Tag: Karnataka assembly election

  • ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ

    ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ

    ಚೆನ್ನೈ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ  (Karnataka Assembly Election) ಗೆಲುವು ಸಾಧಿಸಿದ ಕಾಂಗ್ರೆಸ್‍ಗೆ (Congress) ತಮಿಳುನಾಡಿನ ಬಿಜೆಪಿ (BJP) ಅಧ್ಯಕ್ಷ ಅಭಿನಂದನೆ ಸಲ್ಲಿಸಿದ್ದಾರೆ.

    ಕರ್ನಾಟಕದಲ್ಲಿ ಕಾಂಗ್ರೆಸ್ ಜನಾದೇಶವನ್ನು ಪಡೆದಿದೆ. ಜನರಿಗೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಮತ ನೀಡಿದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪುಟಿದೇಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಅಲೆ ಮುಗಿದಿದೆ, ಬಜರಂಗ ಬಲಿ ಕಾಂಗ್ರೆಸ್ ಜೊತೆಗಿದೆ: ಸಂಜಯ್ ರಾವತ್

    ಅಣ್ಣಾಮಲೈ (Annamalai) ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಪ್ರಚಾರದ ವೇಳೆ ಬಿಜೆಪಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿದೆ. ಬಿಜೆಪಿಗೆ 65 ಸ್ಥಾನಗಳು ಮಾತ್ರ ಲಭಿಸಿವೆ. ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನ ಗಳಿಸಿಕೊಂಡಿವೆ.

    36 ವರ್ಷಗಳ ನಂತರ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ರಾಜೂಗೌಡಗೆ ಸೋಲು- ಅಭಿಮಾನಿಗೆ ಆಘಾತ, ಆಸ್ಪತ್ರೆಗೆ ದಾಖಲು

  • ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿ ‘ಕೈ’ ನಾಯಕರು

    ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿ ‘ಕೈ’ ನಾಯಕರು

    ರಾಮನಗರ/ ವಿಜಯಪುರ: ಕರ್ನಾಟಕ ವಿಧಾನಸಭೆಗೆ ಚುನಾವಣೆ (Karnataka Assembly Election) ಮುಗಿದ ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕರಾದ ಡಿ.ಕೆ ಶಿವಕುಮಾರ್ (DK Shivakumar) ಹಾಗೂ ಎಂ.ಬಿ ಪಾಟೀಲ್ (MB Patil) ರಿಲ್ಯಾಕ್ಸ್ ಮೂಡ್‍ಗೆ ಜಾರಿದ್ದಾರೆ.

    ವಿಧಾನಸಭೆ ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನದ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್‍ಗೆ ತೆರಳಿ ಇಡ್ಲಿ ಸವಿದರು. ಅದಾದ ಬಳಿಕ ಚುನಾವಣೆ ಬಗ್ಗೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ಕಾಲ ಕಳೆದಿದ್ದಾರೆ. ಅದಾದ ಬಳಿಕ ಕನಕಪುರದ ಕೋಡಿಹಳ್ಳಿಯ ನಿವಾಸಕ್ಕೆ ಡಿಕೆ ಶಿವಕುಮಾರ್‌ ಹಾಗೂ ಡಿಕೆ ಸುರೇಶ್‌ ಭೇಟಿ ನೀಡಿ ತಾಯಿ ಗೌರಮ್ಮನವರ ಆಶೀರ್ವಾದ ಪಡೆದಿದ್ದಾರೆ.

    ಅದೇ ರೀತಿ ತಿಂಗಳಿಂದ ಗಡಿ ಬಿಡಿಯಲ್ಲಿ ಮತಕ್ಷೇತ್ರ ಮತ್ತು ರಾಜ್ಯ ಸುತ್ತಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಚುನಾವಣಾ ಭರಾಟೆ ಹಾಗೂ ಮತದಾನದ ಬಳಿಕ ಮನೆಯಲ್ಲಿ ವಿಶ್ರಾಂತಿ ಎಂಬಿಪಿ ಮೊರೆ ಹೋಗಿದ್ದಾರೆ. ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆ ಪತ್ನಿ ಆಶಾ ಪಾಟೀಲ್ ಜೊತೆಗೆ ಕಾಫಿ ಕುಡಿದು ರಿಲ್ಯಾಕ್ಸ್‌ನಲ್ಲಿದ್ದಾರೆ. ಇದನ್ನೂ ಓದಿ: ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಅರೆಸ್ಟ್‌ – ಅಜ್ಞಾತ ಸ್ಥಳಕ್ಕೆ ಶಿಫ್ಟ್‌

    ಕಾರ್ಯಕರ್ತರ ದಂಡು ಮನೆಯತ್ತ ಬರುತ್ತಿದ್ದು, ಮತದಾನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ವೇಳೆ ಮಾತನಾಡಿದ ಎಂಬಿಪಿ ರಾತ್ರಿ ತಡವಾಗಿ ಮಲಗಿದ್ದೆ,ನಮ್ಮಲ್ಲಿ ನಾಟಕ ಕಂಪನಿ ಪಾತ್ರ ಮುಂದುವರಿದಿದೆ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಇನ್ನು ನಮ್ಮ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಒಳ್ಳೆ ಲೀಡ್‍ನಲ್ಲಿ ಆಯ್ಕೆಯಾಗುವೆ. ದೊಡ್ಡ ಅಂತರದಿಂದ ಗೆಲ್ಲುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

  • ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಜನತೆಗೆ ಧನ್ಯವಾದ ತಿಳಿಸಿದ ರಾಗಾ

    ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಜನತೆಗೆ ಧನ್ಯವಾದ ತಿಳಿಸಿದ ರಾಗಾ

    ಬೆಂಗಳೂರು: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು (Exit Polls) ಬಿಡುಗಡೆಯಾಗಿವೆ. ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ (Congress) ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ನಾನು ಕಾಂಗ್ರೆಸ್ ನಾಯಕರು ಹಾಗೂ ಸಿಂಹದಂತಿರುವ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ಘನತೆಯುತ ಮತ್ತು ಉತ್ತಮವಾದ ಪ್ರಚಾರ ಮಾಡಿದ್ದಾರೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕರ್ನಾಟಕದ ಜನತೆಗೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಕಂಡುಬಂದಿದ್ದರೂ ಈ ಬಾರಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಯಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇದನ್ನೂ ಓದಿ: Exit Polls : ಕಾಂಗ್ರೆಸ್‌ಗೆ ಮುನ್ನಡೆ, ಈ ಬಾರಿಯೂ ಅತಂತ್ರ?

    ಒಂದು ವೇಳೆ ಮತ ಪ್ರಮಾಣ ಜಾಸ್ತಿಯಾದರೆ ಒಂದು ಪಕ್ಷಕ್ಕೆ ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ. ಹೀಗಾಗಿ ಯಾರಿಗೆ ಹೊಡೆತ ನೀಡುತ್ತೆ ಎನ್ನುವುದು ಮೇ 13 ರಂದು ತಿಳಿಯಲಿದೆ. ಇದನ್ನೂ ಓದಿ: ಅಭ್ಯರ್ಥಿಯಿಂದಲೇ ಚುನಾವಣಾ ಬಹಿಷ್ಕಾರ – ಮತಗಟ್ಟೆಗೆ ಏಜೆಂಟ್‍ಗಳನ್ನು ನೇಮಿಸದ ವಾಟಾಳ್

  • ದಾಖಲೆ ಮರೆತು ಬಂದ ಪ್ರಮೋದಾ ದೇವಿ ಒಡೆಯರ್ – ಅರಮನೆಗೆ ತೆರಳಿದ ಬಳಿಕ ವೋಟ್ ಮಾಡಿದ ರಾಜವಂಶಸ್ಥೆ

    ದಾಖಲೆ ಮರೆತು ಬಂದ ಪ್ರಮೋದಾ ದೇವಿ ಒಡೆಯರ್ – ಅರಮನೆಗೆ ತೆರಳಿದ ಬಳಿಕ ವೋಟ್ ಮಾಡಿದ ರಾಜವಂಶಸ್ಥೆ

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಹಿನ್ನೆಲೆ ಮೈಸೂರಿನ (Mysuru) ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ (Pramoda Devi Wadiyar) ಮತದಾನ ಮಾಡಲೆಂದು ಮತಗಟ್ಟೆಗೆ ಬಂದಿದ್ದರೂ ವಾಪಸ್ ತೆರಳಿರುವ ಪ್ರಸಂಗ ನಡೆದಿದೆ.

    ಮತದಾನ ಮಾಡಲೆಂದು ರಾಜವಂಶಸ್ಥೆ ಮತಗಟ್ಟೆಗೆ ಬಂದಿದ್ದರು. ಆದರೆ ಅವರು ಒರಿಜಿನಲ್ ದಾಖಲೆಗಳನ್ನು ಮರೆತು ಬಂದಿದ್ದರು. ಬಳಿಕ ಅವರು ಚುನಾವಣಾ ಸಿಬ್ಬಂದಿಗೆ ತಮ್ಮ ಮೊಬೈಲಿನಲ್ಲಿ ಸಾಫ್ಟ್ ಕಾಪಿ ತೋರಿಸಿದ್ದಾರೆ. ಆದರೆ ಒರಿಜಿನಲ್ ದಾಖಲಾತಿ ತರುವಂತೆ ಚುನಾವಣಾ ಸಿಬ್ಬಂದಿ ಪ್ರಮೋದಾ ದೇವಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

    ಪ್ರಮೋದಾ ದೇವಿ ದಾಖಲೆಗಳನ್ನು ತಂದು ಬಳಿಕ ವೋಟ್ ಮಾಡುವುದಾಗಿ ತಿಳಿಸಿ ಅರಮನೆಗೆ ಹಿಂತಿರುಗಿದ್ದಾರೆ. ಬಳಿಕ ದಾಖಲೆ ಸಮೇತ ಮತಗಟ್ಟೆಗೆ ಬಂದ ಅವರು ಕೆಆರ್ ಕ್ಷೇತ್ರದ ಬೂತ್ ಸಂಖ್ಯೆ 179ರಲ್ಲಿ ಮತದಾನ ಮಾಡಿದರು. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ.

  • ಪುಟ್ಟ ಕಂದಮ್ಮನೊಂದಿಗೆ ಚುನಾವಣೆ ಕರ್ತವ್ಯಕ್ಕೆ ಹಾಜರಾದ ತಾಯಿ

    ಪುಟ್ಟ ಕಂದಮ್ಮನೊಂದಿಗೆ ಚುನಾವಣೆ ಕರ್ತವ್ಯಕ್ಕೆ ಹಾಜರಾದ ತಾಯಿ

    ಬೆಂಗಳೂರು: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಸಿಬ್ಬಂದಿಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿ ಗಮನ ಸೆಳೆದರು.

    ಮಲ್ಲೇಶ್ವರಂ ಮತಗಟ್ಟೆಯಲ್ಲಿ ಕರ್ತವ್ಯಕ್ಕೆ ಈ ಮಹಿಳೆಯನ್ನು ನಿಯೋಜಿಸಲಾಗಿತ್ತು. ತನ್ನ ಪುಟ್ಟ ಕಂದಮ್ಮನೊಂದಿಗೆ ಮಹಿಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆ ಮೂಲಕ ಕರ್ತವ್ಯದ ಜವಾಬ್ದಾರಿ ಮೆರೆದಿದ್ದಾರೆ. ಇದನ್ನೂ ಓದಿ: EVMನಲ್ಲಿ ದೋಷವಿದ್ರೇ ಕೂಡಲೇ ಚೇಂಜ್‌ ಮಾಡ್ತೇವೆ: ತುಷಾರ್‌ ಗಿರಿನಾಥ್‌

    ನಾಳೆ ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಬೆಂಗಳೂರು ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

    ಬೆಂಗಳೂರು ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ. 42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್‌ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್‌ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿ ಸಾಗಿಸ್ತಿದ್ದ ಟೀ ಶರ್ಟ್ ಬಂಡಲ್ ಜಪ್ತಿ

  • Karnataka Election 2023; ಮತದಾರರ ಸೆಳೆಯಲು ಬೆಂಗಳೂರಲ್ಲಿ ವಿಶೇಷ ಮತಗಟ್ಟೆ

    Karnataka Election 2023; ಮತದಾರರ ಸೆಳೆಯಲು ಬೆಂಗಳೂರಲ್ಲಿ ವಿಶೇಷ ಮತಗಟ್ಟೆ

    ಬೆಂಗಳೂರು: ಮೇ 10 ರಂದು ನಡೆಯುವ ರಾಜ್ಯ ಸಾರ್ವತ್ರಿಕ ಚುನಾವಣೆಗೆ (Karnataka Election 2023) ಮತದಾರರನ್ನು ಆಕರ್ಷಿಸಲು ರಾಜಧಾನಿಯ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಮತಗಟ್ಟೆಗಳಲ್ಲಿ ರಚಿಸಿ ಅಲಂಕಾರಗೊಳಿಸಲಾಗಿದೆ. ಮತದಾನ ಹೆಚ್ಚಳ ಮಾಡಲು ಥೀಮ್‌ ಆಧಾರಿತ ಮತಗಟ್ಟೆ ನಿರ್ಮಿಸಲಾಗಿದೆ.

    ಜಿಲ್ಲಾ ಚುನಾವಣಾಧಿಕಾರಿ – ಬೆಂಗಳೂರು (Bengaluru) ವ್ಯಾಪ್ತಿಯಲ್ಲಿರುವ ನಾಲ್ಕು ಅಪರ ಜಿಲ್ಲಾ ಚುನಾವಣಾಧಿಕಾರಿ (ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ)ಗಳ ವ್ಯಾಪ್ತಿಯಲ್ಲಿ ವಿಶೇಷ ವಿನ್ಯಾಸಗಳ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಬಿರು ಬೇಸಿಗೆ ಮಧ್ಯೆ ಭಾರೀ ಮಳೆ- ಸಿಲಿಕಾನ್ ಸಿಟಿಯಲ್ಲಿ 5 ಮನೆಗಳು ಕುಸಿತ, ಕಾರುಗಳು ಜಖಂ

    ಈ ವಿನೂತನ ಥೀಮ್ ಆಧಾರಿತ ಮತಗಟ್ಟೆಗಳಲ್ಲಿ ಮಹಿಳೆಯರಿಗಾಗಿ ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ (ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳಿರಲಿವೆ.

    264 ಥೀಮ್ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ 55% ಮತದಾನ ದಾಟುತ್ತಿಲ್ಲ. 75% ಮತದಾನ ಸಾಧಿಸಲು ಚುನಾವಣಾ ಆಯೋಗದಿಂದ ವಿವಿಧ ಮಾದರಿಯ ಮತಗಟ್ಟೆಗಳ ನಿರ್ಮಾಣವಾಗಿದೆ. ಇದನ್ನೂ ಓದಿ: ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಥೀಮ್ ಮತಗಟ್ಟೆಗಳು ಎಷ್ಟೆಷ್ಟು?
    ಒಟ್ಟು ಮತಗಟ್ಟೆಗಳು – 264
    ಸಖಿ – 140 ಮತಗಟ್ಟೆ (ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿಗಳೇ ಇರುತ್ತಾರೆ)
    ಯುವ ಮತಗಟ್ಟೆ – 24
    ಅಂಗವಿಕಲರಿಗೆ – 36
    ನಿವೃತ್ತ ಸೇನಾ ಸಿಬ್ಬಂದಿ – 5
    ಹಸಿರು ಮತ್ತು ಪರಿಸರ – 12
    ವಿಜ್ಞಾನ ಮತ್ತು ತಂತ್ರಜ್ಞಾನ – 5
    ಕ್ರೀಡಾ ಮತಗಟ್ಟೆ – 2

  • ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Election) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 36 ಕಿ.ಮೀ ರೋಡ್ ಶೋ ತಡೆ ನೀಡಲು ಹೈಕೋರ್ಟ್ (Karnataka High Court) ಶುಕ್ರವಾರ ನಿರಾಕರಿಸಿದೆ.

    ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ವಿಜಯಕುಮಾರ್ ಎ. ಪಾಟೀಲ್ ಅವರ ಪೀಠವು ವಿಚಾರಣೆ ನಡೆಸಿ ರೋಡ್ ಶೋಗೆ ತಡೆಗೆ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಮಾಡಿದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ವಿಚಾರಣೆಯ ಸಂದರ್ಭದಲ್ಲಿ, ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆಗಳೆಂದು ಪರಿಗಣಿಸಲಾಗಿದೆ. ಅಲ್ಲದೇ 1952 ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೇ ರ‍್ಯಾಲಿ ನಡೆಸಲಾಗಿದೆ. ಇದಲ್ಲದೆ, ಕೇರಳ ಮತ್ತು ಕಲ್ಕತ್ತಾ ಹೈಕೋರ್ಟ್‍ಗಳು ಚುನಾವಣಾ ರ‍್ಯಾಲಿಗೆ ಅವಕಾಶ ನೀಡಿರುವುದನ್ನು ನಾವಿಲ್ಲಿ ಗಮನಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು.

    ನ್ಯಾಯಾಲಯದ ಪ್ರಶ್ನೆ:
    ಏಪ್ರಿಲ್‍ನಿಂದ ರೋಡ್ ಶೋಗಳು ನಡೆಯುತ್ತಿವೆ. ಆದರೆ ಈ ರೋಡ್ ಶೋಗೆ ಮಾತ್ರ ಯಾಕೆ ಪಿಎಎಲ್ (PIL) ಹಾಕಿದ್ದೀರಿ? ನಾಳೆ ರೋಡ್ ಶೋ ಇರುವಾಗ ಇಂದು ಅರ್ಜಿ ಸಲ್ಲಿಸಿದ್ದು ಯಾಕೆ? ಚುನಾವಣಾ ಆಯೋಗ ರೋಡ್ ಶೋ ಬಗ್ಗೆ ಏನಾದ್ರೂ ಮಾರ್ಗಸೂಚಿ ನೀಡಿದೆಯೇ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

    ನೀಟ್ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಬೇಕು. ರ‍್ಯಾಲಿಯಿಂದ ಜನರಿಗೆ ಸಮಸ್ಯೆಯಾಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆದಲ್ಲಿ ಸಂಘಟಕರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ಪೊಲೀಸ್ ಕಮಿಷನರ್ ಹೇಳಿದ್ದೇನು?
    ರ್ಯಾಲಿ ಇದ್ದಾಗ ಸಾರ್ವಜನಿಕರಿಗೆ ಹಿಂದಿನ ದಿನವೇ ಮಾಹಿತಿ ನೀಡುತ್ತಿದ್ದೇವೆ. ಮಾಹಿತಿ ನೀಡಲು ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದೇವೆ. ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಂಡಿದ್ದೇವೆ. ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದೇವೆ. ಅಂಬುಲೆನ್ಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

    ಅರ್ಜಿದಾರರ ವಾದ ಏನಿತ್ತು?
    ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ರಾಜಕೀಯ ಮುಖಂಡರು ಸಮಯವನ್ನು 5 ಗಂಟೆಗಳವರೆಗೆ ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಮೋದಿಯವರ ರೋಡ್ ಶೋಗೆ ಬೆಂಗಳೂರಿನ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ 10 ಲಕ್ಷ ಪಕ್ಷದ ಬೆಂಬಲಿಗರು ಸೇರಲಿದ್ದು ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಲಿದೆ. ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಅಂಬುಲೆನ್ಸ್ ಸಂಚಾರಕ್ಕೆ ತೊಂದೆಯಾಗಲಿದೆ. ಮೇ 13 ರಂದು ಗೆದ್ದರೆ ಮತ ಎಣಿಕೆಯ ನಂತರವೂ ರೋಡ್ ಶೋಗಳಿಗೆ ರಾಜಕೀಯ ಪಕ್ಷಗಳು ಯೋಚಿಸಿವೆ. ಹೀಗಿದ್ದರೂ, ರೋಡ್ ಶೋಗಳ ದುಷ್ಪರಿಣಾಮಗಳನ್ನು ತಡೆಯಲು ಬೆಂಗಳೂರು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅರ್ಜಿದಾರರಾದ ವಕೀಲ ಅಮೃತೇಶ್ ವಾದಿಸಿದ್ದರು.

    ರಾಜ್ಯ ಸರ್ಕಾರದ ವಾದ ಏನಿತ್ತು?
    ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು, ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಚುನಾವಣಾ ರ‍್ಯಾಲಿಗಳನ್ನು ಬಹಳ ಹಿಂದಿನಿಂದಲೂ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಇಲ್ಲಿಯ ವರೆಗೂ 2,517 ರ್ಯಾಲಿಗಳನ್ನು ಯಾವುದೇ ಅಹಿತಕರ ಘಟನೆ ವರದಿಯಾಗದಂತೆ ನಡೆದಿವೆ. ಈ ಪೈಕಿ 371 ಬೆಂಗಳೂರಿನಲ್ಲಿ ನಡೆದಿವೆ ಎಂದು ವಾದಿಸಿದರು.

