Tag: Karnataka Assembly

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಪರಂ ಉತ್ತರ ಭಾರೀ ಕುತೂಹಲ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಪರಂ ಉತ್ತರ ಭಾರೀ ಕುತೂಹಲ

    ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಎಸ್‌ಐಟಿ ತನಿಖೆಯ ಬಗ್ಗೆ ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಉತ್ತರ ನೀಡಲಿದ್ದಾರೆ.

    ಸದನದಲ್ಲಿ ಧರ್ಮಸ್ಥಳ (Dharmasthala) ವಿರುದ್ಧದ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿ ಎಸ್‌ಐಟಿ ತನಿಖೆಯ ಮಧ್ಯಂತರ ವರದಿಯನ್ನು ಮಂಡಿಸಬೇಕು ಎಂದು ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಗೃಹ ಸಚಿವರು ಎಸ್‌ಐಟಿ (SIT) ತನಿಖೆಯ ಬಗ್ಗೆ ಏನು ಹೇಳುತ್ತಾರೆ? ಈ ಪ್ರಕರಣದಲ್ಲಿ ಸರ್ಕಾರದ ನಿಲುವೇನು ಎಂಬುದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

    ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್‌ಐಟಿ ರಚನೆ ಮಾಡಿರುವುದು, ಧರ್ಮಸ್ಥಳದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15ಕ್ಕೂ ಹೆಚ್ಚು ದಿನಗಳಿಂದ ಗುಂಡಿ ಅಗೆದು ಏನೂ ಸಿಗದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸಬಹುದು. ಜೊತೆಗೆ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ನಡೆದಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಒಪ್ಪಿಕೊಂಡಿರುವುದು. ಇವೆಲ್ಲವೂ ಸದನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

  • ಮುನಿಯಪ್ಪ ಅಳಿಯನಿಗೆ ವಿಧಾನಸಭೆ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಗೆ ಮುಂದಾದ ಸರ್ಕಾರ: ಸಚಿವಾಲಯದ ಅಧಿಕಾರಿ ವರ್ಗ ವಿರೋಧ

    ಮುನಿಯಪ್ಪ ಅಳಿಯನಿಗೆ ವಿಧಾನಸಭೆ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಗೆ ಮುಂದಾದ ಸರ್ಕಾರ: ಸಚಿವಾಲಯದ ಅಧಿಕಾರಿ ವರ್ಗ ವಿರೋಧ

    ಬೆಂಗಳೂರು: ಮಂತ್ರಿ ಅಳಿಯನಿಗೆ ಹುದ್ದೆ ಸೃಷ್ಟಿ ಮಾಡಲು ಸರ್ಕಾರ ಮುಂದಾಗಿದ್ದು, ಸರ್ಕಾರದ ತೀರ್ಮಾನದ ವಿರುದ್ಧ ವಿಧಾನಸಭಾ ಸಚಿವಾಲಯದ ಅಧಿಕಾರಿ ವರ್ಗ, ಸಿಬ್ಬಂದಿ ಹೋರಾಟಕ್ಕಿಳಿದಿದ್ದಾರೆ.

    ಸರ್ಕಾರದ ಮೇಲೆ ಒತ್ತಡ ಹೇರಿ ಅಳಿಯನಿಗೆ ಕಾಯದರ್ಶಿ-2 ಹುದ್ದೆ ಸೃಷ್ಟಿ ಯತ್ನ ಆರೋಪ ಕೇಳಿಬಂದಿದೆ. ಸಚಿವ ಮುನಿಯಪ್ಪ ಅಳಿಯ ಕೆ.ಸಿ.ಶಶಿಧರ್ ಹಾಲಿ ವಿಧಾನಸಭಾ ಸಚಿವಾಲಯದಲ್ಲಿ ಗಣಕ ವಿಭಾಗದ ನಿರ್ದೇಶಕರಾಗಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ-2 ಹುದ್ದೆಗೆ ನಿಯೋಜನೆ ಮಾಡಲು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ – ಕ್ಯಾಬಿನೆಟ್‌ನಲ್ಲಿ ಇಂದು ಮತ್ತೆ ಚರ್ಚೆ?

    ಶಶಿಧರ್ ಮನವಿಗೆ ಮಾವ ಆಗಿರುವ ಸಚಿವ ಮುನಿಯಪ್ಪ ಅವರಿಂದಲೂ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಶಶಿಧರ್ ಪರವಾಗಿ ಪತ್ನಿಯಾಗಿರುವ ಶಾಸಕಿ ರೂಪಾಕಲಾ ಅವರಿಂದಲೂ ಲಾಭಿ ಆರೋಪ ಕೇಳಿಬಂದಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ-2 ಹುದ್ದೆಗೆ ಮೇಲ್ದರ್ಜೆಗೆ ಏರಿಸಲು ಕಡತ ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ.

