Tag: Karnataka Corona

  • ರಾಜ್ಯದಲ್ಲಿ ಕೊರೊನಾ ಮತ್ತೆ ಏರಿಕೆ – ಇಂದು 2,136 ಮಂದಿಗೆ ಸೋಂಕು, 2 ಸಾವು

    ರಾಜ್ಯದಲ್ಲಿ ಕೊರೊನಾ ಮತ್ತೆ ಏರಿಕೆ – ಇಂದು 2,136 ಮಂದಿಗೆ ಸೋಂಕು, 2 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ 1,736 ಇದ್ದ ಸೋಂಕಿನ ಸಂಖ್ಯೆ ಇಂದು ರಾಜ್ಯದಲ್ಲಿ 2,136ಕ್ಕೆ ಏರಿಕೆ. ನಿನ್ನೆ ಯಾವುದೇ ಸಾವು ಪ್ರಕರಣ ವರದಿಯಾಗಿರಲಿಲ್ಲ. ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 1,845 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,61,187 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವೆರೆಗೆ ಒಟ್ಟು 40,108 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.59 ಇದೆ. 11,185 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಮಾಧ್ಯಮ ಮಾನ್ಯತಾ ಸಮಿತಿ ರಚನೆ: ಪಬ್ಲಿಕ್ ಟಿವಿಯ ರವೀಶ್ ಸದಸ್ಯರಾಗಿ ನೇಮಕ

    ಇಂದು 32,399 ಮಂದಿಯನ್ನು (8,160 ರ‍್ಯಾಪಿಡ್ ಆ್ಯಂಟಿಜನ್, 24,239 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,79,03,781 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇಂದು 2,99,216 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

    ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲಿ 1,584 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 30, ಬಾಗಲಕೋಟೆ 26, ಬಳ್ಳಾರಿ 31, ಬೆಳಗಾವಿ 27, ಬೀದರ್ 5, ಚಾಮರಾಜನಗರ 18, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 14, ದಾವಣಗೆರೆ 14, ಧಾರವಾಡ 78, ಗದಗ 1, ಹಾಸನ 33, ಹಾವೇರಿ 3, ಕಲಬುರಗಿ 36, ಕೊಡಗು 14, ಕೋಲಾರ 23, ಕೊಪ್ಪಳ 5, ಮಂಡ್ಯ 14, ಮೈಸೂರು 71, ರಾಯಚೂರು 27, ರಾಮನಗರ 3, ಶಿವಮೊಗ್ಗ 16, ತುಮಕೂರು 23, ಉಡುಪಿ 12, ಉತ್ತರ ಕನ್ನಡ 9, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಮತ್ತೆ ಏರಿಕೆ – ಇಂದು 1,374 ಕೇಸ್‌, 3 ಸಾವು

    ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಮತ್ತೆ ಏರಿಕೆ – ಇಂದು 1,374 ಕೇಸ್‌, 3 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ದಿನೇ ದಿನೆ ಹೆಚ್ಚಳವಾಗುತ್ತಿದೆ. ಇಂದು 1,374 (ನಿನ್ನೆ 977) ಕೇಸ್‌ಗಳು ದಾಖಲಾಗಿದ್ದು ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಂದು 3 ಸಾವು ಪ್ರಕರಣ ದಾಖಲಾಗಿದೆ.

    ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಕೇಸ್‌ಗಳು ಧಾರವಾಡದಲ್ಲಿ ದಾಖಲಾಗಿದೆ. ರಾಜ್ಯದ 3 ಮರಣ ಪ್ರಕರಣ ಪೈಕಿ ಬೆಂಗಳೂರು ನಗರದಲ್ಲಿ 2 ಹಾಗೂ ಬಳ್ಳಾರಿಯಲ್ಲಿ 1 ಕೇಸ್ ವರದಿಯಾಗಿದೆ. ಇಂದಿನ ಪಾಸಿಟಿವಿಟಿ ರೇಟ್ ಶೇ.4.86 ಕ್ಕೆ ತಲುಪಿದೆ. ಇದನ್ನೂ ಓದಿ: ರಾಯಚೂರು, ಕಾರವಾರ, ಶಿವಮೊಗ್ಗ, ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವೇ ಆರಂಭ: ಬೊಮ್ಮಾಯಿ

    ಇಂದು 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಇಲ್ಲಿಯವರೆಗೂ 39,85,376 ಮಂದಿಗೆ ಸೋಂಕು ತಗುಲಿದೆ. ಈವರೆಗೆ 39,37,950 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟು 40,088 ಮಂದಿ ಮೃತಪಟ್ಟಿದ್ದಾರೆ.

    ರಾಜ್ಯದಲ್ಲಿ ಇಂದು ಒಟ್ಟು 1,49,782 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟು 28,270 ಸ್ಯಾಂಪಲ್(ಆರ್‌ಟಿ-ಪಿಸಿಆರ್ 20,703 + 7,567 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 3, ಬಳ್ಳಾರಿ 12, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 1,234, ಬೀದರ್ 0, ಚಿತ್ರದುರ್ಗ 2, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 33, ಗದಗ 1, ಹಾಸನ 8, ಕಲಬುರಗಿ 9, ಕೋಲಾರ 7, ಕೊಪ್ಪಳ 1, ಮಂಡ್ಯ 2, ಮೈಸೂರು 22, ತುಮಕೂರು 1, ಉಡುಪಿ 5, ಯಾದಗಿರಿ, ಚಾಮರಾಜನಗರ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ, ಕೊಡಗು, ರಾಯಚೂರು, ರಾಮನಗರ ಹಾಗೂ ವಿಜಯಪುರದಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಇಂದು ರಾಜ್ಯದಲ್ಲಿ 29 ಮಂದಿಗೆ ಕೊರೊನಾ- 61 ಜನ ಆಸ್ಪತ್ರೆಯಿಂದ ಬಿಡುಗಡೆ

    ಇಂದು ರಾಜ್ಯದಲ್ಲಿ 29 ಮಂದಿಗೆ ಕೊರೊನಾ- 61 ಜನ ಆಸ್ಪತ್ರೆಯಿಂದ ಬಿಡುಗಡೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 29 ಮಂದಿಯಲ್ಲಿ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ ಒಂದರಲ್ಲೇ 24 ಮತ್ತು ದಕ್ಷಿಣಕನ್ನಡದಲ್ಲಿ 1, ಕಲಬುರಗಿ 2, ರಾಮನಗರ 1 ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಇಂದು ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

    ಈವರೆಗೆ ಒಟ್ಟು ರಾಜ್ಯದಲ್ಲಿ 40,055 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.73%ಕ್ಕೆ ಮತ್ತು ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,468ಕ್ಕೆ ಇಳಿಕೆ ಕಂಡಿದೆ. ವಾರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 0.33% ಮತ್ತು ವಾರದ ಮರಣ ಪ್ರಮಾಣ 0.96% ರಷ್ಟಿದೆ. ಒಟ್ಟು 61 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಈವರೆಗೆ ರಾಜ್ಯದಲ್ಲಿ ಒಟ್ಟು 39,45,727 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,162 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 12,376 ಸ್ಯಾಂಪಲ್ (ಆರ್ ಟಿಪಿಸಿಆರ್ 7,031 + 5,345 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 24 ಮತ್ತು ದಕ್ಷಿಣಕನ್ನಡದಲ್ಲಿ 1, ಕಲಬುರಗಿ 2, ರಾಮನಗರ 1 ಪ್ರಕರಣ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿಂದು 1,405 ಮಂದಿಗೆ ಕೊರೊನಾ ಸೋಂಕು, 26 ಸಾವು

    ರಾಜ್ಯದಲ್ಲಿಂದು 1,405 ಮಂದಿಗೆ ಕೊರೊನಾ ಸೋಂಕು, 26 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು 1,405 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿನಿಂದಾಗಿ 26 ಮಂದಿ ಮೃತಪಟ್ಟಿದ್ದಾರೆ.

