ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 29ರವರೆಗೂ ರಾಜ್ಯದ ವಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
ಶಿವಮೊಗ್ಗ: ನವಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋವಾ ತಂಡದ ವಿರುದ್ಧ ಕರ್ನಾಟಕ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ222 ರನ್ ಗಳಿಸಿದೆ.
ಮಳೆಯಿಂದಾಗಿ ಪಂದ್ಯ ತಡವಾಗಿ ಪ್ರಾರಂಭವಾಯಿತು. ಟಾಸ್ ಗೆದ್ದ ಗೋವಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮಳೆಯಿಂದ ಒದ್ದೆಯಾದ ಪಿಚ್ನ ಲಾಭ ಪಡೆದ ಗೋವಾ ಬೌಲರ್ಗಳು ಕರ್ನಾಟಕದ ಬ್ಯಾಟರ್ಗಳನ್ನು ಕಾಡಿದರು. 65 ರನ್ಗಳಿಗೆ 4 ವಿಕೆಟ್ ಕಳೆದುಕೊಂಡ ಕರ್ನಾಟಕ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆರಂಭಿಕರಾದ ನಿಖಿನ್ ಜೋಸೆ ಹಾಗೂ ನಾಯಕ ಮಾಯಂಕ್ ಅರ್ಗವಾಲ್ ಜೋಡಿ ನಿಧಾನಗತಿಯಲ್ಲಿ ಬರುತ್ತಿದ್ದ ಚೆಂಡನ್ನು ಎದುರಿಸಲು ಪರದಾಡಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ 3 ವಿಕೆಟ್ ಪಡೆದು ವಿಜೃಂಭಿಸಿದರು. ನಿಖಿನ್ (3), ಕೃಷ್ಣನ್ ಶ್ರೀಜಿತ್ (0), ಉತ್ತಮವಾಗಿ ಆಡುತ್ತಿದ್ದ ಅಭಿನವ್ ಮನೋಹರ್ ಅವರನ್ನು ಪೆವಿಲಿಯನ್ಗೆ ಕಳುಹಿಸಿದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೂ, ನೆಲಕಚ್ಚಿ ಆಡಿದ ನಾಯಕ ಮಾಯಾಂಕ್ ಅರ್ಗವಾಲ್ 69 ಎಸೆತಗಳಲ್ಲಿ 28 ರನ್ ಗಳಿಸಿದ್ದಾಗ ವಾಸುಕಿ ಕೌಶಿಕ್ ಅವರಿಗೆ ವಿಕೆಟ್ ಒಪ್ಪಿಸಿದರು. ಐದನೇ ಕ್ರಮಾಂಕದಲ್ಲಿ ಆಡಲು ಬಂದ ಸಮರನ್ ರವಿಚಂದ್ರನ್ 3 ರನ್ ಗಳಿಸುವಷ್ಟರಲ್ಲಿ ಸುಸ್ತಾದರು.
ಶತಕದತ್ತ ಕರುಣ್ ನಾಯರ್: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವೈಫಲ್ಯ ಕಂಡು ಹೊರಬಿದ್ದಿರುವ ಕರುಣ್ ನಾಯರ್ ದೇಶೀ ಟೂರ್ನಿಗಳಲ್ಲಿ ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದರು. 138 ಎಸೆತಗಳಲ್ಲಿ 86 ರನ್ ಗಳಿಸಿದ್ದಾರೆ. ಶ್ರೇಯಸ್ ಗೋಪಾಲ್ 48 ರನ್ ಗಳಿಸಿದ್ದು, ಇಬ್ಬರೂ ನಾಳೆಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಶ್ರೇಯಸ್ ಗೋಪಾಲ್ ಹಾಗೂ ಕರುಣ್ ನಾಯರ್ 94 ರನ್ಗಳ ಜೊತೆಯಾಟದಿಂದ ತಂಡವು ದಿಢೀರ್ ಕುಸಿತದಿಂದ ಚೇತರಿಸಿಕೊಂಡು, ದಿನದಾಂತ್ಯಕ್ಕೆ 222 ರನ್ ಗಳಿಸಿತು. ಗೋವಾ ಪರವಾಗಿ ಅರ್ಜುನ್ ತೆಂಡೊಲ್ಕರ್ 17 ಓವರ್ ಎಸೆದು 3 ವಿಕೆಟ್ ಪಡೆದರೆ, ಕೌಶಿಕ್ 18 ಓವರ್ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು.
ರಾತ್ರಿ ಮಳೆ ಬೀಳದೇ ಹೋದರೆ ನಾಳೆ ಕರ್ನಾಟಕ ತಂಡವು ರನ್ ಗಳಿಸಲು ಉತ್ತಮವಾದ ಅವಕಾಶ ಸಿಗುವ ಸಾಧ್ಯತೆಗಳಿವೆ. ಮೊದಲ ದಿನದಲ್ಲಿ 69 ಓವರ್ಗಳು ಮಾತ್ರ ಎಸೆಯಲು ಸಾಧ್ಯವಾಯಿತು. ಮಳೆಯಿಂದಾಗಿ ಪಂದ್ಯವು ನಿಗದಿತ ಅವಧಿಗಿಂತ ತಡವಾಗಿ ಆರಂಭವಾಯಿತು.
ಕಾರವಾರ: ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ (Karnataka) ಕರಾವಳಿ ಹಾಗೂ ಗೋವಾ (Goa) ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿ ಕಳೆದ 24 ಗಂಟೆಯಲ್ಲಿ 80 ಮಿ.ಮೀ, ಬೇಲಿಕೇರಿ 76 ಮಿ.ಮೀ., ಕುಮಟಾ 72.8 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ರಾಯಚೂರು, ದಕ್ಷಿಣ ಕನ್ನಡ, ವಿಜಯಪುರ, ಗದಗದಲ್ಲಿ ಹೆಚ್ಚಿನ ಮಳೆ ವರದಿಯಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶ | ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್
ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಕುಮಟಾ, ಕಾರವಾರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಕಾರವಾರದಲ್ಲಿ ಇಂದು ಬೆಳಗ್ಗೆ ಸುರಿದ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನೀರು ನಿಂತು ಸವಾರರಿಗೆ ಸಮಸ್ಯೆ ತಂದೊಡ್ಡಿತು. ಇದನ್ನೂ ಓದಿ: Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ
ಇನ್ನು ಕಾರವಾರದ ನೆರೆಯ ಗೋವಾ ರಾಜ್ಯದಲ್ಲೂ ಅಬ್ಬರದ ಗಾಳಿ-ಮಳೆ ಸುರಿದಿದ್ದು, ಗೋವಾದ ತಲೆಯಗಾವ್‌ನ ಡಾ.ಶಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್‌ನ ಮುಖ್ಯ ದ್ವಾರದ ಕಮಾನು ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಇದಲ್ಲದೇ ಪಣಜಿ ನಗರದ ಹೈಕೋರ್ಟ್ ಸಮೀಪ ಇರುವ ಗುಡ್ಡ ಕುಸಿದು ಮನೆಗಳಿಗೆ ಹಾನಿ ಸಂಭವಿಸಿದೆ. ಇದಲ್ಲದೇ ಗಾಳಿಯ ಪ್ರಮಾಣ ಹೆಚ್ಚಾಗಿ ಮಳೆ ಆರ್ಭಟವೂ ಹೆಚ್ಚಾಗಿದ್ದು, ಕೆಲವು ಸಮಯ ಕಾರವಾರ-ಗೋವಾ ಹೆದ್ದಾರಿಯಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಕರ್ನಾಟಕ, ಗೋವಾ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಅಬ್ಬರದ ಮಳೆ ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27,000 ಕೋಟಿ ರೂ. ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಲಾಯಿತು.
The State clears ₹27,607 crore investment proposals creating 8,704 jobs.
At the 66th meeting of the State High-Level Clearance Committee, chaired by Hon’ble CM Shri Siddaramaiah , we approved 13 major projects—11 new and 2 expansions—reflecting investor confidence in… pic.twitter.com/RclnRHe4BJ
ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ (Investment Proposals) ಒಪ್ಪಿಗೆ ನೀಡಲಾಗಿದೆ. ಅದರ ಅನ್ವಯ 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ. 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ., ವಾಯು ಅಸೆಟ್ಸ್ 1,251 ಕೋಟಿ ರೂ., ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ., ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ., ಗ್ರಾಸಿಂ ಇಂಡಸ್ಟ್ರೀಸ್ 1,386 ಕೋಟಿ ರೂ., ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ., ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ., ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ., ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ., ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ. ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ., ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿವೆ.
ಬೆಂಗಳೂರು: ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ (Karnataka) ರಾಹುಲ್ ಗಾಂಧಿ (Rahul Gandhi) ಆಗಮಿಸಲಿದ್ದಾರೆ.
ನವೆಂಬರ್ ಕ್ರಾಂತಿಗೂ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ಜಟಾಪಟಿ ಆರಂಭವಾಗುವ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಯತೀಂದ್ರ ಹೇಳಿಕೆಯಿಂದ ಬಿಜೆಪಿಗೆ ದೊಡ್ಡ ಅಸ್ತ್ರ ಸಿಕ್ಕಿದ್ದರೆ ಮತ್ತೊಂದು ಕಡೆ ಸಚಿವ ಸಂಪುಟ ಪುನಾರಚನೆಯ ಪ್ಲ್ಯಾನ್‌ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಇನ್ನೊಂದು ಕಡೆ ಸಿಎಂ ಗದ್ದುಗೆ ಏರುವ ಸಂಕಲ್ಪ ಮಾಡಿಕೊಂಡು ಡಿಸಿಎಂ ಡಿ.ಕೆ ಶಿವಕುಮಾರ್ ದೇವರ ದರ್ಶನ ಪಡೆಯುತ್ತಿದ್ದಾರೆ. ಈ ಅಧಿಕಾರ ಹಸ್ತಾಂತರ ಲೆಕ್ಕಾಚಾರದ ಚರ್ಚೆಯ ಮಧ್ಯೆ ನ.19ರಂದು ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.
ಡಿಕೆ ಈಗ ಆಕ್ಟಿವ್:
ಎರಡೂವರೆ ವರ್ಷ ಕಳೆಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ಟಿವ್ ಆಗಿದ್ದಾರೆ. ಈಗಾಗಲೇ ʼA Symoble Of Loyaltyʼ ಹೆಸರಿನಲ್ಲಿ ಡಿಕೆ ಶಿವಕುಮಾರ್ ಹೆಸರಿನಲ್ಲಿ ಪುಸ್ತಕ ಬಿಡುಗಡೆಯಾಗಿದೆ.
ಇತ್ತ ಅಧಿಕಾರ ಬಿಟ್ಟುಕೊಡದೇ ಸಚಿವ ಸಂಪುಟ ಪುನಾರಚನೆಗೆ ಸಿಎಂ (CM Siddaramaiah) ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತದೆ. ಒಂದು ವೇಳೆ ಅಧಿಕಾರ ಬಿಟ್ಟುಕೊಟ್ಟರೂ ತನ್ನದೇ ಬಣದವರಿಗೆ ಮಣೆ ಹಾಕಲು ಮುಂದಾಗಿದ್ದಾರೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
ಯತೀಂದ್ರ ಸಿದ್ದರಾಮಯ್ಯ ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಮಾತನಾಡುತ್ತಾ ತಂದೆಯವರು ರಾಜಕೀಯ ಅಂತ್ಯಕಾಲದಲ್ಲಿದ್ದಾರೆ. ದಲಿತರ ಪರ ಒಲವು ಇರುವ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಿ ಸಂಚಲನ ಮೂಡಿಸಿದ್ದಾರೆ.
ಡಿಕೆಶಿ ಅಭಿಮಾನಿಗಳು ಮತ್ತು ಶಾಸಕರು ಈ ಅವಧಿಯಲ್ಲೇ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ನೋಟಿಸ್ ಸಹ ನೀಡಲಾಗಿತ್ತು. ಹೀಗಾಗಿ ನವೆಂಬರ್‌ನಲ್ಲಿ ಅಧಿಕಾರ ಹಸ್ತಾಂತರ ಆಗುತ್ತಾ ಇಲ್ವೋ ಎನ್ನುವ ಪ್ರಶ್ನೆಗೆ ಕೆಲ ದಿನಗಳಲ್ಲಿ ಉತ್ತರ ಸಿಗಲಿದೆ.
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಅಕ್ಟೋಬರ್ 29ರವರೆಗೂ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ರಾಜ್ಯದ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಉಪಮಹಾಸಾಗರದಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-22
ಬೆಂಗಳೂರು: ಆರ್‌ಎಸ್‌ಎಸ್ (RSS) ಚಟುವಟಿಕೆಗಳ ನಿಯಂತ್ರಣಕ್ಕೆ ಮುಂದಾಗಿದ್ದ ಸರ್ಕಾರ ಈಗ ಇಟ್ಟ ಹೆಜ್ಜೆಯಿಂದ ಹಿಂದಕ್ಕೆ ಸರಿದಿದೆ. ಹೊಸ ಬಿಲ್‌ಗೆ ಸರ್ಕಾರ ರೆಡ್ ಸಿಗ್ನಲ್ ನೀಡಿದೆ.
ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರಕ್ಕೆ ಸಂಬಂಧಿಸಿದಂತೆ ಈಗ ನಾವು ಆದೇಶ ಪ್ರಕಟಿಸಿದ್ದೇವೆ. ಹೊಸ ಮಸೂದೆಯನ್ನು ಮಂಡನೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಹೊಸ ಮಸೂದೆ ಸಿಎಂ, ಡಿಸಿಎಂ ಸೇರಿದಂತೆ ಹಿರಿಯ ಸಚಿವರು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದು ಬಂದಿದೆ.
ಏನು ಚರ್ಚೆ ನಡೆದಿದೆ?
ಕಳೆದ ವಾರದ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಯಂತ್ರಿಸುವಂತೆ ಪ್ರಿಯಾಂಕ್ ಖರ್ಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಅಂಡ್ ಪ್ರಾಪರ್ಟೀಸ್ ಬಿಲ್ – 2025ರ ಕರಡು ರೆಡಿಯಾಗಿದ್ದರೂ ಈ ಮಸೂದೆಯನ್ನು ಮಂಡನೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ರಾಜಕೀಯ ಜಗಳ ಬೇರೆ, ಸಿದ್ಧಾಂತದ ಜಗಳ ಎರಡೂ ಬೇರೆ ಬೇರೆ. ಮಸೂದೆ ಮಂಡನೆ ಮಾಡಲೇಬೇಕಾದರೆ ಅದು ನಿಮ್ಮಿಷ್ಟ ಎಂದು ಡಿಸಿಎಂ ತಿಳಿಸಿದರು.
ಈ ಬಿಲ್ ಜಾರಿಯಾದರೆ ಆರ್‌ಎಸ್‌ಎಸ್‌ಗೆ ಮಾತ್ರವಲ್ಲ, ಎಲ್ಲದಕ್ಕೂ ಎಲ್ಲರಿಗೂ ಅನ್ವಯ ಆಗುತ್ತದೆ. ಇದರಿಂದ ಮತ್ತಷ್ಟು ಸಂಕಷ್ಟ ಎದುರಾಗುತ್ತದೆ. ಹೀಗಾಗಿ ಈ ಬಿಲ್ ಮಂಡನೆ ಮಾಡುವುದು ಬೇಡ ಎಂದು ಹಿರಿಯ ಸಚಿವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕ್ಯಾಬಿನೆಟ್ ಚರ್ಚೆಯ ಅಭಿಪ್ರಾಯವನ್ನೇ ಮುಂದಿಟ್ಟುಕೊಂಡು ಸರ್ಕಾರ ಈಗ ಮಸೂದೆಯನ್ನು ತಿರಸ್ಕರಿಸಿದೆ ಎಂಬ ವಿಚಾರವನ್ನು ಮೂಲಗಳು ತಿಳಿಸಿವೆ.
ಗೊಂದಲ ಇರುವ ಜಿಲ್ಲೆ, ಜಾಗಗಳಲ್ಲಿ ಮಾತ್ರ ಕಠಿಣ ನಿಯಮ ಜಾರಿ ಮಾಡಿ ಅಳೆದು ತೂಗಿ ಅನುಮತಿ ನೀಡಬೇಕು. ಉಳಿದ ಕಡೆ ಸ್ಥಳೀಯ ಪರಿಸ್ಥಿತಿ ನೋಡಿ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.
ಮಸೂದೆಯಲ್ಲಿ ಏನಿತ್ತು?
– ಯಾವುದೇ ಧಾರ್ಮಿಕ, ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು.
– ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ
– ನಿಯಮ ಮೀರಿ ಚಟುವಟಿಕೆ ನಡೆಸಿದರೆ ಎರಡು ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ
– ಎರಡನೇ ಬಾರಿ ನಿಯಮ ಮೀರಿದ್ರೆ ಮೂರು ವರ್ಷ ಜೈಲು ಶಿಕ್ಷೆ 1 ಲಕ್ಷ ರೂ. ದಂಡ
– ಇದಕ್ಕೂ ಮೀರಿ ಮುಂದುವರೆದರೆ ಪ್ರತೀ ದಿನ 5,000 ದಂಡ ವಿಧಿಸುವ ನಿಯಮ
ಮುಂದಿನ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 29-24
ಶಿವಮೊಗ್ಗ: 26-21
ಬೆಳಗಾವಿ: 27-21
ಮೈಸೂರು: 27-21
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡಕ್ಕೂ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್ ಕುಮಾರ್ (Ananth Kumar) ಪುತ್ರಿ ಐಶ್ವರ್ಯ ಟಕ್ಕರ್ ನೀಡಿದ್ದಾರೆ.
ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ (Congress) ಹಣ ಹೋಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಈ ಹಿಂದೆ ಯಡಿಯೂರಪ್ಪ- ಅನಂತ್ ಕುಮಾರ್ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ಕ್ಲಿಪ್ ಟ್ವೀಟ್ ಮಾಡಿ ಪ್ರಿಯಾಕ್ ಖರ್ಗೆ ತಿರುಗೇಟು ನೀಡಿದ್ದರು.
ಬಿಜೆಪಿ ಹೈಕಮಾಡ್‌ಗೆ 1,800 ಕೋಟಿ ರೂ. ಕಪ್ಪ ನೀಡಿದ್ದನ್ನು ಬಿಎಸ್‌ವೈ-ಅನಂತ್ ಕುಮಾರ್ ಮಾತಾಡಿಕೊಂಡಿದ್ದು ಯಾರೂ ಮರೆತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿದ್ದರು.
Shri @PriyankKharge avare, this is a new low even for you.
After your failed attempt to defame RSS you have now decided to come behind shri Ananthkumar ji, whose work for Karnataka, even your own party leaders have admired.
ಪ್ರಿಯಾಂಕ್ ಆರೋಪಕ್ಕೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯಾ, ಇಬ್ಬರು ನಾಯಕರು ನಿಮ್ಮ ಪಕ್ಷದ ಡೈರಿಯಿಂದ ಬಂದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಸಂಭಾಷಣೆ ಮಾಡಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಐಶ್ವರ್ಯ ಪೋಸ್ಟ್‌ನಲ್ಲಿ ಏನಿದೆ?
ಇದು ನಿಮ್ಮ ಪಕ್ಷದ ನಾಯಕರ ಬುಡಕ್ಕೇ ಬರಬಹುದು . ಅಂದು ಯಡಿಯೂರಪ್ಪ – ಅನಂತ್ ಕುಮಾರ್ ಅವರರು 2017ರಲ್ಲಿ ಬೆಳಕಿಗೆ ಬಂದಿದ್ದ ಗೋವಿಂದರಾಜು ಅವರ ಡೈರಿಯಲ್ಲಿ ದಾಖಲಾಗಿದ್ದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಮಾತನಾಡಿದ್ದರು.
ಅದು ನಿಮ್ಮ ಪಕ್ಷದ್ದೇ ವಿಚಾರ , ಅಂದಿನ ನಿಮ್ಮ ಪಕ್ಷದ ಸಿಎಂ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದ್ದ ಪಪ್ಪದ ಬಗ್ಗೆ ಇರುವ ಸಂಭಾಷಣೆ ಅದು. ಆರ್‌ಎಸ್‌ಎಸ್‌ಗೆ ಕಳಂಕ ಹಚ್ಚುವ ನಿಮ್ಮ ಪ್ರಯತ್ನ ವಿಫಲವಾಗಿದೆ. ಅದಕ್ಕಾಗಿ ಅನಂತ್ ಕುಮಾರ್ ಹಿಂದೆ ಬಿದ್ದಿದ್ದೀರಿ. ಅನಂತ್ ಕುಮಾರ್ ಬಗ್ಗೆ ನಿಮ್ಮ ಪಕ್ಷದವರೇ ಸಾಕಷ್ಟು ಮಂದಿ ಗೌರವ ಇಟ್ಕೊಂಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.