Tag: Karnataka CM

  • ಮೂರು ದಿನ ಕಳೆದ್ರೂ ಸಿಎಂ ಆಯ್ಕೆ ಇಲ್ಲ – ಹೈಕಮಾಂಡ್ ಅಂಗಳದಲ್ಲಿ ಸಿದ್ದು, ಡಿಕೆ ಭವಿಷ್ಯ

    ಮೂರು ದಿನ ಕಳೆದ್ರೂ ಸಿಎಂ ಆಯ್ಕೆ ಇಲ್ಲ – ಹೈಕಮಾಂಡ್ ಅಂಗಳದಲ್ಲಿ ಸಿದ್ದು, ಡಿಕೆ ಭವಿಷ್ಯ

    ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷೆಗಿಂತಲೂ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ (Congress) ಪಕ್ಷಕ್ಕೆ ಇದೀಗ ಮುಖ್ಯಮಂತ್ರಿ (Karnataka CM) ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.

    ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ ನಡೆಯುತ್ತಿರುವ ತೀವ್ರ ಪೈಪೋಟಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಭಾನುವಾರ ಸಂಜೆ ನಡೆದ ಸಿಎಲ್‌ಪಿ ಸಭೆಯಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆಶಿ (DK Shivakumar) ಸಿಎಂ ಹುದ್ದೆಗೆ ಪಟ್ಟು ಹಿಡಿದ ಕಾರಣ, ನೂತನ ನಾಯಕನ ಆಯ್ಕೆಯನ್ನ ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ.

    ನಂತರ ತಡರಾತ್ರಿಯವರೆಗೂ ಶಾಸಕರ ಅಭಿಪ್ರಾಯಗಳನ್ನ ಒನ್ ಟು ಒನ್ ಸಂಗ್ರಹಿಸಲಾಯ್ತು. ಸದ್ಯ ಹೈಕಮಾಂಡ್ ಅಂಗಳದಲ್ಲಿ ಸಿಎಂ ಆಯ್ಕೆಯ ಚೆಂಡು ಇದೆ. ಭಿನ್ನ, ವಿಭಿನ್ನ ಮಾದರಿಗಳಲ್ಲಿ ಲಾಬಿಗಳು ಮುಂದುವರೆದಿವೆ. ಯಾರೂ ಊಹಿಸಲಾಗದ ರೀತಿಯಲ್ಲಿ ಹೊಸ ಹೊಸ ಆಟಗಳು ಶುರುವಾಗಿವೆ.

    ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆ ದೆಹಲಿಗೆ ಹಾರಿದ್ದಾರೆ. ಇತ್ತ, ಕೊನೆಯ ಕ್ಷಣದಲ್ಲಿ ಡಿ.ಕೆ ಶಿವಕುಮಾರ್ ಅನಾರೋಗ್ಯ ಕಾರಣ ನೀಡಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ. ಜೊತೆಗೆ ಭಾವನಾತ್ಮಕ ದಾಳವನ್ನು ಉರುಳಿಸಿದ್ದಾರೆ. ಇದನ್ನೂ ಓದಿ: ನಮ್ಮವರಿಂದಲೇ ಸೋಲು, ನನ್ನ ಜಾತಿಯನ್ನೇ ಸುಳ್ಳು ಮಾಡಿದ್ರು: ಅಳಲು ತೋಡಿಕೊಂಡ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ

    ದೆಹಲಿ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ನನ್ನ ಜೊತೆ ಯಾವ ಶಾಸಕರೂ ಇಲ್ಲ. ನನಗೆ ಯಾರ ಬೆಂಬಲವೂ ಬೇಡ. ನಾನು ವ್ಯಕ್ತಿ ಪೂಜೆ ಮಾಡಲ್ಲ. ಪಕ್ಷ ಪೂಜೆ ಮಾಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿಯೇ ಸಿಎಂ ಆಗಬೇಕು- ಓಲಾ, ಊಬರ್ ಚಾಲಕರ ಸಂಘಟನೆ ಆಗ್ರಹ

    ನನ್ನನ್ನು ಬಂಡೆ ಎಂದು ಕರೆದಿದ್ದೀರಾ ಚಪ್ಪಡಿಯನ್ನಾದ್ರೂ ಮಾಡಿಕೊಳ್ಳಿ, ಮರಳುಗಂಬವನ್ನಾದ್ರೂ ಮಾಡಿಕೊಳ್ಳಿ ನನ್ನಲ್ಲಿರೋ ಎಲ್ಲಾ ತಂತ್ರಗಾರಿಕೆ ಬಳಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ನನಗೆ ಅಷ್ಟೇ ಸಾಕು ಎಂದಿದ್ದಾರೆ. ನಾನು ಬ್ಲ್ಯಾಕ್‌ ಮೇಲ್‌ ಮಾಡಲ್ಲ. ಅಂತಹ ರಾಜಕಾರಣಿ ನಾನಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಯಾರಾಗ್ತಾರೆ ಸಿಎಂ ಎಂಬ ಕುತೂಹಲ ಇನ್ನಷ್ಟು ತೀವ್ರಗೊಂಡಿದೆ. ಆದ್ರೆ, ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ.. ನಾವೆಲ್ಲಾ ಒಂದಾಗಿಯೇ ಇದ್ದೇವೆ. ಮುಂದೆಯೂ ಒಂದಾಗಿಯೇ ಇರುತ್ತೇವೆ ಎಂದು ಶಾಸಕ ಎಂ.ಬಿ ಪಾಟೀಲ್ ಪ್ರತಿಪಾದಿಸಿದ್ದಾರೆ.

  • ಬಸವರಾಜ ಬೊಮ್ಮಾಯಿ ನಡೆದಾಡುವ ರಾಜದೇವರು: ಸಿದ್ದರಾಮೇಶ್ವರ ಸ್ವಾಮೀಜಿ

    ಬಸವರಾಜ ಬೊಮ್ಮಾಯಿ ನಡೆದಾಡುವ ರಾಜದೇವರು: ಸಿದ್ದರಾಮೇಶ್ವರ ಸ್ವಾಮೀಜಿ

    ತುಮಕೂರು: ಪಟ್ಟಣದ ಗಾಜಿನ ಮನೆಯಲ್ಲಿಂದು ನಡೆಯುತ್ತಿರುವ ಭೋವಿ ಸಮಾಜದ ಜಾಗೃತಿ ಸಮಾವೇಶದಲ್ಲಿ ಚಿತ್ರದುರ್ಗ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ `ನಡೆದಾಡುವ ರಾಜದೇವರು’ ಎಂಬ ಬಿರುದನ್ನು ಪ್ರದಾನ ಮಾಡಿದ್ದಾರೆ.

    ಸಮಾವೇಶದಲ್ಲಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಬಸವರಾಜ ಬೊಮ್ಮಾಯಿ ಅವರನ್ನ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ- ಸಂತ್ರಸ್ತೆಯರ ಹೇಳಿಕೆ ಪಡೆದ ತನಿಖಾ ತಂಡ

    ಮಂಜುನಾಥ್ ಪ್ರಸಾದ್ ಅವರನ್ನು ತಮ್ಮ ಪ್ರದಾನ ಕಾರ್ಯದರ್ಶಿ ಆಗಿ ಮಾಡಿದ್ದು, ಸಮಾಜಕ್ಕೆ ದೊಡ್ಡ ಗೌರವ. ಸಿಎಂಗೆ ಬೇರೆ-ಬೇರೆ ಅಧಿಕಾರಿಗಳನ್ನ ನೇಮಿಸಿಕೊಳ್ಳುವಂತೆ ಒತ್ತಡವಿತ್ತು. ಆದರೆ ಅವರು ಭೋವಿ ಜನಾಂಗಕ್ಕೆ ನ್ಯಾಯ ಒದಗಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ಬೊಮ್ಮಾಯಿ ಅವರ ಮಾತು ಕೃತಿ ನಡೆ, ಕೋಪ ತಂದೆಯದ್ದು, ಅಷ್ಟೇ ಅಲ್ಲ ತಾಯಿ ಹೃದಯ, ವಾತ್ಸಲ್ಯ, ಮಿಡಿತ ಎಲ್ಲವೂ ಅವರಲ್ಲಿದೆ. ತಾಯಿ ತನ್ನ ಮಗುವನ್ನು ನೋಡಿಕೊಂಡಂತೆ ನಮ್ಮ ರಾಜ್ಯಕ್ಕೆ ಇಂತಹ ಮುಖ್ಯಮಂತ್ರಿ ಸಿಕ್ಕಿದ್ದಾರೆ. ಇಂಥವರು ಸಿಕ್ಕಿರುವುದು ನಮ್ಮ ಹೆಮ್ಮೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ‘ಕೈ’ ನಾಯಕರು ಪಕ್ಷ ಬಿಟ್ಟು ಹೋಗಲು ನಾಯತ್ವದಲ್ಲಿರುವ ದುರಂಹಕಾರ ಕಾರಣ: ಪ್ರಹ್ಲಾದ್ ಜೋಶಿ

    ಸಿಎಂ ಅತೀ ಸಣ್ಣ ಮಡಿವಾಳ ಸಮುದಾಯದವರನ್ನೂ ಗುರುತಿಸಿ ಸಹಾಯ ಮಾಡಿದ್ದಾರೆ. ಅಂಬೇಡ್ಕರರ ಸಂವಿಧಾನದ ಆಶಯದಂತೆ ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ. ಲಿಂಗಾಯತ ಸಮುದಾಯದ ಅಧಿಕಾರಕ್ಕೆ ಬಂದರೆ ಬೇರೆ ಸಮುದಾದ ಜನ ಮಾತನಾಡಿಸೋದು ಕಷ್ಟ ಎಂದು ಹೇಳುತ್ತಾರೆ. ಆದರೆ ಬೊಮ್ಮಾಯಿ ಅವರಿಂದ ತಮ್ಮ ಸಮುದಾಯಕ್ಕಿಂತ ಬೇರೆ ಸಮುದಾಯದ ಜನರೇ ಹೆಚ್ಚಿನ ಲಾಭ ಪಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌

    40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌

    ಬೆಂಗಳೂರು: ಅಮಿತ್‌ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40 ಪರ್ಸೆಂಟ್‌ ಸರ್ಕಾರದಲ್ಲಿ ʼ3ನೇ ಸಿಎಂʼ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾಲೆಳೆದಿದೆ.

    ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿ ಬೊಮ್ಮಾಯಿ ಅವರಿಗೆ ಕುಟುಕಿದೆ. ಗೊಂಬೆ ಬಸವರಾಜ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್‌ ಹೇಳಿದೆ. ಇದನ್ನೂ ಓದಿ: ರಾಜ್ಯದ 207 ಎ ಗ್ರೇಡ್ ದೇವಾಲಯಗಳಿಗೆ ಮಾಸ್ಟರ್ ‌ಪ್ಲ್ಯಾನ್- ದೈವಸಂಕಲ್ಪ ಹೆಸರಿನಲ್ಲಿ ಅಭಿವೃದ್ಧಿ ಯೋಜನೆ

    ಟ್ವೀಟ್‌ನಲ್ಲೇನಿದೆ?
    ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಬೊಂಬೆ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?

    ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಬೊಂಬೆ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ? ಇದನ್ನೂ ಓದಿ: ಮೈಸೂರು ಉದ್ಯಮಿಯ ಕೊಲೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!

    ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿ ವರ್ಸಸ್‌ ಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?

    ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ರಾಜ್ಯ ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಬಿಜೆಪಿ ಕಾಲೆಳೆದಿದೆ ಕಾಂಗ್ರೆಸ್.

    Live Tv
    [brid partner=56869869 player=32851 video=960834 autoplay=true]

  • ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ: ಬೊಮ್ಮಾಯಿ

    ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ: ಬೊಮ್ಮಾಯಿ

    ಬೆಂಗಳೂರು: ಫೆಬ್ರವರಿ 7 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಡಿಸಿಎಂ ಪಟ್ಟಕ್ಕಾಗಿ ಶ್ರೀರಾಮುಲು ಲಾಬಿ

    ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

    ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುತ್ತೇನೆ. ನಾಳೆ ದೆಹಲಿಗೆ ಹೋಗಬೇಕು ಎಂದುಕೊಂಡಿದ್ದೆ. ಆದರೆ ಸಂಸದರ ಸಲಹೆ ಮೇರೆಗೆ ಸೋಮವಾರ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಜೆಟ್‍ನಲ್ಲಿ ಮುಂದಿನ 25 ವರ್ಷಗಳ ಮುಂದಾಲೋಚನೆಯಿದೆ: ಬಿ.ಸಿ.ಪಾಟೀಲ್

  • ಫೆ.14 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ – ಮಾರ್ಚ್‌ ಮೊದಲ ವಾರ ಬಜೆಟ್‌ ಮಂಡನೆ

    ಫೆ.14 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ – ಮಾರ್ಚ್‌ ಮೊದಲ ವಾರ ಬಜೆಟ್‌ ಮಂಡನೆ

    ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಫೆ. 14 ರಿಂದ 25ರವರೆಗೆ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟದ ಸಭೆಯ ನಂತರ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಕೋವಿಡ್ ಸ್ಥಿತಿಗತಿ, ಕೋವಿಡ್ ನಿರ್ವಹಣೆ, ಶಾಲಾ-ಕಾಲೇಜು ಹಾಗೂ ಸಂಘ ಸಂಸ್ಥೆಗಳ ಮನವಿಗಳನ್ನು ತಜ್ಞರ ಸಮಿತಿಯ ಮುಂದೆ ಇರಿಸಲಾಗಿದ್ದು, ತಜ್ಞರ ವರದಿ ಬಂದ ನಂತರ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಇಬ್ರಾಹಿಂ ಬಿಜೆಪಿಗೆ ಬರುವುದಾದರೇ ನಾನು ಸ್ವಾಗತಿಸುತ್ತೇನೆ: ಶ್ರೀರಾಮುಲು

    ಬಿಬಿಎಂಪಿ ಚುನಾವಣೆ:
    ಬಿಬಿಎಂಪಿ ಚುನಾವಣೆಯ ಬಗ್ಗೆ ಚರ್ಚಿಸಲಾಗಿದ್ದು, ಬೆಂಗಳೂರಿನ ಸಚಿವರೊಂದಿಗೆ ಇತರ ಜಿಲ್ಲೆಗಳ ಸಚಿವರನ್ನೂ ನಿಯೋಜಿಸಿ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

    ಸರ್ಕಾರದ 6 ತಿಂಗಳ ಸಾಧನೆಗಳ ಪ್ರಚಾರ:
    ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ 6 ತಿಂಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ ನಡೆಯಲಿದೆ. 2023 ವರೆಗಿನ ಸರ್ಕಾರದ ಕಾರ್ಯಕ್ರಮಗಳು, ಈ 6 ತಿಂಗಳ ಅವಧಿಯಲ್ಲಿ ಸರ್ಕಾರದ ಪ್ರಮುಖ ಇಲಾಖೆಗಳ ಸಾಧನೆಗಳ ಬಗ್ಗೆ ಮುಂದಿನ ಒಂದು ವಾರದ ಕಾಲ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಸಚಿವರು ತಮ್ಮ ಇಲಾಖೆಗಳಿಗೆ ತಿಳಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಬಗ್ಗೆ ಸಹೋದರ ಸತೀಶ್ ಜಾರಕಿಹೊಳಿ ವ್ಯಂಗ್ಯ

    ಬಿಜೆಪಿ ಚಿಂತನ-ಮಂಥನ ಸಭೆ:
    ಬರುವ ದಿನಗಳಲ್ಲಿ ಪಕ್ಷ, ಸಂಘಟನೆ ಹಾಗೂ ಸರ್ಕಾರದ ಮಧ್ಯೆ ಸಮನ್ವಯ ಸಾಧಿಸುವ ಚಿಂತನ-ಮಂಥನ ಸಭೆಯನ್ನು ಪಕ್ಷದ ಅಧ್ಯಕ್ಷರು ಶೀಘ್ರದಲ್ಲಿ ನಡೆಸಲಿದ್ದು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯುವ ತೀರ್ಮಾನವನ್ನು ಮಾಡಲಾಗಿದೆ ಎಂದರು.

    ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಿದ್ದಲ್ಲಿ ಸೂಕ್ತ ಕ್ರಮ:
    ರೇಸ್ ಕೋರ್ಸ್‌ನಲ್ಲಿ ನಡೆಯುವ ಡರ್ಬಿ ರೇಸ್‍ನಲ್ಲಿ ಸಾವಿರಾರು ಜನ ಸೇರುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದವರು ಆಕ್ಷೇಪ ಎತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಲು ಯಾವುದೇ ಅವಕಾಶವಿರುವುದಿಲ್ಲ. ಕೋವಿಡ್ ಮಾರ್ಗಸೂಚಿಗಳ ಕಡ್ಡಾಯ ಪಾಲನೆ ಆಗಬೇಕು. ಮಾರ್ಗಸೂಚಿಗಳ ಉಲ್ಲಂಘನೆಯಾಗಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಗೆ ಮುಸಲ್ಮಾನರೇ ಅಪ್ಪ-ಅಮ್ಮ: ನಾರಾಯಣಸಾ ಭಾಂಡಗೆ

    ಬಿಬಿಎಂಪಿ ಸಭೆಗಳನ್ನು ನಡೆಸುವ ಮೂಲಕ ಬೆಂಗಳೂರಿನ ಬಿಜೆಪಿಗೆ ಅನುಕೂಲವಾಗಲು ಹಾಗೂ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಇರುವುದೇ ಆರೋಪ ಮಾಡಲು. ಅವರ ಸರ್ಕಾರ ಇದ್ದಾಗ ಏನೆಲ್ಲಾ ಮಾಡಿದ್ದರು ಎನ್ನುವುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

  • BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

    BMTC ಭಾರತದ ನಂ.1 ಸಾರಿಗೆ ಸಂಸ್ಥೆಯಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

    ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಿಸಿದರು.

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ ಮತ್ತು ಬಿಎಸ್-6 ಡೀಸೆಲ್ ಬಸ್‌ಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

    BMTC JBM ELECTRIC BUS 2

    ಸಾರಿಗೆ, ಎಸ್ಕಾಂ ಪುನಶ್ಚೇತನ ಸರ್ಕಾರದ ಸಂಕಲ್ಪ: ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟ ಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಷ್ಟಿಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರ್ಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

    ಮಾಲಿನ್ಯ ರಹಿತ ಬಸ್‌ಗಳು: ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಬೊಮ್ಮಾಯಿ ಅವರು ಮನವಿ ಮಾಡಿದರು. ಇದನ್ನೂ ಓದಿ: ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ! 

    ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು. ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು. ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು. ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

    ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ. ಮೋಹನ್ ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕರು, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

  • ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

    ಹುಬ್ಬಳ್ಳಿ: ಕೇಂದ್ರ ಸರ್ಕಾರದಂತೆಯೇ ರಾಜ್ಯದಲ್ಲೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಲಾಗಿದೆ. ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿನ್ನೆ ಪೆಟ್ರೋಲ್- ಡೀಸೆಲ್ ಬೆಲೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನು ನಿನ್ನೆಯೇ ಕೇಂದ್ರ ಹಣಕಾಸು ಸಚಿವರು ಹಾಗೂ ಗೃಹ ಸಚಿವರ ಜೊತ ಚರ್ಚೆ ಮಾಡಿದ್ದೇನೆ‌. ಎಲ್ಲ ರಾಜ್ಯಗಳು ಸಹ ಬೆಲೆ ಕಡಿಮೆ ಮಾಡಬೇಕೆಂದು ಬಯಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ. ಹೀಗಾಗಿ ನಾವು ಸಹ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದ್ದೇವೆ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆಯೂ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಪೆಟ್ರೋಲ್‌ಗೆ 5 ರೂ., ಡೀಸೆಲ್‌ಗೆ 10 ರೂಪಾಯಿ ಕಡಿಮೆ ಮಾಡಿ ನಿನ್ನೆ ಅಧಿಸೂಚನೆ ಹೊರಡಿಸಿದೆ.‌ ನಾವೂ ಇಂದು ಅಧಿಸೂಚನೆ ಹೊರಡಿಸುತ್ತೇವೆ. ಸಂಜೆಯಿಂದಲೇ ಬೆಲೆ ಇಳಿಕೆ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆ

    MONEY

    ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ನಷ್ಟವಾಗಲಿದೆ. ಬೆಲೆ ಇಳಿಕೆ ಮಾಡುವ ಚಿಂತನೆ ಇತ್ತು. ಇದೀಗ ಕೇಂದ್ರ ಸರ್ಕಾರ ದೇಶದ ಜನರಿಗೆ ದೀಪಾವಳಿ ಉಡುಗೊರೆ ನೀಡಿರುವುದು ಖುಷಿ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ – ವಾಹನ ಸವಾರರ ಮಿಶ್ರ ಪ್ರತಿಕ್ರಿಯೆ

    ಸರ್ಕಾರ ನೂರು ದಿನಗಳಲ್ಲಿ ಬಹಳ ದೊಡ್ಡ ಮೈಲುಗಲ್ಲು ಸಾಧಿಸಲು‌ ಆಗದಿದ್ದರೂ, ಮುಂದಿನ ದಿನಕ್ಕೆ ದಿಕ್ಸೂಚಿಯಾಗಲಿದೆ. ನೂರು ದಿನದಲ್ಲಿ ಭದ್ರ, ಭರವಸೆ ಹೆಜ್ಜೆ ಇಟ್ಟಿದ್ದೇವೆ. ದಿಟ್ಟ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಅಮೃತ ಯೋಜನೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಬಡವರಿಗೆ ಸಂಧ್ಯಾ ಸುರಕ್ಷಾ, ಅಂಗವಿಕಲ ಹಾಗೂ ವಿಧವಾ ವೇತನ ಹೆಚ್ಚಳ ಸೇರಿದಂತೆ ಹಲವಾರು ಯೋಜನೆಗಳನ್ನು ಮಾಡಿದ್ದೇವೆ. ಇಷ್ಟಲ್ಲದೆ ಇನ್ನೂ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಚಿಂತನೆಯಿದೆ. ಆರ್ಥಿಕ ಬೆಳವಣಿಗೆ ಈಗ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

    bommai

    ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ
    ಹೈಕಮಾಂಡ್‌ನಿಂದ ದೆಹಲಿಗೆ ಬರುವಂತೆ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ನವೆಂಬರ್ 7ಕ್ಕೆ ದೆಹಲಿಗೆ ಹೋಗಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

    ನ.7 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದೆ. ಆದರೆ, ನಾನು ಬೆಂಗಳೂರಿನ ಬಿಜೆಪಿ ಕಚೇರಿ ಮೂಲಕವೇ ಸಭೆಯಲ್ಲಿ ಭಾಗಿಯಾಗುತ್ತೇನೆ. ದೀಪಾವಳಿ ನಂತರ ಸಂಪುಟ ವಿಸ್ತರಣೆ ಸಂಬಂಧ ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ.

  • ಎರಡು ತಿಂಗಳ ಹಿಂದೆಯೇ ರಾಜೀನಾಮೆ ಸಂಕಲ್ಪ ಮಾಡಿದ್ರು: ಬಿ.ವೈ.ರಾಘವೇಂದ್ರ

    ಎರಡು ತಿಂಗಳ ಹಿಂದೆಯೇ ರಾಜೀನಾಮೆ ಸಂಕಲ್ಪ ಮಾಡಿದ್ರು: ಬಿ.ವೈ.ರಾಘವೇಂದ್ರ

    – ಯುಪಿ, ಮಹಾರಾಷ್ಟ್ರದಂತೆ ಇಲ್ಲಿಯೂ ಸಿಎಂ ಆಯ್ಕೆ ಆಗಬಹುದು

    ಬೆಂಗಳೂರು: ಸಿಎಂ ಸ್ಥಾನಕ್ಕೆ ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವ ಸಂಕಲ್ಪವನ್ನ ಹಂಗಾಮಿ ಸಿಎಂ ಯಡಿಯೂರಪ್ಪ ಮಾಡಿದ್ದರು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದರಾದ ಬಿ.ವೈ.ರಾಘವೇಂದ್ರ, ನಾನು ಕುಟುಂಬ ಅನ್ನೋದಕ್ಕಿಂತ ಸಂಘಟನೆಯಿಂದ ಇಂದು ಸಂಸದನಾಗಿದ್ದೇನೆ. ವಿಜಯೇಂದ್ರ ಸಂಘಟನೆ ಮತ್ತು ಪಕ್ಷದ ಸೇತುವೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾವಿರಾರು ಕಾರ್ಯಕರ್ತರನ್ನು ಯಡಿಯೂರಪ್ಪನವರು ಬೆಳೆಸಿದ್ದಾರೆ. ನಗರಕ್ಕೆ ಸೀಮಿತವಾದ ಪಕ್ಷ ಎಂಬ ಕಪ್ಪು ಚುಕ್ಕೆ ಮೊದಲು ನಮ್ಮ ಮೇಲೆ ಇತ್ತು. ಈಗ ಗ್ರಾಮಾಂತರ ಭಾಗದಲ್ಲಿಯೂ ಪಕ್ಷ ಬಲವರ್ಧನೆ ಮಾಡುವಲ್ಲಿ ಯಡಿಯೂರಪ್ಪನವರು ಕೆಲಸ ಮಾಡಿದ್ದಾರೆ. ಕುಟುಂಬ ಮತ್ತು ಮಕ್ಕಳಿಗಾಗಿ ಯಡಿಯೂರಪ್ಪ ಕಂಡೀಷನ್ ಹಾಕಿರುವ ಪ್ರಶ್ನೆಯೇ ಇಲ್ಲ ಅದೆಲ್ಲಾ ಸುಳ್ಳು ಎಂದರು. ಇದನ್ನೂ ಓದಿ: ಒತ್ತಡದ ತಂತ್ರ ಬಿಜೆಪಿಯಲ್ಲಿ ನಡೆಯಲ್ಲ: ಮುರುಗೇಶ್ ನಿರಾಣಿ

    ಸಿಎಂ ಆಯ್ಕೆಯಲ್ಲಿ ಹೈಕಮಾಂಡ್ ಯಾವ ನಿರ್ಧಾರ ಬೇಕಾದ್ರೂ ತೆಗೆದುಕೊಳ್ಳಬಹುದು. ಮಹಾರಾಷ್ಟ್ರ, ಯುಪಿ ಮಾದರಿಯಲ್ಲಿ ರಾಜ್ಯದಲ್ಲಿ ಅಚ್ಚರಿ ಆಗಬಹುದು. ಫಡ್ನವಿಸ್, ಯೋಗಿ ಅದಿತ್ಯನಾಥ್ ಆದ ರೀತಿಯಲ್ಲಿ ರಾಜ್ಯದಲ್ಲೂ ಆಗಬಹುದು. ಕೇಂದ್ರ ಸಚಿವ ಸಂಪುಟ ವಿಸ್ತರಣೆಯೂ ಆಗಿದ್ದು, ಅದೇ ರೀತಿ ನಮ್ಮ ಕಣ್ಣು ಮುಂದೆ ಇದೆ. 2 ತಿಂಗಳ ಹಿಂದೆಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಸಂಕಲ್ಪ ಹೊಂದಿದ್ದರು. ಅದರಂತೆ ನಿನ್ನೆ ರಾಜೀನಾಮೆ ನೀಡಿದ್ರು. ಮುಂಬರುವ ಸಚಿವ ಸಂಪುಟದಲ್ಲಿ ಯಡಿಯೂರಪ್ಪ ಅವರ ಪಾತ್ರ ಇರಲ್ಲ. ಇನ್ನೂ ಮಕ್ಕಳ ಪಾತ್ರ ಎಲ್ಲಿಂದ ಬಂತು..? ವಿಜಯೇಂದ್ರ ರಾಜ್ಯ ಉಪಾಧ್ಯಕ್ಷರಾಗಿ ಸರ್ಕಾರ, ಪಕ್ಷದ ಸೇತುವೆಯಾಗಿ ಕೆಲಸ ಮಾಡಲಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಅಭಿಮಾನಿ ರವಿ ಆತ್ಮಹತ್ಯೆ ಸುದ್ದಿ ದಿಗ್ಭ್ರಮೆ ತರಿಸಿದೆ – ವಿಜಯೇಂದ್ರ

  • ರಾಜೀನಾಮೆ ಸುದ್ದಿ ಕೇಳಿ ಅಭಿಮಾನಿ ಆತ್ಮಹತ್ಯೆ – ಬಿಎಸ್‍ವೈ ಸಂತಾಪ

    ರಾಜೀನಾಮೆ ಸುದ್ದಿ ಕೇಳಿ ಅಭಿಮಾನಿ ಆತ್ಮಹತ್ಯೆ – ಬಿಎಸ್‍ವೈ ಸಂತಾಪ

    – ಅಭಿಮಾನ ಅತಿರೇಕಕ್ಕೆ ಹೋಗಬಾರದು

    ಬೆಂಗಳೂರು: ತಮ್ಮ ರಾಜೀನಾಮೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಅಭಿಮಾನಿ ಸಾವಿಗೆ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

    ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಯಡಿಯೂರಪ್ಪನವರು ಧೈರ್ಯ ಹೇಳಿದ್ದಾರೆ.

    ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಸಿಎಂ ಸ್ಥಾನ ಸಾಧ್ಯತೆ!

    ಸೋಮವಾರ ಸರ್ಕಾರ ಎರಡನೇ ವರ್ಷದ ಸಂಭ್ರಮಾಚರಣೆ ವೇದಿಕೆಯಲ್ಲಿ ಯಡಿಯೂರಪ್ಪನವರು ರಾಜೀನಾಮೆ ನೀಡುವದಾಗಿ ಘೋಷಣೆ ಮಾಡಿದ್ದರು. ತಮ್ಮ ಭಾಷಣದ ವೇಳೆ ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದರು. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿ, ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವದಾಗಿ ತಿಳಿಸಿದರು. ಇದೇ ವೇಳೆ ರಾಜೀನಾಮೆಗೆ ದೆಹಲಿಯಿಂದ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸ್ವಪ್ರೇರಣೆಯಿಂದ ಸಿಎಂ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಯಡಿಯೂರಪ್ಪ ಸಂಪುಟ ವಿಸರ್ಜನೆ – ಸಚಿವರೆಲ್ಲ ಮಾಜಿ

  • ದೆಹಲಿಯಿಂದ ಒತ್ತಡ ಇಲ್ಲ, ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ: ಬಿಎಸ್‍ವೈ

    ದೆಹಲಿಯಿಂದ ಒತ್ತಡ ಇಲ್ಲ, ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ: ಬಿಎಸ್‍ವೈ

    – ರಾಜ್ಯಪಾಲರಾಗ್ತಾರಾ ಬಿ.ಎಸ್.ಯಡಿಯೂರಪ್ಪ?
    – ಬುಧವಾರ ಬಿಜೆಪಿ ಶಾಸಕರ ಸಭೆ

    ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

    ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು ಸೂಚಿಸಿಲ್ಲ ಮತ್ತು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು.

    ರಾಜ್ಯಪಾಲರಾಗ್ತಾರಾ ಬಿಎಸ್‍ವೈ?:
    ಸಿಎಂ ಸ್ಥಾನದ ರಾಜೀನಾಮೆ ಬಳಿಕ ರಾಜ್ಯಪಾಲರಾಗ್ತೀರಾ ಪ್ರಶ್ನೆಗೆ ಉತ್ತರಿಸಿದರು. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿಯವರು ಕೇಂದ್ರ ಸಚಿವ ಸ್ಥಾನದ ಅವಕಾಶ ನೀಡಿದ್ರೂ ಹೋಗಿಲ್ಲ. ರಾಜ್ಯಪಾಲನಾಗಿ ಯಾವ ರಾಜ್ಯಕ್ಕೂ ಹೋಗಲ್ಲ. ರಾಜಕೀಯ ನಿವೃತ್ತಿಯೂ ಪಡೆಯಲ್ಲ. ಇಲ್ಲಿಯೇ ಇದ್ದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದರು.