    ಇಂದಿನ ಕೋವಿಡ್‌ ಪ್ರಕರಣಗಳ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌, ರಾಜ್ಯದಲ್ಲಿ ಕೋವಿಡ್‌ ಪಾಸಿಟಿವಿ ದರ ಶೇ.2ಕ್ಕಿಂತ ಕಡಿಮೆ ದಾಖಲಾಗಿದೆ. ಅಂದರೆ ಶೇ.1.91 ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಗುಲಗಳಲ್ಲಿ ಗಂಟೆ ಸೌಂಡ್ ಜಾಸ್ತಿ ಬಂದ್ರೆ ದಂಡ, ಕೇಸ್- ಮುಜರಾಯಿ ಇಲಾಖೆಯಿಂದ ಹೊಸ ಆದೇಶ

    ಬೆಂಗಳೂರಿನಲ್ಲಿ ಇಂದು 765 ಮಂದಿಗೆ ಸೋಂಕು ತಗುಲಿದ್ದು, ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 26,832 ಸಕ್ರಿಯ ಪ್ರಕರಣಗಳಿವೆ. ಇಂದು 73,286 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈ ತುಂಬಾ ಬಟ್ಟೆ ತೊಟ್ಟರೆ ಉರ್ಫಿ ಹೇಗೆ ಕಾಣಬಹುದು?- ನೆಟ್ಟಿಗರ ಪ್ರಶ್ನೆ

  • ರಾಜ್ಯದಲ್ಲಿ ಕೊರೊನಾ ಪ್ರಕರಣ ಇಳಿಮುಖ – ಇಂದು 1,568 ಮಂದಿಗೆ ಸೋಂಕು, 25 ಸಾವು

    ರಾಜ್ಯದಲ್ಲಿ ಕೊರೊನಾ ಪ್ರಕರಣ ಇಳಿಮುಖ – ಇಂದು 1,568 ಮಂದಿಗೆ ಸೋಂಕು, 25 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಮರಣ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖಗೊಂಡಿದೆ. ಇಂದು 1,568 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 25 ಮರಣ ಪ್ರಕರಣ ದಾಖಲಾಗಿದೆ.

    ಬೆಂಗಳೂರು ಗ್ರಾಮಾಂತರ ಹಾಗೂ ಗದಗ ಜಿಲ್ಲೆಯಲ್ಲಿ ತಲಾ 7 ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ. ಪಾಸಿಟಿವಿಟಿ ರೇಟ್ 2.25%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 31,215ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಒಟ್ಟು 754 ಹೊಸ ಕೇಸ್ ಪತ್ತೆಯಾಗಿದ್ದು, 5 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನ್ಯಾನೋ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ- 2 ಲಕ್ಷ ರೂ. ಖರ್ಚು ಮಾಡಿ ಬಾಡಿಗೆ ಬಿಟ್ಟ

    ರಾಜ್ಯದಲ್ಲಿ ಒಟ್ಟು 6,025 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,28,237 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,57,323 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.59% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 2,06,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 69,546 ಸ್ಯಾಂಪಲ್ (ಆರ್‌ಟಿಪಿಸಿಆರ್ 57,313 + 12,233 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 18, ಬಳ್ಳಾರಿ 50, ಬೆಳಗಾವಿ 63, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 754, ಬೀದರ್ 8, ಚಾಮರಾಜನಗರ 20, ಚಿಕ್ಕಬಳ್ಳಾಪುರ 24, ಚಿಕ್ಕಮಗಳೂರು 18, ಚಿತ್ರದುರ್ಗ 21, ದಕ್ಷಿಣ ಕನ್ನಡ 55, ದಾವಣಗೆರೆ 14, ಧಾರವಾಡ 20, ಗದಗ 7, ಹಾಸನ 37, ಹಾವೇರಿ 22, ಕಲಬುರಗಿ 28, ಕೊಡಗು 26, ಕೋಲಾರ 12, ಕೊಪ್ಪಳ 12, ಮಂಡ್ಯ 35, ಮೈಸೂರು 78, ರಾಯಚೂರು 15, ರಾಮನಗರ 26, ಶಿವಮೊಗ್ಗ 91, ತುಮಕೂರು 37, ಉಡುಪಿ 31, ಉತ್ತರ ಕನ್ನಡ 14, ವಿಜಯಪುರ 15 ಮತ್ತು ಯಾದಗಿರಿಯಲ್ಲಿ 10 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕನಿಂದ 25 ವರ್ಷದ ಯುವತಿ ಕಿಡ್ನಾಪ್ – ಕೇಸ್ ದಾಖಲು

