Tag: Karnataka bypoll

  • ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಜನ ಬೆಂಬಲಕ್ಕೆ ಕಾಂಗ್ರೆಸ್‌ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಕಾಂಗ್ರೆಸ್‌, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕಾಂಗ್ರೆಸ್ ಹಣ ಹಂಚಿಕೆ ಮಾಡದಿದ್ರೆ ನನ್ನ ಗೆಲುವು ಆಗುತ್ತಿತ್ತು: ಬಂಗಾರು ಹನುಮಂತು

    ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ ಜಯದ ಅಂಚಿನಲ್ಲಿದ್ದಾರೆ.

    ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಗೆ ಗೆಲುವು

    ಗ್ಯಾರಂಟಿಗೆ ಹಣವಿಲ್ಲದೇ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಗೃಹಲಕ್ಷ್ಮಿ ಯೋಜನೆ ಹಣ ಕೆಲ ತಿಂಗಳಿಂದ ಬಿಡುಗಡೆ ಆಗಿಲ್ಲ. ಶಕ್ತಿ ಯೋಜನೆ ನಿಲ್ಲಿಸುತ್ತಾರೆ. ಯುವಕರಿಗೆ ಯುವನಿಧಿ ಹಣ ಬಂದಿಲ್ಲ ಎಂದು ಗ್ಯಾರಂಟಿ ಯೋಜನೆಗಳನ್ನು ಟಾರ್ಗೆಟ್‌ ಮಾಡಿ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ದರು.

    ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಸರ್ಕಾರದ ಬಳಿ ಹಣ ಇಲ್ಲ ಎಂದು ಸಹ ಬಿಜೆಪಿ ಆರೋಪಿಸಿತ್ತು. ಆದರೆ, ಈಗ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆದ್ದಿದೆ.

  • ಸಚಿವ ಸ್ಥಾನ ಸಿಗುವುದು ಪಕ್ಕಾ, ಆದ್ರೆ ಲೆಕ್ಕನೇ ಬೇರೆ – ಯಾರಿಗೆ ಯಾವ ಖಾತೆ ಮೇಲೆ ಕಣ್ಣು

    ಸಚಿವ ಸ್ಥಾನ ಸಿಗುವುದು ಪಕ್ಕಾ, ಆದ್ರೆ ಲೆಕ್ಕನೇ ಬೇರೆ – ಯಾರಿಗೆ ಯಾವ ಖಾತೆ ಮೇಲೆ ಕಣ್ಣು

    – ಗೆದ್ದ ಅನರ್ಹರ ಬೇಡಿಕೆ ಒಪ್ಪಿಕೊಳ್ತಾರಾ ಬಿಎಸ್‍ವೈ?
    – ವೈರಿ ಡಿಕೆಶಿ ಬಳಿಯಿದ್ದ ಖಾತೆ ಮೇಲೆ ಜಾರಕಿಹೊಳಿಗೆ ಕಣ್ಣು

    ಬೆಂಗಳೂರು: ಉಪ ಚುನಾವಣೆಯನ್ನು ಗೆದ್ದು ಸರ್ಕಾರವನ್ನು ಸುಭದ್ರಗೊಳಿಸಿದ ಯಡಿಯೂರಪ್ಪ ಮುಂದೆ ಈಗ ಹೊಸ ಸವಾಲು ಸೃಷ್ಟಿಯಾಗಿದೆ.

    ಹೌದು. ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಎಲ್ಲೇ ಹೋದರೂ ಅನರ್ಹರನ್ನು ಅರ್ಹರನ್ನಾಗಿ ಮಾಡಿದರೆ ಅವರಿಗೆ ಮಂತ್ರಿಪಟ್ಟ ಸಿಗುತ್ತದೆ ಎಂದು ಭಾಷಣ ಮಾಡಿದ್ದು ಅದರಂತೆ ಜನ ಈಗ ಅರ್ಹರನ್ನಾಗಿ ಮಾಡಿದ್ದಾರೆ.

    ಅರ್ಹರಾದ 11 ಮಂದಿ ಈಗ ಸಿಎಂ ಬಳಿ ತಮ್ಮ ಬೇಡಿಕೆಯನ್ನು ಇಟ್ಟಿದ್ದು, ಈ ಬೇಡಿಕೆಯನ್ನು ಯಡಿಯೂರಪ್ಪ ಈಡೇರಿಸುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ಮೂರು ನಾಲ್ಕು ದಿನದ ಒಳಗೆ ಸಿಎಂ ದೆಹಲಿಗೆ ತೆರಳಲಿದ್ದು ಹೈಕಮಾಂಡ್ ಜೊತೆ ಚರ್ಚಿಸಿ ಖಾತೆ ಹಂಚಿಕೆ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ.