    ಯಾವುದೇ ಹೇಳಿಕೆ ನೀಡಬೇಡಿ:
    ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದೆ. ಆದ್ರೆ ಸರ್ಕಾರ ಎರಡು ವರ್ಷ ಪೂರೈಸಿದ ದಿನವೇ ರಾಜೀನಾಮೆ ಸಲ್ಲಿಸೋದು ಸೂಕ್ತ ಅನ್ನಿಸಿತು. ರಾಷ್ಟ್ರೀಯ ನಾಯಕರು, ರಾಜ್ಯದ ಜನತೆ, ಪಕ್ಷದ ಕಾರ್ಯಕರ್ತರು ನನ್ನ ಮೇಲಿರಿಸಿದ್ದ ವಿಶ್ವಾಸವನ್ನ ಎಂದಿಗೂ ಮರೆಯಲ್ಲ. ಅನೇಕ ಸಾಧು-ಸಂತರು ಬಂದು ನನ್ನ ಮೇಲೆ ವಿಶ್ವಾಸ ಇರಿಸಿದ್ದಕ್ಕೆ ನಮಸ್ಕಾರ ಹೇಳುತ್ತೇನೆ. ಇಂದಿನಿಂದ ಸ್ವಾಮೀಜಿಗಳು ಯಾವುದೇ ಹೇಳಿಕೆ ನೀಡದಂತೆ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

    ಈ ಎಲ್ಲ ಬೆಳವಣಿಗೆಯ ನಡುವೆ ಬುಧವಾರವೇ ಬಿಜೆಪಿ ಶಾಸಕರ ಸಭೆ ನಿಗದಿಯಾಗಿದ್ದು, ಅಂದೇ ನೂತನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಶಾಸಕರೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಂಭ್ರಮದ ದಿನದಂದೇ ನೋವಿನ ವಿದಾಯ:
    75 ವರ್ಷ ವಯಸ್ಸಾಗಿದ್ರೂ ಪಕ್ಷ ನನಗೆ ಸಿಎಂ ಸ್ಥಾನ ನೀಡಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಪ್ರಧಾನಿ ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಈ ರಾಜೀನಾಮೆಯನ್ನು ನೋವಿನಂದಲ್ಲ, ಸಂತೋಷದಿಂದ ನೀಡುತ್ತಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಕೇಂದ್ರದ ನಾಯಕರು ಅಪೇಕ್ಷೆ ಹೊಂದಿದ್ದಾರೆ. ಮೋದಿ, ನಡ್ಡಾ ಮತ್ತು ಶಾ ಅವರಿಗೆ ಪದಗಳಲ್ಲಿ ಅಭಿನಂದನೆ ಸಲ್ಲಿಸಲು ಆಗಲ್ಲ. ಮತ್ತೆ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವರಾಗುವಂತೆ ವಾಜಪೇಯಿ ಹೇಳಿದ್ದನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

    ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಸಂದರ್ಭವನ್ನು ಮೆಲುಕು ಹಾಕಿದ ಅವರು, ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿದ ನಾನು, ಶಿವಮೊಗ್ಗದ ಶಿಕಾರಿಪುರದಿಂದ ರಾಜಕೀಯ ಜೀವನ ಆರಂಭಿಸಿದೆ. ಅಂದು ಮೊದಲ ಬಾರಿಗೆ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದೇವು. ಆದ್ರೆ ನನ್ನ ಜೊತೆಯಲ್ಲಿದ್ದ ಮತ್ತೊಬ್ರು ರಾಜೀನಾಮೆ ನೀಡಿದಾಗ ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ. ಅಂದು ಆಯೋಜಿಸಿದ ಕಾರ್ಯಕ್ರಮಗಳನ್ನು ನೋಡಿ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಹೇಳಿದರು. ಇದನ್ನೂ ಓದಿ: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಸಿಎಂ ಸ್ಥಾನ!

    ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ರಚನೆಯಾಗಿತ್ತು. ಅಂದು ವಾಜಪೇಯಿ ಅವರು ಕೇಂದ್ರದ ಸಚಿವರಾಗುವಂತೆ ಹೇಳಿದ್ದರು. ಇಲ್ಲ ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು. ದೆಹಲಿ ರಾಜಕಾರಣಕ್ಕೆ ಬರಲ್ಲ ಅಂತ ವಿನಮ್ರದಿಂದ ಹೇಳಿದೆ ಎಂದು ಹೇಳಿ ಭಾವುಕರಾದರು. ಇದನ್ನೂ ಓದಿ: ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