Tag: karnataka bank

  • ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್‌ ಹೃದಯಾಘಾತದಿಂದ ನಿಧನ

    ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್‌ ಹೃದಯಾಘಾತದಿಂದ ನಿಧನ

    ಮಂಗಳೂರು: ಕರ್ಣಾಟಕ ಬ್ಯಾಂಕ್‌ನ (Karnataka Bank) ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್‌ (P Jayaram Bhat) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಠಾತ್ ಹೃದಯಾಘಾತಕ್ಕೆ ಒಳಗಾದ ಜಯರಾಂ ಭಟ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

    ಜಯರಾಂ ಭಟ್‌ ಅವರು ಬ್ಯಾಂಕಿಂಗ್ ಕಾರ್ಯಾಚರಣೆಗಳ ಎಲ್ಲಾ ಅಂಶಗಳಲ್ಲಿ ಅಪಾರ ಅನುಭವ ಹೊಂದಿದ್ದರು. 2009ರ ಜುಲೈ 14 ರಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ಅನಂತಕೃಷ್ಣ ಅವರ ನಂತರ ಅರೆಕಾಲಿಕ ನಾನ್-ಎಕ್ಸಿಕ್ಯೂಟಿವ್ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಂಡು ಸೇವೆ ಸಲ್ಲಿಸಿದ್ದರು. ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದಿದ್ದ ಭಟ್‌ ಅವರು ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಬಂದು ಅಚ್ಚರಿ ಮೂಡಿಸುವಂತೆ ಸಾಧನೆ ಮಾಡಿದರು.

     

    1973 ರಲ್ಲಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿ ಬದುಕು ಆರಂಭಿಸಿದರು. ನಂತರ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮುಖ್ಯ ಅಕೌಂಟೆಂಟ್ ಕೆಲಸ ಮಾಡಿದರು. 14 ವರ್ಷಗಳ ಕಾಲ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದರು. ಸಹಾಯಕ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಂತಿಮವಾಗಿ ಮುಖ್ಯ ಜನರಲ್ ಮ್ಯಾನೇಜರ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸಿದ್ದರು.

    ಇದನ್ನೂ ಓದಿ: ಮತ ಬ್ಯಾಂಕಿಗೆ ಸಿದ್ದರಾಮಯ್ಯ ಸರ್ಕಾರ ಬೊಕ್ಕಸವನ್ನು ಲೂಟಿ ಮಾಡಿ ರೈತರ ನಾಶಕ್ಕೆ ಮುಂದಾಗುತ್ತಿದೆ: ಸಿ.ಟಿ.ರವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    ಬಳ್ಳಾರಿ: ಎಟಿಎಂಗೆ ಹಾಕಬೇಕಿದ್ದ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬಳ್ಳಾರಿಯ ಬ್ರೂಸ್ ಪೇಟ್ ಪೊಲೀಸರು ಬಂಧಿಸಿದ್ದಾರೆ.

    ಸಿಎಂಎಸ್ ಕಂಪನಿಯಲ್ಲಿ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ನೀಲಕಂಠ ಬಂಧಿತ ಆರೋಪಿ. ನೀಲಕಂಠನಿಗೆ ಕರ್ಣಾಟಕ ಬ್ಯಾಂಕ್‍ನವರು, ಕರ್ಣಾಟಕ ಬ್ಯಾಂಕ್ ಎಟಿಎಂಗಳಿಗೆ ಹಣ ಹಾಕಲು ಸುಮಾರು 50.18 ಲಕ್ಷ ಹಣ ನೀಡಿದ್ದರು. ನೀಲಕಂಠ ಎಟಿಎಂಗೆ ಹಾಕಲು ಕೊಟ್ಟಿದ್ದ ಹಣದ ಜೊತೆಯಲ್ಲಿ ಎಟಿಎಂನಲ್ಲಿ ಇದ್ದ 6 ಲಕ್ಷ ರೂ. ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದ. ಒಟ್ಟು 56.18 ಲಕ್ಷ ಕದ್ದು ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಜಮೀನು ವಿವಾದ – ಕಾರ್ಮಿಕನ ಕಾಲಿನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಘಟನೆಯು ಶನಿವಾರ ನಡೆದಿದ್ದು, ಪ್ರಕರಣ ನಡೆದ 24 ಗಂಟೆಯಲ್ಲಿ ಖಚಿತ ಮಾಹಿತಿ ಮೇರೆಗೆ, ಆರೋಪಿಯನ್ನು ಕೊಪ್ಪಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕದ್ದ ಹಣದಲ್ಲಿ ನೀಲಕಂಠ ಒಂದು ಮೊಬೈಲ್ ತೆಗೆದುಕೊಂಡಿದ್ದು, ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆದಿದ್ದಾರೆ.

