ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಹಾಗೂ 4 ಮಂದಿ ಪಕ್ಷೇತರರು ಶಾಸಕರಾಗಿ ಆಯ್ಕೆಯಾಗಿದ್ದಾರೆ. 224 ವಿಧಾನಸಭಾ ಕ್ಷೇತ್ರಗಳ ಜಿಲ್ಲಾವಾರು ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Result 2023) ಯಲ್ಲಿ ಕಾಂಗ್ರೆಸ್ ಜಯಬೇರಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‍ನಿಂದ ಹನುಮಾನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜನತೆಯ ಒಳಿಗಾಗಿ ಪ್ಯಾಲೇಸ್ ರಸ್ತೆಯ ಬಾಲಬೃಹಿ ಬಳಿ ಇರುವ ಹನುಮಾನ್ (Hanuman) ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಜೈ ಭಜರಂಗ ಬಲಿ ಅಂತಾ ಘೋಷಣೆ ಕೂಗುತ್ತಾ ಕಾಂಗ್ರೆಸ್ (Congress) ಗೆ ಕಾರ್ಯಕರ್ತರು ಜೈಕಾರ ಹಾಕಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ರಸ್ತೆಗೆ ಸಗಣಿ ನೀರು ಹಾಕಿ ಸ್ವಚ್ಛ
ದೇವಸ್ಥಾನದ ಮುಂಭಾಗ ಗ್ಯಾಸ್ ಸಿಲಿಂಡರ್ (Gas Cylinder) ಜೋಡಿಸಿ ಪೂಜೆ ಸಲ್ಲಿಸಿದ್ದಾರೆ. ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಗ್ಯಾಸ್ ಸಿಲಿಂಡರ್ ಗೆ ಪೂಜೆ ಮಾಡಿದ್ದಾರೆ. ಗ್ಯಾಸ್ ರೇಟ್ ಜಾಸ್ತಿ ವಿರುದ್ಧ ಹೋರಾಟ ಮಾಡ್ತಾನೆ ಬರ್ತಿರೋ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಗೆದ್ದ ಮೇಲೂ ಬಿಡದೇ ಗ್ಯಾಸ್ ಸಿಲಿಂಡರ್ ಗೆ ಪೂಜೆ ಸಲ್ಲಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಉರುಳು ಸೇವೆಯನ್ನೂ ಮಾಡಿದ್ದಾರೆ.
ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಸ್ಪಷ್ಟ ಬಹುಮತ ಬಂದ ಹಿನ್ನಲೆ ವಿಶೇಷ ಪೂಜೆ ಸಲ್ಲಿಸಿದ್ದೇವೆ. ಪ್ರಧಾನಿ ಮೋದಿ ಭಜರಂಗಬಲಿ ಘೋಷಣೆ ಕೂಗಿದ್ರು. ನಾವು ರಾಜಕೀಯಕ್ಕೆ ದೇವರ ಹೆಸರು ಬಳಸಲ್ಲ. ನಾವು ದೇವರ ಹೆಸರು ದುರ್ಬಳಕೆ ಮಾಡಲ್ಲ. ಚುನಾವಣೆಗೆ ಮೊದಲೂ ನೆನೆಸಿಕೊಂಡಿದ್ದೆವು, ಈಗಲೂ ನೆನೆಸಿಕೊಳ್ತಿದ್ದೇವೆ. ಬಿಜೆಪಿ ತರಹ ಮರೆಯುವವರು ನಾವಲ್ಲ ಎಂದು ತಿಳಿಸಿದ್ದಾರೆ.
ಮಂಡ್ಯ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್.ಪಿ ಸ್ವರೂಪ್ (HP Swaroop) ಹಾಸನ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಬಳಿಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಕಾಲಭೈರವೇಶ್ವರನ ಸನ್ನಿಧಿಗೆ ಬಂದು ದರ್ಶನ ಪಡೆದಿದ್ದಾರೆ. ನಂತರ ನಿರ್ಮಲಾನಂದನಾಥ ಶ್ರೀಗಳ (Nirmalanandanatha Swamiji) ಆಶೀರ್ವಾದ ಪಡೆದಿದ್ದಾರೆ.
ಆದಿಚುಂಚನಗಿರಿಗೆ ಬಂದ ಸ್ವರೂಪ್ ಮೊದಲು ಕಾಲಭೈರವೇಶ್ವರನ ದರ್ಶನ ಪಡೆದು ಬಳಿಕ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ್ದಾರೆ. ತೀವ್ರ ಕೂತುಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಸ್ವರೂಪ್ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗರ ಆರಾಧ್ಯ ದೈವವಾಗಿರುವ ಕಾಲಭೈರವೇಶ್ವರಸ್ವಾಮಿಗೆ ಸ್ವರೂಪ್ ನಮಸ್ಕರಿಸಿದರು. ಇದನ್ನೂ ಓದಿ: ಹಾಸನದಲ್ಲಿ ಗೆಲುವು ಸಾಧಿಸಿದ ಸ್ವರೂಪ್ – ಕರೆ ಮಾಡಿ ಶುಭಾಶಯ ತಿಳಿಸಿದ ಹೆಚ್‌ಡಿಡಿ
ಬಳಿಕ ಮಾತನಾಡಿದ ಸ್ವರೂಪ್, ನಿಖಿಲ್ (Nikhil Kumaraswamy) ಅವರ ಸೋಲು ನನಗೆ ವೈಯಕ್ತಿಕವಾಗಿ ಬೇಸರವಾಗಿದೆ. ಅವರು ಸೋಲಬಾರದಿತ್ತು, ರಾಮನಗರದ ಬಗ್ಗೆ ನನಗೆ ಗೊತ್ತಿಲ್ಲ ಹೀಗಾಗಿ ನಿಖಿಲ್ ಅವರು ಏಕೆ ಸೋತರು ಅನ್ನೋದು ಅರ್ಥವಾಗುತ್ತಿಲ್ಲ. ನಾನು ಹಾಗೂ ನನ್ನ ಹಾಸನದ ಜನತೆ ನಿಖಿಲ್ ಅವರ ಜೊತೆಗೆ ಇರುತ್ತೇವೆ. ನಮ್ಮ ಪಕ್ಷದ ನಾಯಕರ ಶ್ರಮದಿಂದ ನಾನು ಗೆಲುವು ಸಾಧಿಸಿದ್ದೇನೆ. ಹಾಸನದ ಎಲ್ಲ ಕಾರ್ಯಕರ್ತರು ಶ್ರಮಿಸಿದ್ದಾರೆ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಪ್ರೀತಂ ಗೌಡಗೆ ಸೋಲು – ಜಿಲ್ಲೆಯಲ್ಲಿ 2 ಸ್ಥಾನ ಗೆದ್ದ ಬಿಜೆಪಿ
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ಭವಾನಿ ಅಕ್ಕ ನನ್ನನ್ನ 3ನೇ ಮಗ ಅಂದಿದ್ದಾರೆ. ಕುಮಾರಣ್ಣ, ರೇವಣ್ಣ ಎಲ್ಲರೂ ನನಗೆ ಸಹಕಾರ ನೀಡಿದ್ದಾರೆ. ಮುಂದೆ ಅವರ ಸಹಕಾರದಿಂದ ಉತ್ತಮ ಕೆಲಸ ಮಾಡುತ್ತೇನೆ. ನಾವು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿರಲಿಲ್ಲ. ಜೆಡಿಎಸ್ ಮತ ಜೆಡಿಎಸ್‌ಗೆ ಬಂದಿದೆ ಸೋಲಿನ ವಿಶ್ಲೇಷಣೆ ಮಾಡುವವರು ಒಪ್ಪಂದ ಹೇಳ್ತಾರೆ ಅಷ್ಟೇ ಎಂದು ಸ್ವರೂಪ್ ಎದುರಾಳಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು ನೀಡುವ ಮೂಲಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಸವಾಲೆಸೆದಿದ್ದಾರೆ.
ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ. ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ
ಫೇಸ್‌ಬುಕ್ ನಲ್ಲೇನಿದೆ..?: ಕಲಿಯುತ್ತೇವೆ, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಉತ್ತರಿಸುತ್ತೇವೆ. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು. ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ. ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಪ್ರಸಂಗ ನಡೆದಿದೆ.
ಶಿವಗಂಗಾ ಬಸವರಾಜ್ (Shivaganga Basavaraj) ಅವರು ಚನ್ನಗಿರಿಯ ಗಡಿಯಲ್ಲಿ ರಸ್ತೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಇವರು ಬಿಜೆಪಿ (BJP) ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದರು.
ಇದೇ ಮೊದಲ ಬಾರಿಗೆ ಚುನಾವಣೆಗೆ ನಿಂತು ಶಿವಗಂಗಾ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣ ತಲುಪುವ ದಾರಿಯಲ್ಲಿ ರಸ್ತೆ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ಬಳಿಕ ಕಾರ್ಯಕರ್ತರ ಜೊತೆ ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ 8ರಲ್ಲಿ 6 ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಹೀನಾಯ ಸೋಲು
ದಾವಣಗೆರೆ (Davanagere) ಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಪಡೆದುಕೊಂಡಿದ್ದು, ಕೇವಲ ಒಂದು ಕ್ಷೇತ್ರ ಮಾತ್ರ ಬಿಜೆಪಿ ಪಾಲಿಗೆ ಒದಗಿ ಬಂದಿದೆ.
ಬೆಂಗಳೂರು: ಚುನಾವಣೆ ಮುಗಿಯಿತು, ಕಾಂಗ್ರೆಸ್ ಗೆದ್ದಾಯ್ತು. ಈಗ ಸಿಎಂ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ.
ಹೌದು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆ ಹೈಕಮಾಂಡ್ ಒಗ್ಗಟ್ಟಿನ ಮಂತ್ರ ಪಠಿಸಿದೆ. ಭಾರತ್ ಜೋಡೋ ಯಾತ್ರೆ (Bharat Jodo Yatre) ವೇಳೆಯಲ್ಲೂ ರಾಹುಲ್ ಗಾಂಧಿಯವರು ಇಬ್ಬರ ಕೈ ಕೈ ಹಿಡಿಸಿದ್ದರು. ಚುನಾವಣೆ ಮುಗಿಯುವ ತನಕವೂ ಒಗ್ಗಟ್ಟು ಪ್ರದರ್ಶನ ಮಾಡಿರುವ ಡಿಕೆಶಿ, ಸಿದ್ದರಾಮಯ್ಯ (Siddaramaiah) ಚುನಾವಣೆ ದಿನವೂ ಒಟ್ಟಿಗೆ ಪೂಜೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಆದರೆ ಇದೀಗ ಅಧಿಕಾರ ಸಿಕ್ಕಾಯ್ತು, ಇಬ್ಬರೂ ಸಿಎಂ ಕುರ್ಚಿಯ ಕನಸು ಕಂಡಿದ್ದಾರೆ. ಇದರಲ್ಲಿ ಯಾರಾದ್ರೂ ಒಬ್ಬರು ತ್ಯಾಗ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇನ್ನೊಂದೆಡೆ ಇಬ್ಬರು ನಾಯಕರನ್ನ ಕೂರಿಸಿ 50:50 ಸೂತ್ರವನ್ನ ಹೈಕಮಾಂಡ್ ಮುಂದಿಡುವ ಸಾಧ್ಯತೆ ಇದ್ದು, ಆ ಸೂತ್ರದಲ್ಲಿ ಮೊದಲು ಸಿಎಂ ಆಗೋರು ಯಾರು..? ಯಾರು ಯಾರಿಗೆ ಸೀಟ್ ಬಿಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ
ಒಟ್ಟಿನಲ್ಲಿ ಸಿದ್ದರಾಮಯ್ಯ ವರ್ಸಸ್ ಡಿಕೆಶಿ (DK Shivakumar) ಇಬ್ಬರಿಗೆ ಯಾರಿಗೆ ಲಕ್ ಎನ್ನುವುದು ಇಂದು ಬಯಲಾಗುವ ಸಾಧ್ಯತೆಗಳಿವೆ. ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ. ಆದರೆ ಈ ಸಭೆ ಅನೌಪಚಾರಿಕ ಸಭೆಯೋ ಅಥವಾ ಸಿಎಂ ಆಯ್ಕೆ ಸಭೆಯೋ ಎನ್ನುವುದು ಸ್ಪಷ್ಟವಾಗಿಲ್ಲ. ಅಪ್ಪ ಸಿದ್ದರಾಮಯ್ಯ ಪರ ಮಗ ಯತೀಂದ್ರ ಬ್ಯಾಟಿಂಗ್ ಮಾಡಿದ್ದಾರೆ. ತನ್ನ ತಂದೆ ಸಿದ್ಧಾಂತದ ರಾಜಕಾರಣಿ, ಅವರು ಸಿಎಂ ಆಗಬೇಕು. ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಜನರ ಇಚ್ಚೆ ಅಂದರೆ ಇತ್ತ ಅಣ್ಣನ ಪರ ಸಂಸದ ಡಿ.ಕೆ ಸುರೇಶ್ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಶಾಸಕ ರಂಗನಾಥ್ ಕೂಡ ಡಿಕೆಶಿಯೇ ಸಿಎಂ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್‍ನಲ್ಲಿ 2013ರಲ್ಲೂ ಶಾಸಕರಿಂದಲೇ ಸಿಎಂ ಆಯ್ಕೆ ಮಾಡಲಾಗಿತ್ತು. ಅಂದು ಎ.ಕೆ.ಆಂಟನಿ ವೀಕ್ಷಕರಾಗಿ ಅವರ ಸಮ್ಮುಖದಲ್ಲಿ ಸಿಎಲ್‍ಪಿ ಸಭೆ ನಡೆದಿತ್ತು. ಹೈಕಮಾಂಡ್ ಸೂಚನೆ ಮೇರೆಗೆ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಆಯ್ಕೆ ಮಾಡಲಾಗಿತ್ತು. ಅದೇ ರೀತಿ ಈ ಬಾರಿಯೂ ಎಐಸಿಸಿ (AICC) ಯು ಶಾಸಕರ ಬಲಾಬಲದ ಮೇಲೆ ಸಿಎಂ ಆಯ್ಕೆ ಮಾಡುತ್ತಾ, ಇಲ್ಲ ಹೈಕಮಾಂಡ್ ಹೇಳಿದವರೇ ಸಿಎಂ ಅಂತಾ ಸಂದೇಶ ರವಾನಿಸುತ್ತಾ ಎಂಬ ಕುತೂಹಲ ಹುಟ್ಟಿದೆ.
ಬೆಂಗಳೂರು: ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರ (Jayanagar Constituency) ದಲ್ಲಿ ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವು ತನ್ನದಾಗಿಸಿಕೊಂಡಿದ್ದಾರೆ.
ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ. ಮೋಸ.. ಮೋಸ ಬಿಜೆಪಿ ಅಂತ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇನ್ನು ಕೌಂಟಿಂಗ್ ಸೆಂಟರ್ ಮುಂಭಾಗ ಸೌಮ್ಯಾ ರೆಡ್ಡಿ (Sowmya Reddy) ಕಣ್ಣೀರು ಹಾಕಿದ್ದಾರೆ. ಅಲ್ಲದೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ; 1 ಮತದ ಅಂತರದಿಂದ ಸೋತಿದ್ದ ಅಭ್ಯರ್ಥಿ 59 ಸಾವಿರ ದಾಖಲೆ ಮತಗಳಲ್ಲಿ ಗೆಲುವು
ರೀಕೌಂಟಿಂಗ್‍ನಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನೆಲೆಯಲ್ಲಿ ಜಯನಗರ ಕೌಂಟಿಂಗ್ ಸೆಂಟರ್ ಬಳಿ ಹೈಡ್ರಾಮಾ ನಡೆದಿತ್ತು. ಕೌಂಟಿಂಗ್ ಸೆಂಟರ್ ಬಳಿ ಡಿಕೆ ಬ್ರದರ್ಸ್ ಕೂಡ ದೌಡಾಯಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಾಂಗ್ರೆಸ್ ಮುಖಂಡರು ವಾಗ್ವಾದ ಕೂಡ ನಡೆಸಿದ್ದಾರೆ. ಗೇಟ್ ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.
1989 ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಯನಗರ, 2008, 2013 ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ಜಯನಗರ ಕ್ಷೇತ್ರಕ್ಕೆ ಸೌಮ್ಯರೆಡ್ಡಿ ಎಂಟ್ರಿ ಕೊಟ್ಟರು. ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. 2018 ಚುನಾವಣೆಯಲ್ಲಿ ಗೆದ್ದು, ಮತ್ತೆ 2023 ರ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಸೋಲು ಕಂಡರು.