Tag: Karnataka Drought

  • ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರದ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ (Karnataka govt) ಸಲ್ಲಿಸಿದ ವರದಿ ಪ್ರಕಾರ, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ (ಕೃಷಿ ಹಾಗೂ ತೋಟಗಾರಿಕಾ ಬೆಳೆ) ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಅಷ್ಟೇ ಅಲ್ಲ ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿಯೂ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 18% ಕಡಿಮೆ ಮಳೆಯಾಗಿದೆ. 2015ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್

    ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಮೂರು ಬಾರಿ ಪತ್ರ ಬರೆದಿದ್ದರು, ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗೆ ಮಾಡುವ ಮನಸ್ಸು ಮಾಡಿಲ್ಲ. ಆದ್ದರಿಂದ ಪರಿಹಾರ ಬಿಡುಗಡೆಗೆ ಕಟ್ಟಿನಿಟ್ಟಿನ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

  • ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ‘ಬರ ಪರಿಹಾರ’ ಅಸ್ತ್ರ ಪ್ರಯೋಗಿಸಿದೆ. ಮುಂಗಾರು ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ನೀರಿಗೂ ಹಾಹಾಕಾರ ಶುರುವಾಗಿದೆ. ಡೋಲಾಯಮಾನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿತು. ಆದರೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದೆ. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ (ರಿಟ್ ಅರ್ಜಿ) ಮೊರೆ ಹೋಗಿದೆ. ಈ ಬೆಳವಣಿಗೆ ರಾಜ್ಯದ ಆಡಳಿತ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಬರಬೇಕಿದೆ. ಪರಿಹಾರವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿದೇರ್ಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

    ಕೇಂದ್ರಕ್ಕೆ ಕಾನೂನು ಸವಾಲು!
    ಬಿರು ಬೇಸಿಗೆಯಿಂದ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗಿದೆ. ವಿವಿಧ ಜಿಲ್ಲೆಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬೇರೆ ದಾರಿಯಿಲ್ಲ. ಎನ್‌ಡಿಆರ್‌ಎಫ್ ಅಡಿಯಲ್ಲಿ ಹಕ್ಕು ಪಡೆಯಲು ಸರ್ಕಾರ ಕಳೆದ 5 ತಿಂಗಳಿಂದ ಕಾಯುತ್ತಿದೆ ಎಂದು ತಿಳಿಸಿದ್ದಾರೆ. ಪರಿಹಾರಕ್ಕಾಗಿ ಕೇಂದ್ರಕ್ಕೆ ಕಾನೂನು ಸವಾಲು ಹಾಕಿರುವ ರಾಜ್ಯ ಸರ್ಕಾರವನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತರಾಟೆಗೆ ತೆಗೆದುಕೊಂಡಿವೆ.

    ಆರ್ಥಿಕ ಕಾರಣಗಳಿಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಕಳೆದ ತಿಂಗಳು ತೆರಿಗೆ ಮತ್ತು ಇತರೆ ಅನುದಾನ ಹಂಚಿಕೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಸಿಎಂ ಮತ್ತು ಅವರ ಸಚಿವ ಸಂಪುಟ ‘ದೆಹಲಿ ಚಲೋ’ ನಡೆಸಿತ್ತು.

    ಪ್ರಸ್ತುತ ಕರ್ನಾಟಕದಲ್ಲಿ ಬರ ಮತ್ತು ನೀರಿನ ಕೊರತೆ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿ ಪ್ರಕಾರ, 236 ರ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023 ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಶೇ.18 ರಷ್ಟು ಕಡಿಮೆ ಮಳೆಯಾಗಿದೆ. 2015 ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ.

    ಕರ್ನಾಟಕ ಎಷ್ಟು ಪರಿಹಾರ ಕೇಳಿದೆ?
    ರಾಜ್ಯವು ಬರಗಾಲದಿಂದ 35,162.05 ಕೋಟಿ ರೂ. ಬೆಳೆ ನಷ್ಟವನ್ನು ಅಂದಾಜಿಸಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರದಿAದ 18,171 ಕೋಟಿ ರೂ. ಪರಿಹಾರ ಕೇಳಿದೆ. ಇದರಲ್ಲಿ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗೆ 4,663.12 ಕೋಟಿ ರೂ., ಜೀವನೋಪಾಯಕ್ಕೆ ತೊಂದರೆಯಾದ ಕುಟುಂಬಗಳಿಗೆ ಅನಪೇಕ್ಷಿತ ಪರಿಹಾರಕ್ಕಾಗಿ 12,577.9 ಕೋಟಿ ರೂ., ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 566.78 ಕೋಟಿ ರೂ., ಜಾನುವಾರುಗಳ ಆರೈಕೆಗಾಗಿ 363.68 ಕೋಟಿ ರೂ. ಸೇರಿದೆ.

    ರಾಜ್ಯದ 33 ಲಕ್ಷ ರೈತರಿಗೆ ಮಧ್ಯಂತರ ಪರಿಹಾರವಾಗಿ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಕರ್ನಾಟಕ ಸರ್ಕಾರ ತನ್ನ ಖಜಾನೆಯಿಂದ 650 ಕೋಟಿ ರೂ. ಬಿಡುಗಡೆ ಮಾಡಿದೆ. ಜೊತೆಗೆ ಮೇವಿಗೆ 450 ಕೋಟಿ ಹಾಗೂ ಕುಡಿಯುವ ನೀರಿಗೆ 870 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪರಿಹಾರ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗಾಗಿ ಕೇಳಿರುವ 4,663 ಕೋಟಿ ರೂ. ಅನ್ನು ನಿಯಮಾನುಸಾರ ವಿಳಂಬವಿಲ್ಲದೇ ಬಿಡುಗಡೆ ಮಾಡಬೇಕಿತ್ತು. ಆದರೂ ಐದು ತಿಂಗಳು ಕಳೆದರೂ ರಾಜ್ಯಕ್ಕೆ ಯಾವುದೇ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ.

    ರಿಟ್ ಅರ್ಜಿ ಏನು ಹೇಳುತ್ತೆ?
    ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಜ್ಯಕ್ಕೆ ತನ್ನ ಬಾಧ್ಯತೆಯಾಗಿರುವ ಹಣಕಾಸಿನ ನೆರವನ್ನು ಕೇಂದ್ರವು ನೀಡಬೇಕು. ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಪರಿಹಾರ ಕೋರುತ್ತದೆ. ಇದು ಸಾಂವಿಧಾನಿಕ ಪರಿಹಾರಕ್ಕೆ ಸಂಬಂಧಿಸಿದೆ. ನಾಗರಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದೆನಿಸಿದರೆ ಅವರು, ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು.

    ಐಎಂಸಿಟಿ ವರದಿಯ ಮೇಲೆ ಕಾರ್ಯನಿರ್ವಹಿಸಲು ಮತ್ತು ಹಣಕಾಸಿನ ನೆರವನ್ನು ಒದಗಿಸಲು ಅಂತಿಮ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬವಾಗಿದೆ. ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಅದರ ನಾಗರಿಕರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಸರ್ಕಾರ ವಾದಿಸಿದೆ.

    ಭಾರತದ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಯೋಜನೆ ಹೇಗೆ?
    ರಾಜ್ಯಗಳು ರಾಜ್ಯ ವಿಪತ್ತು ಪರಿಹಾರ ನಿಧಿಗಳನ್ನು ಹೊಂದಿವೆ. ಕೇಂದ್ರವು 75% ನಿಧಿಯನ್ನು (ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳಿಗೆ 90%) ಮತ್ತು ರಾಜ್ಯಗಳು ಉಳಿದ ಹಣವನ್ನು ನೀಡುತ್ತವೆ. ಒಟ್ಟು ಮೊತ್ತವನ್ನು ಬಜೆಟ್ ಹಂಚಿಕೆಯ ಭಾಗವಾಗಿ ನಿರ್ಧರಿಸಲಾಗುತ್ತದೆ. ಕೇಂದ್ರವು ನಿಯತಕಾಲಿಕವಾಗಿ ಬಿಡುಗಡೆ ಮಾಡುತ್ತದೆ.

    ಕೇಂದ್ರದ ನೆರವು ಅಗತ್ಯವಿದ್ದರಾ ರಾಜ್ಯ ಏನು ಮಾಡಬೇಕು?
    ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಿದ್ದರೆ, ಅದು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು.
    1) ಜ್ಞಾಪಕ ಪತ್ರದಲ್ಲಿ ಹಾನಿಯ ಪ್ರಮಾಣವನ್ನು ವಿವರಿಸಬೇಕು. ನಂತರ ಅದನ್ನು ಸಲ್ಲಿಸಬೇಕು.
    2) ಇದನ್ನು ಕೇಂದ್ರವು ಒಪ್ಪಿಕೊಂಡರೆ, ಐಎಂಸಿಟಿ ಸ್ಥಳ ಪರಿಶೀಲನೆ ಕೈಗೊಂಡು ಹಾನಿಯ ಸಮೀಕ್ಷೆ ನಡೆಸುತ್ತದೆ.
    3) ರಾಷ್ಟ್ರೀಯ ಕಾರ್ಯಕಾರಿ ತಂಡವು ಐಎಂಸಿಟಿ ವರದಿಯನ್ನು ವಿಶ್ಲೇಷಿಸುತ್ತದೆ.
    4) ಅದರ ಶಿಫಾರಸುಗಳ ಆಧಾರದ ಮೇಲೆ ಉನ್ನತಮಟ್ಟದ ಸಮಿತಿಯು ತಕ್ಷಣದ ಪರಿಹಾರ ಬಿಡುಗಡೆಯನ್ನು ಅನುಮೋದಿಸುತ್ತದೆ.

    ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದ್ಯಾಕೆ?
    2023ರ ಸೆಪ್ಟೆಂಬರ್ ಮತ್ತು ನವೆಂಬರ್ ಸಂದರ್ಭದಲ್ಲಿ 3 ಜ್ಞಾಪಕ ಪತ್ರಗಳೊಂದಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ಸಂಪರ್ಕಿಸಿತು. ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಡಿ.20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೂ ಯಾವುದೇ ಫಲ ಸಿಗಲಿಲ್ಲ. ಈಗ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾನೂನು ಮಾರ್ಗ ಹಿಡಿದಿದ್ದಾರೆ. ರಾಜ್ಯಕ್ಕೆ ಒಂದು ಪೈಸೆ ಕೂಡ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

    ವಿಪಕ್ಷಗಳು ಏನು ಹೇಳುತ್ತಿವೆ?
    ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯ ಭಾಗವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ನಡೆಗೆ (ದೆಹಲಿ ಚಲೋ ಪ್ರತಿಭಟನೆ) ಟೀಕೆ ವ್ಯಕ್ತಪಡಿಸಿದ್ದಾರೆ.

  • ರಾಜ್ಯದಲ್ಲಿ ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

    ರಾಜ್ಯದಲ್ಲಿ ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಬರ (Karnataka Drought) ಘೋಷಣೆ ಮಾಡುವ ಸಂಬಂಧ‌ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ ಸರ್ಕಾರವು (Karnataka Govt) ಕೇಂದ್ರಕ್ಕೆ ಪತ್ರ ಬರೆದಿದೆ.

    ಮಳೆ ಕೊರತೆಯಿಂದ ಹಲವು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳ ಬರ ಘೋಷಣೆಗೆ ಈಗಿರುವ ನಿಯಮಗಳು ಅಡ್ಡಿಯಾಗಿವೆ. ಹಾಗಾಗಿ ಬರ ಘೋಷಣೆಯ ಮಾನದಂಡಗಳನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರವನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗಷ್ಟೇ ಗಂಡಸ್ತನ ಮೀಸೆ ಇರೋದಲ್ಲ, ಹಿಂದೂ ಹುಡುಗರಿಗೂ ಇದೆ: ಸ್ವಾಮೀಜಿಯಿಂದ ವಿವಾದಾತ್ಮಕ ಹೇಳಿಕೆ

    ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ರಿಗೆ ಬರೆದಿರುವ ಈ ಪತ್ರದಲ್ಲಿ, ಈಗಿನ ನಿಯಮಗಳ ಪ್ರಕಾರ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿದರೆ ರೈತರು ಬೆಳೆ ವೈಫಲ್ಯದ ಸಂದರ್ಭದಲ್ಲಿ ಇನ್‌ಪುಟ್ ಸಬ್ಸಿಡಿಗಳನ್ನು ಕಳೆದುಕೊಳ್ಳುತ್ತಾರೆ. ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದಕ್ಕೆ ಕೇಂದ್ರ ಸರ್ಕಾರವು ಕೆಲವು ಕಠಿಣ ಮಾನದಂಡ ವಿಧಿಸಿದೆ. ಶೇ.60ರಷ್ಟು ಮಳೆ ಕೊರತೆ ಇರಬೇಕು. ಮೂರು ವಾರ ಮಳೆ ಇರಬಾರದೆಂಬ ನಿಯಮವಿದೆ. ಈಗ ಎಲ್ಲೂ ಶೇ.60 ಮಳೆ ಕೊರತೆ ಆಗಿಲ್ಲ. ಹೀಗಾಗಿ ಮಾನದಂಡ ಮರುಪರಿಶೀಲನೆಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

    ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ಕರ್ನಾಟಕದಲ್ಲಿ 336 ಮಿ.ಮೀ ಸಾಮಾನ್ಯ ಮಳೆಯಾಗಬೇಕಿತ್ತು. ಆದರೆ 234 ಮಿ.ಮೀ ಮಳೆ ಬಿದ್ದಿದೆ. ದುರ್ಬಲ ಮಾನ್ಸೂನ್‌ನಿಂದ ಜೂನ್‌ನಲ್ಲಿ ಶೇ.56ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಹಲವಾರು ತಾಲ್ಲೂಕುಗಳಲ್ಲಿ ಬರಗಾಲದ ಪರಿಸ್ಥಿತಿ ಇದೆ. ಆದರೆ ಬರ ಘೋಷಿಸಲು ಈಗ ಇರುವ ನಿಯಮಾವಳಿಗಳಂತೆ ಆಗುತ್ತಿಲ್ಲ. ಹಾಗಾಗಿ, ಬರ ಘೋಷಣೆಯ ಮಾನದಂಡಗಳನ್ನು ಬದಲಿಸಲು ಮಧ್ಯಪ್ರವೇಶಿಸಬೇಕು ಎಂದು ಅವರು ಕೇಂದ್ರದ ಕೃಷಿ ಸಚಿವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಮಾನದಂಡಗಳನ್ನು ಬಿಗಿ ಮಾಡಿರುವುದರಿಂದ ರಾಜ್ಯದ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಪತ್ರದಲ್ಲಿ ವಿವರಿದ್ದಾರೆ. ಇದನ್ನೂ ಓದಿ: ನಾನು ಕಾಂಗ್ರೆಸ್‌ ಕಾರ್ಯಕರ್ತನಾಗಿ ಮೇಲೆ ಬಂದವನು, JDS ಕಚೇರಿಯಲ್ಲೇ ಕಾಂಗ್ರೆಸ್ ನನ್ನ ತಾಯಿ ಅಂದಿದ್ದೇನೆ: ವಿಶ್ವನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]