  • ರಾಜ್ಯದಲ್ಲಿ ಇಳಿಕೆಯತ್ತ ಕೊರೊನಾ ಪ್ರಕರಣ – ಇಂದು 3,976 ಸೋಂಕು, 41 ಸಾವು

    ರಾಜ್ಯದಲ್ಲಿ ಇಳಿಕೆಯತ್ತ ಕೊರೊನಾ ಪ್ರಕರಣ – ಇಂದು 3,976 ಸೋಂಕು, 41 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 3,976 ಒಟ್ಟು ಪಾಸಿಟಿವ್ ಪ್ರಕರಣ ದಾಖಲಾಗಿದೆ. ನಿನ್ನೆ 5,019 ಕೇಸ್ ದಾಖಲಾಗಿತ್ತು. ರಾಜ್ಯದಲ್ಲಿ 41 ಮರಣ ಪ್ರಕರಣ ದಾಖಲಾಗಿದೆ.

    ಪಾಸಿಟಿವಿಟಿ ರೇಟ್ 3.47%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 44,571ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ಒಟ್ಟು 1,725 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 11 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

    ರಾಜ್ಯದಲ್ಲಿ ಒಟ್ಟು 11,377 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,21,095 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,36,915 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,17,007 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,302 ಸ್ಯಾಂಪಲ್ (ಆರ್‌ಟಿಪಿಸಿಆರ್ 85,566 + 28,736 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 19, ಬಳ್ಳಾರಿ 139, ಬೆಳಗಾವಿ 316, ಬೆಂಗಳೂರು ಗ್ರಾಮಾಂತರ 33, ಬೆಂಗಳೂರು ನಗರ 1,725, ಬೀದರ್ 27, ಚಾಮರಾಜನಗರ 87, ಚಿಕ್ಕಬಳ್ಳಾಪುರ 48, ಚಿಕ್ಕಮಗಳೂರು 36, ಚಿತ್ರದುರ್ಗ 88, ದಕ್ಷಿಣ ಕನ್ನಡ 91, ದಾವಣಗೆರೆ 19, ಧಾರವಾಡ 127, ಗದಗ 34, ಹಾಸನ 78, ಹಾವೇರಿ 31, ಕಲಬುರಗಿ 55, ಕೊಡಗು 127, ಕೋಲಾರ 36, ಕೊಪ್ಪಳ 17, ಮಂಡ್ಯ 65, ಮೈಸೂರು 226, ರಾಯಚೂರು 16, ರಾಮನಗರ 31, ಶಿವಮೊಗ್ಗ 137, ತುಮಕೂರು 194, ಉಡುಪಿ 74, ಉತ್ತರ ಕನ್ನಡ 49, ವಿಜಯಪುರ 33 ಮತ್ತು ಯಾದಗಿರಿಯಲ್ಲಿ 18 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ

  • ರಾಜ್ಯದಲ್ಲಿಂದು 46,426 ಮಂದಿಗೆ ಕೊರೊನಾ, 32 ಸಾವು – ಬೆಂಗಳೂರಿನಲ್ಲಿ 21,569 ಪ್ರಕರಣ ದೃಢ

    ರಾಜ್ಯದಲ್ಲಿಂದು 46,426 ಮಂದಿಗೆ ಕೊರೊನಾ, 32 ಸಾವು – ಬೆಂಗಳೂರಿನಲ್ಲಿ 21,569 ಪ್ರಕರಣ ದೃಢ

    ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 46,426 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ ಸೋಂಕಿನಿಂದಾಗಿ 32 ಮೃತಪಟ್ಟಿದ್ದಾರೆ.

    ರಾಜ್ಯದಲ್ಲಿ ಇಂದು 41,703 ಮಂದಿ ಸೇರಿದಂತೆ ಈವರೆಗೆ 31,62,977 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು 3,62,487 ಇದೆ. ಸೋಂಕಿನಿಂದಾಗಿ ಇದುವರೆಗೆ 38,614 ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಮಾತ್ರ ಬೇಡ: ಆರೋಗ್ಯ ಸಿಬ್ಬಂದಿಗೆ ಮಹಿಳೆ ಖಡಕ್‌ ಮಾತು

    ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 21,569 ಕೋವಿಡ್‌ ಪ್ರಕರಣ ವರದಿಯಾಗಿದೆ. ಮೈಸೂರಿನಲ್ಲಿ 4,105 ಮಂದಿಗೆ ಸೋಂಕು ತಗುಲಿದೆ. ಇಂದು ಏಳು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1 ಸಾವಿರದ ಗಡಿ ದಾಟಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 291, ಬಳ್ಳಾರಿ 817, ಬೆಳಗಾವಿ 625, ಬೆಂಗಳೂರು ಗ್ರಾಮಾಂತರ 1,607, ಬೆಂಗಳೂರು ನಗರ 21,569, ಬೀದರ್ 284, ಚಾಮರಾಜನಗರ 656, ಚಿಕ್ಕಬಳ್ಳಾಪುರ 905, ಚಿಕ್ಕಮಗಳೂರು 144, ಚಿತ್ರದುರ್ಗ 642, ದಕ್ಷಿಣ ಕನ್ನಡ 655, ದಾವಣಗೆರೆ 467, ಧಾರವಾಡ 1,407, ಗದಗ 257, ಹಾಸನ 1,908, ಹಾವೇರಿ 304, ಕಲಬುರಗಿ 379, ಕೊಡಗು 657, ಕೋಲಾರ 661, ಕೊಪ್ಪಳ 525, ಮಂಡ್ಯ 1,837, ಮೈಸೂರು 4,105, ರಾಯಚೂರು 281, ರಾಮನಗರ 288, ಶಿವಮೊಗ್ಗ 537, ತುಮಕೂರು 2,960, ಉಡುಪಿ 677, ಉತ್ತರ ಕನ್ನಡ 626, ವಿಜಯಪುರ 270 ಮತ್ತು ಯಾದಗಿರಿಯಲ್ಲಿ 85 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

  • ಸರ್ಕಾರ ನಡೆಸುವ ಪಕ್ಷದಲ್ಲೇ ಕರ್ಫ್ಯೂ ಬಗ್ಗೆ ಸಹಮತವಿಲ್ಲ: ಹೆಚ್‌ಡಿಕೆ ಟೀಕೆ

    ಸರ್ಕಾರ ನಡೆಸುವ ಪಕ್ಷದಲ್ಲೇ ಕರ್ಫ್ಯೂ ಬಗ್ಗೆ ಸಹಮತವಿಲ್ಲ: ಹೆಚ್‌ಡಿಕೆ ಟೀಕೆ

    ಬೆಂಗಳೂರು: ಕೋವಿಡ್ ಬಗ್ಗೆ ಸರ್ಕಾರ ಉಪೇಕ್ಷೆ ಮಾಡಬಾರದು. ನಿನ್ನೆ ಒಂದೇ ದಿನ 41 ಸಾವಿರ ಪ್ರಕರಣಗಳು ವರದಿಯಾಗಿದೆ. ಇದು ಎಚ್ಚರಿಕೆಯ ಕರೆಗಂಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸೋಂಕಿನ ಪ್ರಮಾಣವನ್ನು ತಡೆಯಲೇಬೇಕು. ಜನರ ಪರಿಸ್ಥಿತಿ ಮತ್ತು ಅವರ ಜೀವನ ನೋಡಿಕೊಂಡು ಸರ್ಕಾರ ಕ್ರಮವಹಿಸಬೇಕು ಎಂದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ವಿಧಿಸೋದಾದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು: ಪ್ರತಾಪ್ ಸಿಂಹ

    ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಚಾರದ ಬಗ್ಗೆ ಈಗಾಗಲೇ ಹೇಳಿದ್ದೇನೆ. ಸರ್ಕಾರ ನಡೆಸುವ ಪಕ್ಷದಲ್ಲೇ ಈ ಬಗ್ಗೆ ಸಹಮತ ಇಲ್ಲ. ಅವರೇ ಗೊಂದಲದಲ್ಲಿ ಇದ್ದರೆ ಪರಿಸ್ಥಿತಿ ಹೇಗೆ ನಿಭಾಯಿಸುತ್ತಾರೆ? ನೈಟ್ ಕರ್ಫ್ಯೂ ಬಗ್ಗೆ ಬಿಜೆಪಿಯ ಪ್ರಮುಖರೇ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

    ಸರ್ಕಾರ ದಾರಿ ತಪ್ಪಿಸುತ್ತಿದೆ:
    ದೇಶದಲ್ಲಿ ಹಸಿವಿನಿಂದ ಯಾರೂ ಸತ್ತಿಲ್ಲ ಎಂದು ಕೇಂದ್ರ ಸರ್ಕಾರ ಕೋರ್ಟ್ ಮುಂದೆ ನಿನ್ನೆ ಹೇಳಿದೆ. ಎರಡು ಹೊತ್ತಿನ ಊಟ ಇಲ್ಲದೆ ಸಾಯುವವರೂ ಇದ್ದಾರೆ. ಜನ ಎಷ್ಟು ಕಷ್ಟದಲ್ಲಿ ಇದ್ದಾರೆ ಎನ್ನುವುದನ್ನು ಸರ್ಕಾರ ನೋಡಬೇಕು. ಸೋಂಕಿನ ಕಾರಣದಿಂದ ಜನ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನಿಜ ಸ್ಥಿತಿ ಹೀಗಿರುವಾಗ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಪಪ್ರಚಾರ ಮಾಡದೇ ಇದ್ದಿದ್ದರೆ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು: ಬಿಜೆಪಿ ತಿರುಗೇಟು

    ಜನರಿಗೆ ಸಂಕಷ್ಟದ ಕಾಲದಲ್ಲಿ ಸಹಾಯಕ್ಕೆ ನಿಲ್ಲುವುದು ಎಲ್ಲ ಸರ್ಕಾರಗಳ ಜವಾಬ್ದಾರಿ. ಸಣ್ಣ ರೈತರಿಗೆ ಮಾರಾಟ ವ್ಯವಸ್ಥೆ, ಬೀದಿಬದಿ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡಬೇಕು. ವಿರೋಧ ಪಕ್ಷಗಳು ಹೇಳುತ್ತವೆ ಎಂದು ಸರ್ಕಾರ ಮಾಡದೇ ಇರಬಾರದು. ಜನರ ಕಷ್ಟಕ್ಕೆ ಮಿಡಿಯದಿದ್ದರೆ ಸರ್ಕಾರ ಇರುವುದು ಏತಕ್ಕೆ ಎಂದು ಖಾರವಾಗಿ ಪ್ರಶ್ನಿಸಿದರು.

    ಒಂದು ಕಡೆ ಸೋಂಕನ್ನು ನಿಯಂತ್ರಣ ಮಾಡಬೇಕು. ಅದರ ಜೊತೆಯಲ್ಲೇ ಜನರ ಸಮಸ್ಯೆ ನಿವಾರಣೆಗೆ ಆದ್ಯತೆ ಕೊಡಬೇಕು. ಜೀವ ಉಳಿಯಬೇಕು, ಜೀವನವೂ ನಡೆಯಬೇಕು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಣ್ಣ ಸಣ್ಣ ಕೆಲಸ ಮಾಡಿ ಜನರು ಜೀವನ ನಡೆಸುತ್ತಿದ್ದಾರೆ. ಅವರಿಗೆ ತೊಂದರೆ ಆಗುತ್ತದೆ ಎಂಬುದನ್ನು ಸರ್ಕಾರ ಗಮನಿಸಬೇಕು. ತಜ್ಞರ ವರದಿ ಹಾಗೂ ಪರ-ವಿರೋಧಗಳನ್ನು ನೋಡಬೇಕಾಗುತ್ತದೆ. ಇದನ್ನೆಲ್ಲ ತಿಳಿದುಕೊಂಡು ರಾಜ್ಯ ಸರ್ಕಾರ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.

    ಫೆಬ್ರವರಿಯಲ್ಲಿ ಜನರಿಗೆ ಜಲಧಾರೆ ಮಾಹಿತಿ:
    ಕೋವಿಡ್ ಕಾರಣದಿಂದ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸೋಂಕಿನ ಪರಿಸ್ಥಿತಿಯನ್ನು ನೋಡಿಕೊಂಡು ಜಲಧಾರೆಯ ಹೊಸ ವೇಳಾಪಟ್ಟಿಯನ್ನು ಪ್ರಕಟ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನಲ್ಲ: ಕೆ.ಎಸ್ ಈಶ್ವರಪ್ಪ

    ಪಕ್ಷದಲ್ಲಿ ಕೆಲವು ಪ್ರಮುಖರ ಸಭೆ ಕರೆದಿದ್ದೇನೆ. ಪಕ್ಷ ಸಂಘಟನೆ ಕುರಿತು ಸಭೆ ನಡೆಯಲಿದೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದರು. ಜಲಧಾರೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಜಲಧಾರೆಯ ಕಳಶ ವಾಹನ, ಯಾವ ಮಾರ್ಗ, ಜಲ ಸಂಗ್ರಹ ಇತ್ಯಾದಿ ಅಂಶಗಳ ಬಗ್ಗೆ ಮುಖಂಡರಿಗೆ ಮಾಹಿತಿ ನೀಡಿದ್ದೇವೆ. ಕೆಲ ಜಿಲ್ಲೆಗಳ ಮುಖಂಡರು ಗಂಗಾ ರಥಗಳು ಹೆಚ್ಚು ಸಮಯ ತಮ್ಮ ಭಾಗದಲ್ಲಿ ಸಂಚಾರ ಮಾಡಬೇಕು ಎಂದು ಕೇಳಿದ್ದಾರೆ. ಆ ಬಗ್ಗೆ ಕೂಡ ಚರ್ಚೆ ಮಾಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

    ಮನೆ ಬಾಗಿಲಿಗೆ ಜಲಧಾರೆ ಮಾಹಿತಿ:
    ಜಲಧಾರೆ ಕಾರ್ಯಕ್ರಮವನ್ನು ನಮ್ಮ ಪಕ್ಷ ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದೆ. ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಫೆಬ್ರವರಿ ಮೊದಲ ವಾರದಿಂದ ಜಲಧಾರೆ ಮಾಹಿತಿ ಜನರ ಮುಂದೆ ಇಡುತ್ತೇವೆ. ಹ್ಯಾಂಡ್ ಬಿಲ್‌ಗಳನ್ನು ನೀಡಲಾಗುತ್ತದೆ. ಜತೆಗೆ ಬೇರೆ ಬೇರೆ ನಮೂನೆಗಳಲ್ಲಿ ಮಾಹಿತಿ ಕೊಡುತ್ತೇವೆ. ಜನರ ವಿಶ್ವಾಸಗಳಿಸಿ ಅವರ ಬೆಂಬಲದೊಂದಿಗೆ ಜಲಧಾರೆ ಕಾರ್ಯಕ್ರಮ ಮಾಡುತ್ತೇವೆ ಎಂದರು.

  • ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

    ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

    ಬೆಂಗಳೂರು: ತುರ್ತು ಚಿಕಿತ್ಸೆ ಅಗತ್ಯವಿರುವವರು ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ಸೂಚನೆ ನೀಡಿದೆ.

    ಹೊರರೋಗಿಗಳು, ತಪಾಸಣೆಗಾಗಿ ಆಸ್ಪತ್ರೆಗೆ ಹೋಗುವವರು, ದಂತ ಚಿಕಿತ್ಸೆ ಪಡೆಯುವವರು ಸೇರಿದಂತೆ ಇನ್ನಿತರ ರೋಗಿಗಳು ಎರಡು ವಾರಗಳ ಕಾಲ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಇಂದು 32,793 ಕೇಸ್ – ಬೆಂಗಳೂರಿನಲ್ಲಿ 129 ಸಾವಿರ ಸಕ್ರಿಯ ಪ್ರಕರಣ

    ಆಸ್ಪತ್ರೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಈ ಆದೇಶ ಹೊರಡಿಸಲಾಗಿದೆ. ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಎಚ್ಚರಿಕೆಯ ಸೂಚನೆ ರವಾನೆಯಾಗಿದೆ.

    ಕೋವಿಡ್‌ ಮೂರನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಜಮಾಯಿಸುತ್ತಿದ್ದಾರೆ. ಇದರಿಂದ ಸೋಂಕು ಮತ್ತಷ್ಟು ಹರಡಬಹುದು. ಅಲ್ಲದೇ ಕೋವಿಡ್‌ನಿಂದ ಗಂಭೀರ ಸ್ವರೂಪದಲ್ಲಿರುವವರಿಗೆ ಚಿಕಿತ್ಸೆ ನೀಡಲು ತೊಂದರೆಯಾಗಬಹುದು ಎಂಬ ಕಾರಣಕ್ಕೆ ಸರ್ಕಾರ ಈ ಆದೇಶ ಹೊರಡಿಸಿದೆ. ಇದನ್ನೂ ಓದಿ: ಒಂದೇ ರೆಸಾರ್ಟ್‌ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

  • ರಾಜ್ಯದಲ್ಲಿ ಇಂದು 889 ಮಂದಿಗೆ ಕೊರೊನಾ – 14 ಸಾವು

    ರಾಜ್ಯದಲ್ಲಿ ಇಂದು 889 ಮಂದಿಗೆ ಕೊರೊನಾ – 14 ಸಾವು

    ಬೆಂಗಳೂರು: ರಾಜ್ಯದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆ ಆಗ್ತಿದೆ. ಒಂದು ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾದ್ರೆ, ಇನ್ನೊಮದು ದಿನ ಸಾವಿರದ ಒಳಗಡೆ ಕೇಸ್ ಪತ್ತೆಯಾಗುತ್ತವೆ. ಇಂದು ರಾಜ್ಯದಲ್ಲಿ 889 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಜೊತೆಗೆ ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೇಸ್ ಏರಿಳಿಕೆಯಿಂದ ಮತ್ತೆ ಕೊರೊನಾ ಏರಿಕೆ ಆಗುತ್ತಾ ಎಂಬ ಆತಂಕ ಶುರುವಾಗಿದೆ.

    ಬೆಂಗಳೂರಿನಲ್ಲಿ 263 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 06 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೇಸ್ ಮತ್ತೆ ಸಾವಿನ ಪ್ರಮಾಣ ಕಂಟ್ರೋಲ್ ನಲ್ಲಿ ಇದೆ. ಇನ್ನೂ ರಾಜ್ಯದ ಪಾಸಿಟಿವಿಟಿ ರೇಟ್ ಶೇ.0.63 ಇದೆ. ಕಳೆದ ಒಂದೂವರೆ ತಿಂಗಳಿನಿಂದ ಪಾಸಿಟಿವಿಟಿ ರೇಟ್ ಶೇ.1 ಒಳಗಡೆ ಇದೆ. ಇದನ್ನೂ ಓದಿ: ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ: ಶೋಭಾ

    ರಾಜ್ಯದಲ್ಲಿ ಇಂದು 1080 ಜನ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ 222 ಜನ ಡಿಸ್ಚಾರ್ಜ್ ಆಗಿದ್ದು, ರಾಜ್ಯದ ಆಕ್ಟೀವ್ ಕೇಸ್ ಸಂಖ್ಯೆ 15,755ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಆ್ಯಕ್ಟೀವ್ ಕೇಸ್ ಗಳ ಸಂಖ್ಯೆ 7,491 ಕ್ಕೆ ಏರಿಕೆಯಾಗಿದೆ. ಜೊತೆಗೆ 1.38920 ಟೆಸ್ಟ್ ಆಗಿ 889 ಕೇಸ್ ದಾಖಲಾಗಿರುವುದು ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ನಲ್ಲಿ ಇದೆ. ಇದನ್ನೂ ಓದಿ:  ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 9, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 263, ಬೀದರ್ 2, ಚಾಮರಾಜನಗರ 10, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 25, ಚಿತ್ರದುರ್ಗ 11, ದಕ್ಷಿಣ ಕನ್ನಡ 133, ದಾವಣಗೆರೆ 8, ಧಾರವಾಡ 7, ಗದಗ 1, ಹಾಸನ 40, ಹಾವೇರಿ 0, ಕಲಬುರಗಿ 4, ಕೊಡಗು 45, ಕೋಲಾರ 19, ಕೊಪ್ಪಳ 0, ಮಂಡ್ಯ 18, ಮೈಸೂರು 74, ರಾಯಚೂರು 1, ರಾಮನಗರ 3, ಶಿವಮೊಗ್ಗ 37, ತುಮಕೂರು 27, ಉಡುಪಿ 86, ಉತ್ತರ ಕನ್ನಡ 44, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.