Tag: Karnataka Bhavan

  • ಸರ್ಕಾರಿ ಸೌಲಭ್ಯಗಳ ದುರ್ಬಳಕೆ ಆರೋಪ – ಕರ್ನಾಟಕ ಭವನದ ಹೆಚ್ಚುವರಿ ಆಯುಕ್ತೆ ವಿರುದ್ಧ ಸಿಎಸ್‌ಗೆ ದೂರು

    ಸರ್ಕಾರಿ ಸೌಲಭ್ಯಗಳ ದುರ್ಬಳಕೆ ಆರೋಪ – ಕರ್ನಾಟಕ ಭವನದ ಹೆಚ್ಚುವರಿ ಆಯುಕ್ತೆ ವಿರುದ್ಧ ಸಿಎಸ್‌ಗೆ ದೂರು

    – ಹೆರಿಗೆ ಭತ್ಯೆಗಾಗಿ ಸುಮಾರು ರೂ.27 ಲಕ್ಷ ಪಡೆದಿರುವ ಆರೋಪ
    – ಅನುಮತಿ ಪಡೆಯದೇ ಪ್ರಯಾಣಕ್ಕೆ ಹೆಚ್ಚುವರಿ ಕಾರ್ ಬಳಕೆ

    ನವದೆಹಲಿ: ಕರ್ನಾಟಕ ಭವನದ (Karnataka Bhavan) ಹೆಚ್ಚುವರಿ ಆಯುಕ್ತೆ ಆಕೃತಿ ಬನ್ಸಲ್ (Akriti Bansal) ಐಷರಾಮಿ ಜೀವನ ನಡೆಸುತ್ತಿದ್ದಾರೆ, ಸರ್ಕಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬೆಂಗಳೂರು ಮೂಲದ ಶ್ರೀನಿವಾಸ್ ಎಲ್ ಎನ್ನುವವರು ದೂರು ನೀಡಿದ್ದಾರೆ.

    ಮೂರು ಪುಟಗಳ ದೂರು ಸಲ್ಲಿಸಿದ್ದು, ಆಕೃತಿ ಬನ್ಸಲ್ ಕರ್ನಾಟಕ ಭವನದಲ್ಲಿ ಹೇಗೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವಿವರವಾಗಿ ದೂರು ನೀಡಿದ್ದಾರೆ. ಆಕೃತಿ ಬನ್ಸಲ್ ಹೆರಿಗೆ ಭತ್ಯೆಗಾಗಿ ಸುಮಾರು ರೂ.27 ಲಕ್ಷ ಕರ್ನಾಟಕ ಭವನದ ಅಕೌಂಟ್ಸ್ ವಿಭಾಗದಿಂದ ಪಡೆದಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ದೊಡ್ಡ ಪ್ರಮಾಣದ ಹಣವನ್ನು ಒಂದೇ ತಿಂಗಳಲ್ಲಿ ಪಡೆದುಕೊಂಡಿದ್ದಾರೆ

    ಆಕೃತಿ ಬನ್ಸಾಲ್ ಅವರಿಗೆ ಕರ್ನಾಟಕ ಭವನದ ಸಮೀಪವೇ ಸರ್ಕಾರಿ ನಿವಾಸ ನೀಡಲಾಗಿದೆ ಈ ಸರ್ಕಾರಿ ಮನೆಯನ್ನು ಸಂಬಂಧಿಕರಿಗೆ ನೀಡಿ ಅವರು ದೂರದ ತಂದೆ ತಾಯಿ ಮನೆಗೆ ಪ್ರಯಾಣಿಸಲು ನಿತ್ಯ ಕರ್ನಾಟಕ ಭವನದ ಸರ್ಕಾರಿ ವಾಹನ ಬಳಕೆ ಮಾಡುತ್ತಿದ್ದಾರೆ. ಇವರನ್ನು ಕರೆತರಲು ಹಾಗೂ ಹೋಗಿ ಬಿಟ್ಟು ಬರಲು ನಿತ್ಯ ಸುಮಾರು 150 ರಿಂದ 160 ಕಿ.ಮೀಗಳು ಸಂಚರಿಸಬೇಕು. ಇದರಿಂದ ತಿಂಗಳಿಗೆ ಹೆಚ್ಚು ಕಡಿಮೆ 35,000/- ದಿಂದ 40,000/- ರೂ.ಗಳಷ್ಟು ಪೆಟ್ರೋಲ್ / ಡೀಸಲ್‌ ಖರ್ಚಾಗುತ್ತಿದೆ ಎಂದು ಆರೋಪಿಸಿದ್ದಾರೆ.

    ಹೀಗೆ ವಾಹನ ಬಳಕೆಗೆ ಸರ್ಕಾರದಿಂದ ಯಾವುದೇ ಅನುಮತಿ ಪಡೆದಿಲ್ಲ, ವಾರಂತ್ಯದಲ್ಲಿ ಎರಡು ಕಾರಗಳನ್ನು ಹೆಚ್ಚುವರಿಯಾಗಿ ಬಳಕೆ ಮಾಡುತ್ತಿದ್ದಾರೆ ಇದಕ್ಕೂ ಯಾವುದೇ ಅನುಮತಿ ನೀಡಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ಬಳಕೆ ಮಾಡದಷ್ಟು ಕರ್ನಾಟಕ ಭವನದ ವಾಹನಗಳನ್ನು ಮನಸೋಇಚ್ಛೆ ಬಳಕೆ ಮಾಡುತ್ತಿದ್ದಾರೆ ಎಂದು ಶ್ರೀನಿವಾಸ್ ದೂರಿದ್ದಾರೆ.

    ಇದನ್ನು ಪ್ರಶ್ನೆ ಮಾಡಬೇಕಿರುವ ಆಯುಕ್ತೆ ಇಂಕೋಂಗ್ಲ ಜಮೀರ್ ಮೌನವಾಗಿದ್ದಾರೆ, ಇಂಕೋಂಗ್ಲ ಜಮೀರ್ ತಿಂಗಳಿಗೊಮ್ಮೆ ಕರ್ನಾಟಕ ಭವನದಲ್ಲಿ ಐಎಎಸ್‌ಗಳ  ಜೊತೆ ಪಾರ್ಟಿ ಮಾಡಿಕೊಂಡಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಗೌರವ ಇಲ್ಲ, ಭವನದ ಇತರೆ ಅಧಿಕಾರಗಳ ಬಗ್ಗೆಯೂ ಅಸಹನೆ ಹೊಂದಿದ್ದು ಈ ಹಿನ್ನಲೆ ಇಬ್ಬರು ಅಧಿಕಾರಿಗಳನ್ನು ಉತ್ತರ ಕರ್ನಾಟಕದ ಭಾಗಕ್ಕೆ ವರ್ಗಾವಣೆ ಮಾಡುವಂತೆ ಶಾಲೀನಿ ರಜನೀಶ್ ಅವರಿಗೆ ಮನವಿ ಮಾಡಿದ್ದಾರೆ.

  • ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ: ಬೊಮ್ಮಾಯಿ

    ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ: ಬೊಮ್ಮಾಯಿ

    ಬೆಳಗಾವಿ: ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ರೂ. ನೀಡಿದ್ದು, ಕೆಲಸ ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ (Karnataka Bhavan) ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದರು.

    ಮಹಾರಾಷ್ಟ್ರದ (Maharashtra) ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡ್ತಿದೆ. ಹೀಗಾಗಿ ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಹಣವನ್ನು ಕೊಡಲಾಗುತ್ತಿದೆ ಎಂದು ಹೇಳಿದರು.

    ಇಂದು ಸಹೃದಯಿ ಸಂತರ ಸಮಾವೇಶ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಇಲ್ಲಿ ಪ್ರಥಮ ಬಾರಿ ಬರುತಿದ್ದೇನೆ, ಭಕ್ತಿ ಭಾವ ಕಾರ್ಯಕ್ರಮ, ಮಠದ ಸೇವೆಯನ್ನು ನೋಡಿದಾಗ ಇದು ಆದರ್ಶ ಮಠ ಅನಿಸುತ್ತದೆ. ಆದರ್ಶ ಮಠ ಆಗಲು ತನ್ನದೇ ಆದ ಆದರ್ಶ ಇರಬೇಕು. ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕನ್ನೇರಿಮಠ ಮಾಡುತ್ತಿದೆ ಎಂದರು.

    ಬೇರೆ ದೇಶಕ್ಕೂ ನಮಗೂ ಇರುವ ವ್ಯತ್ಯಾಸ ನಮ್ಮ ಸಂಸ್ಕೃತಿ, ಸಂಸ್ಕಾರ. ಅದು ನಮ್ಮ ದೇಶದ ಮಠ ಮಂದಿರಗಳಲ್ಲಿ ಸಿಗುತ್ತದೆ. ನಾಗರಿಕತೆ ಮತ್ತು ಸಂಸ್ಕೃತಿ ಮಧ್ಯದ ವ್ಯತ್ಯಾಸ ಮರೆತಿದ್ದೇವೆ. ನಾಗರಿಕತೆಯನ್ನೇ ನಾವು ಸಂಸ್ಕೃತಿ ಅಂದುಕೊಂಡಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಭಾರತ ಸಂಸ್ಕಾರ, ಸಂಸ್ಕೃತಿಯಿಂದ ಕೂಡಿದ ದೇಶ. ನಿರಂತರ ಭಕ್ತಿಯ ಚಳವಳಿ ಆದ ದೇಶ ಭಾರತ. ಇಲ್ಲಿ ಆಧ್ಯಾತ್ಮದ ಚಿಂತನೆ, ಆಧ್ಯಾತ್ಮರು ನಮ್ಮ ದೇಶದಲ್ಲಿ ಇದ್ದಾರೆ. ಕನ್ನೇರಿಮಠದ ದೊಡ್ಡ ಮಠ ಕರ್ನಾಟಕದಲ್ಲಿಯೂ ಸ್ಥಾಪನೆ ಮಾಡಬೇಕು. ಅದಕ್ಕೆ ಸಂಪೂರ್ಣ ಸಹಕಾರ, ಜಾಗ ಸರ್ಕಾರದ ವತಿಯಿಂದ ಒದಗಿಸುತ್ತೇವೆ.ಭೌತಿಕವಾಗಿ ಕೆಲಸ ಮಾಡಲು ಸಾಧ್ಯ. ಬೌದ್ಧಿಕವಾಗಿ ಮಾಡಲು ಗುರುಗಳು ಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಟಿಷರನ್ನ ದೇಶದಿಂದ ಓಡಿಸಿದ ಹಾಗೇ ಕಾಂಗ್ರೆಸ್‍ನವರನ್ನು ಓಡಿಸುತ್ತಿದ್ದಾರೆ: ಸುಧಾಕರ್

    ನಮ್ಮ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆ ಮಾಡಿದ್ದೇವೆ. ನೂರು ಕೋಟಿ ರೂಪಾಯಿ ಇದೇ ತಿಂಗಳು ಕಲೆಕ್ಟ್ ಆಗ್ತಿದೆ. ಒಂದು ಲಕ್ಷ ಗೋವುಗಳನ್ನು ಜನರ ದುಡ್ಡಿನಿಂದ ರಕ್ಷಣೆ ಮಾಡಿದ್ದೇವೆ. ಎಕಾನಾಮಿ ಅಂದ್ರೆ ಹಣ ಅಲ್ಲ ದುಡಿಮೆ. ಈ ಮಠದಲ್ಲಿ ಇದು ಕಾರ್ಯಗತವಾಗುತ್ತಿದೆ ಎಂದರು. ಇದನ್ನೂ ಓದಿ: ಮತಾಂತರ ನಿಷೇಧ ಮಾಡದಿದ್ದರೆ ಮಠಗಳ ಮುಂಭಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣವಾಗುತ್ತಿತ್ತು: ಕಾಡಸಿದ್ದೇಶ್ವರ ಶ್ರೀ

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಕರ್ನಾಟಕ ಭವನದಲ್ಲಿ ಗೋಲ್‍ಮಾಲ್- ನಿಯಮ ಮೀರಿ ಬಡ್ತಿ, ಸೇವಾವಧಿ ವಿಸ್ತರಣೆಗೆ ಶಿಫಾರಸು

    ದೆಹಲಿ ಕರ್ನಾಟಕ ಭವನದಲ್ಲಿ ಗೋಲ್‍ಮಾಲ್- ನಿಯಮ ಮೀರಿ ಬಡ್ತಿ, ಸೇವಾವಧಿ ವಿಸ್ತರಣೆಗೆ ಶಿಫಾರಸು

    ನವದೆಹಲಿ: ಕರ್ನಾಟಕ ಭವನದ ಕಾನೂನು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮಿಳುನಾಡು ಮೂಲದ ಪಿ.ಎನ್.ರಾಮನಾಥನ್‍ಗೆ (ರಾಜ) ಅಕ್ರಮ ಬಡ್ತಿ ಮತ್ತು ನಿಯಮ ಮೀರಿ ಸೇವಾವಧಿ ವಿಸ್ತರಿಸಲು ಶಿಫಾರಸು ಮಾಡಿರುವ ಆರೋಪ ಕೇಳಿ ಬಂದಿದೆ.

    ಸೇವಾ ಹಿರಿತನದಲ್ಲಿ 9ನೇ ಸ್ಥಾನದಲ್ಲಿರುವ ಪಿ.ಎನ್.ರಾಮನಾಥನ್ ನಿಯಮ ಮೀರಿ ಬಡ್ತಿ ನೀಡುವ ಪ್ರಕ್ರಿಯೆ ನಡೆದಿದ್ದು, ಇಲ್ಲಿ ಗೋಲ್‍ಮಾಲ್ ನಡೆದಿರುವುದಾಗಿ ಕರ್ನಾಟಕ ಭವನದ ಹಲವು ಸಿಬ್ಬಂದಿ ಆರೋಪಿಸಿದ್ದಾರೆ.

    ಪಿ.ಎನ್.ರಾಮನಾಥ್‍ಗೂ ಮುನ್ನ ಸೇನಾ ಹಿರಿತನದಲ್ಲಿ ಎಂಟು ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಅವರೆಲ್ಲರನ್ನು ನಿರ್ಲಕ್ಷಿಸಿ ರಾಮನಾಥನ್‍ಗೆ ಮಣೆ ಹಾಕಲಾಗಿದೆ ಅಲ್ಲದೇ ಬಡ್ತಿ ಜೊತೆಗೆ ಸೇವಾವಧಿ ಅವಧಿ ವಿಸ್ತರಣೆ ಮಾಡಿ ನಿವಾಸಿ ಆಯುಕ್ತರು ಶಿಫಾರಸು ಮಾಡಿದ್ದಾರೆ. ಈ ಹಿಂದೆ ನಿವಾಸಿ ಆಯುಕ್ತರಾಗಿದ್ದ ನಿಲಯ್ ಮಿತಾಶ್ ಅವರ ಮೇಲೆ ರಾಮನಾಥ್ ರಾಜಕೀಯ ಪ್ರಭಾವ ಬೀರಿದ್ದು, ಅವರು ತಮ್ಮ ವರ್ಗಾವಣೆಗೂ ಮುನ್ನ ರಾಮನಾಥನ್ ಸೇವಾ ಅವಧಿ ವಿಸ್ತರಣೆಗೆ ಶಿಫಾರಸು ಮಾಡಿದ್ದರು.

    ರಾಮನಾಥನ್ ಬಡ್ತಿ ಮತ್ತು ಸೇವಾವಧಿ ವಿಸ್ತರಣೆಗೆ ಈಗ ತಕರಾರು ಕೇಳಿ ಬಂದ ಹಿನ್ನೆಲೆ ರಾಜ್ಯ ಸಚಿವ ಸಂಪುಟದ ಅನುಮೋದನೆ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯ ರಾಜಕಾರಣಿಗಳ ಮೇಲೂ ಪ್ರಭಾವ ಬೀರುವ ಶಕ್ತಿ ಇರುವ ಈ ತಮಿಳು ಅಧಿಕಾರಿ ಸಚಿವ ಸಂಪುಟ ಒಪ್ಪಿಗೆ ಪಡೆಯಲಿದ್ದು ಅಕ್ರಮವಾಗಿ ಬಡ್ತಿ ಹಾಗೂ ಸೇವಾವಧಿ ವಿಸ್ತರಣೆ ಮಾಡಿಸಿಕೊಳ್ಳಲಿದ್ದಾರೆ ಎಂದು ಹಲವು ಕರ್ನಾಟಕ ಭವನದ ನೌಕರರು ಆರೋಪಿಸಿದ್ದಾರೆ.

  • ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿಗೆ ಕೊರೊನಾ ಸೋಂಕು

    ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿಗೆ ಕೊರೊನಾ ಸೋಂಕು

    ನವದೆಹಲಿ: ಇಲ್ಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

    ರೂಂ ಬಾಯ್ ಕೆಲಸ ಮಾಡುತ್ತಿದ್ದ 25 ವರ್ಷ ವಯಸ್ಸಿನ, ದೆಹಲಿ ಮೂಲದ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕಿರುವುದು ಧೃಡಪಟ್ಟಿದೆ. ಜೂನ್ 8ರ ವರೆಗೆ ಕೆಲಸಕ್ಕೆ ಬಂದಿದ್ದ ಈ ಯುವಕ ಜ್ವರದಿಂದ ಬಳಲಿದ್ದರು. ಈ ಹಿನ್ನೆಲೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆ ಬಳಿಕ ಇಂದು ಸೋಂಕು ಇರುವುದು ದೃಢಪಟ್ಟಿದೆ.

    ಸೋಂಕಿತ ವ್ಯಕ್ತಿಯಲ್ಲಿ ಅಲ್ಪ ಪ್ರಮಾಣದ ರೋಗ ಲಕ್ಷಣ ಗೋಚರಿಸಿದ್ದರಿಂದ ಮನೆಯಲ್ಲೇ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಭವನ-1ರಲ್ಲಿ ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿದ್ದ ಕೊರೊನಾ ಧೃಡಪಟ್ಟ ಬಳಿಕ ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ಆರಂಭಿಸಲಾಗುವುದು ಎಂದು ಭವನದ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯ ಸರ್ಕಾರ ಇಲ್ಲಿ ಹೊಂದಿರುವ ಮೂರು ಭವನಗಳಲ್ಲೂ ಅಟೊಮೆಟಿಕ್ ಸ್ಯಾನಿಟೈಸರ್ ಸಾಧನ ಇರಿಸಲಾಗಿದ್ದು, ಕೊರೊನಾ ಸೋಂಕು ತಡೆಗೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇತರ ಸಿಬ್ಬಂದಿಯ ಆರೋಗ್ಯ ತಪಾಸಣೆಗೂ ಕ್ರಮ ಕೈಗೊಳ್ಳಲು ನಿರ್ಧರಿಸಬಹುದು ಎಂದು ತಿಳಿದುಬಂದಿದೆ.

    ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದೇ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

  • ನಾನು ಎಕ್ಸ್ ಎಂಎಲ್‍ಎ ಅಲ್ಲ: ಕರ್ನಾಟಕ ಭವನದ ಸಿಬ್ಬಂದಿ ಮೇಲೆ ಹೆಬ್ಬಾರ್ ಗರಂ

    ನಾನು ಎಕ್ಸ್ ಎಂಎಲ್‍ಎ ಅಲ್ಲ: ಕರ್ನಾಟಕ ಭವನದ ಸಿಬ್ಬಂದಿ ಮೇಲೆ ಹೆಬ್ಬಾರ್ ಗರಂ

    ನವದೆಹಲಿ: ಯಾರು ಎಕ್ಸ್ ಎಂಎಲ್‍ಎ? ನಾನು ಮಾಜಿ ಶಾಸಕನಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮೇಲೆ ಗುಡುಗಿದ್ದಾರೆ.

    ಸುಪ್ರೀಂಕೋರ್ಟ್ ಬುಧವಾರ ಅನರ್ಹ ಶಾಸಕರ ಪ್ರಕರಣದ ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಮಂಗಳವಾರ ರಾತ್ರಿ ಕರ್ನಾಟಕ ಭವನಕ್ಕೆ ಆಗಮಿಸಿದರು. ಈ ವೇಳೆ ರೂಮ್ ನೀಡುವಂತೆ ಕೆ.ಬಿ 1ನ ಸಿಬ್ಬಂದಿಗೆ ಕೇಳಿದರು. ಆದರೆ ರೂಮ್ ನೀಡಲು ನಿರಾಕರಿಸಿದ ಸಿಬ್ಬಂದಿ, ರೂಮ್ ಖಾಲಿ ಇಲ್ಲ. ಇಲ್ಲಿ ಕೇವಲ ಹಾಲಿ ಮತ್ತು ಮಾಜಿ ಸಚಿವರಿಗೆ ಮಾತ್ರ ರೂಮ್ ಕೊಡಲಾಗುತ್ತದೆ. ಶಾಸಕರು ಮತ್ತು ಮಾಜಿ ಶಾಸಕರಿಗೆ ಕೆಬಿ 2ನಲ್ಲಿ ರೂಂ ಸಿಗುತ್ತದೆ ಎಂದು ಹೇಳಿದ.

    ಕರ್ನಾಟಕ ಭವನ ಸಿಬ್ಬಂದಿಯ ಮಾತಿನಿಂದ ಫುಲ್ ಗರಂ ಆದ ಅನರ್ಹ ಶಾಸಕರು, ಯಾರಪ್ಪಾ ಎಕ್ಸ್ ಎಂಎಲ್‍ಎ? ಒಬ್ಬರಿಗೊಂದು ಇನ್ನೊಬ್ಬರಿಗೊಂದು ಯಾಕ್ ಮಾಡ್ತಿರಿ ಎಂದು ಗುಡುಗಿದರು. ಆಗ ಕರ್ನಾಟಕ ಭವನದ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಕರೆ ಮಾಡಿ, ವಿಚಾರಿಸಿದರು. ಈ ಮಧ್ಯೆ ಶಿವರಾಮ್ ಹೆಬ್ಬಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಲು ಹಿಂದೇಟು ಹಾಕಿದರು.

    ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಧೀಶ ಎನ್.ವಿ.ರಮಣ ಪೀಠ ಪ್ರಕರಣದ ವಾದವನ್ನು ಆಲಿಸಿ ತೀರ್ಪನ್ನು ಬುಧವಾರಕ್ಕೆ ಕಾಯ್ದರಿಸಿತ್ತು. ಈ ನಡುವೆ ಕಾಂಗ್ರೆಸ್ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹುಬ್ಬಳ್ಳಿಯ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಬೇಕೆಂದು ಮನವಿ ಮಾಡಿಕೊಂಡಿತ್ತು. ಕಾಂಗ್ರೆಸ್ ಪರ ವಕೀಲ ವಾದವನ್ನು ಆಲಿಸಿದ ಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಆಡಿಯೋವನ್ನ ಸಾಕ್ಷ್ಯವನ್ನಾಗಿ ಪರಿಗಣಿಸಲಾಗುತ್ತದೆ ಎಂದು ಸೂಚಿಸಿತ್ತು.

    ತೀರ್ಪು ವಿಳಂಬವಾದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೊಹ್ಟಗಿ, ಕರ್ನಾಟಕದಲ್ಲಿ ಘೋಷಣೆಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ರೊಹ್ಟಗಿಯವರ ವಾದ ಆಲಿಸಿದ್ದ ನ್ಯಾಯಾಲಯ, ಅನರ್ಹ ಶಾಸಕರಿಗಾಗಿ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

  • ಬಿಎಸ್‍ವೈ ಕೈ ಹಿಡಿದು ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಸಚಿವ ರೇವಣ್ಣ

    ಬಿಎಸ್‍ವೈ ಕೈ ಹಿಡಿದು ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಸಚಿವ ರೇವಣ್ಣ

    ನವದೆಹಲಿ: ರಾಜಕೀಯ ಬದ್ಧ ವೈರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕೈ ಹಿಡಿದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪೂಜೆ ಮಾಡಿದ್ದಾರೆ.

    ದೆಹಲಿಯ ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ಕಾರ್ಯಕ್ರಮ ಇಂದು ಬೆಳಗ್ಗೆ ನಡೆದಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಭವನದ ಹೊರ ಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಇದನ್ನು ನೋಡಿದ ಸಚಿವರು, ನೇರವಾಗಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬಂದು ಕೈ ಹಿಡಿದು ಕರೆತಂದು ಅಡಿಗಲ್ಲು ಹಾಕಿದರು.

    ಈ ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನವಿರಲಿಲ್ಲ. ಆದರೆ ಕನ್ನಡ ಭವನದ ಮುಂದೆ ವಾಕಿಂಗ್ ಹೊರಟಿದ್ದ ಅವರನ್ನು ಸಚಿವ ರೇವಣ್ಣ ಕರೆತಂದಿದ್ದಾರೆ. ಬಳಿಕ ಒಟ್ಟಾಗಿ ಪೂಜೆ ಮಾಡಿ, ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv