Tag: Karnataka Budget 2024

  • ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ: ಹರೀಶ್ ಪೂಂಜಾ ಮತ್ತೆ ಕಿಡಿ

    ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ: ಹರೀಶ್ ಪೂಂಜಾ ಮತ್ತೆ ಕಿಡಿ

    ಬೆಂಗಳೂರು: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಕಿಡಿಕಾರಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಜೆಟ್ (karnataka Budget 2024) ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಈ ಹಿಂದೆ ಆಗಿದ್ದ ವಿವಾದವೇನು?: ಈ ಹಿಂದೆ ಹರೀಶ್ ಪೂಂಜ ಅವರು ಫೇಸ್‍ಬುಕ್‍ನಲ್ಲಿ’ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೆÇೀಸ್ಟ್ ಹಾಕಿದ್ದರು. ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿತ್ತು. ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

    ಹೇಳಿಕೆ ಬಗ್ಗೆ ಸಮರ್ಥನೆ: ತಮ್ಮ ಪೋಸ್ಟ್ ವಿವಾದವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕರು, ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡಿಸಿದ್ರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳ ಅಭಿವೃದ್ಧಿಗೆ ನೀಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಕಿಕ್‍ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್‌ ಟಾರ್ಗೆಟ್‌: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?

  • Karnataka Budget 2024- ಸಿದ್ದರಾಮಯ್ಯ ಹಿಡಿದ ಬಜೆಟ್ ‘ಬ್ಯಾಗ್’ಗೆ ನಟ ಧನಂಜಯ್ ಮೆಚ್ಚುಗೆ

    Karnataka Budget 2024- ಸಿದ್ದರಾಮಯ್ಯ ಹಿಡಿದ ಬಜೆಟ್ ‘ಬ್ಯಾಗ್’ಗೆ ನಟ ಧನಂಜಯ್ ಮೆಚ್ಚುಗೆ

    ಸಿಎಂ ಸಿದ್ಧರಾಮಯ್ಯ (Siddaramaiah) ಇಂದು ಬಜೆಟ್ (Karnataka Budget 2024) ಮಂಡಣೆಗಾಗಿ ಹಿಡಿದು ತಂದಿದ್ದ ಬ್ಯಾಗ್ (Bag)ಗೆ ನಟ ಡಾಲಿ ಧನಂಜಯ್ (Dolly Dhananjay) ಅಂಬಾಸಿಡರ್ ಆಗಿದ್ದಾರೆ. ಇತ್ತೀಚಿಗಷ್ಟೇ ಡಾಲಿ ಧನಂಜಯ್ ಅವರು ಲಿಡ್ಕರ್ ಸಂಸ್ಥೆಗೆ ಬ್ರಾಂಡ್ ಅಂಬಾಸೆಡರ್ ಆಗಿ ಆಯ್ಕೆ ಆಗಿದ್ದರು, ಈ ಬಾರಿಯ ಮುಖ್ಯಮಂತ್ರಿಗಳು ಸೂಟ್ಕೇಸ್  ಬಿಟ್ಟು ಲಿಡ್ಕರ್ ಬ್ಯಾಗ್ ನಲ್ಲಿ  ಬಜೆಟ್ ಪ್ರತಿಗಳನ್ನು ತೆಗೆದುಕೊಂಡು ವಿಧಾನಸೌಧ ಪ್ರವೇಶ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡಾಲಿ ಧನಂಜಯ್ ಹರ್ಷ ವ್ಯಕ್ತ ಪಡಿಸಿದ್ದಾರೆ.

    ಅಲ್ಲದೇ, ಈ ಬಾರಿಯ ಪ್ರಸಕ್ತ ಬಜೆಟ್ ನಲ್ಲಿ ಕೆಲ ಸಿನಿಮಾಗಳ ಸಾಲುಗಳನ್ನು ಬಳಸಿಕೊಳ್ಳಲಾಗಿದೆ. ಬಜೆಟ್ ಭಾಷಣದ ಆರಂಭದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ.ರಾಜಕುಮಾರ್ ಅವರ ಬಂಗಾರದ ಮನುಷ್ಯ ಸಿನಿಮಾದ ಹಾಡಿನ ಸಾಲುಗಳನ್ನ ಹೇಳುತ್ತಾ ಬಜೆಟ್ ಮಂಡನೆಯನ್ನು ಶುರು ಮಾಡಿದರು.

    ಬಂಗಾರದ ಮನುಷ್ಯ ಮಾತ್ರವಲ್ಲದೆ ಕಳೆದ ವರ್ಷ ಬಿಡುಗಡೆಯಾದ ಡಾಲಿ ಧನಂಜಯ ನಿರ್ಮಾಣದ ಶಶಾಂಕ್ ಸೋಗಲ್ ನಿರ್ದೇಶನದ ಮುಸ್ತಫಾ ಸಿನಿಮಾದ ಸಾಲುಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅನುದಾನಗಳನ್ನ ಮಂಡಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು ಡೇರ್  ಡೆವಿಲ್ ಮುಸ್ತಫಾ ಚಿತ್ರದ ಎರಡು ಸಾಲುಗಳನ್ನ ಸದನದಲ್ಲಿ ಹೇಳಿದ್ದಾರೆ. ‘ಒಂದು ತೋಟದಲ್ಲಿ ನೂರು ಹೂವು ಅರಳಲಿ ಎಲ್ಲಾ ಕೂಡಿ ಆಡುವಂತ ಗಾಳಿ ಬೀಸಲಿ’ ಈ ಸಾಲುಗಳನ್ನ ಹೇಳುವ ಮೂಲಕ ಸಮಾಜ ಕಲ್ಯಾಣ ಇಲಾಖೆಗೆ ಕೊಟ್ಟಿರುವ ಅನುದಾನವನ್ನು ಮಂಡಿಸಿದ್ದಾರೆ.

     

    ನಟ ಡಾಲಿ ಧನಂಜಯ್ ಅವರು ಡೇರ್ ಡೆವಿಲ್ ಮುಸ್ತಫಾ ಸಿನಿಮಾವನ್ನ ನಿರ್ಮಾಣ ಹಾಗೂ ಪ್ರಸ್ತುತಪಡಿಸಿದ್ದರು. ಅದರ ಜೊತೆಗೆ ಸಿನಿಮಾದ ಒಂದಷ್ಟು ವಿಭಾಗಗಳಲ್ಲಿ ಕೆಲಸ ಮಾಡಿದ್ದರು.  ಈ ಸಾಲುಗಳನ್ನು ಕೂಡ ಖುದ್ದು ಧನಂಜಯ ಅವರೇ ಬರೆದಿದ್ದು ಎನ್ನುವುದು ವಿಶೇಷ.

  • ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

    ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

    -ವೈದ್ಯಕೀಯ ಕಾಲೇಜ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ

    ಬೆಂಗಳೂರು: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (Directorate of Medical Education) ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharan Prakash Patil) ಅಭಿನಂದನೆ ಸಲ್ಲಿಸಿದ್ದಾರೆ.

    ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

    ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ ರೂ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಪಾಟೀಲ್ ಹೇಳಿದ್ದಾರೆ.

    ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಬೆಂಗಳೂರು ಇವರ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ. ಗದಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

    ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಓಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

    ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆ ಎಂದು ಪಾಟೀಲ್ ಹೇಳಿದ್ದಾರೆ.

    ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

    ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

  • ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

    ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

    ಬೆಂಗಳೂರು: ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.

    ಇಂದು ತಮ್ಮ 15ನೇ ಬಜಟ್‌ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು. ಇದನ್ನೂ ಓದಿ: ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟು

    ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ. ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು.

    ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

  • Karnataka Budget 2024: ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ

    Karnataka Budget 2024: ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ 15 ನೇ ಬಜೆಟ್‌ (Karnataka Budget 2024) ಮಂಡನೆ ಮಾಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನು ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವ ಗುರಿ ಇದೆ ಎಂದು ಸಿಎಂ ತಿಳಿಸಿದರು.

    ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: Karnataka Budget 2024 – ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್‍ಗಳನ್ನು ಐಐಟಿಯಂತೆ ಅಭಿವೃದ್ಧಿ

    ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೊಳಿಸುವ ಯೋಜನೆಯಿಂದೆ ಎಂದರು.

  • Karnataka Budget 2024- ಬಜೆಟ್ ನಲ್ಲಿ ಬಂಗಾರದ ಮನುಷ್ಯ, ಡೇರ್ ಡೆವಿಲ್ ಮುಸ್ತಾಫಾ

    Karnataka Budget 2024- ಬಜೆಟ್ ನಲ್ಲಿ ಬಂಗಾರದ ಮನುಷ್ಯ, ಡೇರ್ ಡೆವಿಲ್ ಮುಸ್ತಾಫಾ

    ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ 2024-25ರಲ್ಲಿ (Karnataka Budget 2024) ಕನ್ನಡ ಸಿನಿಮಾಗಳನ್ನು ಉಲ್ಲೇಖಿಸಿ, ತಮ್ಮ ಬಜೆಟ್ ಹಿರಿಮೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯೋಜನೆಗಳನ್ನು ಪ್ರಸ್ತಾಪಿಸುವಾಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಡೈಲಾಗ್ ಅನ್ನು ನೆನಪಿಸಿಕೊಂಡಿದ್ದಾರೆ.

    ಖ್ಯಾತ ಸಾಹಿತಿ  ಪೂರ್ಣಚಂದ್ರ ತೇಜಸ್ವಿ ಅವರ ಕೃತಿಯನ್ನು ಆಧರಿಸಿ, ಶಶಾಂಕ್ ನಿರ್ದೇಶನ ಮಾಡಿದ್ದ ಡೇರ್ ಡೆವಿಲ್ ಮುಸ್ತಾಫಾ (Dare Devil Mustafa) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈ ಸಿನಿಮಾ ಕುರಿತಂತೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು. ಈ ವರ್ಷದಲ್ಲಿ ಚಿತ್ರಕ್ಕೆ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಕೂಡ ಪ್ರಶಸ್ತಿ ನೀಡಿತ್ತು. ಈ ಚಿತ್ರದ ‘ಒಂದು ತೋಟದಲ್ಲಿ ನೂರು ಹೂವು ಅರಳಿ. ಎಲ್ಲಾ ಕೂಡಿ ಆಡುವಂಥ ಗಾಳಿ ಬೀಸಲಿ’ ಎನ್ನುವ ಸಂಭಾಷಣೆಯನ್ನು ಬಜೆಟ್ ನಲ್ಲಿ ಮುದ್ರಿಸಲಾಗಿದೆ.

    ಇದೇ ಬಜೆಟ್ ನಲ್ಲೇ ಡಾ.ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ (Bangarada Manushya) ಸಿನಿಮಾವನ್ನೂ ಉಲ್ಲೇಖಿಸಿದ್ದಾರೆ ಸಿಎಂ ಸಿದ್ಧರಾಮಯ್ಯ. ಅಲ್ಪ ಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ್ದಾರೆ ಸಿಎಂ.

    ಬಜೆಟ್ ಆರಂಭದಲ್ಲಿ ವಿರೋಧ ಪಕ್ಷದ ನಾಯಕರು ಉಪೇಂದ್ರ ನಟನೆಯ ‘ಏನಿಲ್ಲ ಏನಿಲ್ಲ..’ ಹಾಡನ್ನು ನೆನಪಿಸಿಕೊಂಡರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂಬ ಹಾಡನ್ನು ಗುನುಗುವ ಮೂಲಕ ಬಜೆಟ್ ಬಗ್ಗೆ ಕಾಮೆಂಟ್ ಕೂಡ ಮಾಡಿದ್ದಾರೆ.

  • ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ- 10 ತಾಣಗಳಲ್ಲಿ ರೋಪ್‌ ವೇ

    ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ- 10 ತಾಣಗಳಲ್ಲಿ ರೋಪ್‌ ವೇ

    ಬೆಂಗಳೂರು: ರಾಜ್ಯದಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್ (Karnataka Budget 2024) ಮಂಡನೆಯ ವೇಳೆ ಹೇಳಿದ್ದಾರೆ.

    ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ರೋಪ್ ವೇ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರಿಗೆ ವಾಟರ್‌ ಮೆಟ್ರೋ?

    ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗೋಕಾಕ್ ಜಲಪಾತ ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ, ಕೆಎಸ್‍ಟಿಡಿಸಿ ವತಿಯಿಂದ ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುಸಜ್ಜಿತ ಹೋಟೆಲ್ ನಿರ್ಮಾಣ ಮಾಡುವ ಗುರಿ ಇದೆ ಎಂದು ತಿಳಿಸಿದರು.

    ಬೀದರ್ ಮತ್ತು ವಿಜಯಪುರಲ್ಲಿ ಪುರಾತನ ನೀಡು ಸರಬರಾಜು ವ್ಯವಸ್ಥೆ ಪುನಶ್ಚೇತನಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಜೊತೆಗೆ ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ 25 ಕೋಟಿ ವೆಚ್ಚದಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವರದ್ಧಿ ಮಂಡಳಿ ರಚನೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದರು.

  • Karnataka Budget 2024- ರಶ್ಮಿಕಾ ನೋವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ:  ಡೀಪ್‍ ಫೇಕ್ ವಿರುದ್ಧ ಕ್ರಮಕ್ಕೆ ನಿರ್ಧಾರ

    Karnataka Budget 2024- ರಶ್ಮಿಕಾ ನೋವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ: ಡೀಪ್‍ ಫೇಕ್ ವಿರುದ್ಧ ಕ್ರಮಕ್ಕೆ ನಿರ್ಧಾರ

    ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಆಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ತಮ್ಮ ಬಜೆಟ್ ನಲ್ಲಿ ಡೀಪ್ ಫೇಕ್ ವಿರುದ್ಧ ಸಮರ ಸಾರಿದ್ದಾರೆ. ಡೀಪ್ ಫೇಕ್ ನಂತ ಸೈಬರ್ ಅಪರಾಧಗಳ ವಿರುದ್ದ ಕ್ರಮಕ್ಕೆ 43 ಸಿಇಎನ್ ಪೊಲೀಸ್ ಠಾಣೆ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಈ ಮೂಲಕ ಕನ್ನಡತಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರಿಗೆ ಕಾಡುತ್ತಿದ್ದ ಡೀಪ್ ಫೇಕ್ ಭೂತಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

    ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಅನೇಕ ಕಲಾವಿದರು ಮತ್ತು ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿ, ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಡೀಪ್‍ ಫೇಕ್ (DeepFake) ವಿಡಿಯೋ ಬಗ್ಗೆ ಮಾತನಾಡಲೇಬೇಕಾದ ಅನಿವಾರ್ಯತೆ ಬಗ್ಗೆಯೂ ರಶ್ಮಿಕಾ ಮಾತನಾಡಿದ್ದರು. ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದರ ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಈ ರೀತಿ ಆಗಿದ್ದರೆ ಅದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ಊಹಿಸಲೂ ಅಸಾಧ್ಯ. ಡೀಪ್ ಫೇಕ್ ಮಾಡುವವರು ಇತರರ ಮೇಲೆ ಪ್ರಭಾವ ಬೀರುವುದಕ್ಕಿಂತ ಮುಂಚೆ ಅಂಥದ್ದನ್ನು ತಡೆಗಟ್ಟಬೇಕಿದೆ ಎಂದು ಹೇಳಿದ್ದರು ರಶ್ಮಿಕಾ.

     

    ಡೀಪ್ ಫೇಕ್ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದಂತೆಯೇ, ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿನ ಡೀಪ್‌ಫೇಕ್ (Deepfake) ಹಾವಳಿಯನ್ನು ಪರಿಶೀಲಿಸಲು ಮತ್ತು ಆನ್‌ಲೈನ್‌ನಲ್ಲಿ ನಕಲಿ ವಿಷಯವನ್ನು ಪತ್ತೆಹಚ್ಚಿದಾಗ ನಾಗರಿಕರು ದೂರು ದಾಖಲಿಸಲು ಸಹಾಯ ಮಾಡಲು ಸರ್ಕಾರವು ವಿಶೇಷ ಅಧಿಕಾರಿಗಳ ತಂಡವನ್ನು ನಿಯೋಜಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಶುಕ್ರವಾರ ಹೇಳಿದ್ದರು. ಈಗ ರಾಜ್ಯ ಸರ್ಕಾರ ಕೂಡ ಬಜೆಟ್ ನಲ್ಲಿ ಡೀಪ್ ಫೇಕ್ ವಿರುದ್ಧ ಸಮರ ಸಾರಿದೆ.

  • ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡನೆ – ಕೈ ಶಾಸಕರು ಕಾಂಗ್ರೆಸ್‌ ಪಕ್ಷದ ಶಾಲು ಧರಿಸಲು ಸೂಚನೆ!

    ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡನೆ – ಕೈ ಶಾಸಕರು ಕಾಂಗ್ರೆಸ್‌ ಪಕ್ಷದ ಶಾಲು ಧರಿಸಲು ಸೂಚನೆ!

    ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ 15ನೇ ಬಾರಿ ಬಜೆಟ್‌ ಮಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆ ಬರೆಯಲಿದ್ದಾರೆ. ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡನೆ ಶುರು ಮಾಡಲಿದ್ದಾರೆ.

    ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಸಚಿವರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲಾಗಿದೆ. ಬಜೆಟ್‌ ಮಂಡನೆಗೂ ಮುನ್ನವೇ ಸಂಪುಟ ಸಹೋದ್ಯೋಗಿಗಳ ಜೊತೆ ಕ್ಯಾಬಿನೆಟ್‌ ಮೀಟಿಂಗ್‌ ನಡೆಸುತ್ತಿರುವ ಸಿಎಂ ಕ್ಯಾಬಿನೆಟ್‌ನಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಲಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಜೆಟ್‌ 2024 – Karnataka Budget 2024 LIVE UPDATES

    ಕಾಂಗ್ರೆಸ್‌ ಶಾಲು ಧರಿಸಲು ಸೂಚನೆ:
    ಸಿಎಂ ಸಿದ್ದರಾಮಯ್ಯ ಬಜೆಟ್‌ ಓದುವ ವೇಳೆ ಕಾಂಗ್ರೆಸ್‌ ಶಾಲು ಹಾಕಿಕೊಳ್ಳಲು ಕಾಂಗ್ರೆಸ್‌ ಶಾಸಕರಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಮುಖ್ಯಸಚೇತಕ ಅಶೋಕ್‌ ಪಟ್ಟಣ ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್‌ ಶಾಸಕರಿಗೆ ಕಾಂಗ್ರೆಸ್‌ ಶಾಲು ಹಾಕಿ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: Karnataka Budget: ರಾಜ್ಯದ ರಾಮ ಮಂದಿರಗಳ ಪುನರುಜ್ಜೀವಕ್ಕೆ ಬಜೆಟ್‌ನಲ್ಲಿ ಸಿಗುತ್ತಾ ಅನುದಾನ?

    ಈಗಾಗಲೇ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಬಜೆಟ್‌ ಪುಸ್ತಕ ತರಲಾಗಿದೆ. ಬೆಳಗ್ಗೆ 10:15 ರಿಂದ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಕೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎನ್ನಲಾಗಿದೆ.

  • ಕರ್ನಾಟಕ ಬಜೆಟ್‌ 2024 – Karnataka Budget 2024 LIVE UPDATES

    ಕರ್ನಾಟಕ ಬಜೆಟ್‌ 2024 – Karnataka Budget 2024 LIVE UPDATES

    2 years agoFebruary 16, 2024 1:49 pm

    ಸಿಎಂ ಸುದೀರ್ಘ ಬಜೆಟ್ ಓದು ಮುಕ್ತಾಯ

    3.14 ಗಂಟೆ ಕಾಲ 181 ಪುಟಗಳ ಬಜೆಟ್ ಪುಸ್ತಕ ಓದಿ ಮುಗಿಸಿದ ಸಿದ್ದರಾಮಯ್ಯ

    2 years agoFebruary 16, 2024 1:37 pm

    ಒಟ್ಟು ಸ್ವೀಕೃತಿ: 3,68,674 ಕೋಟಿ
    ರಾಜಸ್ವ ಸ್ವೀಕೃತಿ: 2,63,178 ಕೋಟಿ
    ಒಟ್ಟು ವೆಚ್ಚ: 3,71,383 ಕೋಟಿ

    2 years agoFebruary 16, 2024 1:27 pm

    ಕ್ಯಾನ್ಸರ್‌ ರೋಗಿಗಳ ಚಿಕಿತ್ಸೆಗಾಗಿ ಜಿಲ್ಲೆಗೊಂದು ಡೇ-ಕೇರ್‌ ಕಿಮೋಥೆರಪಿ ಕೇಂದ್ರ ಸ್ಥಾಪನೆ

    20 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ

    2 years agoFebruary 16, 2024 1:20 pm

    ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್‌ ಕಾಲೇಜು ವಿವಿ ಅಭಿವೃದ್ಧಿ

    2 years agoFebruary 16, 2024 1:07 pm

    ತಿರುಮಲ, ಶ್ರೀಶೈಲ, ವಾರಣಾಸಿಯಲ್ಲಿ ವಸತಿ ನಿಲಯ

    2 years agoFebruary 16, 2024 1:05 pm

    320 ಕಿಮೀ ಉದ್ದದ ಕರಾವಳಿ ತೀರದ ಅಭಿವೃದ್ಧಿ

    2 years agoFebruary 16, 2024 1:01 pm

    ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು

    2 years agoFebruary 16, 2024 12:53 pm

    ನಮ್ಮ ಮೆಟ್ರೋ ಹೆಚ್ಚುವರಿ 44 ಕಿಮೀ ವಿಸ್ತರಣೆ

    2 years agoFebruary 16, 2024 12:50 pm

    1,134 ಹೊಸ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ನಿರ್ಧಾರ

    2 years agoFebruary 16, 2024 12:46 pm

    ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು

    2 years agoFebruary 16, 2024 12:44 pm

    ಸಿರಿಧಾನ್ಯ ಉತ್ಪನ್ನ ಪ್ರೋತ್ಸಾಹಕ್ಕೆ ‘ನಮ್ಮ ಮಿಲ್ಲೆಟ್‌’ ಕಾರ್ಯಕ್ರಮ

    2 years agoFebruary 16, 2024 12:30 pm

    ಕನ್ನಡ ಕಸ್ತೂರಿ ಎಂಬ ಯಂತ್ರಾನುವಾದ ತಂತ್ರಾಂಶದ ಅಭಿವೃದ್ಧಿಗೆ ಕ್ರಮ

    2 years agoFebruary 16, 2024 12:28 pm

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌

    ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್‌ ಸೌಲಭ್ಯ.

    2 years agoFebruary 16, 2024 12:18 pm

    ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

    2 years agoFebruary 16, 2024 12:14 pm

    ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ

    2 years agoFebruary 16, 2024 12:08 pm

    2 years agoFebruary 16, 2024 12:06 pm

    ಮಂಗಳೂರಿನ ಹಜ್‌ ಭವನದ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

    2 years agoFebruary 16, 2024 11:55 am

    ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗೆ 6 ಕೋಟಿ

    2 years agoFebruary 16, 2024 11:52 am

    ಕಲಬುರಗಿಯಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ

    2 years agoFebruary 16, 2024 11:51 am

    ನಮ್ಮ ಮೆಟ್ರೋ ಹಂತ 3 ಕ್ಕೆ 15611 ಕೋಟಿಗೆ ಅನುಮೋದನೆ

    2 years agoFebruary 16, 2024 11:49 am

    ಬೆಂಗಳೂರು-ಮಂಡ್ಯ-ಮೈಸೂರು ವಾಹನ ಸಂಚಾರ ದಟ್ಟಣೆ ತಡೆಗಟ್ಟಲು ಪ್ಲೈಓವರ್‌ಗಳ ನಿರ್ಮಾಣ

    2 years agoFebruary 16, 2024 11:44 am

    ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ

    2 years agoFebruary 16, 2024 11:42 am

    ಬೆಂಗಳೂರಲ್ಲಿ ಮಧ್ಯರಾತ್ರಿ 1 ಗಂಟೆ ವರೆಗೂ ನೈಟ್‌ಲೈಫ್‌

    2 years agoFebruary 16, 2024 11:40 am

    5 ಸಾವಿರ ST ಯುವಕ-ಯುವತಿಯರಿಗೆ ಡ್ರೋನ್ ತರಬೇತಿ

    ವಿವಿ ಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ವಿದ್ಯಾರ್ಥಿಗಳಿಗೆ 25 ಸಾವಿರ ಶಿಷ್ಯ ವೇತನ.

    2 years agoFebruary 16, 2024 11:35 am

    ಪ್ರವಾದೋದ್ಯಮ ಉತ್ತೇಜನಕ್ಕಾಗಿ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಯೋಜನೆ ಅಥವಾ ರೋಫ್ ವೇ ನಿರ್ಮಾಣ.

    2 years agoFebruary 16, 2024 11:33 am

    2024-25ನೇ ಸಾಲಿನಲ್ಲಿ ತೆರಿಗೆ ಸಂಗ್ರಹದ ಅಂದಾಜು

    ಮೋಟಾರು ವಾಹನ- 13,000 ಕೋಟಿ.

    ನೋಂದಣಿ-ಮುದ್ರಣ-26,000 ಕೋಟಿ

    ಅಬಕಾರಿ- 38525 ಕೋಟಿ.

    ವಾಣಿಜ್ಯ ತೆರಿಗೆ- 1,10,000 ಕೋಟಿ.

    ಇತರೆ ತೆರಿಗೆ- 2368 ಕೋಟಿ.

    2 years agoFebruary 16, 2024 11:31 am

    ದೇವದಾಸಿಯರ ಮಾಸಾಶನ 2,000 ರೂ.ಗೆ ಹೆಚ್ಚಳ

    2 years agoFebruary 16, 2024 11:29 am

    2 years agoFebruary 16, 2024 11:27 am

    ಅಂಗನವಾಡಿ‌ ಸಹಾಯಕಿಯರಿಗೆ ಗ್ರಾಚ್ಯುಟಿ‌ ನೀಡಲು ನಿರ್ಧಾರ

    2 years agoFebruary 16, 2024 11:26 am

    2 years agoFebruary 16, 2024 11:24 am

    2 years agoFebruary 16, 2024 11:19 am

    6% ರಷ್ಟು ಬಡ್ಡಿ ದರದಲ್ಲಿ ಪ್ರೋತ್ಸಾಹ

    2 years agoFebruary 16, 2024 11:17 am

    2 years agoFebruary 16, 2024 11:14 am

    ಸಾಲ ತೀರಿಕೆ-18 ಪೈಸೆ

    ನೀರು ಪೂರೈಕೆ ಮತ್ತು ನೈರ್ಮಲ್ಯ – 3 ಪೈಸೆ

    ಶಿಕ್ಷಣ-11ಪೈಸೆ

    ಆರೋಗ್ಯ-4 ಪೈಸೆ

    ಇತರೆ ಸಾಮಾಜಿಕ ಸೇವೆಗಳು- 3 ಪೈಸೆ.

    ಕೃಷಿ ನೀರಾವರಿ, ಮತ್ತು ಗ್ರಾಮೀಣಾಭಿವೃದ್ಧಿ- 14ಪೈಸೆ

    ಇತರೆ ಆರ್ಥಿಕ ಸೇವೆಗಳು- 15ಪೈಸೆ

    ಸಮಾಜ ಕಲ್ಯಾಣ-15 ಪೈಸೆ

    ಇತರೆ ಸಾಮಾನ್ಯ ಸೇವೆಗಳು- 17 ಪೈಸೆ.

