Tag: Karnataka Band

  • ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ನಾಳೆ ರಾಜ್ಯಾದ್ಯಂತ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲ ಸೂಚಿಸಿದ್ದು, ಕಲಾವಿದರೊಂದಿಗೆ ನಾಳೆ ಬೀದಿಗೆ ಇಳಿದು ಹೋರಾಟ ಮಾಡಲಿದೆ. ಬೆಳಗ್ಗೆಯಷ್ಟೇ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತೆ ಮತ್ತು ಮುಂದಾಳತ್ವ ವಹಿಸಿಕೊಳ್ಳುವಂತೆ ಶಿವರಾಜ್ ಕುಮಾರ್ ಅವರಿಗೆ ಫಿಲ್ಮ್ ಚೇಂಬರ್ ಮನವಿ ಮಾಡಿತ್ತು. ನಂತರ ನಿಖಿಲ್ ಕುಮಾರಸ್ವಾಮಿ (Nikhil Kumar) ಅವರನ್ನು ಭೇಟಿ ಮಾಡಿ, ಬಂದ್ ನಲ್ಲಿ ಭಾಗಿಯಾಗುವಂತೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚರ್ಚಿಸಿದ್ದಾರೆ.

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

    ಕಾವೇರಿ ನದಿ ನೀರಿನ ವಿಚಾರವಾಗಿ ಮೌನ ವಹಿಸುವ ನಟ ರಜನಿಕಾಂತ್ (Rajinikanth) ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು. ಅವರ ಚಿತ್ರಗಳನ್ನು ರಿಲೀಸ್ ಮಾಡಬಾರದು ಎಂದರು. ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

    ಕಾವೇರಿ ಹೋರಾಟ ಅಥವಾ ಕನ್ನಡ ಪರ ಹೋರಾಟಗಳು ನಡೆದಾಗೊಮ್ಮೆ ರಜನಿಕಾಂತ್ ಹೆಸರು ಪ್ರಸ್ತಾಪವಾಗುತ್ತದೆ. ಈ ಹಿಂದೆ ರಜನಿಕಾಂತ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದು ದೊಡ್ಡ ಮಟ್ಟದಲ್ಲೇ ಹೋರಾಟ ನಡೆದಿತ್ತು. ಸಿನಿಮಾಗಳ ಪ್ರದರ್ಶನವನ್ನೂ ತಡೆದಿದ್ದರು. ಇದೀಗ ಮತ್ತೆ ಅಂಥದ್ದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಾಜ್ಯದಲ್ಲಿ ಐವತ್ತು ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಹೀಗಾಗಿ ಮತ್ತೆ ರಜನಿ ವಿರುದ್ಧ ಗುಡುಗುವಂತಾಗಿದೆ.

    ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ

    ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Band)ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

    ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.

     

    ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

    ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

    ಬೆಂಗಳೂರು: ಪಿಯುಸಿ ಪರೀಕ್ಷೆ (PUC Exam) ಇರುವ ಕಾರಣ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಗೆ ಕರೆದಿದ್ದ ಕರ್ನಾಟಕ ಬಂದ್ (Karnataka Band) ವಾಪಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ (Ramalinga Reddy) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಭ್ರಷ್ಟಾಚಾರ ವಿರೋಧಿಸಿ ನಾಳೆ ಕಾಂಗ್ರೆಸ್‍ನಿಂದ 2 ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದೆವು. ಆದರೆ ನಾಳೆ ಪಿಯುಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು.

    ಭಾನುವಾರ  ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮಾತನಾಡಿ, ಬಿಜೆಪಿ (BJP) ಭ್ರಷ್ಟಾಚಾರ (Corruption) ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದರು. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ

    ಅಷ್ಟೇ ಅಲ್ಲದೇ ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ- 2018ರ ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಯಾರು?, ಸೋತವರೆಷ್ಟು?

  • ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು: ಆರ್.ಅಶೋಕ್

    ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು: ಆರ್.ಅಶೋಕ್

    ಬೆಂಗಳೂರು: ಹಿಜಬ್ ತೀರ್ಪಿನ ವಿರುದ್ಧ ಕರ್ನಾಟಕ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.

    ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ನೀಡಿರುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ನೀಡುವ ಮೂಲಕ ಭಾರತದ ಸಂವಿಧಾನವನ್ನು ಬುಡ ಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ವಿರುದ್ಧವೇ ಇವರು ಬಂದ್‍ಗೆ ಕರೆ ನೀಡಿದ್ದಾರೆ. ಇವರು ಎಷ್ಟು ಕಾನೂನು ಪಾಲನೆ ಮಾಡುತ್ತಾರೆ ಅಂತ ಇವರನ್ನು ಬೆಂಬಲಿಸೋ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಹಿಜಬ್ ತೀರ್ಪಿನ ಬಗ್ಗೆ ಮೇಲ್ಮನವಿ ಹೋಗಬಹುದು. ಹೈಕೋರ್ಟ್ ವಿರುದ್ಧ ತೀರುಗಿ ನಿಲ್ಲುವುದು ಸರಿಯಲ್ಲ. ಇಂತವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ತೀರ್ಪನ್ನು ದೇಶದೆಲ್ಲೆಡೆ ಸ್ವಾಗತ ಮಾಡಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಸಂವಿಧಾನದವನ್ನು ಬುಡಮೇಲು ಮಾಡುವ ಕ್ರಿಯೆ ಇದು. ಕೆಲ ರಾಷ್ಟ್ರ ವಿರೋಧಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಕೋರ್ಟ್ ತೀರ್ಪು ಬಗ್ಗೆ ಇವರಿಗೆ ಎಷ್ಟು ಗೌರವ ಇದೆ ಅನ್ನುವುದು ಇಲ್ಲಿಯೇ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

  • ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

    ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್‍ ಮೇಯರ್ ಬಿಡುಗಡೆ

  • ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಬೆಂಗಳೂರು: ಹೈಕೋರ್ಟ್ ಹಿಜಬ್‌ಗೆ ಸಂಬಂಧ ಪಟ್ಟಂತೆ ನೀಡಿರುವ ತೀರ್ಪು ಮುಸ್ಲಿಂ ಬಾಂಧವರಿಗೆ ನೋವು ತಂದಿದೆ. ಈ ನೋವನ್ನು ನಾವು ನಾಳೆ ತೋರಿಸಲಿದ್ದೇವೆ. ಮುಸ್ಲಿಂ ಸಂಘಟನೆಗಳು ಗುರುವಾರ ಬಂದ್‌ಗೆ ಕರೆ ಕೊಟ್ಟಿದೆ ಎಂದು ಮುಸ್ಲಿಂ ಮುಖಂಡ ಮೌಲಾನಾ ಮುಸ್ಕೂದ್ ಇಬ್ರಾನ್ ರಶೀದ್ ಹೇಳಿಕೆ ನೀಡಿದ್ದಾರೆ.

    ಕಮಿಷನರ್ ಕಮಲ್ ಪಂತ್ ಜೊತೆ ನಡೆಸಿದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಶೀದ್ ನಾಳೆ ಯಾರು ಕೂಡಾ ಮನೆಯಿಂದ ಆಚೆ ಬರಬಾರದು. ಮೈದಾನಗಳಲ್ಲಿ ಸೇರಬಾರದು. ರ‍್ಯಾಲಿಗಳನ್ನು ನಡೆಸಬಾರದು. ಮುಸ್ಲಿಮ್ ವಿದ್ಯಾರ್ಥಿಗಳು ಶಾಲೆಗೆ ತೆರಳಬಾರದು. ಬದಲಿಗೆ ಮನೆಯಲ್ಲಿಯೇ ಇರಬೇಕು. ಯಾವುದೇ ಪ್ರತಿಭಟನೆ ನಡೆಸದೇ ಶಾಂತಿಯುತವಾಗಿ ನಮ್ಮ ನೋವನ್ನು ತೋರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಅತ್ಯಗತ್ಯವಲ್ಲ ವಾದ ಬೇಸರ ತಂದಿದೆ: ಉಡುಪಿ ಮುಸ್ಲಿಮ್ ಒಕ್ಕೂಟ

    ಈ ವೇಳೆ ಮಾತನಾಡಿದ ಕಮಿಷನರ್ ಕಮಲ್ ಪಂತ್ ಗುರುವಾರ ಮುಸ್ಲಿಂ ಮುಖಂಡರು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಹಿಜಬ್ ಬಗೆಗಿನ ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಇಂದು ನಾವು ಮುಸ್ಲಿಂ ಮುಖಂಡರ ಜೊತೆ ಸಭೆ ಮಾಡಿದ್ದೇವೆ. ಗುರುವಾರ ಹೊರಗಡೆ ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದು ಹಾಗೂ ಕಚೇರಿಗೆ ತೆರಳುವವರನ್ನು ನಾವು ತಡೆಯುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ

    ಬಂದ್ ಅನ್ನು ಶಾಂತಿಯುತವಾಗಿ ನಡೆಸುತ್ತಿರುವುದಾದರೂ ಸಾಕಷ್ಟು ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಟ್‌ನಲ್ಲಿ ಇರುತ್ತಾರೆ. ಕೆಲವೆಡೆ ರೂಟ್ ಮಾರ್ಚ್ ಮಾಡಲಾಗುವುದು. 25 ಕೆಎಸ್‌ಆರ್‌ಪಿ ಹಾಗೂ 35 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕಮಲ್ ಪಂತ್ ತಿಳಿಸಿದರು.

  • ಕನ್ನಡ ಸಿನಿಮಾಗಳನ್ನು ಕಿಲ್ ಮಾಡಲು ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ: ನಿಖಿಲ್

    ಕನ್ನಡ ಸಿನಿಮಾಗಳನ್ನು ಕಿಲ್ ಮಾಡಲು ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ: ನಿಖಿಲ್

    ಹಾಸನ: ರೈಡರ್ ಚಿತ್ರ ಬಿಡುಗಡೆಯಾದ 9 ಗಂಟೆಯಲ್ಲಿ 25 ಲಕ್ಷ ಜನ ವೆಬ್ ಸೈಟ್‍ಗಳಲ್ಲಿ ಪೈರಸಿ ಚಿತ್ರ ವೀಕ್ಷಿಸಿದ್ದಾರೆ. ಪೈರಸಿಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೆವು. ಆದರೂ ಒಂದಿಷ್ಟು ಜನ ಕನ್ನಡ ಸಿನಿಮಾಗಳನ್ನು ಹಾಳು ಮಾಡಲು, ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಎಲ್ಲರೂ ಕಷ್ಟಪಟ್ಟು ಉತ್ತಮ ಕಥೆ ಆಯ್ಕೆ ಮಾಡಿ ಹೈಕ್ವಾಲಿಟಿ ಸಿನಿಮಾ ಮಾಡಿರುತ್ತೇವೆ. ಅದನ್ನು ಮೊಬೈಲ್‍ನಲ್ಲಿ ನೋಡುವುದು ಅಷ್ಟು ಚೆನ್ನಾಗಿ ಇರುವುದಿಲ್ಲ ಎಂದು ನಿಖಿಲ್ ಹೇಳಿದರು.

    ಇದೇ ವೇಳೆ ಡಿಸೆಂಬರ್ 31ರ ರಾಜ್ಯ ಬಂದ್ ಕರೆಯ ಹಿನ್ನೆಲೆಯಲ್ಲಿ ಮಾತನಾಡಿದ ನಿಖಿಲ್, ಎರಡು ವರ್ಷಗಳ ಕೊರೊನಾ ಸಂಕಷ್ಟದ ನಂತರ ಸಾಕಷ್ಟು ಚಿತ್ರಗಳು ಬಿಡುಗಡೆಯಾಗಿವೆ. ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಬಂದ್ ಮಾಡುವುದರಿಂದ ಕನ್ನಡ ಚಿತ್ರಗಳಿಗೆ, ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ ಎಂದರು. ಇದನ್ನೂ ಓದಿ: ರೈಡರ್‌ ಸಿನಿಮಾ ಪೈರಸಿ – ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು

    ಮಾಧ್ಯಮದಲ್ಲಿ ಪ್ರಚಾರ ಪಡೆಯುವುದಕ್ಕಾಗಿ ಬಂದ್ ಸೀಮಿತವಾಗಬಾರದು. ಅಂತಹ ಬಂದ್ ನಮಗೆ ಅವಶ್ಯಕತೆ ಇಲ್ಲ. ಬಂದ್‍ಗೆ ಕರೆ ಕೊಟ್ಟಿರುವವರು ಇನ್ನೊಮ್ಮೆ ಯೋಚನೆ ಮಾಡಲಿ ಎಂದು ಮನವಿ ಮಾಡಿದರು.

    ಇದೇ ಸಮಯದಲ್ಲಿ ತಂದೆ ಹೆಚ್‍ಡಿ ಕುಮಾರಸ್ವಾಮಿ, ನಿಖಿಲ್ ಸಿನಿಮಾದಲ್ಲಿ ಮುಂದುವರಿಯಲಿ ಎಂಬ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ಅವರ ಮಾತಿನ ಉದ್ದೇಶ ಅದಲ್ಲ. ನನ್ನನ್ನು ಒಬ್ಬ ಕಲಾವಿದನಾಗಿ ಜನರು ಗುರುತಿಸುತ್ತಿದ್ದಾರೆ. ಅದು ನನಗೆ ಹೆಮ್ಮೆ ಇದೆ. ಇದರ ಹಿನ್ನೆಲೆಯಲ್ಲಿ ನನ್ನ ತಂದೆ ಸಿನಿಮಾ ಮಾಡಬೇಕು, ಬಿಡಬಾರದು ಎಂದು ಕಿವಿಮಾತು ಹೇಳಿದ್ದಾರೆ. ನನ್ನ ವೃತ್ತಿ ಸಿನಿಮಾ. ರಾಜಕೀಯದ ವಿಚಾರ ಬಂದಾಗ ಅದರ ಬಗ್ಗೆ ನಾನು ಪ್ರತಿಕ್ರಿಯಿಸುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಸಿನಿಮಾಗಳು ಈಗ ಲೆಕ್ಕಕ್ಕೆ ಬರೋದಿಲ್ಲ, ಅವನ ಸಮಾಜಸೇವೆ ಎಲ್ಲವನ್ನೂ ಪಕ್ಕಕ್ಕಿಟ್ಟಿದೆ: ರಾಘಣ್ಣ

  • ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

    ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

    ಬೆಂಗಳೂರು: ಕನ್ನಡ ಧ್ವಜಕ್ಕೆ, ನಾಡು-ನುಡಿಯನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಆದರೆ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮನವಿ ಪತ್ರ ಸಲ್ಲಿಸಿದ್ದಾರೆ.

    ಪತ್ರದಲ್ಲಿ ಏನಿದೆ?: ಕನ್ನಡದ, ಕನ್ನಡಿಗರ, ಕನ್ನಡಪರ ಹೋರಾಟಗಾರರ ಪ್ರಶ್ನಾತೀತ ನಾಯಕರೇ, ತಮ್ಮಲ್ಲಿ ವಿನಮ್ರತೆಯಿಂದ ನಿವೇದಿಸಿಕೊಳ್ಳುವುದೇನೆಂದರೆ ಡಿ.22 ರಂದು ನಾವೆಲ್ಲರೂ ಒಮ್ಮತದಿಂದ ದಿನಾಂಕ 31ರ ಶುಕ್ರವಾರ ರಾಜ್ಯ ಬಂದ್‌ಗೆ ಕರೆ ನೀಡಿದ್ದೆವು. ಆದರೆ ನಂತರ ನಡೆದ ಹಲವಾರು ಬೆಳವಣಿಗೆಗಳಿಂದ ನಮ್ಮ ಈ ನಿರ್ಧಾರ ಪ್ರಸ್ತುತ ಸರಿ ಇಲ್ಲವೆಂಬ ಭಾವನೆ ಮೂಡುತ್ತಿದೆ.