    ಡಿಪಿಎಆರ್ ಸಿದ್ಧಗೊಳಿಸಿರುವ ಕಡತಕ್ಕೆ ವಿಧಾನಸಭಾ ಸಚಿವಾಲಯದಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸಚಿವಾಲಯದ ನಿರ್ಧಾರದಿಂದ ಕಂಗೆಟ್ಟ ವಿಧಾನಸಭೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ – ಆ.3 ರವರೆಗೆ ನ್ಯಾಯಾಂಗ ಬಂಧನ

    ಗಣಕ ವಿಭಾಗದ ಅಧಿಕಾರಿಯನ್ನು ಸಚಿವಾಲಯದಲ್ಲಿ ಪರಿಗಣಿಸಬಾರದು. ಸಚಿವಾಲಯದ ವಿಭಾಗದ ವೃಂದಗಳಲ್ಲೇ ಹುದ್ದೆ ಸೃಷ್ಟಿಸಿ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ. ಸಚಿವನ ಅಳಿಯನಿಗಾಗಿ ಹುದ್ದೆ ಸೃಷ್ಟಿ ಮಾಡುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿ ಕಡತ ಇದೆ. ಅವರು ಸಹಿ ಹಾಕ್ತಾರಾ? ಕಾದುನೋಡಬೇಕಿದೆ.

  • ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ನನ್ನ ಆರೋಗ್ಯ ಸ್ಥಿರವಾಗಿದೆ: ಆನಂದ್ ಮಾಮನಿ

    ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ನನ್ನ ಆರೋಗ್ಯ ಸ್ಥಿರವಾಗಿದೆ: ಆನಂದ್ ಮಾಮನಿ

    ಬೆಳಗಾವಿ: ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಡೆಪ್ಯೂಟಿ ಸ್ಪೀಕರ್ (Deputy Speaker) ಆನಂದ್ ಮಾಮನಿ (Anand Mamani) ಚೆನ್ನೈನ ಆಸ್ಪತ್ರೆಯಿಂದ (Chennai Hospital) ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಹೇಳಿಕೆಯಲ್ಲಿ ಏನಿದೆ:
    ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಆಗೋದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಆದ್ರೆ, ಕೆಲ ಮಾಧ್ಯಮದಲ್ಲಿ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿಗಳು ಬರುತ್ತಿದೆ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ನಾನು ಆರೋಗ್ಯವಾಗಿದ್ದೇನೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬಾರದು. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಬಿಎಸ್‍ವೈ (B.S Yediyurappa) ಸೇರಿದಂತೆ ಅನೇಕ ಶಾಸಕರು ನನಗೆ ಸಲಹೆ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಾನು ಧೈರ್ಯವಾಗಿ ಬಂದು ತಮ್ಮೆಲ್ಲರ ಸೇವೆಗೆ ಮತ್ತೆ ಅಣಿಯಾಗುತ್ತೇನೆ. ನಾನು ಚೆನ್ನೈನಲ್ಲಿರುವ ಕಾರಣಕ್ಕೆ ಚಿಂತಾಜನಕ, ಶಿಫ್ಟ್ ಮಾಡ್ತಾರೆ ಅನ್ನೋದು ಯಾವುದು ಇಲ್ಲ. ಚೆನ್ನೈ ಆಸ್ಪತ್ರೆಗೆ ತಜ್ಞ ವೈದ್ಯರು ಬಂದ ಬಳಿಕ ತಪಾಸಣೆ ಮಾಡಿ ಔಷಧಿ ತೆಗೆದುಕೊಂಡು ಬರುತ್ತೇನೆ. ಆದಷ್ಟು ಬೇಗ ರಾಜಧಾನಿಗೆ ಬಂದು ತಮ್ಮ ಸಂಪರ್ಕಕ್ಕೆ ಸಿಗುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

    Live Tv
    [brid partner=56869869 player=32851 video=960834 autoplay=true]

  • ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಬೆಂಗಳೂರು: ನಾನು ಮಾತಾಡುವಾಗ ನೀವೆಲ್ಲಾ ಸಂದರ್ಭಕ್ಕೆ ಅಗತ್ಯದಂತೆ ಮಧ್ಯ ಪ್ರವೇಶ ಮಾಡುತ್ತೀರಿ. ಆದರೆ ಈಶ್ವರಪ್ಪ ದುರುದ್ದೇಶದಿಂದಲೇ ಮಧ್ಯ ಪ್ರವೇಶ ಮಾಡುತ್ತಾರೆ. ಅವರಿಗೆ ಗೊತ್ತಿದೆ ಮಧ್ಯ ಪ್ರವೇಶ ಮಾಡಿದರೆ ಜಗಳ ಆಗುತ್ತದೆ ಅಂತಾ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ.

    ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಸಚಿವ ಈಶ್ವರಪ್ಪ ಬಗ್ಗೆ ಸಿದ್ದರಾಮಯ್ಯ ಹಾಸ್ಯ ಮಾಡಿ ಕಾಲೆಳೆದರು. ನಾನು ಮಾತಾಡುವಾಗ ನೀವೆಲ್ಲಾ ಸಂದರ್ಭಕ್ಕೆ ಅಗತ್ಯದಂತೆ ಮಧ್ಯ ಪ್ರವೇಶ ಮಾಡುತ್ತೀರಿ. ಆದರೆ ಈಶ್ವರಪ್ಪ ದುರುದ್ದೇಶದಿಂದಲೇ ಮಧ್ಯ ಪ್ರವೇಶ ಮಾಡುತ್ತಾರೆ. ಅವರಿಗೆ ಗೊತ್ತಿದೆ ಮಧ್ಯ ಪ್ರವೇಶ ಮಾಡಿದರೆ ಜಗಳ ಆಗುತ್ತದೆ ಅಂತಾ. ಯಾಕೆಂದರೆ ಈಶ್ವರಪ್ಪ ಆಡುವುದೇ ಜಗಳದ ಮಾತುಗಳನ್ನು. ಜಗಳ ಮಾಡುಬೇಕು ಅಂತಾನೇ ಬರುತ್ತಾರೆ. ನನ್ನ ದಾರಿ ತಪ್ಪಿಸಬೇಕು, ನನ್ನ ಮಾತಿನ ಚೈನ್ ಬ್ರೇಕ್ ಮಾಡಬೇಕು ಅಂತಾನೆ ಬರುತ್ತಾರೆ. ಮಧ್ಯ ಪ್ರವೇಶ ಮಾಡಿದರೆ ಜಗಳ ಮಾಡಬಹುದು ಅಂತಾ ಈಶ್ವರಪ್ಪ ಲೆಕ್ಕಾಚಾರ ಅಂತಾ ಸಿದ್ದರಾಮಯ್ಯ ಟಕ್ಕರ್ ಕೊಟ್ಟರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಸಿದ್ದರಾಮಯ್ಯ, ಈಶ್ವರಪ್ಪ ಬಗ್ಗೆ ತಮಾಷೆ ಮಾಡಿದಾಗ ಈಶ್ವರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರು ನಗ್ತಿದ್ರು. ಇಡೀ ಸದನವೇ ನಗೆಯಲ್ಲಿ ಮುಳುಗಿತ್ತು. ಇದನ್ನೂ ಓದಿ: ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ಈ ಮೊದಲು ಬಜೆಟ್ ಭಾಷಣಕ್ಕೆ ಸಿದ್ದರಾಮಯ್ಯ ಎದ್ದು ನಿಂತಾಗ ಮಧ್ಯಾಹ್ನದ ಒಳಗೆ ಭಾಷಣ ಮುಗಿಸಿ ಎಂದು ಸ್ಪೀಕರ್ ಸೂಚಿಸಿದ್ರು. ಆಗ ಸಿದ್ದರಾಮಯ್ಯ ನೋ.. ನೋ.. ಪ್ರಶ್ನೋತ್ತರ ತಡವಾಗಿದೆ, ಮಧ್ಯಾಹ್ನದ ಮೇಲೂ ಸ್ವಲ್ಪ ಮಾತನಾಡ್ತೀನಿ ಅಂತೇಳಿದ್ರು. ತಕ್ಷಣವೇ ಮಧ್ಯಪ್ರವೇಶ ಮಾಡಿದ ಬಸವರಾಜ ಬೊಮ್ಮಾಯಿ ಭಾಷಣ ಹಿಗ್ಗಿಸುವುದು ಕುಗ್ಗಿಸುವುದು ನಿಮ್ಮ ಕೈಯಲ್ಲಿದೆ ಎಂದರು. ಆಗ ಸಿದ್ದರಾಮಯ್ಯ ತಿರುಗೇಟು ಕೊಟ್ಟರು. ಹೌದು ನನ್ನ ಕೈಯಲ್ಲಿ ಇರುವುದು ನಿಮ್ಮ ಕೈಯಲ್ಲಿ ಇಲ್ಲ. ನನ್ನ ಮತ್ತು ಅಧ್ಯಕ್ಷರ ಕೈಯಲ್ಲಿ ಇದೆ ಅಂತಾ ಟಾಂಗ್ ಕೊಟ್ಟರು. ಆಗ ಇಡೀ ಸದನ ನಗೆಗಡಲಲ್ಲಿ ತೇಲಿತು.

  • ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆಯಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಜಟಾಪಟಿ ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯಿಂದ ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ ಎಂದು ವಾಗ್ದಾಳಿ ನಡೆಸಿದರು.

    ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಡತನ ನಿರ್ಮೂಲನೆ ಎಲ್ಲಿ ಆಗಿದೆ? ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಇದು ಎಂದು ಕಿಡಿಕಾರಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಬಸವರಾಜ ಬೊಮ್ಮಾಯಿ, ಗರೀಬಿ ಹಠಾವೋ ಘೋಷಣೆ ಮಾಡಿ ಎಷ್ಟು ವರ್ಷ ಆಯ್ತು, ಗರೀಬಿ ಹಠಾವೋ ಕಹಾ ಹೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ವಾಜಪೇಯಿ ಕಂಟ್ರಿ ಶೈನಿಂಗ್ ಅಂದ್ರು, ಎಲ್ಲಿ ಶೈನಿಂಗ್ ಆಯ್ತು? ಎಂದು ಸಿದ್ದರಾಮಯ್ಯ ಮರು ಪ್ರಶ್ನಿಸಿದಾಗ ಚತುಷ್ಪಥ ರಸ್ತೆಗಳಲ್ಲಿ ನೀವು ಓಡಾಡ್ತಿಲ್ಲವಾ? ಅದೇ ಶೈನಿಂಗ್ ಎಂದು ಬೊಮ್ಮಾಯಿ ಉತ್ತರಿಸಿದರು. ರಸ್ತೆ ಶೈನಿಂಗ್ ಆಗಿ, ಬಡತನ ಇರೋದು ಶೈನಿಂಗಾ?. ಅಣೆಕಟ್ಟುಗಳನ್ನು ಕಟ್ಟಿದವರು ಯಾರು? ಮೋದಿ ಕಟ್ಟಿದ್ರಾ? ವಾಜಪೇಯಿ ಕಟ್ಟಿದ್ರಾ? ನಮ್ಮ ಕಾಲದಲ್ಲಿ ಆಗಿದ್ದು ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

    ಎಲ್ಲವನ್ನೂ ಮಾರಾಟ ಮಾಡಿದವರು ನೀವು ಬಿಜೆಪಿಯವರು, ದೇಶ ಸರ್ವನಾಶ ಮಾಡ್ತಿರೋದು ನೀವು. ಲೂಟಿ ಮಾಡಿದ್ದು ನಿಮ್ಮ ಸಾಧನೆ, ಎಲ್ಲ ಖಾಸಗೀಕರಣ ಮಾಡಿ ಸರ್ವನಾಶ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್

    ಸಾಲ ಆಗುವುದಕ್ಕೆ ಕಾಂಗ್ರೆಸ್ ಕಾರಣ. ಎಲ್ಲವೂ ನಿಮ್ಮ ಕಾಲದಲ್ಲಿಯೇ ಆಗ್ತಿರುವುದು ನಾವು ಏನನ್ನೂ ಮಾರಾಟ ಮಾಡಿಲ್ಲ, ಎಲ್ಲ ಮಾಡಿದ್ದು ನೀವು ಎಂದು ಬಸವರಾಜ ಬೊಮ್ಮಾಯಿ ಗುಡುಗಿದರು. ಈ ಸಂದರ್ಭ ಕಳೆದ ಎರಡು ವರ್ಷಗಳಲ್ಲಿ ನಾಲ್ಕೂವರೆ ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಡಬ್ಲೂಎಚ್‍ಓ ಒಪ್ಪಂದ ಮಾಡಿದ್ದು ಯಾರು? ಎಂದು ಸಿದ್ದರಾಮಯ್ಯ, ಬೊಮ್ಮಾಯಿಗೆ ಮತ್ತೆ ಪ್ರಶ್ನೆ ಮಾಡಿದರು.

  • ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು ಎಂದು ವಿಧಾನಸಭೆಯಲ್ಲಿ ಶಾಸಕ ರಾಜುಗೌಡ ಆಕ್ರೋಶ ಹೊರಹಾಕಿದ್ದಾರೆ.

    ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ಮೀಸಲಾತಿ ನೀಡದ ವಿಚಾರವಾಗಿ ಶೂನ್ಯವೇಳೆಯಲ್ಲಿ ಶಿವರಾಜ್ ಪಾಟೀಲ್ ಪ್ರಸ್ತಾಪ ಮಾಡಿದರು. ರಾಯಚೂರು ನವೋದಯ ವೈದ್ಯಕೀಯ ಕಾಲೇಜು ಮಂಡಳಿ 371-ಜೆ ಕುತ್ತು ತರುವಂತೆ ನಡೆದುಕೊಂಡಿದೆ. ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಕೊಡುವುದಕ್ಕೆ ಆಗಲ್ಲ ಎಂದು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಧ್ವನಿಗೂಡಿಸಿದ ಶಾಸಕ ರಾಜುಗೌಡ, ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು 371ಜೆ ನಮಗೆ ಹೋರಾಟದಿಂದ ಬಂದಿರುವುದು, ಇದನ್ನು ಪಡೆದುಕೊಳ್ಳಲು ಬಲಿದಾನ ಆಗಿದೆ ನಮ್ಮ ಸೌಲಭ್ಯ ತೆಗೆದುಕೊಂಡು ನಮ್ಮ ಮಕ್ಕಳಿಗೆ ಮೀಸಲಾತಿ ಕೊಡಲ್ಲ ಅಂದ್ರೆ ಹೇಗೆ? ಪ್ರಶ್ನಿಸಿದರು. ಇದನ್ನೂ ಓದಿ: ಜನ ಆಡಳಿತ ಪಕ್ಷದಲ್ಲಿ ಏನಾಗ್ತಿದೆ ಅಂತ ನೋಡ್ತಿದ್ದಾರೆ: ಯುಟಿ ಖಾದರ್

    ನಮ್ಮ ಕ್ಷೇತ್ರದಲ್ಲಿ ನಾವು ಜನರ ಮುಂದೆ ಹೇಗೆ ಮುಖ ತೋರಿಸುವುದು? ಸರ್ಕಾರದ ವಕೀಲರು ಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಈ ಬಗ್ಗೆ ಸದನ ಸಮಿತಿ ರಚನೆ ಮಾಡಿ ಎಂದು ರಾಜುಗೌಡ ಆಗ್ರಹಿಸಿದರು.  ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಹೈಕಮಾಂಡ್‍ನಿಂದ ಡಿಕೆಶಿಗೆ ಟಾಸ್ಕ್

    ಇದಕ್ಕೆ ಉತ್ತರಿಸಿದ ಸಚಿವ ಡಾ.ಸುಧಾಕರ್, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಬಳಿಕ ಪ್ರವೇಶಾತಿ ಮಾಡಿಸಿಕೊಂಡಿದ್ದಾರೆ. ಇಂದು ಕೋರ್ಟ್‍ಲ್ಲಿ ಕೇಸ್ ಸಹ ಇದೆ. ಅಡ್ವೋಕೇಟ್ ಜನರಲ್ ಖುದ್ದು ಇಂದು ಕೋರ್ಟ್‍ಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಹೈದ್ರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.

