Tag: Karnataka Budget 2023

  • ರಾಜ್ಯ ಬಜೆಟ್‌: 1 ರೂಪಾಯಿ ಬಂದಿದ್ಹೇಗೆ? ಹೋಗಿದ್ದು ಹೇಗೆ?

    ರಾಜ್ಯ ಬಜೆಟ್‌: 1 ರೂಪಾಯಿ ಬಂದಿದ್ಹೇಗೆ? ಹೋಗಿದ್ದು ಹೇಗೆ?

    ಬೆಂಗಳೂರು: 2023-24ನೇ ಸಾಲಿನ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ ಮಂಡಿಸಿದರು. ರಾಜ್ಯ ಸರ್ಕಾರದ ಬಜೆಟ್‌ನ (Karnataka Budget 2023) ಒಟ್ಟು ಆದಾಯ ಗಳಿಕೆ ಮತ್ತು ವೆಚ್ಚವನ್ನು ರೂಪಾಯಿ (100 ಪೈಸೆ)ಯಲ್ಲಿ ಲೆಕ್ಕಾಚಾರ ಹಾಕುವುದು ವಾಡಿಕೆ. ಅದರಂತೆ ಸರ್ಕಾರದ ಆದಾಯದ ಗಳಿಕೆ ಹೇಗೆ ಮತ್ತು ಯಾವುದಕ್ಕೆ ಎಷ್ಟು ವೆಚ್ಚವಾಗಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

    ಒಂದು ರೂಪಾಯಿ ಗಳಿಕೆ ಹೇಗೆ?
    ರಾಜ್ಯ ತೆರಿಗೆ ಆದಾಯದಿಂದ ಸರ್ಕಾರಕ್ಕೆ 54 ಪೈಸೆ ಬಂದರೆ, ಸಾಲದಿಂದ 26 ಪೈಸೆ ಲಭ್ಯವಾಗಲಿದೆ. ಅಂತೆಯೇ ಕೇಂದ್ರ ತೆರಿಗೆ ಪಾಲಿನಿಂದ ರಾಜ್ಯ ಸರ್ಕಾರಕ್ಕೆ 12 ಪೈಸೆ ಸಿಗಲಿದೆ. ಕೇಂದ್ರ ಸರ್ಕಾರದ ಸಹಾಯಧನವಾಗಿ 4 ಪೈಸೆ ಲಭಿಸಲಿದೆ. ಜೊತೆಗೆ ರಾಜ್ಯ ತೆರಿಗೆಯೇತರ ರಾಜಸ್ವದಿಂದ 4 ಪೈಸೆ ಸಿಗಲಿದೆ. ಇದನ್ನೂ ಓದಿ: ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಉಚಿತ ಶಿಕ್ಷಣ – 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

    1 ರೂಪಾಯಿಯಲ್ಲಿ ಯಾವುದಕ್ಕೆ ಎಷ್ಟು ಖರ್ಚು?
    ಸಾಲ ತೀರಿಸಲು ರಾಜ್ಯ ಸರ್ಕಾರ ಬೊಕ್ಕಸದಿಂದ 19 ಪೈಸೆ ಎತ್ತಿಡಬೇಕಿದೆ. ಇತರ ಸಾಮಾನ್ಯ ಸೇವೆಗಳಿಗಾಗಿ 18 ಪೈಸೆ ವ್ಯಯಿಸಲಿದೆ. ಕೃಷಿ, ನೀರಾವರಿ ಮತ್ತು ಗ್ರಾಮೀಣ ಅಭಿವೃದ್ಧಿಗೆ 17 ಪೈಸೆ, ಇತರೆ ಆರ್ಥಿಕ ಸೇವೆಗಳಿಗಾಗಿ 15 ಪೈಸೆ, ಶಿಕ್ಷಣಕ್ಕೆ 11 ಪೈಸೆ ತೆಗೆದಿರಿಸಬೇಕು. ಸಮಾಜ ಕಲ್ಯಾಣಕ್ಕೆ 8 ಪೈಸೆ, ಆರೋಗ್ಯಕ್ಕೆ 5 ಪೈಸೆ ವೆಚ್ಚ ಮಾಡಲಿದೆ. ಇತರ ಸಾಮಾಜಿಕ ಸೇವೆಗಳಿಗಾಗಿ 4 ಪೈಸೆ, ನೀರು ಪೂರೈಕೆ ಮತ್ತು ನೈರ್ಮಲ್ಯಕ್ಕೆ 3 ಪೈಸೆಯನ್ನು ಸರ್ಕಾರ ತೆಗೆದಿರಿಸಬೇಕು. ಇದನ್ನೂ ಓದಿ: ಯುವಸ್ನೇಹಿ, ಬದುಕಿನ ದಾರಿ ಯೋಜನೆ ಪ್ರಕಟ – ಯುವಜನತೆಗೆ ಸಿಗುತ್ತೆ ಹಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ನ್ನಡ ಸಿನಿಮಾ ರಂಗದ ಹೆಸರಾಂತ ನಟ ಶಂಕರ್ ನಾಗ್ (Shankar Nag) ಅವರ ಹೆಸರಿನಲ್ಲಿ ಸರಕಾರ ಸಾಕಷ್ಟು ಕೆಲಸ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅದರಲ್ಲೂ ಮೆಟ್ರೋ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು, ಶಂಕರ್ ಕನಸಿನ ನಂದಿಬೆಟ್ಟದಲ್ಲಿಯ ರೂಪ್ ವೇ ಚಾಲನೆ ಕೊಡಬೇಕು ಮತ್ತು ಅದಕ್ಕೆ ಶಂಕರ್ ನಾಗ್ ಅವರ ಹೆಸರನ್ನೇ ಇಡಬೇಕು ಎನ್ನುವುದು ಆಗ್ರಹವಾಗಿತ್ತು. ಕೊನೆಗೂ ಅದು ಹಾಗೆಯೇ ಉಳಿದುಕೊಂಡಿದೆ.

    ಆದರೆ, ಈ ಬಾರಿಯ ಬಜೆಟ್ (Karnataka Budget 2023) ನಲ್ಲಿ ಸರಕಾರವು ಶಂಕರ್ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಿದ್ದು, ಅದನ್ನು ಆಯವ್ಯಯ 2023-24ರಲ್ಲಿ ಸೇರಿಸಲಾಗಿದೆ. ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ (Taxi) ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದೆ.

    ಈಗಾಗಲೇ ಇರುವ ಬಹುತೇಕ ಆಟೋ ಹಾಗೂ ಟ್ಯಾಕ್ಸಿ ನಿಲ್ದಾಣಗಳಿಗೆ ಶಂಕರ್ ನಾಗ್ ಅವರ ಹೆಸರೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಶಂಕರ್ ನಾಗ್ ಆಟೋ ಅಥವಾ ಟ್ಯಾಕ್ಸಿ ನಿಲ್ದಾಣಗಳನ್ನು ನೋಡಬಹುದು. ಇದೀಗ ಬಜೆಟ್ ನಲ್ಲೂ ಇಂಥದ್ದೊಂದು ಯೋಜನೆಯನ್ನು ಘೋಷಿಸಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ಬೆಂಗಳೂರಿನಲ್ಲಿ ಮೆಟ್ರೋ ನಿರ್ಮಾಣ ಆಗಬೇಕು ಎನ್ನುವುದು ಶಂಕರ್ ನಾಗ್ ಅವರ ಕನಸಾಗಿತ್ತು. ಅದೀಗ ನನಸಾಗಿದೆ. ನಂದಿಬೆಟ್ಟದಲ್ಲಿ ರೂಪ್‍ ವೇ ಕೂಡ ಶಂಕರ್ ಕನಸು. ಇಂತಹ ದೊಡ್ಡ ಯೋಜನೆಗಳಿಗೆ ಶಂಕರ್ ನಾಗ್ ಹೆಸರನ್ನು ಇಡಲಿ ಎನ್ನುವುದು ಅವರ ಅಭಿಮಾನಿಗಳ ಆಗ್ರಹವಾಗಿತ್ತು. ಆದರೆ, ಬಜೆಟ್‍ ನಲ್ಲಿ ಇದ್ಯಾವುದೂ ಘೋಷಣೆಯಾಗಲಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Karnataka Budget 2023-24: ಯಾವ ವಲಯಕ್ಕೆ ಎಷ್ಟು ಅನುದಾನ?

    Karnataka Budget 2023-24: ಯಾವ ವಲಯಕ್ಕೆ ಎಷ್ಟು ಅನುದಾನ?

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2023-24) ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.

    ವಲಯವಾರು ವಿಂಗಡಣೆ ಮಾಡಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಗುಡ್‍ನ್ಯೂಸ್- ಉಚಿತ ಬಸ್ ಪಾಸ್ ಘೋಷಣೆ

    ಯಾವ ಇಲಾಖೆಗೆ ಎಷ್ಟು ಅನುದಾನ?
    ಶಿಕ್ಷಣ ಇಲಾಖೆಗೆ 37,960 ಕೋಟಿ ರೂ.
    ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ – 20,494 ಕೋಟಿ ರೂ.
    ನಗರಾಭಿವೃದ್ಧಿ ಇಲಾಖೆ – 17,938 ಕೋಟಿ ರೂ.
    ಕಂದಾಯ ಇಲಾಖೆ – 15,943 ಕೋಟಿ ರೂ.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ ರೂ.
    ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.
    ಇಂಧನ ಇಲಾಖೆ – 13,803 ಕೋಟಿ ರೂ.
    ಸಮಾಜ ಕಲ್ಯಾಣ ಇಲಾಖೆ – 11,163 ಕೋಟಿ ರೂ.
    ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.
    ಕೃಷಿ ಮತ್ತು ತೋಟಗಾರಿಕೆ ಇಲಾಖೆ – 9,456 ಕೋಟಿ ರೂ.
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 5,676 ಕೋಟಿ ರೂ.
    ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 4,600 ಕೋಟಿ ರೂ.
    ವಸತಿ ಇಲಾಖೆ – 3,787 ಕೋಟಿ ರೂ.
    ಇತರೆ ಇಲಾಖೆ – 1,16,968 ಕೋಟಿ ರೂ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

    Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

    ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಉಡುಗೊರೆ ನೀಡಿದ್ದಾರೆ. ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ (Fish Boats) ಪೆಟ್ರೋಲ್/ಡೀಸೆಲ್ (Petrol, Diesel) ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು ಎಂದು ಬೊಮ್ಮಾಯಿ (Basavaraj Bommai) ಘೋಷಿಸಿದರು.

    ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟ ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು ಎಂದು ತಿಳಿಸಿದರು.

    ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ʻಮತ್ಸ್ಯ ಸಂಪದʼ ಯೋಜನೆಯೊಂದಿಗೆ ಸಂಯೋಜಿಸಿ ʻ ಮತ್ಸ ಸಿರಿʼ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದನ್ನೂ ಓದಿ: Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

    ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಒದಗಿಸಲಾಗಿದೆ. ಕೃಷಿ ಯಾಂತ್ರೀಕರಣ ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ. ಮಾರುಕಟ್ಟೆ ನೆರವು ನೀಡಲಾಗಿದೆ ಹಾಗೂ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಘೋಷಿಸಿದರು.

    ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ʻಭೂ ಸಿರಿ’ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ.

    ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಏಷ್ಯಾದಲ್ಲಿಯೇ 2ನೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಹೊಂದಿರುವ ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ 75 ಕೋಟಿ ರೂ. ಗಳ ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲಾಗುವುದು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

    ಆವರ್ತ ನಿಧಿಗೆ ಬಲ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಧಾನ್ಯಗಳಿಗೆ, ರೈತರಿಗೆ ತ್ವರಿತವಾಗಿ ಹಣಪಾವತಿ ಮಾಡಲು ಸ್ಥಾಪಿಸಿರುವ ಆವರ್ತ ನಿಧಿಯನ್ನು ನಮ್ಮ ಸರ್ಕಾರದ ಕಾಲಾವಧಿಯಲ್ಲಿ 2,000 ಕೋಟಿ ರೂ. ಗಳವರೆಗೆ ಹೆಚ್ಚಿಸಲಾಗುವುದೆಂದು 2020-21ನೇ ಸಾಲಿನಲ್ಲಿ ಘೋಷಿಸಲಾಗಿತ್ತು. ಪ್ರಸ್ತುತ ಆವರ್ತ ನಿಧಿ ಮತ್ತು ಕರ್ನಾಟಕ ಆಹಾರ ನಿಗಮಕ್ಕೆ ಧಾನ್ಯಗಳ ಖರೀದಿಗೆ ಬಿಡುಗಡೆ ಮಾಡಿರುವ ಅನುದಾನ ಸೇರಿ ಒಟ್ಟು 1,000 ಕೋಟಿ ರೂ. ಗಳಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1.000 ಕೋಟಿ ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 1,500 ಕೋಟಿ ರೂ. ಗಳನ್ನು ಒದಗಿಸಿ, 3,500 ಕೋಟಿ ಗಳಿಗೆ ಏರಿಸಲಾಗುವುದು. ಇದು ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚಿನ ಗಾತ್ರದ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

    Karnataka Budget 2023- ಪ್ರತಿ ಗ್ರಾಮ ಪಂಚಾಯತ್‍ಗೆ 60 ಲಕ್ಷ ರೂ.ಗಳಷ್ಟು ಅನುದಾನ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ಬಾರಿ ಮಂಡಿಸಿದ ರಾಜ್ಯ ಬಜೆಟ್‍ (Karnataka Budget 2023) ನಲ್ಲಿ ಪ್ರತಿ ಗ್ರಾಮ ಪಂಚಾಯತ್‍ಗೆ 22 ರಿಂದ 60 ಲಕ್ಷ ಅನುದಾನವನ್ನು ಘೋಷಣೆ ಮಾಡಿದ್ದಾರೆ.

    ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.

    2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ (Grama Panchayat) ಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರವು ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರಸಕ್ತ ಸಾಲಿನಲ್ಲಿ 2,070 ಕೋಟಿ ರೂ. ಗಳ ವೆಚ್ಚದಲ್ಲಿ 4,504 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

    ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ, ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ. ವೆಚ್ಚ ಮಾಡಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

    Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

    ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ರೈತರಿಗೆ (Farmers) ಬಂಪರ್‌ ಉಡುಗೊರೆ ನೀಡಲಾಗಿದೆ. ರೈತರಿಗೆ ಈಗ 3 ಲಕ್ಷದವರೆಗಿನ ನೀಡಲಾಗುತ್ತಿರುವ ಶೂನ್ಯ ಬಡ್ಡಿದರ ಸಾಲದ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದರು.

    ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗಿದೆ. ರೈತರ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಆ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ರೂ. ಕೋಟಿ ಸಾಲ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: Karnataka Budget – ಟಾರ್ಗೆಟ್‌ ಮೀರಿ ಅಬಕಾರಿ ಆದಾಯ ಭರ್ಜರಿ ಸಂಗ್ರಹ

    ಪಿಎಂ ಶ್ರೀ ಯೋಜನೆ ಅಡಿಯಲ್ಲಿ ರೈತರಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷದ ಅಂಗವಾಗಿ ರೈತರಿಗೆ ಸಿರಿ ಧಾನ್ಯ ಉತ್ಪಾದನೆ ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್‌ಗೂ ಪ್ರೋತ್ಸಾಹ ಧನ, ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ, ಅಡಿಕೆ ಬೆಳೆ ರೋಗ ನಿಯಂತ್ರಣಕ್ಕೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ ತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

    ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

    ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ 20203-24ನೇ ಸಾಲಿನ ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ. ಗಳ ಅನುದಾನ ಘೋಷಿಸಿದರು.

    ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘ She Toilet’ ಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಹೇಳಿದರು.

    ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು ಎಸ್‍ಓಎಸ್ ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು. ಇದನ್ನೂ ಓದಿ: ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

    ಒಟ್ಟಿನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 20203-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

    ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಶುಕ್ರವಾರ) ತಮ್ಮ ಎರಡನೇ ಬಜೆಟ್‌ (Karnataka Budget 2023) ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮಂಡಿಸಲಾಗುತ್ತಿರುವ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್‌ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

    2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಎಸ್ ಎನ್.ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ಸಿಎಂ ವಿಧಾನಸೌಧಕ್ಕೆ ತೆರಳುವ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

    ಶ್ರೀಕಂಠೇಶ್ವರ ಮತ್ತು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಸಿಎಂ ಅರ್ಚನೆ ಮಾಡಿಸಿದರು. ನಂತರ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು.

    ಸಿಎಂ ಬೊಮ್ಮಾಯಿ ಜೊತೆ ಸಚಿವರು ವಿಧಾನಸೌಧಕ್ಕೆ ಆಗಮಿಸಿದರು. ಬಜೆಟ್‌ ಮಂಡಿಸಲಿರುವ ಬೊಮ್ಮಾಯಿ ಅವರಿಗೆ ಸಚಿವರು ಶುಭಾಶಯ ತಿಳಿಸಿದರು. ಇದನ್ನೂ ಓದಿ: ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

    ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

    ಬೆಂಗಳೂರು: ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

    ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಸಂಗ್ರಹವಾಗಿದೆ. ಹೀಗಾಗಿ ಬಜೆಟ್ ಗಾತ್ರ ಇದೇ ಮೊದಲ ಬಾರಿಗೆ 3 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ. ಉಚಿತ ಘೋಷಣೆ ಒಳಗೊಂಡಂತೆ, ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್-ಜೆಡಿಎಸ್‌ಗೆ ಟಕ್ಕರ್ ಕೊಟ್ಟು, ಮತ ಫಸಲು ತೆಗೆಯುವುದಕ್ಕೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಮೂಲಕ ಪ್ರಯತ್ನಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

    ಬಜೆಟ್ ಮುನ್ನಾ ದಿನವೇ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಾಳೆಯದ್ದು ಚುನಾವಣಾ ಪ್ರಣಾಳಿಕೆ ಬಜೆಟ್ ಎನ್ನುವುದು ನಮಗೆ ಗೊತ್ತಿದೆ. ಕಳೆದ ವರ್ಷದ ಬಜೆಟ್‌ನಲ್ಲಿ ಬರೀ ಘೋಷಣೆ, ಭರವಸೆಗಳ ಭಾಷಣವಷ್ಟೇ ಇತ್ತು. ಶೇಕಡಾ 90ರಷ್ಟು ಅನುಷ್ಠಾನಕ್ಕೆ ಬರಲಿಲ್ಲ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    ಬೊಮ್ಮಾಯಿ ಬಜೆಟ್; ನಿರೀಕ್ಷೆಗಳೇನು?
    ಕಾಂಗ್ರೆಸ್‌ನ ಗೃಹ ಲಕ್ಷ್ಮಿ ಯೋಜನೆಗೆ ಪ್ರತಿಯಾಗಿ ಸ್ತ್ರೀಶಕ್ತಿ ಯೋಜನೆ, ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 5 ಲಕ್ಷ ರೂ.ಗೆ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲದ ಮೊತ್ತ ಹೆಚ್ಚಳ ಸಾಧ್ಯತೆ, ಕುಲ ಕಸುಬುಗಳ ಪ್ರೋತ್ಸಾಹಕ್ಕೆ ವಿಶೇಷ ಯೋಜನೆ, ಹೋಬಳಿ ಮಟ್ಟದಲ್ಲೂ ನಮ್ಮ ಕ್ಲಿನಿಕ್ ಅನುಷ್ಠಾನ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ; ಅನುದಾನ, ನೀರಾವರಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನ, ಪುನೀತ್ ರಾಜ್‌ಕುಮಾರ್, ಅಂಬರೀಶ್ ಸ್ಮಾರಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶುಕ್ರವಾರ ರಾಜ್ಯ ಬಜೆಟ್‌ ಮಂಡನೆ – ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

    ಶುಕ್ರವಾರ ರಾಜ್ಯ ಬಜೆಟ್‌ ಮಂಡನೆ – ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಶುಕ್ರವಾರ ಬಜೆಟ್‌ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದ್ದಾರೆ. ಅಲ್ಲದೇ ಸರ್ಕಾರವನ್ನು ಬ್ಯಾಡ್‌ ಎಂದು ಕರೆದಿದ್ದಾರೆ.

    ಸಿದ್ದು ಪತ್ರಿಕಾ ಹೇಳಿಕೆಯಲ್ಲೇನಿದೆ?
    ಬಿಜೆಪಿಯನ್ನು ಮೂರು ಪದಗಳಲ್ಲಿ ಬಣ್ಣಿಸುವುದಾದರೆ, “BAD” (Broken Promises – Abysmal Governance – Divisive Agenda) ಅಂದರೆ ಸುಳ್ಳು ಭರವಸೆ, ದುರಾಡಳಿತ, ಒಡೆದು ಆಳುವ. ಬೊಮ್ಮಾಯಿ ಅವರ ಸರ್ಕಾರ ಎಂದರೆ, ಅಸಮರ್ಥರ ಸರ್ಕಸ್ ಹಾಗೂ ಭ್ರಷ್ಟರ ಪಡೆ ಎಂದರ್ಥ. ಬಿಜೆಪಿಯ ಡಿಎನ್ಎ ಮೂರು Dಗಳಿಂದ ಕೂಡಿದೆ. ‘Dupe!’, ‘Deceive!”, “Divide!” ಅಂದರೆ, ವಂಚನೆ, ಮೋಸ, ವಿಭಜನ.

    ಪಕ್ಷಾಂತರ ಹಾಗೂ ಭ್ರಷ್ಟಾಚಾರದಿಂದ ರಚನೆಯಾದ ಬಿಜೆಪಿಯ ಅನೈತಿಕ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಶಾಪವಾಗಿದೆ. ಭ್ರಷ್ಟಾಸುರ ಬೊಮ್ಮಾಯಿ ಅವರ ಸರ್ಕಾರದ ಅವಧಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ಸರ್ಕಾರ. ಸುಳ್ಳು ಭರವಸೆ ಮೂಲಕ ರಾಜ್ಯದ ಜನರ ಕನಸನ್ನು ನುಚ್ಚುನೂರು ಮಾಡಿದೆ. ಜತೆಗೆ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ. ಈ ಲಂಪಟ ಹಾಗೂ ಭ್ರಷ್ಟಚಾರ ದರೂಪವಾಗಿರುವ ಸರ್ಕಾರದಲ್ಲಿ ಬೊಮ್ಮಾಯಿ ಅವರು #PayCM ಹಾಗೂ ಅವರ ಸರ್ಕಾರ #40% ಸರ್ಕಾರ ಎಂಬ ಖ್ಯಾತಿ ಪಡೆದಿದೆ. ಈ ಸರ್ಕಾರ ರಾಜ್ಯದ 6.50 ಕೋಟಿ ಜನರ ಈ ಆರು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಇದನ್ನೂ ಓದಿ: ಬಸವ, ಬುದ್ಧ, ಅಂಬೇಡ್ಕರ್ ತತ್ವದಿಂದ ಕೆಆರ್‌ಪಿಪಿ ಹುಟ್ಟಿದೆ – ಸಿಟ್ಟು, ದ್ವೇಷದಿಂದಲ್ಲ: ಜನಾರ್ದನ ರೆಡ್ಡಿ

    ಬೊಮ್ಮಾಯಿ ಅವರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಬಿಜೆಪಿಯ 2018ರ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ.91ರಷ್ಟು ಭರವಸೆಗಳನ್ನು ಈಡೇರಿಸಲು ವಿಫಲವಾಗಿರುವುದೇಕೆ? ರೈತರಿಗೆ ಕೊಟ್ಟ 112 ಭರವಸೆಗಳ ಪೈಕಿ 97 ಭರವಸೆಗಳನ್ನು ಈಡೇರಿಸಲು ಈ ಸರ್ಕಾರ ವಿಫಲವಾಗಿದ್ದು ಯಾಕೆ? ರೈತರ ಸಾಲ ಮನ್ನಾ ಮಾಡುವ ಭರವಸೆ ಏನಾಯ್ತು? ಇನ್ನು ರೈತರಿಗೆ ನ್ಯಾಯಯುತ ಬೆಂಬಲ ಬೆಲೆ (MSP) ನೀಡುವ ಭರವಸೆ ಏನಾಯ್ತು? ಬಿಜೆಪಿ ಸರ್ಕಾರ ಮಹಿಳೆಯರಿಗೆ ನೀಡಿದ್ದ 26 ಭರವಸೆಗಳ ಪೈಕಿ 24 ಭರವಸೆ ಈಡೇರಿಸಲು ವಿಫಲವಾಗಿದ್ದು ಏಕೆ? 10 ಸಾವಿರ ಕೋಟಿಯ ಸ್ತ್ರೀ ಉನ್ನತಿ ನಿಧಿ ಯೋಜನೆ ಏನಾಯ್ತು? ರಾಜ್ಯದ ಹೆಣ್ಣು ಮಕ್ಕಳಿಗೆ ನೀಡುತ್ತೇವೆ ಎಂದಿದ್ದ ಉಚಿತ ಸ್ಮಾರ್ಟ್ ಫೋನ್‌ಗಳು ಎಲ್ಲಿ ಹೋದವು? ರಾಜ್ಯದ ಯುವಕರಿಗೆ ಕೊಟ್ಟ 18 ಭರವಸೆಗಳಲ್ಲಿ 17 ಭರವಸೆ ಈಡೇರಿಸಲು ಸರ್ಕಾರ ವಿಫಲವಾಗಿದ್ದೇಕೆ? ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿಯಾಗಿಲ್ಲ. ಯಾಕೆ? ನೇಮಕಾತಿ ಅಕ್ರಮಗಳ ಪರಿಣಾಮ 2.52 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಇದು ಯುವಕರ ಭವಿಷ್ಯಕ್ಕೆ ಗ್ರಹಣ ಹಿಡಿಯುವಂತೆ ಮಾಡಿದೆ. 1,300 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದ ಪಿಯು ಕಾಲೇಜು ನಿರ್ಮಾಣವಾಗಿಲ್ಲ ಯಾಕೆ? ಪದವಿವರಗೂ ಉಚಿತ ಶಿಕ್ಷಣ ನೀಡುವ ಭರವಸೆಯನ್ನು ಸರ್ಕಾರ ಕಸದಬುಟ್ಟಿಗೆ ಎಸೆದಿರುವುದೇಕೆ?

    ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ SC/ST/OBC ಸಮುದಾಯಗಳಿಗೆ ನೀಡಿದ್ದ 81 ಭರವಸೆಗಳಲ್ಲಿ 77 ಭರವಸೆಗಳನ್ನು ಈಡೇರಿಸದೇ ದ್ರೋಹ ಬಗದಿರುವುದೇಕೆ? ಸಮುದಾಯದ ಮಕ್ಕಳಿಗೆ 4500 ಕೋಟಿಯ ವಿದ್ಯಾರ್ಥಿ ವೇತನ ಎಲ್ಲಿದೆ? ಎಸ್ಸಿ/ಎಸ್ಟಿ/ಒಬಿಸಿ ಸಮುದಾಯಕ್ಕೆ ಘೋಷಿಸಿದ್ದ ರೂ 15,000 ಕೋಟಿ ವೆಚ್ಚದ ವಸತಿ ನಿರ್ಮಾಣ ಭರವಸೆ ಪೂರ್ಣಗೊಂಡಿಲ್ಲ ಏಕೆ? ಎಸ್ಸಿ-ಎಸ್ಟಿಗೆ ಮೀಸಲಾದ ರೂ. 7,000 ಕೋಟಿ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವ ಮೂಲಕ ಎಸ್ಸಿ-ಎಸ್ಟಿ ಸಮುದಾಯಕ್ಕೆ ವಂಚಿಸಿದ್ದೇಕೆ? 2018ರ ಬಿಜೆಪಿ ಪ್ರಣಾಳಿಕೆಯಲ್ಲಿ “ಶಿಕ್ಷಣ” ಕೇತ್ರಕ್ಕೆ ಘೋಷಿಸಲಾದ 32 ಭರವಸೆಗಳ ಪೈಕಿ 29ಈಡೇರಿಸಿಲ್ಲ, “ಆರೋಗ್ಯ ” ಕ್ಷೇತ್ರಕ್ಕೆ ನೀಡಿದ್ದ 40 ಭರವಸೆಗಳ ಪೈಕಿ 35 ಭರವಸೆ ಈಡೇರಿಲ್ಲ, ಮೂಲ ಸೌಕರ್ಯ ಕ್ಷೇತ್ರದಲ್ಲಿ 48 ಭರವಸೆಗಳ ಪೈಕಿ 40 ಭರವಸೆ ಪೂರ್ಣಗೊಂಡಿಲ್ಲ, ಕೈಗಾರಿಕಾಭಿವೃದ್ಧಿಗೆ23 ಭರವಸೆಗಳನ್ನು ನೀಡಿ 22 ಭರವಸೆ ಈಡೇರಿಸಿಲ್ಲ. ಈ ಭರವಸೆಗಳ ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದ್ದು ಏಕೆ?

    2018ರ ಬಿಜೆಪಿ ಪ್ರಣಾಳಿಕೆಯ ಸುಳ್ಳಿನ ಸರಮಾಲೆ ಒಂದು ಕಡೆಯಾದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 – 2023ನೇ ಸಾಲಿನ ಬಜೆಟ್‌ನಲ್ಲೂ ಸುಳ್ಳಿನ ಸರಮಾಲೆ ಪೋಣಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು 2022-2023 ಬಜೆಟ್‌ನಲ್ಲಿ ಹೇಳಿರುವ ಸುಳ್ಳುಗಳ ಬಗ್ಗೆ ಈ 10 ಪ್ರಶ್ನೆ ಕೇಳಲಾಗುತ್ತಿದ್ದು, ಸರ್ಕಾರ 6.5 ಕೋಟಿ ಕನ್ನಡಿಗರಿಗೆ ಉತ್ತರ ನೀಡಲಿ.

    ಬಜೆಟ್ಟಿನಲ್ಲಿ ಘೋಷಿಸಲಾದ 339 ಕಾರ್ಯರೂಪಕ್ಕೆ ತರುವ ಭರವಸೆಗಳ ಪೈಕಿ 207 ಭರವಸೆಗಳನ್ನು ಸರ್ಕಾರಿ ಆದೇಶಕ್ಕೆ ಮಾತ್ರ ಸೀಮಿತವಾಗಿದ್ದರೆ, ಉಳಿದ 132 ಭರವಸೆಗಳು ಅನುಷ್ಠಾನಕ್ಕೆ ತಂದಿಲ್ಲ ಏಕೆ? ಇದನ್ನೂ ಓದಿ: ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್

    ಜನವರಿ, 1, 2023 ರವರೆಗೆ ಬೊಮ್ಮಾಯಿ ಸರ್ಕಾರ 2022-2023ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ಅನುದಾನಗಳ ಪೈಕಿ ಕೇವಲ 56% ಮಾತ್ರ ಬಳಕೆ ಮಾಡಿರುವುದು ಎಕೆ? (2.5 ಲಕ್ಷ ಕೋಟಿ ಪೈಕಿ 1.4 ಲಕ್ಷ ಕೋಟಿ ಮಾತ್ರ ಬಳಕೆಯಾಗಿದೆ)

    438 “ನಮ್ಮ ಕ್ಲಿನಿಕ್”ಗಳು ಕೇವಲ ಕಾಗದದ ಮೇಲೆ ಉಳಿದಿರುವುದೇಕೆ?

    19 ಲಕ್ಷ ಬಾಲಕಿಯರಿಗೆ ನೆರವಾಗಬೇಕಿದ್ದ “ಶುಚಿ” ಯೋಜನೆಯನ್ನು ಇದುವರೆಗೆ ಪುನಾರಂಭಿಸಿಲ್ಲ ಏಕೆ?

    2022-2023ನೇ ಸಾಲಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನೀಡಿದ್ದ 3,000 ಕೋಟಿ ರೂಪಾಯಿಗಳ ಅನುದಾನ ಪೈಕಿ ಬಸವರಾಜ ಬೊಮ್ಮಾಯಿ 50% ಅನುದಾನವನ್ನೂ ಬಳಸಿಲ್ಲ ಏಕೆ?

    2022-2023ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ಮಂಡಳಿ ಮತ್ತು ಬಿಲ್ಲವ ಕೋಶಕ್ಕೆ ಅನುದಾನ ಬಿಡುಗಡೆ ಮಾಡಲು ಬಸವರಾಜ ಬೊಮ್ಮಾಯಿ ವಿಫಲರಾಗಿದ್ದು ಏಕೆ? ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

    ಎಲ್ಲ ಜಾತಿಗಳಿಗೂ ಮೀಸಲಾತಿ ನೀಡುವ ಕುರಿತು ಬಸವರಾಜ ಬೊಮ್ಮಾಯಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದು ಏಕೆ? ಬೊಮ್ಮಾಯಿ ಮತ್ತು ಮೋದಿ ಸರ್ಕಾರ ಎಸ್ಸಿ/ಎಸ್ಟಿ ಮೀಸಲಾತಿ ಕಾಯಿದೆಯನ್ನು ಸಂವಿಧಾನದ 9ನೇ ಷೆಡ್ಯೂಲ್ ಸೇರಿಸುವ ಪ್ರಕ್ರಿಯೆಗೆ ಮುಂದಾಗಿಲ್ಲ ಏಕೆ?

    ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯನ್ನು ತರಾತುರಿಯಲ್ಲಿ ಘೋಷಣೆ ಮಾಡಿದ್ದು ಏಕೆ? ಆ ಸಮುದಾಯವನ್ನು “ಹಿಡಿದುಕೊಳ್ಳಲು” ಈ ತಂತ್ರನಾ?

    ಎಸ್ಸಿ, ಕುರುಬ ಹಾಗೂ ಇತರ ಹಿಂದುಳಿದ ಸಮುದಾಯಗಳಿಗೆ ಕೊಟ್ಟ ಭರವಸೆ ಈಡೇರಿಸದೇ ಮುಖ್ಯಮಂತ್ರಿಗಳು ಬೆನ್ನಿಗೆ ಚೂರಿ ಹಾಕುತ್ತಿರುವುದು ಏಕೆ?

    ಗೋವಾದಲ್ಲಿ ಕನ್ನಡ ಭವನ ಎಲ್ಲಿದೆ? 2023-24ನೇ ಸಾಲಿನ ಸುಳ್ಳಿನ ಬಜೆಟ್ ಮಂಡನೆಯಾಗುವ ಮೊದಲೇ ಕನ್ನಡಿಗರು ಅದನ್ನು ತಿರಸ್ಕಾರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k