    2 years agoFebruary 16, 2024 11:11 am

    ಮೇಕೆದಾಟು, ಎತ್ತಿನ ಹೊಳೆ, ಕೃಷ್ಣಾ ಮೇಲ್ದಂಡೆ ಹಂತ-3, ಭದ್ರಾ ಮೇಲ್ದಂಡೆ ಯೋಜನೆ, ಕಳಸಾ ಬಂಡೂರಿ ಯೋಜನೆಗಳಿಗೆ ಈ ಬಜೆಟ್‌ನಲ್ಲಿ ಹಣ ಮೀಸಲಿಡದ ಸರ್ಕಾರ

    ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಕೇಂದ್ರದಿಂದ ಸಿಗಬೇಕಾದ ಅಗತ್ಯ ಅನುಮತಿಗಳು ಹಾಗೂ ಘೊಷಣೆಯಾಗಿರುವ ಅನುದಾನಕ್ಕಾಗಿ ಎದುರು ನೋಡುವ ಬಗ್ಗೆ ಪ್ರಸ್ತಾಪ

    2 years agoFebruary 16, 2024 11:05 am

    ರೈತರನ್ನ ಸ್ವಾವಲಂಬಿ ಮಾಡಲು 1174 ಕೋಟಿ ವೆಚ್ಚದಲ್ಲಿ 40 ಸಾವಿರ ಜಾಲಮುಕ್ತ ಸೋಲರ್ ಪಂಪ್ ಸೆಟ್ ಯೋಜನೆ

    2 years agoFebruary 16, 2024 11:04 am

    ಬೆಂಗಳೂರಿನ ಬಿಐಇಸಿ ಯಿಂದ ತುಮಕೂರುವರೆಗೆ, ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ಪ್ರಾರಂಭಕ್ಕೆ ನಿರ್ಧಾರ

    2 years agoFebruary 16, 2024 11:00 am

    ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ.

    ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ.

    ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ.

    ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ.

    ಬೌದ್ದರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳ‌ನ್ನ ಪಾಲಿ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದ.

    ಸಿಖ್ಖ್ ಲಿಗಾರ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ 2 ಕೋಟಿ.

    ಬೀದರ್‌ನಲ್ಲಿರೋ ಶ್ರೀ ನಾನನ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗೆ 1 ಕೋಟಿ

    2 years agoFebruary 16, 2024 10:51 am

    ಬಜೆಟ್ ವಿರೋಧಿಸಿ ವಿಪಕ್ಷ ಬಿಜೆಪಿ ಬಹಿಷ್ಕಾರ

    ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು

    ಏನಿಲ್ಲಾ ಏನಿಲ್ಲಾ.. ಬುರುಡೆ ಬುರುಡೆ ಎಂದು ಕೂಗುತ್ತಾ ಬಿಜೆಪಿ ಶಾಸಕರ ಸಭಾತ್ಯಾಗ

    ವಿಧಾನಸೌಧದಲ್ಲಿ ವಿಪಕ್ಷ ಬಿಜೆಪಿ ಬಜೆಟ್ ವಿರೋಧಿಸಿ ಪ್ರತಿಭಟನೆ ಸಾಧ್ಯತೆ

    ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಪೋಸ್ಟರ್ ಅಂಟಿಸಿದ ಬಿಜೆಪಿ ಶಾಸಕರು

    2 years agoFebruary 16, 2024 10:49 am

    7ನೇ ವೇತನ ಆಯೋಗ ಜಾರಿ ಮುನ್ಸೂಚನೆ

    ಸಮಿತಿ ವರದಿ ಆಧರಿಸಿ ಕ್ರಮ

    2 years agoFebruary 16, 2024 10:47 am

    90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ

    2 years agoFebruary 16, 2024 10:43 am

    ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ

    ತೆರಿಗೆ ಸಂಗ್ರಹ ವಿಚಾರವಾಗಿ ಆರೋಪ

    ಜಿಎಸ್‌ಟಿ ಹಣ ಕಡಿಮೆ ಕೊಟ್ಟಿದ್ದಕ್ಕೆ ಬಜೆಟ್‌ನಲ್ಲಿ ಆರೋಪ

    ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದ ಹಾಗೆ ಬಿಜೆಪಿ ಕೆಂಡಾಮಂಡಲ.