    ಚುನಾವಣಾ ಪ್ರಕ್ರಿಯೆಯಲ್ಲಿ ರ‍್ಯಾಲಿಗಳನ್ನು ನಡೆಸುವ ಹಕ್ಕು ಭಾರತೀಯ ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ಖಾತ್ರಿಪಡಿಸಲಾದ ಭಾಷಣ, ಸಭೆ ಮತ್ತು ಚಳುವಳಿಯ ಹಕ್ಕುಗಳನ್ನು ಹೊಂದಿದೆ ಎಂದು ಅವರು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಕಾಂಗ್ರೆಸ್‍ದು 85 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿತ್ತು: ನರೇಂದ್ರ ಮೋದಿ

  • ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ವೇತನ ಹೆಚ್ಚಳ: ಪ್ರಿಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ

    ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ವೇತನ ಹೆಚ್ಚಳ: ಪ್ರಿಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ

    ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ (Anganwadi Workers) 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಹೊಸ ಘೋಷಣೆ ಮಾಡಿದರು.

    ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ ಹೊಸ ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿಯಲ್ಲಿ (Guarantee) ಮತ್ತೊಂದು ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಲೂಟ್, ಜೂಟ್ ಸರ್ಕಾರ ಇದೆ- ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

    ಕಾರ್ಯಕರ್ತೆಯರಿಗೆ ಯಾವುದೇ ಪೆನ್ಶನ್ ಸಿಗಲ್ಲ, ಸೌಲಭ್ಯ ಸಿಗಲ್ಲ. ಅಂಗನವಾಡಿ ಮಹಿಳೆಯರಿಗೆ 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು. ಬಿಸಿಯೂಟ ಕಾರ್ಯಕರ್ತರಿಗೆ 5 ಸಾವಿರ ರೂ. ವೇತನ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪರ ಯೋಗಿ ಭರ್ಜರಿ ಪ್ರಚಾರ – ರಾಮಮಂದಿರ ಉದ್ಘಾಟನೆಗೆ ಆಹ್ವಾನ

  • ವೇದಿಕೆಯಲ್ಲಿ ನಂದಿನಿ ವೆನಿಲ್ಲಾ ಫ್ಲೇವರ್ ಹಾಲು ಕುಡಿದ ಸಿದ್ದರಾಮಯ್ಯ

    ವೇದಿಕೆಯಲ್ಲಿ ನಂದಿನಿ ವೆನಿಲ್ಲಾ ಫ್ಲೇವರ್ ಹಾಲು ಕುಡಿದ ಸಿದ್ದರಾಮಯ್ಯ

    ಮೈಸೂರು: ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ (Chamundeshwari Constituency) ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವೇದಿಕೆಯಲ್ಲಿ ನಂದಿನಿ ವೆನಿಲ್ಲಾ ಫ್ಲೇವರ್ ಹಾಲು ಕುಡಿದು `ನಂದಿನಿ’ ಉತ್ಪನ್ನಕ್ಕೆ (Nandini Products) ಬೆಂಬಲ ಸೂಚಿಸಿದ್ದಾರೆ.

    ಮೈಸೂರು (Mysuru) ಹೊರವಲಯದ ಕೇರ್ಗಳ್ಳಿ ಗ್ರಾಮದ ಖಾಸಗಿ ಭವನದಲ್ಲಿ ಸಭೆ ನಡೆಯುವಾಗ ಆಪ್ತರೊಂದಿಗೆ ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ನಂದಿನಿ ವೆನಿಲ್ಲಾ ಫ್ಲೇವರ್ ಬಾಟಲಿ ಹಾಲು ಕುಡಿದು, ಬಳಿಕ ಬಾಟಲಿ ತೋರಿಸಿ `ನಂದಿನಿ’ ಉತ್ಪನ್ನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

    ನಂತರ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಎಲ್ಲರ ಅಭಿಪ್ರಾಯಪಡೆದು, ಎದುರಾಳಿಯನ್ನು ಎದುರಿಸುವ ಶಕ್ತಿ ಇರುವ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ. ಪಕ್ಷದಲ್ಲಿ ಎಲ್ಲರೂ ಸಮರ್ಥರಿದ್ದಾರೆ, ಆದ್ರೆ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ. ಆ ಕಾರಣಕ್ಕೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದೇಗೌಡರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ವರುಣಾದಲ್ಲಿ ಬಿಗ್‌ ಫೈಟ್‌: ಸಿದ್ದು v/s ಸೋಮಣ್ಣ – ಯಾರ ಕೈ ಹಿಡೀತಾರೆ ವರುಣಾ ಮತದಾರ?

    ಈಬಾರಿ ಚುನಾವಣೆಯನ್ನ ಪ್ರತಿಯೊಬ್ಬರು ಗಂಭೀರವಾಗಿ ತೆಗೆದುಕೊಳ್ಳಬೇಕು. ಕಳೆದಬಾರಿ ಜಿ.ಟಿ ದೇವೇಗೌಡ (GT Devegowda) ಅವರು ನನ್ನನ್ನ ಸೋಲಿಸಿದ್ರು. ನನ್ನನ್ನ ಸೋಲಿಸಿ ಬಹಳ ಒಳ್ಳಯ ಕೆಲಸ ಮಾಡಿದ್ರು, ಏಕೆಂದರೆ ಬಿಜೆಪಿ ಮಾತ್ರ ಅಧಿಕಾರಕ್ಕೆ ಬರಬಾರದು. ಅವರು ಮನುಷ್ಯ-ಮನುಷ್ಯರ ನಡುವೆ ಎತ್ತಿಕಟ್ತಾರೆ, ದೇಶದಲ್ಲಿ ಅಶಾಂತಿ ಉಂಟಾಗುತ್ತೆ, ಆ ಕಾರಣಕ್ಕೆ ಬಿಜೆಪಿ ಮಾತ್ರ ಅಧಿಕಾರಕ್ಕೆ ಬರಬಾರದು ಎಂದು ಗುಡುಗಿದರು. ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ

    ಯಾರಾದ್ರೂ ರಕ್ತಕೊಡಿ ಎಂದು ಕೇಳುವಾಗ ಜಾತಿ ನೋಡಲ್ಲ, ಮುಸ್ಲಿಂ ಆದರೂ ಸರಿ ಕೊಡಿ ಅಂತೀವಿ. ಆದ್ರೆ ಬಿಜೆಪಿಯವರು ಭೇದ ಭಾವ ಮಾಡೋದ್ರಲ್ಲಿ ಮುಂಚೂಣಿಯಲ್ಲಿದ್ದಾರೆ. ಆ ಕಾರಣಕ್ಕೆ ನಾವು ಕಳೆದಬಾರಿ ಜೆಡಿಎಸ್‌ಗೆ ಅಧಿಕಾರ ನೀಡಿದ್ದೆವು. ಆ ಸಂದರ್ಭದಲ್ಲಿ ಕುಮಾರಸ್ವಾಮಿ ಸಿಎಂ ಆದ್ರು, ಜಿ.ಟಿ ದೇವೇಗೌಡ ಶಿಕ್ಷಣ ಸಚಿವರಾದರು. ಅವರಿಬ್ಬರ ನಡುವೆ ಹೊಂದಾಣಿಕೆ ಇಲ್ಲದಿದ್ದಾಗ ನನ್ನ ಬಳಿ ಬಂದು, ಕಾಂಗ್ರೆಸ್‌ಗೆ ಬರ್ತೀನಿ ಅಂದಿದ್ರು. ಅವನೇ ಬಂದ, ಅವನೇ ಹೋದ, ಈವಾಗ ಜೆಡಿಎಸ್ ನಿಂದ ಅರ್ಜಿ ಹಾಕಿದ್ದಾನೆ. ಕುಮಾರಸ್ವಾಮಿ ಎಷ್ಟೇ `ಪಂಚರತ್ನ ಯಾತ್ರೆ’ ಮಾಡಿದ್ರೂ ಅಧಿಕಾರಕ್ಕೆ ಬರಲ್ಲ, ಇನ್ನೊಬ್ಬರ ಹೆಗಲಮೇಲೆ ಕುಳಿತೇ ಅಧಿಕಾರ ಮಾಡಬೇಕು ಎಂದು ಕುಟುಕಿದ್ದಾರೆ.