Tag: karnataka corona report

  • ಇಂದು 738 ಪಾಸಿಟಿವ್ ಕೇಸ್; ಬೆಂಗಳೂರಿನಲ್ಲೇ 698 ಮಂದಿಗೆ ಸೋಂಕು

    ಇಂದು 738 ಪಾಸಿಟಿವ್ ಕೇಸ್; ಬೆಂಗಳೂರಿನಲ್ಲೇ 698 ಮಂದಿಗೆ ಸೋಂಕು

    ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಒಟ್ಟು 738 ಪಾಸಿಟಿವ್ ಕೇಸ್ ವರದಿಯಾಗಿದೆ. ಇಂದು 646 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಇಂದು ನಗರವೊಂದರಲ್ಲೇ 698 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,819ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ರಾಜ್ಯದಲ್ಲಿ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,071 ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.76 ಇದ್ದು, ಮೃತರ ಪ್ರಮಾಣ ಶೇ.0.00 ಇದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5020ಕ್ಕೆ ಏರಿದೆ.

    ಈವರೆಗೆ ರಾಜ್ಯದಲ್ಲಿ ಒಟ್ಟು 39,62,099 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,16,966 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 36,093 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

    ಒಟ್ಟು 19,624 ಸ್ಯಾಂಪಲ್ (ಆರ್‌ಟಿಪಿಸಿಆರ್ 12,876 + 6,748 ರ್‍ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ನಗರ ಒಂದರಲ್ಲೇ 698 ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ತಲಾ 13, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ತಲಾ 3, ದಾವಣಗೆರೆ ಮತ್ತು ಕೋಲಾರದಲ್ಲಿ ತಲಾ 1 ಹಾಗೂ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

    Live Tv

  • ರಾಜ್ಯದಲ್ಲಿಂದು 41,400 ಹೊಸ ಪ್ರಕರಣ: ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

    ರಾಜ್ಯದಲ್ಲಿಂದು 41,400 ಹೊಸ ಪ್ರಕರಣ: ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆಯ ಏರಿಳಿತ ಆಗುತ್ತಿದೆ. ಇಂದು 41,400 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದೇ ಮೊದಲ ಬಾರಿಗೆ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾಗಿ ಡಿಸ್ಚಾರ್ಜ್‌ ಆದವರ ಸಂಖ್ಯೆಯೇ ಹೆಚ್ಚಾಗಿದೆ.

    ಈ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ. ಇಂದು 53,093 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 3,50,742 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿಂದು 52 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಮಾನಸಿಕ ಆರೋಗ್ಯದ ತಪಾಸಣೆ ಅಗತ್ಯ: ಸುಧಾಕರ್

    ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ 19,105 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 19 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ನಗರದಲ್ಲಿ 212 ಸಾವಿರ ಸಕ್ರಿಯ ಪ್ರಕರಣಗಳಿವೆ ಎಂದು ಟ್ವಿಟ್ಟರ್‌ನಲ್ಲಿ ವಿವರಿಸಿದ್ದಾರೆ.

    ರಾಜ್ಯದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.26.70 ಇದೆ. ಕಳೆದ 24 ಗಂಟೆಗಳಲ್ಲಿ 1,55,054 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 402, ಬಳ್ಳಾರಿ 775, ಬೆಳಗಾವಿ 977, ಬೆಂಗಳೂರು ಗ್ರಾಮಾಂತರ 958, ಬೆಂಗಳೂರು ನಗರ 19,105, ಬೀದರ್ 403, ಚಾಮರಾಜನಗರ 589, ಚಿಕ್ಕಬಳ್ಳಾಪುರ 915, ಚಿಕ್ಕಮಗಳೂರು 244, ಚಿತ್ರದುರ್ಗ 649, ದಕ್ಷಿಣ ಕನ್ನಡ 667, ದಾವಣಗೆರೆ 403, ಧಾರವಾಡ 1,511, ಗದಗ 168, ಹಾಸನ 1,381, ಹಾವೇರಿ 164, ಕಲಬುರಗಿ 573, ಕೊಡಗು 389, ಕೋಲಾರ 2,185, ಕೊಪ್ಪಳ 310, ಮಂಡ್ಯ 1,495, ಮೈಸೂರು 1,494, ರಾಯಚೂರು 214, ರಾಮನಗರ 242, ಶಿವಮೊಗ್ಗ 494, ತುಮಕೂರು 2,026, ಉಡುಪಿ 1,202, ಉತ್ತರ ಕನ್ನಡ 1,007, ವಿಜಯಪುರ 333 ಮತ್ತು ಯಾದಗಿರಿಯಲ್ಲಿ 125 ಪಾಸಿಟಿವ್ ಪ್ರಕರಣ ದಾಖಲಾಗಿದೆ.