದೆಲ್ಲೆಡೆ ಹರಡೋದಕ್ಕೆ ಅವಕಾಶ ನೀಡ್ಲೇಬಾರದು ಅಂತ ದೇಶವನ್ನೇ ಲಾಕ್‍ಡೌನ್ ಮಾಡಲಾಗಿತ್ತು.

    ಆದರೂ ದೇಶವ್ಯಾಪಿ ಹರಡೋದಕ್ಕೆ ತುಂಬ ದಿನವೇನು ಬೇಕಾಗಲಿಲ್ಲ. ಆರಂಭದಲ್ಲಿ ಕಡಿಮೆ ಜನರಿಗೆ ಹರಡಿದ್ದ ಮಹಾಮಾರಿ ಇದೀಗ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರ ಮೈಹೊಕ್ಕಿಬಿಟ್ಟಿದೆ. ರಾಜ್ಯದ 30 ಜಿಲ್ಲೆಯನ್ನು ಗಮನಿಸಿದಾಗ ಕೊಡಗು ಜಿಲ್ಲೆಯಲ್ಲಿ ತೀರ ಕಡಿಮೆ ಜನರಿಗೆ ಹರಡಿದೆ. ಹಾಗಂತ ಕೊವಿಡ್ ಟೆಸ್ಟ್ ಮಾಡುವುದರಲ್ಲೇನು ಆರೋಗ್ಯ ಇಲಾಖೆ ಹಿಂದೆ ಬಿದ್ದಿಲ್ಲ. ಪ್ರತೀ ದಿನ ಜಿಲ್ಲೆಯಲ್ಲಿ ಐದು ನೂರಕ್ಕೂ ಹೆಚ್ಚು ಜನರ ಸ್ವ್ಯಾಬ್ ತೆಗೆದು ಪರಿಶೀಲನೆ ಮಾಡಲಾಗುತ್ತಿದೆ.

    ಮೇ ತಿಂಗಳಲ್ಲಿ ಕೊರೊನಾ ಟೆಸ್ಟ್ ಲ್ಯಾಬ್ ಆರಂಭಿಸಿದ ದಿನದಿಂದ ಇದುವರೆಗೆ 26,247 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 24,747 ಜನರಿಗೆ ನೆಗೆಟಿವ್ ಬಂದಿದೆ. ಅಂದರೆ 1,279 ಜನರಿಗೆ ಮಾತ್ರ ಸೋಂಕು ಹರಡಿದೆ. ಕೇವಲ 17 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಅವರು ಕೂಡ ತಡವಾಗಿ ಆಸ್ಪತ್ರೆಗೆ ತೋರಿಸಿದ್ದರಿಂದ ಸಾವನ್ನಪ್ಪಲು ಕಾರಣವಾಗಿದೆ. 1,020 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 252 ಆಕ್ಟೀವ್ ಕೇಸುಗಳಿವೆ. ಅಂದರೆ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಕಡಿಮೆ ಸಂಖ್ಯೆಯಲ್ಲಿ ಕೊರೊನಾ ರೋಗಿಗಳಿರುವುದು ಕೊಡಗಿಗೆ ಒಂದು ಹಿರಿಮೆಯಂತಾಗಿದೆ.

    ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಿಂದ ಮೂರು ತಿಂಗಳು ನಿರಂತರ ಮಳೆ ಸುರಿಯುತಿತ್ತು. ಇಡೀ ಜಿಲ್ಲೆ ಸಂಪೂರ್ಣ ಫ್ರಿಡ್ಜ್ ಎನ್ನೋ ರೀತಿ ಕೋಲ್ಡ್ ವಾತಾವರಣವಿತ್ತು. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಭಾರೀ ಕೊರೊನಾ ಮಹಾಮಾರಿ ಉಲ್ಭಣಗೊಳ್ಳುತ್ತೆ ಎನ್ನೋ ಆತಂಕವಿತ್ತು. ಆದರೆ ಆರೋಗ್ಯ ಇಲಾಖೆ ಪ್ರತೀ ಹಳ್ಳಿ ಹಳ್ಳಿಯಲ್ಲೂ ಆಂಟಿಜೆನ್ ಟೆಸ್ಟ್ ಮೂಲಕ ಕೊರೊನಾ ರೋಗ ಪತ್ತೆ ಹಚ್ಚಲು ಮುಂದಾಯಿತು. ಅಲ್ಲದೆ ಮಾಸ್ಕ್ ಧರಿಸುವಂತೆ ಜನರ ಮನವೊಲಿಸುವಲ್ಲಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಅರಿವು ಮೂಡಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.

    ಜೊತೆಗೆ ಜನರು ಕೂಡ ಕೊರೊನಾ ಟೆಸ್ಟ್‍ಗೆ ಯಾವುದೇ ಭಯ ಆತಂಕವಿಲ್ಲದೆ ಒಳಪಟ್ಟಿದ್ದಾರೆ. ಅಲ್ಲದೆ ಮನೆಯಲ್ಲೂ ಕಷಾಯಗಳನ್ನು ಮಾಡಿ ಸೇವಿಸಿ ದೇಹದಲ್ಲಿ ಉಷ್ಣತೆ ಹೆಚ್ಚಿಸಿಕೊಂಡು ಕೊರೊನಾ ಹತ್ತಿರ ಸುಳಿಯದಂತೆ ಮಾಡಿಕೊಂಡಿದ್ದಾರೆ ಎನ್ನೋದು ಜನರ ಅಭಿಪ್ರಾಯ. ಒಟ್ಟಿನಲ್ಲಿ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಉಲ್ಬಣಗೊಂಡಿದ್ದರು, ಕೊಡಗಿನಲ್ಲಿ ಮಾತ್ರ ನಿಯಂತ್ರಣದಲ್ಲಿದೆ. ಇದು ರಾಜ್ಯಕ್ಕೂ ಮಾದರಿ ಎಂದರೆ ತಪ್ಪಾಗಲಾರದು. ಆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗದಂತೆ ಜನರೇ ಎಚ್ಚೆತ್ತುಕೊಳ್ಳಬೇಕಿದೆ.