  • ಕರ್ಣಾಟಕ ಬ್ಯಾಂಕಿನ ಅಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಪಂಜ ನೇಮಕ

    ಕರ್ಣಾಟಕ ಬ್ಯಾಂಕಿನ ಅಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಪಂಜ ನೇಮಕ

    ಬೆಂಗಳೂರು: ಕರ್ಣಾಟಕ ಬ್ಯಾಂಕಿನ ಅಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಪಂಜ ನೇಮಕವಾಗಿದ್ದಾರೆ.

    ಕರ್ಣಾಟಕ ಬ್ಯಾಂಕಿನ  ಸ್ವತಂತ್ರ ನಿರ್ದೇಶಕರಾಗಿದ್ದ ಪ್ರದೀಪ್‌ ಕುಮಾರ್‌ ಪಂಜ ಅವರನ್ನು ಅರೆಕಾಲಿಕ ಅಧ್ಯಕ್ಷರನ್ನಾಗಿ ನವೆಂಬರ್‌ 2021ರಿಂದ ಅನ್ವಯವಾಗುವಂತೆ ಮೂರು ವರ್ಷಗಳ ಅವಧಿಯ ನೇಮಕಾತಿಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಅನುಮೋದಿಸಿದೆ. ಬ್ಯಾಂಕಿನ ಪ್ರಸಕ್ತ ಅಧ್ಯಕ್ಷರಾದ ಜಯರಾಮ ಭಟ್‌ ಅವರ ಅಧಿಕಾರವಾಧಿ ನವೆಂಬರ್‌ 13ಕ್ಕೆ ಅಂತ್ಯವಾಗಲಿದೆ.

    ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ(ಕಾರ್ಪೋರೇಟ್‌ ಬ್ಯಾಂಕಿಂಗ್‌) ಪ್ರದೀಪ್‌ ಕುಮಾರ್‌ ನಿವೃತ್ತರಾಗಿದ್ದಾರೆ. ಇದಕ್ಕೂ ಮೊದಲು ಸ್ಟೇಟ್‌ ಬ್ಯಾಂಕ್‌ ಆಫ್‌ ಟ್ರಾವಂಕೂರ್‌ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ಹಲವು ವರ್ಷ ನಿರ್ವಹಿಸಿದ್ದರು.

    ಎಸ್‌ಬಿಐ ಜೊತೆಗಿನ 39 ವರ್ಷಗಳ ಒಡನಾಟದಲ್ಲಿ ಕಾರ್ಪೋರೇಟ್‌ ಮತ್ತು ಅಂತರಾಷ್ಟ್ರೀಯ ಬ್ಯಾಂಕಿಂಗ್‌, ಖಜಾನೆ ನಿರ್ವಹಣೆ, ಮಾಹಿತಿ ತಂತ್ರಜ್ಞಾನ, ರಿಟೇಲ್‌ ಬ್ಯಾಂಕಿಂಗ್‌, ವಹಿವಾಟು ಬ್ಯಾಂಕಿಂಗ್‌, ಕಾರ್ಯತಂತ್ರದ ಯೋಜನೆ, ವ್ಯಾಪಾರ ಅಭಿವೃದ್ಧಿ ಅಪಾಯ ನಿರ್ವಹಣೆ ಸೇರಿದಂತೆ ಬ್ಯಾಂಕಿನ ವಿವಿಧ ಕ್ಷೇತ್ರಗಳಲ್ಲಿ ಅನುಭವವನ್ನು ಹೊಂದಿದ್ದಾರೆ.

    ಪ್ರದೀಪ್‌ ಕುಮಾರ್‌ ಪ್ರಸ್ತುತ ಬ್ಯಾಂಕ್‌ ಆಫ್‌ ಬ್ಯುರೋ(ಬಿಬಿಬಿ) ಸದಸ್ಯರಾಗಿದ್ದಾರೆ. ಆಸ್ತಿ ಪುನರ್‌ ನಿರ್ಮಾಣ, ಸಿಮೆಂಟ್‌, ರಿಯಲ್‌ ಎಸ್ಟೇಟ್‌, ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್‌ಬಿಎಫ್‌ಸಿ) ಇತ್ಯಾದಿ ವ್ಯವಹಾರದಲ್ಲಿ ತೊಡಗಿರುವ ಏಳು ಕಂಪನಿಗಳಲ್ಲಿ ನಿರ್ದೇಶಕರಾಗಿದ್ದಾರೆ. ಇದನ್ನೂ ಓದಿ: ಉದ್ಯೋಗಿಗಳ ಬೆಸ್ಟ್‌ ಕಂಪನಿ ಔಟ್‌ – ಭಾರತದ ಯಾವ ಕಂಪನಿಗೆ ಎಷ್ಟನೇ ಸ್ಥಾನ?

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದ ಪ್ರದೀಪ್‌ ಕುಮಾರ್‌ ಕರ್ಣಾಟಕ ಬ್ಯಾಂಕ್‌ನಲ್ಲಿ 2020ರ ಆಗಸ್ಟ್‌ 19 ರಿಂದ ನಿರ್ದೇಶಕರಾಗಿದ್ದಾರೆ. ಪ್ರದೀಪ್‌ ಕುಮಾರ್‌ ನೇಮಕಾತಿಯನ್ನು ʼಸ್ವತಂತ್ರ ನಿರ್ದೇಶಕರಾಗಿʼ ಷೇರುದಾದರರು ಸೆಪ್ಟೆಂಬರ್‌ 2 ರಂದು ನಡೆದ 97ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದಿಸಿದ್ದರು.

  • ಮ್ಯಾನೇಜರ್ ಸೇರಿ ಐವರಿಗೆ ಕೊರೊನಾ, ಬ್ಯಾಂಕ್ ಸೀಲ್‍ಡೌನ್

    ಮ್ಯಾನೇಜರ್ ಸೇರಿ ಐವರಿಗೆ ಕೊರೊನಾ, ಬ್ಯಾಂಕ್ ಸೀಲ್‍ಡೌನ್

    ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್‍ವೊಂದು ಸೀಲ್‍ಡೌನ್

    ಕರ್ನಾಟಕ ಬ್ಯಾಂಕ್ ಎರಡು ದಿನಗಳ ಕಾಲ ಕೊರೊನಾ ಆತಂಕದಿಂದ ಸೀಲ್‍ಡೌನ್ ಆಗಿದೆ. ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಐವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ಬ್ಯಾಂಕನ್ನು ಸೀಲ್‍ಡೌನ್ ಮಾಡಲಾಗಿತ್ತು.

    ಶುಕ್ರವಾರ, ಶನಿವಾರ ಹಾಗೂ ಇಂದು ಭಾನುವಾರವಾದ್ದರಿಂದ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿತ್ತು. ಕಳಸ ಪಟ್ಟಣ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆಯೂ ಹೆಚಾಗಿದೆ. ಗ್ರಾಮೀಣ ಭಾಗವಾದ್ದರಿಂದ ಬಹುತೇಕ ಕೂಲಿ ಕಾರ್ಮಿಕರು ಕರ್ನಾಟಕ ಬ್ಯಾಂಕಲ್ಲಿ ಅಕೌಂಟ್ ಮಾಡಿಸಿದ್ದು ಕಳೆದ ಮೂರು ದಿನಗಳಿಂದ ಹಣ ಬಿಡಿಸಲಾಗದೇ ಒದ್ದಾಡಿದ್ದಾರೆ.

    ಕೆಲವರು ಕೂಲಿ ಕಾರ್ಮಿಕರು ಮಾಡಿದ ಕೆಲಸಕ್ಕೆ ಕೂಲಿ ನೀಡಲು ಹಣ ಬಿಡಿಸಲಾಗದಂತಹಾ ಸ್ಥಿತಿ ನಿರ್ಮಾಣವಾಗಿದೆ. ಬ್ಯಾಂಕ್ ಸೀಲ್‍ಡೌನ್‍ನಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸಿದ್ದಾರೆ. ಈ ಬ್ಯಾಂಕಿನಲ್ಲಿ ಏಳು ಜನ ಕೆಲಸ ಮಾಡುತ್ತಿದ್ದು, ಐದು  ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು.