Tag: Karnataka Budget 2023

  • 8 ತಿಂಗಳು ಎಲ್ಲಾ ಶಾಸಕರು ಸಹಕರಿಸಿ- ಸಿದ್ದರಾಮಯ್ಯ ಮನವಿ

    8 ತಿಂಗಳು ಎಲ್ಲಾ ಶಾಸಕರು ಸಹಕರಿಸಿ- ಸಿದ್ದರಾಮಯ್ಯ ಮನವಿ

    ಬೆಂಗಳೂರು: ಎಂಟು ತಿಂಗಳು ಎಲ್ಲಾ ಶಾಕರು ಸಹಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ.

    ಬಿಜೆಟ್ ಮಂಡನೆಗೂ ಮುನ್ನ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಮಾತನಾಡಿದ ಸಿಎಂ, ಗ್ಯಾರಂಟಿಗಳ ಜಾರಿ ಕಾರಣದಿಂದಾಗಿ ಮೊದಲಿನಂತೆ ಶಾಸಕರಿಗೆ (MLA) ನೂರಾರು ಕೋಟಿ ಅನುದಾನ ಕೊಡುವುದು ಕಷ್ಟವಾಗುತ್ತದೆ. 5-10 ಕೋಟಿ ಅನುದಾನಕ್ಕೇನು ಸಮಸ್ಯೆ ಇಲ್ಲ, ಅದನ್ನ ಕೊಡುತ್ತೇನೆ. ಹೀಗಾಗಿ ಮುಂದಿನ ಬಜೆಟ್ ವರೆಗೆ 8 ತಿಂಗಳ ಕಾಲ ಸಹಕರಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: Karnataka Budget 2023: ಬೆಂಗಳೂರಿಗೆ ಸಿಂಹಪಾಲು ಸಾಧ್ಯತೆ- ಗರಿಗೆದರಿದ ಹಲವು ನಿರೀಕ್ಷೆಗಳು

    ಗ್ಯಾರಂಟಿ ಯೋಜನೆಗಳೆ ನಮಗೆ ಆಕ್ಸಿಜನ್. ಲೋಕಸಭಾ ಚುನಾವಣೆವರೆಗೆ (Loksabha Election) ಗ್ಯಾರಂಟಿ ಯೋಜನೆಗಳೆ ನಮ್ಮನ್ನು ಕೈ ಹಿಡಿಯಬೇಕಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚೆಚ್ಚು ಜನರಿಗೆ ತಿಳಿಸಿಕೊಡಿ. ಜನರ ಮನಸ್ಸಿಗೆ ಮುಟ್ಟುವಂತೆ ಅದನ್ನ ಪ್ರಚಾರ ಮಾಡಿ ಅದೇ ನಿಮ್ಮನ್ನು ಕೈ ಹಿಡಿಯುತ್ತೆ ಎಂದು ಇದೇ ವೇಳೆ ಸಿಎಂ ಅವರು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

    ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

    ಬೆಂಗಳೂರು: ಮುಂದಿನ ಜುಲೈ ತಿಂಗಳಿನಲ್ಲೇ ರಾಜ್ಯ ಬಜೆಟ್ (Karnataka Budget 2023) ಮಂಡಿಸುವುದಾಗಿ ನೂತನ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

    ಶನಿವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ಸಂಪುಟ ಸಭೆ ನಡೆಸಿದ ಬಳಿಕ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

    ಮೊದಲ ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಎಲ್ಲಾ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಉಚಿತ ನೀಡುತ್ತೇವೆ. ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತೇವೆ. ಲಕ್ಷುರಿ ಹೊರತು ಪಡಿಸಿ ಸರ್ಕಾರಿ ಬಸ್ಸಿನಲ್ಲಿ ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬಸ್ ಪಾಸ್ ನೀಡಲಾಗುತ್ತದೆ. ಇದು ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಹೊರ ರಾಜ್ಯದ ಮಹಿಳೆಯರಿಗೆ ಅನ್ವಯವಾಗುವುದಿಲ್ಲ. ಎರಡು ವರ್ಷದವರೆಗೆ ತಿಂಗಳಿಗೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ, ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡುತ್ತೇವೆ. ಮಧ್ಯೆ ಕೆಲಸ ಸಿಕ್ಕಿದರೆ ಭತ್ಯೆ ನೀಡುವುದಿಲ್ಲ ಎಂದು ಘೋಷಿಸಿದರು.

    2013-2018 ರಲ್ಲಿ 158 ಭರವಸೆ ಈಡೇರಿಸಿದ್ವಿ, ಅದರ ಜೊತೆಗೆ 30 ಕಾರ್ಯಕ್ರಮಗಳನ್ನ ಹೊಸದಾಗಿ ಜಾರಿ ಮಾಡಿದ್ವಿ. ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ವಿದ್ಯಾಸಿರಿ ಯೋಜನೆಗಳನ್ನ ಹೊಸದಾಗಿ ಜಾರಿಗೊಳಿಸಿದ್ವಿ. ಜನರಿಗೆ ನಮ್ಮ ಮೇಲೆ ವಿಶ್ವಾಸ ಇದೆ. ನಾವು ಕೊಟ್ಡ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ

    ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ ಏಳು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದಲ್ಲಿ 2005-07 ಮತ್ತು ಆಗಿನ ಜೆಡಿ ಸರ್ಕಾರದಲ್ಲಿ 1995-2000 ವರೆಗೆ. 1995 ಮತ್ತು 1996 ರಲ್ಲಿ ಹೆಚ್.ಡಿ. ದೇವೇಗೌಡರ ಅಡಿಯಲ್ಲಿ ಎರಡು ಬಾರಿ. 1997, 1998 ಮತ್ತು 1999 ರಲ್ಲಿ ಜೆ.ಹೆಚ್. ಪಟೇಲ್ ಅವರ ಅಡಿಯಲ್ಲಿ ಮೂರು ಬಾರಿ. 2005 ಮತ್ತು 2006 ರಲ್ಲಿ ಎನ್. ಧರಂ ಸಿಂಗ್ ನೇತೃತ್ವದಲ್ಲಿ ಬಜೆಟ್ ಮಂಡಿಸಿದ್ದಾರೆ.

    2013ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ಆಗ ಹಣಕಾಸು ಖಾತೆಯನ್ನೂ ಹೊಂದಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿದ್ದಾರೆ. ಇಲ್ಲಿಯವರೆಗೂ ಸಿದ್ದರಾಮಯ್ಯ ಅವರು ಬರೋಬ್ಬರಿ 13 ಬಜೆಟ್‌ಗಳನ್ನು ಮಂಡಿಸಿ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದೀಗ 2ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಅವರು 14ನೇ ಬಾರಿ ಬಜೆಟ್ ಮಂಡಿಸಲು ಉತ್ಸುಕರಾಗಿದ್ದಾರೆ.

  • ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ (Karnataka Budget 2023) ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bomma) ತಿಳಿಸಿದರು.

    ವಿಧಾನಸಭೆಯಲ್ಲಿ (Assembly) ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ

    ಬಜೆಟ್ ಗಾತ್ರ ಹೆಚ್ಚಳ ಆರ್ಥಿಕ ಪ್ರಗತಿಯ ಸಂಕೇತ: 2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳ ಸಾಧಿಸುವ ಸಾಧ್ಯತೆ ಇದೆ. ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆ ಸಾಧಿಸಿದೆ. ಕೋವಿಡ್ (Covid 19) ನಂತರದ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ, ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನ ಅಭಿನಂದಿಸುತ್ತೇನೆ. ಈ ಬಾರಿಯ 3.9 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ಇದು ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದು ವಿವರಿಸಿದರು.

    402 ಕೋಟಿ ರೂ. ಆದಾಯ ಹೆಚ್ಚಳ: ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37252 ಕೋಟಿ ರೂ. ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ (ಕಳೆದ ಸಾಲಿಗಿಂತ ಶೇ. 25 ರಷ್ಟು ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ 402 ಕೋಟಿ ಆದಾಯ ಹೆಚ್ಚಳವನ್ನು (Revenue Surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ. ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನ (Revenue Deficit) ಎತ್ತಿ ತೋರಿಸುತ್ತಿವೆ ಎಂದರು. ಇದನ್ನೂ ಓದಿ: ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

    ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ: ಒಟ್ಟು ಜಿಎಸ್‌ಡಿಪಿಯ ಶೇ.25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕು ಎಂಬ ನಿಯಮವಿದೆ. ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್‌ಗೂ ಮುನ್ನ ಹಾಗೂ ನಂತರದ ಆರ್ಥಿಕತೆ ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು.

    ಸಾಲ ಹೆಚ್ಚಾಗಿದೆ ಎನ್ನೋದು ಸುಳ್ಳು: ರಾಜ್ಯ ಸರ್ಕಾರ 65 ವರ್ಷಗಳಲ್ಲಿ ಒಟ್ಟು 1,30,000 ಕೋಟಿ ಸಾಲ ಪಡೆದಿರಬಹುದು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಕಾಲದಲ್ಲಿ ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ ಕೇವಲ ಶೇ.71 ರಷ್ಟು ಅವಕಾಶ ಬಳಸಿಕೊಂಡಿದೆ. 2020-21 ರಲ್ಲಿ ಕೇಂದ್ರ ಸರ್ಕಾರದಿಂದ ಶೇ.5 ರಷ್ಟು ಮಾತ್ರ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ ಕೇವಲ ಶೇ.3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಸಾಕಪ್ಪ ಸಾಕು, ಕಿವಿ ಮೇಲೆ ಹೂ’; ಬಜೆಟ್ ಬಗ್ಗೆ ಕಾಂಗ್ರೆಸ್ ವ್ಯಂಗ್ಯ – ಪೋಸ್ಟರ್ ಅಂಟಿಸಿ ಅಭಿಯಾನ

    `ಸಾಕಪ್ಪ ಸಾಕು, ಕಿವಿ ಮೇಲೆ ಹೂ’; ಬಜೆಟ್ ಬಗ್ಗೆ ಕಾಂಗ್ರೆಸ್ ವ್ಯಂಗ್ಯ – ಪೋಸ್ಟರ್ ಅಂಟಿಸಿ ಅಭಿಯಾನ

    ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget 2023) ಮಂಡಿಸುವ ವೇಳೆ ಕಿವಿಗೆ ಚೆಂಡು ಹೂವು ಇಟ್ಟುಕೊಂಡು ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದರು.

    ಇದೀಗ ಹುಬ್ಬಳ್ಳಿಯಲ್ಲಿ (Hubballi) ಕಾಂಗ್ರೆಸ್ (Congress) ಘಟಕದಿಂದ ಬಜೆಟ್ ಕುರಿತು `ಸಾಕಪ್ಪ ಸಾಕು, ಕಿವಿ ಮೇಲೆ ಹೂವ’ ಎಂಬ ಅಭಿಯಾನ ಶುರುವಾಗಿದೆ. ಇದನ್ನೂ ಓದಿ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    `ಪೇ ಸಿಎಂ’ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನ ಕಾಂಗ್ರೆಸ್ ಘಟಕ ಪ್ರಾರಂಭ ಮಾಡಿದೆ. ಬಿಜೆಪಿ (BJP) ಘಟಕದಿಂದ ಈಗಾಗಲೇ ಗೋಡೆಗಳ ಮೇಲೆ ಅಂಟಿಸಿರುವ `ಬಿಜೆಪಿಯೇ ಭರವಸೆ’ ಪೋಸ್ಟರ್ ಗಳ ಮೇಲೆ `ಸಾಕಪ್ಪ ಸಾಕು ಕಿವಿ ಮೇಲೆ ಹೂವ, ಬುರುಡೆ ಭರವಸೆ ಸಾಕು’ ಎಂಬ ಪೋಸ್ಟರ್‌ಗಳನ್ನ ಅಂಟಿಸಿ ಕೈ ಕಾರ್ಯಕರ್ತರು ಲೇವಡಿ ಮಾಡುತ್ತಿದ್ದಾರೆ.

    ವಿವಿಧ ನಗರಗಳಲ್ಲಿ ಈ ಹೊಸ ಅಭಿಯಾನಕ್ಕೆ ಹುಬ್ಬಳ್ಳಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿಯ ಸಾಫ್ಟ್‌ವೇರ್‌ ಇಂಜಿನಿಯರ್; ಬಿಡುಗಡೆಗೆ ಗೃಹ ಸಚಿವ ಶತಪ್ರಯತ್ನ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮ್ಮದು ರೈತ ಪರ ಸರ್ಕಾರ: ಬೊಮ್ಮಾಯಿ

    ನಮ್ಮದು ರೈತ ಪರ ಸರ್ಕಾರ: ಬೊಮ್ಮಾಯಿ

    ಬೆಂಗಳೂರು: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿವ ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ (Karnataka Budget 2023) ಕುರಿತಂತೆ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ರೈತರಿಗೆ ಭೂ ಸಿರಿ
    ಕೃಷಿಗೆ ರೈತರ ಸಾಲದ ಮಿತಿಯನ್ನು 3 ರಿಂದ 5ಲಕ್ಷದ ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲದಲ್ಲಿ ಹೆಚ್ಚಳವಾಗದಿದ್ದು, 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಲಾಭವಾಗಲಿದೆ. ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆಯುವ ಅಗತ್ಯವಿಲ್ಲ. ಅಗತ್ಯವಿದ್ದಾಗ ಬೀಜ, ಗೊಬ್ಬರ ಖರೀದಿಗೆ ಭೂ ಸಿರಿ ಎಂಬ ಯೋಜನೆಯಡಿ 10 ಸಾವಿರ ರೂ. ನೀಡಲಾಗುವುದು. 2,500 ರೂ. ರಾಜ್ಯ ಸರ್ಕಾರ, 7,500 ರೂ. ನಬಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ

    ಜೀವನ ಜ್ಯೋತಿ ಜೀವ ವಿಮೆ ಯೋಜನೆ
    ರೈತ ಯಾವುದೇ ಕಾರಣದಿಂದ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ತೊಂದರೆಯಾಗಬಾರದೆಂದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ ಜ್ಯೋತಿ ಜೀವ ವಿಮೆ ಯೋಜನೆ ಘೋಷಣೆಯಾಗಿದೆ. ಸಹಜವಾಗಿ ತೀರಿಕೊಂಡರೂ 2 ಲಕ್ಷ ರೂ.ಗಳನ್ನು ಅವರ ಕುಟುಂಬಕ್ಕೆ ದೊರೆಯುತ್ತದೆ. ರೈತರಿಗೆ 180 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, 53 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಿದೆ. ರೈತರಿಗೆ ಬೆಲೆ ಕುಸಿತ ಆದಾಗ ಸಮಸ್ಯೆಯಾಗದಂತೆ ಆವರ್ತ ನಿಧಿ 3,500 ಕೋಟಿ ಮೀಸಲಿಡಲಾಗಿದೆ. ಅತಿ ಹೆಚ್ಚು ಹಣ ಆವರ್ತ ನಿಧಿಗೆ ನೀಡಿರುವುದು ಒಂದು ದಾಖಲೆ. ನೀರಾವರಿಗೆ 25,000 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು.

    ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಶೂನ್ಯ ಶುಲ್ಕ
    ಸರ್ಕಾರಿ ಪಿಯುಸಿ ಮತ್ತು ಪದವಿ ಕಾಲೇಜಿನಲ್ಲಿ ಓದುವ ಮಕ್ಕಳಿಗೆ ಶುಲ್ಕ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. 8 ಲಕ್ಷ‌ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಇದರಿಂದ ಲಾಭವಾಗಲಿದೆ. ಬಡವರ ಮಕ್ಕಳಿಗೆ ಶುಲ್ಕ ಕಟ್ಟಲು ಹಣ ಇಲ್ಲದೆ ಕಾಲೇಜು ಬಿಟ್ಟ ಪರಿಸ್ಥಿತಿ ಇರಬಾರದು ಎಂದು ಈ ಯೋಜನೆಯನ್ನು ತರಲಾಗಿದೆ ಎಂದು ಹೇಳಿದರು.

    ಅನುತ್ತೀರ್ಣ ಪಿಯುಸಿ ಅಥವಾ ಪದವಿ ವಿದ್ಯಾರ್ಥಿಗಳಿಗೆ ತರಬೇತಿ
    ಪಿಯುಸಿ ಅಥವಾ ಪದವಿ ಅನುತ್ತೀರ್ಣವಾಗಿದ್ದರೆ ಆ ಮಕ್ಕಳಿಗೂ ಇನ್ನೊಂದು ಅವಕಾಶ ಕಲ್ಪಿಸಲು ತರಬೇತಿಗೆ ಅವಕಾಶ ನೀಡಲಾಗಿದೆ. ಅವರಿಗೆ ವಿಶೇಷ ಅವಕಾಶ ನೀಡಿ ಮೂರು ತಿಂಗಳ ಕಾಲ ತರಬೇತಿಯನ್ನು ಐಟಿಐ ಡಿಪ್ಲೊಮಾ ಕಾಲೇಜುಗಳಲ್ಲಿ ನೀಡಲು ಪ್ರತಿ ತಿಂಗಳು 1,500 ರೂ. ನೀಡಲಾಗುವುದು. ಕೆಲಸಕ್ಕೆ ಸೇರಿದಾಗಲೂ ಪ್ರತಿ ತಿಂಗಳು 1,500 ರೂ.ನಂತೆ 3 ತಿಂಗಳು ಹಣ ನೀಡುವ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 3,000 ಕೋಟಿ ಮೀಸಲಿಡಲಾಗಿದೆ. ನಿರುದ್ಯೋಗಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬರೆಯಲು ಅನುಕೂಲವಾಗುವಂತೆ, ಪದವಿ ಮುಗಿಸಿ ಮೂರು ವರ್ಷ ಕಾಲ ಕೆಲಸ ಸಿಗದ ನಿರುದ್ಯೋಗಿಗಳಿಗೆ 2,000 ಕೋಟಿ ರೂ. ಮೀಸಲಿಟ್ಟಿದ್ದೇವೆ. ದುಡಿಯುವ ಮಹಿಳೆಯರಿಗೆ ಪ್ರಯಾಣ ಮಾಡುವುದು ಬಹಳ ಕಷ್ಟವಿದ್ದು, ಅವರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

    ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
    ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಭೂ ರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ 500 ರೂ. ನೀಡುವ ಯೋಜನೆ ರೂಪಿಸಲಾಗಿದೆ. ಗೃಹಿಣಿಯರಿಗೆ 1 ಲಕ್ಷ, ಮಹಿಳೆಯರಿಗೆ ಮನೆಯಲ್ಲೇ ಉದ್ಯೋಗ ಮಾಡಲು ಸಹಾಯಧನ ನೀಡಲು ಘೋಷಣೆ ಮಾಡಿದೆ. 30 ಸಾವಿರ ಮಹಿಳಾ ಸ್ವ ಸಹಾಯ ಸಂಘಗಳಿಗೆ 1.50 ಲಕ್ಷ ರೂ.ಗಳನ್ನು ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿಯಲ್ಲಿ 5 ಲಕ್ಷ ರೂ. ಯೋಜನೆ ಜಾರಿ ಮಾಡಲಾಗುತ್ತಿದ್ದು,‌ ಈ ಯೋಜನೆ ಇದೇ ವರ್ಷ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

