ಚಾಮರಾಜನಗರ: ಧ್ರುವನಾರಾಯಣ ವಿರುದ್ಧ 1 ಮತದ ಅಂತರದಿಂದ ಸೋತ ಬಳಿಕ ನಿರಂತರವಾಗಿ ಸೋಲು ಅನುಭವಿಸಿದ್ದ ಎ.ಆರ್.ಕೃಷ್ಣಮೂರ್ತಿ ಅವರಿಗೆ ಕೊಳ್ಳೇಗಾಲದ ಮತದಾರ ಭರ್ಜರಿ ಗೆಲುವನ್ನೇ ಕೊಟ್ಟಿದ್ದಾನೆ.
ಹಾಲಿ ಬಿಜೆಪಿ (BJP)ಶಾಸಕ ಎನ್.ಮಹೇಶ್ ವಿರುದ್ಧ ಕಾಂಗ್ರೆಸ್ (Congress) ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ 59,519 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಿರಂತರ ಸೋಲಿಗೆ ಫುಲ್ ಸ್ಟಾಪ್ ಇಟ್ಟು ರಾಜಕೀಯದಲ್ಲಿ ಮತ್ತೇ ಮೇಲೆದ್ದಿದ್ದಾರೆ. ಈ ಗೆಲುವು ಅವರ ಒಂದು ಮತದಿಂದ ಸೋತ ನೋವನ್ನು ಮರೆಸಿದೆ. ಬಿಎಸ್‌ಪಿ (BSP) ಬೆಂಬಲ, ಅನುಕಂಪ, ಜೊತೆಗೆ ಮಹೇಶ್ ಅವರಿಗಿದ್ದ ವ್ಯಾಪಕ ವಿರೋಧ ಎ.ಆರ್.ಕೃಷ್ಣಮೂರ್ತಿಯವರಿಗೆ ಅನುಕೂಲವಾಗಿದೆ. ಇದು ಮತಪೆಟ್ಟಿಗೆಯಲ್ಲಿ ಕೆಲಸ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ
ಇದಕ್ಕೆ ಪ್ರತಿಕ್ರಿಯಿಸಿರುವ ಕೃಷ್ಣಮೂರ್ತಿಯವರು, ಒಂದು ಮತದ ಅಂತರದಿಂದ ಸೋತ ನನಗೆ ಅಂತರ ಮುಖ್ಯವಲ್ಲ, ಗೆಲುವು ಮುಖ್ಯವಾಗಿದೆ. ಈಗ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಈ ವಿಚಾರ ನನಗೆ ಖುಷಿ ತಂದಿದೆ. ಮತದಾರರು ನನಗೆ ಆಶಿರ್ವಾದ ಮಾಡಿದ್ದಾರೆ ಎಂದಿದ್ದಾರೆ.
ಅವರು 1,08,363 ಮತಗಳನ್ನು ಗಳಿಸಿದ್ದಾರೆ. ಎನ್ ಮಹೇಶ್ 48,844 ಮತಗಳನ್ನು ಗಳಿಸಿ ಸೋಲು ಕಂಡಿದ್ದಾರೆ. 2004ರ ಚುನಾವಣೆಯಲ್ಲಿ ಕೃಷ್ಣಮೂರ್ತಿಯವರು ಒಂದು ಮತದಿಂದ ಸೋತಿದ್ದರು. ಇದೀಗ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ 6ರಲ್ಲಿ ಜಯ – 2ರಲ್ಲಿ ಕಾಂಗ್ರೆಸ್ ಗೆಲುವು
ರಾಯಚೂರು: ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) 4 ಸ್ಥಾನ ಪಡೆದಿದೆ. ಬಿಜೆಪಿ (BJP) 2 ಹಾಗೂ ಜೆಡಿಎಸ್ (JDS) 1 ಸ್ಥಾನ ಗೆದ್ದುಕೊಂಡಿದೆ.
ರಾಯಚೂರು ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ದದ್ದಲ್ 89,140 ಮತಗಳಿಂದ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಹವಾಲ್ದಾರ್ 75,283 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಣ್ಣ ನರಸಿಂಹ ನಾಯಕ್ 4,127 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕೈ ಗೆಲುವಿನ ಅಂತರ 13,857 ಮತಗಳಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಕಾಂಗ್ರೆಸ್‍ಗೆ ಜಯ – ಜೆಡಿಎಸ್, ಬಿಜೆಪಿಗೆ ತಲಾ 2 ಸ್ಥಾನ
ರಾಯಚೂರು ನಗರದಲ್ಲಿ (Raichur) ಬಿಜೆಪಿ ಅಭ್ಯರ್ಥಿ ಡಾ.ಶಿವರಾಜ್ ಪಾಟೀಲ್ 69,655 ಮತಗಳನ್ನು ಪಡೆದು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೊಹಮದ್ ಶಾಲಂ 65,923 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ವಿನಯಕುಮಾರ್ 2780 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕಮಲದ ಗೆಲುವಿನ ಅಂತರ 3,732 ಮತಗಳಾಗಿವೆ.
ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಂಪಯ್ಯ ನಾಯಕ್ 66,922 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವಿ.ನಾಯಕ್ 59,203 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ವೆಂಕಟಪ್ಪ ನಾಯಕ್ 25,990 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 7,719 ಮತಗಳಾಗಿದೆ.
ಸಿಂಧನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಂಪನಗೌಡ ಬಾದರ್ಲಿ ಅವರು 73,645 ಮತಗಳಿಂದ ಗೆಲುವು ಸಾಧಿಸುವ ಮೂಲಕ 5 ನೇ ಬಾರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಕರಿಯಪ್ಪ 51,703 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ವೆಂಕಟರಾವ್ ನಾಡಗೌಡ 43,461 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 21,942 ಮತಗಳಾಗಿದೆ.
ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರು 79,566 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 66,513 ಮತಪಡೆದರೆ,ಜೆಡಿಎಸ್ ಅಭ್ಯರ್ಥಿ ರಾಘವೇಂದ್ರ ನಾಯಕ್ 1906 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಮತಗಳ ಅಂತರ 13,053 ಆಗಿದೆ.
ಲಿಂಗಸುಗೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ 58,769 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಎಸ್.ಹೂಲಗೇರಿ 55,969 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ ಸಿದ್ದು ಬಂಡಿ 41,322 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆದ್ದ ಅಭ್ಯರ್ಥಿಯ ಮತಗಳ ಅಂತರ 2,809 ಆಗಿದೆ.
ದೇವದುರ್ಗ ಜೆಡಿಎಸ್ ಅಭ್ಯರ್ಥಿ ಕರೆಮ್ಮ. ಜಿ.ನಾಯಕ 99,544 ಮತಗಳಿಂದ ಗೆಲುವು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ್ 65,288 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ನಾಯಕ್ 3,847 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆದ್ದ ಅಭ್ಯರ್ಥಿಯ ಮತಗಳ ಅಂತರ 34,256 ಆಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ 6ರಲ್ಲಿ ಜಯ – 2ರಲ್ಲಿ ಕಾಂಗ್ರೆಸ್ ಗೆಲುವು
ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಏಳು ಕ್ಷೇತ್ರಗಳಲ್ಲಿ ಜಯಗಳಿಸಿದೆ. ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ (JDS) ಎರಡು ಕ್ಷೇತ್ರಗಳಲ್ಲಿ ಗೆದ್ದಿದೆ.
ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 74,724 ಮತಗಳನ್ನು ಪಡೆದು ಕಾಂಗ್ರೆಸ್ (Congress) ಅಭ್ಯರ್ಥಿ ಡಾ.ರಂಗನಾಥ್ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ 48,151 ಮತಗಳನ್ನು ಪಡೆದು ಸೋಲು ಕಂಡಿದೆ. ಜೆಡಿಎಸ್ 46,974 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 26,573 ಮತಗಳಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು
ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಆರ್ ಶ್ರೀನಿವಾಸ್ 60,520 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 51,979 ಮತಗಳನ್ನು ಪಡೆದಿದ್ದು, ಜೆಡಿಎಸ್ 43,046 ಮತ ಗಳಿಸಿದೆ. ಕೈ ಅಭ್ಯರ್ಥಿ 8,541 ಮತಗಳಿಂದ ಗೆದ್ದಿದ್ದಾರೆ.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು 70,329 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ 60,304 ಮತ ಪಡೆದಿದೆ. ಕಾಂಗ್ರೆಸ್ 50,629 ಗಳಿಸಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 10,025 ಮತಗಳಾಗಿವೆ.
ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಎಂ.ಟಿ.ಕೃಷ್ಣಪ್ಪ 68,163 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 58,240 ಮತಗಳನ್ನು ಪಡೆದಿದೆ. ಕಾಂಗ್ರೆಸ್ 30,536 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 9923 ಮತಗಳಾಗಿದೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗೌಡ 89,191 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 84,597 ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 4594 ಮತಗಳಾಗಿವೆ.
ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ 83,062ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 72,181 ಮತಗಳನ್ನು ಪಡೆದಿದೆ. ಬಿಜೆಪಿ 70,206 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 10,881 ಮತಗಳಾಗಿವೆ.
ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್ ರಾಜಣ್ಣ ಅವರು 91,166 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 55,643 ಮತಗಳನ್ನು ಪಡೆದರೆ, ಬಿಜೆಪಿ 15,612 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 35,523 ಆಗಿದೆ.
ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಷಡಕ್ಷರಿ ಅವರು 71,999 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 54,347 ಮತಗಳನ್ನು ಪಡೆದರೆ, ಜೆಡಿಎಸ್ 26,014 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಮತಗಳ ಅಂತರ 17,652 ಆಗಿದೆ.
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರು 86,084 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 56,834 ಮತಗಳನ್ನು ಗಳಿಸಿದರೆ, ಬಿಜೆಪಿ 42,329 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 29,250 ಮತಗಳಾಗಿದೆ.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ 79,999 ಮತಗಳನ್ನು ಪಡೆದು ಗೆದ್ದಿದ್ದಾರೆ. ಜೆಡಿಎಸ್ ಪಡೆದ ಮತಗಳು 64,752 ಆದರೆ, ಬಿಜೆಪಿ 24,091 ಮತಗಳನ್ನು ಪಡೆದಿದೆ. ಪರಮೇಶ್ವರ್ ಅವರ ಗೆಲುವಿನ ಅಂತರ 14,347 ಮತಗಳಾಗಿವೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ 59,165 ಮತಗಳನ್ನು ಪಡೆದು ಗೆಲುವು ಪಡೆದಿದ್ದಾರೆ. ಜೆಡಿಎಸ್ 55,967 ಮತಗಳನ್ನು ಪಡೆದರೆ, ಕಾಂಗ್ರೆಸ್ 46,900 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 3,198 ಮತಗಳಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಕೈಹಿಡಿದ ಕೊಡಗಿನ ಕಾವೇರಿ – ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು
ರಾಮನಗರ: ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‍ಗೆ (JDS) ಕಾಂಗ್ರೆಸ್ (Congress) ಶಾಕ್ ನೀಡಿದೆ. ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡು, ಒಂದು ಕ್ಷೇತ್ರವನ್ನು ಜೆಡಿಎಸ್ ಗೆದ್ದುಕೊಂಡಿದೆ.
ರಾಮನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 87,690 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಸೋಲು ಕಂಡಿದ್ದಾರೆ. ಬಿಜೆಪಿ (BJP) ಅಭ್ಯರ್ಥಿ ಗೌತಮ್ ಗೌಡ 12,912 ಪಡೆದು ಸೋತಿದ್ದಾರೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 10,715 ಮತಗಳಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಪ್ರೀತಂ ಗೌಡಗೆ ಸೋಲು – ಜಿಲ್ಲೆಯಲ್ಲಿ 2 ಸ್ಥಾನ ಗೆದ್ದ ಬಿಜೆಪಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 96,5922 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 80,677 ಮತ ಪಡೆದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿನ ಅಂತರ 15,915 ಮತಗಳಾಗಿದೆ.
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ 1,43,023 ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಗರಾಜು 20,631 ಸೋಲು ಕಂಡಿದ್ದಾರೆ. ಬಿಜೆಪಿ ಆರ್.ಅಶೋಕ್ 19,753 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಡಿಕೆಶಿ 1,22,392 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ.
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಬಾಲಕೃಷ್ಣ 94,650 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ 82,811 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ ಅವರು 20,197 ಮತಗಳನ್ನು ಪಡೆದು ಸೋತಿದ್ದಾರೆ. ಹೆಚ್.ಸಿ.ಬಾಲಕೃಷ್ಣ ಅವರು 11,839 ಮತಗಳನ್ನು ಪಡೆದು ಗೆದ್ದಿದ್ದಾರೆ. ಇದನ್ನೂ ಓದಿ: ಮೈಸೂರು ಜಿಲ್ಲೆಯ ಕ್ಷೇತ್ರಗಳ ಚುನಾವಣಾ ಫಲಿತಾಂಶ
ಹಾಸನ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಜೆಡಿಎಸ್, ಎರಡು ಬಿಜೆಪಿ (BJP) ಹಾಗೂ ಒಬ್ಬರು ಕಾಂಗ್ರೆಸ್ (Congress) ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಶ್ರವಣಬೆಳಗೊಳ (Shravanabelagola) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ (JDS) ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ 85,668 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ 79,023 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ ಮೂಲಕ ಬಾಲಕೃಷ್ಣ 6,645 ಮತಗಳ ಅಂತರದಲ್ಲಿ ವಿಜೇತರಾಗಿದ್ದಾರೆ. ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಬಿಜೆಪಿಗೆ 5ಕ್ಕೆ 5 ಗೆಲುವು
ಅರಸೀಕೆರೆ (Arsikere) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ಅವರು 97,099 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ್ 77,006 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ ಮೂಲಕ 20,093 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ಗೆಲುವು ಸಾಧಿಸಿದ್ದಾರೆ.
ಬೇಲೂರು (Belur) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಕೆ.ಸುರೇಶ್ ಅವರು 63,571 ಮತಗಳನ್ನು ಪಡೆದು ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಶಿವರಾಂ ಅವರು 55,835 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಹೆಚ್.ಕೆ.ಸುರೇಶ್ ಅವರು 7,736 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಹಾಸನ (Hassan) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರು 85,176 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರು 77,322 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಸ್ವರೂಪ್ ಅವರು 7,854 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಹೊಳೆನರಸೀಪುರ (Holenarasipur) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ರೇವಣ್ಣ 86,401 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಅವರು 83747 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಹೆಚ್.ಡಿ.ರೇವಣ್ಣ ಅವರು 2,654 ಮತಗಳನ್ನು ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅರಕಲಗೂಡು (Arakalgud) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರು 73,605 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಎಂ.ಟಿ.ಕೃಷ್ಣೇಗೌಡ ಅವರು 54,160 ಮತಗಳನ್ನು ಪಡೆದು ಪೈಪೋಟಿ ನೀಡಿದ್ದಾರೆ. ಈ ಮೂಲಕ ಎ.ಮಂಜು ಅವರು 19,445 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಸಕಲೇಶಪುರ (Sakaleshpur) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು 58,604 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ಕುಮಾರಸ್ವಾಮಿ 56,548 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಸಿಮೆಂಟ್ ಮಂಜು ಅವರು 2056 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆದ್ದೋರು ಯಾರು? ಸೋತವರು ಯಾರು?