Tag: Karnataka Chief Minister

  • ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ

    ಮೂಲ ಕಾಂಗ್ರೆಸ್ಸಿಗರಿಗೆ ಚಾಕರಿ ಮಾಡುವ ಸುಯೋಗ ಸಿದ್ದರಾಮಯ್ಯಗೆ ಬಂದಿದೆ – ಕಾಲೆಳೆದ ಬಿಜೆಪಿ

    ಬೆಂಗಳೂರು: ಸಿದ್ದರಾಮೋತ್ಸವದ ವಿಚಾರವಾಗಿ ಕಾಂಗ್ರೆಸ್ಸಿನಲ್ಲೇ ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಕೆಲವರು ಸಿದ್ದರಾಮೋತ್ಸವಕ್ಕೆ ಬೆಂಬಲಿಸಿದರೆ ಇನ್ನೂ ಕೆಲವರು ನಾಮಕಾವಸ್ಥೆಗೆ ಬೆಂಬಲಿಸಿ, ಪರೋಕ್ಷವಾಗಿ ಚಾಟಿ ಬೀಸುತ್ತಿದ್ದಾರೆ. ಈ ನಡುವೆ ಆಗಾಗ್ಗೆ ಬಿಜೆಪಿ ಕಾಲೆಳೆಯುವ ಕೆಲಸ ಮಾಡುತ್ತಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ ಬಂದಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೋರ್ವ ಸಿಎಂ ಕುರ್ಚಿಯ ಕನಸುಗಾರನಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ!

    ಈಗಾಗಲೇ ಸಿದ್ದರಾಮೋತ್ಸವದ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಜೋರಾಗಿಯೇ ಬೀಸುತ್ತಿದೆ. ಕಾಂಗ್ರೆಸ್‌ನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸಿಗರು ಮೂಕಪ್ರೇಕ್ಷಕರಾಗಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಅಸಮಾಧಾನವನ್ನು ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಸಹ ಹೊರ ಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೆಂದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸಿಗ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ? ಎಂದು ಟ್ವೀಟ್‌ನಲ್ಲೇ ಟಾಂಗ್‌ಕೊಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

    ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

    ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಕನ್ನಡದ ಜೇಮ್ಸ್ ಚಿತ್ರಕ್ಕೆ ತೊಂದರೆ ಆಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಮತ್ತು ಪುನೀತ್ ಅವರ ಅಭಿಮಾನಿಗಳು ಹೋರಾಟ ಮಾಡುತ್ತಿರುವಾಗಲೇ ನಟ ಶಿವರಾಜ್ ಕುಮಾರ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ತೊಂದರೆ ಆಗಿಲ್ಲ ಎಂದು ಅಚ್ಚರಿಕೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ್ ಕುಮಾರ್, ‘ನಾನು ರಾಜಕಾರಣಿಯಾಗಿ ಈ ಮಾತನ್ನು ಹೇಳುತ್ತಿಲ್ಲ. ನಿಜ ಹೇಳುತ್ತಿರುವೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಿಲ್ಲ. ಕನ್ನಡ ಸಿನಿಮಾಗಳ ವಿಚಾರದಲ್ಲಿ ನಾನು ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಚಿತ್ರಗಳಿಗೆ ತೊಂದರೆಯಾದಾಗ ಧ್ವನಿ ಎತ್ತಿದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿರುವ ಜೇಮ್ಸ್ ಥಿಯೇಟರ್ ನಿಂದ ತಗೆಯುವುದು ಸರಿಯಾದದ್ದು’ ಅಲ್ಲ ಅಂದಿದ್ದಾರೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ಈ ವಾರ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ರಿಲೀಸ್ ಆಗುತ್ತಿದೆ. 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಸಹಜವಾಗಿಯೇ ಜೇಮ್ಸ್ ಚಿತ್ರಕ್ಕೆ ಥಿಯೇಟರ್ ಕೊರತೆ ಎದುರಾಗಲಿದೆ. ಹೀಗಾಗಿ ಜೇಮ್ಸ್ ಸಿನಿಮಾ ಉಳಿಸಿಕೊಳ್ಳಲು ನಿರ್ಮಾಪಕರು ನಾನಾ ರೀತಿಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಚಿತ್ರತಂಡ, ಜೇಮ್ಸ್ ಸಿನಿಮಾಗೆ ತೊಂದರೆ ಆಗದಂತೆ ಸಹಾಯ ಮಾಡಿ ಎಂದು ಕೇಳಿಕೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಚಿತ್ರತಂಡದ ಜತೆ ನಿಲ್ಲುವುದಾಗಿ ಹೇಳಿದ್ದಾರಂತೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ನಟ ಶಿವರಾಜ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಅವರ ರೇಸ್‍ವೀವ್ ನಿವಾಸದಲ್ಲಿ ಭೇಟಿ ಮಾಡಿದ ಶಿವರಾಜ್ ಕುಮಾರ್, ‘ಜೇಮ್ಸ್’ ಸಿನಿಮಾದ ಕುರಿತಾಗಿ ಎದ್ದಿರುವ ಗೊಂದಲದ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಸಹೋದರ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾವನ್ನು ವೀಕ್ಷಿಸಲು ಆಹ್ವಾನ ಕೂಡ ನೀಡಿದ್ದಾರೆ.

  • ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ನಟ ಶಿವರಾಜ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಅವರ ರೇಸ್‍ವೀವ್ ನಿವಾಸದಲ್ಲಿ ಭೇಟಿ ಮಾಡಿದ ಶಿವರಾಜ್ ಕುಮಾರ್, ‘ಜೇಮ್ಸ್’ ಸಿನಿಮಾದ ಕುರಿತಾಗಿ ಎದ್ದಿರುವ ಗೊಂದಲದ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಸಹೋದರ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾವನ್ನು ವೀಕ್ಷಿಸಲು ಆಹ್ವಾನ ಕೂಡ ನೀಡಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ಕೆಲವು ಕಡೆ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ‘ಜೇಮ್ಸ್’ ತಗೆದು, ಆ ಥಿಯೇಟರ್ ನಲ್ಲಿ ‘ದಿ ಕಾಶೀರ್ ಫೈಲ್ಸ್’ ಸಿನಿಮಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸುದ್ದಿ ಆಗಿತ್ತು. ಹಲವು ಕಡೆ ಜೇಮ್ಸ್ ಚಿತ್ರಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಸ್ವತಃ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಹೇಳಿಕೊಂಡಿದ್ದರು. ಈ ವಿಷಯವನ್ನೂ ಮುಖ್ಯಮಂತ್ರಿಗಳ ಜತೆ ಶಿವರಾಜ್ ಕುಮಾರ್ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ನೆನ್ನೆಯಷ್ಟೇ ಜೇಮ್ಸ್ ಸಿನಿಮಾಗೆ ಯಾರೂ ತೊಂದರೆ ಮಾಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಪುನೀತ್ ಅವರ ಕೊನೆ ಸಿನಿಮಾವನ್ನು ಎಲ್ಲರೂ ವೀಕ್ಷಿಸಲು ಅವಕಾಶ ಸಿಗಬೇಕು ಎಂದಿದ್ದರು. ಈ ಮಾತಿನ ಬೆನ್ನಲ್ಲೆ ಸಿಎಂ ಮತ್ತು ಶಿವರಾಜ್ ಕುಮಾರ್ ಭೇಟಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ:  ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಸಿಎಂ ಭೇಟಿ ವೇಳೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್,  ಜೇಮ್ಸ್ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಜತೆಯಿದ್ದರು. ಈ ವೇಳೆ ಸ್ವತಃ ಶಿವರಾಜ್ ಕುಮಾರ್ ಅವರು ಕಾರ್ ಡ್ರೈವ್ ಮಾಡಿಕೊಂಡು ಬಂದಿದ್ದು ವಿಶೇಷವಾಗಿತ್ತು.