    ಹಳ್ಳಿಗಾಡಿನ ಶಾಲಾ ಮಕ್ಕಳಿಗೆ 1000 ಬಸ್
    ಹಳ್ಳಿಗಾಡಿನಲ್ಲಿ ಶಾಲಾ ‌ಮಕ್ಕಳಿಗೆ 1,000 ಶಾಲಾ ಬಸ್ ಓಡಿಸಲು ತೀರ್ಮಾನ ಮಾಡಲಾಗಿದೆ. ಬಸ್ ಲಭ್ಯತೆಗನುಗುಣವಾಗಿ ಕೆಎಸ್‌ಆರ್‌ಟಿಸಿ ಅಥವಾ ಖಾಸಗಿ ಬಸ್ ಸೇವೆಯನ್ನು ಈ ಉದ್ದೇಶಕ್ಕೆ ಬಳಸಲಾಗುವುದು. ಶಾಲಾ ಬಸ್‌ಗಳ ಸಮಸ್ಯೆಯನ್ನು ನೀಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ
    ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಗ್ರಂಥಪಾಲಕರು ಅವರು ನಿವೃತ್ತರಾದ ಮೇಲೆ ಗ್ರ್ಯಾಚ್ಯುಟಿ ಕೊಡಲು ತೀರ್ಮಾನ ಮಾಡಲಾಗಿದೆ. ಈ ಯೋಜನೆಗೆ ಸುಮಾರು 70 ಕೋಟಿ ರೂ.ಗಳ ವೆಚ್ಚ ಬರಲಿದೆ. ಇದಲ್ಲದೇ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಗ್ರಂಥಪಾಲಕರಿಗೆ ಈ ವರ್ಷ ಮತ್ತೊಮ್ಮೆ 1,000 ರೂ. ಹೆಚ್ಚಳ ಮಾಡಲಾಗುವುದು. ಸೇವಾ ಭದ್ರತೆಯಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್‌ಗಳಿಗೆ ಪ್ರತಿ ದಿನ 100 ರೂ. ಭತ್ಯೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

    ಆರ್ಥಿಕ ಬಲ ವರ್ಧನೆಗೆ ಕಾರ್ಯಕ್ರಮ
    ಆರ್ಥಿಕ ಬಲ ವರ್ಧನೆಗೆ ಕಾರ್ಯಕ್ರಮ ಮಾಡಿದ್ದೇವೆ. ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ 7,651 ಕೋಟಿ ರೂ. ಹಣ ನೀಡಿದೆ. ಇದಕ್ಕೆ ಸಮಾನ ಅನುದಾನ ರಾಜ್ಯ ಸರ್ಕಾರದಿಂದ ನೀಡಬೇಕಾಗಿದೆ. ಭೂ ಸ್ವಾಧೀನಕ್ಕೆ ಅವಕಾಶ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಭೂಸ್ವಾಧೀನ‌ ಪ್ರಕ್ರಿಯೆಗೆ ಹಣ ಒದಗಿಸಲಾಗುವುದು. ಸಾಗರ ಮಾಲಾ ಯೋಜನೆ ಅಡಿಯಲ್ಲಿ 12 ಬಂದರು ಅಭಿವೃದ್ಧಿಗೆ ಅವಕಾಶ ದೊರೆತಿದೆ. 8 ಮೀನುಗಾರರ ಬಂದರುಗಳ ಡ್ರೆಜ್ಜಿಂಗ್ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣ ಈ ವರ್ಷ ಆರಂಭವಾಗಲಿದೆ. ರಾಯಚೂರು ಇದೇ ವರ್ಷ ಪ್ರಾರಂಭವಾಗುತ್ತಿದ್ದು ಹಣ ಒದಗಿಸಲಾಗುವುದು. ಕಾರವಾರ ನೌಕಾ ನೆಲೆಯ ಅಭಿವೃದ್ದಿಗೆ ಹೆಚ್ಚುವರಿ 54 ಕೋಟಿ ರೂ. ಒದಗಿಸಲಾಗುವುದು. ದಾವಣೆಗೆರೆ ಕೊಪ್ಪಳ ವಿಮಾನ ನಿಲ್ದಾಣಕ್ಕೆಈ ವರ್ಷ ಡಿಪಿಆರ್ ಸಿದ್ಧಗೊಳಿಸಲಾಗುವುದು. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅನುದಾನ ಮೀಸಲಿಡಲಾಗಿದೆ ಎಂದರು.

    ಘೋಷಿತ ಕಾರ್ಯಕ್ರಮಗಳ ಅನುಷ್ಠಾನ
    100 ಎಸ್‌ಸಿ-ಎಸ್‌ಟಿ ಹಾಸ್ಟೆಲ್‌ಗಳು, 50 ಓಬಿಸಿ ಹಾಸ್ಟೆಲ್, 5 ಮೆಗಾ ಹಾಸ್ಟೆಲ್‌ಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ವಸತಿ ಶಾಲೆಗಳ ಅಭಿವೃದ್ದಿ, ಹೊಸ ಶಾಲೆಗಳ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲಾಗುವುದು. ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚವರಿಯಾಗಿ ವಿದ್ಯಾಸಿರಿ ಯೋಜನೆ ನೀಡಲಾಗುತ್ತಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ನೀಡಲಾಗುತ್ತಿದೆ. ಕಳೆದ ಬಾರಿ ಬಜೆಟ್‌ನಲ್ಲಿ ಮೀಸಲಿಟ್ಟಿದ್ದಕ್ಕಿಂತ ಹೆಚ್ಚಿನ ಹಣ ಖರ್ಚು ಮಾಡಿದ್ದೇವೆ. ಹಣ ಮೀಸಲಿಡುವುದಷ್ಟೆ ಅಲ್ಲ, ಅನುಷ್ಠಾನ ಮಾಡುವ ಕೆಲಸವನ್ನೂ ನಾವು ಮಾಡುತ್ತಿದ್ದೇವೆ. ಬಜೆಟ್ ಘೋಷಣೆಗಳನ್ನು ವಾಸ್ತವದಲ್ಲಿ ಅನುಷ್ಠಾನಗೊಳಿಸುತ್ತಿರುವ ಸರ್ಕಾರ ನಮ್ಮದು ಎಂದು ಮಾತನಾಡಿದರು.

    ಅಸಂಘಟಿತ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ
    ಕುರಿಗಾರರ ಅಭಿವೃಧ್ಧಿಗೆ 355 ಕೋಟಿ ರೂ.ಗಳ ಯೋಜನೆ, ಬಡಿಗೇರ, ಕಂಬಾರ, ಕುಂಬಾರ ಸೇರಿದಂತೆ ಕುಶಲಕರ್ಮಿಗಳಿಗೆ ಕಾಯಕ ಯೋಜನೆ ಅಡಿ 50 ಸಾವಿರ ರೂ. ನೀಡಲಾಗುವುದು. ಕಾರ್ಮಿಕ ವರ್ಗದ ಏಳಿಗೆಗೆ ವಿದ್ಯಾನಿಧಿ, ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಎಲ್ಲ ಕಸುಬುಗಳಿಗೆ ಸೇರಿದ ಸುಮಾರು 70 ಲಕ್ಷವಿರುವ ಅಸಂಘಟಿತ ಕಾರ್ಮಿಕರಿಗೆ ನಿಗಮ ಸ್ಥಾಪನೆ ಮಾಡಲಾಗುವುದು. ಎಲ್ಲ ಉದ್ಯೋಗ, ಆರೋಗ್ಯ, ಶಿಕ್ಷಣಗಳಲ್ಲಿ ಅಸಂಘಟಿತ ಕಾರ್ಮಿಕರ ಬಗ್ಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಬಜೆಟ್ ಹೊಸ ಯೋಜನೆಗಳು – ಯಾರಿಗೆ ಏನು ಸಿಕ್ಕಿದೆ?

    ಎಸ್ಸಿ-ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೊಟಿ ರೂ.ಗೆ ಹೆಚ್ಚಳ
    ಎಸ್‌ಸಿ-ಎಸ್‌ಟಿ ಯೋಜನೆಯಲ್ಲಿ ತಾಂತ್ರಿಕ ತೊಂದರೆ, 7ಡಿ ಕಾಯ್ದೆಗೆ ತಿದ್ದುಪಡಿ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಕ್ರಮ, ಎಸ್ಸಿ-ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೋಟಿ ರೂ.ಗೆ ಹೆಚ್ಚಳ ಮಾಡಲಾಗುವುದು. ಸಾಮಾಜಿಕ ವಲಯ, ಮೂಲಸೌಕರ್ಯ, ಆರ್ಥಿಕ ನಿರ್ವಹಣೆ ಚೆನ್ನಾಗಿ ಮಾಡಿದ್ದೇವೆ‌. ಜಿಎಸ್‌ಟಿ ಜಾರಿಯಾಗುವ ಮುಂಚಿನ ಪ್ರಕರಣಗಳಿಗೆ ಒಂದೇ ಬಾರಿ ಸೆಟಲ್‌ಮೆಂಟ್ ಮಾಡಿಕೊಳ್ಳಲು ಪ್ರೀ ಜಿಎಸ್‌ಟಿ ರೆಜಿಮ್‌ಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

    ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ಪರಿಹಾರ
    ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ಪರಿಹಾರ ನೀಡಲು ಭೂ ಸ್ವಾಧೀನ ಪ್ರಕ್ರಿಯೆ ಹಂತ ಹಂತವಾಗಿ ಆಗುತ್ತದೆ. ಎಲ್ಲರಿಗೂ ಒಂದೇ ರೀತಿಯ ದರ ನಿಗದಿ ಮಾಡಿದ್ದೇವೆ. ಈ ನೆಪವಿಟ್ಟುಕೊಂಡು ಹಿಂದಿನ ಸರ್ಕಾರಗಳು ದರ ನಿಗದಿ ಕೆಲಸವನ್ನು ಮಾಡಿರಲಿಲ್ಲ. ಈಗ ಏಕರೀತಿಯ ದರ ನಿಗದಿಪಡಿಸಲಾಗಿದ್ದು, ರೈತರು ಸಂತೋಷ ವ್ಯಕ್ತಪಡಿಸಿದ್ದಾರೆ. ಅವಶ್ಯಕತೆ ಇದ್ದ ಹಾಗೆ ಹಂತ ಹಂತವಾಗಿ, ಹಣ ಮೀಸಲಿಡಲಾಗುವುದು ಎಂದರು.

    ಕಲ್ಯಾಣ ಕರ್ನಾಟಕದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು
    ಕಲ್ಯಾಣ ಕರ್ನಾಟಕದಲ್ಲಿ ಎರಡು ಪ್ರಮಾಣದ ಮೂಲಭೂತ ಸೌಕರ್ಯಗಳಿವೆ. ಮಾನವ ಮೂಲಭೂತ ಸೌಕರ್ಯಗಳಾದ ಶಾಲಾ ಆಸ್ಪತ್ರೆಗಳು, ಮಕ್ಕಳ ಪೌಷ್ಟಿಕ ಆಹಾರ ಮತ್ತು ದೊಡ್ಡ ಪ್ರಮಾಣ ಮೂಲಭೂತಸೌಕರ್ಯಗಳಾದ ರೈಲ್ವೆ, ರಸ್ತೆ, ವಿಮಾನ ನಿಲ್ದಾಣ, ವಿಶ್ವವಿದ್ಯಾಲಯಗಳು, ಕೈಗಾರಿಕೆ ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ

    ರಾಮನಗರದಲ್ಲಿ ರಾಮಮಂದಿರ ನಿರ್ಮಾಣ: ಬಜೆಟ್‌ ಮಂಡಿಸಿ ಸಿಎಂ ಭರವಸೆ

    ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023) ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ರಾಮನಗರದ (Ramanagara) ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು (Ram Mandir) ನಿರ್ಮಿಸಲಾಗುವುದು ಎಂದು ಘೋಷಿಸಿದರು.

    ಈ ಹಿಂದೆ ಸಚಿವ ಅಶ್ವಥ್‌ ನಾರಾಯಣ (Ashwath Narayan) ಅವರು, ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್‌ ಮಾಡಲಾಗಿದೆ ಎಂದು ತಿಳಿಸಿದ್ದರು. ಅದರಂತೆ ಬಜೆಟ್‌ನಲ್ಲಿ, ರಾಮಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar), ರಾಮಮಂದಿರವಾದರೂ ಕಟ್ಟು, ಸೀತಾ ಮಂದಿರವಾದರೂ ಕಟ್ಟು. ಅಶ್ವಥ್ ನಾರಾಯಣ ಮಂದಿರವಾದರೂ ಕಟ್ಟು‌, ಅಶೋಕ ಮಂದಿರವಾದರೂ ಕಟ್ಟು, ಬಸವರಾಜ ಮಂದಿರವಾದರೂ ಕಟ್ಟು. ಯಡಿಯೂರಪ್ಪ ಮಂದಿರವಾದರೂ ಕಟ್ಟು, ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ಮೊದಲು ರಾಮನಗರದಲ್ಲಿ ಬಿಜೆಪಿ ಆಫೀಸ್ ಕಟ್ಟಲಿ ಎಂದು ತಿರುಗೇಟು ನೀಡಿದರು.

    ನನಗೆ ನನ್ನ ಕಚೇರಿಯೇ ದೇವಸ್ಥಾನ. ಏನೋ ಕ್ಲೀನ್ ಮಾಡಿಸ್ತೀನಿ ಅಂತಾ ಹೇಳಿದ.. ಏನಪ್ಪ ಮಾಡಿದ? ಅಲ್ಲಿಗೆ ಬಂದು ವೃಷಭಾವತಿ ನೀರು ಕುಡಿಯಲಿ ಮೊದಲು. ಕೊಚ್ಚೆ ನೀರನ್ನು ಕ್ಲೀನ್ ಮಾಡಿಸಿದ್ದಾನಾ? ಭ್ರಷ್ಟಾಚಾರ ನಿಲ್ಲಿಸಿದ್ದಾನಾ? ನಾನಿನ್ನೂ ಸ್ಕಿಲ್ ಡೆವಲಪ್ಮೆಂಟ್ ಹಗರಣ ಬಿಚ್ಚಿಟ್ಟಿಲ್ಲ. ಇನ್ನೂ ಕೆಲ ದಿನಗಳಲ್ಲಿ ಅದನ್ನೂ ಬಿಚ್ಚಿಡ್ತೀನಿ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

    ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

    ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ (BPL Card) ಮಾಸಿಕ ಅಕ್ಕಿ (Ration) 5ರಿಂದ 6 ಕೆ.ಜಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023) ಮಂಡಿಸಿದ ಅವರು, ನಮ್ಮ ಸರ್ಕಾರವು ನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಆಹಾರ ಭದ್ರತೆ ನೀಡಲು ಬದ್ಧವಾಗಿದೆ. ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರವು ಹೆಚ್ಚುವರಿ ಆಹಾರ ಧಾನ್ಯ ವಿತರಿಸಿತ್ತು. ಇದರೊಂದಿಗೆ ರಾಜ್ಯ ಸರ್ಕಾರವು ಅಕ್ಕಿಯೊಂದಿಗೆ ಸ್ಥಳೀಯ ಪ್ರಮುಖ ಆಹಾರ ಧಾನ್ಯಗಳಾದ ರಾಗಿ ಹಾಗೂ ಜೋಳವನ್ನು ಸಹ ಪಡಿತರ ವ್ಯವಸ್ಥೆಯಡಿ ವಿತರಿಸಿ, ರಾಜ್ಯದ ರೈತರಿಗೆ ಹೆಚ್ಚುವರಿ ನೆರವು ನೀಡಿದೆ. ಸ್ಥಳೀಯ ಧಾನ್ಯಗಳ ವಿತರಣೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಬಜೆಟ್ ಹೊಸ ಯೋಜನೆಗಳು – ಯಾರಿಗೆ ಏನು ಸಿಕ್ಕಿದೆ?

    2013-14ರಿಂದ 2017-18ನೇ ಸಾಲಿನವರೆಗೆ 5 ವರ್ಷಗಳ ಅವಧಿಯಲ್ಲಿ 1.2 ಕೋಟಿ ಮೆಟ್ರಿಕ್‌ ಟನ್‌ಗಳ ಅಕ್ಕಿಯನ್ನು ವಿತರಿಸಲಾಗಿತ್ತು. ನಮ್ಮ ಸರ್ಕಾರವು ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ 1.5 ಕೋಟಿ ಮೆಟ್ರಿಕ್‌ ಟನ್‌ ಅಕ್ಕಿಯನ್ನು ವಿತರಿಸಿದೆ ಎಂದು ಮಾಹಿತಿ ನೀಡಿದರು.

    NFSA ಅಡಿಯಲ್ಲಿ ಪ್ರತಿ ಫಲಾನುಭವಿಗೆ ನೀಡುತ್ತಿರುವ 5 ಕೆ.ಜಿ ಆಹಾರ ಧಾನ್ಯಗಳ ಜೊತೆಯಲ್ಲಿ ಒಂದು ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲು 2023-34ನೇ ವರ್ಷದಲ್ಲಿ 4,000 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

    ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

    ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.

    ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್‌ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್‌ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

    ಮುಖ್ಯಾಂಶಗಳು:
    ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.

    ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು (Tourism) ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.

    ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್‌ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023-24) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ಸಮಗ್ರ ಅಭಿವೃದ್ಧಿಗೆ (Bengaluru Development) ಭರ್ಜರಿ ಉಡುಗೊರೆ ನೀಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಘೋಷಿಸಿದರು.

    ಮುಖ್ಯಾಂಶಗಳು:
    ಬೆಂಗಳೂರು (Bengaluru) ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆ (Artificial Intelligence) ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ (Traffic Signal) ನಿರ್ವಹಣೆ ಮಾಡುವ ಮೂಲಕ `ಸೀಮ್‌ಲೆಸ್ ಸಿಗ್ನಲಿಂಗ್’ ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

    ಟಿನ್ ಫ್ಯಾಕ್ಟರಿ (Tin Factory) ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ (BEL) ರಸ್ತೆಯ ವರೆಗೆ ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

    1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿಮೀ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಇದನ್ನೂ ಓದಿ: Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

    ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಿಸಲು ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿಮೀ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.

    ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರ್ ಹಾಗೂ ಕಾಂಪಾಕ್ಟರ್‌ಗಳು ಕಾರ್ಯ ನಿರ್ವಹಿಸಲಿವೆ. ಪ್ರತಿ ವಾರ್ಡ್‌ ಒಂದರಂತೆ ತ್ಯಾಜ್ಯ ಸಂಸ್ಕರಣಾ ಕೇಂದ್ರ ಸಹ ಸ್ಥಾಪಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k