    ಈಗಾಗಲೇ ಹಲವು ಪ್ರಮುಖ ಖಾತೆಗಳನ್ನು ಯಡಿಯೂರಪ್ಪ ತಮ್ಮ ಬಳಿಯೇ ಇಟ್ಟುಕೊಂಡಿದ್ದು ಕೆಲ ಖಾತೆಗಳನ್ನು ಮಾತ್ರ ಹಂಚಿಕೆ ಮಾಡಿದ್ದಾರೆ. ಮೊದಲೇ ತಮ್ಮ ಬಳಿ ಇಟ್ಟುಕೊಂಡ ಕಾರಣ ಖಾತೆ ಹಂಚಿಕೆ ಕಷ್ಟವಾಗಲಾರದು. ಆದರೆ ಜಿಲ್ಲಾ ಉಸ್ತುವಾರಿ ಖಾತೆಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಹೀಗಾಗಿ ಹೊಸ ಸಚಿವರಿಗೆ ಯಾವ ಜಿಲ್ಲೆಗಳನ್ನು ನೀಡಬಹುದು ಎನ್ನುವ ಪ್ರಶ್ನೆ ಎದ್ದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸುಧಾಕರ್, ಮಂಡ್ಯ ಜಿಲ್ಲೆ ನಾರಾಯಣ ಗೌಡರಿಗೆ ಸಿಗಬಹುದು. ಆದರೆ ಉಳಿದ ಶಾಸಕರಿಗೆ ಯಾವ ಜಿಲ್ಲೆ ಸಿಗಬಹುದು ಎನ್ನುವ ಕುತೂಹಲ ಹೆಚ್ಚಿದೆ. ಇದನ್ನೂ ಓದಿ: ಉಪ ಚುನಾವಣೆ ಸೋಲು – ಜಾತಿ ಸಮೀಕರಣ ಸೂತ್ರದ ಮೊರೆಹೋದ ಕಾಂಗ್ರೆಸ್

    ಗೆದ್ದ ಶಾಸಕರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ನೀಡಬೇಕೆಂದು ಪ್ರಸ್ತಾಪ ಮಾಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬೆಳಗಾವಿ ರಾಜಕಾರಣದಲ್ಲಿ ಎಂಟ್ರಿಯಾಗಿದ್ದಕ್ಕೆ ಡಿಕೆ ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡಿ ತೊಡೆ ತಟ್ಟಿದ್ದ ರಮೇಶ್ ಜಾರಕಿಹೊಳಿ ದೋಸ್ತಿ ಸರ್ಕಾರದಲ್ಲಿ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿಸಿದ್ದ ಡಾ ಸುಧಾಕರ್ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ತರುತ್ತೇನೆ ಎಂದು ಜನರಿಗೆ ಆಶ್ವಾಸನೆ ನೀಡಿದ್ದರು. ಈ ಭರವಸೆಯನ್ನು ಈಡೇರಿಸಲು ವೈದ್ಯಕೀಯ ಶಿಕ್ಷಣ ಖಾತೆಯನ್ನು ಕೇಳಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

    ಯಾವ ಖಾತೆ ಮೇಲೆ ಯಾರಿಗೆ ಕಣ್ಣು?
    ರಮೇಶ್ ಜಾರಕಿಹೊಳಿ – ಜಲಸಂಪನ್ಮೂಲ
    ಎಸ್.ಟಿ.ಸೋಮಶೇಖರ್ – ಸಹಕಾರ
    ಮಹೇಶ್ ಕುಮಟಹಳ್ಳಿ – ಸಣ್ಣ ಕೈಗಾರಿಕೆ
    ಬೈರತಿ ಬಸವರಾಜು – ನಗರಾಭಿವೃದ್ಧಿ

    ಶಿವರಾಮ್ ಹೆಬ್ಬಾರ್ – ಪೌರಾಡಳಿತ
    ಶ್ರೀಮಂತಪಾಟೀಲ್ – ಸಕ್ಕರೆ
    ಬಿ.ಸಿ.ಪಾಟೀಲ್ – ಕೃಷಿ
    ಗೋಪಾಲಯ್ಯ- ಕಾರ್ಮಿಕ

    ಸುಧಾಕರ್ – ವೈದ್ಯಕೀಯ ಶಿಕ್ಷಣ
    ನಾರಾಯಣಗೌಡ – ತೋಟಗಾರಿಕೆ
    ಆನಂದ್ ಸಿಂಗ್ – ಅರಣ್ಯ ಇಲಾಖೆ