Tag: karnataka budget 2020

  • ಮನವಿಯಂತೆ ಚಿತ್ರನಗರಿಗೆ 500 ಕೋಟಿ ರೂ. ಅನುದಾನ- ಸಿಎಂಗೆ ಅಭಿನಂದನೆ ಸಲ್ಲಿಸಿದ ಯಶ್

    ಮನವಿಯಂತೆ ಚಿತ್ರನಗರಿಗೆ 500 ಕೋಟಿ ರೂ. ಅನುದಾನ- ಸಿಎಂಗೆ ಅಭಿನಂದನೆ ಸಲ್ಲಿಸಿದ ಯಶ್

    – ಮೈಸೂರು ಫಿಲ್ಮ್ ಸಿಟಿಗೆ ಉತ್ತಮ ಜಾಗ
    – ಫಿಲ್ಮ್ ಸಿಟಿ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

    ಬೆಂಗಳೂರು: ಮನವಿಯಂತೆ ರಾಜ್ಯ ಬಜೆಟ್ ಮಂಡನೆಯಲ್ಲಿ ಚಿತ್ರನಗರಿಗೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ.

    ನಗರದಲ್ಲಿ ಇಂದು ಓಬೆರಾಯನ ಕಥೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಬಳಿಕ ಮಾತನಾಡಿದ ಅವರು, ಇಡೀ ಚಿತ್ರರಂಗದ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮನವಿ ಸಲ್ಲಿಸಿದಾಗ ಸಿಎಂ ವೇದಿಕೆ ಮೇಲೆಯೇ ಮಾತು ಕೊಟ್ಟಿದ್ದರು. ಅದರಂತೆ ಇಂದು ಬಜೆಟ್‍ನಲ್ಲಿ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು ಬಹಳ ಖುಷಿ ತಂದಿದೆ ಎಂದರು. ಇದನ್ನೂ ಓದಿ: ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ನಮ್ಮ ಸಿನಿಮಾ ಉದ್ಯಮಕ್ಕೆ ಫಿಲ್ಮ್ ಸಿಟಿ ತುಂಬಾ ಅವಶ್ಯಕತೆ ಇದೆ. ನಾವು ಎಲ್ಲೋ ಹೋಗಿ ಶೂಟ್ ಮಾಡುವಾಗ ನಮ್ಮ ರಾಜ್ಯದಲ್ಲೂ ಇಂತಹ ವ್ಯವಸ್ಥೆ ಇರಬೇಕು ಎನ್ನುವ ಅಭಿಪ್ರಾಯ ಬರುತ್ತದೆ. ಸಿನಿಮಾ ಕ್ಷೇತ್ರಕ್ಕೆ ಸೃಜನಶೀಲ ಕಲಾವಿದರು, ಬರಹಗಾರರು, ಯುವಕರಿಗೆ ಅಗತ್ಯವಿದೆ. ಸಿನಿಮಾ ಒಂದು ಉದ್ಯಮ. ಇದನ್ನು ಇನ್ನಷ್ಟು ಚೆನ್ನಾಗಿ ಬೆಳೆಯಲು ಸರ್ಕಾರ ಕೈ ಜೋಡಿಸಬೇಕು ಎಂದು ಕೇಳಿಕೊಂಡರು.

    ಫಿಲ್ಮ್ ಸಿಟಿ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ. ಈ ಬಗ್ಗೆ ಡಿಸಿಎಂ ಅಶ್ವಥ್‍ನಾರಾಯಣ ಅವರೊಂದಿಗೆ ಮಾತನಾಡಿದ್ದೇನೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಭೂಮಿ ಇದೆ ಅಂತ ಅವರು ಹೇಳಿದ್ದಾರೆ. ಅಲ್ಲಿಯೇ ಫಿಲ್ಮ್ ಸಿಟಿ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಿದರೆ ಉತ್ತಮ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಏಕೆಂದರೆ ಅಲ್ಲಿ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಇರುವುದಿಲ್ಲ. ಮೊದಲಿನಿಂದಲೂ ಮೈಸೂರಿನಲ್ಲಿ ಸಿನಿಮಾಗೆ ಪೂರಕ ವಾತಾವರಣ ಸಿಗುತ್ತಾ ಬಂದಿದೆ ಎಂದು ತಿಳಿಸಿದರು.

    ಸದ್ಯಕ್ಕೆ ನಮ್ಮ ರಾಜ್ಯಕ್ಕೆ ಫಿಲ್ಮ್ ಸಿಟಿ ಅಗತ್ಯವಿದೆ. ಸರ್ಕಾರ ಎಲ್ಲಿ ನಿರ್ಮಾಣ ಮಾಡಿದರೂ ಓಕೆ. ಚಿತ್ರರಂಗದ ಹಿರಿಯರು ಈ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಹೇಳಿದರು.

  • ಹಿಂದುಳಿದ ಜಿಲ್ಲೆಯನ್ನು ಕಡೆಗಣಿಸಿದ್ರಾ ಯಡಿಯೂರಪ್ಪ?

    ಹಿಂದುಳಿದ ಜಿಲ್ಲೆಯನ್ನು ಕಡೆಗಣಿಸಿದ್ರಾ ಯಡಿಯೂರಪ್ಪ?

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಈ ಬಾರಿಯ ಬಜೆಟ್ ಭಾರೀ ನಿರಾಸೆ ಮೂಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಚಾಮರಾಜನಗರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

    ಕೆರೆ ತುಂಬಿಸುವ ಯೋಜನೆ, ಕಬಿನಿ ಕುಡಿಯುವ ನೀರಿನ ಎರಡನೇ ಹಂತದ ಯೋಜನೆ, ರೇಷ್ಮೆ ಕೃಷಿ ಅಭಿವೃದ್ಧಿ, ಕೈಗಾರಿಕೆಗಳ ಸ್ಥಾಪನೆ, ಕೋಲ್ಡ್ ಸ್ಟೋರೇಜ್ ಸೇರಿದಂತೆ ಹಲವಾರು ಯೋಜನೆಗಳಿಗೆ ಅನುದಾನ ಘೋಷಣೆಯಾಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ನಿರೀಕ್ಷೆಗಳೆಲ್ಲಾ ಹುಸಿಯಾಗಿವೆ.

    ಇದಕ್ಕೆ ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಸಹ ಕಾರಣರಾಗಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಗೆ ಬೇಕಾದ ಅನುದಾನ ತರುವಲ್ಲಿ ಅವರು ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಇನ್ನೊಂದೆಡೆ ಕಳೆದ ಬಾರಿ ಮುಖ್ಯಮಂತ್ರಿಯಾದಾಗ ಕೃಷಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ಈಗ ಬಹುಮತವಿದ್ದರೂ ಸಾಲಮನ್ನಾ ಮಾಡುವ ಬಗ್ಗೆ ಚಕಾರವೆತ್ತದೇ ರೈತರಿಗೆ ದ್ರೋಹ ಎಸಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಈ ರಾಜ್ಯದಲ್ಲಿಯೇ ಇದ್ದೇವಾ ಅನ್ನೋ ಮನೋಭಾವ ಕೂಡ ಕಾಡುತ್ತಿದೆ ಎಂದು ರೈತರು ರಾಜ್ಯ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ.

  • ಶ್ರೇಷ್ಠ ಬಜೆಟ್ ಮಂಡಿಸಿದ ಬಿಎಸ್‍ವೈಗೆ ವೇದವ್ಯಾಸ ಕಾಮತ್ ಅಭಿನಂದನೆ

    ಶ್ರೇಷ್ಠ ಬಜೆಟ್ ಮಂಡಿಸಿದ ಬಿಎಸ್‍ವೈಗೆ ವೇದವ್ಯಾಸ ಕಾಮತ್ ಅಭಿನಂದನೆ

    ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ವಶ್ರೇಷ್ಠ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

    ರಾಜ್ಯ ಬಜೆಟ್ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಕೃಷಿಕರಿಗೆ, ಜನಸಾಮಾನ್ಯರಿಗೆ, ಮೀನುಗಾರರಿಗೆ, ಮಹಿಳಾ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಆರೋಗ್ಯ ಕ್ಷೇತ್ರಕ್ಕೆ, ಪ್ರವಾಸೋದ್ಯಮ ಮತ್ತು ವಿವಿಧ ನಿಗಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿ ಸರ್ವಜನ ಸುಖ ಮತ್ತು ಸರ್ವಜನ ಹಿತವಾಗಿರುವ ಬಜೆಟ್ ಮಂಡಿಸಿದ್ದಾರೆ.

    ಮಹಿಳಾ ಮೀನುಗಾರರ ಸಬಲೀಕರಣಕ್ಕಾಗಿ 1.5 ಕೋಟಿ ಅನುದಾನದಲ್ಲಿ ಮತ್ರ್ಯ ವಿಕಾಸ ಯೋಜನೆ, ಮಹಿಳಾ ಮೀನುಗಾರರಿಗೆ 5 ಕೋಟಿ ವೆಚ್ಚದಲ್ಲಿ ದ್ವಿಚಕ್ರ ವಾಹನ, ಹೀನ್ನೀರು ಮೀನುಗಾರಿಕೆ ಅಭಿವೃದ್ಧಿ, ಒಂದು ಲಕ್ಷ ಕಟ್ಟಡ ಕಾರ್ಮಿಕರಿಗೆ ಮುಖ್ಯಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ, ಕಟ್ಟಡ ಕಾರ್ಮಿಕರಿಗೆ ಉಚಿತ ಪ್ರಿ ಪೇಯ್ಡ್ ಹೆಲ್ತ್ ಕಾರ್ಡ್ ಯೋಜನೆ, ಕಟ್ಟಡ ಕಾರ್ಮಿಕರಿಗೆ 10 ಮೊಬೈಲ್ ಕ್ಲಿನಿಕ್, ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ಘೊಷಣೆ ಮಾಡಿದ್ದಾರೆ ಎಂದರು.

    ಕರಾವಳಿ ಕಿಂಡಿ ಅಣೆಕಟ್ಟು ಯೋಜನೆಗೆ ಅನುದಾನ, ನವನಗರೋತ್ಥಾನ ಯೋಜನೆಗೆ 8,344 ಕೋಟಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 25 ಕೋಟಿ, ಪ್ರವಾಸೋದ್ಯಮಕ್ಕೆ 500 ಕೋಟಿ, ಈಗಾಗಲೇ ನೆರೆ ಪರಿಹಾರಕ್ಕೆ 3000 ಕೋಟಿ ವಿತರಣೆ, ಕಿಡ್ನಿ ವೈಫಲ್ಯ ಹೊಂದಿದವರಿಗೆ ಉಚಿತ ಪೆರಿಟೋನಿಯಲ್ ಡಯಾಲೀಸಿಸ್ ಯೋಜನೆ, ಸಂಚಾರಿ ಹೆಲ್ತ್ ಕ್ಲಿನಿಕ್ ಆರಂಭ, ಕೃಷಿ ಯೋಜನೆಯ ಅಭಿವೃದ್ಧಿಗೆ 32,259 ಕೋಟಿ ಅನುದಾನ ಸಹಿತ ವಿವಿಧ ಯೋಜನೆಗಳಿಗೆ ಅನುದಾನ ನೀಡುವ ಮೂಲಕ ದೂರದೃಷ್ಟಿಯ, ಶ್ರೇಷ್ಠ ಬಜೆಟ್ ಅನ್ನು ಮಂಡಿಸಿದ ಮುಖ್ಯಮಂತ್ರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

  • ಕರ್ನಾಟಕ ಬಜೆಟ್ 2020 – 1 ರೂ. ಎಲ್ಲಿಂದ ಬರುತ್ತದೆ? ಎಲ್ಲಿ ಖರ್ಚಾಗುತ್ತದೆ?

    ಕರ್ನಾಟಕ ಬಜೆಟ್ 2020 – 1 ರೂ. ಎಲ್ಲಿಂದ ಬರುತ್ತದೆ? ಎಲ್ಲಿ ಖರ್ಚಾಗುತ್ತದೆ?

    ಬೆಂಗಳೂರು: ಸಿಎಂ ಯಡಿಯೂರಪ್ಪನವರು ತಮ್ಮ ಏಳನೇ ಬಜೆಟ್ ಇಂದು ಮಂಡಿಸಿದರು. ಬಜೆಟ್ ನ ಒಟ್ಟು ಗಾತ್ರ 2,37,893 ಕೋಟಿ ರೂ ಆಗಿದ್ದು, 2020-21ನೇ ಸಾಲಿನಲ್ಲಿ ಒಟ್ಟು 2,33,134 ಕೋಟಿ ರೂ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4,759 ಅಂತರವಿದೆ. ಹಾಗಾದರೆ ಆದಾಯ ಎಲ್ಲಿಂದ ಬರುತ್ತದೆ, ಎಲ್ಲಿ ಖರ್ಚಾಗುತ್ತದೆ ಎನ್ನುವ ವಿವರವನ್ನು ಇನ್ನು ನೀಡಲಾಗಿದೆ.

    1 ರೂ. ಎಲ್ಲಿಂದ ಬರುತ್ತದೆ?
    ರಾಜ್ಯ ತೆರಿಗೆಯೇತರ ರಾಜಸ್ವದಿಂದ – 3 ಪೈಸೆ
    ಕೇಂದ್ರ ಸರ್ಕಾರದ ಸಹಾಯಾನುದಾನ -7 ಪೈಸೆ
    ಕೇಂದ್ರ ತೆರಿಗೆ ಪಾಲಿನಿಂದ – 12
    ಸಾಲದಿಂದ -22
    ರಾಜ್ಯ ತೆರಿಗೆ ಆದಾಯದಿಂದ -54 ಪೈಸೆ
    ಸಾರ್ವಜನಿಕ ಲೆಕ್ಕ (ನಿವ್ವಳ) -2
    (ಜಿಎಸ್‍ಟಿ ನಷ್ಟ ಪರಿಹಾರ ಒಳಗೊಂಡಿದೆ)

    1 ರೂ. ಎಲ್ಲಿ ಖರ್ಚಾಗುತ್ತದೆ?
    ವೇತನ ಮತ್ತು ಭತ್ಯೆಗಳು-21 ಪೈಸೆ
    ಬಂಡವಾಳ ವೆಚ್ಚ-20 ಪೈಸೆ
    ಇತರೆ ರಾಜಸ್ವ ವೆಚ್ಚ-16
    ಆಡಳಿತಾತ್ಮಕ ವೆಚ್ಚ- 2 ಪೈಸೆ
    ಸಾಮಾಜಿಕ ಭದ್ರತಾ ಪಿಂಚಣಿಗಳು – 3 ಪೈಸೆ
    ಸಹಾಯಾನುದಾನ ಮತ್ತು ಇತರೆ- 4 ಪೈಸೆ
    ಪಿಂಚಣಿ-9 ಪೈಸೆ
    ಸಹಾಯಧನ-10 ಪೈಸೆ
    ಋಣ ಮೇಲುಸ್ತುವಾರಿ-15 ಪೈಸೆ

  • ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ಯಶ್ ಬೇಡಿಕೆ ಬೆನ್ನಲ್ಲೇ ಬೆಂಗ್ಳೂರಲ್ಲಿ ಫಿಲಂ ಸಿಟಿಗೆ 500 ಕೋಟಿ ರೂ. ಘೋಷಣೆ

    ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬೆಂಗಳೂರಲ್ಲಿ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ನಿರ್ಮಾಣ ಮಾಡಲು 500 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

    ಈ ಮೂಲಕ ನಟ ರಾಕಿಂಗ್ ಸ್ಟಾರ್ ಯಶ್ ಬೇಡಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗುತ್ತಿರುವುದು ಚಿತ್ರರಂಗಕ್ಕೆ ಖುಷಿ ನೀಡಿದೆ. ಫೆಬ್ರವರಿ 26 ರಂದು ನಡೆದ ಚಲನಚಿತ್ರೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ್ದ ಯಶ್, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದರು.

    ಮನವಿಯೇನು..?
    ಕರ್ನಾಟಕದಲ್ಲಿ ಹುಡುಗರಿಗೆ ತುಂಬಾನೇ ಕನಸು, ಹುರುಪು, ಶಕ್ತಿಯಿದೆ. ಹೀಗಾಗಿ ದೊಡ್ಡದಾಗಿ ಒಂದು ಸ್ಟುಡಿಯೋ ಕಟ್ಟಿಸಿ ಬಿಡಿ. ಕಾಲ ಕಾಲದಿಂದ ಬರೀ ಅಲ್ಲೊಂದಷ್ಟು ಎಕ್ರೆ ಬಂತಂತೆ, ಇಲ್ಲೊಂದಷ್ಟು ಎಕ್ರೆ ಬಂತಂತೆ. ಈ ಜಾಗ, ಆ ಜಾಗ ಅಂತ ಹೋಗ್ತಾನೇ ಇದೆ ಸರ್. ಎಲ್ಲೋ ಬೇರೆ ಊರಿಗೆ ಹೋಗಿ ಕೆಲಸ ಮಾಡಬೇಕು. ಹೀಗಾಗಿ ನಮಗೆ ಶಕ್ತಿ ಕೊಡಿ. ತೆರಿಗೆ ರೂಪದಲ್ಲಿ ಎಷ್ಟು ವಾಪಸ್ ಕೊಡ್ತೀವಿ ಅಂದ್ರೆ ತುಂಬಾ ಖುಷಿಯಾಗಿ ಬಿಡಬೇಕು. ಇದರಿಂದ ಇಡೀ ಉದ್ಯಮನೂ ಬೆಳೆಯುತ್ತದೆ. 70ನೇ ದಶಕದಲ್ಲಿ ಕನ್ನಡ ಚಿತ್ರರಂಗದ ಒಂದು ಯುಗ ಇತ್ತು ಅಂತ ನೀವು ಹೇಳಿದ್ರಿ. ಇದೀಗ ಆ ಕೆಲಸ ಮಾಡುವಂತಹ ಸಾಕಷ್ಟು ಹುಡುಗರು ಇಲ್ಲೇ ಇರುತ್ತಾರೆ. ಆದರೆ ಅವರಿಗೆ ಶಕ್ತಿ ತುಂಬಬೇಕಷ್ಟೆ ಎಂದು ಹೇಳಿದ್ದರು.

    70ರ ದಶಕದಲ್ಲಿ ಎಲ್ಲವೂ ಚೆನ್ನೈನಲ್ಲಿ ನಡೆಯುತ್ತಿತ್ತು. ಹೀಗಾಗಿ ಅವರಿಗೆ ಕಲಿಯೋದಕ್ಕೆ ಜಾಗ ಇತ್ತು. ಬೇರೆ ಬೇರೆ ಅಸಿಸ್ಟೆಂಟ್ ಡೈರೆಕ್ಟರುಗಳಾಗಿ ಸಿನಿಮಾ ಕೆಲಸ ತಿಳಿದುಕೊಳ್ಳಲು ಸಾಕಷ್ಟು ಅವಕಾಶಗಳು ಕೂಡ ಇತ್ತು. ಆದ್ರೆ ಈಗ ಎಲ್ಲರೂ ಏಕಲವ್ಯಗಳಾಗಿ ಬಿಟ್ಟಿದ್ದೇವೆ. ನಾವೇ ಎಲ್ಲೋ ಸಿನಿಮಾ ನೋಡಿಕೊಂಡು ಕಲಿತು ನಂತರ ಬೇರೆಯವರ ಜೊತೆ ಸ್ಪರ್ಧೆ ಮಾಡುತ್ತಿದ್ದೇವೆ. ಹೀಗಾಗಿ ಸ್ಟುಡಿಯೋ ಮಾಡುವ ಮೂಲಕ ಶಕ್ತಿ ತುಂಬಿ ಎಂದು ಬಿಎಸ್‍ವೈ ಅವರಿಗೆ ಯಶ್ ಮನವಿ ಮಾಡಿಕೊಂಡಿದ್ದರು.