    2 years agoFebruary 16, 2024 10:37 am

    ‘ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್

    80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆ

    2 years agoFebruary 16, 2024 10:30 am

    ಶಿಕ್ಷಣ – 44,422 ಕೋಟಿ

    ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ

    ಇಂಧನ – 23,159 ಕೋಟಿ

    ಗ್ರಾಮೀಣಾಭಿವೃದ್ಧಿ – 21,160 ಕೋಟಿ

    ಒಳಾಡಳಿತ/ಸಾರಿಗೆ – 19,777 ಕೋಟಿ

    ನೀರಾವರಿ – 19,179 ಕೋಟಿ

    ನಗರಾಭಿವೃದ್ಧಿ- 18,155 ಕೋಟಿ

    ಕಂದಾಯ – 16,170 ಕೋಟಿ

    ಆರೋಗ್ಯ – 15,145 ಕೋಟಿ

    ಸಮಾಜಕಲ್ಯಾಣ – 13,334 ಕೋಟಿ

    ಲೋಕೋಪಯೋಗಿ – 10,424 ಕೋಟಿ

    ಆಹಾರ ಇಲಾಖೆ – 9963 ಕೋಟಿ

    ಕೃಷಿ , ತೋಟಗಾರಿಕೆ – 6,688 ಕೋಟಿ

    ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ

    ಇತರೆ – 1,24,593 ಕೋಟಿ

    2 years agoFebruary 16, 2024 10:27 am

    ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ

    2 years agoFebruary 16, 2024 10:25 am

    181 ಪುಟಗಳ ಬಜೆಟ್‌ ಪುಸ್ತಕ

    ತೆರಿಗೆ ಅನ್ಯಾಯದ ಬಗ್ಗೆ ಪ್ರಸ್ತಾಪ

    2 years agoFebruary 16, 2024 10:19 am

    ತಮ್ಮ 15ನೇ ಬಜೆಟ್‌ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ.

    2 years agoFebruary 16, 2024 10:17 am

    2 years agoFebruary 16, 2024 9:59 am

    ಈ ಬಜೆಟ್‌ ಅಧಿವೇಶನದಲ್ಲೇ ರಾಜ್ಯದ ಕಳೆದ 5 ವರ್ಷಗಳ ಹಣಕಾಸು ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವುದಾಗಿ ಸಚಿವರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ. ಮುಂದಿನ ವಾರ ಶ್ವೇತಪತ್ರ ಹೊರಡಿಸುವ ಸಾಧ್ಯತೆ.

    Video: ಬಜೆಟ್‌ ಬ್ಯಾಗ್‌ನೊಂದಿಗೆ ವಿಧಾನಸೌಧ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ
    2 years agoFebruary 16, 2024 9:46 am

    ಜನರ ಗ್ಯಾರಂಟಿ + ಅಭಿವೃದ್ಧಿ ಗ್ಯಾರಂಟಿ ಬಜೆಟ್‌ ಎಂದು ಕ್ಯಾಬಿನೆಟ್‌ನಲ್ಲಿದ್ದ ಸಚಿವರಿಗೆ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

    2 years agoFebruary 16, 2024 9:39 am

    ಕಾಂಗ್ರೆಸ್‌ ಶಾಲು ಹಾಕಲು ಕೈ ಶಾಸಕರಿಗೆ ಸೂಚನೆ

    ಸಿಎಂ ಸಿದ್ದರಾಮಯ್ಯ ಬಜೆಟ್‌ ಓದುವ ವೇಳೆ ಕಾಂಗ್ರೆಸ್‌ ಶಾಲು ಹಾಕಿಕೊಳ್ಳಲು ಕಾಂಗ್ರೆಸ್‌ ಶಾಸಕರಿಗೆ ಸೂಚನೆ – ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್‌ ಶಾಸಕರಿಗೆ ಕಾಂಗ್ರೆಸ್‌ ಶಾಲು ಹಾಕಿ ಕಳುಹಿಸುತ್ತಿರುವ ಮುಖ್ಯಸಚೇತಕ ಅಶೋಕ್‌ ಪಟ್ಟಣ

    2 years agoFebruary 16, 2024 9:37 am

    ಕ್ಯಾಬಿನೆಟ್‌ ಮೀಟಿಂಗ್

    ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್‌ ಮೀಟಿಂಗ್‌ – ಕ್ಯಾಬಿನೆಟ್‌ನಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಲಿರುವ ಸಿಎಂ

    2 years agoFebruary 16, 2024 9:31 am

    ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

    ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ಆಗಮನ, ಸಚಿವರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಾಗತ.

    2 years agoFebruary 16, 2024 9:24 am

    ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡನೆ ಶುರು ಮಾಡಲಿರುವ ಸಿದ್ದರಾಮಯ್ಯ

    2 years agoFebruary 16, 2024 9:16 am

    ಕರ್ನಾಟಕದ ಇತಿಹಾಸದಲ್ಲಿ 15ನೇ ಬಾರಿ ಬಜೆಟ್‌ ಮಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆ ಬರೆಯಲಿದ್ದಾರೆ.

    2 years agoFebruary 16, 2024 10:07 am

    ಹೊಸ ಜಿಲ್ಲೆ ಘೋಷಣೆಗಳು ಸದ್ಯಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ನಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ.