Tag: karnataka

  • ರಾಜ್ಯದ ಹವಾಮಾನ ವರದಿ 31-10-2025

    ರಾಜ್ಯದ ಹವಾಮಾನ ವರದಿ 31-10-2025

    ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-22

    ಮಂಡ್ಯ: 27-21
    ಮಡಿಕೇರಿ: 27- 19
    ರಾಮನಗರ: 27-21
    ಹಾಸನ: 25-20
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 28-23
    ಯಾದಗಿರಿ: 27-23
    ವಿಜಯಪುರ: 30-23
    ಬೀದರ್: 27-23
    ಕಲಬುರಗಿ: 27-23
    ಬಾಗಲಕೋಟೆ: 29-22

  • ರಾಜ್ಯದ ಹವಾಮಾನ ವರದಿ 30-10-2025

    ರಾಜ್ಯದ ಹವಾಮಾನ ವರದಿ 30-10-2025

    ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿಯು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-19
    ಮಂಗಳೂರು: 29-24
    ಶಿವಮೊಗ್ಗ: 28-19
    ಬೆಳಗಾವಿ: 26-20
    ಮೈಸೂರು: 30-20

    ಮಂಡ್ಯ: 31-19
    ಮಡಿಕೇರಿ: 27- 18
    ರಾಮನಗರ: 29-19
    ಹಾಸನ: 26-18
    ಚಾಮರಾಜನಗರ: 31-19
    ಚಿಕ್ಕಬಳ್ಳಾಪುರ: 28-18

    ಕೋಲಾರ: 29-19
    ತುಮಕೂರು: 28-18
    ಉಡುಪಿ: 29-24
    ಕಾರವಾರ: 31-25
    ಚಿಕ್ಕಮಗಳೂರು: 25-18
    ದಾವಣಗೆರೆ: 30-20

    ಹುಬ್ಬಳ್ಳಿ: 28-21
    ಚಿತ್ರದುರ್ಗ: 29-19
    ಹಾವೇರಿ: 29-21
    ಬಳ್ಳಾರಿ: 32-21
    ಗದಗ: 29-21
    ಕೊಪ್ಪಳ: 31-22

    ರಾಯಚೂರು: 32-22
    ಯಾದಗಿರಿ: 31-21
    ವಿಜಯಪುರ: 31-22
    ಬೀದರ್: 28-21
    ಕಲಬುರಗಿ: 30-21
    ಬಾಗಲಕೋಟೆ: 31-22

  • ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    – ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ
    – ಆಂಧ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ (Bengaluru) ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.

    ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.

    ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

     

  • ರಾಜ್ಯದ ಹವಾಮಾನ ವರದಿ 28-10-2025

    ರಾಜ್ಯದ ಹವಾಮಾನ ವರದಿ 28-10-2025

    ಮೊಂಥಾ ಚಂಡಮಾರುತದ (Cyclone Montha) ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

    ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರ, ಒಡಿಶಾ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಎರಡು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಎರಡು ದಿ‌ನ ಯಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಅಕ್ಟೋಬರ್ 28 ಹಾಗೂ 29ರಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-22

    ಮಂಡ್ಯ: 27-21
    ಮಡಿಕೇರಿ: 24-20
    ರಾಮನಗರ: 27-21
    ಹಾಸನ: 25-20
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 28-23
    ಯಾದಗಿರಿ: 27-23
    ವಿಜಯಪುರ: 30-23
    ಬೀದರ್: 27-23
    ಕಲಬುರಗಿ: 27-23
    ಬಾಗಲಕೋಟೆ: 29-22

  • ಕುರ್ಚಿ ಕದನ, ಅಭಿವೃದ್ಧಿ ಪತನ – 6 ತಿಂಗಳಲ್ಲಿ ಕೇವಲ ಶೇ.30ರಷ್ಟು ಮಾತ್ರ ಪ್ರಗತಿ

    ಕುರ್ಚಿ ಕದನ, ಅಭಿವೃದ್ಧಿ ಪತನ – 6 ತಿಂಗಳಲ್ಲಿ ಕೇವಲ ಶೇ.30ರಷ್ಟು ಮಾತ್ರ ಪ್ರಗತಿ

    – `ಸೌಂಡ್’ ಸಚಿವರ ಇಲಾಖೆಯಲ್ಲೇ ಕುಂಠಿತ
    – ಗ್ಯಾರಂಟಿ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ?

    ಬೆಂಗಳೂರು: ನಾಯಕತ್ವ ಬದಲಾವಣೆಯ ತಿಕ್ಕಾಟದಿಂದ ಕರ್ನಾಟಕ (Karnataka) ಅಭಿವೃದ್ಧಿಗೆ ತೊಡಕಾಯ್ತಾ? ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಗಣನೀಯ ಕುಸಿತ ಆಯ್ತಾ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ 6 ತಿಂಗಳ ಅವಧಿಯಲ್ಲಿ ಶೇ.30 ರಷ್ಟು ಮಾತ್ರ ಸರಾಸರಿ ಪ್ರಗತಿಯಾಗಿದೆ. ಅಬ್ಬರಿಸಿ ಮಾತನಾಡುವ ಸಚಿವರ ಇಲಾಖೆಯಲ್ಲಿ ಅಭಿವೃದ್ಧಿ ಕುಂಠಿತ ಆಗಿದ್ದು, ಕಂದಾಯ ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ.

    ಸದಾ ಹೇಳಿಕೆ ನೀಡಿ ಸುದ್ದಿಯಾಗುತ್ತಿರುವ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ನಿಭಾಯಿಸುತ್ತಿರುವ ಇಲಾಖೆಗಳು ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಿದೆ. ಗ್ರಾಮೀಣಾಭಿವೃದ್ಧಿ, ಇಲಾಖೆಯಲ್ಲಿ ಶೇ.11.02 ರಷ್ಟು ಮಾತ್ರ ಪ್ರಗತಿ ಆಗಿದ್ದರೆ ಐಟಿ-ಬಿಟಿ, ವಿಜ್ಞಾನ ತಂತ್ರಜ್ಞಾನ ಇಲಾಖೆಯಲ್ಲಿ ಶೇ. 10.86ರಷ್ಟು ಮಾತ್ರ ಆಗಿದೆ.

    ವಸತಿ ಸಚಿವ ಜಮೀರ್, ಡಿಸಿಎಂ ಡಿಕೆಶಿ ಇಲಾಖೆಗಳು ಹಿನ್ನಡೆ ಸಾಧಿಸಿವೆ. ಇದರಿಂದಾಗಿ ನಾಯಕತ್ವದ ಕುರಿತು ಚರ್ಚಿಸುವ ಸಚಿವರಿಂದ ಅಭಿವೃದ್ಧಿಯತ್ತ ಹೆಚ್ಚು ಗಮನವಿಲ್ಲವೋ? ಸರ್ಕಾರದ ಬಳಿ ಹಣವೇ ಇಲ್ಲವೋ? ಪವರ್‌ಶೇರ್ ಬಗ್ಗೆ ಹೈಕಮಾಂಡ್ ಮಂತ್ರ ಪಠಣ ಮಾಡುತ್ತಿರುವ ಸಚಿವರಿಂದ ಅಭಿವೃದ್ಧಿ ಹಿನ್ನಡೆ ಆಗುತ್ತಿದೆಯೋ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಬೇಕಿದೆ.  ಇದನ್ನೂ ಓದಿ:  5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    ಕುರ್ಚಿ ಕದನ; ಅಭಿವೃದ್ಧಿ ಪತನ
    > ಪ್ರಸಕ್ತ ಬಜೆಟ್‌ನಲ್ಲಿ ಇಲಾಖಾವಾರು ಹಂಚಿಕೆ – 3,53,492 ಕೋಟಿ ರೂ.
    > ಸೆಪ್ಟೆಂಬರ್ ತ್ರೈಮಾಸಿಕ ಅಂತ್ಯದಲ್ಲಿ ಬಿಡುಗಡೆಯಾದ ಮೊತ್ತ – 1,48,576 ಕೋಟಿ ರೂ.
    > ಸೆಪ್ಟೆಂಬರ್ ಅಂತ್ಯದಲ್ಲಿ ಬಳಕೆಯಾದ ಅನುದಾನ – 1,06,611 ಕೋಟಿ ರೂ.

     

    ಯಾವ ಇಲಾಖೆ ಎಷ್ಟು ಖರ್ಚು ಮಾಡಿದೆ?
    > ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) -5,780 ಕೋಟಿ ರೂ. (ಶೇ.46.74)
    (ಸಚಿವರು: ಕೃಷ್ಣ ಬೈರೇಗೌಡ)

    > ಜಲಸಂಪನ್ಮೂಲ ಇಲಾಖೆ -4,496 ಕೋಟಿ ರೂ. (ಶೇ.23.9)
    (ಸಚಿವರು: ಡಿ.ಕೆ. ಶಿವಕುಮಾರ್)

    > ವಸತಿ ಇಲಾಖೆ – 807 ಕೋಟಿ ರೂ. (ಶೇ.18.38)
    (ಸಚಿವರು: ಜಮೀರ್ ಅಹ್ಮದ್)

    > ಗ್ರಾಮೀಣಾಭಿವೃದ್ಧಿ- ಪಂಚಾಯತ್‌ರಾಜ್ -2,964 ಕೋಟಿ ರೂ. (ಶೇ.11.02)
    (ಸಚಿವರು: ಪ್ರಿಯಾಂಕ್ ಖರ್ಗೆ)

    > ಐಟಿ-ಬಿಟಿ, ವಿಜ್ಞಾನ- ತಂತ್ರಜ್ಞಾನ -117 ಕೋಟಿ ರೂ. (ಶೇ.10.86)
    (ಸಚಿವರು: ಪ್ರಿಯಾಂಕ್ ಖರ್ಗೆ)  ಇದನ್ನೂ ಓದಿ:  ಧರ್ಮಸ್ಥಳ ಕೇಸ್ – ಸುಜಾತ ಭಟ್ ಹೊರತುಪಡಿಸಿ ವಿಚಾರಣೆಗೆ ಗೈರಾದ ಬುರುಡೆ ಗ್ಯಾಂಗ್

    ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಖರ್ಚು?
    ಗೃಹಜ್ಯೋತಿ ಯೋಜನೆ
    > ಹಂಚಿಕೆ ಮೊತ್ತ – 26,896 ಕೋಟಿ ರೂ. (ಶೇ.50.29)
    ಇಂಧನ ಸಚಿವ : ಕೆಜೆ ಜಾರ್ಜ್)

    * ಗೃಹಲಕ್ಷ್ಮೀ ಯೋಜನೆ
    > ಹಂಚಿಕೆ ಮೊತ್ತ – 34,954 ಕೋಟಿ ರೂ. (ಶೇ.17.43)
    ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ : ಲಕ್ಷ್ಮಿ ಹೆಬ್ಬಾಳ್ಕರ್

    * ಶಕ್ತಿ ಯೋಜನೆ
    > ಹಂಚಿಕೆ ಮೊತ್ತ – 7,169 ಕೋಟಿ ರೂ. ( ಶೇ.34.88)
    ಸಾರಿಗೆ : ರಾಮಲಿಂಗಾರೆಡ್ಡಿ)

    * ಅನ್ನಭಾಗ್ಯ ಯೋಜನೆ
    > ಹಂಚಿಕೆ ಮೊತ್ತ – 8,274 ಕೋಟಿ ರೂ. (ಶೇ.28.23)
    ಆಹಾರ ಕೆ.ಹೆಚ್. ಮುನಿಯಪ್ಪ

  • 5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    ಮಂಗಳೂರು: ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ತುಸು ಮೆತ್ತಗಾದಂತೆ ಕಾಣುತ್ತಿದ್ದಾರೆ. ಈವರೆಗೂ 5 ವರ್ಷ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ (CM Siddaramaiah) ಪಟ್ಟದ ಪಟ್ಟು ಸಡಿಲವಾದಂತೆ ಭಾಸವಾಗುತ್ತಿದೆ.

    ಪವರ್ ಶೇರಿಂಗ್ ಬಗ್ಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಹೈಕಮಾಂಡ್ (High Command) ತೀರ್ಮಾನ ಮಾಡಿದರೆ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.  ಇದನ್ನು ಓದಿ:  ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ

    ಐದು ವರ್ಷ ನಾನೇ ಸಿಎಂ ಎಂದು ರಾಜಣ್ಣ ಹೇಳಿದ್ದಾರೆ. ಅದು ಅವರ ಸ್ವಂತ ಅಭಿಪ್ರಾಯ. ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿರುವರನ್ನ ತಪ್ಪಿಸಲು ಅಗುವುದಿಲ್ಲ. ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗುವುದಿಲ್ಲ. ಪ್ರಜಾಪ್ರಭುತ್ವ ಹಕ್ಕು ಅವರದು. ಮುಖ್ಯಮಂತ್ರಿ ಆಕಾಂಕ್ಷಿ ಎನ್ನಬಹುದು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

    ಈ ಹಿಂದೆ ಹಲವು ಬಾರಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದರು. ಪವರ್‌ ಶೇರಿಂಗ್‌ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದರೆ ನಿಮಗೆ ಹೇಳಿದ್ದು ಯಾರು ಎಂದು ಮಾಧ್ಯಮಗಳಿಗೆ ಸಿದ್ದರಾಮಯ್ಯ ಮರು ಪ್ರಶ್ನೆ ಹಾಕುತ್ತಿದ್ದರು.

  • ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್‌

    ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್‌

    ನವದೆಹಲಿ: ಹೈಕಮಾಂಡ್‌ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಬರಿಗೈಯಲ್ಲಿ ವಾಪಸ್‌ ಆಗಿದ್ದಾರೆ.

    ನವೆಂಬರ್‌ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ (Delhi) ತೆರಳಿದ್ದ ಡಿಕೆಶಿ ಹೈಕಮಾಂಡ್‌ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು.

    ಇಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಮಯ ನೀಡಿದ್ದಾರೆ ಎಂದು ಹೇಳಲಾಗಿತ್ತು. ಬೆಳಗ್ಗೆ 10 ನಂತರ 11 ಗಂಟೆಗೆ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ಹೈಕಮಾಂಡ್‌ ನಾಯಕರು ಡಿಕೆಶಿ ಭೇಟಿಗೆ ಅವಕಾಶ ನೀಡಿರಲಿಲ್ಲ. ಭೇಟಿಗೆ ಅವಕಾಶ ಸಿಗದ ಕಾರಣ ಡಿಕೆಶಿ ಬರಿಗೈಯಲ್ಲಿ ರಾಜ್ಯಕ್ಕೆ ಮರಳುತ್ತಿದ್ದಾರೆ. ಮೂರು ಗಂಟೆಯ ವಿಮಾನದ ಮೂಲಕ ಬೆಂಗಳೂರಿಗೆ ಡಿಕೆಶಿ ಆಗಮಿಸುತ್ತಿದ್ದಾರೆ.

    ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿಕೆಶಿ, ನಾನು ನಿಯಮಿತವಾಗಿ ದೆಹಲಿಗೆ ಕೆಲಸ ಇದ್ದಾಗ ಹೋಗುತ್ತಿರುತ್ತೇನೆ.ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು, ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡಲು ಮತ್ತು ನ್ಯಾಯಾಲಯದ ಪ್ರಕರಣಗಳಿಗೂ ಹೋಗುತ್ತೇನೆ ಎಂದು ತಿಳಿಸಿದ್ದರು.

  • ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂಥಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 26 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರಾಕಾರ ಮಳೆ, ಅತೀ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಸಾಧ್ಯತೆ ಇದೆ ಎಂದು ಹವಾಮಾವ ಇಲಾಖೆ ತಿಳಿಸಿದೆ. ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಳೆ ಮುನ್ಸೂಚನೆ ಹಿನ್ನೆಲೆ ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರ ತೀರ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿದ್ದು, ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

    ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲೂ ಮಳೆಯಬ್ಬರ:
    ಮೊಂಥಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಅಲ್ಲಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಒಡಿಶಾ, ತಮಿಳುನಾಡಿನಲ್ಲೂ ಹೈ ಅಲರ್ಟ್:
    ಮೊಂಥಾ ಚಂಡಮಾರುತ ಹಿನ್ನೆಲೆ ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಯಿರುವ ಕಾರಣ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳಿಗೆ ಅ.30ರವರೆಗೆ ರಜೆ ನೀಡಲಾಗುವುದು ಎಂದು ತಿಳಿಸಿದೆ. ಇನ್ನೂ ಸೋಮವಾರ (ಅ.27) ಹಾಗೂ ಮಂಗಳವಾರ (ಅ.28) ತಮಿಳುನಾಡು, ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಪುನಾರಚನೆಗೆ ಅವಕಾಶ ನೀಡಿದ್ರೆ ಸಿಎಂ ಸ್ಥಾನ ಅಬಾಧಿತ, ಇಲ್ಲದೇ ಇದ್ರೆ ರಾಜಕೀಯ ಚಟುವಟಿಕೆ: ರಾಜಣ್ಣ

  • ರಾಜ್ಯದ ಹವಾಮಾನ ವರದಿ 27-10-2025

    ರಾಜ್ಯದ ಹವಾಮಾನ ವರದಿ 27-10-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಅಕ್ಟೋಬರ್ 29ರವರೆಗೂ ರಾಜ್ಯದ ವಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-22

    ಮಂಡ್ಯ: 27-21
    ಮಡಿಕೇರಿ: 24-20
    ರಾಮನಗರ: 27-21
    ಹಾಸನ: 25-20
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 28-23
    ಯಾದಗಿರಿ: 27-23
    ವಿಜಯಪುರ: 30-23
    ಬೀದರ್: 27-23
    ಕಲಬುರಗಿ: 27-23
    ಬಾಗಲಕೋಟೆ: 29-22

  • ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ

    ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ

    ಬಾಗಲಕೋಟೆ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರ ಕತ್ತಲೆ ಭಾಗ್ಯವನ್ನೂ ನೀಡಿದೆ ಎಂದು ಬಾಗಲಕೋಟೆಯ (Bagalkote) ಜನರು ಆಕ್ರೋಶ ಹೊರಹಾಕ್ತಿದ್ದಾರೆ.

    ಹೌದು ಜನಪ್ರತಿನಿಧಿಗಳು, ವಿಐಪಿ ಗಣ್ಯರಿಗೆ ಅಂತ ಇರುವ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಪ್ರವಾಸಿ ಮಂದಿರ(IB) ವಿದ್ಯುತ್ ಇಲ್ಲದೇ ಕತ್ತಲು ಆವರಿಸಿದೆ. ನಿರೀಕ್ಷಣಾ ಮಂದಿರಗಳ ಬಿಲ್‌ (Electricity Bill) ಕಟ್ಟದ ಹಿನ್ನೆಲೆಯಲ್ಲಿ ಐಬಿಗಳಿಗೆ ಕತ್ತಲೆ ಭಾಗ್ಯ ಪ್ರಾಪ್ತಿಯಾಗಿದೆ. ‌

    ಲೋಕೋಪಯೋಗಿ ಇಲಾಖೆ (PWD) ಹಲವು ತಿಂಗಳಿನಿಂದ ಪ್ರವಾಸಿಮಂದಿರಗಳ ವಿದ್ಯುತ್‌ ಬಿಲ್‌ ಪಾವತಿಸಿಲ್ಲ. ಹೀಗಾಗಿ ಬಾಗಲಕೋಟೆ ಪ್ರವಾಸಿಮಂದಿದಲ್ಲಿ ಕರೆಂಟ್ ಇಲ್ಲದಂತಾಗಿ ಬರಿ ಕತ್ತಲು ಆವರಿಸಿದೆ. ಇದನ್ನೂ ಓದಿ:  ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

    ಅದರಲ್ಲೂ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಯಾವುದೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ್ದರು. ರಾತ್ರಿ ಐಬಿಯಲ್ಲಿದ್ದು ಬೆಳಗ್ಗೆ ಕಾರ್ಯಕ್ರಮ ಮುಗಿಸಿ ಹೊರಡಬೇಕಿತ್ತು. ಆದರೆ ಐಬಿಯಲ್ಲಿ ಕರೆಂಟ್ ಇಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಬೇರೊಬ್ಬರ ಆಪ್ತರ ಮನೆಯಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ತೆರಳಿದ್ದಾರೆ.

    ಸರ್ಕಾರ ನಿಯಂತ್ರಣದಲ್ಲಿರುವ ಐಬಿಗಳಿಗೆ ಈ ಗತಿಯಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.