    ಕಾರಣ ಓಮಿಕ್ರಾನ್ ಈಗಾಗಲೇ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ತತ್ಪರಿಣಾಮವಾಗಿ ಸೆಕ್ಷನ್ 144 ಹಾಗೂ ರಾತ್ರಿ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಈಗಾಗಲೇ ಕೋವಿಡ್ ಕಾರಣದಿಂದ ಸಾಕಷ್ಟು ಸಂಕಷ್ಟದಲ್ಲಿರುವ ವರ್ತಕರು ವಾಣಿಜ್ಯೋದ್ಯಮಿಗಳು ಹೋಟೆಲ್ ಮಾಲೀಕರು ನಮ್ಮ ಈ ನಿರ್ಧಾರದಿಂದ ಸಾಕಷ್ಟು ಆತಂಕದಲ್ಲಿದ್ದಾರೆ. ಹಿಂದಿನ ವರ್ಷದ ಕೊನೆಯಲ್ಲಿ ಹೊಸ ವರ್ಷದ ಆರಂಭದಲ್ಲಿ ಒಳ್ಳೆಯ ವ್ಯಾಪಾರ ವಹಿವಾಟಿನ ನಿರೀಕ್ಷೆಯಲ್ಲಿದ್ದ, ವ್ಯಾಪಾರಸ್ಥರು ಬಹಳ ನಷ್ಟವನ್ನು ಅನುಭವಿಸಿದ್ದಾರೆ.

    ಸದಾಕಾಲ ನಮ್ಮ ಜೊತೆ ನಿಲ್ಲುತ್ತಿದ್ದ ಚಿತ್ರೋದ್ಯಮ ಕೆಲವು ಸಂಘಟನೆಗಳು ತಮ್ಮ ಅಸಮಾಧಾನವನ್ನು ಹೊರ ಹಾಕಿವೆ. ಸಾರ್ವಜನಿಕ ವಲಯ ಹಾಗೂ ಬಹಳ ಪ್ರಮುಖವಾಗಿ ಬೆಳಗಾವಿಯ ಕ್ರಿಯ ಸಮಿತಿ ಕೂಡ ನಮ್ಮ ಬಂದ್‌ಗೆ ಬೆಂಬಲ ನೀಡುತ್ತಿಲ್ಲ. ನಮ್ಮ ಸಂಘಟನೆಯ ಪದಾಧಿಕಾರಿಗಳಲ್ಲೂ ಬಂದ್ ಬಗ್ಗೆ ಒಮ್ಮತ ಸಾಧ್ಯವಾಗಿಲ್ಲ. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಈ ಎಲ್ಲಾ ಕಾರಣಗಳನ್ನು ಗಮನಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಬಂದ್ ದಿನಾಂಕವನ್ನು ಮೂಂದೂಡುವುದು ಸೂಕ್ತ. ಮುಂದಿನ ಸಭೆಯಲ್ಲಿ ಚರ್ಚಿಸಿ ದಿನಾಂಕ ನಿಗದಿಗೊಳಿಸೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ 

  • ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಬೆಂಗಳೂರು: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ ಉಳಿದಿದ್ದು, ಹಲವು ವಲಯಗಳಿಂದ ಇನ್ನೂ ಪರಿಪೂರ್ಣ ಬೆಂಬಲ ಸಿಕ್ಕಿಲ್ಲ. ಈ ಪರಿಣಾಮ ಬಂದ್ ಯಶಸ್ವಿಗೊಳಿಸೋಕೆ ಕನ್ನಡಪರ ಸಂಘಟನೆಗಳು ಹರಸಾಹಸ ಪಡುತ್ತಿವೆ.

    ಡಿ.31ರ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಅದಕ್ಕೆ ಎಲ್ಲ ಕಡೆಯಿಂದ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಪರಿಣಾಮ ಕನ್ನಡಪರ ಸಂಘಟನೆಗಳು ಬಂದ್ ಯಶಸ್ವಿಗೊಳಿಸೋಕೆ ಪಣತೊಟ್ಟಿವೆ. ಬಂದ್ ಗೆ ಬೆಂಬಲ ಕೋರಿ ಕೆಲ ಸಂಘಟನೆಗಳಿಂದ ರ‍್ಯಾಲಿ ಮಾಡುತ್ತಿವೆ. ಮತ್ತೆ ಕೆಲ ಸಂಘಟನೆಗಳಿಂದ ಬಂದ್ ಗೆ ಬೆಂಬಲ ಬೇಡ ಎಂದು ತೀರ್ಮಾನಿಸಲು ಇಂದು ಸಭೆ ಕರೆಯಲಾಗಿದೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ 

    ಬಂದ್ ಗೆ ಬೆಂಬಲ ಬೇಡ ಎಂದು ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳಿಂದ ಡಿ.30ಕ್ಕೆ ನಗರದಲ್ಲಿ ರ‍್ಯಾಲಿ ಮಾಡಲು ನಿರ್ಧರಿಸಲಾಗಿದೆ. ಇನ್ನು ಹಲವು ಸಂಘಟನೆಗಳು ನೈತಿಕ ಬೆಂಬಲ ನೀಡುವುದಾಗಿ ಘೋಷಿಸಿವೆ. ನೈತಿಕ ಬೆಂಬಲ ಬೇಡ ಸಂಪೂರ್ಣ ಬೆಂಬಲ ಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

    ಹೋಟೆಲ್, ಪಬ್, ಬಾರ್ ಮಾಲೀಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಾವು ನೈತಿಕ ಬೆಂಬಲ ನೀಡುತ್ತೇವೆ ಎಂದು ತಿಳಿಸಿವೆ. ಹೀಗಾಗಿ ಕನ್ನಡಪರ ಸಂಘಟನೆಗಳು ನೈತಿಕ ಬೆಂಬಲಕ್ಕೆ ಅಸಮಾಧಾನ ವ್ಯಕ್ತಪಡಿಸಿವೆ.

    ಹಲವು ಗೊಂದಲಗಳ ನಡುವೆ ಬಂದ್ ನ್ನು ಯಶಸ್ವಿಗೊಳಿಸಲೇಬೇಕಾದ ಒತ್ತಡದಲ್ಲಿ ಕನ್ನಡಪರ ಸಂಘಟನೆಗಳು ಇದ್ದು, ರಾಜ್ಯದಲ್ಲಿ ತಮ್ಮ ಶಕ್ತಿ ಸಾಬೀತಾಗಬೇಕಾದರೆ ಬಂದ್ ಯಶಸ್ವಿಯಾಗಲೇಬೇಕು ಎಂದು ಪಣತೊಟ್ಟಿವೆ. ಇದನ್ನೂ ಓದಿ: ಗ್ರಾಪಂ ಸದಸ್ಯ 15 ಲಕ್ಷ ಲಂಚ ಪಡೆಯುವುದು ಭ್ರಷ್ಟಾಚಾರವಲ್ಲ: ಬಿಜೆಪಿ ಸಂಸದ

    ಮೊನ್ನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸತ್ಯಾಗ್ರಹ, ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ಮನವಿ, ಮಾಲ್ ಗಳಲ್ಲಿ ರ‍್ಯಾಲಿ, ಮಲ್ಲೇಶ್ವರಂನಲ್ಲಿ ಉರುಳು ಸೇವೆ ಮಾಡಿ ಬಂದ್ ಗೆ ಕನ್ನಡಪರ ಸಂಘಟನೆಗಳು ಬೆಂಬಲ ಕೋರಿವೆ. ಈ ವೇಳೆ 100 ಕ್ಕೂ ಹೆಚ್ಚು ಹೋರಾಟಗಾರರಿಂದ ಉರುಳು ಸೇವೆ ಮೂಲಕ ಮನವಿ ಮಾಡಲಾಯಿತು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿರುವುದರಿಂದ ಬಂದ್ ಮಾಡಲೇಬೇಕು ಎಂದು ಸಂಘಟನೆಗಳು ಪಣತೊಟ್ಟಿವೆ.

  • ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

    ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

    ಚಿತ್ರದುರ್ಗ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ. ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ನಮ್ಮ ಸಾಹಿತ್ಯ, ಭಾಷೆ, ಸಂಸ್ಕೃತಿಗೆ ಪ್ರಥಮ ಆದ್ಯತೆ ನೀಡುತ್ತೇವೆ. ಇದರ ವಿರುದ್ಧ ಮಾತನಾಡುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ಸರ್ಕಾರ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಗೃಹ ಇಲಾಖೆ ಎಚ್ಚರಿಕೆ ವಹಿಸಿದೆ ಎಂದ ಅವರು, ಕನ್ನಡ ಸಂಘಟನೆ, ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಪ್ರತಿ ಬಾರಿ ಇಂತಹ ಘಟನೆ ಆದಾಗ ಬಂದ್ ಮಾಡುವುದು ಸರಿಯಲ್ಲ. ಬಂದ್ ಕೈಬಿಡಿ ಎಂದು ಮನವಿ ಮಾಡಿದರು.

    ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಕಾಯ್ದೆ ವಾಪಸ್ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಅವರು, ಸರ್ಕಾರ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅದಕ್ಕೆ ಮತಾಂತರ ಕಾಯ್ದೆ, ಗೋಹತ್ಯೆ ಕಾನೂನು, ಟಿಪ್ಪು ಜಯಂತಿ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಓಬವ್ವ ಜಯಂತಿ ಮಾಡುವ ಬೊಮ್ಮಾಯಿ ಬೇಕೋ? ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೋ? ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ಇದೆಲ್ಲವನ್ನು ಕೂಡಾ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗೋದು: ಮಹಾಂತೇಶ್ ಕವಟಗಿಮಠ

    ಮತಾಂತರ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಸೆ, ಆಮೀಷ ಒಡ್ಡಿ ಮತಾಂತರ ಮಾಡಬಾರದು ಎಂಬುದು ಕಾನೂನಿನಲ್ಲಿದೆ. ಈ ಕಾನೂನಿನಲ್ಲಿ ತಪ್ಪೇನಿಲ್ಲ. ಈ ಬಗ್ಗೆ ರಾಜ್ಯದ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಟ್ಟ ಸಂದೇಶ ಕೊಡುತ್ತಿದ್ದಾರೆ. ಟಿಪ್ಪು ಜಯಂತಿ, ಮತಾಂತರ ಕಾಯ್ದೆ ತರುವೆ ಎಂದು ಪ್ರತ್ಯೇಕ ಸಂದೇಶ ನೀಡುತ್ತಾರೆ. ನಾವು ಇದನ್ನು ದೊಡ್ಡ ಪ್ರಮಾಣದಲ್ಲಿ ಎದುರಿಸುತ್ತೇವೆ, ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ

    ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಸಿಎಂ ಬದಲಾವಣೆ ನೂರಕ್ಕೆ ನೂರು ಊಹಾಪೂಹವಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರೇ ದಾವಣಗೆರೆಗೆ ಬಂದಾಗ ಸ್ಪಷ್ಟಪಡಿಸಿದ್ದರು. ನಿನ್ನೆ ಅರುಣ್ ಸಿಂಗ್ ಅವರು ಕೂಡಾ ಹೇಳಿದ್ದಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಅಭಿಪ್ರಾಯಪಟ್ಟರು.