  • ಮುಂದುವರಿದ ಕಾಂಗ್ರೆಸ್ ಗದ್ದಲ – ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

    ಮುಂದುವರಿದ ಕಾಂಗ್ರೆಸ್ ಗದ್ದಲ – ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

    ಬೆಂಗಳೂರು: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.

    ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್‍ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು. ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ಓ… ಓ.. ದೇಶದ್ರೋಹಿ ಯಾರಪ್ಪಾ..? ಈಶ್ವರಪ್ಪ, ಈಶ್ವರಪ್ಪ ಎಂದು ಕೂಗುತ್ತಾ ಜೆ.ಪಿ.ನಡ್ಡಾ ಹೇಳಿಕೆಯ ಬಿತ್ತಿ ಪತ್ರ ತೋರಿಸಿ ಆಕ್ರೋಶ ಹೊರಹಾಕಿದರು. ಈ ವೇಳೆ ಸಿಟ್ಟಾದ ಸಿಎಂ, ನಿಮಗೆ ವಿರೋಧ ಪಕ್ಷದಲ್ಲಿ ಕೂರಲು ಅರ್ಹತೆ ಇಲ್ಲ. ಜವಾಬ್ದಾರಿ ಮರೆತು ಗದ್ದಲ ಮಾಡುತ್ತಿರುವುದು ನೋವಿನ ಸಂಗತಿ. ಕಾಂಗ್ರೆಸ್ ಧರಣಿಯಿಂದ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಶಾಂತಿ ಭಂಗ ಮಾಡುವ ನಿಮ್ಮನ್ನು ಜನರು ಎಂದೆಂದಿಗೂ ಕ್ಷಮಿಸುವುದಿಲ್ಲ ಅಂತ ಗರಂ ಆದರು. ಇದನ್ನೂ ಓದಿ: ಡಬಲ್ ಆಯ್ತು ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳ: ವಿಧಾನಸಭೆಯಲ್ಲಿ ಬಿಲ್ ಪಾಸ್

    ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಕಾಂಗ್ರೆಸ್ ಧರಣಿಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಆರಂಭದ ಎರಡು ದಿನ ಮಾತ್ರ ಕಲಾಪ ನಡೆಯಿತು. ಉಳಿದ ಐದು ದಿನ ನಿಮ್ಮದೇ ಗದ್ದಲ ಆಗಿದೆ. ಜನ ಈ ನಿಮ್ಮ ಗಲಾಟೆ ನೋಡುತ್ತಾ ಕೂರಲು ಸಾಧ್ಯವಿಲ್ಲ. ಇನ್ನು ಮೂರು ದಿನ ಸದನ ಕಲಾಪ ನಡೆಯಲು ಸಹಕರಿಸಬೇಕು. ಇಲ್ಲದಿದ್ರೆ ಸದನವನ್ನು ಮುಂದೂಡುತ್ತೇನೆ. ಸದನ ಮೌಲ್ಯ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಸದನದ ಹೊರಗೆ ಏನಾದ್ರೂ ಮಾಡಿಕೊಳ್ಳಿ. ಸದನದ ಮೌಲ್ಯ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ಕಾಂಗ್ರೆಸ್ ಸದಸ್ಯರಿಗೆ ಸ್ಪೀಕರ್ ಮನವಿ ಮಾಡಿದ್ರು. ಆದರೂ ಗದ್ದಲ ಮುಂದುವರಿದಾಗ ವಿಧಾನಸಭೆ ಕಲಾಪವನ್ನು ಮಾರ್ಚ್ 4ಕ್ಕೆ ಮೂಂದೂಡಿಕೆ ಮಾಡಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಶವಯಾತ್ರೆಗೆ ಅವಕಾಶ ಕೊಟ್ಟಿದ್ದು ಸರಿಯಲ್ಲ: ಸಿದ್ದರಾಮಯ್ಯ

  • ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

    ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

    ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ಅಕ್ಷರಶಃ ರಣರಂಗವಾಗಿತ್ತು. ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪದ ವೇಳೆ ಈಶ್ವರಪ್ಪ ವರ್ಸಸ್ ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ವೈಯುಕ್ತಿಕ ವಾಕ್ಸಮರವೂ ನಡೆಯಿತು.

    ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ ಹೋದ ಡಿಕೆಶಿ ಈಶ್ವರಪ್ಪಗೆ ಮಾತನಾಡಲು ಬಿಡಬೇಡಿ ಎಂದು ಹೇಳಿದ್ರು. ಆಗ ಸಿಟ್ಟಿಗೆದ್ದ ಈಶ್ವರಪ್ಪ ಸದನ ನಿಮ್ಮ ಅಪ್ಪನದ್ದಾ ಎಂದು ಪ್ರಶ್ನಿಸಿದ್ರು. ಆಗ ಸದನದಲ್ಲಿ ಗದ್ದಲ ಹೆಚ್ಚಾದಾಗ ಕಲಾಪವನ್ನು ಮುಂದೂಡಿದ್ದರೂ ಈಶ್ವರಪ್ಪ-ಡಿಕೆಶಿ ನಡುವೆ ಒಂದು ಹಂತಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಬಳಿಕ ಯಡಿಯೂರಪ್ಪ ಮಧ್ಯಪ್ರವೇಶದ ಬಳಿಕ ವಾತಾವರಣ ತಿಳಿಯಾಯ್ತು. ದನ್ನೂ ಓದಿ:  ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ

    ಶೇಮ್‌ ಶೇಮ್‌ ಈಶ್ವರಪ್ಪ ಘೋಷಣೆ!: ಇವತ್ತು ಈಶ್ವರಪ್ಪ ಹೇಳಿಕೆ ವಿರುದ್ಧ ನಿಲುವಳಿ ಸೂಚನೆ ಮಂಡನೆಯ ಪ್ರಾಥಮಿಕ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ರು. ಈಶ್ವರಪ್ಪ 2006ರಿಂದಲೂ ಸಚಿವರಾಗಿದ್ದರು, ಅವರು ಜವಾಬ್ದಾರಿಯಿಂದ ಹೇಳಿಕೆ ಕೊಡ್ತಾರೆ ಅಂದ್ಕೊಂಡಿದ್ದೆ. ರಾಷ್ಟ್ರಧ್ವಜದ ಬಗ್ಗೆ ಬಹಳ ಅಗೌರವವಾಗಿ ಹೇಳಿಕೆ ಕೊಟ್ಟಿದ್ದಾರೆ. ಸಂವಿಧಾನದ ಆರ್ಟಿಕಲ್ 51(1) ಪ್ರಕಾರ ಪ್ರತಿಯೊಬ್ಬರು ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು. ಆದ್ರೆ ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ಐಪಿಸಿ ಪ್ರಕಾರ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ರೆ, ಸಂವಿಧಾನಕ್ಕೆ ಅಗೌರವ ಮಾಡಿದ್ರೆ, ರಾಷ್ಟ್ರಗೀತೆಗೆ ಅಗೌರವ ಮಾಡಿದ್ರೆ ಅದು ದೇಶ ದ್ರೋಹ. 3 ರಿಂದ 5 ವರ್ಷ ಜೈಲು ಶಿಕ್ಷೆ ಇದೆ. ಆದ್ರೆ ಈಶ್ವರಪ್ಪ ವಿರುದ್ಧ ಸರ್ಕಾರ ಏನೂ ಕ್ರಮ ತೆಗೆದುಕೊಂಡಿಲ್ಲ. ನನ್ನ ಪ್ರಕಾರ ಈಶ್ವರಪ್ಪ ಅವರನ್ನು ಮಂತ್ರಿಮಂಡಲದಿಂದ ಸಿಎಂ ಅಮಾನತು ಮಾಡಬೇಕಿತ್ತು. ಮಂತ್ರಿಯಾಗಿರಲು ಈಶ್ವರಪ್ಪ ಅರ್ಹರಲ್ಲ. ಮುಖ್ಯಮಂತ್ರಿಗಳೇ ಸ್ವಯಂಪ್ರೇರಿತರಾಗಿ ಅವರನ್ನ ಅಮಾನತು ಮಾಡಿ, ಮೊಕದ್ದಮೆ ದಾಖಲು ಮಾಡಿ ಎಂದು ಆಗ್ರಹಿಸಿದ್ರು. ಆಗ ಕಾಂಗ್ರೆಸ್ ಶಾಸಕರು ಶೇಮ್ ಶೇಮ್ ಈಶ್ವರಪ್ಪ ಎಂದು ಛೇಡಿಸಿದ್ರು.

    ನೀನು ಜೈಲಿಗೆ ಹೋಗಿ ಬಂದವನು!: ಆದ್ರೆ ಸಿದ್ದರಾಮಯ್ಯ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಕಾನೂನು ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದ್ರು. ಭಗವದ್ ಧ್ವಜ ಹಾರಿಸಬಹುದು ಅಂತಾ ಹೇಳಿದ್ದಾರೆ, ನಾನೇ ಹಾರಿಸುತ್ತೇನೆ ಅಂತಾ ಹೇಳಿಲ್ಲ. ಕೆಂಪು ಕೋಟೆ ಮೇಲೆ ಧ್ವಜ ಹಾರಿಸುತ್ತೇನೆ ಅಂದಿಲ್ಲ. ಈಶ್ವರಪ್ಪ ಎಲ್ಲಿ ಅಪಮಾನ ಮಾಡಿದ್ದಾರೆ..? ಬಂದೂಕು ಕೈಯಲ್ಲಿ ಕೊಟ್ಟು ಬಾವುಟ ಹಾರಿಸಬೇಡಿ ಅಂದಾಗ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಹುಬ್ಬಳ್ಳಿಯಿಂದ ಕಾಶ್ಮೀರದವರೆಗೆ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಈಶ್ವರಪ್ಪ ಹೇಗೆ ದೇಶ ದ್ರೋಹಿ ಆಗ್ತಾರೆ..? ಇದು ನಿಲುವಳಿ ಸೂಚನೆ ವ್ಯಾಪ್ತಿಗೆ ಬರಲ್ಲ, ತಿರಸ್ಕಾರ ಮಾಡಿ ಎಂದು ಮಾಧುಸ್ವಾಮಿ ಮನವಿ ಮಾಡಿದ್ರು. ಆಗ ಈಶ್ವರಪ್ಪ ದೇಶದ್ರೋಹಿ ಅಂತಾ ಡಿಕೆಶಿ ಕೂಗಿದ್ದೇ ತಡ ಎದ್ದು ನಿಂತ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ರು. ನಾನಲ್ಲ ರಾಷ್ಟ್ರದ್ರೋಹಿ. ನೀನು. ನೀನು ಜೈಲಿಗೆ ಹೋಗಿ ಬಂದವನು, ಬೇಲ್‌ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ. ನೀನು ನನಗೆ ಹೇಳಬೇಡ ಅಂತಾ ಡಿ.ಕೆ.ಶಿ ವಿರುದ್ಧ ಏಕವಚನದಲ್ಲಿ ವಾಕ್ಸಮರ ನಡೆಸಿದ್ರು.

    BSY ಸಮಾಧಾನ: ಆ ವೇಳೆ ಈಶ್ವರಪ್ಪ ಮಾತನಾಡುವ ಮೊದಲು ಚರ್ಚೆಗೆ ಅವಕಾಶ ಕೊಡಿ ಅಂತಾ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಆ ವೇಳೆ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಬಳಿಗೆ ಹೋಗಿ ಈಶ್ವರಪ್ಪಗೆ ಅವಕಾಶ ಕೊಡಬೇಡಿ ಅಂದ್ರು. ತಕ್ಷಣವೇ ಸಿಟ್ಟಿಗೆದ್ದ ಈಶ್ವರಪ್ಪ ನಿಮ್ಮಪ್ಪನದಾ ಸದನ ಅಂತಾ ಡಿಕೆಶಿ ವಿರುದ್ಧ ಗರಂ ಆದ್ರು. ಹಾಗೆ ಹೇಳಿದ್ದೇ ತಡ ಡಿಕೆಶಿ ಸದನದ ಬಾವಿಗಿಳಿದು ಈಶ್ವರಪ್ಪ ಬಳಿ ಹೋಗಿ ಮಾತಿನ ಚಕಮಕಿ ನಡೆಸಿದ್ರು. ಆಗ ಸ್ಪೀಕರ್ ಕಲಾಪವನ್ನ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ರು. ಆದರೂ ಸದನದ ಬಾವಿಯಿಂದಲೇ ಈಶ್ವರಪ್ಪ ಜೊತೆ ಡಿಕೆಶಿ, ಕಾಂಗ್ರೆಸ್ ಶಾಸಕರು ವಾಗ್ವಾದಕ್ಕಿಳಿದಿದ್ದರು. ಕಡೆಗೆ ಯಡಿಯೂರಪ್ಪ ಬಂದು ಎರಡು ಕಡೆಯ ಶಾಸಕರನ್ನು ಸಮಾಧಾನಪಡಿಸಿದ್ರು.

  • ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

    ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

    ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಬಿಲ್ ತರೋದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತೆ ಎಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ತರಲಿಲ್ಲ ಎಂದು ಬಿಜೆಪಿ ಆರೋಪದ ಬೆನ್ನಲ್ಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೊಸ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ಕಾಯ್ದೆಯನ್ನು ವಿರೋಧ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಇದನ್ನೂ ಓದಿ: 2016ರಲ್ಲೇ ಮತಾಂತರ ಬಿಲ್ – ಕಾಂಗ್ರೆಸ್ ಡಬಲ್ ಸ್ಟ್ಯಾಂಡರ್ಡ್

    ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ. ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

    ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಮಸೂದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಇದು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ. ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಗುಜರಾತ್ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ.  ಇದನ್ನೂ ಓದಿ: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು? 

    ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಬಿಜೆಪಿ ಸರ್ಕಾರ ಬಹಿರಂಗಪಡಿಸಬೇಕು. ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ. ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ.

    2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಕ್ಕೆ ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ “ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.

    ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಬಿಜೆಪಿ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ.

  • 2016ರಲ್ಲೇ ಮತಾಂತರ ಬಿಲ್ – ಕಾಂಗ್ರೆಸ್ ಡಬಲ್ ಸ್ಟ್ಯಾಂಡರ್ಡ್

    2016ರಲ್ಲೇ ಮತಾಂತರ ಬಿಲ್ – ಕಾಂಗ್ರೆಸ್ ಡಬಲ್ ಸ್ಟ್ಯಾಂಡರ್ಡ್

    ಬೆಳಗಾವಿ: ವಿಪಕ್ಷಗಳ ತೀವ್ರ ವಿರೋಧ, ಗದ್ದಲ ಕೋಲಾಹಲದ ನಡುವೆಯೂ ನಿರೀಕ್ಷೆಯಂತೆ ವಿಧಾನಸಭೆಯಲ್ಲಿ ಬಲವಂತದ ಮತಾಂತರ ನಿಗ್ರಹ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.

    ಇಂದು ಬೆಳಗ್ಗೆಯಿಂದ ಚರ್ಚೆ ಆರಂಭಿಸಲಾಯಿತು. ಸಂಜೆ ಕಾಂಗ್ರೆಸ್ ವಿರೋಧದ ಮಧ್ಯೆ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದು ಆರ್‌ಎಸ್‌ಎಸ್‌ನ ಹಿಡನ್ ಅಜೆಂಡಾ ಎಂದು ಸಿದ್ದರಾಮಯ್ಯ ಆರೋಪಿಸಿದ್ರೆ, ಸಚಿವ ಈಶ್ವರಪ್ಪ, ಹೌದು, ನಾವೆಲ್ಲ ಬಿಜೆಪಿ ಅವರು ಆರ್‌ಎಸ್‌ಎಸ್‌, ಆರ್‌ಎಸ್‌ಎಸ್‌ನಿಂದಲೇ ನಾವು ಬಿಲ್ ತಂದಿದ್ದೇವೆ ಎಂದು ಘೋಷಿಸಿದ್ರು. ಅಷ್ಟೇ ಅಲ್ಲ ಹಿಂದೂ ಧರ್ಮದ ಸಂರಕ್ಷಣೆಗೆ ಇನ್ನೂ ಮೂರು ಬಿಲ್ ತರುತ್ತೇವೆ ಎಂದರು. ನಾವು ಯಾರ ತಂಟೆಗೂ ಹೋಗಲ್ಲ. ಆದರೆ ನಮ್ಮ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ. ಚಿಂದಿ ಚಿಂದಿ ಮಾಡ್ತೀವಿ ಎಂದ ಸದನದಲ್ಲೇ ನೇರಾ ನೇರ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

    2016ರಲ್ಲಿ ಬಿಲ್ ತರೋದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತೆ ಎಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ತರಲಿಲ್ಲ ಎಂದು ಛೇಡಿಸಿದ್ರು. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ಹೊರಹಾಕಿದರು. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ರು. ಇದನ್ನೂ ಓದಿ: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು? 

    ಬಿಜೆಪಿ ಸದಸ್ಯರು ಕಮ್ಮಿ ಇಲ್ಲ ಎಂಬಂತೆ ಭಾರತ್ ಮಾತಾಕೀ. ಜೈ ಶ್ರೀರಾಮ್ ಎಂಬ ಘೋಷಣೆ ಮೊಳಗಿಸಿದ್ರು. ಬಿಲ್ ಪಾಸ್ ಮಾಡಿಕೊಳ್ಳಲಿ ಅಂತಾ ಅವರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ, ಬಿಲ್ ಪಾಸ್ ಮಾಡಿ. ಬೇರೆ ಕಲಾಪದ ನಡಾವಳಿ ನಡೆಸಿ ಎಂದು ಸ್ಪೀಕರ್‌ಗೆ  ಯಡಿಯೂರಪ್ಪ ಸಲಹೆ ನೀಡಿದ್ರು. ಕೊನೆಗೆ ಸಿಎಂ ಬೊಮ್ಮಾಯಿ ಮಾತನಾಡಿ 2014ರಿಂದ 2016ರ ತನಕ ಏಕೆ ಒಪ್ಪಿಕೊಂಡ್ರು ಎಂದು ಕಾಂಗ್ರೆಸ್ಸಿಗರನ್ನು ಪ್ರಶ್ನೆ ಮಾಡಿದ್ರು. ಆರ್‌ಎಸ್‌ಎಸ್‌ ಕಾನೂನು ಪರ ಇದೆ. ಇದು ಓಪನ್ ಸೀಕ್ರೆಟ್. ಸಂಘದ ನೀತಿಯನ್ನು ಏಕೆ ಒಪ್ಪಿ ನೀವು ಬಿಲ್ ಪರಿಶೀಲನೆ ಮಾಡಿದ್ರಿ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಧ್ವನಿಮತದ ಮೂಲಕ ಮಸೂದೆ ಅಂಗೀಕರಿಸಿದ್ರು. 10 ನಿಮಿಷ ಸದನ ಮುಂದೂಡಿದ್ರು. ಕೂಡಲೇ ಸ್ಪೀಕರ್ ಕೊಠಡಿಯಲ್ಲಿ ಸಿಎಂ, ಸಚಿವರು ಸಭೆ ನಡೆಸಿದ್ರು. ಅಧಿವೇಶನ ನಾಳೆ ಮುಗಿಯಲಿದ್ದು, ಪರಿಷತ್‍ನಲ್ಲಿ ನಾಳೆಯೇ ಈ ಮಸೂದೆ ಮಂಡಿಸಿ, ಅನುಮೋದನೆ ಪಡೆಯಲು ಬಿಜೆಪಿ ಪ್ಲಾನ್ ಮಾಡಿದೆ.